Tag: Australia tour

  • 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್‌ ಆಟಗಾರ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ (Rohit Sharma). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್‌ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್‌ ಲೋಕದ ಕಿಂಗ್‌ ಆಗಿ ಮೆರೆದಾಡಿದ ವಿರಾಟ್‌ ಕೊಹ್ಲಿ (Virat kohli) ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.

    ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ (Cricket) ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್‌ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್‌ 23ರಂದು ಐರ್ಲೆಂಡ್‌ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ರೋಹಿತ್‌ ಸಾಧನೆ
    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್‌ ಕ್ಯಾಪ್ಟನ್‌ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್‌, 2025ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌, ವಿರಾಟ್‌ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಯುವ ಆಟಾರ ಶುಭಮನ್‌ ಗಿಲ್ ಅವರಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಆದರೆ ರೋಹಿತ್‌ ಶರ್ಮಾ ಅವರಿಂದ ನಾಯಕತ್ವ ಕಸಿದುಕೊಂಡಿರುವ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅವರ ಅಭಿಮಾನಿಗಳು ಕೆರಳಿದ್ದಾರೆ. ಈ ಮಧ್ಯೆ ಮಾಜಿ ಇಂಗ್ಲೆಂಡ್‌ ಆಟಗಾರ ಡೇವಿಡ್‌ ಗೋವರ್‌ ಅವರು, ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರು 2027ರ ಏಕದಿನ ವಿಶ್ವಕಪ್‌ ಹೊತ್ತಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.‌  

    ಡೇವಿಡ್‌ ಗೋವರ್‌ ಹೇಳಿದ್ದೇನು?
    ರೋ-ಕೊ (ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ) ಖ್ಯಾತಿಯ ಇಬ್ಬರು ಅನುಭವಿ ಆಟಗಾರರು 2027ರ ವಿಶ್ವಕಪ್‌ ಆಡುವುದಿಲ್ಲ. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಅಜಿತ್‌ ಅಗರ್ಕರ್‌ ಸಮರ್ಥನೆ
    ಇನ್ನೂ ಏಕದಿನ ಕ್ರಿಕೆಟ್‌ ಕ್ಯಾಪ್ಟನ್‌ ಆಗಿ ಶುಭಮನ್‌ ಗಿಲ್‌ ಅಯ್ಕೆಯನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಸಮರ್ಥಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಆಸೀಸ್‌ ಸರಣಿ ಬಳಿಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರ ಒಂದು ಯುಗ ಅಂತ್ಯವಾಗಲಿದೆ ಎನ್ನೋದು ಕೋಟ್ಯಂತರ ಅಭಿಮಾನಿಗಳ ಬೇಸರ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

  • ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಮುಂಬೈ: ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.

    ಟಿ20 ಸರಣಿಗೆ ನಿರೀಕ್ಷೆಯಂತೆ ಸೂರ್ಯಕುಮಾರ್‌ ಯಾದವ್‌ ನಾಯಕನಾಗಿದ್ದಾರೆ. ಆದ್ರೆ ರೋಹಿತ್‌, ಕೊಹ್ಲಿ ತಂಡದಲ್ಲಿದ್ದರೂ ಏಕದಿನ ಕ್ರಿಕೆಟ್‌ಗೆ ನೂತನ ನಾಯಕನಾಗಿ ಶುಭಮನ್‌ ಗಿಲ್‌ ಅವರನ್ನ ಆಯ್ಕೆ ಮಾಡಿದೆ. ಹೀಗಾಗಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

    ಸರಣಿ ಬಳಿಕ ನಿವೃತ್ತಿ ಹೇಳ್ತಾರಾ ರೊ-ಕೊ?
    ಈಗಾಗಲೇ ಟೆಸ್ಟ್‌‌ ಹಾಗೂ ಟಿ20 ಕ್ರಿಕೆಟ್‌ಗೆ (T20 Cricket) ನಿವೃತ್ತಿ ಘೋಷಿಸಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಮೂಲಗಳ ಹೇಳುವಂತೆ, 2027ರ ಏಕದಿನ ವಿಶ್ವಕಪ್‌ ತಂಡದಲ್ಲಿ ಈ ಜೋಡಿ ಸ್ಥಾನ ಪಡೆಯುವುದು ಖಚಿತವಿಲ್ಲ. ಏಕೆಂದ್ರೆ ಈಗಾಗಲೇ ಇಬ್ಬರೂ ದಿಗ್ಗಜರು ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ವರ್ಷಗಳಲ್ಲಿ ಪಂದ್ಯದ ಸಮಯವೂ ಸೀಮಿತವಾಗಿರಲಿದೆ. ಹೀಗಾಗಿ ಭಾರತೀಯ ಕ್ರಿಕೆಟ್‌ (Indian Cricket) ನಿಯಂತ್ರಣ ಮಂಡಳಿ ಕೂಡ ಇವರಿಬ್ಬರ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಈ ಅಕ್ಟೋಬರ್‌ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಅತ್ಯಂತ ನಿರ್ಣಾಯಕವಾಗಿದೆ.

    ರೋಹಿತ್‌ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ (World Cup 2027) ರೇಸ್‌ನಲ್ಲಿ ಉಳಿಯಬೇಕಾದ್ರೆ ಈ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಲಿರುವ ದೇಸಿ ಕ್ರಿಕೆಟ್‌ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಬೇಕಾಗುತ್ತೆ. ಇಲ್ಲದಿದ್ದರೆ, ಬಹುತೇಕ ಏಕದಿನ ಕ್ರಿಕೆಟ್‌ನಿಂದಲೂ ಔಟ್‌ ಆಗಲಿದ್ದಾರೆ. ಇದಕ್ಕೆ ವಯಸ್ಸಿನ ಮಿತಿಯೂ ಒಂದು ಕಾರಣವಾಗಿರಲಿದೆ.

    ಅಯ್ಯರ್‌ ಕಂಬ್ಯಾಕ್‌
    ಇನ್ನೂ ಏಷ್ಯಾಕಪ್‌ ಟೂರ್ನಿಯಿಂದ ಕಡೆಗಣಿಸಲ್ಪಟ್ಟಿದ್ದ ಶ್ರೇಯಸ್‌ ಅಯ್ಯರ್‌ಗೆ ಮುಂಬರುವ ಟೂರ್ನಿಗಳನ್ನ ಗಮನದಲ್ಲಿಟ್ಟಿಕೊಂಡು ಉಪನಾಯಕನ ಸ್ಥಾನ ನೀಡಲಾಗಿದೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಬಳಿಕ ಏಕದಿನ ಕ್ರಿಕೆಟ್‌ಗೆ ಕನ್ನಡಿಗ ಕೆ.ಎಲ್‌ ರಾಹುಲ್‌ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದರೊಂದಿಗೆ ಇದೇ ಮೊದಲಬಾರಿಗೆ ಏಕದಿನ ಕ್ರಿಕೆಟ್‌ಗೆ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಪದಾರ್ಪಣೆ ಮಾಡಲಿದ್ದಾರೆ. ಆದ್ರೆ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ ಅವರನ್ನು ಏಕದಿನ ತಂಡದಿಂದ ಕೈಬಿಟ್ಟು, ಟಿ20 ತಂಡಕ್ಕೆ ಮಾತ್ರ ಆಯ್ಕೆ ಮಾಡಿರೋದು ಅಚ್ಚರಿ ಮೂಡಿಸಿದೆ. ಅಲ್ಲದೇ ಧ್ರುವ್‌ ಜುರೆಲ್‌, ನಿತೀಶ್‌ ಕುಮಾರ್‌ ರೆಡ್ಡಿ ಹೊಸ ಮುಖಗಳಿಗೆ ಬಿಸಿಸಿಐ ಮಣೆ ಹಾಕಿದೆ.

    ಭಾರತ ಏಕದಿನ ತಂಡ
    ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್‌ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌.

    ಭಾರತ ಟಿ20 ತಂಡ
    ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವರುಣ್ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್‌.

    ಅ.19ರಿಂದ ನವೆಂಬರ್‌ 8ರ ವರೆಗೆ ಮೂರು ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಭಾರತ ತಂಡ ಶೀಘ್ರವೇ ಆಸ್ಟ್ರೇಲಿಯಾಕ್ಕೆ ಪ್ರವಾಸ ತೆರಳಲಿದ್ದು, ಅಭ್ಯಾಸ ಆರಂಭಿಸಲಿದೆ.

    ಗಿಲ್‌ ಮೇಲೆ ಹೆಚ್ಚಿದ ಭರವಸೆ
    ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ನಲ್ಲಿ ನಡೆದ ʻಆಂಡರ್ಸನ್‌-ತೆಂಡೂಲ್ಕರ್‌ʼ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಯುವ ನಾಯಕನಾಗಿದ್ದ ಗಿಲ್‌ ಅವರ ಯಶಸ್ಸು ಆಯ್ಕೆ ಸಮಿತಿಗೆ ನಂಬಿಕೆ ತಂದುಕೊಟ್ಟಿದೆ. ಹೀಗಾಗಿ 2027ರ ವಿಶ್ವಕಪ್‌ಗೆ ಹೊಸ ಪ್ರತಿಭೆಗಳೊಂದಿಗೆ ಮುನ್ನಡೆಯಲು ಬಿಸಿಸಿಐ ನಿರ್ಧರಿಸಿದ್ದು, ಶುಭಮನ್‌ ಗಿಲ್‌ ಅವರನ್ನೇ ಟೀಂ ಇಂಡಿಯಾದ ದೀರ್ಘಾವಧಿ ನಾಯಕನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ. ಆದ್ದರಿಂದ ರೋಹಿತ್‌, ಕೊಹ್ಲಿ ಅಂತಹ ದಿಗ್ಗಜರು ಇರುವಾಗಲೇ ಗಿಲ್‌ಗೆ ನಾಯಕನ ಹೊಣೆ ನೀಡಲಾಗಿದೆ.

  • ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಹೈದರಾಬಾದ್: ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ಟಿ20 (T20) ಸರಣಿಯ 3ನೇ ಪಂದ್ಯ ನಡೆಯಿತು. ಪಂದ್ಯ ಗೆದ್ದು ಪ್ರಶಸ್ತಿ ಸ್ವೀಕರಿಸಿದ ವೇಳೆ ರಿಷಭ್ ಪಂತ್ (Rishabh Pant) ಒಂದೇಸಮನೆ ವಿರಾಟ್ ಕೊಹ್ಲಿಯನ್ನೇ ಗುರಾಯಿಸುತ್ತಿರುವ ವೀಡಿಯೋ (Virat Kohli) ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ.

    ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿದು ಅಬ್ಬರಿಸಲಿಲ್ಲ ಎನ್ನುವ ಕೋಪವೇ ರಿಷಭ್ ಪಂತ್ (Rishabh Pant) ಅಸಮಾಧಾನಕ್ಕೆ ಕಾರಣವಾಗಿದೆ ಎನ್ನುವಂತಿದೆ. ರಿಷಭ್ ಪಂತ್‌ನ ಈ ನಡೆಗೆ ಕೊಹ್ಲಿ ಅಭಿಮಾನಿಗಳು ಪಂತ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತ-ದ.ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕ

    ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇತ್ತಂಡಗಳ ನಡುವೆ 1-1 ರಲ್ಲಿ ಸಮಬಲ ಕಂಡಿತ್ತು. ಭಾನುವಾರದ ಪಂದ್ಯ ಫೈನಲ್‌ನಲ್ಲಿ ಸರಣಿ ಗೆಲ್ಲುವ ತವಕದಲ್ಲಿ ಎರಡು ತಂಡಗಳು ಕಣಕ್ಕಿಳಿದಿದ್ದವು. ಹಾಗಾಗಿ ರೋಚಕ ಕದನಕ್ಕೆ ಹೈದರಾಬಾದ್ ಸಾಕ್ಷಿಯಾಗಿತ್ತು. ಕ್ರೀಸ್‌ನಲ್ಲಿ ನಿಂತು ಅಬ್ಬರಿಸಿದ ವಿರಾಟ್ ಕೊಹ್ಲಿ (Virat Kohli) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಸಿಕ್ಸ್-ಫೋರ್‌ಗಳ ಭರ್ಜರಿ ಬ್ಯಾಟಿಂಗ್ ಮಾಡಿದರು.

    ಕೊನೆಯ 6 ಎತೆಗಳಲ್ಲಿ 11 ರನ್‌ಗಳು ಬೇಕಿದ್ದಾಗಲೇ ಮೊದಲ ಎಸೆತವನ್ನು ಕೊಹ್ಲಿ ಸಿಕ್ಸ್‌ಗೆ ಅಟ್ಟಿದರು. 2ನೇ ಎಸೆತವನ್ನು ಬೌಂಡರಿ ಬಾರಿಸುವ ಪ್ರಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಇನ್ನೂ ಕೊನೆಯಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ (Dinesh Karthik) 3ನೇ ಎಸೆತದಲ್ಲಿ ಒಂದು ರನ್ ಕಲೆಹಾಕಿದರು. 5ನೇ ಎಸೆತವನ್ನು ಬೌಂಡರಿಗೆ ತಳ್ಳುವ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಗೆಲುವಿನ ನಗೆ ಬೀರಿದರು. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ ಹೈವೋಲ್ಟೆಜ್ ಪಂದ್ಯದ ನಡುವೆ ಮೊಳಗಿತು ಜೈಶ್ರೀರಾಮ್ ಉದ್ಘೋಷ

    ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಕೊನೆಯ ಓವರ್‌ವರೆಗೂ ನಿಂತು ಅಬ್ಬರಿಸಿದ ಕೊಹ್ಲಿ ಪಾತ್ರ ಪ್ರಮುಖವಾಗಿತ್ತು. ಆದರೆ ಹಾಲಿ ವಿಶ್ವಚಾಂಪಿಯನ್‌ಗಳನ್ನ ಸೋಲಿಸಿದರೂ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್‌ಗೆ ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿಯಲಿಲ್ಲ ಎನ್ನುವ ಅಸಮಾಧಾನವೇ ಇದ್ದಂತೆ ಕಾಣುತ್ತಿದೆ ಎಂದು ನೆಟ್ಟಿಗರು ಸೂಚಿಸಿದ್ದಾರೆ. ಹಾಗಾಗಿ ರಿಷಭ್ ಮುಖದಲ್ಲಿ ಮಂದಹಾಸ ಮೂಡಲೇ ಇಲ್ಲ. ಕೊಹ್ಲಿಯನ್ನು ಗುರಾಯಿಸುತ್ತಲೇ ಇದ್ದರು. ಕೊನೆಯಲ್ಲಿ ಸಾಂಕೇತಿಕವಾಗಿ ನಕ್ಕು ಸುಮ್ಮನಾದರು.

    ಭಾನುವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್‌ಗಳನ್ನು ಗಳಿಸಿತು. ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 19.5 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 187 ರನ್‌ಗಳನ್ನು ಪೇರಿಸುವ ಮೂಲಕ ಗೆಲುವು ಸಾಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • IND Vs AUS: 3ನೇ T20 ಇಂದು – ಸರಣಿ ಗೆಲ್ಲುವ ತವಕದಲ್ಲಿ ಭಾರತ!

    IND Vs AUS: 3ನೇ T20 ಇಂದು – ಸರಣಿ ಗೆಲ್ಲುವ ತವಕದಲ್ಲಿ ಭಾರತ!

    ದುಬೈ: ಟಿ20 ವಿಶ್ವಕಪ್‌ಗೂ (T20 WorldCup) ಮುನ್ನವೇ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಎದುರು ನೋಡುತ್ತಿರುವ ಟೀಂ ಇಂಡಿಯಾ (Team India) ಇಂದು ಹಾಲಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ (Australia) ವಿರುದ್ಧ  T20 ಸರಣಿಯ ಅಂತಿಮ ಪಂದ್ಯದಲ್ಲಿ ಸೆಣಸಲಿದೆ.

    ಇಂದು ಸಂಜೆ 7 ಗಂಟೆಗೆ ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭಾರತ – ಆಸಿಸ್ 3ನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ. ಇದನ್ನೂ ಓದಿ: ನನ್ನ ಸ್ಫೋಟಕ ಬ್ಯಾಟಿಂಗ್ ಕಂಡು ನಾನೇ ಶಾಕ್ – ಪಂದ್ಯ ಗೆದ್ದರೂ ಹೀಗೇಕೆ ಅಂದ್ರು ಹಿಟ್‌ಮ್ಯಾನ್‌?

    ಮೊದಲ ಪಂದ್ಯದಲ್ಲಿ ಸೋತು, 2ನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ 1-1 ಅಂತರದಲ್ಲಿ ಸರಣಿಯನ್ನು ಸಮಬಲಗೊಳಿಸಿದೆ. ಇದರೊಂದಿಗೆ ಸರಣಿ ಕನಸು ಜೀವಂತವಾಗಿಸಿಕೊಂಡಿರುವ ಟೀಂ ಇಂಡಿಯಾ ಇಂದು ಆಸಿಸ್ ಜೊತೆಗೆ ಪೈಪೋಟಿ ನಡೆಸಲಿದೆ.

    ಹರ್ಷಲ್, ಚಾಹಲ್‌ದೇ ಚಿಂತೆ: ಸದ್ಯ ಟೀಂ ಇಂಡಿಯಾ ಜಯದ ಹಾದಿಯಲ್ಲಿ ಸಾಗುತ್ತಿದೆ. ಆದರೆ ಇನ್ನೂ ಫಾರ್ಮ್‌ಗೆ ಮರಳದ ಹರ್ಷಲ್ ಪಟೇಲ್ (Harshal Patel) ಹಾಗೂ ಯಜುವೇಂದ್ರ ಚಾಹಲ್ ಅವರದ್ದೇ ಚಿಂತೆಯಾಗಿದೆ. ಈ ಪಂದ್ಯದಲ್ಲಿ ಇಬ್ಬರೂ ಸುಧಾರಿತ ಪ್ರದರ್ಶನ ತೋರಲೇಬೇಕಾದ ಅವಶ್ಯಕತೆಯಿದೆ.

    ಸದ್ಯ ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡು ಹೊರಬಿದ್ದ ಬಳಿಕ ಅವರ ಸ್ಥಾನ ತುಂಬಲು ಬಂದಿರುವ ಅಕ್ಷರ್ ಪಟೇಲ್ ಯಶಸ್ವಿ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಅವರಿಂದು ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡುವ ಅವಶ್ಯಕತೆ ಇದೆ. ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರ (Rohit Sharma) ಗೇಮ್‌ಪ್ಲ್ಯಾನ್‌ ಏನೆಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ರೋಹಿತ್ ನಾಯಕನ ಆಟ – ಭಾರತಕ್ಕೆ ಜಯ, ಸರಣಿ ಸಮಬಲ

    2ನೇ ಟಿ20 ಪಂದ್ಯದಲ್ಲಿ ಮಳೆಯ ಕಾರಣದಿಂದಾಗಿ ಭಾರತ ಮತ್ತು ಆಸಿಸ್ ತಂಡಗಳ ಪಂದ್ಯವನ್ನು 8 ಓವರ್‌ಗಳಿಗೆ ಇಳಿಸಲಾಗಿತ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 90 ರನ್‌ಗಳಿಸಿತ್ತು. ಸಿಕ್ಸ್, ಫೋರ್‌ಗಳ ಮಳೆ ಸುರಿಸುತ್ತಾ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 7.2 ಓವರ್‌ಗಳಲ್ಲೇ 92 ರನ್‌ಗಳಿಸಿ ಎದುರಾಳಿ ಆಸಿಸ್ ವಿರುದ್ಧ ಗೆಲುವು ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ನನ್ನ ಸ್ಫೋಟಕ ಬ್ಯಾಟಿಂಗ್ ಕಂಡು ನಾನೇ ಶಾಕ್ – ಪಂದ್ಯ ಗೆದ್ದರೂ ಹೀಗೇಕೆ ಅಂದ್ರು ಹಿಟ್‌ಮ್ಯಾನ್‌?

    ನನ್ನ ಸ್ಫೋಟಕ ಬ್ಯಾಟಿಂಗ್ ಕಂಡು ನಾನೇ ಶಾಕ್ – ಪಂದ್ಯ ಗೆದ್ದರೂ ಹೀಗೇಕೆ ಅಂದ್ರು ಹಿಟ್‌ಮ್ಯಾನ್‌?

    ನಾಗ್ಪುರ: ಭಾರತ, ಆಸ್ಟ್ರೇಲಿಯಾ (Australia) ವಿರುದ್ಧದ 2ನೇ ಟಿ20 (T20 Match) ಪಂದ್ಯದಲ್ಲಿ ಹಿಟ್‌ಮ್ಯಾನ್ ಬ್ಯಾಟಿಂಗ್ ಅಬ್ಬರದಿಂದ ಭಾರತ ತಂಡ 1-1 ಅಂತರದಲ್ಲಿ ಗೆದ್ದು, ಸರಣಿಯನ್ನು ಸಮಬಲಗೊಳಿಸಿತು. ಆದರೆ ಪಂದ್ಯ ಗೆದ್ದ ನಂತರವೂ ರೋಹಿತ್ ಶರ್ಮಾ (Rohit Sharma) ತಮ್ಮ ಸ್ಫೋಟಕ ಬ್ಯಾಟಿಂಗ್ ಬಗ್ಗೆಯೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಮಳೆಯ (Rain) ಕಾರಣದಿಂದಾಗಿ 8 ಓವರ್‌ಗೆ ಇಳಿಕೆ ಕಂಡಿದ್ದ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಕ್ರೀಸ್‌ಗಿಳಿಸದ ಆಸ್ಟ್ರೇಲಿಯಾ (Australia) 5 ವಿಕೆಟ್ ನಷ್ಟಕ್ಕೆ 90 ರನ್‌ಗಳನ್ನು ಗಳಿಸಿತು. ಈ ರನ್‌ಗಳ ಗುರಿ ಬೆನ್ನತ್ತಿದ ಭಾರತ 7.2 ಓವರ್‌ಗಳಲ್ಲೇ 4 ವಿಕೆಟ್‌ಗಳ ನಷ್ಟಕ್ಕೆ 92 ರನ್‌ಗಳಿಸಿ ಗೆದ್ದು ಬೀಗಿತು. ಇದನ್ನೂ ಓದಿ: ರೋಹಿತ್ ನಾಯಕನ ಆಟ – ಭಾರತಕ್ಕೆ ಜಯ, ಸರಣಿ ಸಮಬಲ

    ನಾಯಕನ ಆಟವಾಡಿದ ರೋಹಿತ್ ಶರ್ಮಾ ಕೊನೆಯವರೆಗೂ ನಿಂತು ಅಬ್ಬರಿಸಿದರು. ಸಿಕ್ಸ್, ಫೋರ್‌ಗಳ ಮಳೆ ಸುರಿಸಿ, ಆಸಿಸ್ ಬೌಲರ್‌ಗಳನ್ನು ಬೆಂಡೆತ್ತಿದರು. ಇದರ ಹೊರತಾಗಿಯೂ ಹಿಟ್‌ಮ್ಯಾನ್ ತಮ್ಮ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ತಾವೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧೋನಿ ಆಸೆಯಂತೆ ನಡೆಯಲಿದೆ ನಿವೃತ್ತಿ ಪಂದ್ಯ – ಚೆನ್ನೈನಲ್ಲಿ ಐಪಿಎಲ್‍ಗೆ ಗುಡ್ ಬೈ ಹೇಳುವುದು ಖಚಿತ

    ಪಂದ್ಯದ ಬಳಿಕ ಮಾತನಾಡಿದ ರೋಹಿತ್, ನಿಜ ಹೇಳಬೇಕೆಂದರೆ ನನಗೆ ನನ್ನ ಬ್ಯಾಟಿಂಗ್‌ನಿಂದ ಸ್ವಲ್ಪ ಅಚ್ಚರಿಯಾಗಿದೆ. ಈ ರೀತಿಯ ಸ್ಫೋಟಕ ಬ್ಯಾಟ್ ಮಾಡುತ್ತೇನೆಂದು ನನಗೆ ಗೊತ್ತಿರಲಿಲ್ಲ. ಏಕೆಂದರೆ ಕಳೆದ 8 ರಿಂದ 9 ತಿಂಗಳು ನಾನು ಈ ರೀತಿ ಆಡಿರಲಿಲ್ಲ. ಇದು ತೀರಾ ಚುಟುಕು ಪಂದ್ಯವಾಗಿದ್ದರಿಂದ ಇದಕ್ಕೆ ಹೆಚ್ಚಿನ ಯೋಜನೆ ಸಹ ರೂಪಿಸಿರಲಿಲ್ಲ. ನಿನ್ನೆ ನನ್ನ ಬ್ಯಾಟಿಂಗ್ ಕಂಡು ನನಗೇ ಅಚ್ಚರಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

    ಬೌಲರ್‌ಗಳು ಇನ್ನಷ್ಟು ಎಚ್ಚರ ವಹಿಸಬೇಕು:
    ಬೌಲರ್‌ಗಳು ಇನ್ನಷ್ಟು ಎಚ್ಚರಿಕೆಯಿಂದ ಬೌಲಿಂಗ್ (Bowling) ಮಾಡಬೇಕು. ಆದಾಗ್ಯೂ ನಮ್ಮ ಬೌಲರ್‌ಗಳು (Batting) ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಕೊನೆಯಲ್ಲಿ ಇಬ್ಬನಿ ಹೆಚ್ಚಾಗುತ್ತಿತ್ತು. ಈ ಕಾರಣದಿಂದಲೇ ಹರ್ಷಲ್ ಪಟೇಲ್ (Harshal Patel) ಫುಲ್‌ಟಾಸ್ ಎಸೆತಗಳನ್ನು ಹಾಕಿದ್ದರು.

    ಹರ್ಷಲ್ ಗಾಯದ ಸಮಸ್ಯೆಯಿಂದ ಗುಣಮುಖನಾಗಿ ಬಂದಿದ್ದಾರೆ, ಆದರೆ ಹಲವು ತಿಂಗಳ ಬಳಿಕ ಕಮ್‌ಬ್ಯಾಕ್ ಮಾಡುವುದು ಸುಲಭವಲ್ಲ. ಆದರೆ ಕೆಲ ನಿರ್ಣಾಯಕ ವಿಕೆಟ್‌ಗಳನ್ನು ನಾವು ಪಡೆದಿದ್ದು ತಂಡದ ಗೆಲುವಿಗೆ ಕಾರಣವಾಗಿದೆ ಎಂದು ಹಿಟ್‌ಮ್ಯಾನ್ (HitMan Rohit Sharma) ಹೇಳಿದ್ದಾರೆ.

    ಇನ್ನೂ ಸ್ಪಿನ್ನರ್ ಅಕ್ಷರ್ ಪಟೇಲ್ ಯಾವುದೇ ಸನ್ನಿವೇಶದಲ್ಲೂ ಬೌಲ್ ಮಾಡಬಲ್ಲರು. ವಿಭಿನ್ನ ಪರಿಸ್ಥಿತಿಗಳಿದ್ದರೂ ಇತರೆ ಬೌಲರ್‌ಗಳಿಗಿಂತ ಅವರು ಪರಿಸ್ಥಿತಿಗಳನ್ನು ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಅಕ್ಷರ್ ಪಟೇಲ್ ಪವರ್ ಪ್ಲೇನಲ್ಲಿ ಬೌಲ್ ಮಾಡಿಸಿದರೆ, ವೇಗಿಗಳನ್ನು ಮಧ್ಯಮ ಓವರ್‌ಗಳಲ್ಲಿ ಬಳಸಿಕೊಳ್ಳಬೇಕಾಗುತ್ತದೆ. ಆದರೆ ಅಕ್ಷರ್ ಬೌಲಿಂಗ್ ಜೊತೆಗೆ ಚೆನ್ನಾಗಿ ಬ್ಯಾಟ್ ಮಾಡುವುದನ್ನೂ ನಾನು ನೋಡಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • IND Vs AUS ಟಿ20 ಸರಣಿಗೆ ಬೂಮ್ರಾ ವಾಪಸ್ – ಸರಣಿ ಉಳಿಸಿಕೊಳ್ಳುವ ತವಕದಲ್ಲಿ ರೋಹಿತ್ ಬಳಗ

    IND Vs AUS ಟಿ20 ಸರಣಿಗೆ ಬೂಮ್ರಾ ವಾಪಸ್ – ಸರಣಿ ಉಳಿಸಿಕೊಳ್ಳುವ ತವಕದಲ್ಲಿ ರೋಹಿತ್ ಬಳಗ

    ಮುಂಬೈ: ಹಾಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ (Australia) ವಿರುದ್ಧ 2ನೇ ಟಿ20 ಪಂದ್ಯ ಇಂದು ನಡೆಯಲಿದ್ದು, ಭಾರತ (India) ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಲು ಎದುರು ನೋಡುತ್ತಿದೆ.

    ಐಸಿಸಿ ಟಿ20 ವಿಶ್ವಕಪ್‌ಗೆ (T20 WorldCup) ಕೇವಲ ಒಂದು ತಿಂಗಳು ಬಾಕಿ ಇರುವ ಹೊತ್ತಿನಲ್ಲಿ ಟೀಂ ಇಂಡಿಯಾಕ್ಕೆ (Team India) ಕಳಪೆ ಬೌಲಿಂಗ್ ಸಮಸ್ಯೆ ತಲೆನೋವಾಗಿದೆ. ಬೌಲಿಂಗ್ ಸಮಸ್ಯೆ ಎದುರಿಸುತ್ತಿರುವ ಟೀಂ ಇಂಡಿಯಾ ತಂಡಕ್ಕೆ ಮುಂಚೂಣಿ ವೇಗಿ ಜಸ್ಪ್ರೀತ್‌ ಬೂಮ್ರಾ (Jasprit Bumrah) ಈ ಪಂದ್ಯದಲ್ಲಿ ವಾಪಸಾಗುತ್ತಿದ್ದಾರೆ. ಈ ಮೂಲಕ ಸಮಸ್ಯೆಗೆ ಪರಿಹಾರ ಹುಡುಕಿಕೊಡುವ ನಿರೀಕ್ಷೆ ಮೂಡಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್ ಸರ್ವರ್ ಡೌನ್ – ಫೋಟೋ, ವೀಡಿಯೋ ಅಪ್‍ಲೋಡ್ ಮಾಡಲಾಗದೇ ಜನರ ಪರದಾಟ

    ಇಂಗ್ಲೆಂಡ್ ಪ್ರವಾಸದ ಬಳಿಕ ಗಾಯದ ಸಮಸ್ಯೆಯಿಂದಾಗಿ ಬೂಮ್ರಾ (Jasprit Bumrah) ತಂಡದಿಂದ ಹೊರಗುಳಿದಿದ್ದರು. ಏಷ್ಯಾಕಪ್‌ಗೂ ಲಭ್ಯವಿರಲಿಲ್ಲ. ಇನ್ನೂ ಏಷ್ಯಾಕಪ್ (Aisa Cup) ಪಂದ್ಯದ ವೇಳೆ ಗಾಯದ ಸಮಸ್ಯೆಗೆ ಒಳಗಾದ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಸಹ ಪಂದ್ಯದಿಂದ ಹೊರಗುಳಿಯುವಂತಾಯಿತು. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬೂಮ್ರಾರನ್ನು ಕಣಕ್ಕಿಳಿಸದೇ ಇದ್ದಿದ್ದು ಅವರ ಫಿಟ್‌ನೆಸ್ ಬಗ್ಗೆ ಅನುಮಾನ ಮೂಡಿಸಿತ್ತು. ಆದರೆ ನಾಯಕ ರೋಹಿತ್, ಬುಮ್ರಾ 2ನೇ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ T20: ಟಿಕೆಟ್‍ಗಾಗಿ ಮುಗಿಬಿದ್ದ ಜನ – ಲಾಠಿ ಚಾರ್ಜ್, ನಾಲ್ವರಿಗೆ ಗಾಯ

    ಹಾರ್ದಿಕ್ ಪಾಂಡ್ಯ (Hardik Pandya) ಸೇರಿದಂತೆ ಐವರು ಬೌಲರ್‌ಗಳ ಕಾರ್ಯತಂತ್ರ ಟೀಂ ಇಂಡಿಯಾ ಕೈಹಿಡಿಯುತ್ತಿಲ್ಲ. ಅದರಲ್ಲೂ ಬೌಲಿಂಗ್‌ಪಡೆ ಮುನ್ನಡೆಸಿದ್ದ ಭುವನೇಶ್ವರ್ ಕುಮಾರ್ ಅವರನ್ನೇ ಎದುರಾಳಿಗಳು ಚೆಂಡಾಡುತ್ತಿದ್ದಾರೆ. ಏಷ್ಯಾಕಪ್ ಸೇರಿದಂತೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ಅವರು ಎಸೆದ 19ನೇ ಓವರ್‌ನಲ್ಲಿ ಭಾರೀ ರನ್‌ಗಳನ್ನೇ ಚಚ್ಚಿಸಿಕೊಂಡಿದ್ದಾರೆ. ಇದೀಗ ಬೂಮ್ರಾ, ಆಗಮನದಿಂದ ಬೌಲಿಂಗ್ ಸಂಯೋಜನೆಯಲ್ಲಿ ಬದಲಾವಣೆ ಸರಿ ಮಾಡಬಹುದಾಗಿದೆ.

    ಇಂದು ವಿದರ್ಭಾ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಆಸಿಸ್ ವಿರುದ್ಧ 2ನೇ ಟಿ20 ನಡೆಯಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಎಡವಿದರೆ ಸರಣಿ ಗೆಲುವಿನ ಕನಸು ಭಗ್ನವಾಗಲಿದೆ.

    Live Tv

    [brid partner=56869869 player=32851 video=960834 autoplay=true]

  • ರ‍್ಯಾಂಕಿಂಗ್‌ನಲ್ಲಿ ಫುಲ್‌ಶೈನ್ – ಪಾಕ್ ನಾಯಕನನ್ನು ಹಿಂದಿಕ್ಕಿದ SKY

    ರ‍್ಯಾಂಕಿಂಗ್‌ನಲ್ಲಿ ಫುಲ್‌ಶೈನ್ – ಪಾಕ್ ನಾಯಕನನ್ನು ಹಿಂದಿಕ್ಕಿದ SKY

    ದುಬೈ: ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟಿ20 (T20) ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಸೂರ್ಯಕುಮಾರ್ ಯಾದವ್ (Suryakumar Yadav) ಪಾಕಿಸ್ತಾನ (Pakistan) ತಂಡದ ನಾಯಕನನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೇರಿದ್ದಾರೆ.

    ಸೆಪ್ಟೆಂಬರ್ 20ರಂದು ಮೊಹಾಲಿಯ ಕ್ರೀಡಾಂಗಣದಲ್ಲಿ ನಡೆದ ಭಾರತ (Team India)-ಆಸ್ಟ್ರೇಲಿಯಾ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 2 ಬೌಂಡರಿ, 4 ಸಿಕ್ಸರ್‌ಗಳೊಂದಿಗೆ 25 ಎಸೆತಗಳಲ್ಲಿ 46 ರನ್ ಸಿಡಿಸಿದ ಸೂರ್ಯಕುಮಾರ್ 4ರಿಂದ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈ ಮೂಲಕ ಪಾಕಿಸ್ತಾನದ ನಾಯಕ ಬಾಬರ್ ಆಜಂ (BabarAzam) ನನ್ನು ಹಿಂದಿಕ್ಕಿದ್ದಾರೆ. ಇದನ್ನೂ ಓದಿ: 8 ಓವರ್‌ 100 ರನ್‌ – ದುಬಾರಿಯಾದ ಭುವಿ, ಹರ್ಷಲ್‌: ರೋಹಿತ್‌ ಹೇಳಿದ್ದೇನು?

    ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿರುವ ಪಾಕಿಸ್ತಾನದ ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ (Mohammad Rizwan) ಮೊದಲ ಪಂದ್ಯದಲ್ಲೇ 46 ಎಸೆತಗಳಲ್ಲಿ 68 ರನ್ ಬಾರಿಸುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ. ಇದನ್ನೂ ಓದಿ: ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

    ಮೊಹಮ್ಮದ್ ರಿಜ್ವಾನ್ 825 ರೇಟಿಂಗ್ಸ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಏಡನ್ ಮಾರ್ಕರಮ್ 792 ರೇಟಿಂಗ್ಸ್‌ನೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. 780 ರೇಟಿಂಗ್ಸ್ ಗಳಿಸಿರುವ ಸೂರ್ಯಕುಮಾರ್ 3ನೇ ಸ್ಥಾನದಲ್ಲಿದ್ದಾರೆ. 771 ರೇಟಿಂಗ್ಸ್ ಗಳಿಸಿರುವ ಬಾಬರ್ ಆಜಂ 4ನೇ ಸ್ಥಾನ, 725 ರೇಟಿಂಗ್ಸ್ ಅಂಕಗಳಿಸಿರುವ ಇಂಗ್ಲೆಂಡ್‌ನ (England) ಸ್ಫೋಟಕ ಬ್ಯಾಟ್ಸ್‌ಮನ್‌ ಡೇವಿಡ್ ಮಲಾನ್ 5ನೇ ಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ ಟಿ20 ಕ್ಯಾಪ್ಟನ್ ಆರನ್ ಫಿಂಚ್ (Aaron Finch) 715 ರೇಟಿಂಗ್ಸ್ ಅಂಕಗಳೊಂದಿಗೆ 6ನೇ ಸ್ಥಾನ ಉಳಿಸಿಕೊಂಡಿದ್ದಾರೆ.

    ಟಾಪ್-10ನಲ್ಲಿ ಸೂರ್ಯನೊಬ್ಬನೆ:
    ಐಸಿಸಿ (ICC) ಟಿ20 ರ‍್ಯಾಂಕಿಂಗ್ (T20 Ranking) ಪಟ್ಟಿಯ ಟಾಪ್-10ನಲ್ಲಿ ಸೂರ್ಯಕುಮಾರ್ ಯಾದವ್ ಹೊರತುಪಡಿಸಿದ್ರೆ ಟೀಂ ಇಂಡಿಯಾದ (Team India) ಯಾರೊಬ್ಬರೂ ಸ್ಥಾನ ಪಡೆದುಕೊಂಡಿಲ್ಲ. ಆದರೆ 602 ರೇಟಿಂಗ್ಸ್ ಗಳಿಸಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) 14ನೇ ಸ್ಥಾನದಲ್ಲಿದ್ದು, 591 ರೇಟಿಂಗ್ಸ್ ಹೊಂದಿರುವ ವಿರಾಟ್ ಕೊಹ್ಲಿ (Virat Kohli) 15 ರಿಂದ 16ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೆಎಲ್ ರಾಹುಲ್ 587 ರೇಟಿಂಗ್ಸ್‌ನೊಂದಿಗೆ 23 ರಿಂದ 18ನೇ ಸ್ಥಾನಕ್ಕೇರಿದ್ದರೆ, 569 ರೇಟಿಂಗ್ಸ್ ಹೊಂದಿರುವ ಇಶಾನ್ ಕಿಶನ್ 22 ರಿಂದ 23ನೇ ಸ್ಥಾನಕ್ಕೆ ಕುಸಿದಿದ್ದಾರೆ.

    ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಕೇವಲ 30 ಎಸೆತಗಳಲ್ಲಿ 70 ರನ್‌ಗಳ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 88 ರಿಂದ 65ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    ಸೆಪ್ಟೆಂಬರ್ 20ರಂದು ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್‌ಗಳನ್ನು ಗಳಿಸಿತು. ಈ ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 19.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್‌ಗಳನ್ನು ಪೇರಿಸಿ ಗೆಲುವು ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ಆಸೀಸ್ ಪ್ರವಾಸ – ವರುಣ್ ಚಕ್ರವರ್ತಿ ಬದಲು ಟಿ.ನಟರಾಜನ್ ಟಿ-20 ಸರಣಿಗೆ ಆಯ್ಕೆ

    ಆಸೀಸ್ ಪ್ರವಾಸ – ವರುಣ್ ಚಕ್ರವರ್ತಿ ಬದಲು ಟಿ.ನಟರಾಜನ್ ಟಿ-20 ಸರಣಿಗೆ ಆಯ್ಕೆ

    ಮುಂಬೈ: ಮುಂಬರುವ ಆಸ್ಟ್ರೇಲಿಯಾ ಮತ್ತು ಇಂಡಿಯಾ ಪ್ರವಾಸಕ್ಕೆ ಆಯ್ಕೆ ಆಗುವ ಮೂಲಕ ತಮಿಳುನಾಡಿನ ಯುವ ಬೌಲರ್ ಟಿ ನಟರಾಜನ್ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲಿದ್ದಾರೆ.

    ಐಪಿಎಲ್ ನಂತರ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ ಮೂರು ಪಂದ್ಯಗಳ ಟಿ-20 ಸರಣಿಯನ್ನು ಆಡಲಿದೆ. ಈ ಸರಣಿಗೆ ಆಯ್ಕೆಯಾಗಿದ್ದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಭುಜದ ನೋವಿನ ಸಮಸ್ಯೆಗೆ ಸಿಲುಕಿರುವ ಕಾರಣ, ಚಕ್ರವರ್ತಿ ಬದಲು ಬಿಸಿಸಿಐ ಟಿ.ನಟರಾಜನ್ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಟಿ. ನಟರಾಜನ್ ಇಂಡಿಯಾದ ಪರವಾಗಿ ಮೊದಲ ಬಾರಿಗೆ ಕ್ಯಾಪ್ ತೊಡಲಿದ್ದಾರೆ.

    ಈ ವಿಚಾರವಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದರುವ ಬಿಸಿಸಿಐ, ಸ್ಪಿನ್ನರ್ ವರುಣ್ ಚಕ್ರವರ್ತಿ ಭುಜದ ನೋವಿನ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧ ಟಿ-20 ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಜಾಗಕ್ಕೆ ಬಿಸಿಸಿಐ ಆಯ್ಕೆಗಾರರು ಟಿ.ನಟರಾಜನ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದೆ. ಟಿ.ನಟರಾಜನ್ ಅವರಿಗೆ ಶುಭಾಶಯ ತಿಳಿಸಿರುವ ಇರ್ಫಾನ್ ಪಠಾಣ್ ಅವರು ಶ್ರಮವಹಿಸಿ ಕಲಿ, ಆತ್ಮ ವಿಶ್ವಾಸವನ್ನು ಕಳೆದುಕೊಳ್ಳಬೇಡ. ಇದು ನಟರಾಜನ್ ಅವರ ಯಶಸ್ಸಿನ ಗುಟ್ಟು. ಶುಭಾಶಯ ಸಹೋದರ ಎಂದು ಬರೆದುಕೊಂಡಿದ್ದಾರೆ.

    ಈ ಬಾರಿಯ ಐಪಿಎಲ್‍ನಲ್ಲಿ ಉತ್ತಮವಾಗಿ ಬೌಲ್ ಮಾಡಿದ್ದ ವರಣ್ ಚಕ್ರವರ್ತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐದು ವಿಕೆಟ್ ಕಿತ್ತು ಎಲ್ಲರ ಗಮನ ಸೆಳೆದಿದ್ದರು. ಈ ಕಾರಣದಿಂದ ಅವರನ್ನು ಆಸೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಟಿ.ನಟರಾಜನ್ ಅವರು ಕೂಡ ಉತ್ತಮ ಬೌಲರ್ ಆಗಿದ್ದು, ಐಪಿಎಲ್‍ನಲ್ಲಿ ಅತಿ ಹೆಚ್ಚು ಯಾರ್ಕರ್ ಹಾಕುವ ಮೂಲಕ ಗುರುತಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.

    ಟೀಂ ಇಂಡಿಯಾ ಟಿ-20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್. ಶಮಿ, ನವದೀಪ್ ಸೈನಿ, ದೀಪಕ್ ಚಹರ್, ಟಿ ನಟರಾಜನ್