Tag: Avane shrimannarayana

  • ರಕ್ಷಿತ್ ಶೆಟ್ಟಿ ಚಿತ್ರಕ್ಕೆ ಶುಭ ಹಾರೈಸಿದ ರಶ್ಮಿಕಾ

    ರಕ್ಷಿತ್ ಶೆಟ್ಟಿ ಚಿತ್ರಕ್ಕೆ ಶುಭ ಹಾರೈಸಿದ ರಶ್ಮಿಕಾ

    -`ಅವನೇ ಶ್ರೀಮನ್ನಾರಾಯಣ’ ನಿರ್ದೇಶಕ ಸಚಿನ್‍ಗೆ ಟ್ವೀಟ್

    ಬೆಂಗಳೂರು: ಕರ್ನಾಟಕದ ಕ್ರಶ್, ದ್ವಿಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ರಕ್ಷಿತ್ ಶೆಟ್ಟಿ ಅಭಿನಯಿಸುತ್ತಿರುವ `ಅವನೇ ಶ್ರೀಮನ್ನಾರಾಯಣ’ ಚಿತ್ರಕ್ಕೆ ಶುಭ ಹಾರೈಸಿ ಚಿತ್ರ ನಿರ್ದೇಶಕರಿಗೆ ಟ್ವೀಟ್ ಮಾಡಿದ್ದಾರೆ.

    ನಿರ್ದೇಶಕ ಸಚಿನ್ ಅವರು ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ `ಅವನೇ ಶ್ರೀಮನ್ನಾರಾಯಣ’. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ `ಅವನೇ ಶ್ರೀಮನ್ನಾರಾಯಣ’ ನಿನಿಮಾ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ ಎಂದು ಈ ಚಿತ್ರ ನಿರ್ದೇಶಕ ಸಚಿನ್ ಅವರಿಗೆ ಟ್ವೀಟ್ ಮಾಡಿದ್ದಾರೆ.

    ನಿರ್ದೇಶಕ ಸಚಿನ್ ಅವರ ಹುಟ್ಟುಹಬ್ಬದ ದಿನ ಟ್ವೀಟ್ ಮಾಡಿ ಅವರಿಗೆ ಶುಭ ಹಾರೈಸಿದ ರಶ್ಮಿಕಾ ಈ ಸಂಗತಿಯನ್ನು ತಿಳಿಸಿದ್ದಾರೆ. `ಅವನೇ ಶ್ರೀಮನ್ನಾರಾಯಣ’ ಚಿತ್ರವು ಬಹುಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವು ರಕ್ಷಿತ್ ಶೆಟ್ಟಿ ಹಾಗೂ ಪಿ. ಮಲ್ಲಿಕಾರ್ಜುನಯ್ಯ ಅವರು ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಐದು ಭಾಷೆಗಳಲ್ಲಿ ಬೇರೆ ಬೇರೆ ಹೆಸರಿನೊಂದಿಗೆ ಬಿಡುಗಡೆಯಾಗುತ್ತಿರುವ `ಅವನೇ ಶ್ರೀಮನ್ನಾರಾಯಣ’ ಚಿತ್ರವು ಎಲ್ಲೆಡೆ ಭಾರೀ ನಿರೀಕ್ಷೆಯನ್ನು ಹುಟ್ಟಿಸಿದೆ.

    ಸದ್ಯ ರಶ್ಮಿಕಾ ಮಂದಣ್ಣ ಅಪರೂಪಕ್ಕೆ ರಕ್ಷಿತ್ ಶೆಟ್ಟಿ ಅವರ ಚಿತ್ರ ತಂಡದ ಸದಸ್ಯರೊಬ್ಬರಿಗೆ ಟ್ವೀಟ್ ಮಾಡಿರುವ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv