Tag: AutoRickshaws

  • ಚಾರ್ಮಾಡಿ ಘಾಟಿಯಲ್ಲಿ ಅಂಬುಲೆನ್ಸ್-ಆಟೋ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

    ಚಾರ್ಮಾಡಿ ಘಾಟಿಯಲ್ಲಿ ಅಂಬುಲೆನ್ಸ್-ಆಟೋ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

    ಚಿಕ್ಕಮಗಳೂರು: ಅಂಬುಲೆನ್ಸ್ (Ambulance) ಹಾಗೂ ಆಟೋ (AutoRickshaws) ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ನಡೆದಿದೆ.

    ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಮೂಲದ ರೋಗಿಯನ್ನು ಮಂಗಳೂರು (Mangaluru) ಆಸ್ಪತ್ರೆಯಿಂದ ಮೂಡಿಗೆರೆ ಬಂದು ಬಿಟ್ಟು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬರುತ್ತಿದ್ದ ಆಟೋ ಚಾರ್ಮಾಡಿಯ ಒಂದನೇ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದೆ. ಇದನ್ನೂ ಓದಿ: ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತ , 67ರ ವೃದ್ಧಸಾವು

    ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರನ್ನು ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಮೂಲತಃ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ್ದಾಗಿದೆ. ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಶಾಲೆ ಬಿಟ್ಟ ಶಾರೀಕ್- ಕುಕ್ಕರ್ ಬಾಂಬರ್ ಹಿನ್ನೆಲೆಯೇ ರೋಚಕ

    Live Tv
    [brid partner=56869869 player=32851 video=960834 autoplay=true]