Tag: August 15

  • ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

    ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

    ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
    ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಕರ್ನಾಟಕದ 4 ಮತಗಳು ತಿರಸ್ಕೃತ

    Live Tv
    [brid partner=56869869 player=32851 video=960834 autoplay=true]

  • ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ನ್ನಡ ಸಿನಿಮಾ ರಂಗದ ಹಲವು ತಾರೆಯರಿಗೆ ಸಿಂಹಸ್ವಪ್ನವಾಗಿರುವ, ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಇದೀಗ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಆಗಸ್ಟ್ 15ರ ಹಿನ್ನೆಲೆಯಾಗಿಟ್ಟುಕೊಂಡು ಅವರು ಸಿನಿಮಾ ಮಾಡುತ್ತಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ  ಅವರು, ‘ಇದೊಂದು ದೇಶಬಿಟ್ಟು ಹೋದವರ ಕಥೆಯನ್ನು ಹೇಳಲು ಹೊರಟಿದ್ದೇವೆ. ಸ್ವಾತಂತ್ರ್ಯ ದಿನದ ಎರಡು ದಿನದ ಮುಂಚೆ ಭಾರತದಲ್ಲಿ ನಡೆದ ಮಹತ್ವದ ಘಟನೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 13, 14 ಮತ್ತು 15 ಹೀಗೆ ಮೂರು ದಿನಗಳಲ್ಲಿ ನಡೆಯುವಂತಹ ಸಿನಿಮಾ ಇದಾಗಿದೆ’ ಎಂದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಇದೊಂದು ಪ್ಯಾನ್ ಇಂಡಿಯಾ ಮಾದರಿಯ ಚಿತ್ರವಾಗಿದ್ದರಿಂದ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾ ರಂಗದ ಕಲಾವಿದರು ಈ ಚಿತ್ರದಲ್ಲಿ ಇರಲಿದ್ದಾರೆ. ಸದ್ದಿಲ್ಲದೇ ಶೇ.90ರಷ್ಟು ಭಾಗದ ಚಿತ್ರೀಕರಣ ಕೂಡ ನಡೆದಿದೆಯಂತೆ. “ಈ ಸಿನಿಮಾವನ್ನು ಒಟ್ಟು 12 ಭಾಷೆಗಳಲ್ಲಿ ತಯಾರಿಸುತ್ತಿದ್ದೇವೆ. ಚೈನೀಸ್ ಭಾಷೆಗೂ ಅದನ್ನು ಡಬ್ ಮಾಡುವ ಆಲೋಚನೆ ಹೊಂದಿದ್ದೇವೆ. ಭಾರೀ ಬಜೆಟ್ ನಲ್ಲೇ ಈ ಸಿನಿಮಾ ಶುರುವಾಗಲಿದೆ. ಹಾಗಂತ ಇದು ದಿ ಕಾಶ್ಮೀರ್ ಫೈಲ್ಸ್ ಮಾದರಿಯ ಚಿತ್ರವಲ್ಲ. ಮನರಂಜನೆಯ ಜತೆ ಜತೆಗೆ ಒಂದು ನಿಜ ಸಂಗತಿಯನ್ನು ಈ ಸಿನಿಮಾದ ಮೂಲಕ ಬಯಲು ಮಾಡುತ್ತಿದ್ದೇವೆ’ ಎನ್ನುವುದು ಪ್ರಶಾಂತ್ ಸಂಬರಗಿ ಮಾತು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ‘ಕೇರಾಫ್ ಫುಟ್ ಪಾತ್’ ಚಿತ್ರ ಖ್ಯಾತಿಯ ಕಿಶನ್ ಮತ್ತು ಅವರ ತಂದೆ ಶ್ರೀಕಾಂತ್ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಟೀನೇಟ್ ಸಿನಿಮಾದ ನಂತರ ಬರುತ್ತಿರುವ ಇವರ ಚಿತ್ರ ಇದಾಗಿದೆ. ಸಿನಿಮಾದ ಕಲಾವಿದರ ಮತ್ತು ತಂತ್ರಜ್ಞರ ವಿವರವನ್ನು ಸದ್ಯಕ್ಕೆ ಬಹಿರಂಗ ಪಡಿಸಿಲ್ಲ ಚಿತ್ರತಂಡ. ಬೇರೆ ರೀತಿಯಲ್ಲಿ ಅದನ್ನು ಲಾಂಚ್ ಮಾಡಬೇಕಾಗಿದ್ದರಿಂದ ಇದಷ್ಟೇ ಮಾಹಿತಿಯನ್ನು ಪ್ರಶಾಂತ್ ಸಂಬರಗಿ ನೀಡಿದ್ದಾರೆ.

  • ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ

    ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ

    – ಈ ಬಾರಿ ವಿದ್ಯಾರ್ಥಿಗಳ ಪೆರೇಡ್ ಇಲ್ಲ

    ನವದೆಹಲಿ: ಮಹಾಮಾರಿ ಕೋವಿಡ್-19 ವಿರುದ್ಧ ಮೊದಲ ಸಾಲಿನಲ್ಲಿ ನಿಂತು ಹೋರಾಟ ನಡೆಸಿದ್ದ ಕೊರೊನಾ ವಾರಿಯರ್ಸ್‍ಗೆ ಈ ಬಾರಿಯ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಭಾಗವಹಿಸಲು ಅಹ್ವಾನ ನೀಡಲಾಗಿದ್ದು, ಆ ಮೂಲಕ ವೈದ್ಯರು, ಪೌರಕಾರ್ಮಿಕರು, ಪೊಲೀಸರು, ಇತರ ಅಧಿಕಾರಿಗಳಿಗೆ ವಿಶೇಷ ಗೌರವ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ವಿಶೇಷ ಸೇವೆ ಮಾಡಿದ್ದ ವಾರಿಯರ್ಸ್‍ಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಕೇಂದ್ರ ಸೂಚನೆ ನೀಡಿದೆ. ಅಲ್ಲದೇ ಕೊರೊನಾದಿಂದ ಗುಣಮುಖರಾದವರಿಗೂ ವಿಶೇಷ ಆಹ್ವಾನ ನೀಡುವಂತೆ ತಿಳಿಸಲಾಗಿದೆ.

    ಕೊರೊನಾ ಕಾರಣದಿಂದ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಕೇಂದ್ರ ಸರ್ಕಾರ ಮಾರ್ಗದರ್ಶನಗಳನ್ನು ಬಿಡುಗಡೆ ಮಾಡಿದೆ. ರಾಜ್ಯಗಳ ರಾಜಧಾನಿಗಳಲ್ಲಿ ಬೆಳಗ್ಗೆ 9 ಗಂಟೆಗೆ ಸಮಾರಂಭ ನಡೆಸಲು ಸೂಚಿಸಲಾಗಿದೆ. ವೈರಸ್ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸಮಾರಂಭಕ್ಕೆ ಆಹ್ವಾನ ನೀಡಬಾರದು. ಭಾರೀ ಸಂಖ್ಯೆಯಲ್ಲಿ ಜನರು ಸೇರುವುದನ್ನು ತಡೆಯುವಂತೆ ಸೂಚನೆ ನೀಡಲಾಗಿದೆ. ಉಳಿದಂತೆ ಕಾರ್ಯಕ್ರಮದಲ್ಲಿ ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ.

    ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳು ಇದೇ ನಿಯಮಗಳನ್ನು ಪಾಲನೆ ಮಾಡಲು ಸೂಚಿಸಲಾಗಿದೆ. ಉಳಿದಂತೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ನಿರ್ಧಾರ ಕೈಗೊಳ್ಳಲು ಗವರ್ನರ್ ಗಳಿಗೆ ಅವಕಾಶ ನೀಡಲಾಗಿದೆ. ಈ ಹಿಂದೆಯೇ ಕೊರೊನಾ ಯೋಧರಿಗೆ ಭಾರತ ಮೂರು ಸೇನೆಗಳು ಗೌರವ ಸೂಚಿಸಿ ವಾರಿಯರ್ಸ್ ಮೇಲೆ ಹೂ ಮಳೆ ಸುರಿಸಿತ್ತು. ನೇವಿ ಯುದ್ಧ ನೌಕೆಗಳ ಮೇಲೆ ದೀಪಗಳನ್ನು ಬೆಳಗಿಸಿ ಗೌರವ ಸೂಚಿಸಿತ್ತು.

  • ಸಂಪುಟ ವಿಸ್ತರಣೆ ವಿಳಂಬ – ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

    ಸಂಪುಟ ವಿಸ್ತರಣೆ ವಿಳಂಬ – ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ.

    ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಸುಮಾರು 72ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ. ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆ ಹಾಗೂ ಮನಪರಿವರ್ತನೆಗೊಂಡ ಖೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ.

    ಈ ಬಾರಿ ಗೃಹ ರಕ್ಷಕ ಇಲಾಖೆಯ ಬಿಡುಗಡೆ ಅರ್ಹತೆ ಪಡೆಯಬೇಕಾಗಿರುವ ಖೈದಿಗಳ ಪಟ್ಟಿ ಈಗಾಗಲೇ ಸಿದ್ಧ ಪಡಿಸಲಾಗಿದೆ. ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸಿಎಂ ಬಿಎಸ್‍ವೈ ಸರ್ಕಾರ ಅಧಿಕಾರಕ್ಕೆ ಬಂದು 15 ದಿನಗಳ ಮೇಲಾದರೂ ಕೂಡ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ ಸ್ವಾತಂತ್ರ್ಯೋತ್ಸವ ದಿನದಂದು ಸನ್ನಡತೆಯುಳ್ಳ ಖೈದಿಗಳ ಬಿಡುಗಡೆಗೆ ಬ್ರೇಕ್ ಬಿದ್ದಿದೆ.