Tag: Atrocities Act

  • ವೈಯಕ್ತಿಕ ಲಾಭಕ್ಕಾಗಿ ಅಟ್ರಾಸಿಟಿ ಕಾಯ್ದೆ ದುರ್ಬಳಕೆ – ದಲಿತ ಯುವಶಕ್ತಿ ವೇದಿಕೆ ಖಂಡನೆ

    ವೈಯಕ್ತಿಕ ಲಾಭಕ್ಕಾಗಿ ಅಟ್ರಾಸಿಟಿ ಕಾಯ್ದೆ ದುರ್ಬಳಕೆ – ದಲಿತ ಯುವಶಕ್ತಿ ವೇದಿಕೆ ಖಂಡನೆ

    ದಾವಣಗೆರೆ: ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಹಾಗೂ ಮಾಧ್ಯಮದಲ್ಲಿ ಹೆಸರು ಮಾಡಲು ಬಾಬಾ ಸಾಹೇಬ್ ಅಂಬೇಡ್ಕರ್ (Bhimrao Ramji Ambedkar) ನೀಡಿರುವ ಅಟ್ರಾಸಿಟಿ ಕಾಯ್ದೆ (Atrocities Act) ದುರ್ಬಳಕೆ ಮಾಡುತ್ತಾ ಸುಳ್ಳು ಪ್ರಕರಣ ದಾಖಲಿಸಿ ಸಮಾಜದಲ್ಲಿ ದಲಿತ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಾವಣಗೆರೆಯಲ್ಲಿ (Davanagere) ದಲಿತ ಯುವಶಕ್ತಿ ವೇದಿಕೆಯ ಕಾರ್ಯಕರ್ತ ಚೇತನ್ ಕನ್ನಡಿಗ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಮಾಧ್ಯಮದಲ್ಲಿ ನಟ ಉಪೇಂದ್ರ (Upendra) ಹಾಗೂ ಸಚಿವರಾದ ಎಸ್‌ಎಸ್ ಮಲ್ಲಿಕಾರ್ಜುನ್ (SS Mallikarjun) ಅವರು ತಮ್ಮ ಹಿಂದಿನ ಸಂದರ್ಶನಗಳಲ್ಲಿ ಗಾದೆ ರೂಪದಲ್ಲಿ ಹೇಳಿದ ವಾಕ್ಯವನ್ನು ನೆಪವಾಗಿ ಹಿಡಿದು ಇದಕ್ಕೆ ಅಟ್ರಾಸಿಟಿಯ ಮತ್ತೊಂದು ರೂಪ ನೀಡಿ ಇವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಅವರ ವಿರುದ್ಧ ರಾಜ್ಯದಲ್ಲಿ ಹಲವೆಡೆ ಕೇಸ್ ದಾಖಲು ಮಾಡಲಾಗಿದೆ. ಮತ್ತು ಇದು ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆಯುತ್ತಿದೆ. ನಟ ಉಪೇಂದ್ರ ಪರವಾಗಿ ಅಥವಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನರವರ ಪರವಾಗಿಯೂ ನಾವಿಲ್ಲ. ಒಗ್ಗಟ್ಟಿನಲ್ಲಿ ಮುನ್ನಡೆಯುತ್ತಿರುವ ಸಮಾಜದಲ್ಲಿ, ಭಯ ಹಾಗೂ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಕೆಲ ನಕಲಿ ಹಾಗೂ ಮುಖವಾಡಧಾರಿ ಹೋರಾಟಗಾರರ ವಿರುದ್ಧ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿದರು.

    ಕೆಲವರು ನಮ್ಮ ದಲಿತ ಸಮುದಾಯದವರೇ ತಮ್ಮ ವೈಯಕ್ತಿಕ ಕಾರಣ ಹಾಗೂ ರಾಜಕೀಯ ಲಾಭಕ್ಕಾಗಿ, ಮಾಧ್ಯಮದಲ್ಲಿ ಹೆಸರು ಮಾಡಲು ಕ್ಷುಲ್ಲಕ ಕಾರಣಗಳಿಗೆ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಾ ಸುಳ್ಳು ಕೇಸ್ ದಾಖಲಿಸಿ ಸಮಾಜದಲ್ಲಿ ದಲಿತ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ. ಇದರಿಂದ ಸಮಾಜ ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗುತ್ತಿದೆ. ನಮ್ಮ ಸಹವಾಸವೇ ಬೇಡ ಎಂದು ದೂರ ಉಳಿಯುವ ಭಯದ ವಾತಾವರಣ ಸೃಷ್ಟಿಯಾಗುತ್ತಿದೆ ಎಂದರು. ಇದನ್ನೂ ಓದಿ: ದೇವಸ್ಥಾನಗಳ ಕಾಮಗಾರಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

    ಬಾಬಾ ಸಾಹೇಬರು ನಮಗೆ ನೀಡಿರುವ ಅಟ್ರಾಸಿಟಿ ತಡೆ ಕಾಯ್ದೆ ಎಂಬ ಆಯುಧವಿದೆ. ಇದನ್ನು ಅಗತ್ಯವಿದ್ದಾಗ ನಿಜವಾಗಿಯೂ ದೌರ್ಜನ್ಯ ಪ್ರಕರಣಗಳಲ್ಲಿ ಬಳಸಬೇಕು. ಆದರೆ ಕೆಲವರು ಸಮಾಜದಲ್ಲಿ ಕ್ಷುಲ್ಲಕ ಕಾರಣಗಳಿಗೆ ಇದನ್ನು ಪ್ರದರ್ಶಿಸುತ್ತಾ, ಅದನ್ನು ದುರ್ಬಳಕೆ ಮಾಡುತ್ತಾ ಸಂಪೂರ್ಣ ದಲಿತ ಸಮುದಾಯದ ಮಾನ ಹರಾಜು ಹಾಕುತ್ತಿದ್ದಾರೆ. ಆದ್ದರಿಂದ ಇಂತವರ ವಿರುದ್ಧ ಪ್ರಕರಣ ದಾಖಲಾಗಬೇಕು. ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ದೇಗುಲಗಳಿಗೆ ರಿಲೀಸ್ ಮಾಡಿದ್ದ ಅನುದಾನಕ್ಕೆ ಬ್ರೇಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಬೆಂಗಳೂರು: ಮುರಘಾ ಮಠದ ಶ್ರೀಗಳಿಗೆ ಚಿಕಿತ್ಸೆ ನಿಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಮೂವರು ಜಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅರ್ಶ್‌ದೀಪ್‌ ಟೀಕಿಸುವ ಬದಲು ಧೈರ್ಯ ತುಂಬಿ – ಮುಂದಿನ ಭಾನುವಾರಕ್ಕೆ ಸಜ್ಜಾಗಿ: ಮಾಜಿ ಆಟಗಾರರ ಸಲಹೆ

    ದೂರಿನಲ್ಲಿ ಏನಿದೆ?
    ಚಿತ್ರದುರ್ಗ ಜಿಲ್ಲೆಯ ಮುರಘಾ ಮಠದಲ್ಲಿನ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೊದಲನೇ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ. ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.

    ಪ್ರಭಾವಿ ಸ್ಥಾನದಲ್ಲಿರುವ ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್

    ಮುರುಘಾ ಶ್ರೀ ಜೈಲಿಗೆ:
    ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾ ಕೋಮಲಾ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು. ಈ ವೇಳೆ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳದ ಕಾರಣ ನ್ಯಾಯಾಧೀಶರು ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ

    ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ

    ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೂರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ: ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ

    ಪೋಕ್ಸೋ ಕೇಸ್‌ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು. ಆದರೆ ಶ್ರೀಗಳು ತನಿಖೆಗೆ ಸಹಕರಿಸದೇ ಮತ್ತೆ ಆಸ್ಪತ್ರೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಸೋಮವಾರ ಜೈಲಾ? ಬೇಲಾ?

    ತಮ್ಮ ಮೇಲಿನ ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದು, ನನ್ನ ವಿರುದ್ಧ ಷಡ್ಯಂತ್ರ‍್ಯ ನಡೆದಿರುವುದಾಗಿ ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ಮೆಡಿಕಲ್ ಟೆಸ್ಟ್ ಮುಕ್ತಾಯ – ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್

    ಮುರುಘಾ ಶ್ರೀ ಮೆಡಿಕಲ್ ಟೆಸ್ಟ್ ಮುಕ್ತಾಯ – ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್

    ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳು ಪುರುಷತ್ವ ಪರೀಕ್ಷೆಯಲ್ಲಿ ಫಿಟ್ ಆಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಶ್ರೀಗಳ ವೈದ್ಯಕೀಯ ವರದಿ ಬಹಿರಂಗವಾಗಿದ್ದು, ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್ ಆಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪ್ರಶ್ನೆಗೆ ಉತ್ತರಿಸಲು ತಡಪಡಿಸಿದ ಜಿಲ್ಲಾಧಿಕಾರಿಗೆ ಸೀತಾರಾಮನ್ ಕ್ಲಾಸ್ – ಕೆಟಿಆರ್ ಆಘಾತ

    ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಫಿಜಿಷಿಯನ್ ಡಾ.ಸತೀಶ್, ಮಾನಸಿಕ ತಜ್ಞೆ ಶೋಭಾ ಹಾಗೂ ವೇಣುಗೋಪಾಲ್ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಕೊಠಡಿ ಸಂಖ್ಯೆ 15ರಲ್ಲಿ ತಪಾಸಣೆ ನಡೆಸಲಾಗಿದ್ದು, ಶ್ರೀಗಳ ಉಗುರು, ಒಳ ಉಡುಪಿನ ತುಂಡು ಬಟ್ಟೆ, ಮರ್ಮಾಂಗದ ಬಳಿಯ ಕೂದಲನ್ನು ಪರೀಕ್ಷೆ ಮಾಡಲಾಗಿದೆ.

    ಶ್ರೀಗಳಿಗೆ ಹೃದಯ ಸಂಬಂಧಿ ತೊಂದರೆಯಿರುವುದರಿಂದ ಮತ್ತೊಮ್ಮೆ ಇಸಿಜಿ ಪರೀಕ್ಷೆ ಮಾಡಲಾಗಿದೆ. ಜಿಲ್ಲಾ ಸರ್ಜನ್ ಬಸವರಾಜ್ ನೇತೃತ್ವದಲ್ಲಿ ಶ್ರೀಗಳಿಗೆ ತಪಾಸಣೆ ಮಾಡಲಾಗಿದೆ ಇಂದು ಅಧಿಕೃತ ವರದಿ ಹೊರಬೀಳಲಿದೆ. ಸದ್ಯ ಈಗಾಗಲೇ ಶ್ರೀಗಳ ವರದಿ ಪಾಸಿಟಿವ್ ಆಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ನಾಳೆ ಸೂಪರ್ ಸಂಡೇ – ಕದನ ಕುತೂಹಲ ಮೂಡಿಸಿದ ಇಂಡೋ-ಪಾಕ್ ಹೋರಾಟ

    ವೈದ್ಯಕೀಯ ತಪಾಸಣೆ ಬಳಿಕ ಜಿಲ್ಲಾಸ್ಪತ್ರೆಯಿಂದ ಡಿವೈಎಸ್‌ಪಿ ಕಚೇರಿ ಶಿಫ್ಟ್ ಮಾಡಲಾಗಿದ್ದು, ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ಮುಂದುವರಿದಿದೆ. ಚಾರ್ಜ್ ಶೀಟ್ ಜೊತೆಯಲ್ಲೇ ವೈದ್ಯರ ರಿಪೋರ್ಟ್ ಸಹ ಸಲ್ಲಿಸಲಿರುವ ಪೊಲೀಸಲಿದ್ದಾರೆ. ಮುರುಘಾ ಮಠದ ಸ್ಥಳ ಮಹಜರು ಮಾಡಿಸುವ ಸಾಧ್ಯತೆ ಇದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲಿನ ಪೋಕ್ಸೋ ಕೇಸ್ ತನಿಖೆ ತೀವ್ರಗೊಂಡಿದೆ. ಪ್ರಕರಣ ವರದಿಯಾದ ಮೂರು ದಿನಗಳ ಬಳಿಕ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಚಿತ್ರದುರ್ಗದ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

    CRPC 164 ಅಡಿ ಸಂತ್ರಸ್ತರು, ಮಹಿಳಾ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಧೀಶರ ಸಮ್ಮುಖದಲ್ಲಿ ಸಂತ್ರಸ್ತ ಬಾಲಕಿಯರ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದೆ. ಸದ್ಯ ಮುಚ್ಚಿದ ಲಕೋಟೆಯಲ್ಲಿರುವ ಸಂತ್ರಸ್ತರ ಹೇಳಿಕೆಯನ್ನು ಗೌಪ್ಯವಾಗಿ ಇರಿಸಲಾಗಿದೆ. ಸಂತ್ರಸ್ತ ಬಾಲಕಿಯರ ಈ ಹೇಳಿಕೆ ಮೇಲೆ ಮುರುಘಾ ಶರಣರ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ರಾಜ್ಯಪಾಲರು

    ಇಂದು ಕೋರ್ಟ್ ಮುಂದೆ ಪರ-ವಿರೋಧಿ ಪ್ರತಿಭಟನೆಗಳು ನಡೆದಿದ್ದು, ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯ್ತು. ಈ ಮಧ್ಯೆ, ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಈ ಮಧ್ಯೆ, 20ಕ್ಕೂ ಹೆಚ್ಚು ಸ್ವಾಮೀಜಿಗಳು ಸುದ್ದಿಗೋಷ್ಟಿ ನಡೆಸಿ, ಮುರುಘಾ ಮಠದ ಶ್ರೀಗಳಿಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿಧ ಮಠದ ಶ್ರೀಗಳು, ಮುರುಘಾ ಶರಣರು ಮಕ್ಕಳು ದೇವರ ಸಮಾನ ಎಂದು ತಿಳಿದಿರುವವರು, ಅವರು ನಾಡಿನ ಗಮನ ಸೆಳೆದಿದ್ದಾರೆ. ಬಹಳ ಮುಂಚೂಣಿಯಲ್ಲಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮೀಜಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳು ಖಂಡಿತಾಗಿಯೂ ಈ ಪ್ರಕರಣದಿಂದ ಹೊರ ಬರ್ತಾರೆ, ಸತ್ಯಕ್ಕೆ ಜಯವಾಗುತ್ತದೆ ಎಂದು ಎಲ್ಲಾ ಮಠಾಧೀಶರು ಶ್ರೀಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

    ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದೆ.

    ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಗ್ರಹ ಕಾಯ್ದೆಯ ಅಡಿ ದೂರು ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲು ಮಾಡಲು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದರು. ಇದನ್ನೂ ಓದಿ: ಮುರುಘಾ ಕೇಸ್‌ – ಮಠಕ್ಕೆ ಕರೆದೊಯ್ದು ಸ್ಥಳ ಮಹಜರು

    ನೊಂದ ಇಬ್ಬರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾದ ಕಾರಣ ಈ ಕಾಯ್ದೆಯ ಅಡಿ ಈಗ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ

    ಈಗಾಗಲೇ ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆ ಶ್ರೀಳ ವಿರುದ್ಧ ಅತ್ಯಾಚಾರ, ಪೋಕ್ಸೋ ಕಾಯ್ದೆಯ ಅಡಿ ಕೇಸ್‌ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]