Tag: atm theft

  • ಬೀದರ್‌ನಲ್ಲಿ ATM ಹಣ ದರೋಡೆ – ಮೃತ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

    ಬೀದರ್‌ನಲ್ಲಿ ATM ಹಣ ದರೋಡೆ – ಮೃತ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

    – ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ
    – ಮೃತನ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಭರವಸೆ

    ಬೀದರ್: ಹಾಡಹಗಲೇ ಬೀದರ್‌ನಲ್ಲಿ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ರೂ. ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸರ್ಕಾರ ವಿಶೇಷ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಈ ಬೆನ್ನಲ್ಲೇ ಸಮಾಜಕಲ್ಯಾಣ ಇಲಾಖೆಯು ಪ್ರತ್ಯೇಕವಾಗಿ 8 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಶ್ವರ್ ಖಂಡ್ರೆಗೆ ಎಡಿಜಿಪಿ ಹರಿಶೇಖರನ್, ಸಚಿವ ರಹೀಂ ಖಾನ್ ಸೇರಿದಂತೆ ಡಿಐಜಿ ಸಾಥ್ ನೀಡಿದರು. ಬಳಿಕ ಗುಂಡೇಟಿಗೆ ಬಲಿಯಾದ ಸಿಬ್ಬಂದಿ ಗಿರಿ ವೆಂಕಟೇಶ್ ಮನೆಗೆ ಭೇಟಿ ನೀಡಿದ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬಸ್ಥರು ಈಶ್ವರ್ ಖಂಡ್ರೆ ಮುಂದೆ ನ್ಯಾಯಕ್ಕಾಗಿ ಕಣ್ಣೀರು ಹಾಕಿದರು. ಖಂಡ್ರೆ ಮುಂದೆ ಮಗನನ್ನು ನೆನೆದು ತಾಯಿ ಭಾವುಕರಾದರು. ಇದನ್ನೂ ಓದಿ: ವಿಜಯಪುರದಲ್ಲಿ ಮುಸುಕುಧಾರಿ ಗ್ಯಾಂಗ್‌ ಅಟ್ಟಹಾಸ – ದರೋಡೆಕೋರರ ಬೆನ್ನತ್ತಿ ಗುಂಡಿಟ್ಟ ಖಾಕಿ ಪಡೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖಂಡ್ರೆ, ಬೀದರ್‌ನಲ್ಲಿ ನಡೆದ ಘಟನೆ ಅತ್ಯಂತ ಆತಂಕಕಾರಿ ಪ್ರಕರಣ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮಾಹಿತಿ ಸಿಕ್ಕ ತಕ್ಷಣ, ಡಿಐಜಿ, ಎಡಿಜಿಪಿ, ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ಗಾಯಾಳು ಶಿವಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇವೆ. ಸರ್ಕಾರ ಚಿಕಿತ್ಸೆಯ ಖರ್ಚು ವೆಚ್ಚ ಭರಿಸುತ್ತದೆ. ಯುವ ಜೀವ ಕಳೆದುಕೊಂಡಿದ್ದು ನೋವು ತಂದಿದೆ. ಖದೀಮರು 83 ಲಕ್ಷ ರೂ. ದೋಚಿದ್ದಾರೆ. ಪೊಲೀಸರ ತಂಡ ಹೈದರಾಬಾದ್ ಸೇರಿ ಬೇರೆಬೇರೆ ರಾಜ್ಯಕ್ಕೆ ತೆರಳಿದ್ದಾರೆ. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರೋದನ್ನ ಸಾಕ್ಷೀಕರಿಸುತ್ತಿದೆ: ವಿಜಯೇಂದ್ರ ಕಿಡಿ

    ಇಂತಹ ಘಟನೆ ಬಿಹಾರದಲ್ಲೇ ಆದ್ರೂ, ಬೀದರ್‌ನಲ್ಲೇ ಆದ್ರೂ ಖಂಡಿಸುತ್ತೇನೆ. ಐಜಿ ಇಲ್ಲಿಯೇ ಇದ್ದಾರೆ, ಅವರೊಂದಿಗೆ ಚರ್ಚಿಸಿದ್ದೇನೆ. ತನಿಖೆಯಲ್ಲಿ ಯಾರ ವೈಫಲ್ಯ ಇದೆ ಎಂಬುವುದು ಗೊತ್ತಾಗುತ್ತದೆ. ದುಷ್ಕರ್ಮಿಗಳು ಪ್ರೊಫೆಷನಲ್ ದರೋಡೆಕೋರರು ಅಂತಾ ಅನಿಸುತ್ತೆ. ಸೆಕ್ಯೂರಿಟಿ ಗಾರ್ಡ್ ಇರಬೇಕಿತ್ತು. ಬ್ಯಾಂಕಿನವರದ್ದೂ ತಪ್ಪಿದೆ. ಸೆಕ್ಯೂರಿಟಿ ಗಾರ್ಡ್ಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿದ್ದಾರೆ. ಕಣ್ಣಿಗೆ ನಿದ್ರೆ ಮಾಡದೇ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಮೃತನ ಕುಟುಂಬದವರ ಜೊತೆಗೆ ನಾನು, ಸರ್ಕಾರ ಇದೆ. ಮುಖ್ಯಮಂತ್ರಿಗಳ ಜೊತೆಗೂ ವಿಶೇಷ ಪರಿಹಾರದ ಕುರಿತು ಮಾತನಾಡಿದ್ದೇನೆ. ಸಮಾಜ ಕಲ್ಯಾಣ ಇಲಾಖೆಯಿಂದಲೂ ಪರಿಹಾರ ಕೊಡಲು ಸೂಚಿಸಿದ್ದೇನೆ. ಮೃತನ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    ಬ್ಯಾಂಕ್ ದರೋಡೆ ವೇಳೆ ಗಿರಿ ವೆಂಕಟೇಶ್ ಸಾವು ದುರಾದೃಷ್ಟಕರ. ಸರ್ಕಾರದಿಂದ, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ಕೊಡುತ್ತೇವೆ. ಪ್ರಕರಣದ ಕುರಿತು ಮುಖ್ಯಮಂತ್ರಿ ಅವರಿಗೆ ತಿಳಿಸಿದಾಗ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಸಮಾಜ ಕಲ್ಯಾಣದಿಂದ 8 ಲಕ್ಷ ರೂ. ಪರಿಹಾರ ನೀಡುತ್ತೇವೆ. ಪರಿವಾರದ ಜೊತೆ ನಾವು ಇರುತ್ತೇವೆ. ಸರ್ಕಾರದ ಹಣ ರಕ್ಷಿಸಲು ಹೋಗಿ ಗಿರಿ ಪ್ರಾಣ ಕಳೆದುಕೊಂಡಿದ್ದಾರೆ. ಗಿರಿ ಬಗ್ಗೆ ಅಭಿಮಾನ ಮೂಡಿಸುವಂತ ಕೆಲಸ ಅವರು ಮಾಡಿದ್ದಾರೆ. ದುಷ್ಕರ್ಮಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಆರೋಪಿಗಳಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ನೀಡಲಾಗುವುದು. ಗಾಯಗೊಂಡ ಶಿವ ಅವರ ಚಿಕಿತ್ಸೆಯ ಸಂಪೂರ್ಣ ಹಣ ಸರ್ಕಾರ ಭರಿಸುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸೈಫ್ ಅಲಿ ಖಾನ್ ಮೇಲಿನ ಹಲ್ಲೆಯಿಂದ ಶಾಕ್ ಆಗಿದೆ – ರಾಯಚೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಹೇಳಿಕೆ

  • ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

    ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

    – ನಮ್ಮ ಮನೆ ಆಧಾರ ಸ್ಥಂಭವೇ ಅಣ್ಣ ಆಗಿದ್ದ
    – ಪ್ರತಿದಿನ ಇರುತ್ತಿದ್ದ ಗನ್ ಮ್ಯಾನ್ ಇಂದು ಯಾಕಿಲ್ಲ?

    ಬೀದರ್: ಗನ್‌ಮ್ಯಾನ್ ಇಲ್ಲದೇ ಎಟಿಎಂಗೆ (ATM) ಹಣ ಹೇಗೆ ಹಾಕುತ್ತಾರೆ? ಇದು ಪ್ರೀ ಪ್ಲಾನ್ ಮಾಡಿ ಮಾಡಿದ ಕೃತ್ಯವಾಗಿದೆ ಎಂದು ಗುಂಡಿನ ದಾಳಿಯಲ್ಲಿ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ ಗಿರಿ ವೆಂಕಟೇಶ್ ತಂಗಿ ಮಂಜುಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೀದರ್‌ನಲ್ಲಿ (Bidar) ಎಸ್‌ಬಿಐ ಬ್ಯಾಂಕ್ (SBI Bank) ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿ ಹಣ ದೋಚಿ ಪರಾರಿಯಾದ ಪ್ರಕರಣದ ಕುರಿತು ಅವರು ಮಾತನಾಡಿದರು. ನಮ್ಮ ಮನೆ ಆಧಾರ ಸ್ಥಂಭವೇ ನಮ್ಮ ಅಣ್ಣ ಆಗಿದ್ದ. ಇದು ಪ್ರೀ ಪ್ಲಾನ್ ಮಾಡಿ ಮಾಡಿದ ಕೃತ್ಯವಾಗಿದೆ. ಅದು ಡಿಸಿ ಆಫೀಸ್ ಹತ್ತಿರವೇ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ಮಾಡಿ ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    ಗನ್ ಮ್ಯಾನ್ ಇಂದು ಕರ್ತವ್ಯಕ್ಕೆ ಗೈರಾಗಿದ್ದರಾ? ಪ್ರತಿದಿನ ಗನ್‌ಮ್ಯಾನ್ ಇರುತ್ತಿದ್ದ. ಇಂದು ಬಂದಿಲ್ಲ ಎಂದು ಸಿಎಂಎಸ್ ಸಂಸ್ಥೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಸಂಸ್ಥೆಯ ನಿರ್ಲಕ್ಷ್ಯದಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ಕಣ್ಣೀರು ಹಾಕಿದ್ದಾರೆ. ಬ್ರಿಮ್ಸ್ ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು

    ಘಟನೆಯಲ್ಲಿ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೋರ್ವ ಸಿಬ್ಬಂದಿ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ರವಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು

    ಇನ್ನು ಈ ಕುರಿತು ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, ಎಸ್‌ಬಿಐ ಕಚೇರಿ ಮುಂದೆ ದರೋಡೆ ಮತ್ತು ಮರ್ಡರ್ ಆಗಿದೆ. ಇಬ್ಬರು ಆರೋಪಿಗಳು ಬೈಕ್ ಮೇಲೆ ಬಂದು ದರೋಡೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳು ಎಟಿಎಂಗೆ ಹಣ ತುಂಬುವಾಗ ದಾಳಿ ಮಾಡಿದ್ದಾರೆ. ಈ ವೇಳೆ ಫೈರಿಂಗ್ ಮಾಡಿದ್ದು, ಓರ್ವ ಸಿಬ್ಬಂದಿ ಸಾವಾಗಿದೆ. ಇನ್ನೊಬ್ಬ ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಎಟಿಎಂಗೆ ಹಾಕುವ ಹಣದ ಪೆಟ್ಟಿಗೆ ಜೊತೆ ದರೋಡೆ ಮಾಡಿ ಪರಾರಿಯಾಗಿದ್ದಾರೆ. ನಮ್ಮಿಂದ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಹಣದ ಪೆಟ್ಟಿಗೆ ಹೇಗೆ ಓಪನ್ ಮಾಡಿದ್ದಾರೆ ಗೊತ್ತಿಲ್ಲ. ಇದರಲ್ಲಿ ಹಣ ಎಷ್ಟಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ನಂಜನಗೂಡು| ಕಿಡಿಗೇಡಿಗಳಿಂದ ಹಸುವಿನ ಬಾಲಕ್ಕೆ ಮಚ್ಚಿನಿಂದ ಹಲ್ಲೆ

    ಪ್ರಕರಣದ ಬಗ್ಗೆ ಪೊಲೀಸರು ಪ್ರತಿಯೊಂದು ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ಕಲಬುರಗಿ ಡಿಐಜಿ ಅಜಯ್ ಹಿಲ್ಲೋರಿ ಭೇಟಿ ನೀಡಿದ್ದು, ಪರಿಶಿಲನೆ ನಡೆಸುತ್ತಿದ್ದಾರೆ. ಜೊತೆಗೆ ಬ್ಯಾಂಕ್ ಅಧಿಕಾರಿಗಳ ವಿಚಾರಣೆ ಕೂಡ ಮಾಡುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

  • ಹೆಂಡತಿಗೆ ಮಂಗಳಸೂತ್ರ ಕೊಡಿಸಲು ATMಗೆ ಕನ್ನ – ಆರೋಪಿ ಬಂಧನ

    ಹೆಂಡತಿಗೆ ಮಂಗಳಸೂತ್ರ ಕೊಡಿಸಲು ATMಗೆ ಕನ್ನ – ಆರೋಪಿ ಬಂಧನ

    ಬೆಳಗಾವಿ: ಹೆಂಡತಿಗೆ ಮಂಗಳಸೂತ್ರ ಕೊಡಿಸಲು ಎಟಿಎಂಗೆ ಕನ್ನ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿ ನಗರದ ಕೃಷ್ಣಾ ಸುರೇಶ್ ದೇಸಾಯಿ ಬಂಧಿತ ಆರೋಪಿ. ಈತ ಹೆಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನಲ್ಲಿ ಹಣ ಎಗರಿಸಿದ್ದ. ಎಂಟು ಲಕ್ಷ ಹಣ ಕಳ್ಳತನ ಮಾಡಿದ್ದ. ಇದನ್ನೂ ಓದಿ: ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

    ಕೃಷ್ಣಾ ಎಟಿಎಂಗೆ ಹಣ ಹಾಕುವ ಕೆಲಸ ಮಾಡುತ್ತಿದ್ದ‌. ಎಟಿಎಂ ಮಷಿನ್ ಕೀ ತನ್ನ ಬಳಿಯೇ ಇರ್ತಿತ್ತು. ಟೀಂ ಜೊತೆಗೆ ಬಂದು ಹಣ ಹಾಕಿ ಬಳಿಕ ಸಂಜೆ ಒಬ್ಬನೇ ಬಂದು ಕಳ್ಳತನ ಮಾಡಿದ್ದಾನೆ.

    ಹಣ ಹಾಕಲು ಇರುತ್ತಿದ್ದ ಎಟಿಎಂ ಮಷಿನ್ ಕೀ ಬಳಸಿಯೇ ಎಂಟು ಲಕ್ಷ ಹಣ ಕಳ್ಳತನ ಮಾಡಿದ್ದಾನೆ. ಎರಡು ದಿನದ ಬಳಿಕ ಈತನ ಕೃತ್ಯ ಬೆಳಕಿಗೆ ಬಂದಿತ್ತು. ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಎಟಿಎಂನಿಂದ ತಮ್ಮ‌ ಸಿಬ್ಬಂದಿ ಹಣ ಕದ್ದಿದ್ದು ಕಂಡು ಇತರರು ಶಾಕ್‌ ಆಗಿದ್ದರು. ಇದನ್ನೂ ಓದಿ: ಆಸ್ತಿಗಾಗಿ ಸುಪಾರಿ ಕೊಟ್ಟು ತಮ್ಮನನ್ನೇ ಮುಗಿಸಿದ ಅಣ್ಣ – ಐವರು ಜೈಲು ಪಾಲು!

    ಈ ಕುರಿತು ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಒಂದು ಮಂಗಳಸೂತ್ರ, ಚಿನ್ನದ ಸರ, ಏಳು ಲಕ್ಷ ರೂ. ‌ನಗದು ಜಪ್ತಿ ಮಾಡಲಾಗಿದೆ.

  • ಎಟಿಎಂ ದರೋಡೆ ಮಾಡಿ 25 ಲಕ್ಷ ರೂ. ದೋಚಿದ್ದ ಖದೀಮರ ಬಂಧನ

    ಎಟಿಎಂ ದರೋಡೆ ಮಾಡಿ 25 ಲಕ್ಷ ರೂ. ದೋಚಿದ್ದ ಖದೀಮರ ಬಂಧನ

    ಬೆಂಗಳೂರು: ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಸಮರ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಹ್‍ಯಾ ಬಂಧಿತ ಆರೋಪಿಗಳಾಗಿದ್ದು, ಜಾಲಹಳ್ಳಿ ಕೆನರಾ ಬ್ಯಾಂಕ್ ಎಟಿಎಂ ನಿಂದ 27 ಲಕ್ಷ ಹಣ ದರೋಡೆ ಮಾಡಿದ್ದರು.

    ಆಗಸ್ಟ್ 10ರ ರಾತ್ರಿ ಎಟಿಎಂ ಕೇಂದ್ರ ಒಳಗಿದ್ದ ಮೂವರು ಆರೋಪಿಗಳು ಮೊದಲು ಸಿಸಿಟಿವಿ ಕ್ಯಾಮೆರಾಗೆ ಚೂಯಿಂಗ್ ಗಮ್ ಅಂಟಿಸಿ ಬಳಿಕ ವೈಯರ್ ಕಟ್ ಮಾಡಿ ಕೃತ್ಯ ಎಸಗಿದ್ದರು. ಅಲ್ಲದೇ ಕೃತ್ಯಕ್ಕೆ 100 ಕೆಜಿ ಗ್ಯಾಸ್ ಕಟರ್ ಹಾಗೂ ಸ್ಕ್ರೂ ಡ್ರೈವರ್, ಫೆನ್ಸಿಂಗ್ ಕಟ್ ಮಾಡುವ ಕಟರ್ ಬಳಸಿದ್ದರು.

    ಸದ್ಯ ಬಂಧನವಾಗಿರುವ ಪ್ರಮುಖ ಆರೋಪಿ ಸಮೋರ ಜ್ಯೋತ್ ಸಿಂಗ್ ಮೂಲತಃ ಹರಿಯಾಣದ ಮೂಲದವನಾಗಿದ್ದು, ಜನವರಿಯಲ್ಲಿ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್‍ಬಿಐ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನಿಸಿ ಜೈಲು ಸೇರಿದ್ದ. ಇತರ ಬಂಧಿತ ಆರೋಪಿಗಳಾದ ಕೇರಳ ಮೂಲದ ಜಾಫರ್ ಸಾಧಿಕ್, ಯಹ್‍ಯಾ ಗಾಂಜಾ ಕೇಸ್‍ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಸೇರಿದ್ದರು. ಪರಪ್ಪನ ಅಗ್ರಹಾರದಲ್ಲಿ ಭೇಟಿಯಾಗಿದ್ದ ಆರೋಪಿಗಳು ಎಟಿಎಂ ದರೋಡೆಗೆ ಸ್ಕೇಚ್ ಜಾಲಹಳ್ಳಿಯ ಎಟಿಎಂಗೆ ದರೋಡೆ ಮಾಡಿದ್ದರು.

  • 90 ಲಕ್ಷದೊಂದಿಗೆ ಎಟಿಎಂ ಸಿಬ್ಬಂದಿ ಎಸ್ಕೇಪ್ ಕೇಸ್- ಬಳ್ಳಾರಿಯಲ್ಲಿ ಆರೋಪಿಗಳು ಅರೆಸ್ಟ್

    90 ಲಕ್ಷದೊಂದಿಗೆ ಎಟಿಎಂ ಸಿಬ್ಬಂದಿ ಎಸ್ಕೇಪ್ ಕೇಸ್- ಬಳ್ಳಾರಿಯಲ್ಲಿ ಆರೋಪಿಗಳು ಅರೆಸ್ಟ್

    ಬೆಂಗಳೂರು: 90 ಲಕ್ಷ ಎಟಿಎಂ ಹಣದೊಂದಿಗೆ ಸಿಬ್ಬಂದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಬಳ್ಳಾರಿಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾರಾಯಣಸ್ವಾಮಿ, ನರಸಿಂಹರಾಜು ಹಾಗೂ ಸಹಚರರಾದ ರಿಯಾಜ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಆರೋಪಿಗಳನ್ನು ಖಾಕಿ ಪಡೆ ಬಂಧಿಸಿದೆ. ಆರೋಪಿಗಳಿಂದ 80 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ.

    ಜ. 29ರಂದು 90 ಲಕ್ಷ ರೂ. ಹಣ ಇದ್ದ ಟಾಟಾ ಸುಮೋ ಸಮೇತ ಆರೋಪಿಗಳು ಪರಾರಿಯಾಗಿದ್ದರು. ಸಿಎಂಎಸ್ ಏಜೆನ್ಸಿಗೆ ಸೇರಿದ ಎಟಿಎಂ ವಾಹನ ಇದಾಗಿತ್ತು.

    ಸಿಎಂಎಸ್ ಕಂಪನಿಯಲ್ಲಿ ಮೂರು ವರ್ಷಗಳಿಂದ ಆರೋಪಿಗಳು ಕೆಲಸ ಮಾಡುತ್ತಿದ್ದರು. ಗನ್ ಮ್ಯಾನ್ ಗೆ ಬಾಳೆ ಹಣ್ಣು ತರಲು ಹೇಳಿ ಎಟಿಎಂ ವಾಹನದೊಂದಿಗೆ ಎಸ್ಕೇಪ್ ಆಗಿದ್ದರು. ಬಳಿಕ ಮಾದನಾಯಕನಹಳ್ಳಿ ಸಮೀಪದ ಕಿತ್ತನಹಳ್ಳಿ ಬಳಿ ಟಾಟಾ ಸುಮೋ ಬಿಟ್ಟು, ಹಣದ ಸಮೇತ ಬಳ್ಳಾರಿಗೆ ಪರಾರಿಯಾಗಿದ್ದರು. ಈ ಬಗ್ಗೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಎಟಿಎಂ ಹಣ ದೋಚಲು 15 ದಿನಗಳಿಂದ ಆರೋಪಿಗಳು ಪ್ಲಾನ್ ಮಾಡಿದ್ದರು. ನಾರಾಯಣಸ್ವಾಮಿ ಸ್ನೇಹಿತರ ಬಳಿ 15 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲು ಹಣ ದೋಚಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.

  • ಬೆಂಗ್ಳೂರಲ್ಲಿ ಎಟಿಎಂ ಹಣ ಕದ್ದವನು ಮಂಡ್ಯದಲ್ಲಿ ಸಿಕ್ಕಿಬಿದ್ದ

    ಬೆಂಗ್ಳೂರಲ್ಲಿ ಎಟಿಎಂ ಹಣ ಕದ್ದವನು ಮಂಡ್ಯದಲ್ಲಿ ಸಿಕ್ಕಿಬಿದ್ದ

    ಮಂಡ್ಯ: ಬೆಂಗಳೂರಿನ ಜಾಲಹಳ್ಳಿ ಕ್ರಾಸ್‍ನಲ್ಲಿರುವ ಎಟಿಎಂಗೆ ಸಿಬ್ಬಂದಿ ಹಣ ತುಂಬುವಾಗ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದ ಖದೀಮನೊಬ್ಬನನ್ನು ಮಂಡ್ಯ ಜಿಲ್ಲೆ, ಮಳವಳ್ಳಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

    ನಿತಿನ್ ಕುಮಾರ್ ಎಂಬವನೇ ಬಂಧಿತ ಆರೋಪಿ. ಸೋಮವಾರದಂದು ಮೂವರು ಯುವಕರ ಗುಂಪು ಎಣ್ಣೆ ಕುಡಿದು ಮಳವಳ್ಳಿ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿತ್ತು. ಇದನ್ನು ಗಮನಿಸಿದ ಪೊಲೀಸರು ಅವರನ್ನು ಹಿಂಬಾಲಿಸಿದಾಗ ತಮ್ಮ ಬಳಿಯಿದ್ದ ಬ್ಯಾಗ್ ತೆಗೆದುಕೊಂಡು ಬಟ್ಟೆ ಅಂಗಡಿಯೊಂದರ ಒಳಗೆ ನುಗ್ಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ರು.

    ಆದ್ರೆ ಅವರನ್ನು ಬೆನ್ನತ್ತಿ ಹಿಡಿದ ಪೊಲೀಸರು, ಅವರ ಬಳಿಯಿದ್ದ ಬ್ಯಾಗ್ ಪರೀಕ್ಷಿಸಿದಾಗ ಬ್ಯಾಗ್ ತುಂಬಾ ಎರಡು ಸಾವಿರ, ಐನೂರು, ನೂರು ರೂಪಾಯಿ ಮುಖಬೆಲೆಯ ನೋಟುಗಳಿರುವುದು ಪತ್ತೆಯಾಗಿತ್ತು.

    ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಎಟಿಎಂಗೆ ತುಂಬಲು ಹೋಗುತ್ತಿದ್ದ ಹಣ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ಮಳವಳ್ಳಿಯವನಾದ ನಿತಿನ್‍ಕುಮಾರ್ ಬೆಂಗಳೂರಿನಲ್ಲೇ ವಾಸವಿದ್ದ. ಸೋಮವಾರ ಬೆಳಗ್ಗೆ ಹಣ ದೋಚಿದವನು ನೇರವಾಗಿ ಮಳವಳ್ಳಿಗೆ ಬಂದಿದ್ದ.

    ಇದರ ಅರಿವಿರದ ಇನ್ನಿಬ್ಬರು ಯುವಕರು ಗೆಳೆಯ ನಿತಿನ್‍ಕುಮಾರ್ ಜೊತೆ ಸೇರಿಕೊಂಡಿದ್ರು. ಆದ್ರೆ ಇದೀಗ ಪೊಲೀಸರ ಚಾಣಾಕ್ಷತೆಯಿಂದ ಆರೋಪಿ ನಿತಿನ್‍ಕುಮಾರ್ 15 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದಿದ್ದಾನೆ. ನಿತಿನ್ ಕುಮಾರ್ ಜೊತೆ ಹಣ ದೋಚಿದ್ದ ಮತ್ತೊಬ್ಬ ಆರೋಪಿ ಮಾರುತಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

    ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರದಂದು ನಡೆದಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ 220 ಪಲ್ಸರ್ ಬೈಕ್‍ನಲ್ಲಿ ಹೆಲ್ಮಟ್ ಧರಿಸಿ ಬಂದಿದ್ದ ದುಷ್ರ್ಕಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ರ್ಕಮಿಗಳು 18 ಲಕ್ಷ ರೂ. ಕಸಿದು ಪರಾರಿಯಾಗಿದ್ದರು.

    ಮೋಹನ್, ಸಾಗರ್ ಹಾಗೂ ಪ್ರಸನ್ನ ಸೆಕ್ಯೂರ್ ವೆಲ್ ಏಜ್ಸೇನಿಯ ಸಿಬ್ಬಂದಿಗಳು. ಎಟಿಎಂಗೆ ಹಣ ತುಂಬಲು ಒಟ್ಟು 1 ಕೋಟಿ, 25 ಲಕ್ಷ ರೂ. ಹಣ ತಂದಿದ್ದರು. ದುಷ್ಕರ್ಮಿಗಳು ಅದರಲ್ಲಿ 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿಯಾಗಿದ್ದರು. ಈ ಘಟನೆ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.