Tag: audio

  • ‘ಕೆಂಡ’ ಚಿತ್ರದ ಆಡಿಯೋ ರೈಟ್ಸ್ ಡಿ ಬೀಟ್ಸ್ ತೆಕ್ಕೆಗೆ

    ‘ಕೆಂಡ’ ಚಿತ್ರದ ಆಡಿಯೋ ರೈಟ್ಸ್ ಡಿ ಬೀಟ್ಸ್ ತೆಕ್ಕೆಗೆ

    ಹದೇವ್ ಕೆಲವಡಿ (Sahadev Kelavadi) ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ (Kenda) ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್  (Roopa Rao) ನಿರ್ಮಾಣದ ಈ ಸಿನಿಮಾ ಎಲ್ಲ ರೀತಿಯತಿಂದಲೂ ಭಿನ್ನ ಜಾಡಿನದ್ದೆಂಬ ವಿಚಾರ ಈಗಾಗಲೇ ಪ್ರೇಕ್ಷಕ ವಲಯಕ್ಕೆ ದಾಟಿಕೊಂಡಿದೆ. ಇದೀಗ ಕೆಂಡದ ಆಡಿಯೋ ಹಕ್ಕುಗಳ ವಿಚಾರದಲ್ಲಿ ಖುಷಿಯ ಸಂಗತಿಯೊಂದನ್ನು ಚಿತ್ರತಂಡ ಹಂಚಿಕೊಂಡಿದೆ.

    ಹೆಸರಲ್ಲೇ ನಿಗಿನಿಗಿಸುವ ಆವೇಗವೊಂದನ್ನು ಬಚ್ಚಿಟ್ಟುಕೊಂಡಂತಿರೋ ಸಿನಿಮಾ `ಕೆಂಡ’. ಇದರ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರ ಸಂಗೀತ ನೀಡಿರುವ ಹಾಡಿಗಳ ಆಡಿಯೋ ರೈಟ್ಸ್ ಅನ್ನು ಡಿ ಬೀಟ್ಸ್ ಪಡೆದುಕೊಂಡಿದೆ. ಸಿನಿಮಾ ಮ್ಯೂಸಿಕ್ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಸಂಸ್ಥೆ ಡಿ ಬೀಟ್ಸ್. ಖುದ್ದು ಸಂಗೀತ ನಿರ್ದೇಶಕ ಕಂ ಈ ಸಂಸ್ಥೆಯ ಮುಖ್ಯಸ್ಥರಾದ ವಿ. ಹರಿಕೃಷ್ಣ ಅವರೇ ಕೆಂಡದ ಹಾಡುಗಳನ್ನು ಕೇಳಿ, ಬಹುವಾಗಿ ಮೆಚ್ಚಿಕೊಂಡು ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾರೆ.

     

    ಈ ಸಂದರ್ಭದಲ್ಲಿ ಹರಿಕೃಷ್ಣ ಅವರ ಕಡೆಯಿಂದ ಬಂದಿರುವ ಮೆಚ್ಚುಗೆಯ ಮಾತುಗಳು ಚಿತ್ರತಂಡಕ್ಕೆ ಮತ್ತಷ್ಟು ಹುರುಪು ತುಂಬಿವೆ. ಎಲ್ಲ ರೀತಿಯಿಂದಲೂ ಈ ಹಾಡುಗಳು ಅದ್ಭುತವಾಗಿ ಮೂಡಿ ಬಂದಿವೆ ಎಂಬ ಅಭಿಪ್ರಾಯ ಹರಿಕೃಷ್ಣರ ಕಡೆಯಿಂದ ರವಾನೆಯಾಗಿದೆ. ಈ ಮೂಲಕ ಮೊದಲ ಹೆಜ್ಜೆಯಲ್ಲಿಯೇ ರಿತ್ವಿಕ್ ಕಾಯ್ಕಿಣಿ ಗಮನ ಸೆಳೆದಿದ್ದಾರೆ. ಅಂದಹಾಗೆ, ಕೆಂಡ ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಅದರಲ್ಲೊಂದು ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿರೋದು ವಿಶೇಷ. ಅದಿತಿ ಸಾಗರ್ ಕೂಡಾ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸದ್ಯಕ್ಕೆ ಇವಿಷ್ಟು ಮಾಹಿತಿಯನ್ನಷ್ಟೇ ಚಿತ್ರತಂಡ ಜಾಹೀರು ಮಾಡಿದೆ. ಮಿಕ್ಕುಳಿದ ಮಾಹಿತಿಗಳು ಇಷ್ಟರಲ್ಲಿಯೇ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

  • ಅಧಿಕ ಮೊತ್ತಕ್ಕೆ ‘ಯುವ’ ಚಿತ್ರದ ಆಡಿಯೋ ರೈಟ್ಸ್

    ಅಧಿಕ ಮೊತ್ತಕ್ಕೆ ‘ಯುವ’ ಚಿತ್ರದ ಆಡಿಯೋ ರೈಟ್ಸ್

    ಕೆ.ಜಿ.ಎಫ್, ಕಾಂತಾರದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ಹೊಂಬಾಳೆ ಫಿಲಂಸ್ ಮೂಲಕ ನಿರ್ಮಾಣವಾಗಿರುವ ಮತ್ತೊಂದು ಅದ್ದೂರಿ ಕನ್ನಡ ಚಿತ್ರ ಯುವ ( (Yuva)). ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್ (Yuvarajkumar) ಈ ಚಿತ್ರದ ಮೂಲಕ ನಾಯಕ‌ರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

    ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ (Hombale Films) ಮೂಲಕ ವಿಜಯ ಕಿರಗಂದೂರ್ ಹಾಗೂ ಚೆಲುವೇಗೌಡ ಅವರು ನಿರ್ಮಾಣ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆಯಿಂದಲೇ ನಿರ್ಮಾಣವಾಗಿದ್ದ ಪುನೀತ್ ರಾಜಕುಮಾರ್ ಅಭಿನಯದ ರಾಜಕುಮಾರ ಚಿತ್ರವನ್ನು ನಿರ್ದೇಶಿಸಿದ್ದ  ಸಂತೋಷ್ ಆನಂದರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಇತ್ತೀಚೆಗಷ್ಟೇ ಬಹು ನಿರೀಕ್ಷಿತ ಯುವ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಮಾರ್ಚ್ 29 ರಂದು ತೆರೆ ಕಾಣಲಿದೆ.  ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಸುಮಧುರ ಹಾಡುಗಳು ಯುವ ಚಿತ್ರದಲ್ಲಿದ್ದು,  ಕನ್ನಡದ ಹೆಸರಾಂತ ಆಡಿಯೋ ಸಂಸ್ಥೆ ಆನಂದ್ ಆಡಿಯೋ ಬಾರಿ ಮೊತ್ತಕ್ಕೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ನಿಂದ ಜನರ ಗಮನ ಸೆಳೆದಿರುವ ಯುವ ಚಿತ್ರದ ಹಾಡುಗಳು ಮಾರ್ಚ್ ಮೊದಲವಾರದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಟೀಸರ್ ಹಾಗೂ ಟ್ರೇಲರ್ ಸಹ ಸದ್ಯದಲ್ಲೇ ರಿಲೀಸ್ ಆಗಲಿದೆ.

    ಯುವ ರಾಜಕುಮಾರ್ ಅವರ ಯುವ ಚಿತ್ರದ ಗೆಟಪ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಯುವ ರಾಜಕುಮಾರ್ ಅವರಿಗೆ ನಾಯಕಿಯಾಗಿ ಕಾಂತಾರ ಬೆಡಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತಕುಮಾರ್, ಸುಧಾರಾಣಿ, ಕಿಶೋರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಶ್ರೀಶ ಕುದುವಳ್ಳಿ ಈ ಚಿತ್ರದ ಛಾಯಾಗ್ರಾಹಕರು.

  • ಭಾರೀ ಮೊತ್ತಕ್ಕೆ ಸೇಲ್ ಆಯಿತು ‘ಮಾರ್ಟಿನ್’ ಚಿತ್ರದ ಆಡಿಯೋ

    ಭಾರೀ ಮೊತ್ತಕ್ಕೆ ಸೇಲ್ ಆಯಿತು ‘ಮಾರ್ಟಿನ್’ ಚಿತ್ರದ ಆಡಿಯೋ

    ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಮಾರ್ಟಿನ್ ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ ‘ಸರೆಗಮ’,  ಮಾರ್ಟಿನ್ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

    ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ  ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

    ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.                        ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಮಾರ್ಟಿನ್ ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್,  ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

  • ರಂಜನಿ ನಟನೆಯ ‘ಸತ್ಯಂ’ ಸಿನಿಮಾದ ಆಡಿಯೋ ರಿಲೀಸ್ ಮಾಡಿದ ಸಚಿವ ತಂಗಡಗಿ

    ರಂಜನಿ ನಟನೆಯ ‘ಸತ್ಯಂ’ ಸಿನಿಮಾದ ಆಡಿಯೋ ರಿಲೀಸ್ ಮಾಡಿದ ಸಚಿವ ತಂಗಡಗಿ

    ಹಾಂತೇಶ್ ವಿ.ಕೆ. ಅವರ ನಿರ್ಮಾಣದ ‘ಸತ್ಯಂ’ (Satyam) ಚಿತ್ರದ  ಆಡಿಯೋ ಬಿಡುಗಡೆ ಸಮಾರಂಭ ಗಂಗಾವತಿಯ ಜಗಜೀವನ ರಾಮ್ ಸರ್ಕಲ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ  ನೆರವೇರಿತು. ಸಚಿವರಾದ ಶಿವರಾಜ್ ತಂಗಡಗಿ (Shivaraj Thangadagi) ಅವರು ಸತ್ಯಂ ಚಿತ್ರದ ಆಡಿಯೋ ಬಿಡುಗಡೆಗೊಳಿಸಿ ಮಾತನಾಡುತ್ತ ಬಾಂಧವ್ಯದ ಕಥೆ ಇಟ್ಟುಕೊಂಡು ಉತ್ತರ ಕರ್ನಾಟಕದವರೇ ಆದ  ನಿರ್ಮಾಪಕರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಮ್ಮ ಭಾಗದವರಾದ ಇವರನ್ನು ನಾವೆಲ್ಲ ಸೇರಿ ಗೆಲ್ಲಿಸಬೇಕು. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಅವರಿಗೆಲ್ಲ ಅವಕಾಶ ಸಿಗುವಂತಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

    ನಂತರ ನಿರ್ಮಾಪಕ ಮಹಾಂತೇಶ್ ಅವರು  ಮಾತನಾಡುತ್ತ ಇದು ನಮ್ಮ ಸಂಸ್ಥೆಯ ಎರಡನೇ ಚಿತ್ರ. ತಲೆಮಾರುಗಳ ನಡುವಿನ ಕಥಾಹಂದರ  ಇಟ್ಟುಕೊಂಡು ಒಂದೊಳ್ಳೇ ಸಿನಿಮಾ ಮಾಡಿದ್ದೇವೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ, ನಮ್ಮ ಜನರ ಸಮ್ಮುಖದಲ್ಲಿ  ಆಡಿಯೋ ಬಿಡುಗಡೆ  ಮಾಡಬೇಕೆಂಬುದು ನನ್ನ ಕನಸಾಗಿತ್ತು. ದಯವಿಟ್ಟು ನಮ್ಮ ಚಿತ್ರವನ್ನು ಥೇಟರಿನಲ್ಲಿ ವೀಕ್ಷಿಸುವ ಮೂಲಕ ಪ್ರೋತ್ಸಾಹಿಸಿ ಎಂದು ಹೇಳಿದರು.

    ಸದಭಿರುಚಿಯ ಚಿತ್ರಗಳ ಮೂಲಕ ಗುರ್ತಿಸಿಕೊಂಡಿರುವ ಅಶೋಕ್ ಕಡಬ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಹೆಚ್ಚು  ಜನ ನೋಡುತ್ತಾರೆ. ಹಾಗಾಗಿ ನಿಮ್ಮ ಬಳಿಗೆ ಬಂದಿದ್ದೇವೆ. ಒಳ್ಳೇ ಸಿನಿಮಾ ಮಾಡಿದ್ದೇವೆ. ನೀವೆಲ್ಲ ಚಿತ್ರವನ್ನು ಗೆಲ್ಲಿಸುತ್ತೀರೆಂಬ ನಂಬಿಕೆಯಿದೆ ಎಂದರು. ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಉತ್ತರ ಕರ್ನಾಟಕ ಭಾಗದ ಅನೇಕ ರಾಜಕೀಯ ಗಣ್ಯರುಗಳು ಭಾಗವಹಿಸಿದ್ದರು.

     

    ಕಾಲಘಟ್ಟಗಳಲ್ಲಿ ನಡೆಯೋ ಕಥೆ ಸತ್ಯಂ ಚಿತ್ರದಲ್ಲಿದ್ದು,  ಜಮೀನ್ದಾರ್ ಕುಟುಂಬದ ಎಳೆಯೊಂದಿಗೆ ಪ್ರಸ್ತುತ ಬದುಕಿನ ಕಥೆಯೂ ಬೆಸೆದುಕೊಂಡಿದೆ. ತಾತನಾಗಿ ಹಿರಿಯ ನಟ ಸುಮನ್ , ಮೊಮ್ಮಗನಾಗಿ ಸಂತೋಷ್ ಅಭಿನಯಿಸಿದ್ದಾರೆ. ನಾಯಕಿಯಾಗಿ ರಂಜಿನಿ ರಾಘವನ್  (Ranjani Raghavan)  ಕಾಣಿಸಿಕೊಂಡಿದ್ದಾರೆ.  ಜನವರಿಯಲ್ಲಿ  ಚಿತ್ರದ ಟ್ರೈಲರ್  ಬಿಡುಗಡೆಯಾಗಲಿದೆ. ರವಿ ಬಸ್ರೂರು  ಅವರ ಸಂಗೀತ ಸಂಯೋಜನೆ,   ಸಿನಿಟೆಕ್ ಸೂರಿ ಅವರ ಕ್ಯಾಮೆರಾ ವರ್ಕ್ ಈ  ಚಿತ್ರಕ್ಕಿದೆ    ಕೆ.ವಿ.ರಾಜು ಅವರು ಒಂದಿಷ್ಟು ಚಿತ್ರಕಥೆ, ಸಂಭಾಷಣೆ  ಬರೆದಿದ್ದು, ಅದನ್ನು  ಕಿನ್ನಾಳ ರಾಜ್  ಪೂರ್ಣಗೊಳಿಸಿ, ಒಂದು ಹಾಡನ್ನೂ ಬರೆದಿದ್ದಾರೆ.

  • ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

    ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

    ಸ್ಯಾಂಡ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ಲಾಕ್ ರಾಘವ’ (Unlock Raghava) ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಈಗ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ‌ ಬಂದಿದೆ.  ಚಿತ್ರದ ಆಡಿಯೋ (Audio) ರೈಟ್ಸ್ ಎ2 ಮ್ಯೂಸಿಕ್ ಪಾಲಾಗಿದೆ. ದಾಖಲೆ ಮೊತ್ತಕ್ಕೆ ಹೊಸ ನಾಯಕನಟನ ಚಿತ್ರದ ಆಡಿಯೋ ರೈಟ್ಸ್ ಮಾರಾಟವಾಗಿರುವುದು ವಿಶೇಷ.

    ದಾಖಲೆ ಮೊತ್ತಕ್ಕೆ ಮಾರಾಟವಾಗಿರುವ ವಿಷಯ ಮಾತ್ರ ತಿಳಿದು ಬಂದಿದ್ದು. ಹೆಚ್ಚಿನ ವಿವರಗಳನ್ನು ಚಿತ್ರತಂಡವಾಗಲಿ ಅಥವಾ ಮ್ಯೂಸಿಕ್ ಕಂಪೆನಿಯಾಗಲಿ ಬಹಿರಂಗಪಡಿಸಿಲ್ಲ. ಇದಲ್ಲದೇ ಮತ್ತೊಂದು ವಿಶೇಷತೆಯನ್ನೂ ‘ಅನ್ಲಾಕ್ ರಾಘವ’ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಹೊತ್ತು ತಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಟೀಸರ್ ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

    ‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.

     

    ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆಡಿಯೋ ಬಿಟ್ಟ ಜೆಡಿಎಸ್

    ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆಡಿಯೋ ಬಿಟ್ಟ ಜೆಡಿಎಸ್

    ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಆತ್ಮಹತ್ಯೆ ಯತ್ನ ಪ್ರಕರಣವಾದ ಬಳಿಕ ನಾಗಮಂಗಲದಲ್ಲಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ದ್ವೇಷದ ರಾಜಕೀಯ ಮಾಡುತ್ತಾ ಇದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಇದೀಗ ಮತ್ತೊಂದು ಆಡಿಯೋವನ್ನು (Audio) ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ.

    ನಾಗಮಂಗಲ ತಾಲೂಕಿನ ರೈತ ಕೃಷ್ಣೇಗೌಡ ಎಂಬಾತ ಕೆಇಬಿ ಸಿಬ್ಬಂದಿ ಜೊತೆ ಮಾತಾನಾಡುವ ವೇಳೆ ನಡೆದ ಸಂವಾದವನ್ನು ಜೆಡಿಎಸ್ ವೈರಲ್ ಮಾಡುತ್ತಾ ಇದೆ. ಈ ಆಡಿಯೋದಲ್ಲಿ ರೈತ ಕೆಇಬಿ ಸಿಬ್ಬಂದಿಗೆ ಯಾಕೆ ಸಮ್ಮನೆ ವಿದ್ಯುತ್ ಅನ್ನು ತೆಗೆಯುತ್ತಾ ಇದ್ದೀರಾ? ಮಳೆನೂ ಇಲ್ಲ ಗಾಳಿನೂ ಇಲ್ಲ. ಜಿಟಿಜಿಟಿ ಮಳೆಯ ಹಾಗೆ 5 ನಿಮಿಷ ಬರುತ್ತೆ ಅಷ್ಟೇ. ಇಷ್ಟಕ್ಕೆ ವಿದ್ಯುತ್ ತೆಗೆದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

    ಇದಕ್ಕೆ ಕೆಇಬಿ ಸಿಬ್ಬಂದಿ ಲೈನ್ ಟ್ರಿಪ್ ಆಗುತ್ತಾ ಇದೆ. ನಾವೇನ್ ಮಾಡೋದು? ಲೈನ್ ಮ್ಯಾನ್ ಚೆಕ್ ಮಾಡ್ತಾ ಇದ್ದಾನೆ ಎಂದು ಹೇಳಿದ್ದಾರೆ. ರೈತ ಕೃಷ್ಣೇಗೌಡ ಹೀಗೆ ಆದ್ರೆ ಮಕ್ಕಳು ಓದಿಕೊಳ್ಳೋದು ಹೇಗೆ ಎಂದು ಹೇಳಿದ್ದಾರೆ. ಕೆಇಬಿ ಸಿಬ್ಬಂದಿ ಮುಂದುವರಿದು ನಾವೇನ್ ಮಾಡೋದು ಹೇಳಿ ಒಬ್ಬ ಲೈನ್ ಮ್ಯಾನ್ ರಜಾ ಹಾಕಿದ್ದಾನೆ. ಭೀಮನಹಳ್ಳಿ ಲೈನ್ ಮ್ಯಾನ್ ಹುಡುಗನನ್ನು ಜೆಡಿಎಸ್ ಪರ ಓಡಾಡಿದ್ದಾನೆ ಎಂದು ಟ್ರಾನ್ಫ್ಫರ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: RTPS ಮೂರು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

    ಇದಕ್ಕೆ ರೈತ ಏನು ಜೆಡಿಎಸ್‌ಗೆ ಮಾಡಿದಾರೆ ಎಂದು ಹೀಗೆ ಮಾಡಿದ್ರೆ ಹೇಗೆ? ಜೆಡಿಎಸ್ ಆಗಲಿ, ಕಾಂಗ್ರೆಸ್ ಆಗಲಿ ಹೀಗೆ ಮಾಡಿದರೆ ಹೇಗೆ ಎಂದು ಇಬ್ಬರ ನಡುವೆ ಸಂವಾದ ನಡೆದಿದೆ. ಇದೀಗ ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: KRS ಒಳಹರಿವಿನ ಪ್ರಮಾಣ ಕುಸಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 36 ಕೋಟಿ ರೂ. ಗೆ ಮಾರಾಟವಾಯ್ತು ‘ಜವಾನ್’ ಆಡಿಯೋ ರೈಟ್ಸ್

    36 ಕೋಟಿ ರೂ. ಗೆ ಮಾರಾಟವಾಯ್ತು ‘ಜವಾನ್’ ಆಡಿಯೋ ರೈಟ್ಸ್

    ಶಾರುಖ್ ಖಾನ್ (Shahrukh Khan) ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ (Jawana) ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ (Audio) ಹಕ್ಕುಗಳು ದಾಖಲೆಯ 36 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗಿರುವ ಸುದ್ದಿ ಬಂದಿದೆ.

    ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆಯಾದ ಟಿ-ಸೀರೀಸ್ ತನ್ನದಾಗಿಸಿಕೊಂಡಿದ್ದು, 36 ಕೋಟಿ ರೂ.ಗಳನ್ನು ಕೊಟ್ಟು ಹಕ್ಕುಗಳನ್ನು ಪಡೆದಿದೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ (Aniruddha Ravichandran), ಈ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ನಿರ್ಮಿಸುತ್ತಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.

     

    ‘ಜವಾನ್’ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು, ಸುನೀಲ್ ಗ್ರೋವರ್, ಸಾನ್ಯಾ ಮಲ್ಹೋತ್ರಾ ಸೇರಿದಂತ ಹಲವು ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ. ದೀಪಿಕಾ ಪಡುಕೋಣೆ, ಸಂಜಯ್ ದತ್ ಮತ್ತು ವಿಜಯ್ ಅತಿಥಿ ಕಲಾವಿದರಾಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಮಧುರಕಾವ್ಯ’ ಆಡಿಯೋ ಬಿಡುಗಡೆ : ಇದು ವೈದ್ಯಲೋಕದ ಕಾಳಗದ ಕಥೆ

    ‘ಮಧುರಕಾವ್ಯ’ ಆಡಿಯೋ ಬಿಡುಗಡೆ : ಇದು ವೈದ್ಯಲೋಕದ ಕಾಳಗದ ಕಥೆ

    ಯುರ್ವೇದ ಚಿಕಿತ್ಸಾ ಪದ್ದತಿಗೆ ಅದರದೇ ಆದ ಮಹತ್ವವಿದೆ.  ಇತ್ತೀಚಿನ ಕಾಲಮಾನದಲ್ಲಿ ಬಂದಿರುವ ಅಲೋಪತಿಗೆ ಈಗ ಹೆಚ್ಚು ಜನ ಮೊರೆ ಹೋಗುತ್ತಿದ್ದಾರೆ. ಹಾಗಾಗಿ  ಆಯುರ್ವೇದದ ಪ್ರಾಮುಖ್ಯತೆಯನ್ನು  ಜನರಿಗೆ ತಿಳಿಸಲೆಂದೇ, ಸ್ವತಃ  ಆಯುರ್ವೇದ ವೈದ್ಯರಾದ  ಮಧುಸೂದನ್ ಅವರು ‘ಮಧುರಕಾವ್ಯ’ (Madhura Kavya) ಎಂಬ ಚಲನಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಅಭಿನಯಿಸಿದ್ದಾರೆ. ಈ ಚಿತ್ರದ ನಾಲ್ಕು ಹಾಡುಗಳ (Audio) ಪ್ರದರ್ಶನ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್‌ಆರ್‌ವಿ ಥಿಯೇಟರಿನಲ್ಲಿ ನೆರವೇರಿತು. ಸತೀಶ್ ಮೌರ್ಯ ಅವರ ಸಂಗೀತ ಸಂಯೋಜನೆಯ 4 ಹಾಡುಗಳು ಚಿತ್ರದಲ್ಲಿದ್ದು, ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ (V. Manohar) ಅವರು ಕಾರ್ಯಕ್ರಮದಲ್ಲಿ  ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡದ ಕಾರ್ಯವನ್ನು ಪ್ರಶಂಸಿಸಿದರು.

     

    ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿದ ಮಧುಸೂದನ್ (Madhusudan) ಕ್ಯಾತನಹಳ್ಳಿ ಅವರು  ಮೊದಲಬಾರಿಗೆ ಈ ಚಿತ್ರಕ್ಕೆ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಬಿಡುಗಡೆಯ ಹಂತ ತಲುಪಿರುವ ಈ ಚಿತ್ರದಲ್ಲಿ  ಆಯುರ್ವೇದ ವೈದ್ಯ ಮತ್ತು ಅಲೋಪಥಿ ವೈದ್ಯ ಪದ್ದತಿಯ ನಡುವೆ ನಡೆಯುವ ಸಂಘರ್ಷದ ಕಥಾವಸ್ತುವನ್ನಿಟ್ಟುಕೊಂಡು ಮಧುಸೂದನ್ ಕ್ಯಾತನಹಳ್ಳಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಧುರಕಾವ್ಯ ಚಿತ್ರದಲ್ಲಿ ನಾಯಕಿಯ ಪಾತ್ರವಿಲ್ಲ.  ನಾಯಕನ ತಾಯಿಯಾಗಿ ರಂಗಭೂಮಿ ನಟಿ ಯಶೋಧ ಅವರು ಕಾಣಿಸಿಕೊಂಡಿದ್ದು, ಖಳನಾಯಕನಾಗಿ ರಾಜಕುಮಾರ್ ನಾಯಕ್ ನಟಿಸಿದ್ದಾರೆ. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

        

    ನಾಯಕ ಕಂ ನಿರ್ದೇಶಕ ಮಧುಸೂದನ್ ಮಾತನಾಡುತ್ತ  ಈ ಸಿನಿಮಾ ನನ್ನ ಕನಸು, ಬಿಜಿನೆಸ್‌ಗಾಗಿ ನಾವು ಈ ಸಿನಿಮಾ ಮಾಡಿಲ್ಲ. ಸಮಾಜಕ್ಕೊಂದು ಸಂದೇಶ ಕೊಡಬೇಕೆಂದು ಚಿತ್ರ ನಿರ್ಮಿಸಿದ್ದೇವೆ. ಹಣ ಗಳಿಸಬೇಕೆಂದರೆ ನಾನು ಸಿನಿಮಾನೇ ಮಾಡಬೇಕಾಗಿಲ್ಲ. ಈವರೆಗೆ  ಸಾವಿರಾರು ಜನ ರೋಗಿಗಳನ್ನು ನೋಡಿದ್ದೇನೆ. ನಾನು ಆ ರೋಗಿಗಳಿಗೆ ಮಾಡ್ತಿರುವ ಸೇವೆಯೇ ನಾನೀ ಸಿನಿಮಾ ಮಾಡಲು ಸ್ಪೂರ್ತಿ. ಬಹುತೇಕ ಖಾಯಿಲೆಗಳಿಗೆ ನಮ್ಮ ಹಿತ್ತಲಲ್ಲೇ ಔಷಧಿಯಿದೆ.  ಹಿತ್ತಲ ಗಿಡವನ್ನು ಹೇಗೆ ಬಳಸಿಕೊಳ್ಳಬೇಕು. ಅಲ್ಲದೆ ಒತ್ತಡದಿಂದಲೇ ರೋಗಗಳು ಹೇಗೆ ಹೆಚ್ಚಾಗುತ್ತವೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ.  ಅಲೋಪಥಿ ವೈದ್ಯರು ಹಣದಾಸೆಗಾಗಿ ನಾಟಿ ವೈದ್ಯ ಪದ್ದತಿಯನ್ನು ಹೇಗೆಲ್ಲಾ ಹತ್ತಿಕ್ಕುತ್ತಿದ್ದಾರೆ, ಪಾರಂಪರಿಕವಾಗಿ ಜನಸೇವೆ ಮಾಡಿಕೊಂಡು ಬಂದಿರುವ ನಾಟಿ ವೈದ್ಯರನ್ನು ಯಾವರೀತಿ  ತುಳಿಯುತ್ತಿದ್ದಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಅನಾದಿಕಾಲದಿಂದ ಜನರ ಆರೋಗ್ಯವನ್ನು  ಸಂರಕ್ಷಿಸುತ್ತ ಬಂದಿರುವ ಆಯುರ್ವೇದವನ್ನು ಉಳಿಸಬೇಕು ಎನ್ನುವುದೇ ನಮ್ಮ ಮೂಲ ಉದ್ದೇಶ. ಒಂದು ಚಿತ್ರ ಮಾಡುವಾಗ ಕಥೆಯೇ ಅದರ ನಾಯಕನಾಗಿರುತ್ತಾನೆ. ಜನರಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸುವ ಒಬ್ಬ ನಾಟಿ ವೈದ್ಯನಾಗಿ ನಾನು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಲಾಭಿ ನಡೆಸುವವರ ವಿರುದ್ಧ ಹೋರಾಟ ನಡೆಸಿ ನಾಟಿ ವೈದ್ಯ ಪದ್ಧತಿಯನ್ನು ರಕ್ಷಿಸುವಂಥ ಪಾತ್ರವದು. ಚಿತ್ರದಲ್ಲಿ ತಾಯಿ, ಮಗನ ನಡುವಿನ ಪ್ರೀತಿ ವಾತ್ಸಲ್ಯವಿದೆ. ಸಮಾಜಕ್ಕೆ ಒಂದು ಉತ್ತಮ ಮೆಸೇಜ್ ಕೂಡ ಚಿತ್ರದಲ್ಲಿದೆ.   ಈ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಸಹ ನಾನೇ ವಹಿಸಿಕೊಂಡಿದ್ದೇನೆ. ಉಡುಪಿ, ಮಂಗಳೂರು, ಶಿರಸಿ ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಹಳ್ಳಿಯ ನಾಟಿವೈದ್ಯರ ಕುಟುಂಬವೊಂದು ಮೆಡಿಕಲ್ ಲಾಭಿಯ ವಿರುದ್ಧ ಹೋರಾಡುವ ಕಥೆಯಿದು. ಚಿತ್ರವನ್ನು ಸದ್ಯದಲ್ಲೇ ಬಿಡುಗಡೆ  ಮಾಡುವ ಯೋಜನೆಯಿದೆ ಎಂದು ಹೇಳಿದರು.

     

    ಸಂಗೀತ ನಿರ್ದೇಶಕ  ಸತೀಶ್ ಮೌರ್ಯ ಮಾತನಾಡಿ, ನಾನು ಹಂಸಲೇಖ ದೇಸಿ ಕಾಲೇಜಿನಲ್ಲಿ ಮನೋಹರ್ ಅವರನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಈ ಚಿತ್ರದಲ್ಲಿ 3 ಹಾಡುಗಳು ಹಾಗೂ 4 ಬಿಟ್ ಸಾಂಗ್ ಇದ್ದು, ದೇಸೀ ಶೈಲಿಯ ವಾದ್ಯಗಳನ್ನೇ ಬಳಸಿ ಮ್ಯೂಸಿಕ್ ಮಾಡಿದ್ದೇನೆ. ರಾಜೇಶ್ ಕೃಷ್ಣನ್, ಮಧು ಬಾಲಕೃಷ್ಣನ್, ಚಿತ್ರಾ ಅವರು ಹಾಡಿದ್ದಾರೆ ಎಂದು ಹೇಳಿದರು. ನಂತರ ರಾಜಕುಮಾರ್ ನಾಯಕ್, ನಾಚಪ್ಪ, ಹಾಗೂ ಬಸವರಾಜ ಮುಗಳಖೋಡ ಅವರು  ಚಿತ್ರದ ಕುರಿತಂತೆ ಮಾತನಾಡಿದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಪುಷ್ಪ 2 ಆಡಿಯೋ ಹಕ್ಕು ಬರೋಬ್ಬರಿ 65 ಕೋಟಿಗೆ ಸೇಲ್

    ಪುಷ್ಪ 2 ಆಡಿಯೋ ಹಕ್ಕು ಬರೋಬ್ಬರಿ 65 ಕೋಟಿಗೆ ಸೇಲ್

    ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

    ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ. ಇದನ್ನೂ ಓದಿ:ಮಾಲ್ಡೀವ್ಸ್‌ನಲ್ಲಿ ಮಲಯಾಳಿ ಸುಂದರಿ ಪ್ರಿಯಾ

    ಈಗಾಗಲೇ ಪುಷ್ಪ 2 ಸಿನಿಮಾದ ಎರಡು ಹಂತದ ಚಿತ್ರೀಕರಣ ಮುಗಿದಿದೆ. ಚಿತ್ರದ ನಿರ್ಮಾಪಕರ ಹಾಗೂ ನಿರ್ದೇಶಕರ ಮನೆ, ಕಚೇರಿ ಮೇಲೆ ಐಟಿ ಮತ್ತು ಇಡಿ ದಾಳಿ ನಡೆದ ಬೆನ್ನಲ್ಲೇ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದೆ. ಇನ್ನೇನು ಸದ್ಯದಲ್ಲೇ ಮುಂದಿನ ಹಂತದ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಅಲ್ಲು ಅಭಿಮಾನಿಗಳಿಗೆ ಭಾರೀ ಮೊತ್ತಕ್ಕೆ ಆಡಿಯೋ ರೈಟ್ಸ್ ಸೇಲ್ ಆಗಿದ್ದು ಸಂಭ್ರಮ ತಂದಿದೆ.

  • ನಾನೇ ಮೋದಿ ನಾನೇ ದೇವ್ರು, ಮೋದಿ ಪಾದಿ ಯಾವ್ದೂ ಇಲ್ಲ – ಶಿವರಾಜ್ ಪಾಟೀಲ್ ಆಡಿಯೊ ವೈರಲ್

    ನಾನೇ ಮೋದಿ ನಾನೇ ದೇವ್ರು, ಮೋದಿ ಪಾದಿ ಯಾವ್ದೂ ಇಲ್ಲ – ಶಿವರಾಜ್ ಪಾಟೀಲ್ ಆಡಿಯೊ ವೈರಲ್

    ರಾಯಚೂರು: ಮೋದಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿರುವ ರಾಯಚೂರು (Raichur) ನಗರ ಬಿಜೆಪಿ ಶಾಸಕ (BJP MLA) ಡಾ. ಶಿವರಾಜ್ ಪಾಟೀಲ್ (Shivaraj Patil) ಆಡಿಯೋ (Audio) ಈಗ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಶಾಸಕರು ಮತ್ತೊಮ್ಮೆ ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಲ್ಲಿದ್ದಾರೆ.

    ಈಗ ಪ್ರಧಾನಿ ಮೋದಿ, ಶ್ರೀರಾಮುಲು ಬಗ್ಗೆ ಆಡಿರುವ ಮಾತುಗಳು ವೈರಲ್ ಆಗಿವೆ. ನಾನೇ ಮೋದಿ ನಾನೇ ದೇವರು. ಯಾವ ಮೋದಿ ಇಲ್ಲಾ ಪಾದಿ ಇಲ್ಲ. ನಾನು ಯಾರನ್ನೂ ಕೇರ್ ಮಾಡಲ್ಲ. ಸಿಂಗಲ್ ಮ್ಯಾನ್ ಆರ್ಮಿ ನಾನು. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನೂ ಕೂಡ ನಾನು ಕೇರ್ ಮಾಡಲ್ಲ ಎಂದಿರುವ ಶಿವರಾಜ್ ಪಾಟೀಲ್ ಸಂಭಾಷಣೆ ಆಡಿಯೋ ವೈರಲ್ ಆಗಿದೆ. ಏಮ್ಸ್ ಹೋರಾಟಗಾರ ಅಶೋಕ್ ಕುಮಾರ್ ಜೈನ್ ಜೊತೆ ಮಾತನಾಡಿದ್ದ 3 ನಿಮಿಷ 19 ಸೆಕೆಂಡುಗಳ ಆಡಿಯೋ ನಾಲ್ಕೂವರೆ ವರ್ಷದ ಬಳಿಕ ಈಗ ವೈರಲ್ ಆಗಿದೆ.

    ಸೋತರೂ ಚಿಂತೆಯಿಲ್ಲಾ, ಗೆದ್ದರೂ ಚಿಂತೆಯಿಲ್ಲಾ, ಎದ್ದರೂ ಚಿಂತೆಯಿಲ್ಲಾ, ಮಲ್ಕೊಂಡರೂ ಚಿಂತೆಯಿಲ್ಲಾ ನನಗೆ. ಚಿಂತೆಯಿಲ್ಲದಿರುವ ಮನುಷ್ಯ ನಾನು. ನಾನೇ ದೇವರು ಎಲ್ಲರೂ ನನ್ನ ಕಾಲಿಗೆ ನಮಸ್ಕಾರ ಮಾಡಬೇಕು. ನಾನು ಯಾರನ್ನೂ ಕೇರ್ ಮಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು

    ನನಗೆ ಯಾವ ರೈಟ್ ಇಲ್ಲಾ ಲೆಫ್ಟ್ ಇಲ್ಲಾ. ಸಿಂಗಲ್ ಮ್ಯಾನ್ ಆರ್ಮಿ ನಾನು. ನನ್ನ ಕೈ, ನನ್ನ ಕಾಲು, ಯಾವ ಮೋದಿ ಇಲ್ಲಾ, ಅವನ್ಯಾರು ಟ್ರಂಪ್ ಇಲ್ಲಾ. ಯಾವ ಬದನೆಕಾಯಿ ಸಹ ಕೇಳಂಗಿಲ್ಲ. ನಾನೇ ದೇವರು. ನಾನೇ ಎಲ್ಲಾ. ನಾನಿದ್ರೆ ಜಗತ್ತು. ಸೋಮಶೇಖರ್ ರೆಡ್ಡಿ, ಶ್ರೀರಾಮುಲು ಬಗ್ಗೆ ನನ್ನ ಮುಂದೆ ಹೇಳಿದ್ರೆ ಹೇಗೆ ಎಂದು ಮಾತನಾಡಿದ್ದಾರೆ.

    ಆಡಿಯೋ ವೈರಲ್ ಆಗಿರುವುದು ಬಿಜೆಪಿ ಪಾಳಯದಲ್ಲಿ ಇರುಸುಮುರುಸಿಗೆ ಕಾರಣವಾಗಿದ್ದರೆ, ಸಾರ್ವಜನಿಕ ವಲಯದಲ್ಲಿ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ – ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು