Tag: attiguppe

  • ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ- ತಾನೇ ಹೋಗಿ ಮೆಟ್ರೋ ಹಳಿಗೆ ತಲೆ ಕೊಟ್ಟ ವೀಡಿಯೋ ಲಭ್ಯ

    ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ- ತಾನೇ ಹೋಗಿ ಮೆಟ್ರೋ ಹಳಿಗೆ ತಲೆ ಕೊಟ್ಟ ವೀಡಿಯೋ ಲಭ್ಯ

    ಬೆಂಗಳೂರು: ನಗರದ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣದಲ್ಲಿ (Attiguppe Metro Station) ವಿದ್ಯಾರ್ಥಿ ಧೃವ್ ಠಕ್ಕರ್(19) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

    ಮೆಟ್ರೋ ನಿಲ್ದಾಣದ ಸಿಸಿಟಿವಿಯಲ್ಲಿ ವಿದ್ಯಾರ್ಥಿಯ ಸಂಪೂರ್ಣ ವೀಡಿಯೋ ಸೆರೆಯಾಗಿದ್ದು, ಇದೀಗ ಈ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕಳೆದ ಗುರುವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಈ ಘಟನೆ ನಡೆದಿತ್ತು.

    ಸಿಸಿಟಿವಿಯಲ್ಲಿ ಏನಿದೆ..?: ವಿದ್ಯಾರ್ಥಿಯು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಾನೆ. ಹೀಗೆ ಬಂದವನೇ ಮೆಟ್ರೋ ಬರುತ್ತಿರುವುದನ್ನು ಕಂಡು ನಿಲ್ದಾಣದಿಂದ ಹಳಿಯತ್ತ ಇಳಿದಿದ್ದಾನೆ. ಬಳಿಕ ಮೆಟ್ರೋ ಹತ್ತಿರವಾಗುತ್ತಿದ್ದಂತೆಯೇ ಹಳಿಗೆ ತಲೆಕೊಟ್ಟು ಮಲಗಿದ್ದಾನೆ. ಇತ್ತ ಮೆಟ್ರೋ ಆತನ ಮೇಲೆಯೇ ಪಾಸಾಗಿದೆ. ಪರಿಣಾಮ ವಿದ್ಯಾರ್ಥಿಯ ರುಂಡ ಬೇರ್ಪಟ್ಟಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಮಾನಸಿಕ ಖಿನ್ನತೆಯಿಂದಲೇ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿರುವುದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಐಪಿಎಲ್ ಮ್ಯಾಚ್ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಅವಧಿ ವಿಸ್ತರಣೆ

  • ಮೆಟ್ರೋ ರೈಲು ಹಳಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – ಮೆಟ್ರೋ ಸೇವೆಯಲ್ಲಿ ವ್ಯತ್ಯಯ

    ಮೆಟ್ರೋ ರೈಲು ಹಳಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – ಮೆಟ್ರೋ ಸೇವೆಯಲ್ಲಿ ವ್ಯತ್ಯಯ

    ಬೆಂಗಳೂರು: ಚಲಿಸುತ್ತಿದ್ದ ಮೆಟ್ರೋ ರೈಲಿಗೆ (Metro Train) ಸಿಲುಕಿ ವಿದ್ಯಾರ್ಥಿ (Student) ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆ (Attiguppe) ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

    ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಹಳಿಗೆ ಧುಮುಕಿದ್ದು, ಮೆಟ್ರೊ ಆಡಳಿತ ಮಂಡಳಿ ಕೂಡಲೇ ಮೆಟ್ರೋ ರೈಲನ್ನು ನಿಲ್ಲಿಸಿದ್ದಾರೆ. ಬಳಿಕ ರೈಲ್ವೆ ಹಳಿಗೆ ಬಿದ್ದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನೇ ಮುಗಿಸಿದ ಪತ್ನಿ

    ಘಟನೆಯಿಂದ ಚಲ್ಲಘಟ್ಟದಿಂದ ಮೆಜೆಸ್ಟಿಕ್ ಕಡೆಗೆ ಸಂಚಾರ ಮಾಡುತ್ತಿದ್ದ ಮೆಟ್ರೋ ರೈಲುಗಳಲ್ಲಿ ವ್ಯತ್ಯಯವುಂಟಾಗಿದೆ. ಮೆಟ್ರೋ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಸಾರಿಗೆ ಅವಲಂಭಿಸುವಂತೆ ಮನವಿ ಮಾಡಲಾಗಿದೆ. ಮಾಗಡಿ ರೋಡ್‌ನಿಂದ ಚಲ್ಲಘಟ್ಟ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು, ವೈಟ್ ಫೀಲ್ಡ್‌ನಿಂದ ಮಾಗಡಿ ರೋಡ್‌ವರೆಗೂ ಮಾತ್ರ ಮೆಟ್ರೋ ಸೇವೆ ಲಭ್ಯವಿದೆ. ಇದನ್ನೂ ಓದಿ: ಡಬಲ್‌ ಮರ್ಡರ್‌ ಕೇಸ್‌ – ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ!

    ಇದಕ್ಕೂ ಮೊದಲು ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಕೇರಳ ಮೂಲದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಇದೀಗ ಅಂತಹದೇ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲೂ ನಡೆದಿದೆ. ಘಟನೆ ನಡೆದ ತಕ್ಷಣ ಆತ್ಮಹತ್ಯೆ ಯತ್ನದ ಬಗ್ಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮೋದಿ ಹೆಸರಲ್ಲಿ 5,000 ರೂ. – ಮೆಸೇಜ್ ಕ್ಲಿಕ್ ಮಾಡೋ ಮುನ್ನ ಎಚ್ಚರ

    ಇನ್ನು ಈ ಕುರಿತು ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದು, ಆತ್ಮಹತ್ಯೆ ಮಾಡಿಕೊಂಡಾತ ಕಾನೂನು ವಿದ್ಯಾರ್ಥಿ. ಮೊದಲ ವರ್ಷದ ಕಾನೂನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಧ್ರುವ ಎಂದು ತಿಳಿದು ಬಂದಿದ್ದು, ಘಟನೆಯಿಂದ ವಿದ್ಯಾರ್ಥಿಯ ರುಂಡ ಮುಂಡ ಬೇರ್ಪಟ್ಟಿದೆ. ಇದನ್ನೂ ಓದಿ: ನೀರು ಕುಡಿಯೋ ನೆಪದಲ್ಲಿ ಬಂದು ಎಳೆದಾಡಿದ – ಡೆಲಿವರಿ ಬಾಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

  • ಹೆಬ್ಬಗೋಡಿಯಲ್ಲಿ ಮಾಲೀಕನಿಗೆ ಚಾಕು ಹಾಕಿ ಅಂಗಡಿ ಲೂಟಿ

    ಹೆಬ್ಬಗೋಡಿಯಲ್ಲಿ ಮಾಲೀಕನಿಗೆ ಚಾಕು ಹಾಕಿ ಅಂಗಡಿ ಲೂಟಿ

    – ಅತ್ತಿಗುಪ್ಪೆಯಲ್ಲಿ ಯುವಕನನ್ನು ತಡೆದು ದರೋಡೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರು, ಪೋಕರಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕತ್ತಲಾದ್ರೆ ಒಬ್ಬೊಬ್ಬರೇ ಓಡಾಡೋದು ಕಷ್ಟವಾಗಿದೆ. ಬೆಂಗಳೂರು ಬೀದಿಗಳಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ದೌರ್ಜನ್ಯದ ಭೀತಿ ಒಂದೆಡೆಯಾದ್ರೆ, ಪುರುಷರ ಕೈಯಿಂದ ಹಣ, ಮೊಬೈಲ್ ಮತ್ತಿತರ ವಸ್ತುಗಳನ್ನು ದೋಚೋದು ಮತ್ತೊಂದೆಡೆ. ಎರಡೆರಡು ಬೈಕ್‍ಗಳಲ್ಲಿ ಬರ್ತಾರೆ. ಆಯಕಟ್ಟಿನ ಜಾಗದಲ್ಲಿ ಅಡ್ಡಹಾಕ್ತಾರೆ. ಚಾಕು ತೋರಿಸಿ, ಹಲ್ಲೆ ನಡೆಸಿ, ಕೈಯಲ್ಲಿ, ಜೇಬಲ್ಲಿ, ಮೈಯಲ್ಲಿ ಇರೋದನ್ನು ದೋಚ್ತಾರೆ.

    ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿಯೂ ದರೋಡೆ ಪ್ರಕರಣಗಳು ಹೆಚ್ಚಾಗ್ತಿವೆ. ಕಳೆದ ರಾತ್ರಿ ಹೆಬ್ಬಗೋಡಿಯ ವಿನಾಯಕ ನಗರದಲ್ಲಿ ಉತ್ತರಪ್ರದೇಶ ಮೂಲದ ವಿಕಾಶ್ ಮಿಶ್ರಾ ಅನ್ನೋರ ಮೊಬೈಲ್ ಶಾಪ್‍ಗೆ ನುಗ್ಗಿದ ದುಷ್ಕರ್ಮಿಗಳು, ಅಂಗಡಿಯ ಮಾಲೀಕನಿಗೆ ಚಾಕುವಿನಿಂದ ಇರಿದು ಹಣ ಹಾಗೂ ಮೊಬೈಲ್‍ಗಳನ್ನ ದೋಚಿ ಪರಾರಿಯಾಗಿದ್ದಾರೆ.

    ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ಅಂಗಡಿ ಮೇಲೆ ದಾಳಿ ನಡೆಸಿದ್ದು, ರೌಡಿಶೀಟರ್ ನೇಪಾಳಿ ಮಂಜನ ಸಹಚರರಾದ ಕಫತ್ವಾಲ್ ಅಜಿತ್, ಚಂದನ್ ಸೇರಿದಂತೆ ಆರು ಮಂದಿಯ ತಂಡ ಈ ಕೃತ್ಯ ನಡೆಸಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರೋ ಅಂಗಡಿ ಮಾಲೀಕ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದರೋಡೆಕೋರರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    ಮಾರ್ಚ್ 9ರಂದು ರಾತ್ರಿ ವಿಜಯನಗರದ ಅತ್ತಿಗುಪ್ಪೆಯಲ್ಲಿ ಮತ್ತೊಂದು ದರೋಡೆ ನಡೆದಿದೆ. ಮಾಜಿ ಕಾರ್ಪೋರೇಟರ್ ದೊಡ್ಡಣ್ಣ ಅವರ ಮನೆಯ ಮುಂದೆಯೇ ದರೋಡೆ ನಡೆದಿದೆ. ದಾರಿಯಲ್ಲಿ ಒಬ್ಬಂಟಿಯಾಗಿ ತೆರಳ್ತಿದ್ದ ಯುವಕನ ಮೇಲೆ ಬೈಕ್‍ಗಳಲ್ಲಿ ಬಂದ ಮೂವರು ದಾಳಿ ನಡೆಸಿದ್ದು, ಯುವಕನನ್ನು ಹಿಂಬದಿಯಿಂದ ನೂಕಿ, ಚಾಕು ತೋರಿಸಿ ಬೆದರಿಸಿದ್ದಾರೆ. ದರೋಡೆಕೋರರಿಗೆ ಹೆದರಿ ಮೊಬೈಲ್, ಪರ್ಸ್ ಕೊಟ್ಟು ಯುವಕ ಬಚಾವಾಗಿದ್ದಾನೆ. ದರೋಡೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    https://www.youtube.com/watch?v=nXnHzlW_434&feature=youtu.be