ಬೆಂಗಳೂರು: ಅಟ್ರಾಸಿಟಿ ಪ್ರಕರಣಕ್ಕೆ (Atrocity Case) ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basangouda Patil Yatnal) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ (High Court) ಸೂಚನೆ ನೀಡಿದೆ.
ವಿಚಾರಣೆ ಸಮಯದಲ್ಲಿ ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ, ಸನಾತನ ಧರ್ಮದ ಹೆಣ್ಣು ಮಕ್ಕಳಿಗೆ ಚಾಮುಂಡಿ ತಾಯಿಯನ್ನು ಪೂಜಿಸುವ ಹಕ್ಕಿದೆ. ದಲಿತ ಹೆಣ್ಣುಮಕ್ಕಳರಲಿ ಯಾವುದೇ ಸಮಾಜದವರಿರಲಿ ಎಲ್ಲರಿಗೂ ಹಕ್ಕಿದೆ ಎಂದು ಹೇಳಿರುವ ಹೇಳಿಕೆಯನ್ನು ತಿರುಚಿ ಕೇಸ್ ದಾಖಲು ಮಾಡಲಾಗಿದೆ ಎಂದು ವಾದಿಸಿದರು. ಅಷ್ಟೇ ಅಲ್ಲದೇ ಯತ್ನಾಳ್ ಅವರು ಹೇಳಿದ ಹೇಳಿಕೆಯನ್ನು ಮೊಬೈಲ್ ಮೂಲಕ ಜಡ್ಜ್ ಅವರಿಗೂ ಕೇಳಿಸಿದರು.
ವಿಡಿಯೋ ನೋಡಿದ ಬಳಿಕ ನ್ಯಾ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಯಾವುದೇ ಪಕ್ಷದವರಿರಲಿ ಒಂದು ಸಮುದಾಯ ಓಲೈಸಿದರೆ ಹೀಗಾಗುತ್ತದೆ. ಭಾರತೀಯರನ್ನು ಭಾರತೀರಂತೆಯೇ ನೋಡಿದರೆ ಈ ಸಮಸ್ಯೆ ಇರುವುದಿಲ್ಲ ಎಂದು ಅಭಿಪ್ರಾಯ ಪಟ್ಟು ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು. ಪೊಲೀಸರ ತನಿಖೆಗೆ ಸಹಕರಿಸಬೇಕು ಎಂದು ಯತ್ನಾಳ್ ಅವರಿಗೆ ಸೂಚಿಸಿತು.
ಬಳ್ಳಾರಿ: ಅಕ್ರಮ ಜೂಜಾಟ (Gambling) ಬಯಲು ಮಾಡಿದ ವ್ಯಕ್ತಿ ಮೇಲೆಯೇ ಪೊಲೀಸರು ಅಟ್ರಾಸಿಟಿ ಕೇಸ್ (Atrocity Case) ದಾಖಲಿಸಿರುವ ಘಟನೆ ಬಳ್ಳಾರಿಯ (Ballari) ಕಂಪ್ಲಿಯಲ್ಲಿ (Kampli) ಬೆಳಕಿಗೆ ಬಂದಿದೆ. ಕಂಪ್ಲಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
ಕಳೆದ ವಾರ ಕಂಪ್ಲಿಯಲ್ಲಿ ಮಟ್ಕಾ ನಡೆಯುವ ಐದು ಸ್ಥಳಗಳಿಗೆ ಹೋಗಿ ನಾರಾಯಣಸ್ವಾಮಿ ಎಂಬವರು ವೀಡಿಯೋ ಮಾಡಿ, ಧಂದೆಯ ಕರಾಳ ಮುಖ ಬಯಲು ಮಾಡಿದ್ದರು. ಆದರೆ ಮಟ್ಕಾ ದಂಧೆ ಬಯಲಿಗೆಳೆದ ನಾರಾಯಣಸ್ವಾಮಿ ಮೇಲೆಯೇ ಮಟ್ಕಾ ಬರೆಸುತ್ತಿದ್ದ ಆರೋಪಿ ಜಂಬಣ್ಣ ಎನ್ನುವಾತ ಅಟ್ರಾಸಿಟಿ ಕೇಸ್ ಹಾಕಿದ್ದಾನೆ. ಮಟ್ಕಾ ದಂಧೆಕೋರ ಜಂಬಣ್ಣನಿಂದಲೇ ನಾರಾಯಣಸ್ವಾಮಿ ವಿರುದ್ಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ
ಇದೇ ಮಟ್ಕಾ ದಂಧೆಕೋರ ಜಂಬಣ್ಣನ ವಿರುದ್ಧ ಮಟ್ಕಾ ಬರೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಪ್ರಕರಣಗಳು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ನಿರಂತರವಾಗಿ ಮಟ್ಕಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದ ಕಾರಣಕ್ಕೆ ನಾರಾಯಣಸ್ವಾಮಿ ರಹಸ್ಯವಾಗಿ ವೀಡಿಯೋ ಮಾಡಿಕೊಂಡು ಬಂದಿದ್ದ. ಇದನ್ನೇ ನೆಪವಾಗಿ ಇಟ್ಟುಕೊಂಡ ಮಟ್ಕಾ ಬುಕ್ಕಿ ಜಂಬಣ್ಣ ನಾರಾಯಣಸ್ವಾಮಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾನೆ. ಹೀಗಾಗಿ ಜೀವ ಭಯದಲ್ಲಿ ಸಾಮಾಜಿಕ ಹೋರಾಟಗಾರ ನಾರಾಯಣ ಸ್ವಾಮಿ ಓಡಾಡುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | 3 ವರ್ಷಗಳಲ್ಲಿ 536 ಮಂದಿ ಆತ್ಮಹತ್ಯೆ – ಮಹಿಳೆಯರಿಗಿಂತ ಪುರುಷರ ಸಂಖ್ಯೆಯೇ ಹೆಚ್ಚು!
ಇನ್ನೂ ವೀಡಿಯೋ ಮಾಡುವ ವೇಳೆ ನಾರಾಯಣಸ್ವಾಮಿ ಮೇಲೆ ದಂಧೆಕೋರರು ಹಲ್ಲೆ ಮಾಡಿದ್ದರು. ಅಷ್ಟೆಲ್ಲಾ ಆದಮೇಲೂ ಪೊಲೀಸರು ರಕ್ಷಣೆ ನೀಡಿಲ್ಲ ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಕಂಪ್ಲಿ ಪೊಲೀಸರೇ ಮಟ್ಕಾ ಬುಕ್ಕಿಗಳಿಗೆ ಸಾಥ್ ನೀಡುತ್ತಿದ್ದಾರೆ ಎಂದು ಪಬ್ಲಿಕ್ ಟಿವಿ ಮುಂದೆ ನಾರಾಯಣಸ್ವಾಮಿ ಅಳಲು ತೋಡಿಕೊಂಡಿದ್ದಾರೆ. ಕಂಪ್ಲಿ ಸಿಪಿಐ ಮಟ್ಕಾಗೆ ಸಾಥ್ ಕೊಟ್ಟಿದ್ದಾರೆ. ಅದಕ್ಕೆ ನನ್ನ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿದೆ. ಮಟ್ಕಾ ಬುಕ್ಕಿಗಳಿಂದ ನನಗೆ ಜೀವಭಯ ಇದೆ ಎಂದು ನಾರಾಯಣಸ್ವಾಮಿ ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್
ಬೆಂಗಳೂರು: ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು (Public Prosecutor) ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದಲ್ಲಿ (Vidhana Soudha) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳು ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ, ಡಿಸಿಗಳು, ಎಸ್ಪಿಗಳು, ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.
ಅಟ್ರಾಸಿಟಿ ಪ್ರಕರಣಗಳಲ್ಲಿ (Atrocity Case) ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಅಂತ ಸೂಚನೆ ನೀಡಿದ್ರು.
ಸಿಎಂ ಸಭೆ ಹೈಲೈಟ್ಸ್…
ಬ್ಯಾಕ್‌ಲಾಗ್, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ‍್ಯದರ್ಶಿಯವರಿಗೆ ಸೂಚನೆ.
ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.
ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3,430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.
ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60 ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.
ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಬೇಕು.
ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ತಾಕೀತು ಮಾಡಿದರು.
ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ (Ratkal Police) ಪಿಎಸ್‌ಐ ಗಂಗಮ್ಮ ಅಮಾನತುಗೊಂಡಿದ್ದಾರೆ.
ಕಾಳಗಿ ತಾಲೂಕಿನ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಕುಟುಂಬದ ಮಧ್ಯೆ ಉಂಟಾಗಿರುವ ಜಮೀನು ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ಯತ್ನಿಸುತ್ತಿದ್ದರು. ಈ ವೇಳೆ ಪಿಎಸ್‌ಐ ಗಂಗಮ್ಮ ಉಭಯ ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಪರಿಶಿಷ್ಟ ಸಮುದಾಯವನ್ನು ನಿಂದಿಸುವ (Casteism) ಪದ ಬಳಸಿದ್ದಾರೆ. ಈ ಕುರಿತು ವಿಡಿಯೋ ತುಣುಕು ವೈರಲ್ ಆಗಿತ್ತು. ಇದನ್ನೂ ಓದಿ: ಸೈಫ್ ಮೇಲೆ ಹಲ್ಲೆ ಎಸಗಿದ ದಾಳಿಕೋರ ಬಾಂಗ್ಲಾ ಪ್ರಜೆ: ಮುಂಬೈ ಪೊಲೀಸ್
ಯಾದಗಿರಿ: ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ (Yadagiri) ಗ್ರಾಮೀಣ ಭಾಗದಲ್ಲಿ ನಡೆದಿದೆ.
ಕಳೆದ ಮೂರು ವರ್ಷಗಳಿಂದ ನಿಂಗಪ್ಪ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಇಬ್ಬರು ಪ್ರೀತಿಯಲ್ಲಿ ಬಿದ್ದು ಓಡಾಡುವುದನ್ನ ಯುವತಿಯ ಕುಟುಂಬಸ್ಥರು ಗಮನಿಸಿದ್ದರು. ನಿಂಗಪ್ಪನನ್ನು ಕರೆದು ಯುವತಿಯ ಸಹವಾಸ ಬಿಡುವಂತೆ ಆಕೆಯ ಕುಟುಂಬಸ್ಥರು ತಾಕೀತು ಮಾಡಿದ್ದರು. ಇದಾದ ಬಳಿಕ ಆಕೆಯಿಂದ ನಿಂಗಪ್ಪ ಅಂತರ ಕಾಯ್ದುಕೊಂಡಿದ್ದ. ಇದನ್ನು ಸಹಿಸಲಾಗದೇ ಯುವತಿ, ನೀನು ನನ್ನ ಬಿಟ್ಟರೆ ನಾನು ಸಾಯುತ್ತೇನೆಂದು ಹೇಳಿ ನಿಂಗಪ್ಪನೊಂದಿಗೆ ಓಡಿಹೋಗಿದ್ದಳು.ಇದನ್ನೂ ಓದಿ: ಫ್ಯಾನ್ಸ್‌ಗೆ ಸೃಜನ್ ಲೋಕೇಶ್ ಗುಡ್ ನ್ಯೂಸ್- ಮತ್ತೆ ಶುರುವಾಗಲಿದೆ ‘ಮಜಾ ಟಾಕೀಸ್’
ಓಡಿ ಹೋಗಿ ಗುಜರಾತ್‌ನಲ್ಲಿ ವಾಸವಾಗಿದ್ದರು. ಬಳಿಕ ಗ್ರಾಮದಲ್ಲಿ ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ಆಕೆ ಮನೆಗೆ ಕಳುಹಿಸಿದ್ದರು. ತದನಂತರ ನಿಂಗಪ್ಪ ಕೂಲಿ ಕೆಲಸಕ್ಕಾಗಿ ಚಿತ್ತಾಪುರಕ್ಕೆ ತೆರಳಿದ. ಆದ ಯುವತಿ ನಿಂಗಪ್ಪನಿಗೆ ಕರೆಮಾಡಿ ಮತ್ತೆ ಆತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಯುವತಿಯ ಕುಟುಂಬಸ್ಥರು ನಿಂಗಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
– ಜಾತಿ ನಿಂದನೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯ ತೀರ್ಪು
ಕೊಪ್ಪಳ: ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ (Atrocity Case) ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5,000 ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣ ಉಳಿದ 3 ಅಪರಾಧಿಗಳಿಗೆ 5 ವರ್ಷ ಜೈಲು ಹಾಗೂ ತಲಾ 2,000 ರೂ. ದಂಡ ಹಾಕಿ ಜಿಲ್ಲಾ ನ್ಯಾಯಾಧೀಶ (Koppal District Majistret) ಸಿ. ಚಂದ್ರಶೇಖರ ಐತಿಹಾಸಿಕ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಒಟ್ಟು 117 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಹಲವರು ಮೃತಪಟ್ಟಿದ್ದಾರೆ. ಇನ್ನೂ ಕೆಲವರ ಹೆಸರು ರಿಪೀಟ್ ಆಗಿದ್ದಾರೆ. ಉಳಿದ 101 ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಮಾನಿಸಿತ್ತು. ಈ ಪೈಕಿ 3 ಅಪರಾಧಿಗಳು ಎಸ್ಸಿ/ಎಸ್ಟಿ ವರ್ಗಕ್ಕೆ ಸೇರಿದ್ದಾರೆ. ಈ ಹಿನ್ನೆಲೆ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗದ ಹಿನ್ನೆಲೆ ಮೂವರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಕಡಿಮೆ ಆಗಿದೆ ಎನ್ನಲಾಗಿದೆ.
ಇಂದು ಆದೇಶ ಪ್ರಕಟ:
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಕಳೆದ 2014ರ ಆ.28 ರಂದು ಘಟನೆ ನಡೆದಿತ್ತು. ಬರೋಬ್ಬರಿ 10 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅ.21 ರಂದು ಆರೋಪ ಪಟ್ಟಿಯಲ್ಲಿನ ಎಲ್ಲ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಮಾನಿಸಿ, ಶಿಕ್ಷೆ ಪ್ರಮಾಣದ ಆದೇಶ ಕಾಯ್ದಿರಿಸಿತ್ತು. ಇಂದು (ಅ.24) ಸಂಜೆ ಸುಮಾರು 6 ಗಂಟೆಗೆ ನ್ಯಾಯಾಧೀಶರು ಆದೇಶ ಪ್ರಕಟಿಸಿದರು.
ಏನಿದು ಪ್ರಕರಣ?
ಕೊಪ್ಪಳದ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಕಳೆದ 2014ರ ಆ.29 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಆದೇಶ ನೀಡಿದೆ. ಕ್ಷೌರದ ಅಂಗಡಿ ಮತ್ತು ಹೋಟೆಲ್‌ಗೆ ಪ್ರವೇಶಕ್ಕೆ ಸಂಬಂಧಿಸಿದಂತೆ, ದಲಿತರು ಮತ್ತು ಗ್ರಾಮದ ಸವರ್ಣೀಯರ ನಡುವೆ ಗಲಾಟೆ ನಡೆದಿತ್ತು.
ನಂತರ ಗಂಗಾವತಿಯ ಚಿತ್ರಮಂದಿರದಲ್ಲಿ ಆರಂಭವಾದ ಗಲಾಟೆ ಮರಕುಂಬಿ ಗ್ರಾಮದಲ್ಲಿ ದಲಿತರ ಕೇರಿಗೆ ನುಗ್ಗಿ ಗುಡಿಸಲಿಗೆ ಬೆಂಕಿ ಇಡುವ ಹಂತ ತಲುಪಿತ್ತು. ಗಲಾಟೆ ಹಿನ್ನೆಲೆ ಪೊಲೀಸರು ಗ್ರಾಮದಲ್ಲಿ ಬೀಡು ಬಿಟ್ಟು ತನಿಖೆ ಆರಂಭಿಸಿದ್ದರು. ಆದರೆ, ಅದೇ ರಾತ್ರಿ ಆರೋಪಿಗಳು ದಲಿತರ ಕೇರಿಗೆ ನುಗ್ಗಿ ಗುಡಿಸಲಿಗೆ ಬೆಂಕಿ ಇಟ್ಟಿದ್ದರು ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿರಲಿಲ್ಲ. ತನಿಖೆ ನಡೆಸಿದ ಪೊಲೀಸರು ಒಟ್ಟು 117 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಅಪರಾಧಿಗಳ ಸಂಬಂಧಿಕರ ಆಕ್ರೋಶ:
ನ್ಯಾಯಾಧೀಶರು ಆದೇಶ ಪ್ರಕಟಿಸುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿ ಸೇರಿದ್ದ ಅಪರಾಧಿಗಳ ಸಂಬಂಧಿಕರು ಮತ್ತು ಕುಟುಂಬಸ್ಥರು ರೋಧನ ಮುಗಿಲು ಮುಟ್ಟಿತ್ತು. ಕೆಲವು ಮಹಿಳೆಯರು ಆದೇಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇನ್ನೂ ಹಲವರು ಘಟನೆ ನಡೆದ ದಿನ ಗ್ರಾಮದಲ್ಲಿ ಇರದ ವ್ಯಕ್ತಿಗಳಿಗೂ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾತಿ ನಿಂದನೆ ಹಾಗೂ ಅಸ್ಪೃಶ್ಯತೆ ಆಚರಣೆಯ ಒಂದೇ ಪ್ರಕರಣದಲ್ಲಿ ಇಷ್ಟೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಮಾಡಿರುವುದು ದೇಶದಲ್ಲಿ ಇದೇ ಮೊದಲ ಪ್ರಕರಣ ಎನ್ನಲಾಗಿದೆ.
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ (Atrocity Case) ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮಂತ್ರಿ, ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ಜಾಮೀನು (Bail) ಭವಿಷ್ಯ ಗುರುವಾರ ನಿರ್ಧಾರ ಆಗಲಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಎಸ್‌ಪಿಪಿ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದರು.
ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದರು. ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ – ನ.20 ರವರೆಗೆ ಅವಧಿ ವಿಸ್ತರಣೆ
ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದರು. ನಂತರ ಎಸ್‌ಪಿಪಿ ಪ್ರದೀಪ್ ಕುಮಾರ್ ವಾದ ಮಂಡಿಸಿದರು.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಗುರುವಾರಕ್ಕೆ ಆದೇಶವನ್ನು ಕಾಯ್ದಿರಿಸಿದರು. ಇದರ ಮಧ್ಯೆ ತಮ್ಮ ವಿರುದ್ಧದ ಮತ್ತೊಂದು ಪ್ರಕರಣ ಸಂಬಂಧ ಮುನಿರತ್ನ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯೂ ನಡೆಯಿತು. ಇದರ ಆದೇಶವನ್ನೂ ಕೋರ್ಟ್ ಗುರುವಾರಕ್ಕೆ ಕಾಯ್ದಿರಿಸಿದೆ.
ಬೆಂಗಳೂರು: ಶಾಸಕ ಮುನಿರತ್ನ (Muniratna) ಕೇಸ್‌ನಲ್ಲಿ ಯಾವುದೇ ದ್ವೇಷದ ರಾಜಕೀಯ ಮಾಡುತ್ತಿಲ್ಲ. ಕಾನೂನು ಪ್ರಕಾರವೇ ಕ್ರಮ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಶಾಸಕ ಮುನಿರತ್ನ ಕೇಸ್‌ಗೆ ವಿಶೇಷ ತಂಡ ರಚನೆ ಮಾಡುವಂತೆ ಕಾಂಗ್ರೆಸ್ ಒಕ್ಕಲಿಗ ಶಾಸಕರಿಂದ ಮನವಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಒಕ್ಕಲಿಗ ಶಾಸಕರು ನನ್ನನ್ನು ಭೇಟಿ ಆಗಿದ್ದರು. ಮುನಿರತ್ನ ಒಕ್ಕಲಿಗರು, ಎಸ್ಸಿಗಳ ಮೇಲೆ ಮಾತಾಡಿದ್ದಾರೆ. ಕೆಟ್ಟ ಪದ ಬಳಕೆ ಮಾಡಿದ್ದಾರೆ. ಹೆಣ್ಣುಮಕ್ಕಳ ಮೇಲೆ ಮಾತಾಡಿದ್ದಾರೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಎಫ್‌ಎಸ್‌ಎಲ್‌ಗೆ ಧ್ವನಿ ರವಾನೆ ಮಾಡಲಾಗಿದೆ. ವರದಿ ಬಂದ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್
ಮುನಿರತ್ನ ಚೆಲುವರಾಜ್ ಮೇಲೆ ಕೂಡ ಮಾತನಾಡಿದ್ದಾರೆ. ಮಾಜಿ ಪಾಲಿಕೆ ಸದಸ್ಯ ವೇಲು ನಾಯಕ್ ಮೇಲೂ ಮಾತಾಡಿದ್ದಾರೆ. ಅದರ ಮೇಲೆ ದೂರು ಕೊಟ್ಟಿದ್ದಾರೆ. ದೂರಿನ ಆಧಾರದಲ್ಲಿ ದೂರು ದಾಖಲು ಆಗಿದೆ. ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾನೂನು ರೀತಿ ಕ್ರಮ ಆಗಿದೆ. ಯಾವುದೇ ದ್ವೇಷದ ರಾಜಕೀಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್
ಪರಶುರಾಂ ಕುಟುಂಬ ಆರೋಪ ಮಾಡಿತ್ತು. ಆದರೆ ಆ ಪ್ರಕರಣ ಮತ್ತು ಇದಕ್ಕೂ ಹೋಲಿಸುವುದು ಬೇಡ. ಆತನ ಪತ್ನಿ, ಕುಟುಂಬದವರು ಆರೋಪ ಮಾಡಿದ್ದಾರೆ. ಆದರೆ ಪರಶುರಾಂ ಮಾಡಿಲ್ಲ. ಮುನಿರತ್ನ ಕೇಸ್‌ನಲ್ಲಿ ಒನ್ ಟು ಒನ್ ಆರೋಪ ಇದೆ. ಹಾಗಾಗಿ ಮುನಿರತ್ನ ಪ್ರಕರಣದಲ್ಲಿ ಕೇಸ್ ಆಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಿ ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ, ನಿಯಂತ್ರಣಕ್ಕೆ ಕ್ರಮ: ಪರಮೇಶ್ವರ್
ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ಅರೆಸ್ಟ್: ಮುನಿರತ್ನ
ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್
ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ
ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ