ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಚರ್ಚಾಸ್ಪದ ಧ್ವನಿ ಸುರುಳಿ ಒಂದು ಕುಚೋದ್ಯ, ಸುಳ್ಳು ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಕುಂದಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ನಳಿನ್ ಕುಮಾರ್ ಕಟೀಲ್ ಸಂಘಟನೆಯಿಂದ ಬಂದವರು. ಸಂಘಟನೆಯ ಸೂತ್ರವನ್ನು ತಿಳಿದಿರುವವರು. ರಾಜ್ಯಾಧ್ಯಕ್ಷ ಕಟೀಲ್ ಬಹಳ ಸೂಕ್ಷ್ಮಮತಿಗಳು. ನನಗೆ ಧ್ವನಿಸುರುಳಿ ಬಗ್ಗೆಯೇ ಸಂಶಯವಿದೆ. ಮೊದಲು ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು.
ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿಗಳಲ್ಲಿ ನಾನು ಆಗ್ರಹಿಸುತ್ತಿದ್ದೇನೆ. ನಳಿನ್ ಕುಮಾರ್ ಕಟೀಲ್ ಅವರ ಸ್ವರಭಾರ ಇದಲ್ಲ. ಹಾಗಾಗಿ ನಾನು ಧ್ವನಿಸುರುಳಿಯ ಬಗ್ಗೆ ನನಗೆ ಸಂಶಯವಿದೆ. ಮೊದಲು ತನಿಖೆಯಾಗಲಿ ಎಂದಿದ್ದಾರೆ.
ಮಂಗಳೂರು: ಯಡಿಯೂರಪ್ಪನವರು ನಮ್ಮ ಪಕ್ಷದ ಆತ್ಮವಿದ್ದಂತೆ, ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಕಮಲ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆಡಿಯೋದಲ್ಲಿ ಈಗಾಗಲೇ ಮೂವರ ಹೆಸರು ಅಂತಿಮ ರೇಸ್ ನಲ್ಲಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಇಂದೇ ನಾನು ಮುಖ್ಯಮಂತ್ರಿಗಳಿಗೆ ಈ ಬಗ್ಗೆ ತನಿಖೆ ಆಗಬೇಕೆಂದು ಪತ್ರ ಬರೆಯುತ್ತೇನೆ. ಸತ್ಯ ಅಸತ್ಯತೆಗಳು ತನಿಖೆಯಿಂದಲೇ ಹೊರಬರಲಿ. ರಾಜಕಾರಣದಲ್ಲಿ ಈ ರೀತಿಯ ಅನೇಕ ಪ್ರಕರಣಗಳು ಈ ಹಿಂದೆ ಕೂಡ ಆಗಿದ್ದವು. ಇದು ಸರಿಯಲ್ಲ ಹಾಗಾಗಿ ತನಿಖೆಯಾಗಲಿ ಎಂದು ಹೇಳಿದ್ದಾರೆ.
ನಮ್ಮಲ್ಲಿ ನಾಯಕತ್ವ ಆಗಲಿ ಬೇರೆ ಯಾವುದೇ ಬದಲಾವಣೆಯ ಚರ್ಚೆಗಳೇ ಇಲ್ಲ. ಈ ವಿಷಯ ಅಪ್ರಸ್ತುತ. ನಮ್ಮ ಪಾರ್ಟಿಯ ಆತ್ಮ ಯಡಿಯೂರಪ್ಪನವರು, ಹತ್ತಾರು ವರ್ಷ ಹೋರಾಟ ಮಾಡಿ ನಮ್ಮ ಪಾರ್ಟಿಯನ್ನು ಇಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ, ಅವರೆಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ನಮ್ಮ ಪಾರ್ಟಿ, ಸರ್ಕಾರ ನಡೆಯುತ್ತಿದೆ. ಹಾಗಾಗಿ ಇಂತಹ ಯಾವುದೇ ಮಾತುಕತೆಗಳು ನಮ್ಮ ಪಾರ್ಟಿಯಲ್ಲಿ ಎಲ್ಲೂ ಚರ್ಚೆ ನಡೆದಿಲ್ಲ. ಹಾಗಾಗಿ ತನಿಖೆಯ ನಂತರ ಇದರ ಸತ್ಯ ಬಹಿರಂಗವಾಗಲಿ ಎಂದಿದ್ದಾರೆ.
ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಪಬ್ಲಿಕ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.
ಹೇಳಿಕೆಯಲ್ಲಿ ಏನಿದೆ?
ನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವಾಗಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದ್ದು, ಸಿಎಂ ಬದಲಾವಣೆ ಫಿಕ್ಸ್ ಎನ್ನುವಂತಾಗಿದೆ.
ತುಳುವಿನಲ್ಲಿ ವ್ಯಕ್ತಿಯೊಬ್ಬರ ಜೊತೆ ಕಟೀಲ್ ಮಾತನಾಡಿದ್ದು, ಈ ಸಂಭಾಷಣೆಯಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ ಎಂದು ತಮ್ಮ ಆಪ್ತರೊಬ್ಬರ ಬಳಿ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ.
ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಚಾನ್ಸ್ ಇದೆ ಎಂದು ಹೇಳಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮೂಲಕ ನಾಯಕತ್ವ ಬದಲಾವಣೆಗೆ ಸುಳಿವು ಸಿಕ್ಕಂತಾಗಿದ್ದು, ಅವರದ್ದೇ ಧ್ವನಿ ಆಗಿದ್ರೆ ನಳಿನ್ ಕುಮಾರ್ ಕಟೀಲ್ ಸಿಕ್ಕಿಬಿದ್ರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಇಷ್ಟು ದಿನ ಸಿಗದಿದ್ದ ಕಟೀಲ್ ಈಗ ಸಿಕ್ಕಿ ಬೀಳ್ತಾರಾ? ನಾಯಕತ್ವ ಬದಲಾವಣೆ ಬಗ್ಗೆ ಅಧಿಕೃತಗೊಳ್ಳುವ ಮುನ್ನ ಮುನ್ಸೂಚನೆ ಕೊಟ್ರಾ ಕಟೀಲ್? ಹೈಕಮಾಂಡ್ ನಿಂದ ಅಧಿಕೃತ ಆದೇಶ ಬರುವ ಮುನ್ನ ಆಪ್ತರ ಬಳಿ ಕಟೀಲ್ ಬಾಯಿ ಬಿಟ್ಬಿಟ್ರಾ ಎಂಬ ಪ್ರಶ್ನೆಗಳು ಎದ್ದಿದೆ.
ಬೆಂಗಳೂರು: ಪ್ರಾಪರ್ಟಿ ವಿಚಾರವಾಗಿ ನನಗೆ ಏನೂ ಗೊತ್ತಿಲ್ಲ. ಒಬ್ಬ ಏಟು ತಿಂದಿದ್ದಾನೆ ಅವನು ನೋವಿನಲ್ಲಿ ಇದ್ದಾನೆ. ಅವನ ಬಳಿ ಕ್ಷಮೆ ಕೇಳಿದರೆ ದರ್ಶನ್ ದೊಡ್ಡವರಾಗುತ್ತಿದ್ದರು. ಒಬ್ಬ ಸಾಮಾನ್ಯನಾದವನಿಗೆ ಹೊಡೆದು ನಾನು ಕ್ಷಮೆ ಕೇಳಲ್ಲ ಎನ್ನುತ್ತಿದ್ದಾರೆ. ಆ ವ್ಯಕ್ತಿ ಜೊತೆಗೆ ಕ್ಷಮೆ ಕೇಳಿ, ಆತನಿಗೆ ಸಹಾಯ ಮಾಡಬೇಕು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪಟ್ಟು ಹಿಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಮಾತನಾಡಿರುವ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಈ ರೀತಿ ಭಾಷೆಗಳನ್ನು ಸಾಕಷ್ಟು ಬಾರಿ ನಾನು ಕೇಳಿದ್ದೇನೆ. ಒಂದು ಸಂಸ್ಕøತಿ, ಸಂಸ್ಕಾರ ಇರುವವರು ಈ ರೀತಿ ಮಾತನಾಡುವುದಿಲ್ಲ. 25 ಕೋಟಿ ಹಗರಣದಲ್ಲಿ ಬಂದಂತಹ ಅರುಣಾ ಕುಮಾರಿಯನ್ನು ಯಾಕೆ ದರ್ಶನ್ ಅವರು ಮನೆಗೆ ಕರೆಸಿಕೊಂಡರು? ನಿಮಗೆ ಗೊತ್ತೆ ಇಲ್ಲ ಅಂದ್ರಲ್ಲ. ಯಾಕೆ ಕರೆಸಿಕೊಂಡಿದ್ದು? ಯಾವುದೇ ಒಬ್ಬ ನಟನ ಬಾಯಲ್ಲಿ ತಲೆ ಕತ್ತರಿಸುತ್ತೇನೆ. ತಲೆ ತೆಗಿತೀನಿ ಎನ್ನುವ ಮಾತು ಬರಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್
ನಾನು ತನಿಖಾ ತಂಡದೊಂದಿಗೆ ದರ್ಶನ್ ಅವರು ಮಾತನಾಡಿರುವ ಬಗ್ಗೆ ಮಾತನಾಡುತ್ತೇನೆ. ನಮ್ಮ ಚರ್ಚೆಯ ಬಗ್ಗೆ ನಾನು ತನಿಖಾ ತಂಡದೊಂದಿಗೆ ಚರ್ಚೆ ಮಾಡುತ್ತೇನೆ. ನನ್ನೊಂದಿಗೆ ಇರುವ ದಾಖಲೆಯನ್ನು ತನಿಖಾ ತಂಡದ ಮುಂದೆ ಇಡುತ್ತೇನೆ. ನಾನು ಯಾಕೆ ದರ್ಶನ್ ಮುಂದೆ ಇಡಬೇಕು? 6 ಕೋಟಿ ಕನ್ನಡಿಗರ ಮುಂದೆ ಯಾರು ಸರಿ, ಯಾರು ತಪ್ಪು ಎಂಬುದು ಮುಂದೆ ಗೊತ್ತಾಗಲಿದೆ. ಅದು ಅಷ್ಟೆ ಅಲ್ಲ. ಆ ಅನ್ಯಾಯವಾದ ವ್ಯಕ್ತಿಗೆ ಒಂದು ಪರಿಹಾರ ಸಿಗಬೇಕಿದೆ ಎಂದರು.
ಹೋಟೆಲಿನಲ್ಲಿ ನೀವು ಬಡವ ಸಪ್ಲೇಯರ್ ಗೆ ಹೊಡೆದ್ರೋ ಇಲ್ಲವೋ..?, ಅಂದು ನೀವು ಯಾರ ಜೊತೆಗಿದ್ರಿ..?, 25 ಕೋಟಿ ಡೀಲ್ ವಿಚಾರ ಸಂಬಂಧ ನೀವು ಅರುಣಾ ಕುಮಾರಿಯನ್ನು ಯಾಕೆ ತೋಟಕ್ಕೆ ಕರೆದ್ರಿ..?. ಮೊದಲು ನನ್ನ ಈ ಪ್ರಶ್ನೆಗಳಿಗೆ ಉತ್ತರ ನೀಡಿ. ಅಲ್ಲದೆ ಬಡವನಿಗೆ ಹೊಡೆದಿಲ್ಲ ಅಂದ್ರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ ಎಂದು ಚಾಲೆಂಜ್ ಹಾಕಿದ್ರು.
ದರ್ಶನ್ ವಿಚಲಿತರಾಗಿದ್ದಾರೆ. ಅವರು ಈ ಸಂದರ್ಭದಲ್ಲಿ ವಿಚಲಿತರಾಗಬೇಕಾಗಿಲ್ಲ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟರೆ ಸಾಕು. ಅವರು ಇಂದು ಬಳಸಿರುವ ಭಾಷೆ ಅವರ ಹಿನ್ನೆಲೆ ತೋರಿಸುತ್ತದೆ. ನಾನು ಅವರನ್ನು ಅನ್ ಎಜುಕೇಟೆಡ್ ಅಂತ ಹೇಳಿಲ್ಲ. ರಾಜ್ ಕುಮಾರ್ ನಡೆದು ಬಂದ ದಾರಿ, ಭಾಷೆ, ಸಿನಿಮಾ, ನಟನೆಯ ಬಗ್ಗೆ ಇರುವ ಕಾಳಜಿ ಇಡೀ ದೇಶಕ್ಕೆ ಗೊತ್ತಿದೆ ಎಂದರು. ಇದನ್ನೂ ಓದಿ: ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್
ಡಿಸ್ಟರ್ಬ್ ಆಗಿದ್ರೆ ಟ್ರೀಟ್ಮೆಂಟ್ ತಗೋಳಿ ದರ್ಶನ್ ಅವರೇ. ಆಡಿಯೋ, ವೀಡಿಯೋ ಸಾಕ್ಷ್ಯಗಳನ್ನು ಪೊಲೀಸರ ಮುಂದೆ ತೋರಿಸುತ್ತೇವೆ. ಇವರ ಮುಂದಿಡುವ ಅವಶ್ಯಕತೆ ಇಲ್ಲ. ಮಹಿಳೆಗೆ ಬೆದರಿಕೆ ಹಾಗೂ ಸಪ್ಲೇಯರ್ ಗೆ ಹೊಡೆದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು ಎಂದಾಗ ಇಷ್ಟೊಂದು ವಿಚಾರಗಳು ಹೊರ ಬಂದಿದೆ. ಇನ್ನೂ ಕೂಡ ಎಷ್ಟೊಂದು ವಿಚಾರಗಳು ಹೊರ ಬರುತ್ತವೆ ಎಂದು ದರ್ಶನ್ ಈಗಾಗಲೇ ವಿಚಲಿತರಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.
ಗದಗ: ಸಮಸ್ಯೆ ಹೇಳಿಕೊಂಡು ಫೋನ್ ಮಾಡಿದ ಜಿಲ್ಲೆಯ ಸವಡಿ ಗ್ರಾಮ ಪಂಚಾಯತಿ ಸದಸ್ಯರಿಗೆ ಸಚಿವ ವಿ.ಸೋಮಣ್ಣ ಖಾರವಾಗಿ ಮಾತನಾಡಿದ್ದಾರೆ. ಗ್ರಾಮ ಪಂಚಾಯತ್ ಮೇಂಬರ್ ಆದರೆ ನೀನೇನು ದೇವ್ರೆನಪ್ಪ ಅಂತಾ ಸಿಟ್ಟಿನಲ್ಲಿ ಉತ್ತರಿಸಿದ್ದಾರೆ.
ಸವಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ನೂರಾರು ಮನೆಗಳು ನಿರ್ಮಾಣವಾಗುತ್ತಿವೆ. ಅವುಗಳಿಗೆ 3 ಹಂತದಲ್ಲಿ ಬಿಲ್ ಆಗಬೇಕು. ಮನೆಗಳು ಪೂರ್ಣ ಹಂತಕ್ಕೆ ಬಂದರೂ ಬಿಲ್ ಆಗಿರಲಿಲ್ಲ. ಈ ಬಗ್ಗೆ ಫಲಾನುಭವಿಗಳು ಗ್ರಾಮ ಪಂಚಾಯತ್ ಸದಸ್ಯರನ್ನು ಪದೇ ಪದೇ ಕೇಳುತ್ತಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರದ್ದಾಗಿದೆ. ಕೋವಿಡ್ ನೆಪದಲ್ಲಿ ಅಧಿಕಾರಿಗಳು ಇತರೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ಕೊಡುತ್ತಿಲ್ಲ. ಮನೆಗಳ ಬಿಲ್ ಬಗ್ಗೆ ಕೇಳಲು ಹೋದರೆ, ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ.
ಇದರಿಂದ ಗ್ರಾಮ ಪಂಚಾಯತಿ ಸದಸ್ಯ ಮೊಹ್ಮದ್ ರಫಿಕ್ ಕರ್ನಾಚಿ ಎಂಬವರು ಸಚಿವ ಸೋಮಣ್ಣ ಅವರಿಗೆ ಫೋನ್ ಮಾಡಿದ್ದಾರೆ. ಆರಂಭದಲ್ಲಿ ಚೆನ್ನಾಗಿಯೇ ಮಾತಾಡಿದ ಸಚಿವರು, ನಾನು ಗ್ರಾಮ ಪಂಚಾಯತಿ ಸದಸ್ಯ ಅಂತಾ ಮೊಹ್ಮದ್ ಹೇಳಿದ ಕೂಡಲೇ ಗರಂ ಆಗಿ, ಮೇಂಬರ್ ಆದರೆ ನೀನೇನು ದೇವ್ರಾ ಅಂತಾ ಗದರಿ, ಬಿಲ್ ಬರಲಿಲ್ಲ ಅಂದರೆ ಪಿಡಿಓ ಕೇಳುತ್ತಾರೆ. ನೀನಲ್ಲಾ, ಫೋನ್ ಪಿಡಿಓ ಕೈನಲ್ಲಿ ಕೊಡು ಅಂತಾ ಏಕವಚನದಲ್ಲಿಯೇ ಮಾತಾನಾಡಿದ್ದಾರೆ.
ನಾವು ಯಾವುದನ್ನು ಪೆಂಡಿಂಗ್ ಇಟ್ಟುಕೊಂಡಿಲ್ಲ. ಎಲ್ಲಾ ಕೆಲಸ ಮಾಡುತ್ತಿದ್ದೇವೆ. ಪಿಡಿಓಗೆ ಫೋನ್ ಕೊಡು ಅಂದಿದ್ದಾರೆ. ಪಿಡಿಓ ಅವರು ಸರಿಯಾಗಿ ಬರುತ್ತಿಲ್ಲ ಅಂದ ಕೂಡಲೇ, ಅದೇನಿದೆ ರಿಪೋರ್ಟ್ ಹಾಕು ತನಿಖೆ ಮಾಡಿಸುತ್ತೇನೆ ಎಂದು ಗರಂ ಮಾತುಗಳನ್ನಾಡಿದರು. ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ. ಸಂಕಷ್ಟದಲ್ಲಿರುವ ಜನರ ಪರವಾಗಿ ನಿಂತ ಗ್ರಾಮ ಪಂಚಾಯತ್ ಸದಸ್ಯನಿಗೆ ಸಚಿವರು ಹೀಗೆ ಮಾತಾನಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ. ಇದನ್ನೂ ಓದಿ: ಉರುಳಾದ ಜೋಕಾಲಿ – ಕ್ಷಣಾರ್ಧದಲ್ಲಿ ಹೋಯ್ತು ಬಾಲಕನ ಜೀವ
ಮುಂಬೈ: ಪ್ರಯಾಣಿಕರ ಸುರಕ್ಷತೆಯ ನಿಟ್ಟಿನಲ್ಲಿ ಮುಂಬೈನ ಸ್ಥಳೀಯ ರೈಲುಗಳಲ್ಲಿ ಆಡಿಯೋ ಮತ್ತು ವೀಡಿಯೋ ರೆಕಾರ್ಡ್ ವ್ಯವಸ್ಥೆಯನ್ನು ಅಳವಡಿಸುವುದಾಗಿ ಪಶ್ಚಿಮ ರೈಲ್ವೆ ಘೋಷಿಸಿದೆ.
ಇತ್ತೀಚೆಗಷ್ಟೇ 2021ರ ಕೇಂದ್ರ ಬಜೆಟ್ ನಡೆದಿದ್ದು, ಈ ವೇಳೆ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ 1.10 ಲಕ್ಷ ಹಣ ಘೋಷಿಸಿದ್ದಾರೆ. ಈ ಹಿನ್ನೆಲೆ ಇದೀಗ 110 ಮುಂಬೈ ಸ್ಥಳೀಯ ರೈಲುಗಳಲ್ಲಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ವ್ಯವಸ್ಥೆಯನ್ನು ಅಳವಡಿಸಲು ಪಶ್ಚಿಮ ರೈಲ್ವೆ ಇಲಾಖೆ ಮುಂದಾಗಿದೆ.
ರೈಲಿನಲ್ಲಿ ಮೋಟಾರ್ ಮ್ಯಾನ್ ಹಾಗೂ ಗಾರ್ಡ್‍ಗಳ ಕ್ಯಾಬಿನ್ ಬಳಿ ಹೊರಗೆ ಮತ್ತು ಒಳಗೆ ಆಡಿಯೋ, ವೀಡಿಯೋ ರೆಕಾರ್ಡಿಂಗ್ ವ್ಯವಸ್ಥೆಯ ಕ್ಯಾಮೆರಾವನ್ನು ಫಿಕ್ಸ್ ಮಾಡಲಾಗುತ್ತದೆ. ಹೀಗೆ ಒಟ್ಟಾರೆಯಾಗಿ 110 ರೈಲುಗಳಲ್ಲಿ ಆಡಿಯೋ ಮತ್ತು ವೀಡಿಯೋ ರೆಕಾರ್ಡಿಂಗ್ ವ್ಯವಸ್ಥೆಗೊಳಿಸಲಾಗುತ್ತಿದೆ.
ಈ ಕ್ರಮದ ಮೂಲಕ ರೈಲ್ವೆ, ಸ್ಥಳೀಯ ರೈಲುಗಳ ಕಾರ್ಯಾಚರಣೆ ಅಂದರೆ ಚಾಲಕರು ಹಾಗೂ ಗಾರ್ಡ್‍ಗಳ ಕಾರ್ಯನಿರ್ವಹಿಸುವ ರೀತಿ, ರೈಲಿನ ವೇಗದ ನಿರ್ಬಂಧ, ರೈಲ್ವೆ ಅಪಘಾತ ಇತರ ವಿಚಾರಗಳ ತಿಳಿದುಕೊಳ್ಳುವ ಗುರಿ ಹೊಂದಿದೆ. ಜೊತೆಗೆ ಈ ವ್ಯವಸ್ಥೆಯಿಂದ ಪ್ರಯಾಣಿಕರ ಸುರಕ್ಷತೆಯನ್ನು ತಿಳಿಯಲು ಸಹಾಯಕವಾಗಿದೆ ಎಂದು ಡಬ್ಲ್ಯೂ ಆರ್ ಮುಖ್ಯ ಜನಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಹೇಳಿದ್ದಾರೆ.
ಮಂಗಳೂರು: ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಆರೋಪಿ ಸತೀಶ್ ಕುಲಾಲ್ ಎಂಬಾತ ಪೊಲೀಸರಿಗೆ ಆಡಿಯೋ ಕಳುಹಿಸಿದ್ದಾನೆ. ಆಡಿಯೋದಲ್ಲಿ ಸುರೇಂದ್ರನನ್ನ ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ
ಆಡಿಯೋದಲ್ಲಿ ಏನಿದೆ?
ನಮಸ್ತೆ ನಾನು ಸತೀಶ್ ಮಾತನಾಡೋದು. ನಿನ್ನೆ ರಾತ್ರಿ ವಸ್ತಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರನ ಹತ್ಯೆಯಾಗಿದೆ. ಇದನ್ನು ನಾನೇ ಮಾಡಿದ್ದು. ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ. ಸುರೇಂದ್ರ ಬಡ್ಡಿ ವ್ಯವಹಾರ ಮಾಡಿ ಇಂತಹ ಪಾಪದ ಜನರ ಸಾವಿಗೆ ಉಪಯೋಗಿಸುತ್ತಿದ್ದ. ನಾನು 22 ವರ್ಷದಿಂದ ಸುರೇಂದ್ರನ ಒಟ್ಟಿಗೆ ಇದ್ದವನು. ಅವನ ಎಲ್ಲ ಅವ್ಯವಹಾರಗಳು ಗೊತ್ತಿತ್ತು. ಮೊನ್ನೆ ನಡೆದ ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿದ್ದ ವಿಷಯ ನನಗೆ ತಿಳಿದಿತ್ತು.
ನಾನು ಅವನ ಹತ್ತಿರ ಹೇಳಿದ್ದೆ. ನೀನು ತಪ್ಪು ಮಾಡ್ತಾ ಇದ್ದೀಯ ಸುರೇಂದ್ರ. ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತಾ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೊಂದು ದಿನ ಅವರಿಗೆ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಇದನ್ನೂ ಓದಿ:ಹಾಡಹಗಲೇ ಕಿಶನ್ ಹೆಗ್ಡೆ ಕತ್ತು ಕತ್ತರಿಸಿ ಬರ್ಬರ ಕೊಲೆ
ಈ ವಿಚಾರದಲ್ಲಿ ನಾನು ಕಿಶನ್ ಜೊತೆ ಇದ್ದ ನನ್ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಇವನು ಇದೇ ರೀತಿ ಇದ್ದರೆ ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ನಾವು ಈ ಕೊಲೆ ಮಾಡಿದ್ದೇವೆ. ನಾವೀಗ ಕಾರವಾರದಲ್ಲಿದ್ದೇವೆ. ನಮಗೆ ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. ಇನ್ನೊಂದೆರಡು ದಿವಸದಲ್ಲಿ ಪೊಲೀಸರಿಗೆ ಶರಣಾಗತ್ತೇವೆ ಎಂದು ಸತೀಶ್ ಹೇಳಿದ್ದಾನೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಸುರೇಂದ್ರ ಅವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಕಳೆದ 2018ರ ಜೂನ್‍ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಸುರೇಂದ್ರ ಹೊರಬಂದಿದ್ದರು.
ನವದೆಹಲಿ: ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಡಿದ್ದ ಆಡಿಯೋವನ್ನೇ ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ ಹೋರಾಟ ಅರ್ಧ ಠುಸ್, ಅರ್ಧ ಸಕ್ಸಸ್ ಆಗಿದೆ.
ಬಿಎಸ್‌ವೈ ಆಡಿಯೋವನ್ನು ಸಾಕ್ಷ್ಯವನ್ನಾಗಿ ಪರಿಗಣಿಸಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ.ಎನ್.ವಿ.ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ಪೀಠದಲ್ಲಿ ಇತ್ಯರ್ಥಗೊಂಡಿದ್ದು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.
ಈಗಾಗಲೇ ವಾದ-ಪ್ರತಿವಾದ ಮುಗಿದಿರುವ ಕಾರಣ ಬಿಎಸ್‌ವೈ ಆಡಿಯೋ ಬಗ್ಗೆ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಪ್ರತಿವಾದಿಯನ್ನಾಗಿಯೂ ಪರಿಗಣಿಸಲು ಆಗುವುದಿಲ್ಲ. ಆದರೆ ಆದೇಶ ನೀಡುವಾಗ ಆಡಿಯೋವನ್ನು ಸಾಕ್ಷ್ಯವನ್ನಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸುಪ್ರೀಂಕೋರ್ಟಿನ ಈ ಆದೇಶದಿಂದಾಗಿ ಅನರ್ಹರ ಕೇಸು ಒಂದೆರಡು ದಿನಗಳಲ್ಲಿ ಇತ್ಯರ್ಥವಾಗುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್, ಅನರ್ಹರು ಮುಂಬೈಗೆ ತೆರಳುವ ಹಿಂದೆ ಬಿಜೆಪಿ ವರಿಷ್ಠರ ಕೈವಾಡ ಇರುವುದನ್ನು ಹುಬ್ಬಳ್ಳಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸತ್ಯ ಒಪ್ಪಿಕೊಂಡಿದ್ದಾರೆ. ಹೀಗಾಗಿ ಆಡಿಯೋವನ್ನು ಸಾಕ್ಷಿಯನ್ನಾಗಿ ಕೋರ್ಟ್ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಕಪಿಲ್ ಸಿಬಲ್ ಅವರ ವಾದವನ್ನು ಜೆಡಿಎಸ್ ಪರ ವಕೀಲರಾದ ರಾಜೀವ್ ಧವನ್ ಬೆಂಬಲಿಸಿದರು.
ನ್ಯಾ. ರಮಣ ಹೇಳಿದ್ದೇನು?
ಈ ಆಡಿಯೋದಲ್ಲಿ ಹೊಸದಾಗಿ ಏನಿದೆ ಎಂದು ಪ್ರಶ್ನಿಸಿದ ನ್ಯಾಯಾಧೀಶರು ಸ್ಪೀಕರ್ ಪರ ವಾದದ ವೇಳೆ ಈ ಅಂಶಗಳು ಇತ್ತಲ್ಲವೇ? ನಾವು ಈಗಾಗಲೇ ಎಲ್ಲ ಅಂಶಗಳನ್ನು ಪರಿಗಣಿಸಿದ್ದೇವೆ. ಈಗಾಗಲೇ ವಾದ, ಪ್ರತಿವಾದ ಪೂರ್ಣಗೊಂಡಿದೆ. ಆಡಿಯೋ ಸಂಬಧ ನೋಟಿಸ್ ಸಾಧ್ಯವೇ ಇಲ್ಲ. ನೋಟಿಸ್ ಕೊಟ್ಟರೆ ಆದೇಶ ವಿಳಂಬವಾಗಲಿದೆ. ಆದೇಶದ ವೇಳೆ ಸಾಕ್ಷಿಯಾಗಿ ಆಡಿಯೋ ಪರಿಗಣಿಸುತ್ತೇವೆ ಎನ್ನುವ ವಿಚಾರವನ್ನು ಅರ್ಜಿದಾರರ ಗಮನಕ್ಕೆ ತಂದರು.
ಸುಪ್ರೀಂನಲ್ಲಿ ಮುಂದೆ ಏನಾಗಬಹುದು?
ಅನರ್ಹ ಶಾಸಕರ ಬಗ್ಗೆ ಸಿಎಂ ಮಾತನಾಡಿದ್ದ ಆಡಿಯೋವನ್ನು ಸುಪ್ರೀಂಕೋರ್ಟ್ ಸಾಕ್ಷಿಯನ್ನಾಗಿ ಪರಿಗಣಿಸಿದ ಪರಿಣಾಮ ಅನರ್ಹರಿಗೆ ಟೆನ್ಷನ್ ಶುರುವಾಗಿದೆ. ಸುಪ್ರೀಂಕೋರ್ಟ್ ಏನ್ ತೀರ್ಪು ನೀಡಬಹುದೋ ಏನೋ ಅಂತ ಆತಂಕಕ್ಕೆ ಒಳಗಾಗಿದ್ದಾರೆ.
ಸಾಧ್ಯತೆ 1 – ಒಂದೆರಡು ದಿನಗಳಲ್ಲಿ ತೀರ್ಪು ಬರಬಹುದು ಸಾಧ್ಯತೆ 2 – ಅನರ್ಹರಿಗೆ ಬೈಎಲೆಕ್ಷನ್ ಸ್ಪರ್ಧೆಗೆ ಅವಕಾಶ ಕೊಡಬಹುದು ಸಾಧ್ಯತೆ 3 – ಸ್ಪೀಕರ್ ಕಚೇರಿಗೆ ಅರ್ಜಿಗಳನ್ನು ವಾಪಸ್ ಕಳುಹಿಸಬಹುದು ಸಾಧ್ಯತೆ 4 – ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಯಬಹುದು
ಕಾಂಗ್ರೆಸ್ಸಿಗೆ ಜಯವೋ? ಹಿನ್ನಡೆಯೋ?
– ಸಿಎಂ ಆಡಿಯೋ ಬಗ್ಗೆ ತನಿಖೆಗೆ ಆದೇಶಿಸಿಲ್ಲ – ಇದು ಹಿನ್ನಡೆ
– ಸಿಎಂ ಆಡಿಯೋ ಬಗ್ಗೆ ವಿಚಾರಣೆಯೂ ಇಲ್ಲ – ಇದು ಹಿನ್ನಡೆ
– ಅನರ್ಹರ ಆದೇಶ ಕೂಡ ವಿಳಂಬವಿಲ್ಲ – ಇದು ಹಿನ್ನಡೆ
– ಸಿಎಂ ಆಡಿಯೋ ಸಾಕ್ಷ್ಯವಾಗಿಯಷ್ಟೇ ಪರಿಗಣನೆ – ಸ್ವಲ್ಪ ಜಯ
ದಾವಣಗೆರೆ: ವೈರಲ್ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಎನ್ನಲಾದ ಆಡಿಯೋ ನಕಲಿ ಆಗಿರುವ ಸಾಧ್ಯತೆ ಹೆಚ್ಚಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರದ್ದು ಎಂದು ಹೇಳಲಾಗುವ ಆಡಿಯೋ ನಕಲಿ ಆಗಿರುವ ಸಾದ್ಯತೆ ಹೆಚ್ಚಿದೆ. ಯಾರೋ ಈ ಅಡಿಯೋ ಸೃಷ್ಠಿಸಿ ಯಡಿಯೂರಪ್ಪನವರದ್ದು ಎಂದು ಹರಿಬಿಟ್ಟಿದ್ದಾರೆ. ಈಗಾಗಲೇ ಆಡಿಯೋ ಬಗ್ಗೆ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಇದು ನಕಲಿ ಆಡಿಯೋ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಯಡಿಯೂರಪ್ಪನವರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ತೋರಿಸುತ್ತಿರುವ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಉತ್ತಮ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಕಾರಣ ಕಾಂಗ್ರೆಸ್-ಬಿಜೆಪಿ ಎರಡು ಪಕ್ಷಗಳ ಜೊತೆ ಸಮ್ಮಿಶ್ರ ಸರ್ಕಾರ ಮಾಡಿದ್ದಾರೆ. ಈ ವೇಳೆ ಬಿಜೆಪಿ ಜೊತೆ ಸರ್ಕಾರ ಮಾಡಿದ್ದು ಅವರಿಗೆ ಒಳ್ಳೆಯದೆನಿಸಿರಬಹುದು. ಹೀಗಾಗಿ ಬಿಜೆಪಿ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಉತ್ತರಿಸಿದರು.
ಇದೇ ವೇಳೆ ಸರ್ಕಾರಕ್ಕೆ ಯಾವುದೇ ಸಂಕಷ್ಟ ಇಲ್ಲ. ಅವಧಿ ಪೂರ್ಣಗೊಳಿಸುತ್ತೇವೆ, ಸರ್ಕಾರಕ್ಕೆ ಆತಂಕ ಇರುವ ಪ್ರಶ್ನೆಯೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.