Tag: attempt to rape

  • ಅತ್ಯಾಚಾರ ವಿರೋಧಿಸಿದ್ದಕ್ಕಾಗಿ ಪ್ರಾಂಶುಪಾಲನಿಂದ 6 ವರ್ಷದ ಬಾಲಕಿಯ ಕೊಲೆ

    ಅತ್ಯಾಚಾರ ವಿರೋಧಿಸಿದ್ದಕ್ಕಾಗಿ ಪ್ರಾಂಶುಪಾಲನಿಂದ 6 ವರ್ಷದ ಬಾಲಕಿಯ ಕೊಲೆ

    ಅಹಮದಾಬಾದ್: ಅತ್ಯಾಚಾರ ವಿರೋಧಿಸಿಕ್ಕಾಗಿ 6 ವರ್ಷದ ಬಾಲಕಿಯನ್ನು ಕೊಲೆ ಮಾಡಿರುವ ಘಟನೆ ಗುಜರಾತ್‌ನ (Gujarat) ದಾಹೋದ್ (Dahod) ಜಿಲ್ಲೆಯಲ್ಲಿ ನಡೆದಿದೆ.

    ಶಾಲೆಯ ಪ್ರಾಂಶುಪಾಲ ಆರೋಪಿ 55 ವರ್ಷದ ಗೋವಿಂದ್ ನಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

    ಹಿರಿಯ ಪೊಲೀಸ್ ಅಧಿಕಾರಿ ರಾಜದೀಪ್ ಸಿಂಗ್ ಝಾಲಾ ಮಾತನಾಡಿ, ಬಾಲಕಿ ಮನೆಗೆ ಬಾರದಿರುವುದನ್ನು ಕಂಡು ಆಕೆಯ ಪೋಷಕರು ದೂರು ದಾಖಲಿಸಿದ್ದು, ಶಾಲಾ ಆವರಣದಲ್ಲಿ ಆಕೆಯ ಮೃತ ದೇಹ ಪತ್ತೆಯಾಗಿದೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

    ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 10 ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ. ಆಕೆಯ ಪೋಷಕರ ಮಾಹಿತಿಯ ಪ್ರಕಾರ ಪ್ರತಿದಿನ ಪ್ರಾಂಶುಪಾಲ ಗೋವಿಂದ್ ನಟ್ ಜೊತೆ ಶಾಲೆಗೆ ಹೋಗುತ್ತಿದ್ದಳು ಎಂದು ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

    ಘಟನೆಯಾದ ದಿನ ಪ್ರಾಂಶುಪಾಲ ಬಾಲಕಿಯನ್ನು ಶಾಲೆಗೆ ಬಿಟ್ಟು ಯಾವುದೋ ಕೆಲಸಕ್ಕೆ ತೆರಳಿರುವುದಾಗಿ ತಿಳಿಸಿದ್ದಾನೆ. ಆದರೆ ಆ ದಿನ ಅವಳು ಶಾಲೆಗೆ ಬಾರದಿರುವುದನ್ನು ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಖಚಿತಪಡಿಸಿದ್ದಾರೆ. ಬಳಿಕ ಪ್ರಾಂಶುಪಾಲರ ಫೋನ್ ಲೊಕೇಶನ್ ಮಾಹಿತಿಯನ್ನು ಪಡೆದುಕೊಂಡಾಗ ಆತನ ಮೇಲೆ ಅನುಮಾನ ಉಂಟಾಗಿದೆ. ಆತನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.

    ಬೆಳಿಗ್ಗೆ 10:20ರ ಸುಮಾರಿಗೆ ಬಾಲಕಿಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದನು. ಆಕೆಯ ತಾಯಿ ಆಕೆಯನ್ನು ಪ್ರಿನ್ಸಿಪಾಲ್ ಕಾರಿನಲ್ಲಿ ಕೂರಿಸಿ ಕಳುಹಿಸಿದ್ದಾರೆ. ಶಾಲೆಗೆ ಹೋಗುವ ದಾರಿಯಲ್ಲಿ, ಪ್ರಾಂಶುಪಾಲರು ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ. ಆಗ ಆಕೆ ಕೂಗಲು ಪ್ರಾರಂಭಿಸಿದಳು. ಅದನ್ನು ತಡೆಗಟ್ಟಲು ನಾನು ಆಕೆಯ ಮುಖಕ್ಕೆ ಕೈಹಿಡಿದಾಗ ಅವಳು ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಪ್ರಾಂಶುಪಾಲ ತಿಳಿಸಿದ್ದಾನೆ.

    ಶಾಲೆ ತಲುಪಿದ ಮೇಲೆ ಆಕೆಯ ಶವವನ್ನು ಕಾರಿನಲ್ಲಿಯೇ ಬಿಟ್ಟು ಬೀಗ ಹಾಕಿ ನಾನು ಶಾಲೆಗೆ ಹೋದೆ. ಸಂಜೆ 5 ಗಂಟೆ ಸುಮಾರಿಗೆ ಆಕೆಯ ಶವವನ್ನು ಶಾಲೆಯ ಕಟ್ಟಡದ ಹಿಂದೆ ಬಿಸಾಕಿದೆ ಹಾಗೂ ಆಕೆಯ ಬ್ಯಾಗ್ ಮತ್ತು ಬೂಟುಗಳನ್ನು ಅವಳ ತರಗತಿಯ ಹೊರಗೆ ಬಿಸಾಕಿರುವುದಾಗಿ ಪ್ರಾಂಶುಪಾಲ ಒಪ್ಪಿಕೊಂಡಿದ್ದಾನೆ.ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ತನಿಖೆ ಪಕ್ಷಾಪಾತವಾಗಿ ನಡೆಯಲು ಸಾಧ್ಯವಿಲ್ಲ: ಶೋಭಾ ಕರಂದ್ಲಾಜೆ

    ಸದ್ಯ ಪೊಲೀಸರು ಆರೋಪಿ ಗೋವಿಂದ್ ನಟ್‌ನನ್ನು ಪೋಕ್ಸೊ (POCSO) ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ.

  • ಅತ್ಯಾಚಾರ ಪ್ರಕರಣ ದಾಖಲಿಸಿ, ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು – ಹೈಕೋರ್ಟ್‌

    ಅತ್ಯಾಚಾರ ಪ್ರಕರಣ ದಾಖಲಿಸಿ, ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು – ಹೈಕೋರ್ಟ್‌

    ನವದೆಹಲಿ: ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿ, ಅವುಗಳನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), 354 (ಮಹಿಳೆಯ ಮೇಲೆ ಹಲ್ಲೆ) ಮತ್ತು 498-A (ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವ ಪತಿ ಅಥವಾ ಪತಿಯ ಸಂಬಂಧಿ) ಅಡಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: ಕುತುಬ್ ಮಿನಾರ್ ಮಸೀದಿಯಲ್ಲಿ ನಮಾಜ್ ತಡೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೋರ್ಟ್ ನಕಾರ

    ಕಕ್ಷಿದಾರ ಮಹಿಳೆಯೊಬ್ಬರು ‌ಸೆಕ್ಷನ್‌ 376, 354 ಮತ್ತು 498-A ಅಡಿಯಲ್ಲಿ ತನ್ನ ಮಾವನ ವಿರುದ್ಧ ದಾಖಲಿಸಿದ್ದ FIR ಅನ್ನು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ರದ್ದುಗೊಳಿಸಿದ ಈ ಅಭಿಪ್ರಾಯ ಪಟ್ಟಿದ್ದಾರೆ.

    ಸಾಮಾನ್ಯವಾಗಿ IPC ಸೆಕ್ಷನ್ 376ರ ಅಡಿಯಲ್ಲಿ ದಾಖಲಿಸಲಾದ ಪ್ರಕರಣಗಳನ್ನು ರದ್ದುಗೊಳಿಸಬಾರದು, ಅವರನ್ನು ಸಮಾಜದ ವಿರುದ್ಧ ಅಪರಾಧಿಗಳೆಂದು ಪರಿಗಣಿಸಬೇಕು. ಹೀಗಿದ್ದೂ ಮಹಿಳೆಯ ಭವಿಷ್ಯದ ಮೇಲೆ ಅವಲಂಬಿತವಾದಾಗ, ಆಕೆ ತನ್ನನ್ನು ಅತ್ಯಾಚಾರ ಎಸಗಿಲ್ಲ ಎಂದು ಹೇಳಿದಾಗ ಎಫ್‌ಐಆರ್‌ ರದ್ದುಗೊಳಿಸುವುದು ನಮ್ಮ ಹಿತಾಸಕ್ತಿಯಾಗಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಹಲವು ದೇಶಗಳಲ್ಲಿ ಬ್ಯಾನ್ : ಭಾರತದ ಹೆಸರು ಕೆಡಿಸುವ ಹುನ್ನಾರ ಎಂದ ನಿರ್ದೇಶಕ

    STOP RAPE

    ಐಪಿಸಿಯ ಸೆಕ್ಷನ್ 376, 377, 498-A ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಇದೇ ಸೆಕ್ಷನ್‌ ಅಡಿಯಲ್ಲಿ ಚಾರ್ಜ್‌ ಶೀಟ್‌ ಸಹ ಸಲ್ಲಿಸಲಾಗಿದೆ. ಆದರೆ ಅಪರಾಧ ಪ್ರಕ್ರಿಯಾ ಸಂಹಿತೆಯ (CRPC) ಸೆಕ್ಷನ್ 164ರ ಅಡಿಯಲ್ಲಿ ನೀಡಿದ ಹೇಳಿಕೆಯಲ್ಲಿ ದೂರುದಾರರು ತನ್ನ ಮಾವ ಅತ್ಯಾಚಾರ ಪ್ರಯತ್ನ ಮಾತ್ರ ಮಾಡಿದ್ದಾರೆ ಅತ್ಯಾಚಾರ ಮಾಡಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.

    ತನ್ನ ಸ್ವಂತ ಇಚ್ಛೆಯಿಂದ ಆಕೆ ರಾಜಿ ಮಾಡಿಕೊಂಡಿದ್ದಾರೆ. ಇದರಿಂದ ಎಫ್‌ಐಆರ್ ರದ್ದುಗೊಳಿಸಲು ಯಾವುದೇ ಅಭ್ಯಂತರವಿಲ್ಲ ಎಂದು ದೂರುದಾರರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

    court

    ದೂರುದಾರರು ರಾಜಿ ಮಾಡಿಕೊಳ್ಳಲು 10 ಲಕ್ಷ ರೂ. ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವೀಕರಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸುವುದು ಸೂಕ್ತವೆಂದು ನ್ಯಾಯಾಲಯ ಪರಿಗಣಿಸಿತು. ಅಲ್ಲದೆ ಅರ್ಜಿದಾರರಿಗೆ ಒಂದು ವಾರದೊಳಗೆ ದೆಹಲಿ ಹೈಕೋರ್ಟ್ ವಕೀಲರ ಕಲ್ಯಾಣ ನಿಧಿಗೆ 12,500 ರೂ ಮೊತ್ತವನ್ನು ಠೇವಣಿ ಮಾಡುವಂತೆ ಸೂಚಿಸಿತು.

    ಯಾವುದೇ ಪ್ರಕರಣವು ಮುಕ್ತಾಯವಾಗುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಅಲ್ಲದೆ ಇದು ವಿಚಾರಣೆಯನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಮೂರ್ತಿ ಶರ್ಮಾ ದೂರುದಾರರ ನಿಲುವನ್ನು ಶ್ಲಾಘಿಸಿದರು. ಅರ್ಜಿದಾರರ ಪರ ವಕೀಲರಾದ ಅಭಿಷೇಕ್ ಶರ್ಮಾ, ರಾಹುಲ್ ಶರ್ಮಾ ಮತ್ತು ಹಿರಿಯ ವಕೀಲ ಅರುಣ್ ಭಾರದ್ವಾಜ್ ವಾದ ಮಂಡಿಸಿದ್ದರು.

  • 3 ವರ್ಷದ ಮಗು ಮೇಲೆ 30ರ ಕಾಮಿಯಿಂದ ಅತ್ಯಾಚಾರಕ್ಕೆ ಯತ್ನ

    ಧಾರವಾಡ: 3 ವರ್ಷದ ಮಗು ಮೇಲೆ 30 ವರ್ಷದ ವಿಕೃತ ಕಾಮಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಕಾಮುಕನು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಾಪಿಯು ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

    ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ಕಾಮುಕನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

  • ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಕಂಬಕ್ಕೆ ಕಟ್ಟಿ, ಚಪ್ಪಲಿ ಏಟು ಕೊಟ್ಟ ಗ್ರಾಮಸ್ಥರು

    ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಕಂಬಕ್ಕೆ ಕಟ್ಟಿ, ಚಪ್ಪಲಿ ಏಟು ಕೊಟ್ಟ ಗ್ರಾಮಸ್ಥರು

    ಧಾರವಾಡ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ, ಚಪ್ಪಲಿ ಏಟು ಕೊಟ್ಟ ಘಟನೆ ಜಿಲ್ಲೆಯ ಮನಸೂರ ಗ್ರಾಮದಲ್ಲಿ ನಡೆದಿದೆ.

    ಮನಸೂರ ಗ್ರಾಮದ ನಿವಾಸಿ ನರಸಿಂಗ ಏಟು ತಿಂದ ಯುವಕ. ಗ್ರಾಮದ ಮಹಿಳೆಯೊಬ್ಬರ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೂಗಾಡಿದಾಗ ಅಕ್ಕ ಪಕ್ಕದ ಮನೆಯವರು ಬಂದು ಆಕೆಯನ್ನು ಆರೋಪಿಯಿಂದ ರಕ್ಷಿಸಿದ್ದಾರೆ.

    ನಂತರ ಆರೋಪಿ ಸ್ಥಳದಿಂದ ಓಡಿಹೋಗಲು ಯತ್ನಿಸಿದಾಗ ಗ್ರಾಮಸ್ಥರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಹೀನ ಕೃತ್ಯಕ್ಕೆ ಕೈಹಾಕಿದ್ದಕ್ಕೆ ಚಪ್ಪಲಿಯಿಂದ ಹೊಡೆದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಸದ್ಯ ಆರೋಪಿಯನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • 6ರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧ

    6ರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧ

    – ಎತ್ತಿ ಆಟವಾಡಿಸುತ್ತಿದ್ದ ತಾತನಿಂದಲೇ ಅಮಾನವೀಯ ಕೃತ್ಯ

    ಕೋಲಾರ: ಎತ್ತಿಕೊಂಡು ಪಾಪು… ಪಾಪು… ಎಂದು ಆಟವಾಡಿಸುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಮುಳಬಾಗಿಲು ತಾಲೂಕಿನಲ್ಲಿ ಘಟನೆ ನಡೆದಿದ್ದು, ಆರೋಪಿ 60 ವರ್ಷದ ವೃದ್ಧ ತಲೆಮರೆಸಿಕೊಂಡಿದ್ದಾನೆ. ಘಟನೆಯಿಂದ ಬಾಲಕಿ ಅಸ್ವಸ್ಥಗೊಂಡಿದ್ದು, ಮುಳುಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?:
    ಆರೋಪಿ ವೃದ್ಧ ಬಾಲಕಿಯ ನೆರೆಹೊರೆಯವನಾಗಿದ್ದಾನೆ. ಹೀಗಾಗಿ ಪ್ರತಿನಿತ್ಯ ಮನೆಯ ಬಳಿ ಬರುತ್ತಿದ್ದ ಬಾಲಕಿಯನ್ನು ಎತ್ತಿಕೊಂಡು ಆಟವಾಡಿಸುತ್ತಿದ್ದ. ಆದರೆ ಬುಧವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದೇ ಇರುವಾಗ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ವೃದ್ಧನ ಕೈಯಿಂದ ತಪ್ಪಿಸಿಕೊಂಡು ಬಂದಿದ್ದಾಳೆ.

    ಮಗಳು ಮನೆಗೆ ಬಂದಾಗ ತುಂಬಾ ಗಾಬರಿಗೊಂಡಿದ್ದಳು. ಅಷ್ಟೇ ಅಲ್ಲದೆ ಅಸ್ವಸ್ಥಗೊಂಡು ಮಲಗಿದ್ದಳು. ಮಗಳು ಯಾಕೆ ಹೀಗೆ ಮಾಡುತ್ತಿದ್ದಾಳೆ ಎನ್ನುವ ಅನುಮಾನ ನಮಗೆ ಶುರುವಾಗಿತ್ತು. ತಕ್ಷಣವೇ ಆಕೆಯನ್ನು ವಿಚಾರಿಸಿದಾಗ ಘಟನೆ ನಮಗೆ ಹೇಳಿದಳು ಎಂದು ಬಾಲಕಿಯ ತಾಯಿ ತಿಳಿಸಿದ್ದಾರೆ.

    ಬಾಲಕಿಯ ತಂದೆಯು ಅತ್ಯಾಚಾರಕ್ಕೆ ಯತ್ನಿಸಿದ್ದ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆದರೆ ವೃದ್ಧ ಹಲ್ಲೆಯಿಂದ ತಪ್ಪಿಸಿಕೊಂಡಿದ್ದು, ತಲೆಮರಿಸಿಕೊಂಡಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ನಂಗಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪೊಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧಕಾರ್ಯ ಆರಂಭವಾಗಿದೆ.

  • ಮಾಲೂರು ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಕಾಮಿಗೆ ಗಲ್ಲು

    ಮಾಲೂರು ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಕಾಮಿಗೆ ಗಲ್ಲು

    ಕೋಲಾರ: ಜಿಲ್ಲೆಯ ಮಾಲೂರು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿದ್ದ ಆರೋಪಿಗೆ ಕೋಲಾರದ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಮಾಲೂರು ತಾಲೂಕು ಟೇಕಲ್ ಗ್ರಾಮದ ನಿವಾಸಿ ಸುರೇಶ್ ಬಾಬು (25) ಗಲ್ಲು ಶಿಕ್ಷೆಗೆ ಗುರಿಯಾದ ಆರೋಪಿ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಅವಧಿಯಲ್ಲಿ ಆರೋಪಿಯೊಬ್ಬನಿಗೆ ಶಿಕ್ಷೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ.

    ಇಂದು ನಡೆದ ಕಲಾಪದಲ್ಲಿ ನ್ಯಾಯಾಧೀರಾದ ಬಿ.ಎಸ್.ರೇಖಾ ಅವರು, ಪ್ರಕರಣದ ಕುರಿತು 18 ದಿನಗಳಲ್ಲಿ ಮಾಲೂರು ಪೊಲೀಸರು 201 ಪುಟಗಳ ಚಾರ್ಜ್ ಶೀಟ್ ಪರಿಶೀಲಿಸಿ, 46 ಜನ ಸಾಕ್ಷಿದಾರರನ್ನು ವಿಚಾರಣೆ ನಡೆಸಿದರು. ಅವರ ಪೈಕಿ 33 ಮಂದಿ ಸಾಕ್ಷಿದಾರರ ಹೇಳಿಕೆಯನ್ನು ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

    ಏನಿದು ಪ್ರಕರಣ?
    ಆಗಸ್ಟ್ 1 ರಂದು ಮಾಲೂರು ಪಟ್ಟಣದ ಶಾಲೆಯಿಂದ ಸಂಜೆ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ಹಿಂದಿರುಗುತ್ತಿದ್ದರು. ಆಗ ರೈಲ್ವೇ ಅಂಡರ್ ಪಾಸ್ ಬಳಿಯ ರಸ್ತೆ ಪಕ್ಕದ ಪೊದೆಯಲ್ಲಿ ಅಡಗಿ ಕುಳಿತಿದ್ದ ಸುರೇಶ್ ಬಾಬು ವಿದ್ಯಾರ್ಥಿನಿಯೊಬ್ಬಳನ್ನು ಗದ್ದೆಗೆ ಏಳೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದ. ಆದರೆ ವಿದ್ಯಾರ್ಥಿನಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ವೇಳೆ ರಕ್ಷಿತಾ ಜೊತೆಗಿದ್ದ ಸ್ನೇಹಿತೆ, ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಮರಳಿ, ಸ್ಥಳೀಯರಿಗೆ ಮಾಹಿತಿ ನೀಡಿದ್ದಳು. ಸಾರ್ವಜನಿಕರು ಸ್ಥಳಕ್ಕೆ ತಲುಪುವ ವೇಳೆಗೆ ವಿದ್ಯಾರ್ಥಿನಿ ಶವವಾಗಿ ಬಿದ್ದಿದ್ದಳು. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣ ಇಡೀ ಕೋಲಾರ ಜಿಲ್ಲೆಯ ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಘಟನೆಯಿಂದ ಆತಂಕಗೊಂಡಿದ್ದ ಜಿಲ್ಲೆಯ ಜನರು, ಸಾವಿರಾರು ವಿದ್ಯಾರ್ಥಿಗಳು ಅಮಾಯಕ ವಿದ್ಯಾರ್ಥಿನಿಯನ್ನು ಕೊಂದ ಆರೋಪಿಯ ಬಂಧನಕ್ಕಾಗಿ ಆಗ್ರಹಿಸಿ ಬೃಹತ್ ಹೋರಾಟವನ್ನೇ ಮಾಡಿದ್ದರು. ಆರೋಪಿಯನ್ನು ಬಂಧಿಸುವವರೆಗೆ ಹೋರಾಟ ಕೈಬಿಡೋ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    ಲಕ್ನೋ: ಎಂಟು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ಸಂತ್ರಸ್ತೆಯ ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ಆಟವಾಡುವ ವೇಳೆ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರಕ್ಕೆ ಯತ್ನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಭಾನುವಾರ ವರದಿ ಕೈ ಸೇರುವ ಸಾಧ್ಯತೆ ಇದೆ. ಬಾಲಕಿಯ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲು ಮಾಡಿಕೊಳ್ಳಲಾಗುವುದು. ಆದರೆ ಬಾಲಕನನ್ನು ಇನ್ನು ವಶಕ್ಕೆ ಪಡೆದಿಲ್ಲ ಎಂದು ಹಿರಿಯ ಪೊಲೀಸ್ ಆಧಿಕಾರಿ ಆರ್.ಪಿ ಶರ್ಮಾ ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ದೂರಿನಲ್ಲಿ ತಿಳಿಸಿರುವಂತೆ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದು, ಶುಕ್ರವಾರ ಸಂಜೆ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಅನಂತರ ಆಕೆ ಮನೆಗೆ ವಾಪಸ್ ಬಂದಿದ್ದು ಈ ವೇಳೆ ತನಗದ ದೌರ್ಜನ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕ ಕೂಡ ಆದೇ ಗ್ರಾಮದ ನಿವಾಸಿಯಾಗಿದ್ದು, 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

    ಬಾಲಕಿಯಿಂದ ಮಾಹಿತಿ ಪಡೆದ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ಆರೋಪಿ ಕುಟುಂಬ ಬಗ್ಗೆ ನಮಗೆ ಯಾವುದೇ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯ ಎರಡು ಕುಟುಂಬಗಳು ಬಡತನದಿಂದ ಕೂಡಿದ್ದು, ಬಾಲಕಿ ತಂದೆ ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.