Tag: Avadhuta

  • ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಎಲ್ಲರೂ ರಾಮ ನಾಮ ಸ್ಮರಣೆ ಮಾಡುವ ಶುಭ ಘಳಿಗೆಯಲ್ಲಿ ‘ಶ್ರೀ ರಾಮ್, ಜೈ ಹನುಮಾನ್’ (Shri Ram Jai Hanuman) ಎಂಬ ಹೊಚ್ಚ ಹೊಸ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿದೆ.  ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಲಿರುವ ‘ಶ್ರೀ ರಾಮ್, ಜೈ ಹನುಮಾನ್’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

    ರಾಮ ಮಂದಿರ ಉದ್ಘಾಟನೆಯ ಸಮಯಕ್ಕೆ  ಅನಾವರಣಗೊಂಡಿರುವುದು ಹಿಂದೂ ಧರ್ಮದ ಭಕ್ತಗಣಕ್ಕೆ ಸಂತಸದ ವಿಷಯ. “An Untold Epic of RAMAYANA” ಎಂಬ ಅಡಿಬರಹ ಈ ಚಿತ್ರಕ್ಕಿದೆ. ರಾಮಾಯಣದ ಕುರಿತು ಬಹುತೇಕರಿಗೆ ವಿಷಯ ತಿಳಿದಿದೆ. ಆದರೆ ಎಲ್ಲೂ ದಾಖಲಾಗದ ಕೆಲವು ವಿಷಯಗಳನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ ಎಂಬುದು ಈ ಸಿನಿಮಾದ ಮತ್ತೊಂದು ವಿಶೇಷ.

    ಸದ್ಯ ಹರಿಬಿಟ್ಟಿರುವ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ – ಹನುಮ… ಹೀಗೆ ಅನೇಕ ಸಂಗತಿಗಳು ಪೋಸ್ಟರ್ ನಲ್ಲಿ ಅಡಕವಾಗಿವೆ. ಒಂದೆಡೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಖುಷಿಯಲ್ಲಿರುವ ಜನರಿಗೆ, ಈ ಪೋಸ್ಟರ್ ನೋಡುತ್ತಲೇ ಮೈ ಜುಂ ಎನಿಸುವಂತೆ ಮಾಡಿರುವುದು ಚಿತ್ರದ ಮೇಲೆ ಈಗಲೇ ಸಾಕಷ್ಟು ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

     

    ಯುವ ನಿರ್ದೇಶಕ ಅವಧೂತ ಶ್ರೀ ರಾಮ್, ಜೈ ಹನುಮಾನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ಮಾಪಕ ಕೆ ಎ.ಸುರೇಶ್ ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕನ್ನಡದಲ್ಲಿ ಈಗಾಗಲೇ ಯಶಸ್ವಿ ನಿರ್ಮಾಣ ಸಂಸ್ಥೆ ಎನ್ನಿಸಿಕೊಂಡಿರುವ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಈ ಪ್ಯಾನ್ ಇಂಡಿಯಾ ಸಿನಿಮಾ ಮೂಡಿ ಬರುತ್ತಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನ ಖ್ಯಾತ ನಟರು, ಕಲಾವಿದರು ಸೇರಿದಂತೆ ದೊಡ್ಡ ತಾರಾಬಳಗವೇ ಇರಲಿದೆ. ಬಹುಕೋಟಿ ವಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಸದ್ಯ ಸ್ಟೋರಿ ಬೋರ್ಡ್ ಮತ್ತು ವಿಎಫ್ಎಕ್ಸ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಮತ್ತಷ್ಟು ವಿವರಗಳನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

  • ಡಿಸೆಂಬರ್‌ವರೆಗೂ ಕೊರೊನಾ ಆತಂಕ ದೇಶವನ್ನ ಕಾಡಬಹುದು: ವಿನಯ್ ಗುರೂಜಿ

    ಡಿಸೆಂಬರ್‌ವರೆಗೂ ಕೊರೊನಾ ಆತಂಕ ದೇಶವನ್ನ ಕಾಡಬಹುದು: ವಿನಯ್ ಗುರೂಜಿ

    – ಕೋವಿಡ್-19 ವಾರಿಯರ್ಸ್‌ಗೆ ಆರತಿ ಎತ್ತಿ, ಹೂಮಳೆಗೈದ ಗುರೂಜಿ

    ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್ ಗಳಿಗೆ ಗೌರಿಗದ್ದೆ ದತ್ತಶ್ರಮದ ಅವಧೂತ ವಿನಯ್ ಗುರೂಜಿ ಆರತಿ ಎತ್ತಿ, ಹೂಮಳೆಗೈದಿದ್ದಾರೆ.

    ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ಬುದ್ಧ ಪೂರ್ಣಿಮೆಯ ಅಂಗವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು. ಹೆಲ್ತ್ ವಾರಿಯರ್ಸ್‍ಗೆ ವಿನಯ್ ಗುರೂಜಿ ಅವರು ಆರತಿ ಎತ್ತಿದರು. ಬಳಿಕ ಮೇಲ್ಭಾಗದಲ್ಲಿ ಕುಳಿತಿದ್ದ ಅವರ ಬಳಿಗೆ ಹೋಗಿ ಹೂಗಳನ್ನ ಸುರಿದು ಪುಷ್ಪಾರ್ಚನೆಯ ಮೂಲಕ ಗೌರವಿಸಿದ್ದಾರೆ.

    ಈ ವೇಳೆ ಮಾತನಾಡಿದ ವಿನಯ್ ಗುರೂಜಿ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸರು ತಮ್ಮ ಜೀವವನ್ನು ಪಣಕ್ಕಿಟ್ಟು ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ಅವರು ದೇಶ ಜನರ ಜೀವನ ಉಳಿಸಿ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ನಮಗೆ ಮರುಜನ್ಮ ನೀಡಿದ್ದಾರೆ ಎಂದು ಹೇಳಿದ್ದಾರೆ.

    ದೇಶದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ಕೊರೊನಾ ವೈರಸ್‍ನಿಂದ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸೇನಾನಿಗಳ ಸೇವೆಯನ್ನ ದೇಶದ ಯಾರೊಬ್ಬರೂ ಮರೆಯಬಾರದು. ಹಾಗಾಗಿ ಗಾಂಧಿ ಮಾರ್ಗದ ಅನುಯಾಯಿಗಳಾಗಿರುವ ಆಶ್ರಮದ ವತಿಯಿಂದ ಕೊರೊನಾ ವಾರಿಯರ್ಸ್‍ಗೆ ಗೌರವ ಸೂಚಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

    ಕೊರೊನಾ ವೈರಸ್ ಆತಂಕ ಡಿಸೆಂಬರ್‌ವರೆಗೂ ದೇಶವನ್ನ ಕಾಡಬಹುದು. ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಾವು ಅಗ್ನಿಹೋತ್ರ ಹೋಮ ಹಾಗೂ ರುದ್ರ ಹೋಮ ಮಾಡಬೇಕು. ಸರ್ಕಾರದ ನಿರ್ದೇಶನಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರದ ಕಾಪಾಡಿಕೊಳ್ಳಬೇಕು ಎಂದು ವಿನಯ್ ಗುರೂಜಿ ಮನವಿ ಮಾಡಿಕೊಂಡರು.

    ದೇಶದ ಹಲವೆಡೆ ಹೆಲ್ತ್ ವಾರಿಯರ್ಸ್ ಗಳ ಮೇಲೆ ಹಲ್ಲೆ ಮಾಡಿದ್ದಾರೆ, ನಿಂದಿಸಿದ್ದಾರೆ. ಸಮಾಜಕ್ಕೆ ಸಂದೇಶ ನೀಡುವ ಸಲುವಾಗಿ ಕೊರೊನಾ ಸೇನಾಸಿಗಳನ್ನು ಗೌರವಿಸಲಾಗಿದೆ. ಪ್ರಸ್ತುತ ಸ್ಥಿಯಲ್ಲಿ ಅವರ ಸೇವೆ ಸಮಾಜಕ್ಕೆ ಸ್ವಾಸ್ಥ್ಯಕ್ಕೆ ಅತಿ ಮುಖ್ಯವಾದುದು. ಅವರನ್ನ ಎಲ್ಲರೂ ಗೌರವಿಸಬೇಕು ಎಂದರು.

    ಹೆಲ್ತ್ ವಾರಿಯರ್ಸ್ ಗಳ ಈ ಅಭಿನಂದನಾ ಸಮಾರಂಭದಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರಿಗೆ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಬೇಳೂರು ರಾಘವೇಂದರ ಶೆಟ್ಟಿ, ಆಶ್ರಮದ ಕಾರ್ಯದರ್ಶಿ ಸುಧಾಕರ್ ಉಪಸ್ಥಿತರಿದ್ದರು.