Tag: Australian cricket

  • ಇಂದು ಭಾವನಾತ್ಮಕ ಪೋಸ್ಟ್ ಮಾಡಿದ್ದ ಶೇನ್ ವಾರ್ನ್

    ಇಂದು ಭಾವನಾತ್ಮಕ ಪೋಸ್ಟ್ ಮಾಡಿದ್ದ ಶೇನ್ ವಾರ್ನ್

    ಸಿಡ್ನಿ: ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಲೆಜೆಂಡ್ ಶೇನ್ ವಾರ್ನ್ ಇಂದು ಬೆಳಗ್ಗೆ ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದರು. ಆ ಬಳಿಕ ಇದೀಗ ವಾರ್ನ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

    ಹೌದು ಇಂದು ಬೆಳಗ್ಗೆ ಟ್ವಿಟ್ಟರ್‌ನಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ರಾಡ್ ಮಾರ್ಷ್ ನಿಧನಕ್ಕೆ ಟ್ವೀಟ್ ಮಾಡಿ ವಾರ್ನ್ ಸಂತಾಪ ಸೂಚಿಸಿದ್ದರು. ಆ ಬಳಿಕ ಇದೀಗ 12 ಗಂಟೆಗಳ ಅವಧಿಯಲ್ಲಿ 52 ವರ್ಷದ ವಾರ್ನ್ ಕೂಡ ಇಹಲೋಕ ತ್ಯಜಿಸಿದ್ದು ಕ್ರಿಕೆಟ್ ಲೋಕವೇ ಶಾಕ್ ಆಗಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇನ್ನಿಲ್ಲ

    ಟ್ವೀಟ್‍ನಲ್ಲಿ ಏನಿದೆ?
    ರಾಡ್ ಮಾರ್ಷ್ ನಿಧನದ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ. ರಾಡ್ ಮಾರ್ಷ್ ಲೆಜೆಂಡ್ ಆಟಗಾರ, ಹಲವು ಯುವಕ, ಯುವತಿಯರಿಗೆ ಸ್ಫೂರ್ತಿಯಾಗಿದ್ದರು. ಅವರಲ್ಲಿ ಕ್ರಿಕೆಟ್ ಬಗ್ಗೆ ತುಂಬಾ ಜ್ಞಾನವಿತ್ತು. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರಿಗೆ ಸಾಕಷ್ಟು ನೆರವಾಗಿದ್ದರು. ಆದರೆ ಇದೀಗ ನಮ್ಮೊಂದಿಗಿಲ್ಲ. ಅವರ ಕುಟುಂಬಕ್ಕೆ ದೇವರು ಅಗಲಿಕೆಯ ನೋವನ್ನು ತಡೆಯುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದರು. ಇದನ್ನೂ ಓದಿ: ಶತಕ ವಂಚಿತ ಪಂತ್ – ಬೃಹತ್ ಮೊತ್ತದತ್ತ ಭಾರತ

    ಶೇನ್ ವಾರ್ನ್ ನಿಧನದ ಸುದ್ದಿ ಕೇಳಿ ಮಾಜಿ ಆಟಗಾರರು ಸೇರಿದಂತೆ ಅಭಿಮಾನಿಗಳು ಶಾಕ್ ಆಗಿದ್ದಾರೆ. ಭಾರತ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

  • ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇನ್ನಿಲ್ಲ

    ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇನ್ನಿಲ್ಲ

    ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ, ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

    52 ವರ್ಷದ ಶೇನ್ ವಾರ್ನ್‌ಗೆ ಥಾಯ್ಲೆಂಡ್‌ನ ವಿಲ್ಲಾದಲ್ಲಿ ಹೃದಯಾಘಾತವಾಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಫಲ ನೀಡದೆ, ವಾರ್ನ್ ಕೊನೆಯುಸಿರೆಳೆದಿದ್ದಾರೆ.

    ಆಸ್ಟ್ರೇಲಿಯಾದ ತಂಡದಲ್ಲಿ ಗೂಗ್ಲಿ ಎಸೆತದ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ವಾರ್ನ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಹಲವು ತಂಡಗಳಿಗೆ ಕೋಚ್ ಮತ್ತು ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.