Tag: attempted rape

  • ಅಂಗಡಿಗೆ ಕರೆದ್ಯೊಯುತ್ತೇನೆ ಎಂದು 6ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    ಅಂಗಡಿಗೆ ಕರೆದ್ಯೊಯುತ್ತೇನೆ ಎಂದು 6ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    ಕಾರವಾರ: 50 ವರ್ಷದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.

    ಮಂಜುನಾಥ ನಾಗ್ಯಾ ಸಿದ್ಧಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಇಂದು ಸಂಜೆ ವೇಳೆ ತನ್ನ ಬೈಕಿನ ಮೇಲೆ ಅಂಗಡಿಗೆ ಕರೆದ್ಯೊಯುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾನೆ. ಈ ಸಮಯದಲ್ಲಿ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ.

    ಯಲ್ಲಾಪುರ ತಾಲೂಕಿನ ಆರತಿಬೈಲ್ ನಿವಾಸಿ ಆಗಿರುವ ಮಂಜುನಾಥ ನಾಗ್ಯಾ ಸಿದ್ಧಿ ಬಾಲಕಿಯ ಕುಟುಂಬಸ್ಥರಿಗೆ ಪರಿಚಯಸ್ಥನಾಗಿದ್ದ ಕಾರಣ ಆತನೊಂದಿಗೆ ತೆರಳಿದ್ದಳು. ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಬಳಿಕ ಬಾಲಕಿ ಆರೋಪಿಯ ಕೃತ್ಯದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದು, ತಕ್ಷಣ ಎಚ್ಚೆತ್ತ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಬಾಲಕಿಯ ತಂದೆ ಯಲ್ಲಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಯತ್ನದ ಆರೋಪದಲ್ಲಿ (ಪೋಕ್ಸೊ ಕಾಯ್ದೆ) ದೂರು ದಾಖಲಿಸಿಕೊಳ್ಳಲಾಗಿದೆ. ಪ್ರಾಥಮಿಕ ಹಂತದ ವಿಚಾರಣೆ ವೇಳೆ ಆರೋಪಿ ತಪ್ಪೊಪಿಗೆ ಹೇಳಿಕೆ ನೀಡಿನೆ ಎಂಬ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ – ಯುವಕ ಅರೆಸ್ಟ್

    ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ – ಯುವಕ ಅರೆಸ್ಟ್

    ಹಾವೇರಿ: ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರೋ ಅಮಾನವೀಯ ಘಟನೆಯೊಂದು ಜಿಲ್ಲೆಯ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಆರೋಪಿಯನ್ನು ನಾಗರಾಜ ಗೊರವರ (21) ಎಂದು ಗುರುತಿಸಲಾಗಿದ್ದು, ಈತ ಹದಿನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 2017 ಡಿಸೆಂಬರ್ 30 ಶನಿವಾರ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸಂತ್ರಸ್ತೆ ಪೋಷಕರು ಮೃತಪಟ್ಟಿದ್ದು, ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದಳು. ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದಳು. ಅಜ್ಜಿ ಕೂಲಿ ಕೆಲಸಕ್ಕೆಂದು ಹೊರಗಡೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲ ಎಂದು ತಿಳಿದ ಆರೋಪಿ ನಾಗರಾಜ ಏಕಾಏಕಿ ಮನೆಗೆ ನುಗ್ಗಿ ಸಂತ್ರಸ್ತೆಯ ಬಾಯಿಗೆ ಬಟ್ಟೆ ಕಟ್ಟಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿ ಆತನಿಂದ ಹೇಗೋ ತಪ್ಪಿಸಿಕೊಂಡು ಹೊರಗೆ ಬಂದು ಕೂಗಿಕೊಂಡಿದ್ದಾಳೆ.

    ಸಂತ್ರಸ್ತೆ ಕೂಗಿಕೊಂಡ ತಕ್ಷಣ ನೆರೆಹೊರೆಯವರು ಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಈಗ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗರಾಜನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    \

  • ಪೇದೆಯಿಂದಲೇ ಠಾಣೆಯಲ್ಲಿ ಅಪ್ರಾಪ್ತೆಯ ಮೇಲೆ ರೇಪ್ ಯತ್ನ

    ಪೇದೆಯಿಂದಲೇ ಠಾಣೆಯಲ್ಲಿ ಅಪ್ರಾಪ್ತೆಯ ಮೇಲೆ ರೇಪ್ ಯತ್ನ

    ರಾಮ್ಪುರ್: ನಮಗೆ ತೊಂದರೆ ಆದರೆ ನಾವು ಪೊಲೀಸ್ ಠಾಣೆಗೆ ಹೋಗಿ ದೂರು ನೀಡುತ್ತೇವೆ. ಆದರೆ ಉತ್ತರ ಪ್ರದೇಶದಲ್ಲೊಬ್ಬ ಪೇದೆ ಬೇಲಿಯೇ ಎದ್ದು ಹೊಲ ಮೇದಂತೆ ಎಂಬಂತೆ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಅಮಾನತುಗೊಂಡಿದ್ದಾನೆ.

    ರಾಮ್ಪುರ ಪ್ರದೇಶದಲ್ಲಿರುವ ಕೇಮ್ರಿ ಪೊಲೀಸ್ ಠಾಣೆಯ ಪೇದೆ ಈ ಕೃತ್ಯವನ್ನು ಎಸಗಿದ್ದು, ಆತನ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈತ ಈ ಕೃತ್ಯ ಎಸಗುವಾಗ ಮದ್ಯಪಾನವನ್ನು ಸೇವಿಸಿ ಅಸ್ವಸ್ಥನಾಗಿದ್ದ ಎಂದು ಶಂಕಿಸಲಾಗಿದ್ದು, ಆತನ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ.

    ಪೊಲೀಸ್ ಪೇದೆಯ ಈ ಕೃತ್ಯ ಎಸಗುವ ಮೂಲಕ ಮತ್ತೊಮ್ಮೆ ಉತ್ತರ ಪ್ರದೇಶ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿದೆ.