Tag: attempt suicide

  • ವೇತನ ಸರಿಯಾಗಿ ನೀಡುತ್ತಿಲ್ಲವೆಂದು ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಸಾವು!

    ವೇತನ ಸರಿಯಾಗಿ ನೀಡುತ್ತಿಲ್ಲವೆಂದು ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಸಾವು!

    ಬಾಗಲಕೋಟೆ: ಸರಿಯಾಗಿ ವೇತನ ಸಿಗದಿದ್ದಕ್ಕೆ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ವಾಯುವ್ಯ ವಿಭಾಗದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

    ಬಾಗಲಕೋಟೆ ಜಿಲ್ಲೆ ಬಾದಾಮಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆರೂರು ಪಟ್ಟಣದ ನಿವಾಸಿ ಭರಮಪ್ಪ ಗೊಂದಿ ( 44) ಮೃತಪಟ್ಟ ಚಾಲಕ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

    ನ.2ರಂದು ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಮಯಕ್ಕೆ ಸರಿಯಾಗಿ ವೇತನ ಸಿಗದೇ ಲಕ್ಷಾಂತರ ರೂ. ಸಾಲ ತೀರಿಸುವುದು ಹೇಗೆಂದು ಮನನೊಂದು ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರು ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

  • ಅಪ್ಪು ಸಾವಿನಿಂದ ಮನನೊಂದು ಅಭಿಮಾನಿಗಳಿಬ್ಬರು ಆತ್ಮಹತ್ಯೆಗೆ ಯತ್ನ!

    ಅಪ್ಪು ಸಾವಿನಿಂದ ಮನನೊಂದು ಅಭಿಮಾನಿಗಳಿಬ್ಬರು ಆತ್ಮಹತ್ಯೆಗೆ ಯತ್ನ!

    ರಾಯಚೂರು: ಪುನೀತ್ ರಾಜಕುಮಾರ ಹಠಾತ್ ನಿಧನರಾದ ಹಿನ್ನೆಲೆ ಜಿಲ್ಲೆಯ ಅಭಿಮಾನಿಗಳಿಬ್ಬರು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    PUNEET RAJKUMAR

    ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಯುವಕ ಬಸನಗೌಡ ಹಾಗೂ ಯಾಪಲಪರ್ವಿ ಗ್ರಾಮದ ಯುವಕ ಮಹಮ್ಮದ್ ರಫಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ತಂದೆ ಡಾ. ರಾಜ್ ಬಗ್ಗೆ ಪುಸ್ತಕ ಬರೆದಿದ್ದ ಅಪ್ಪು

    ಪುನೀತ್ ರಾಜಕುಮಾರ್ ನಿಧನ ಹೊಂದಿದ ಸುದ್ದಿ ಕೇಳಿ ತಮ್ಮ ಮನೆಗಳಲ್ಲೇ ವಿಷ ಸೇವನೆ ಮಾಡಿದ್ದಾನೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್

    PUNEET

    ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳಾಗಿದ್ದ ಹಿನ್ನೆಲೆ ದುಃಖ ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಭಿಮಾನಿಗಳಿಬ್ಬರು ಚಿಕಿತ್ಸೆಗೆ ಸ್ಪಂದಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕೆಲಸದ ಒತ್ತಡದಿಂದ ಕಚೇರಿಯಲ್ಲೇ ವಿಷ ಸೇವಿಸಿದ ಗ್ರಾಮ ಲೆಕ್ಕಾಧಿಕಾರಿ

    ಕೆಲಸದ ಒತ್ತಡದಿಂದ ಕಚೇರಿಯಲ್ಲೇ ವಿಷ ಸೇವಿಸಿದ ಗ್ರಾಮ ಲೆಕ್ಕಾಧಿಕಾರಿ

    ಮಂಡ್ಯ: ಕೆಲಸದ ಒತ್ತಡದಲ್ಲಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.

    ಎಸ್‍ಐ ಹೊನ್ನಲಗೆರೆಯ ಗೋವಿಂದ್ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಲೆಕ್ಕಾಧಿಕಾರಿ. ಮೇಲಾಧಿಕಾರ ಕಿರುಕುಳದಿಂದ ಗೋವಿಂದ್ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಹೆಸರನ್ನು ಕೂಡಲೇ ಗಣಕ ಯಂತ್ರದ ನೊಂದಣಿ ಮಾಡಿಸಬೇಕು ಎಂದು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರು. ತಹಶೀಲ್ದಾರ್ ಅವರು ಕೂಡ ತಕ್ಷಣವೇ ಕೆಲಸ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದರು. ಇದರಿಂದಾಗಿ ಗೋವಿಂದ್ ಶೆಟ್ಟಿ ಕಚೇರಿಯಲ್ಲಿಯೇ ವಿಷ ಸೇವಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಗೋವಿಂದ್ ಶೆಟ್ಟಿ ಅವರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]