Tag: attempt to murder

  • ಬಿಜೆಪಿ ಶಾಸಕ ನಿತೇಶ್ ರಾಣೆಗೆ ಜಾಮೀನು ನಿರಾಕರಿಸಿದ ಕೋರ್ಟ್

    ಬಿಜೆಪಿ ಶಾಸಕ ನಿತೇಶ್ ರಾಣೆಗೆ ಜಾಮೀನು ನಿರಾಕರಿಸಿದ ಕೋರ್ಟ್

    ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

    ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್‌ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.

    ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ ಕಾಲ ಬಂಧಿಸದಂತೆ ಸುಪ್ರೀಂ ಕೋರ್ಟ್ ಕಳೆದ ಗುರುವಾರ ಮಹಾರಾಷ್ಟ್ರ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಶಾಸಕ ನಿತೇಶ್ ರಾಣೆ ಬಂಧನದ ಪೂರ್ವ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡುವಾಗ ಸುಪ್ರೀಂ ಕೋರ್ಟ್ ಮುಂದೆ ನಿಯಮಿತ ಜಾಮೀನು ಪಡೆಯಲು ಕೇಳಿಕೊಂಡಿದ್ದರು. ಇದಕ್ಕೂ ಮೊದಲು, ಬಾಂಬೆ ಹೈಕೋರ್ಟ್ ಜನವರಿ ೧೭ ರಂದು ಪ್ರಕರಣದಲ್ಲಿ ನಿತೇಶ್ ರಾಣೆಗೆ ಪೂರ್ವ ಬಂಧನ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನೂ ಓದಿ: UP Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲಿಲ್ಲ ಅಪರ್ಣಾ ಯಾದವ್ ಹೆಸರು

    ಕಳೆದ ತಿಂಗಳು ರಾಜ್ಯ ಶಾಸಕಾಂಗ ಸಂಕೀರ್ಣದ ಹೊರಗೆ ಅವಮಾನ ಮತ್ತು ನೋವನ್ನು ಅನುಭವಿಸಿದ ಶಾಸಕ ರಾಣೆ ಮಹಾರಾಷ್ಟ್ರದ ಸರ್ಕಾರ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಅನೇಕ ಬಾರಿ ಹೇಳಿಕೆ ನೀಡಿದ್ದರು. ರಾಣೆ ಕುಟುಂಬವು ಈ ಮೊದಲು ಶಿವಸೇನೆಯೊಂದಿಗೆ ದೀರ್ಘಕಾಲ ಸಂಬಂಧ ಹೊಂದಿತ್ತು. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

  • ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ರಾಯಚೂರು: ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ್ದ ಆರೋಪಿ ಮಗನಿಗೆ ಜಿಲ್ಲಾ ಸತ್ರ ನ್ಯಾಯಾಲವು 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ರಾಯಚೂರು ತಾಲೂಕಿನ ಹಿರಾಪುರದ ಗ್ರಾಮದ ಈರೇಶ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ನರಸಮ್ಮ ಹಲ್ಲೆಗೊಳಗಾಗಿದ್ದ ತಾಯಿ. ಕೋರ್ಟ್ ಆರೋಪಿಗೆ 5 ವರ್ಷ ಜೈಲು ಶಿಕ್ಷೆಯ ಜೊತೆಗೆ 27,500 ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?:
    ನರಸಮ್ಮ ಅವರು ಆಸ್ತಿಯನ್ನು ಮಾರಿ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಆ ಹಣವನ್ನು ತನಗೆ ನೀಡುವಂತೆ ಮಗ ಈರೇಶ್ ಒತ್ತಾಯಿಸಿದ್ದ. ಆದರೆ ನರಸಮ್ಮ ನನ್ನ ಜೀವನೋಪಾಯಕ್ಕೆ ಈ ಹಣ ಬೇಕು. ನಾನು ಕೊಡುವುದಿಲ್ಲ ಅಂತ ಮಗನಿಗೆ ಹೇಳಿದ್ದರು. ಇದರಿಂದಾಗಿ ಇಬ್ಬರ ನಡುವೆ ವಾಗ್ದಾಳಿ ಕೂಡ ಆಗಿತ್ತು. ಹಣ ಕೊಡಲಿಲ್ಲವೆಂದು ಈರೇಶ್ 2017ರ ಜುಲೈನಲ್ಲಿ ತಾಯಿಯ ಮೇಲೆ ಹಲ್ಲೆ ಮಾಡಿದ್ದ.

    ಈ ಕುರಿತು ನರಸಮ್ಮ ಯರಗೇರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈರೇಶ್‍ನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಪ್ರಕರಣ ನಡೆದು 18 ತಿಂಗಳ ಬಳಿಕ ಆರೋಪಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ಚಿತ್ರದುರ್ಗ: ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವೇಳೆ ಚಿದಾನಂದ ತಾಯಿ ಸಿದ್ದಮ್ಮ ಅವರ ಮೇಲೂ ಹಲ್ಲೆ ನಡೆದಿದೆ.

    ಆಗಿದ್ದೇನು?:
    ಚಿದಾನಂದ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರು. ಇದನ್ನು ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರು ಇಂದು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದಿದ್ದರು. ಮನೆಯ ಮುಂದೆ ನಿಂತು ಸಿದ್ದಮ್ಮ ಅವರ ಜೊತೆಗೆ ಅಸಭ್ಯ ವರ್ತಿಸಿ, ನಿಂದಿಸಿದ್ದಾರೆ. ಈ ವೇಳೆ ಚಿದಾನಂದ ಮಧ್ಯ ಪ್ರವೇಶಿಸುತ್ತಿದ್ದಂತೆ ಅವರ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

    ಘಟನೆಯಿಂದಾಗಿ ಚಿದಾನಂದ ಅವರ ಎದೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ತಡೆಯಲು ಬಂದಿದ್ದ ಸಿದ್ದಮ್ಮ ಅವರಿಗೂ ದುಷ್ಕರ್ಮಿಗಳು ಹೊಡೆದಿದ್ದಾರೆ. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಯುವಕರು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳು ಚಿದಾನಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಮಗನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸಲಾಗದೇ ಈ ಕೃತ್ಯ ಎಸಗಿದ್ದಾರೆ ಎಂದು ಚಿದಾನಂದ ತಾಯಿ ಸಿದ್ದಮ್ಮ ಆರೋಪಿಸಿದ್ದಾರೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಪ್ರೇಮ ವೈಫಲ್ಯಕ್ಕೆ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!

    ಪ್ರೇಮ ವೈಫಲ್ಯಕ್ಕೆ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!

    ಬೆಂಗಳೂರು: ಪ್ರೇಮ ವೈಫಲ್ಯವಾದರೆ ಪಾಗಲ್ ಪ್ರೇಮಿಗಳು ಎಂತಹ ಕೃತ್ಯಕ್ಕೆ ಬೇಕಾದರೂ ಇಳಿಯುತ್ತಾರೆ. ಇಂತಹದ್ದೇ ಪ್ರಕರಣವೊಂದು ಬೆಂಗಳೂರು ಹೊರ ವಲಯದ ಆನೇಕಲ್‍ನಲ್ಲಿ ನಡೆದಿದ್ದು, ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.

    ಬೆಳ್ಳಂದೂರು ನಿವಾಸಿ ಗಿರೀಶ್ ಕೃತ್ಯ ಎಸಗಿದ ಪಾಗಲ್ ಪ್ರೇಮಿ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯನ್ನು ಆನೇಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?: ಯುವತಿಯ ಮನೆಯಲ್ಲಿ ಆಕೆಯನ್ನು ಬಿಟ್ಟು ಬೇರೆ ಯಾರೂ ಇಲ್ಲವೆಂದು ಗಿರೀಶ್ ಇಂದು ಬೆಳಗ್ಗೆ ಖಚಿತ ಪಡೆಸಿಕೊಂಡಿದ್ದಾನೆ. ಬಳಿಕ ಮನೆಗೆ ನುಗ್ಗಿದ ಗಿರೀಶ್ ಯುವತಿಯನ್ನು ಹಿಡಿದು, ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಜೋರಾಗಿ ಕಿರುಚಾಡಿದ್ದಾಳೆ. ಇದನ್ನು ನೆರೆಹೊರೆಯವರು ಕೇಳಿಸಿಕೊಂಡಿದ್ದು, ತಕ್ಷಣವೇ ಯುವತಿಯ ಮನೆ ಕಡೆಗೆ ಬಂದಿದ್ದಾರೆ. ಇದನ್ನು ನೋಡಿದ ಗಿರೀಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.

    ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಯುವತಿಯನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಪಾಗಲ್ ಪ್ರೇಮಿ ಗಿರೀಶ್ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

    ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

    ಬೆಳಗಾವಿ: ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ಮುಂದುವರೆದಿದೆ. ಸದ್ಯ ನಾಯಕರು ಸಮಾಧಾನಗೊಂಡಿದ್ದರೆ, ಬೆಂಬಲಿಗರು ಮಾತ್ರ ಶತ್ರುತ್ವವನ್ನು ಕಾರುತ್ತಿದ್ದಾರೆ.

    ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗ ಮಾರಿಹಾಳ ಗ್ರಾ.ಪಂ ಉಪಾಧ್ಯಕ್ಷ ತೌಸಿಫ್ ಫಣಿಬಂದ ಎಂಬಾತ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗ ಆಸೀಫ್ ಮುಲ್ಲ ಎಂಬಾತನ ಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಾಯಾಳು ಅಸೀಪ್ ಮುಲ್ಲಾನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿ ಬೆಂಬಲಿಗನ ಆರೋಗ್ಯ ವಿಚಾರಿಸಿದರು. ಘಟನೆ ಬಳಿಕ ಆರೋಪಿ ತೌಸಿಫ್ ನಾಪತ್ತೆಯಾಗಿದ್ದಾನೆ. ಪೊಲೀಸರು ಆರೋಪಿ ಬಂಧನಕ್ಕಾಗಿ ವಿಶೇಷ ಜಾಲ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ-ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ

    ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ-ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ

    ಮಂಗಳೂರು: ಗೌರಿ ಹಂತಕರು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಸಂಚು ರೂಪಿಸಿದ್ದರು ಎನ್ನುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

    ವಿಚಾರಣೆ ವೇಳೆ ಗೌರಿ ಹಂತಕರು ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಬಳಿಕ ವಿಚಾರವಾದಿ, ಮಂಗಳೂರು ನಿವಾಸಿ ನರೇಂದ್ರ ನಾಯಕ್ ಅವರನ್ನು ನಗರದಲ್ಲಿ ಹತ್ಯೆ ಮಾಡುವ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳ ಮೂಲಗಳು ತಿಳಿಸಿವೆ.

    ಹತ್ಯೆ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ನಾಯಕ್, ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನನ್ನನ್ನು ಸುಮ್ಮನಿರಸಲು ಯಾರಿಂದಲೂ ಸಾಧ್ಯವಿಲ್ಲ, ಆತ್ಮೀಯ ಗೆಳೆಯರಾದ ನರೇಂದ್ರ ದಾಬೋಲ್ಕರ್, ಎಂ.ಎಂ.ಕಲ್ಬುರ್ಗಿ, ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಿದ್ದಾರೆ. ನನ್ನ ಹೆಣ ಬೀಳುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.

  • ಎಟಿಎಂ ಭರ್ಜರಿ ಪ್ರದರ್ಶನ!

    ಎಟಿಎಂ ಭರ್ಜರಿ ಪ್ರದರ್ಶನ!

    ಕನ್ನಡದಲ್ಲಿ ಸತ್ಯಕಥೆಗಳನ್ನಾಧರಿಸಿದ ಸಿನಿಮಾಗಳು ಆಗಾಗ ತೆರೆ ಕಾಣುತ್ತಿರುತ್ತವೆ. ಇದೀಗ ಅದೇ ಸಾಲಿನಲ್ಲಿ ಸೇರ್ಪಡೆಯಾಗಿರುವ ಚಿತ್ರ ಎಟಿಎಂ (ಅಟೆಂಪ್ಟ್ ಟು ಮರ್ಡರ್). 5 ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂಥ ಬೆಂಗಳೂರಿನ ಎಟಿಎಂವೊಂದರಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹಿನ್ನೆಲೆಯಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಇದಾಗಿದ್ದು, ಕಳೆದ ವಾರ ರಾಜ್ಯಾದ್ಯಂತ ತೆರೆಗೆ ಬಂದಿತ್ತು. ನೈಜ ಘಟನೆ ಆಧರಿಸಿ ಅಚ್ಚುಕಟ್ಟಾಗಿ ಸಿನಿಮಾ ಮಾಡಿರುವ ಕಾರಣಕ್ಕೆ ವಿಮರ್ಶಕರು ಮಾತ್ರವಲ್ಲದೆ ಪ್ರೇಕ್ಷಕರೂ ಎಟಿಎಂಗೆ ಫುಲ್ ಮಾರ್ಕ್ ನೀಡಿದ್ದಾರೆ. ಇದರ ಪ್ರತಿಫಲವೆಂಬಂತೆ ಎಟಿಎಂ ಬಿಡುಗಡೆಯಾದ ಸ್ಥಳಗಳಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ.

    ಈ ಚಿತ್ರಕ್ಕೆ ಅಮರ್ ಕಥೆ, ಚಿತ್ರಕಥೆ, ಸಂಭಾಷಣೆಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ, ಎಸ್.ವಿ. ನಾರಾಯಣ್ ಈ ಚಿತ್ರಕ್ಕೆ ಬಂಡವಾಳ ಹಾಕಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಅಮರ್ ಮಾಡಿಕೊಂಡಿದ್ದ ಈ ಕಥೆ ಕೇಳಿದಾಗ ಅದರಲ್ಲಿನ ವಿಶೇಷ ಅಂಶವನ್ನು ಗ್ರಹಿಸಿ, ಆ ಕಥೆಯಲ್ಲಿ ಏನೋ ಹೊಸತನವಿರುವುದನ್ನು ಕಂಡುಕೊಂಡು ಸಹೋದರ ಕೃಷ್ಣಮೂರ್ತಿ ಅವರ ಜೊತೆ ಚರ್ಚಿಸಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಟಿಎಂ ಚಿತ್ರದಲ್ಲಿ ಪ್ರಮುಖವಾಗಿ ಐದು ಜನ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರೂ ಚಿತ್ರದಲ್ಲಿ ಬರುವ ಎಲ್ಲಾ ಪಾತ್ರಗಳೂ ಅದರದೇ ಆದ ಪ್ರಾಮುಖ್ಯತೆ ಹೊಂದಿವೆ. ಚಿತ್ರದಲ್ಲಿರುವ ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಂಟೆಂಟ್ ಪ್ರೇಕ್ಷಕರನ್ನು ಹಿಡಿದು ಕೂರಿಸುವಂತಿದೆ.

    ನಿರ್ದೇಶಕ ಅಮರ್ ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದು, ಇದೇ ಮೊದಲ ಬಾರಿಗೆ ಕಮರ್ಷಿಯಲ್ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇನ್ನು ಈ ಚಿತ್ರದ ನಾಯಕನಟ ವಿನಯ್ ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಹೇಮಲತಾ ಅವರು ಒಬ್ಬ ಜರ್ನಲಿಸ್ಟ್ ಪಾತ್ರವನ್ನು ನಿರ್ವಹಿಸಿದ್ದಾರೆ.

  • ಎಟಿಎಂನಿಂದ ಹೀರೋ ಆದರು ವಿನಯ್ ಗೌಡ!

    ಎಟಿಎಂನಿಂದ ಹೀರೋ ಆದರು ವಿನಯ್ ಗೌಡ!

    ಬೆಂಗಳೂರು: ವಿನಯ್ ಗೌಡ ಗೊತ್ತಲ್ಲ. ಕನ್ನಡದ ಅನೇಕ ಸೀರಿಯಲ್‍ಗಳಲ್ಲಿ ನಟಿಸಿ ಹೆಸರು ಮಾಡಿದವರು. ಬಹುಶಃ ವಿನಯ್ ಅಂದರೆ ತಕ್ಷಣಕ್ಕೆ ಗುರುತು ಹತ್ತೋದು ಕಷ್ಟ. ಯಾಕೆಂದರೆ, ಅವರು ಬೇರೆ ಬೇರೆ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನಸಲ್ಲಿ ನೆಲೆಯೂರಿದ್ದಾರೆ. ಇಂಥಾ ವಿನಯ್ ಗೌಡ ಎಟಿಎಂ ಸಿನಿಮಾದ ಮೂಲಕ ಹೀರೋ ಆಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಹಾಸನ ವಿನಯ್ ಅವರ ಊರು. ಅಲ್ಲಿನ ದುದ್ದ ಹೋಬಳಿಯ ಹೆರಗು ವಿನಯ್ ಅವರ ಸ್ವಂತ ಊರು. ಆದರೆ ಓದಿ ಬೆಳೆದಿದ್ದೆಲ್ಲವೂ ಬೆಂಗಳೂರಿನಲ್ಲಿಯೇ. ಓದಿಗೂ ಇವರ ಆಸಕ್ತಿಗೂ ಎತ್ತಣಿಂದೆತ್ತ ಸಂಬಂಧವೂ ಇಲ್ಲ. ಹೇಳಿಕೊಳ್ಳುವಂಥಾ ಕಲೆಯ ವಾತಾವರಣ ಇರದಿದ್ದ ಕುಟುಂಬವೊಂದರಿಂದ ಬಂದಿರುವ ವಿನಯ್ ನಟನಾಗಿ ರೂಪುಗೊಂಡಿದ್ದೇ ಒಂದು ಅಚ್ಚರಿ. ಕೆಎಲ್‍ಇ ಕಾಲೇಜಿನಲ್ಲಿ ಪದವಿ ಮುಗಿಸಿಕೊಂಡು, ದಯಾನಂದ ಸಾಗರ್ ಕಾಲೇಜಿನಲ್ಲಿ ಎಂಬಿಎ ಮುಗಿಸಿಕೊಂಡ ವಿನಯ್ ಕಾಲೇಜು ದಿನಗಳಲ್ಲಿಯೇ ಮಾಡೆಲಿಂಗ್‍ನಲ್ಲಿ ಮಿಂಚಿದ್ದರು. ಓದೆಲ್ಲ ಮುಗಿಯುವ ಹೊತ್ತಿಗೆ ಅವರು ಆಕರ್ಷಿತರಾಗಿದ್ದು ರಂಗಭೂಮಿಯತ್ತ.

    ಜಯದೇವ್ ಅವರ ತ್ರಿಶಂಕು ತಂಡದ ಮೂಲಕ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ವಿನಯ್ ಅವರು ದುನಿಯಾ ವಿಜಯ್ ಮುಂತಾದ ನಟರೊಂದಿಗೇ ರಂಗ ತಾಲೀಮು ನಡೆಸಿದ್ದರು. ಹೀಗೆ ತರಬೇತಿ ಹೊಂದಿದ ವಿನಯ್ ಮೊದಲು ನಟಿಸಿದ ನಾಟಕ `ತ್ರಿಶಂಕು?. ಆ ಮೂಲಕ ನಟನೆಗೆ ಅಡಿಯಿರಿಸಿದ ವಿನಯ್ ಆ ನಂತರ ಹತ್ತಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಅದರ ಬಲದಿಂದಲೇ ಮೊದಲ ಸಲ ವಿನು ಬಳಂಜ ನಿರ್ದೇಶನದ ಸೂಪರ್ ಹಿಟ್ ಧಾರಾವಾಹಿ ಜೋಗುಳದಲ್ಲಿಯೂ ಗಮನಾರ್ಹ ಪಾತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದರು. ಆ ನಂತರ ನಿನ್ನೊಲುಮೆಯಿಂದಲೇ, ಮುಕ್ತ ಮುಕ್ತ ಮುಂತಾದ ಧಾರಾವಾಹಿಗಳ ಮೂಲಕ ಕಿರುತೆರೆ ಜಗತ್ತಿನಲ್ಲಿ ನೆಲೆ ನಿಂತಿದ್ದರು. ಈ ನಡುವೆ ಮತ್ತೆ ಮುಂಗಾರು ಚಿತ್ರದಲ್ಲಿಯೂ ಗಮನಾರ್ಹ ಪಾತ್ರವೊಂದರಲ್ಲಿ ವಿನಯ್ ಕಾಣಿಸಿಕೊಂಡಿದ್ದರು. ತಾನೊಬ್ಬ ಪರಿಪೂರ್ಣ ನಟನಾಗಿ ರೂಪುಗೊಳ್ಳಬೇಕೆಂಬ ಹಂಬಲ ಹೊಂದಿದ್ದ ವಿನಯ್ ನಾಯಕ ನಟನಾಗಲು ಒಂದೊಳ್ಳೆ ಕಥೆಯ ತಲಾಷಿನಲ್ಲಿದ್ದರು. ಅದೀಗ ಎಟಿಎಂ ಚಿತ್ರದ ಮೂಲಕ ಸಾಕಾರಗೊಂಡಿದೆ.

    ಎಟಿಎಂ ಚಿತ್ರದಲ್ಲಿ ವಿನಯ್ ಬಯಸಿದ್ದಂಥಾದ್ದೇ ಖಡಕ್ ಪೊಲೀಸ್ ಅಧಿಕಾರಿಯ ನಾಯಕನ ಪಾತ್ರ ಸಿಕ್ಕಿದೆ. ಇದುವೇ ಚಿತ್ರರಂಗದಲ್ಲಿ ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸುತ್ತದೆ ಎಂಬ ಭರವಸೆಯೂ ವಿನಯ್ ಅವರಿಗಿದೆ. ರಗಡ್ ಲುಕ್ಕಿನ ಖಡಕ್ ಪಾತ್ರಗಳನ್ನು ಮಾಡುವ ಇರಾದೆ ಹೊಂದಿರುವ ಅವರು ಪೌರಾಣಿಕ ಪಾತ್ರಗಳನ್ನು ಮಾಡುವ ಕನಸನ್ನೂ ಹೊಂದಿದ್ದಾರೆ. ಪಾತ್ರ ಯಾವುದಾದರೇನು ನಟಿಸುವ ಛಾತಿ ಇರುವ ವಿನಯ್ ಕನ್ನಡ ಚಿತ್ರರಂಗದ ಪಾಲಿಗೆ ಉತ್ತಮ ಕಲಾವಿದನಾಗೋದಂತೂ ನಿಜ.

  • ಬೈಕ್ ವೀಲಿಂಗ್, ಹುಡ್ಗಿ ವಿಚಾರಕ್ಕೆ ಗಲಾಟೆ-ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

    ಬೈಕ್ ವೀಲಿಂಗ್, ಹುಡ್ಗಿ ವಿಚಾರಕ್ಕೆ ಗಲಾಟೆ-ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

    ಬೆಂಗಳೂರು: ಹುಡಗಿ ಮತ್ತು ಬೈಕ್ ವೀಲಿಂಗ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲವು ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದಿರುವ ಘಟನೆ ಮಾಗಡಿ ರಸ್ತೆಯ ದಾಸರಹಳ್ಳಿ ಬಸ್ ನಿಲ್ದಾಣದ ಎಸ್ ಬಿಐ ಬ್ಯಾಂಕ್ ಬಳಿ ನಡೆದಿದೆ.

    21 ವರ್ಷದ ಅಕ್ಬರ್ ಅಲಿ ಚಾಕು ಇರಿತಕೊಳ್ಳಗಾದ ಯುವಕ. ಏಕಾಏಕಿ ಬಂದ ನಾಲ್ವರು ದುಷ್ಕರ್ಮಿಗಳು ಆಕ್ಬರ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಿದ್ದು ಒದ್ದಾಡುತ್ತಿದ್ದ ಅಕ್ಬರ್ ನನ್ನು ಸ್ಥಳೀಯರು ಸಮೀಪದ ಪುಣ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಅಕ್ಬರ್ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ ಅಂತಾ ವೈದ್ಯರು ತಿಳಿಸಿದ್ದಾರೆ.

    ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಬೈಕ್ ವಿಲಿಂಗ್ ಮತ್ತು ಹುಡಗಿಯರ ವಿಚಾರಕ್ಕೆ ಅಕ್ಬರ್ ಅಲಿ ಗಲಾಟೆ ಮಾಡಿಕೊಂಡಿದ್ದ ಎಂಬ ಮಾಹಿತಿಗಳು ಲಭ್ಯವಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

  • ಅಟೆಂಪ್ಟ್ ಟು ಮರ್ಡರ್ ಹವಾ ಜೋರು!

    ಅಟೆಂಪ್ಟ್ ಟು ಮರ್ಡರ್ ಹವಾ ಜೋರು!

    ಬೆಂಗಳೂರು: ಕನ್ನಡದಲ್ಲಿ ಸತ್ಯಕಥೆಗಳನ್ನಾಧರಿಸಿದ ಸಿನಿಮಾಗಳು ಆಗಾಗ ತೆರೆ ಕಾಣುತ್ತಿರುತ್ತವೆ. ಇದೀಗ ಅದೇ ಸಾಲಿನಲ್ಲಿ ಸೇರ್ಪಡೆಯಾಗುವ ಎಟಿಎಂ (ಅಟೆಂಪ್ಟ್ ಟು ಮರ್ಡರ್) ಚಿತ್ರ ಬಿಡುಗಡೆಯಾಗುವ ಸನ್ನಾಹದಲ್ಲಿದೆ.

    ಅಮರ್ ನಿರ್ದೇಶನದ ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ಜನರನ್ನು ಸೆಳೆದಿವೆ. ಈಗಾಗಲೇ ರವಿ ದೇವ್ ಸಂಗೀತ ನಿರ್ದೇಶನದ ಮೂರು ಹಾಡುಗಳು ಟ್ರೆಂಡ್ ಸೆಟ್ ಮಾಡಿವೆ. ಅಂದಹಾಗೆ ಈ ಕಥೆಯಲ್ಲಿ ವಿಲನ್ ಪಾತ್ರದತ್ತಲೇ ಫೋಕಸ್ ಇರೋದರಿಂದ ವಿಲನ್ ಎಂಟ್ರಿಗೆಂದೇ ವಿಶೇಷವಾದೊಂದು ಹಾಡು ಮಾಡಲಾಗಿದೆಯಂತೆ. ಅದೂ ಕೂಡಾ ಜನರಿಗಿಷ್ಟವಾಗಿದೆ. ಆನಂದ್ ಆಡಿಯೋ ಹೊರ ತಂದಿರೋ ಈ ಹಾಡುಗಳೇ ಚಿತ್ರದ ಬಗ್ಗೆ ಪ್ರೇಕ್ಷಕರನ್ನು ಕಾತರರನ್ನಾಗಿಸುವಲ್ಲಿ ಯಶಸ್ವಿಯಾಗಿವೆ.

    ಇದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯೊಂದನ್ನು ಆಧರಿಸಿದ ಚಿತ್ರ. ಕಾಪೋರೇಷನ್ ವೃತ್ತದಲ್ಲಿ ಎಟಿಎಂ ಒಂದರಲ್ಲಿ ಮಹಿಳೆಯ ಮೇಲೆ ಮಾರಣಾಂತಿಕವಾದ ಹಲ್ಲೆ ನಡೆದಿತ್ತಲ್ಲಾ? ಅದೇ ಘಟನೆಯನ್ನಾಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಕಮರ್ಷಿಯಲ್ ಅಂಶಗಳಾಚೆಗೆ ಈ ಚಿತ್ರವನ್ನು ಭಿನ್ನ ಬಗೆಯಲ್ಲಿ ರೂಪಿಸಲಾಗಿದೆಯಂತೆ.

    ಸದ್ಯ ಬಿಡುಗಡೆಯ ಸರದಿಯಲ್ಲಿ ನಿಂತಿರುವ ಚಿತ್ರಗಳಲ್ಲಿ ಅಟೆಂಪ್ಟ್ ಟು ಮರ್ಡರ್ (ಎಟಿಎಂ) ಪ್ರೇಕ್ಷಕರ ಗಮನ ಸೆಳೆದಿರುವ ಚಿತ್ರವಾಗಿ ಮುಖ್ಯವಾಗಿದೆ. ಬೆಂಗಳೂರಿನಲ್ಲಿ ವರ್ಷಾಂತರಗಳ ಹಿಂದೆ ನಡೆದು ದೇಶವನ್ನೇ ಬೆಚ್ಚಿಬೀಳಿಸಿದ್ದ ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರದ ಕಥೆ ಹೆಣೆಯಲಾಗಿದೆ ಅಂತ ನಿರ್ದೇಶಕ ಅಮರ್ ಆರಂಭದಲ್ಲಿ ಹೇಳಿಕೊಂಡಿದ್ದರು. ಹಾಗಾದರೆ ಅದು ಎಟಿಎಂಗೆ ನುಗ್ಗಿದ ದುಷ್ಕರ್ಮಿ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣವಾ? ಎಂಬ ಪ್ರಶ್ನೆ ಕಾಡೋದು ಸಹಜ. ಆದರೆ ಈ ವಿಚಾರದ ನಿಗೂಢವನ್ನು ಈವರೆಗೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಒಂದು ವೇಳೆ ಅದೇ ಘಟನೆಯೇ ಆಗಿದ್ದರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಚಿತ್ರ ಮೂಡಿ ಬಂದಿದೆ ಎಂಬುದು ಚಿತ್ರತಂಡದ ಭರವಸೆ.

    ಇದು ಒಂದು ಕ್ರೈಂ ಓರಿಯಂಟೆಡ್ ಚಿತ್ರ ಎಂಬಂತೆ ಕಂಡರೂ ಈ ಚಿತ್ರದಲ್ಲೆಲ್ಲೂ ಕೊಲೆಗಳನ್ನು ವೈಭವೀಕರಿಸಿಲ್ಲವಂತೆ. ಅಸಲಿಗೆ ಕೊಲೆ ನಡೆಯುತ್ತದಾ ಎಂಬುದನ್ನೇ ಚಿತ್ರ ತಂಡ ಸಸ್ಪೆನ್ಸ್ ಆಗಿಟ್ಟಿದೆ. ಈ ನೈಜ ಘಟನೆಗೆ ಸಿನಿಮಾ ಟಚ್ ನೀಡಿರೋ ನಿರ್ದೇಶಕರು ಅದರ ಜೊತೆಗೆ ನವಿರಾದೊಂದು ಪ್ರೇಮ ಕಥೆಯನ್ನೂ ಹೇಳಿದ್ದಾರಂತೆ. ಈ ಕಾರಣದಿಂದಲೇ ಈ ಚಿತ್ರ ವಿಶೇಷವಾಗಿ ಮೂಡಿ ಬಂದಿದೆ ಎಂಬುದು ನಿರ್ದೇಶಕರ ಅಭಿಪ್ರಾಯ. ಇನ್ನುಳಿದಂತೆ ವಿನಯ್ ಈ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಾಯಕ ನಟನಾಗಬೇಕೆಂಬ ಕನಸು ಹೊತ್ತು ಆ ನಿಟ್ಟಿನಲ್ಲಿ ವರ್ಷಾಂತರಗಳ ಕಾಲ ಶ್ರಮ ವಹಿಸಿರುವ ವಿನಯ್ ಎಟಿಎಂ ಚಿತ್ರದ ಮೂಲಕ ಅದು ಕೈಗೂಡಿದ ಖುಷಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಬಹು ಮುಖ್ಯವಾದ ಪಾತ್ರದಲ್ಲಿ ನಟಿಸಿರುವ ಧನ್ಯತೆ ವಿನಯ್ ಅವರಲ್ಲಿದೆ. ಈ ಚಿತ್ರದ ಮತ್ತೋರ್ವ ನಟ ಚಂದು ಗೌಡ. ಪ್ರಸ್ತುತ ಲಕ್ಷ್ಮೀಬಾರಮ್ಮ ಸೀರಿಯಲ್ ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿರುವ ಇವರ ಪಾತ್ರದ ಹೆಸರೂ ಚಂದು. ಈ ಪಾತ್ರದ ಮೂಲಕವೇ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿರೋ ಇವರು ಎರಡು ವರ್ಷಗಳಿಂದ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಇವರಿಗಿಲ್ಲಿ ಶೋಭಿತಾ ಎಂಬಾಕೆ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಐಟಿ ಕಂಪೆನಿ ಹುಡುಗಿಯಾಗಿ ನಟಿಸಿರೋ ಶೋಭಿತಾಗೂ ಇದು ಮೊದಲ ಚಿತ್ರ.