Tag: Attibele

  • ಬೆಂಗಳೂರಲ್ಲಿ ಹಿಟ್ & ರನ್ – ಸ್ಥಳದಲ್ಲೇ ಇಬ್ಬರು ಸಾವು

    ಬೆಂಗಳೂರಲ್ಲಿ ಹಿಟ್ & ರನ್ – ಸ್ಥಳದಲ್ಲೇ ಇಬ್ಬರು ಸಾವು

    ಬೆಂಗಳೂರು: ಲಾರಿಯೊಂದು ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸಾವಿಗೀಡಾದ ಘಟನೆ ಅತ್ತಿಬೆಲೆಯ (Attibele) ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ.

    ಓರ್ವ ಮೃತನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಲಾರಿ ಹಿಂಬದಿಯಿಂದ ಬೈಕ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಇದನ್ನೂ ಓದಿ: ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3ಗೆ ಬೆಳಗಾವಿಯ ಯುವ ವಿಜ್ಞಾನಿಯ ಕೊಡುಗೆ

    ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು (Police) ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಚಂದ್ರಯಾನ -3 ಉಡಾವಣೆಗೆ ಕ್ಷಣಗಣನೆ: ಶುಭಕೋರಿದ ಖಾದರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಸ್‌ಕ್ರೀಮ್ ಕಂಟೇನರ್ ಪಲ್ಟಿ – ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು

    ಐಸ್‌ಕ್ರೀಮ್ ಕಂಟೇನರ್ ಪಲ್ಟಿ – ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು

    – ರಸ್ತೆಯೆಲ್ಲಾ ಚೆಲ್ಲಾಪಿಲ್ಲಿಯಾದ ಐಸ್‌ಕ್ರೀಮ್

    ಬೆಂಗಳೂರು: ಐಸ್‌ಕ್ರೀಮ್ ಕಂಟೇನರ್ (Ice Cream Container) ಒಂದು ಹೆದ್ದಾರಿಯಲ್ಲಿ ಪಲ್ಟಿ (Overturned) ಹೊಡೆದ ಪರಿಣಾಮ ಕಂಟೇನರ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆ (Attibele) ವೃತ್ತದಲ್ಲಿ ನಡೆದಿದೆ.

    ಬೊಮ್ಮಸಂದ್ರದಿಂದ ಹೊಸಕೋಟೆಗೆ ತೆರಳುತ್ತಿದ್ದ ಐಸ್‌ಕ್ರೀಮ್ ಕಂಟೇನರ್ ಬೆಂಗಳೂರು ಹೊರವಲಯದಲ್ಲಿರುವ ಆನೇಕಲ್‌ನ ಅತ್ತಿಬೆಲೆಯಲ್ಲಿ ಅಪಘಾತಕ್ಕೊಳಗಾಗಿದೆ. ವೇಗವಾಗಿ ಬಂದ ಹಿನ್ನೆಲೆ ಕಂಟೇನರ್ ಪಲ್ಟಿ ಹೊಡೆದಿದೆ. ಪರಿಣಾಮ ಕಂಟೇನರ್‌ನಲ್ಲಿದ್ದ ಐಸ್‌ಕ್ರೀಮ್ ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದನ್ನೂ ಓದಿ: ಕೋವಿಯಲ್ಲಿ ತಲೆಗೆ ಗುಂಡು ಹೊಡೆದುಕೊಂಡು ಯುವಕ ಸಾವು

    ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಕಂಟೇನರ್ ಚಾಲಕ ಹಾಗೂ ಕ್ಲೀನರ್ ತಮಿಳುನಾಡು ಮೂಲದವರು ಎಂಬುದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಅತ್ತಿಬೆಲೆ ಪೊಲೀಸರು ಆಗಮಿಸಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ನದಿಗೆ ಉರುಳಿದ ಮದುವೆ ಮನೆಗೆ ತೆರಳುತ್ತಿದ್ದ ಟ್ರಕ್- ಐವರ ದುರ್ಮರಣ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಜುಲೈ 1 ರಿಂದ ಶೇ. 20 ರಷ್ಟು ಏರಿಕೆ ಕಾಣಲಿದೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‍ಎಚ್‍ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್‍ವೇ ಕಂಪನಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಎನ್‍ಎಚ್‍ಎಐ ಗ್ರೀನ್ ಸಿಗ್ನಲ್ ನೀಡಿದೆ. ಪರಿಷ್ಕೃತ ಟೋಲ್ ಶುಲ್ಕ ಜುಲೈ 1 ರಿಂದ ಜಾರಿಗೆ ಬರಲಿದೆ. ಒಪ್ಪಂದದ ಪ್ರಕಾರ ರಸ್ತೆ ಬಳಕೆ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಶುಲ್ಕವು 2023ರ ಜೂನ್ 30ರವರೆಗೆ ಜಾರಿಯಲ್ಲಿರಲಿದೆ ಎಂದು ಬೆಂಗಳೂರು ಎಲಿವೇಟೆಡ್ ಟೋಲ್‍ವೇ ಕಂಪನಿ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಾದರ್‌ಗೆ ಎಚ್ಚರಿಕೆ

    ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಎರಡೂ ಟೋಲ್ ಗೇಟ್‍ಗಳಿಗೂ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ. ಸಿಲ್ಕ್ ಬೋರ್ಡ್ ವೃತ್ತದಿಂದ ಅತ್ತಿಬೆಲೆವರೆಗಿನ ರಸ್ತೆಯಲ್ಲಿ ಐಟಿ ಹಾಗೂ ಇತರೆ ಕಂಪನಿಗಳು ಹೆಚ್ಚಿವೆ. ನಿತ್ಯವೂ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಕೊರೊನಾ ಬಳಿಕ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿದ್ದು, ಇಂಥ ಸಂದರ್ಭದಲ್ಲಿ ಏಕಾಏಕಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು?

    ಇತ್ತ ರಾಷ್ಟ್ರ ರಾಜಧಾನಿ ದೆಹಲಿಯಿಂದ ಡೆಹ್ರಾಡೂನ್ ಸಂಚರಿಸುವ ಎನ್‍ಎಚ್ 58 ರಸ್ತೆಯ ಟೋಲ್ ಕೂಡ ಜುಲೈ 1 ರಿಂದ ಏರಿಕೆ ಆಗಲಿದೆ. ಈಗಾಗಲೇ ಟೋಲ್ ಕಂಪನಿ 10 ರಿಂದ 15 ರೂ. ಏರಿಕೆಗೆ ಎನ್‍ಎಚ್‍ಎಐ ಮನವಿ ಸಲ್ಲಿಸಿತ್ತು. ಈ ಮನವಿಗೆ ಎನ್‍ಎಚ್‍ಎಐ ಒಪ್ಪಿಗೆ ಸೂಚಿಸಿದ್ದು, ಜುಲೈ 1 ರಿಂದ ಶುಲ್ಕ ಏರಿಕೆ ಕಾಣಲಿದೆ.

    Live Tv

  • ಮುಂಬೈನ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಬೆಂಗಳೂರಿನಲ್ಲಿ ಅರೆಸ್ಟ್

    ಮುಂಬೈನ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಬೆಂಗಳೂರಿನಲ್ಲಿ ಅರೆಸ್ಟ್

    ಬೆಂಗಳೂರು: ಮುಂಬೈನ ಭೂಗತ ಲೋಕದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ 45 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

    ಇಲಿಯಾಸ್ ಅಬ್ದುಲ್ ಆಸೀಫ್ ಅಲಿಯಾಸ್ ಇಲಿಯಾಸ್ ಬಜ್ಕನಾ ಬಂಧಿತ ಆರೋಪಿ. ಈತನ ವಿರುದ್ಧ ಕೊಲೆ, ಸುಲಿಗೆ, ದರೋಡೆ, ಕೊಲೆ ಪ್ರಯತ್ನ, ಡ್ರಗ್ಸ್ ಮಾಫಿಯಾ ಸೇರಿದಂತೆ 45ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಇನ್ನೋವಾ ಕಾರಲ್ಲಿ ಬಂದು ಕಳ್ಳತನ – ಸಿಸಿಟಿವಿಯಲ್ಲಿ ಶ್ರೀಮಂತ ಕಳ್ಳರ ಕೈಚಳಕ ಸೆರೆ

    ಮುಂಬೈ ಪೊಲೀಸರ ಮಾಹಿತಿ ಮೇರೆಗೆ ತಡರಾತ್ರಿ ಅತ್ತಿಬೆಲೆ ಪೊಲೀಸರು ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಟಿವಿಎಸ್ ರಸ್ತೆಯ ಸ್ಪಂದನ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಇಲಿಯಾಸ್ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?: ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪ

    ಬಂಧಿತ ಆರೋಪಿಯನ್ನು ಅತ್ತಿಬೆಲೆ ಪೊಲೀಸರು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗಡಿಯಲ್ಲಿ ಭದ್ರತೆ ಲೋಪ – ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು

    ಗಡಿಯಲ್ಲಿ ಭದ್ರತೆ ಲೋಪ – ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು

    ಬೆಂಗಳೂರು: ವೀಕೆಂಡ್ ಕರ್ಫ್ಯೂ  ಹಿನ್ನೆಲೆ ಬೆಂಗಳೂರು ಹೊರವಲಯದ ಅತ್ತಿಬೆಲೆಯ ಚೆಕ್ ಪೋಸ್ಟ್ ನಲ್ಲಿ ಇಂದು ಸಾವಿರಾರು ವಾಹನಗಳು ರಾಜ್ಯಕ್ಕೆ ಎಂಟ್ರಿ ನೀಡಿವೆ. ತಮಿಳುನಾಡು, ಕೇರಳದಿಂದ ಈಗಾಗಲೇ ಅನೇಕ ಮಂದಿ ರಾಜ್ಯಕ್ಕೆ ಬಂದಿದ್ದು, ಮತ್ತೆ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಶುರುವಾಗಿದ. ಇಂದು ಬೆಳಗ್ಗೆಯಿಂದ ಗಡಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು.

    ಚೆಕ್ ಪೋಸ್ಟ್ ನಲ್ಲಿ ಇಂದು ಬೆಳಗ್ಗೆ ಯಾವುದೇ ಪೊಲೀಸರು ಯಾವುದೇ ರೀತಿಯ ಅಧಿಕಾರಿಗಳ ಚೆಕ್ಕಿಂಗ್ ಸಹ ಇರಲಿಲ್ಲ. ಪಬ್ಲಿಕ್ ಟಿವಿಯಲ್ಲಿ ಈ ಕುರಿತು ಸುದ್ದಿ ಬಿತ್ತರಿಸಿದ ತಕ್ಷಣ ಎಚ್ಚೆತ್ತಕೊಂಡ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ತಪಾಸಣೆಯನ್ನು ಮಾಡಲು ಪ್ರಾರಂಭಿಸಿದರು. ಅಲ್ಲದೆ ಅನ್ಯ ರಾಜ್ಯಗಳಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ನೀಡಿದ್ದರೂ ಸಹ ಇಂದು ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಯಾವುದೇ ವೈದ್ಯಕೀಯ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿರಲಿಲ್ಲ. ಪಬ್ಲಿಕ್ ಟಿವಿ ಸುದ್ದಿ ಬಿತ್ತರ ಮಾಡಿದ ಬೆನ್ನಲ್ಲೇ ಬಂದ ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೋವಿಡ್ ಟೆಸ್ಟ್ ಮಾಡಲು ಮುಂದಾಗಿದ್ದಾರೆ.

    ಇದೀಗ ಯಾರೇ ರಾಜ್ಯಕ್ಕೆ ಬಂದರೂ ಸಹ ಬಿಗಿ ಬಂದೋಬಸ್ತ್ ಹಾಗು ತಪಾಸಣೆ ಮಾಡುತ್ತಿದ್ದು. ಜೊತೆಗೆ ತಪಾಸಣೆಗೆ ಮುಂದಾದ ಸಮಯದಲ್ಲಿ ಒಂದು ಕಿಲೋಮೀಟರ್ ಹೆಚ್ಚು ವಾಹನ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

  • ಟೆಂಟ್ ಹಾಕುವ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರ ಸಾವು

    ಟೆಂಟ್ ಹಾಕುವ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರ ಸಾವು

    ಬೆಂಗಳೂರು: ಗುರುವಾರ ಅದ್ಧೂರಿಯಾಗಿ ನಡೆಯಬೇಕಿದ್ದ ಗುದ್ದಲಿ ಪೂಜೆ ಜಾಗ ಸಂಪೂರ್ಣವಾಗಿ ಸ್ಮಶಾನವಾಗಿ ಬದಲಾಗಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿಯ ಇಂಡ್ಲಬೆಲೆಯಲ್ಲಿ ಇಂದು ನಾಲ್ವರು ಧಾರುಣವಾಗಿ ಸಾವನಪ್ಪಿದ್ದಾರೆ. ಕರೆಂಟ್ ಶಾಕ್ ನಿಂದಾಗಿ ನಾಲ್ವರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

    ಅತ್ತಿಬೆಲೆಯಲ್ಲಿರುವ ಉಷಾ ಟೆಂಟ್ ಹೌಸ್ ನ ನಾಲ್ವರು ಇಂದು ಅತ್ತಿಬೆಲೆ ಬಳಿಯ ಇಂಡ್ಲಬೆಲೆ ಬಳಿಯ ಅಪಾರ್ಟ್‍ಮೆಂಟ್ ಗುದ್ದಲಿ ಪೂಜೆಗೆ ಟೆಂಟ್ ಗಳು, ಶಾಮಿಯಾನ ಮತ್ತು ಲೈಟಿಂಗ್ಸ್ ಮೆಟೀರಿಯಲ್ ಗಳನ್ನು ತಂದಿದ್ದಾರೆ. ನಂತರ ಅದನ್ನೆಲ್ಲಾ ಸರಿಯಾದ ರೀತಿಯಲ್ಲಿ ಹಾಕುವಾಗ ಆಕಾಶ್, ಮಹಾದೇವ್, ವಿಷಕಂಠ, ಮತ್ತು ವಿಜಯ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ನಾಲ್ವರು ಉದ್ದದ ಕಂಬವೊಂದನ್ನು ನೇರವಾಗಿ ನಿಲ್ಲಿಸುವ ಸಂದರ್ಭದಲ್ಲಿ ಕಂಬದ ಮೇಲಿದ್ದ ಕರೆಂಟ್ ಕಂಬದ ಕರೆಂಟ್ ವೈರ್ ಗೆ ತಗುಲಿದೆ. ನಂತರ ವೈರ್ ನಿಂದ ಕರೆಂಟ್ ಪಾಸ್ ಆಗಿ ಈ ನಾಲ್ವರಿಗೂ ಶಾಕ್ ತಗುಲಿದೆ. ಈ ನಾಲ್ವರು ಸಹ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ನಂತರ ಸ್ಥಳೀಯರು ಉಳಿಸುವ ಪ್ರಯತ್ನಕ್ಕೆ ಬಂದರು ಸಹ ಯಾವುದೇ ಪ್ರಯೋಜನವಾಗಿಲ್ಲ.

    ವಿಷಯ ತಿಳಿಯುತ್ತಿದ್ದಂತೆ ಅತ್ತಿಬೆಲೆ ಪೊಲೀಸರು ಮತ್ತು ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ರು. ನಂತರ ಅಪಾಟ್ರ್ಮೆಂಟ್ ನವರ ಅಜಾಗರೂಕತೆಯಿಂದ ಘಟನೆ ನಡೆದಿದ್ಯಾ ಅನ್ನೋ ಸಂಶಯದಿಂದಾಗಿ ಇದೀಗ ಪ್ರಕರಣ ದಾಖಲಿಸಿಕೊಂಡು ಅತ್ತಿಬೆಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಕೆಲಸಕ್ಕಾಗಿ ಅಲೆದು, ಅಲೆದು ಸಾಕಾಗಿ ನೇಣಿಗೆ ಯುವತಿ ಶರಣು

    ಕೆಲಸಕ್ಕಾಗಿ ಅಲೆದು, ಅಲೆದು ಸಾಕಾಗಿ ನೇಣಿಗೆ ಯುವತಿ ಶರಣು

    ಬೆಂಗಳೂರು: ಕೆಲಸ ಸಿಗದೆ ಇರುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಯುವತಿಯೊಬ್ಬಳು ನೇಣಿಗೆ ಶರಣಾದ ಮನಕಲುಕುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಆನೇಕಲ್ ತಾಲೂಕಿನ ಅತ್ತಿಬೆಲೆಯ ನಾಗಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಮಂಜುಳಾ ಮೃತ ಯುವತಿ. ಮಂಜುಳಾ ತಾಯಿ, ತಂಗಿ ಹಾಗೂ ಬುದ್ಧಿಮಾಂದ್ಯ ತಮ್ಮನ ಜೊತೆಗೆ ವಾಸಿಸುತ್ತಿದ್ದರು. ಮಂಜುಳಾ ಬುದ್ಧಿಮಾಂದ್ಯ ತಮ್ಮನ ಎದುರಲ್ಲಿಯೇ ಇಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

    ಮಂಜುಳಾ ಮನೆಯ ಹಿರಿಯ ಮಗಳಾಗಿದ್ದರಿಂದ ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಖಾಸಗಿ ಗಾರ್ಮೆಂಟ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ, ತಮಗೆ ಬರುತ್ತಿದ್ದ ವೇತನದಲ್ಲಿ ಕುಟುಂಬವನ್ನು ನಿರ್ವಹಿಸುತ್ತಿದ್ದರು. ಆದರೆ ಕಳೆದ ವಾರ ಕಂಪನಿಯವರು ಮಂಜುಳಾ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದಾಗಿ ಮಂಜುಳಾ ಸಂಕಷ್ಟಕ್ಕೆ ಸಿಲುಕಿದ್ದರು.

    ಕೆಲಸ ಅರಸಿ ಮಂಜುಳಾ ಕಳೆದ ಕೆಲವು ದಿನಗಳಿಂದ ಅನೇಕ ಕಂಪನಿಗಳಿಗೆ ಹೋಗಿದ್ದರು. ಆದರೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. ಕೆಲಸವಿಲ್ಲದೆ ಜೀವನ ನಡೆಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಗೆ ಮಂಜುಳಾ ಸಿಲುಕಿದ್ದರು. ಇದರಿಂದ ಮನನೊಂದು ಮಂಜುಳಾ, ತಾಯಿ ಮನೆಗೆ ಬೇಕಾದ ದಿನಸಿ ತರಲು ಅಂಗಡಿಗೆ ಹೋಗಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ನೇಣು ಬಿಗಿದ ಸ್ಥಿತಿಯಲ್ಲಿದ್ದ ಮಗಳ ಮೃತದೇಹ ನೋಡಿದ ಮಂಜುಳಾ ಅವರ ತಾಯಿ ಗಾಬರಿಕೊಂಡಿದ್ದರು. ಅವರು ಅಳುತ್ತಿದ್ದ ಧ್ವನಿ ಕೇಳಿ ಮನೆಗೆ ಬಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅತ್ತಿಬೆಲೆ ಪೊಲೀಸರು ಮಂಜುಳಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಂಜೆ ಆಟವಾಡ್ತಿದ್ದ ನಾಲ್ವರು ಬಾಲಕರು ನಾಪತ್ತೆ- ಪೋಷಕರಲ್ಲಿ ಆತಂಕ

    ಸಂಜೆ ಆಟವಾಡ್ತಿದ್ದ ನಾಲ್ವರು ಬಾಲಕರು ನಾಪತ್ತೆ- ಪೋಷಕರಲ್ಲಿ ಆತಂಕ

    ಬೆಂಗಳೂರು: ಸಂಜೆ ಆಟ ಆಡ್ತಿದ್ದ ನಾಲ್ವರು ಶಾಲಾ ಮಕ್ಕಳು ಇದ್ದಕ್ಕಿದ್ದಂತೆ ಕಾಣೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನ ಮಂಚನಹಳ್ಳಿಯಲ್ಲಿ ನಡೆದಿದೆ.

    12 ವರ್ಷದ ಚಂದನ್, ವಿಕಾಸ್, ನಂದನ್ ಮತ್ತು 14 ವರ್ಷದ ಕಾರ್ತಿಕ್ ನಾಪತ್ತೆಯಾದ ಬಾಲಕರು. ಆನೇಕಲ್, ಅತ್ತಿಬೆಲೆ, ಬೆಂಗಳೂರು ಸೇರಿ ಎಲ್ಲೆಡೆ ಮಕ್ಕಳಿಗಾಗಿ ಹುಡುಕಾಟ ನಡೆಸಲಾಗ್ತಿದೆ.

    ಸಂಜೆ 5 ಗಂಟೆವರೆಗೂ ಗ್ರಾಮದಲ್ಲೇ ಬಾಲಕರು ಆಟವಾಡುತ್ತಿದ್ದರು. ಇತ್ತೀಚೆಗೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಆತಂಕಗೊಂಡ ಪಾಲಕರು ಅತ್ತಿಬೆಲೆ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ.

    ಸದ್ಯ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್

    ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್

    ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದೆಂದು ಆಗ್ರಹಿಸಿ ಏಪ್ರಿಲ್ 12 ಗುರುವಾರ ಕರ್ನಾಟಕ ಬಂದ್‍ಗೆ ಕನ್ನಡಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

    ನಗರದ ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ಹಾಗೂ ಮಂಜುನಾಥ್ ದೇವಾ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನಿರ್ವಹಣಾ ಮಂಡಳಿಗೆ ಒತ್ತಾಯಿಸುತ್ತಿರುವ ತಮಿಳುನಾಡು ವಿರುದ್ಧ ಪ್ರತಿಭಟನೆ ನಡೆಸಿದ್ರು.

    ಈ ವೇಳೆ ಮಾತನಾಡಿದ ವಾಟಾಳ್, ತಮಿಳುನಾಡು ಒತ್ತಡದ ನಾಟಕ ಆಡ್ತಿದೆ. ನಿರ್ವಹಣಾ ಮಂಡಳಿ ರಚಿಸಿದರೆ ಕನ್ನಡಿಗರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತೆ ಅಂತ ಪ್ರಧಾನಿ ಮೋದಿಗೆ ವಾಟಾಳ್ ಎಚ್ಚರಿಕೆ ನೀಡಿ, ತಮಿಳುನಾಡಿನ ಒತ್ತಾಯಕ್ಕೆ ಮಣಿಯದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ರು.

     

    ಇನ್ಮುಂದೆ ಕರ್ನಾಟಕದಲ್ಲಿ ರಜನಿಕಾಂತ್ ಹಾಗೂ ಕಮಲಹಾಸನ್ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಯಾಕಂದ್ರೆ ಈ ಇಬ್ಬರು ನಟರೂ ಕಾವೇರಿ ನಿರ್ವಹಣಾ ಮಂಡಳಿ ಪರವಾಗಿ ನಿಂತಿದ್ದಾರೆ. ಹೀಗಾಗಿ ಅವರ ಚಿತ್ರಗಳು ಕರ್ನಾಟಕ ಪ್ರವೇಶ ಮಾಡಲು ಅವಕಾಶ ಕೊಡುವುದಿಲ್ಲ ಅಂತ ಹೇಳಿದ್ರು.

    ಪ್ರತಿಭಟನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ ರಾ ಗೋವಿಂದ್, ಮಂಜುನಾಥ ದೇವಾ ಹಾಗೂ ಇತರೆ ಕನ್ನಡಪರ ಸಂಘಟನೆಗಳ ನಾಯಕರುಗಳ ಸಾಥ್ ನೀಡಿದರು. ಇನ್ನು ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ಸೇರಿದಂತೆ 20ಕ್ಕೂ ಹೆಚ್ಚು ಕನ್ನಡಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

  • ಸಿಲಿಕಾನ್ ಸಿಟಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ – ತಲೆಗೆ ಗನ್ ಇಟ್ಟು ಉದ್ಯಮಿ ಬಳಿ ರಾಬರಿ

    ಸಿಲಿಕಾನ್ ಸಿಟಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ – ತಲೆಗೆ ಗನ್ ಇಟ್ಟು ಉದ್ಯಮಿ ಬಳಿ ರಾಬರಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದೆ. ಬುಧವಾರ ರಾತ್ರಿ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಎಸ್‍ಎಸ್ ಬಾಯ್ಸ್ ಪಿಜಿಯಲ್ಲಿ ಕಳ್ಳತನ ನಡೆದಿದೆ.

    ಮಧ್ಯರಾತ್ರಿ ಪಿಜಿಗೆ ನುಗ್ಗಿದ ಖದೀಮ ರೂಂನಲ್ಲಿದ್ದ ಮೊಬೈಲ್, ಲ್ಯಾಪ್‍ಟಾಪ್ ಕದ್ದು ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದೆ. ಪ್ರಶಾಂತ್ ಎಂಬವರಿಗೆ ಸೇರಿದ 16 ಸಾವಿರ ಮೌಲ್ಯ ವಸ್ತುಗಳು ಕಳವಾಗಿದ್ದು, ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇತ್ತ ಅತ್ತಿಬೆಲೆಯಲ್ಲಿ ಗುರುವಾರ 10 ರಿಂದ 15 ಜನ ದರೋಡೆಕೋರರು ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ ರಾಬರಿ ಮಾಡಿದ್ದಾರೆ. ಉದ್ಯಮಿ ನಾಗರಾಜ್ ರೆಡ್ಡಿ ತಲೆಗೆ ಗನ್ ಇಟ್ಟು ತಲೆಗೆ ಗನ್ ಇಟ್ಟು, 2 ಲಕ್ಷ ನಗದು, ಚಿನ್ನಾಭರಣ, ಭೂ ದಾಖಲೆಗಳು ದೋಚಿ ಪರಾರಿಯಾಗಿದ್ದಾರೆ.

    ದರೋಡೆಕೋರರ ಗುಂಪು ಪಪ್ಪು ಯಾದವ್ ಹಾಗೂ ರವಿ ಪೂಜಾರಿ ಹೆಸರು ಹೇಳಿದ್ದು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.