Tag: australia

  • WTC Final  – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

    WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

    ಲಂಡನ್‌: ಆಸ್ಟ್ರೇಲಿಯಾ (Australia) ಮತ್ತು ದಕ್ಷಿಣ ಆಫ್ರಿಕಾ(South Africa) ಮಧ್ಯೆ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ (WTC Final) ಮೊದಲ ದಿನವೇ ಬೌಲರ್‌ಗಳ ಅಬ್ಬರಕ್ಕೆ 14 ವಿಕೆಟ್‌ ಪತನಗೊಂಡಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 56.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್‌ ಅಗಿದೆ. ನಂತರ ಬ್ಯಾಟ್‌ ಬೀಸಿದ ದಕ್ಷಿಣ ಆಫ್ರಿಕಾ 4 ವಿಕೆಟ್‌ ನಷ್ಟಕ್ಕೆ 43 ರನ್‌ ಗಳಿಸಿದೆ.

    ಆಸ್ಟ್ರೇಲಿಯಾ ಪರ ಬ್ಯೂ ವೆಬ್‌ಸ್ಟರ್ 72 ರನ್‌ (92 ಎಸೆತ, 11 ಬೌಂಡರಿ) ಹೊಡೆದರೆ ಸ್ವೀವ್‌ ಸ್ಮಿತ್‌ 66 ರನ್‌ (112 ಎಸೆತ,10 ಬೌಂಡರಿ) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಇವರಿಬ್ಬರು 114 ಎಸೆತಗಳಲ್ಲಿ 79 ರನ್‌ ಜೊತೆಯಾಟವಾಡಿದ್ದರಿಂದ ತಂಡ ಮೊತ್ತ 200 ರನ್‌ಗಳ ಗಡಿಯನ್ನು ದಾಟಿತು. ಇದನ್ನೂ ಓದಿ: ಆರ್‌ಸಿಬಿ ತಂಡವನ್ನು ಮಾರಾಟ ಮಾಡುತ್ತಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    ಕಗಿಸೊ ರಬಾಡ 5 ವಿಕೆಟ್‌, ಮಾರ್ಕೊ ಜಾನ್ಸೆನ್ 3 ವಿಕೆಟ್‌ ಕಿತ್ತರು. ಕೇಶವ್‌ ಮಹಾರಾಜ್‌ ಮತ್ತು ಏಡೆನ್ ಮಾರ್ಕ್ರಾಮ್ ತಲಾ ಒಂದೊಂದು ವಿಕೆಟ್‌ ಪಡೆದರು.

    ನಂತರ ಬ್ಯಾಟ್‌ ಬೀಸಿದ ಆಫ್ರಿಕಾ 4 ವಿಕೆಟ್‌ ನಷ್ಟಕ್ಕೆ 43 ರನ್‌ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಏಡೆನ್ ಮಾರ್ಕ್ರಾಮ್ ಮೊದಲ ಓವರ್‌ನಲ್ಲೇ ಶೂನ್ಯಕ್ಕೆ ಔಟಾದರು. ರಯಾನ್ ರಿಕೆಲ್ಟನ್ 16 ರನ್‌, ವಿಯಾನ್ ಮುಲ್ಡರ್ 6 ರನ್‌, ಟ್ರಿಸ್ಟಾನ್ ಸ್ಟಬ್ಸ್ 2 ರನ್‌ ಗಳಿಸಿ ಪೆವಿಲಿಯನ್‌ಗೆ ನಡೆದರು. ಇದನ್ನೂ ಓದಿ: ಭಾರತ್ NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಮಾರುತಿ ಡಿಸೈರ್‌ಗೆ 5 ಸ್ಟಾರ್, ಬಲೆನೊಗೆ 4 ಸ್ಟಾರ್!

    ದಿನದ ಅಂತ್ಯಕ್ಕೆ ನಾಯಕ ಟೆಂಬಾ ಬವುಮಾ 3 ರನ್‌, ಡೇವಿಡ್‌ ಬೆಡಿಂಗ್ಹ್ಯಾಮ್ 8 ರನ್‌ ಗಳಿಸಿದ್ದು ಗುರುವಾರ ಬ್ಯಾಟ್‌ ಮುಂದುವರಿಸಲಿದ್ದಾರೆ. ಮಿಚೆಲ್ ಸ್ಟಾರ್ಕ್ 2 ವಿಕೆಟ್‌ ಕಿತ್ತರೆ ಜೋಶ್ ಹ್ಯಾಜಲ್‌ವುಡ್ ಮತ್ತು ನಾಯಕ ಪ್ಯಾಟ್‌ ಕಮ್ಮಿನ್ಸ್‌ ತಲಾ ಒಂದೊಂದು ವಿಕೆಟ್‌ ಕಿತ್ತಿದ್ದಾರೆ.

  • ಆಸ್ಟ್ರೇಲಿಯಾ ಪೊಲೀಸರ ಕ್ರೌರ್ಯ – ಕೋಮಾಗೆ ಜಾರಿದ ಭಾರತೀಯ

    ಆಸ್ಟ್ರೇಲಿಯಾ ಪೊಲೀಸರ ಕ್ರೌರ್ಯ – ಕೋಮಾಗೆ ಜಾರಿದ ಭಾರತೀಯ

    – ನಾನೇನೂ ತಪ್ಪು ಮಾಡಿಲ್ಲ ಎಂದು ಕಿರುಚಿದರೂ ಬಿಡದ ಪೊಲೀಸರು

    ಕ್ಯಾನ್‌ಬೆರಾ: ಆಸ್ಟ್ರೇಲಿಯಾ (Australia) ಪೊಲೀಸರು (Police) ಭಾರತೀಯ (India) ಮೂಲದ ವ್ಯಕ್ತಿಯೊಬ್ಬರನ್ನು ನೆಲಕ್ಕೆ ಕೆಡವಿ ಕುತ್ತಿಗೆ ಮೇಲೆ ಮೊಣಕಾಲಿನಿಂದ ಒತ್ತಿ ಹಿಡಿದಿದ್ದರಿಂದ ಅವರು ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ.

    ಅಡಿಲೇಡ್‌ ಪೊಲೀಸರು ಭಾರತೀಯ ಮೂಲದ ಗೌರವ್ ಕುಂಡಿ (42) ಅವರ ಜೊತೆ ಹಿಂಸಾತ್ಮಕವಾಗಿ ವರ್ತಿಸಿದ್ದು, ಅವರ ಮೆದುಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಗುರುವಾರ ಮುಂಜಾನೆ ಅಡಿಲೇಡ್‌ನಲ್ಲಿ ಗೌರವ್ ಮತ್ತು ಅವರ ಸಂಗಾತಿ ಅಮೃತಪಾಲ್ ಕೌರ್ ಜೋರಾಗಿ ಮಾತನಾಡುತ್ತಿದ್ದರು. ಇದನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ಕೌಟುಂಬಿಕ ಹಿಂಸಾಚಾರ ಎಂದು ತಪ್ಪಾಗಿ ಗ್ರಹಿಸಿ ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಪಾಕ್‌ನ 48 ಗಂಟೆಗಳ ಪ್ಲ್ಯಾನ್‌, 8 ಗಂಟೆಗಳಲ್ಲೇ ಬುಡಮೇಲು; ಸಿಡಿಎಸ್

    ಈ ವೇಳೆ ‘ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಗೌರವ್‌ ಕೂಗಿದ್ದಾರೆ. ಕೌರ್ ಈ ಕೃತ್ಯವನ್ನು ವೀಡಿಯೋ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಅವರ ಕತ್ತಿನ ಮೇಲೆ ಮೊಣಕಾಲಿಟ್ಟಾಗ ನನಗೆ ಭಯವಾಗಿ ವೀಡಿಯೋ ಮಾಡುವುದನ್ನು ನಿಲ್ಲಿಸಿದೆ. ಗೌರವ್‌ ತಲೆ ರಸ್ತೆಗೆ ಬಡಿದು ಪ್ರಜ್ಞಾಹೀನರಾದರು ಎಂದು ಕೌರ್‌ ಹೇಳಿಕೊಂಡಿದ್ದಾರೆ.

    ಬಳಿಕ ಗೌರವ್‌ ಅವರನ್ನು ರಾಯಲ್ ಅಡಿಲೇಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಮೆದುಳು ಮತ್ತು ಕುತ್ತಿಗೆಯ ನರಗಳಿಗೆ ತೀವ್ರ ಹಾನಿಯಾಗಿದೆ ಎಂದು ವೈದ್ಯರು ಹೇಳಿದ್ದಾರೆ. ದಕ್ಷಿಣ ಆಸ್ಟ್ರೇಲಿಯಾ ಪೊಲೀಸರು ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭಿಸಿದ್ದಾರೆ. ಪೊಲೀಸರ ಬಾಡಿ-ಕ್ಯಾಮ್ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಪಿಒಕೆ ಮೂಲದ ಉಗ್ರನ ಭೂಮಿ ವಶ

  • ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

    ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

    ಮೆಲ್ಬರ್ನ್‌: ಆಸ್ಟ್ರೇಲಿಯಾದ (Australia) ಆಲ್‌ರೌಂಡರ್ 36 ವರ್ಷದ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ (ODI cricket) ನಿವೃತ್ತಿ ಹೇಳಿದ್ದಾರೆ.

    2026 ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 world Cup) ಗಮನದಲ್ಲಿಟ್ಟುಕೊಂಡು ಫೈನಲ್ ವರ್ಡ್ ಪಾಡ್‌ಕ್ಯಾಸ್ಟ್‌ನಲ್ಲಿ ಮ್ಯಾಕ್ಸ್‌ವೆಲ್‌ ಮಹತ್ವದ ನಿವೃತ್ತಿ ನಿರ್ಧಾರ ಪ್ರಕಟಿಸಿದರು.

    2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಸೆಮಿಫೈನಲ್ ಸೋತಿತ್ತು. ಈ ಸೋಲಿನ ನಂತರ ಮಾಜಿ ನಾಯಕ ಸ್ವೀವ್‌ಸ್ಮಿತ್‌ ಏಕದಿನ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದರು. ಈಗ ಅವರ ಸಾಲಿಗೆ ಮ್ಯಾಕ್ಸ್‌ವೆಲ್‌ ಸೇರಿದ್ದಾರೆ. ಇದನ್ನೂ ಓದಿ: ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

    ಮ್ಯಾಕ್ಸ್‌ವೆಲ್‌ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿಲ್ಲ. ಆದರೆ ಕೊನೆಯ ಬಾರಿಗೆ ಮ್ಯಾಕ್ಸ್‌ವೆಲ್‌ ಟೆಸ್ಟ್‌ ಆಡಿದ್ದು 2017 ರಲ್ಲಿ. ನಂತರ ಅವರು ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಆಗಿಲ್ಲ.

    ಒಟ್ಟು 149 ಏಕದಿನ ಪಂದ್ಯವಾಡಿರುವ ಮ್ಯಾಕ್ಸ್‌ವೆಲ್‌ 136 ಇನ್ನಿಂಗ್ಸ್‌ಗಳಿಂದ 33.81 ಸರಾಸರಿಯಲ್ಲಿ 3,990 ರನ್‌ ಹೊಡೆದಿದ್ದಾರೆ. ಈ ಆಟದಲ್ಲಿ 4 ಶತಕ, 23 ಅರ್ಧಶತಕ ಬಾರಿಸಿದ್ದಾರೆ. 77 ವಿಕೆಟ್‌ ಪಡೆದಿದ್ದಾರೆ.

    ಮ್ಯಾಕ್ಸ್‌ವೆಲ್‌ ಹಲವು ನೆನಪಿನಲ್ಲಿ ಉಳಿಯುವ ಆಟವಾಡಿದ್ದಾರೆ. 2023ರ ವಿಶ್ವಕಪ್‌ನ ಮುಂಬೈನಲ್ಲಿ ನಡೆದ ಲೀಗ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 5 ವಿಕೆಟ್‌ ನಷ್ಟಕ್ಕೆ 291 ರನ್‌ ಗಳಿಸಿತ್ತು. ನಂತರ ಬ್ಯಾಟ್‌ ಬೀಸಿದ್ದ ಆಸ್ಟ್ರೇಲಿಯಾ 91 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮುರಿಯದ 8ನೇ ವಿಕೆಟಿಗೆ ಮ್ಯಾಕ್ಸ್‌ವೆಲ್‌ ಮತ್ತು ಪ್ಯಾಟ್‌ ಕಮ್ಮಿನ್ಸ್‌ 170 ಎಸೆತಗಳಲ್ಲಿ 202 ರನ್‌ ಜೊತೆಯಾಟವಾಡಿದ್ದರು. ಈ ಪಂದ್ಯದಲ್ಲಿ ಮ್ಯಾಕ್ಸ್‌ ಔಟಾಗದೇ 201 ರನ್‌(128 ಎಸೆತ, 21 ಬೌಂಡರಿ, 10 ಸಿಕ್ಸ್‌ ) ಸಿಡಿಸಿದ್ದರು.

    ಐಪಿಎಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಮ್ಯಾಕ್ಸ್‌ವೆಲ್‌ 8 ಪಂದ್ಯಗಳಿಂದ 48 ರನ್‌ ಹೊಡೆದಿದ್ದರು. ಪಂದ್ಯದ ಮಧ್ಯೆ ಕೈ ಬೆರಳಿಗೆ ಗಾಯವಾಗಿದ್ದರಿಂದ ಮ್ಯಾಕ್ಸ್‌ವೆಲ್‌ ತಂಡವನ್ನು ತೊರೆದಿದ್ದರು.

  • ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರೋ ಭಾರತೀಯ ವೀರ ಯೋಧರಿಗೆ ಜೋಶ್ ಹ್ಯಾಜಲ್‌ವುಡ್ ಸೆಲ್ಯೂಟ್

    ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರೋ ಭಾರತೀಯ ವೀರ ಯೋಧರಿಗೆ ಜೋಶ್ ಹ್ಯಾಜಲ್‌ವುಡ್ ಸೆಲ್ಯೂಟ್

    ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಕೆಚ್ಚೆದೆಯ ಭಾರತೀಯ ಯೋಧರು (Indian Army) ನಿಜವಾಗಿಯೂ ಲೆಜೆಂಡ್ಸ್ ಎಂದು ಆಸ್ಟ್ರೇಲಿಯಾ (Australia) ಕ್ರಿಕೆಟಿಗ ಹಾಗೂ ಆರ್‌ಸಿಬಿ ಆಟಗಾರ ಜೋಶ್ ಹ್ಯಾಜಲ್‌ವುಡ್ (Josh Hazlewood) ಹಾಡಿಹೊಗಳಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಒಬ್ಬ ಆಸ್ಟ್ರೇಲಿಯಾದ ಕ್ರಿಕೆಟಿಗನಾಗಿ, ಪಾಕಿಸ್ತಾನ ಮೂಲದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ನಮ್ಮ ಕೆಚ್ಚೆದೆಯ ಭಾರತೀಯ ಸೇನಾ ಪಡೆಯಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ನೀವು ನಿಜವಾದ ಲೆಜೆಂಡ್ಸ್ ಎಂದು ಭಾರತದ ಸೈನಿಕರಿಗೆ ನನ್ನ ಹೃದಯಾಂತರದಿಂದ ಹೇಳಲು ಬಯಸುತ್ತೇನೆ. ನಿಮ್ಮ ಧೈರ್ಯ, ತ್ಯಾಗ ಮತ್ತು ರಾಷ್ಟ್ರವನ್ನು ರಕ್ಷಿಸುವ ಅಚಲ ಬದ್ಧತೆ ನನ್ನನ್ನೂ ಒಳಗೊಂಡಂತೆ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ವಿರೋಧದ ನಡುವೆಯೂ ಪಾಕ್‌ಗೆ 19,000 ಕೋಟಿ ಸಾಲ ಕೊಟ್ಟ ಐಎಂಎಫ್‌

    ಶಾಂತಿ ಮತ್ತು ಏಕತೆಯ ಮೌಲ್ಯಗಳನ್ನು ರಕ್ಷಿಸುವ ದೃಢಸಂಕಲ್ಪದೊಂದಿಗೆ ನೀವು ಪ್ರತಿದಿನ ಊಹಿಸಲಾಗದ ಅಡೆತಡೆಗಳನ್ನು ಎದುರಿಸುತ್ತಿದ್ದೀರಿ. ನಿಮ್ಮ ಹೋರಾಟವು ಭಾರತಕ್ಕಾಗಿ ಮಾತ್ರವಲ್ಲ, ಸುರಕ್ಷಿತ ಪ್ರಪಂಚದ ಭರವಸೆಗಾಗಿ ಎಂದು ತಿಳಿಯಿರಿ. ನಾವು ಆಸ್ಟ್ರೇಲಿಯಾದವರಾಗಿ ನಿಮ್ಮ ಬದ್ಧತೆಯನ್ನು ಮೆಚ್ಚುತ್ತೇವೆ. ನಾನು ನಿಮ್ಮನ್ನು ಸದಾ ಪ್ರೋತ್ಸಾಹಿಸುತ್ತೇನೆ. ದೃಢವಾಗಿರಿ, ಸುರಕ್ಷಿತವಾಗಿರಿ. ವಿಶ್ವವೇ ನಿಮ್ಮ ಬೆಂಬಲಕ್ಕಿದೆ ಎಂದು ಭರವಸೆಯ ನುಡಿಗಳನ್ನಾಡಿದರು. ಇದನ್ನೂ ಓದಿ: ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ: ಓಮರ್ ಅಬ್ದುಲ್ಲಾ

  • 2ನೇ ಬಾರಿಗೆ ಆಸ್ಟ್ರೇಲಿಯಾ ಪ್ರಧಾನಿಯಾಗಿ ಅಲ್ಬನೀಸ್‌ ಆಯ್ಕೆ – ಮೋದಿ ವಿಶ್‌

    2ನೇ ಬಾರಿಗೆ ಆಸ್ಟ್ರೇಲಿಯಾ ಪ್ರಧಾನಿಯಾಗಿ ಅಲ್ಬನೀಸ್‌ ಆಯ್ಕೆ – ಮೋದಿ ವಿಶ್‌

    ಮೆಲ್ಬರ್ನ್‌: ಆಸ್ಟ್ರೇಲಿಯಾದಲ್ಲಿ (Australia) ನಡೆದ ಚುನಾವಣೆಯಲ್ಲಿ ಆಂಥೋನಿ ಆಲ್ಬನೀಸ್‌ (Anthony Albanese) ಅವರ ನೇತೃತ್ವದ ಲೇಬರ್‌ ಪಕ್ಷವು ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ.

    ಈ ಮೂಲಕ ಅಲ್ಬನೀಸ್‌ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಯ್ಕೆಯಾಗಿದ್ದಾರೆ. ಕಳೆದ 21 ವರ್ಷಗಳಲ್ಲಿ 2ನೇ ಅವಧಿಗೆ ಆಯ್ಕೆಯಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ!

    Anthony Albanese

    2ನೇ ಬಾರಿಗೆ ಆಯ್ಕೆಯಾದ ಅಲ್ಬನೀಸ್‌ ಅವರಿಗೆ ಪ್ರಧಾನಿ ಮೋದಿ (Narendra Modi) ಸಹ ಶುಭಾಶಯ ಕೋರಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿಯಾಗಿ ಪುನರ್‌ ಆಯ್ಕೆಯಾದ ಅಲ್ಬನೀಸ್‌ ಅವರಿಗೆ ಅಭಿನಂದನೆಗಳು. ಭಾರತ-ಆಸ್ಟ್ರೇಲಿಯಾ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2019ರ ಸರ್ಜಿಕಲ್ ಸ್ಟ್ರೈಕ್‌ಗೆ ಪ್ರೂಫ್ ಸಿಕ್ಕಿಲ್ಲ – ʻಕೈʼ ಸಂಸದನ ಹೇಳಿಕೆಗೆ ಬಿಜೆಪಿ ತಿರುಗೇಟು

    ಇನ್ನೂ ವಿಜಯೋತ್ಸವದ ಬೆನ್ನಲ್ಲೇ ಮಾತನಾಡಿರುವ ಅಲ್ಬನೀಸ್‌, ಇಂದು ಆಸ್ಟ್ರೇಲಿಯಾದ ಜನರು ದೇಶದ ಮೌಲ್ಯಗಳಿಗೆ ಮತ ನೀಡಿದ್ದಾರೆ. ಜಾಗತೀಕ ಅನಿಶ್ಚಿತತೆಯ ಸಂದರ್ಭದಲ್ಲಿ ಆಶಾವಾದ ಮತ್ತು ದೃಢ ನಿಶ್ಚಯವನ್ನು ಜನ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ಬಳಿಕ ಫಸ್ಟ್‌ ಟೈಂ ಮೋದಿ ಭೇಟಿಯಾದ ಜಮ್ಮು-ಕಾಶ್ಮೀರ ಸಿಎಂ

  • US ಆಯ್ತು! ಈಗ ಆಸ್ಟ್ರೇಲಿಯಾ ವಿವಿಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಬಂದ್.. ಯಾಕೆ?

    US ಆಯ್ತು! ಈಗ ಆಸ್ಟ್ರೇಲಿಯಾ ವಿವಿಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಬಂದ್.. ಯಾಕೆ?

    ತ್ತೀಚಿನ ದಿನಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ವೀಸಾ (Student Visa) ನಿರಾಕರಣೆಯ ದರ ಹೆಚ್ಚಾಗುತ್ತದೆ. ಈ ಮೊದಲು ಅಮೆರಿಕ ಸರ್ಕಾರ (America Government) ಭಾರತಕ್ಕೆ (India) ನೀಡುತ್ತಿದ್ದ ವೀಸಾ ಸಂಖ್ಯೆಗಳಲ್ಲಿ ಗಣನೀಯವಾಗಿ ಕಡಿತಗೊಳಿಸಿತ್ತು. ಆದರೆ ಇದೀಗ ಆಸ್ಟ್ರೇಲಿಯಾದ (Australia) ಕೆಲವು ವಿಶ್ವವಿದ್ಯಾಲಯಗಳು ಭಾರತೀಯ ವಿದ್ಯಾರ್ಥಿಗಳ ವೀಸಾ ಕಡಿತಗೊಳಿಸುವಲ್ಲಿ ಮುಂದಾಗಿದ್ದಾರೆ.

    ಹೌದು, ಆಸ್ಟ್ರೇಲಿಯಾದ ಕೆಲವು ಪ್ರಮುಖ ವಿಶ್ವವಿದ್ಯಾಲಯಗಳು ಭಾರತದ ಆರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿದ್ಯಾರ್ಥಿಗಳ ವೀಸಾ ಅರ್ಜಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಂಚನೆಯ ಪ್ರಕರಣಗಳು ಹಾಗೂ ಉದ್ದೇಶರಹಿತ ಅರ್ಜಿದಾರರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಆಸ್ಟ್ರೇಲಿಯಾ ವಿಶ್ವವಿದ್ಯಾಲಯಗಳು ಈ ನಿರ್ಧಾರವನ್ನು ಕೈಗೊಂಡಿದೆ.

    ಭಾರತದ ರಾಜ್ಯಗಳು ಯಾವುವು?
    ಪಂಜಾಬ್
    ಹರಿಯಾಣ
    ಉತ್ತರ ಪ್ರದೇಶ
    ರಾಜಸ್ಥಾನ
    ಉತ್ತರಾಖಂಡ
    ಜಮ್ಮು ಮತ್ತು ಕಾಶ್ಮೀರ

    ಭಾರತೀಯ ವಿದ್ಯಾರ್ಥಿಗಳ ವೀಸಾ ಅರ್ಜಿಗಳನ್ನು ನಿರಾಕರಿಸಲು ಮುಂದಾಗಿರುವ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳಾದ ವಿಕ್ಟೋರಿಯಾದ ಫೆಡರೇಶನ್ ವಿಶ್ವವಿದ್ಯಾಲಯ, ನ್ಯೂ ಸೌತ್ ವೆಲ್ಸ್ ನ ವೆಸ್ಟರ್ನ್ ಸಿಗ್ನಿ ವಿಶ್ವವಿದ್ಯಾಲಯ, ವಿಕ್ಟೋರಿಯಾ ವಿಶ್ವವಿದ್ಯಾಲಯ, ಎಡಿತ್ ಕೋವನ್ ವಿಶ್ವವಿದ್ಯಾಲಯ, ಟಾರೆನ್ಸ್ ವಿಶ್ವವಿದ್ಯಾಲಯ ಮತ್ತು ಸೌದರ್ನ್ ಕ್ರಾಸ್ ವಿಶ್ವವಿದ್ಯಾಲಯ ಸೇರಿ ಇನ್ನಿತರ ವಿಶ್ವವಿದ್ಯಾಲಯಗಳು ಈ ನಿರ್ಧಾರ ಕೈಗೊಂಡಿವೆ.

    ವೀಸಾ ನಿರಾಕರಣೆಗೆ ಕಾರಣ:
    ಇತ್ತೀಚಿನ ದಿನಗಳಲ್ಲಿ ವೀಸಾ ಅರ್ಜಿಗಳಲ್ಲಿ ಸಲ್ಲಿಸುವವರ ಪೈಕಿ ಹೆಚ್ಚಾಗಿ ವಿದ್ಯಾರ್ಥಿ ವೀಸಾಗಳ ದುರುಪಯೋಗ ಮತ್ತು ಆಸ್ಟ್ರೇಲಿಯಾ ಅಂತರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯ ದುರುಪಯೋಗ ಸೇರಿ ಗಂಭೀರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದೆ.

    ಸದ್ಯ ಆಸ್ಟ್ರೇಲಿಯಾದಲ್ಲಿ 1,25, 000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈ ಪೈಕಿ ಆಸ್ಟ್ರೇಲಿಯಾದಲ್ಲಿ ಎರಡನೇ ಅತಿ ದೊಡ್ಡ ವಿದ್ಯಾರ್ಥಿಗಳ ಸಂವಹ ಹೊಂದಿರುವ ದೇಶ ಅದು ಭಾರತ. ಹೀಗಾಗಿ ಆಸ್ಟ್ರೇಲಿಯಾ ಸರ್ಕಾರ ಕೆಲವು ಮಾನದಂಡಗಳಿಗೆ ಅನುಗುಣವಾಗಿ ಭಾರತೀಯ ವಿದ್ಯಾರ್ಥಿಗಳ ವೀಸಾ ಅರ್ಜಿಗಳ ಪ್ರಕ್ರಿಯೆಯನ್ನು ಮುಂದುವರಿಸುತ್ತಿದೆ. ಆದರೆ ಇದರ ಜೊತೆಗೆ ಆಸ್ಟ್ರೇಲಿಯಾ ವ್ಯವಹಾರಗಳ ಇಲಾಖೆ ಹಂಚಿಕೊಂಡ ಅಂಕಿ ಅಂಶಗಳ ಮಾಹಿತಿ ಪ್ರಕಾರ, ಭಾರತದಿಂದ ಬರುವ ವಿದ್ಯಾರ್ಥಿಗಳ ವೀಸಾ ಅರ್ಜಿಗಳಲ್ಲಿ ಸರಿಸುಮಾರು ಶೇ 24.3ರಷ್ಟು ವಂಚನೆಯ ಅರ್ಜಿಗಳಾಗಿದೆ ಎಂದು ತಿಳಿಸಿದೆ.

    ನಕಲಿ ಶೈಕ್ಷಣಿಕ ದಾಖಲೆಗಳು, ಸುಳ್ಳು ಹಣಕಾಸಿನ ದಾಖಲೆಗಳು, ಅಧ್ಯಯನ ಮಾಡುವುದಾಗಿ ತಿಳಿಸಿ ಶಾಶ್ವತವಲಸೆಗಾಗಿ ಶಿಕ್ಷಣ ವೀಸಾಗಳನ್ನು ದುರ್ಬಳಕೆ ಮಾಡುತ್ತಿರುವುದು ಕೆಲವು ವಿಶ್ವವಿದ್ಯಾಲಯಗಳು ಗುರುತು ಪಡಿಸಿದೆ.

    ಇನ್ನು ಕೆಲವು ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಬಂದು ಸ್ವಲ್ಪ ಸಮಯದ ನಂತರ ಬೇರೆ ಕೋರ್ಸ್ ಹಾಗೂ ಬೇರೆ ವಿಶ್ವವಿದ್ಯಾಲಯಗಳಿಗೆ ಬದಲಾಗುತ್ತಾರೆ. ಜೊತೆಗೆ ಶೈಕ್ಷಣಿಕ ವಿಷಯಗಳಿಗಿಂತ ಹೆಚ್ಚಾಗಿ ಇನ್ನಿತರ ಹೊರಗಿನ ವ್ಯವಹಾರಗಳಿಗೆ ಆದ್ಯತೆ ನೀಡುತ್ತಾರೆ. ಹೀಗಾಗಿ ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಿಂದ ವಿದ್ಯಾರ್ಥಿಗಳ ನೇಮಕವನ್ನು ನಿಲ್ಲಿಸುವಂತೆ ಫೆಡರೇಶನ್ ವಿಶ್ವವಿದ್ಯಾಲಯ ತಿಳಿಸಿದೆ. ಅದೇ ರೀತಿ ಪಂಜಾಬ್ ಹರಿಯಾಣ ಮತ್ತು ಗುಜರಾತ್ ನಿಂದ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸುವಂತೆ ವೆಸ್ಟರ್ನ್ ಸೌತ್ ವಿಶ್ವವಿದ್ಯಾಲಯ ನಿರ್ದೇಶಿಸಿದೆ. ಇದೇ ರೀತಿ ಇನ್ನಿತರ ವಿಶ್ವವಿದ್ಯಾಲಯಗಳು ಕೂಡ ಆರೋಪಿಸಿದ್ದು, ವಿದ್ಯಾರ್ಥಿಗಳ ನೇಮಕವನ್ನು ನಿಲ್ಲಿಸುವಂತೆ ತಿಳಿಸಿದೆ.

    ಈ ವಿಶ್ವವಿದ್ಯಾಲಯಗಳು ನಿರ್ದಿಷ್ಟ ರಾಜ್ಯಗಳ ವಿದ್ಯಾರ್ಥಿ ವೀಸಾ ಅರ್ಜಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದು, ವೀಸಾ ಪರಿಶೀಲನೆಯ ಕ್ರಮಗಳನ್ನು ಹೆಚ್ಚಿಸಿದೆ.

  • ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ನವದೆಹಲಿ/ಕ್ಯಾನ್ಬೆರಾ: ಏರ್‌ ಇಂಡಿಯಾ (Air India) ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಮಾಜಿ ಸ್ಟಾರ್‌ ಕ್ರಿಕೆಟರ್‌ ಡೇವಿಡ್‌ ವಾರ್ನರ್‌ (David Warner) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʻʻನಾವು ಪೈಲಟ್‌ಗಳಿಲ್ಲದ ಏರ್‌ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ವಿಮಾನದಲ್ಲಿ ಕಾಯುತ್ತಿದ್ದೇವೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ನೀವು ಏಕೆ ಪ್ರಯಾಣಿಕರನ್ನು ಹತ್ತಿಸುತ್ತೀರಿ?ʼ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಇದಕ್ಕೆ ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ಏರ್‌ಪೋರ್ಟ್‌ನಿಂದ (Bengaluru Airport) ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನ ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ.. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

    ಡೇವಿಡ್‌ ವಾರ್ನರ್‌ ಅವರು ಟ್ರಾವೆಲ್‌ ಏಜೆಂಟ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್‌ ಬುಕ್‌ ಮಾಡಿದ ಕಾರಣ ಟ್ರಾವೆಲ್‌ ಏಜೆಂಟ್‌ ಟಿಕೆಟ್‌ ಹಣ ವಾಪಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಮುರಿದ ಸೀಟನ್ನು ನೀಡಿದ್ದಕ್ಕೆ ಏರ್‌ ಇಂಡಿಯಾ ವಿರುದ್ಧ ಕಿಡಿ ಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಏರ್‌ ಇಂಡಿಯಾವನ್ನು ಟೀಕಿಸಿದ್ದರು. ಇದನ್ನೂ ಓದಿ: ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

  • ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋತ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ

    ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋತ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ

    ಮುಂಬೈ: ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್‌ ಸ್ಟಾರ್‌ ಬ್ಯಾಟರ್‌ ಸ್ಟೀವ್‌ ಸ್ಮಿತ್‌ (Steve Smith) ನಿವೃತ್ತಿ ಘೋಷಿಸಿದ್ದಾರೆ.

    ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು. ಇದನ್ನೂ ಓದಿ: ಸಚಿನ್‌ ದಾಖಲೆ ಬ್ರೇಕ್‌ – ವಿಶ್ವದಾಖಲೆ ಬರೆದ ಕೊಹ್ಲಿ

    35 ವಯಸ್ಸಿನ ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಡಿದ್ದು, 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧ 164 ರನ್ ಗಳಿಸಿದ್ದು ಅವರ ಅತ್ಯಧಿಕ ಸ್ಕೋರ್. ಲೆಗ್ ಸ್ಪಿನ್ನಿಂಗ್ ಆಲ್‌ರೌಂಡರ್ ಆಗಿ ಪಾದಾರ್ಪಣೆ ಮಾಡಿದ ಅವರು 28 ವಿಕೆಟ್‌ಗಳನ್ನು ಪಡೆದಿದ್ದಾರೆ. 90 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

    ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯ ಪ್ರಕಾರ, ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಆಟಗಾರರಿಗೆ ‘ಏಕದಿನ ಪಂದ್ಯಗಳಿಂದ ನಿವೃತ್ತರಾಗುವುದಾಗಿ’ ಹೇಳಿದ್ದರು. ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

    ಸ್ಮಿತ್‌ 2015 ಮತ್ತು 2023 ರಲ್ಲಿ ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಮೈಕೆಲ್ ಕ್ಲಾರ್ಕ್ ನಿವೃತ್ತರಾದ ನಂತರ ಸ್ಮಿತ್ 50 ಓವರ್‌ಗಳ ತಂಡದ ನಾಯಕತ್ವ ವಹಿಸಿಕೊಂಡರು. ಅವರು 64 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿ, ಆ ಪೈಕಿ 32 ಪಂದ್ಯಗಳಲ್ಲಿ ಗೆದ್ದರು ಮತ್ತು 28 ಪಂದ್ಯಗಳಲ್ಲಿ ಸೋತರು. ನಾಲ್ಕು ಪಂದ್ಯಗಳಲ್ಲಿ ಯಾವುದೇ ಫಲಿತಾಂಶವಿಲ್ಲ. ಗಾಯಗೊಂಡಿದ್ದ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಚಾಂಪಿಯನ್ಸ್ ಟ್ರೋಫಿಗೆ ಅವರು ಮಧ್ಯಂತರ ಆಧಾರದ ಮೇಲೆ ನಾಯಕತ್ವ ವಹಿಸಿಕೊಂಡಿದ್ದರು.

  • ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    – ಮತ್ತೆ ಭಾರತಕ್ಕೆ ʻಹೆಡ್ಡೇಕ್‌ʼ ಆಗುತ್ತಾ?

    ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಅಂತಿಮಘಟ್ಟ ತಲುಪಿದೆ. ಇಂದು ನಡೆಯಲಿರೋ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ (Team India) ಹಾಗೂ ಆಸ್ಟ್ರೇಲಿಯಾ (Australia) ಮುಖಾಮುಖಿಯಾಗಲಿವೆ.

    ಮಧ್ಯಾಹ್ನ 2:30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್‌ ಫೈನಲ್‌ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ (champions trophy) ಈವರೆಗೆ ಭಾರತ ಮತ್ತು ಆಸೀಸ್‌ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು. ಇದನ್ನೂ ಓದಿ: ವರುಣ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ಬರ್ನ್‌ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ

    ಪಿಚ್‌ ರಿಪೋರ್ಟ್‌ ಹೇಗಿದೆ?
    ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಿದ ಪಿಚ್‌ನಲ್ಲಿಯೇ ಈ ಪಂದ್ಯ ನಡೆಯಲಿದೆ. ಇನ್ನೂ ದುಬೈನ ಯಾವುದೇ ಅಂಗಳದಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳುತ್ತದೆ. ಹೀಗಾಗಿ ಸ್ಪಿನ್‌ ಮಾಂತ್ರಿಕರು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸೋ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ ಜೊತೆಗೆ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಸ್ಪೀಡ್ ಗನ್ ಮೊಹಮ್ಮದ್ ಶಮಿ ಜೊತೆಗೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್‌ನಲ್ಲಿ ಜೊತೆಯಾಗಲಿದ್ದಾರೆ.

    ಇಬ್ಬನಿಯ ಸಮಸ್ಯೆ ಇಲ್ಲದಿರುವ ಕಾರಣ, ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. 270-280 ರನ್‌ ಗೆಲ್ಲುವ ಸ್ಕೋರ್‌ ಆಗಬಹುದು. ಆದ್ರೆ ಸದ್ಯ ಟೀಂ ಇಂಡಿಯಾ ಮೊದಲು ಬ್ಯಾಟ್‌ ಮಾಡಿದ್ರೆ 300 ರನ್‌ ಅಥವಾ ಮೊದಲು ಬೌಲಿಂಗ್‌ ಮಾಡಿದ್ರೆ ಆಸೀಸ್‌ ತಂಡವನ್ನು 250 ರನ್‌ಗಳಿಗೆ ಕಟ್ಟಿಹಾಕುವ ಯೋಚನೆಯಲ್ಲಿದೆ. ಸದ್ಯ ಸತತ 13 ಬಾರಿ ಟಾಸ್‌ ಸೋತಿರುವ ಟೀಂ ಇಂಡಿಯಾ ಈಬಾರಿಯಾದ್ರೂ ಟಾಸ್‌ ಗೆಲ್ಲುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ಇನ್ನೂ ಟೀಂ ಇಂಡಿಯಾ ಬ್ಯಾಟರ್‌ಗಳು ಫಾರ್ಮ್‌ನಲ್ಲಿ ಇರೋದ್ರಿಂದ ಆಸೀಸ್ ವಿರುದ್ಧ ರನ್ ಶಿಖರ ಕಟ್ಟುವ ಸಾಧ್ಯತೆಯಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಶುಭಮನ್ ಗಿಲ್, ಆರಂಭದಲ್ಲಿ ಬಿಗ್ ಇನ್ನಿಂಗ್ಸ್ ಕಟ್ಟಬೇಕಿದೆ. 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ್ರೆ, ಕನ್ನಡಿಗ ಅಕ್ಷರ್‌ ಪಟೇಲ್‌, ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳಾಗಿ ಕಣಕ್ಕಿಳಿಯಲು ಕಾದುಕುಳಿತಿದ್ದಾರೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್‌ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ

    ʻಭಾರತಕ್ಕೆ ಹೆಡ್ಡೇಕ್‌ʼ
    ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಕೂಡ ಸಾಲಿಡ್ ಫಾರ್ಮ್‌ನಲ್ಲಿದೆ. ಅದ್ರಲ್ಲೂ ಐಸಿಸಿ ಟ್ರೋಫಿ ಟೂರ್ನಿಗಳಾದ್ರೆ, ಕಾಂಗರೂಗಳು ಎದುರಾಳಿ ತಂಡಗಳನ್ನು ಬೇಟೆಯಾಡೋದ್ರಲ್ಲಿ ಅನುಮಾನವೇ ಇಲ್ಲ. ಎಷ್ಟೇ ಟಾರ್ಗೆಟ್ ಆಗಿರಲಿ, ಎಂತಹದ್ದೇ ಸಂದರ್ಭ ಇರಲಿ, ಆಸೀಸ್ ಆಟಗಾರರು ವೀರಾವೇಶದಿಂದ ಹೋರಾಡ್ತಾರೆ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡಕ್ಕೆ ಟ್ರಾವಿಸ್‌ ಹೆಡ್‌ ಮತ್ತೆ ಕಾಡುತ್ತಾರಾ? ಅಥವಾ ಶಮಿ ಸಾರಥ್ಯ ಬೌಲಿಂಗ್‌ ಪಡೆ ಬಹುಬೇಗನೆ ವಿಕೆಟ್‌ ಪಡೆದು ಪೆವಿಲಿಯನ್‌ಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

    ವಿಶ್ವಕಪ್ ಸೋಲಿಗೆ ತಿರುಗೇಟು ಕೊಡುತ್ತಾ ಟೀಂ ಇಂಡಿಯಾ..?
    ಇನ್ನೂ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ 2023ರ ವಿಶ್ವಕಪ್ ಫೈನಲ್ ಪಂದ್ಯದ ಸೋಲು ಮರೆಯೋದಕ್ಕೆ ಸಾಧ್ಯವಿಲ್ಲ. ಒಂದೂವರೆ ವರ್ಷಗಳ ನಂತರ ಮತ್ತೊಂದು ಐಸಿಸಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ ಎದುರಾಗ್ತಿವೆ. ಆಸ್ಟ್ರೇಲಿಯಾವನ್ನು ಸೋಲಿಸಿ ಸೇಡು ತೀರಿಸಿಕೊಳ್ಳೋಕೆ ಇದೊಂದು ಒಳ್ಳೆಯ ಅವಕಾಶ. ರೋಹಿತ್ ಶರ್ಮಾ ಪಡೆ ಆಸೀಸ್‌ನ್ನು ಸೋಲಿಸಿ ಸೇಡು ತೀರಿಸಿಕೊಳ್ಳುತ್ತದೆ ಎಂದು ಟೀಂ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ನಿರೀಕ್ಷಿಸಿದ್ದಾರೆ.

  • ಕಿವೀಸ್‌ ವಿರುದ್ಧ ಭಾರತ ಗೆದ್ದರೆ ಸೆಮಿಸ್‌ನಲ್ಲಿ ಬಲಿಷ್ಠ ಆಸೀಸ್‌ ಎದುರಾಳಿ – ಹೇಗಂತೀರಾ?

    ಕಿವೀಸ್‌ ವಿರುದ್ಧ ಭಾರತ ಗೆದ್ದರೆ ಸೆಮಿಸ್‌ನಲ್ಲಿ ಬಲಿಷ್ಠ ಆಸೀಸ್‌ ಎದುರಾಳಿ – ಹೇಗಂತೀರಾ?

    ದುಬೈ: ಲೀಗ್‌ ಸುತ್ತಿನ ಆರಂಭಿಕ ಎರಡೂ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್‌ (New Zealand) ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ಭಾರತ (Team India) ಗೆದ್ದರೆ, ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ, ಸೋತರೆ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟಕ್ಕಿಳಿಯಲಿದೆ.

    ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ – ಕಿವೀಸ್‌ ಈಗಾಗಲೇ ಸೆಮೀಸ್‌ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೂ ಅಜೇಯವಾಗಿ ಸೆಮೀಸ್‌ ಪ್ರವೇಶಿಸುವ ಅವಕಾಶವನ್ನು ಪಂದ್ಯ ದಯಪಾಲಿಸಿದೆ. ಇದನ್ನೂ ಓದಿ: ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಕಿವೀಸ್‌ ಎ-ಗುಂಪಿನ ಅಗ್ರಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಭಾರತ ಗೆದ್ದರೇ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ಇದನ್ನೂ ಓದಿ: Champions Trophy: ಸೋತ ಇಂಗ್ಲೆಂಡ್‌ ಟೂರ್ನಿಯಿಂದ ಔಟ್‌ – ಗೆದ್ದ ದ. ಆಫ್ರಿಕಾ ಸೆಮಿಗೆ ಎಂಟ್ರಿ

    ಭಾರತ ಗೆದ್ದರೆ ಸೆಮಿಸ್‌ನಲ್ಲಿ ಆಸೀಸ್‌ ಎದುರಾಳಿ:
    ಇತ್ತ ಬಿ-ಗುಂಪಿನಲ್ಲಿ 5 ಅಂಕ ಪಡೆದಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ,‌ ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದೆ. ಅಂಕಪಟ್ಟಿಯ ಪ್ರಕಾರ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಹಾಗೂ ಬಿ ಗುಂಪಿಯಲ್ಲಿ 2ನೇ ಸ್ಥಾನ ಪಡೆದ ಪಂದ್ಯಕ್ಕೆ ಹಾಗೂ ಎ-ಗುಂಪಿಯನ 2ನೇ ಸ್ಥಾನ ಪಡೆದ ತಂಡಕ್ಕೆ ಮತ್ತು ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಹೀಗಾಗಿ ಭಾರತ ಇಂದಿನ ಪಂದ್ಯದಲ್ಲಿ ಬಲಿಷ್ಠ ಆಸೀಸ್‌ ತಂಡವನ್ನು ಎದುರಿಸಲೀದೆ.

    ಮರುಕಳಿಸುವುದೇ 2023ರ ವಿಶ್ವಕಪ್‌ ನೆನಪು:
    2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿ ಫೈನಲ್‌ನಲ್ಲಿ ಭಾರತ, ಆಸೀಸ್‌ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಅಂದು ಭಾರತ ಆಸೀಸ್‌ ಬಿಗಿ ಬೌಲಿಂಗ್‌ ಹಿಡಿತಕ್ಕೆ ತತ್ತರಿಸಿ 240 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಟ್ರಾವಿಸ್‌ ಹೆಡ್‌ ಅವರ ಶತಕದಾಟದಿಂದಾಗಿ ಭಾರತಕ್ಕೆ ಸೋಲಾಯಿತು. ಇದು ಇಡೀ ಭಾರತೀಯರಿಗೆ ನೋವುಂಟುಮಾಡಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಭಾರತಕ್ಕೆ ಅವಕಾಶ ಸಿಗುವುದೇ ಅನ್ನೋದನ್ನ ಕಾದುನೋಡಬೇಕಿದೆ.