Tag: Authorities

  • ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್​ಗಳಿಂದ ಕರೆ

    ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್​ಗಳಿಂದ ಕರೆ

    ಕಾಬೂಲ್: ತಾಲಿಬಾನ್ ಉಗ್ರರು ಅಫ್ಘಾನ್‍ನಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಪೊಲೀಸ್ ಸಿಬ್ಬಂದಿ ಮರಳಿ ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾಲಿಬಾನ್ ಕಮಾಂಡರ್​ಗಳಿಂದ ನಮಗೆ ಕರೆ ಬಂದ ನಂತರ ಶನಿವಾರದಿಂದ ನಾವು ಕೆಲಸಕ್ಕೆ ಮರಳಿದ್ದೇವೆ. ಎರಡು ವಾರಗಳ ನಂತರ ನಾವು ಮತ್ತೆ ಕೆಲಸಕ್ಕೆ ಬಂದಿದ್ದೇವೆ. ನಿನ್ನೆ ಅದ್ಭುತವಾಗಿತ್ತು, ಮತ್ತೆ ಕೆಲಸಕ್ಕೆ ಬಂದಿರುವುದು ಖುಷಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ಹುಬ್ಬಳ್ಳಿ ರೈಲಿನಲ್ಲಿ 15 ಕೆಜಿ ಹಸಿ ಗಾಂಜಾ ಪತ್ತೆ!

    kabul

    ಹಿಂದಿನ ಸರ್ಕಾರಕ್ಕಾಗಿ ಕೆಲಸ ಮಾಡಿದ ಪೊಲೀಸ್ ಮತ್ತು ಇತರ ಭದ್ರತಾ ಇಲಾಖೆಯಲ್ಲಿ ಕೆಲಸ ಮಾಡಿದವರನ್ನು ಕ್ಷಮಿಸಿದ್ದೇವೆ ಎಂದು ತಾಲಿಬಾನ್ ಹೇಳಿದೆ. ಇದನ್ನೂ ಓದಿ:  ನಿವಾಸದಲ್ಲಿದ್ದ ಮರಗಳಿಗೆ ಕೊಡಲಿ – ಮಂಡ್ಯ ಎಸ್‍ಪಿಯಿಂದ ಸರ್ವಾಧಿಕಾರಿ ಧೋರಣೆ

    ಅಮೆರಿಕ ಸೇನೆ ಕಾಬೂಲ್ ವಿಮಾನ ನಿಲ್ದಾಣವನ್ನು ತೊರೆದ ಬಳಿಕ ಚೆಕ್ ಪೋಸ್ಟ್ ನಲ್ಲಿದ್ದ ಪೊಲೀಸ್ ಸಿಬ್ಬಂದಿ ಗೈರು ಹಾಜರಿ ಹಾಕಿದ್ದರು. ಈಗ ತಾಲಿಬಾನ್ ಕಮಾಂಡರ್​ಗಳಿಂದ ಕರೆ ಬಂದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.

  • ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕರೆತರಲು ಅಧಿಕಾರಿಗಳ ಹರಸಾಹಸ

    ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕರೆತರಲು ಅಧಿಕಾರಿಗಳ ಹರಸಾಹಸ

    – ದೇವದುರ್ಗದ ಜಾಲಹಳ್ಳಿಯಲ್ಲಿ 105 ಜನಕ್ಕೆ ಸೋಂಕು

    ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ದೇವದುರ್ಗದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಆದರೆ ಸೋಂಕಿತರು ಮಾತ್ರ ಕೋವಿಡ್ ಆರೈಕೆ ಕೇಂದ್ರಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಸೋಂಕಿತರು, ಮನೆಯಲ್ಲೇ ಉಳಿಯುತ್ತಿದ್ದಾರೆ. ಹೀಗಾಗಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಕರೆತರಲು ದೇವದುರ್ಗ ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

    ಎರಡನೇ ಅಲೆಯಲ್ಲಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮವೊಂದರಲ್ಲೇ 105 ಜನಕ್ಕೆ ಕೊರೊನಾ ಸೋಂಕು ಧೃಡವಾಗಿದೆ. ಇದುವರೆಗೆ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಜಾಲಹಳ್ಳಿ ಗ್ರಾಮದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ದೇವದುರ್ಗ ತಹಶೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸೋಂಕಿತರನ್ನ ಕರೆತರುವ ಯತ್ನ ನಡೆದಿದೆ. ಸೋಂಕಿತರ ಮನೆ ಮನೆಗೆ ಹೋಗಿ ತಹಶೀಲ್ದಾರ್ ಕರೆದರೂ ಕೇರ್ ಸೆಂಟರ್ ಗೆ ಬರಲು ಜನ ಹಿಂದೇಟು ಹಾಕುತ್ತಿದ್ದಾರೆ.

    ಕೇವಲ ದೇವದುರ್ಗ ತಾಲೂಕು ಮಾತ್ರವಲ್ಲದೆ ಜಿಲ್ಲೆಯ ವಿವಿಧೆಡೆ ತೆರೆಯಲಾದ ಒಟ್ಟು 7 ಕೋವಿಡ್ ಸೆಂಟರ್ ಗಳಿಗೆ ದಾಖಲಾಗಲು ಸೋಂಕಿತರು ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಗ್ರಾಮೀಣ ಭಾಗದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಅಧಿಕಾರಿಗಳಿಗೆ ತಲೆನೋವಾಗಿದೆ.

  • ಪಾಲಿಕೆ ಅಧಿಕಾರಿಗಳು ಅಂಗಡಿ ತೆರವುಗೊಳಿಸಿದ್ದೇ ವ್ಯಕ್ತಿ ಸಾವಿಗೆ ಕಾರಣ: ಸ್ಥಳೀಯರ ಆರೋಪ

    ಪಾಲಿಕೆ ಅಧಿಕಾರಿಗಳು ಅಂಗಡಿ ತೆರವುಗೊಳಿಸಿದ್ದೇ ವ್ಯಕ್ತಿ ಸಾವಿಗೆ ಕಾರಣ: ಸ್ಥಳೀಯರ ಆರೋಪ

    ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಗಳು ಅಂಗಡಿ ತೆರವುಗೊಳಿಸಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ.

    ಶಿವಮೊಗ್ಗ ವಿನೋಬನಗರದ 60 ಅಡಿ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 4 ಅಂಗಡಿಗಳನ್ನು ಕಳೆದ 19ರಂದು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದ ಮನನೊಂದ ಇಸ್ತ್ರಿ ಅಂಗಡಿ ನಡೆಸುತ್ತಿದ್ದ ಚಂದ್ರಶೇಖರ್ ಕಳೆದ 2 ದಿನದ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದರು. ಚಂದ್ರಶೇಖರ್ ಸಾವಿಗೆ ಪಾಲಿಕೆ ಸಿಬ್ಬಂದಿಯೇ ನೇರ ಹೊಣೆ. ಹೀಗಾಗಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಇಂದು ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಕಳೆದ ಹಲವು ವರ್ಷಗಳಿಂದ ಮಹಾನಗರ ಪಾಲಿಕೆಗೆ ಸೇರಿದ ಜಾಗದಲ್ಲಿ ತರಕಾರಿ ಅಂಗಡಿ, ಟೀ ಕ್ಯಾಂಟೀನ್ ಹಾಗೂ ಇಸ್ತ್ರಿ ಅಂಗಡಿಗಳನ್ನು ಇಟ್ಟುಕೊಂಡು 4 ಕುಟುಂಬಗಳು ಜೀವನ ಸಾಗಿಸುತ್ತಿದ್ದವು. ಆದರೆ ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ 8 ದಿನದ ಹಿಂದೆ ಏಕಾಏಕಿ ಅಂಗಡಿಗಳನ್ನು ತೆರವುಗೊಳಿದ್ದರು. ಕೊರೊನಾ ವೇಳೆ ಜೀವನ ಸಾಗಿಸುವುದೇ ಕಷ್ಟಕರವಾಗಿತ್ತು. ಇಂತಹ ಸಮಯದಲ್ಲಿ ಹೇಗೋ ಜೀವನ ಸಾಗಿಸುತ್ತಿದ್ದ ಚಂದ್ರಶೇಖರ್ ಅವರಿಗೆ ಅಂಗಡಿ ತೆರವು ಮಾಡಿದ್ದು ಮತ್ತಷ್ಟು ಆತಂಕಕ್ಕೀಡು ಮಾಡಿತ್ತು.

    ಮಹಾನಗರ ಪಾಲಿಕೆ ಅಂಗಡಿ ತೆರವುಗೊಳಿಸಿದ್ದರಿಂದ ಮುಂದೆ ಜೀವನ ನಡೆಸುವುದು ಹೇಗೆ ಎಂಬ ಯೋಚನೆಯಿಂದಾಗಿಯೇ ಚಂದ್ರಶೇಖರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದ್ದರಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ಚಂದ್ರಶೇಖರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಒಂದು ವೇಳೆ ಪಾಲಿಕೆ ಪರಿಹಾರ ನೀಡದೇ ಹೋದರೆ ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆದುವುದಾಗಿ ಎಚ್ಚರಿಕೆ ನೀಡಿದ್ದಾರೆ.

  • ಕೊರೊನಾಗೆ ಬಲಿಯಾದ ವ್ಯಕ್ತಿಯ ಮೃತದೇಹವನ್ನು ಜೆಸಿಬಿಯಲ್ಲಿ ಸಾಗಣೆ

    ಕೊರೊನಾಗೆ ಬಲಿಯಾದ ವ್ಯಕ್ತಿಯ ಮೃತದೇಹವನ್ನು ಜೆಸಿಬಿಯಲ್ಲಿ ಸಾಗಣೆ

    – ಅಮಾನವೀಯವಾಗಿ ನಡೆದುಕೊಂಡ ಪುರಸಭೆ ಅಧಿಕಾರಿಗಳು

    ಹೈದರಾಬಾದ್: ಕೊರೊನಾಗೆ ಬಲಿಯಾದ ಸೋಂಕಿತನ ಮೃತದೇಹವನ್ನು ಜೆಸಿಬಿ ಯಂತ್ರದ ಮೂಲಕ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಪಾಲಾಸ ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ.

    ಕೊರೊನಾದ ಸಮಯದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಿದ್ದ ಮಾಜಿ ಪುರಸಭೆಯ ಉದ್ಯೋಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇವರು ತಮ್ಮ ಪಾಲಾಸ ಪಟ್ಟಣದಲ್ಲಿನ ಮನೆಯಲ್ಲಿ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಜೆಸಿಬಿ ವಾಹನದಲ್ಲಿ ಎತ್ತಿಕೊಂಡು ಹೋಗಿ ಗುಂಡಿ ಒಳಗೆ ಹಾಕಿ ಮುಚ್ಚಿ ಅಂತ್ಯಕ್ರಿಯೆ ಮಾಡಲಾಗಿದೆ.

    ಮನೆಯಲ್ಲೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆಗ ನೆರೆಹೊರೆಯವರು ಮೃತದೇಹ ಇಲ್ಲೇ ಇದ್ದರೆ ನಮಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ. ಆಗ ಮೃತನ ಮೊಮ್ಮಗಳು ಮತ್ತು ಸರ್ಕಾರಿ ಸ್ವಯಂ ಸೇವಕರು ಪುರಸಭೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿದ್ದರು, ಮೃತದೇಹವನ್ನು ಮಟ್ಟದೇ ಜೆಸಿಬಿ ಯಂತ್ರದಲ್ಲಿ ಮೃತದೇಹವನ್ನು ಸಾಗಿಸಿ ನಂತರ ಅಂತ್ಯಕ್ರಿಯೆ ಮಾಡಿದ್ದಾರೆ.

    ಈ ವಿಚಾರವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದು, ಈ ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಇದು ಅಮಾನವೀಯ ಘಟನೆ. ಈ ರೀತಿಯ ಪ್ರಕರಣಗಳನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಸರ್ಕಾರವೇ ಪ್ರೋಟೋಕಾಲ್ ಅನ್ನು ಹೊರಡಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

    ಈ ಘಟನೆ ಕುರಿತು ಆಂಧ್ರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಾಲಾಸ ಪುರಸಭೆ ಆಯುಕ್ತ ನಾಗೇಂದ್ರ ಕುಮಾರ್ ಮತ್ತು ನೈರ್ಮಲ್ಯ ನಿರೀಕ್ಷಕ ಎನ್ ರಾಜೀವ್ ಅವರನ್ನು ಅಮಾನತುಗೊಳಿ ಶ್ರೀಕಾಕುಲಂ ಜಿಲ್ಲಾಧಿಕಾರಿ ಜೆ.ನಿವಾಸ್ ಆದೇಶಿಸಿದ್ದಾರೆ.

  • ಸೂರ್ಯಗ್ರಹಣದ ವೇಳೆ ತಿಂಡಿ ಸೇವಿಸಿದ ಅಧಿಕಾರಿಗಳು

    ಸೂರ್ಯಗ್ರಹಣದ ವೇಳೆ ತಿಂಡಿ ಸೇವಿಸಿದ ಅಧಿಕಾರಿಗಳು

    ರಾಮನಗರ: ಸೂರ್ಯಗ್ರಹಣ, ಚಂದ್ರ ಗ್ರಹಣದ ವೇಳೆ ತಿಂಡಿ ಸೇವಿಸಬಾರದು, ಊಟ ಮಾಡಬಾರದು ಅಷ್ಟೇ ಏಕೆ ಹನಿ ನೀರು ಕೂಡಾ ಕುಡಿಯಬಾರದೆಂಬ ನಂಬಿಕೆ ಜನರಲ್ಲಿದೆ. ಆದರೆ ಇದು ನೆರಳು-ಬೆಳಕಿನಾಟ ಇದರಲ್ಲಿ ಯಾವುದೇ ಕೇತು, ರಾಹುವಿನ ಪಾತ್ರವಿಲ್ಲ ಗ್ರಹಣದ ವೇಳೆ ಊಟ, ತಿಂಡಿ ಸೇವಿಸಬಹುದು ಎಂದು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಹಣದ ವೇಳೆಯೇ ರಾಮನಗರ ಅಧಿಕಾರಿಗಳು ತಿಂಡಿ ಸೇವಿಸಿದ್ದಾರೆ.

    ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಜಿಲ್ಲಾ ಸಮಿತಿ, ವಿಜ್ಞಾನ ಹಾಗೂ ತಂತ್ರಜ್ಞಾ ಇಲಾಖೆ ಹಾಗೂ ಸಾರ್ವಜನಿಕರ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಕಂಕಣ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಸೇರಿದಂತೆ ನೂರಾರು ಸಾರ್ವಜನಿಕರು ಕಂಕಣ ಸೂರ್ಯ ಗ್ರಹಣವನ್ನ ವೀಕ್ಷಣೆ ಮಾಡಿದರು.

    ಇದೇ ವೇಳೆ ಸಾರ್ವಜನಿಕರಲ್ಲಿ ಮೂಢನಂಬಿಕೆ ತೊಡೆದು ಹಾಕಲು ಅಧಿಕಾರಿಗಳು ಸೂರ್ಯ ಗ್ರಹಣ ವೀಕ್ಷಣೆ ವೇಳೆಯೇ ತಿಂಡಿ ತಿನ್ನುವಂತಹ ಕೆಲಸ ಮಾಡುವುದರ ಮೂಲಕ ಗ್ರಹಣದ ವೇಳೆ ತಿಂಡಿ, ನೀರು, ಊಟ ಸೇವನೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಇದೊಂದು ನೆರಳು-ಬೆಳಕಿನಾಟ ಅಷ್ಟೇ, ಜನರು ಗ್ರಹಣವನ್ನು ವೈಜ್ಞಾನಿಕವಾಗಿ ನೋಡಬೇಕು ಎಂದು ಅಧಿಕಾರಿಗಳು ತಿಳಿಸಿದರು.

    ಅಧಿಕಾರಿಗಳ ಮನವಿ ಸಾಕಷ್ಟು ಜನರು ಸಹ ಸೂರ್ಯ ಗ್ರಹಣ ನೋಡುತ್ತಲೇ ತಿಂಡಿಯನ್ನು ಸೇವಿಸಿದರು. ಅಲ್ಲದೇ ತಮ್ಮ ಸಹವರ್ತಿಗಳಿಗೂ ಸಹ ತಿಂಡಿ ಸೇವಿಸಿ, ನೀರು ಕುಡಿಯುವಂತೆ ಮನವಿ ಮಾಡಿದರು. ಇದೇ ವೇಳೆ ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳಿಗೆ ಗ್ರಹಣದ ಬಗ್ಗೆ ಮಾಹಿತಿ ನೀಡಲಾಯಿತು.