Tag: Aviation Ministry

  • ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ನವದೆಹಲಿ: ಅಹಮದಾಬಾದ್‌ನಲ್ಲಿ (Ahmedabad) ಪತನಗೊಂಡ ಏರ್ ಇಂಡಿಯಾ (Air India) ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ (Delhi) ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ (Samir Kumar Sinha) ಮಾಹಿತಿ ನೀಡಿದ್ದಾರೆ.

    ಏರ್ ಇಂಡಿಯಾ ವಿಮಾನ ದುರಂತ ನಡೆದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗುವ ಮುನ್ನ ಇದೇ ವಿಮಾನವು ಪ್ಯಾರಿಸ್‌ನಿಂದ (Paris) ದೆಹಲಿಗೆ ಹಾಗೂ ದೆಹಲಿಯಿಂದ ಅಹಮದಾಬಾದ್‌ಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾರಾಟ ನಡೆಸಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಇದೇ ವೇಳೆ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಮಾತನಾಡಿ, ಸದ್ಯ ಬ್ಲ್ಯಾಕ್‌ಬಾಕ್ಸ್‌ನ್ನು ಡಿಕೋಡ್ ಮಾಡಲಾಗುತ್ತಿದ್ದು, ದುರಂತಕ್ಕೂ ಮುನ್ನ ವಿಮಾನದಲ್ಲಿ ಆಗಿದ್ದಾದರೂ ಏನು ಎನ್ನುವ ಮಾಹಿತಿ ತಿಳಿದುಬರಲಿದೆ. ಶುಕ್ರವಾರ ಸಂಜೆ ಬ್ಲ್ಯಾಕ್‌ಬಾಕ್ಸ್ ಪತ್ತೆಯಾಗಿದ್ದು. ಅಪಘಾತಕ್ಕೆ ನಿಖರವಾದ ಕಾರಣ ಇದರಿಂದ ತಿಳಿದುಬರಲಿದೆ. ಎಎಐಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದ ಬಳಿಕ ವರದಿ ನೀಡಲಿದ್ದು, ಏನಾಗಿದೆ ಎಂಬುದು ಗೊತ್ತಾಗಲಿದೆ. ಘಟನೆ ಬಗ್ಗೆ ಬ್ರಿಟನ್, ಅಮೆರಿಕ ಸೇರಿದಂತೆ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಹ ತನಿಖೆ ನಡೆಸುತ್ತಿದೆ ಎಂದರು.

    ಜೂನ್ 12ರಂದು ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ವಿಮಾನ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

    ವಿಮಾನ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

    ನವದೆಹಲಿ: ಕಡೆಗೂ ದೇಶಿಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಇದರ ಬೆನ್ನಲ್ಲೇ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

    ಮೇ 25 ರಿಂದ ಸೀಮಿತವಾಗಿ ದೇಶಿಯ ವಿಮಾನ ಹಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ವಿಮಾನಯಾನ ಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ನೂತನ ಮಾರ್ಗಸೂಚಿಯಲ್ಲಿ ಪ್ರಯಾಣಿಕರು ಮತ್ತು ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಹಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

    ವಿಮಾನ ಹಾರಾಟದ ನಿಗದಿತ ಸಮಯಕ್ಕೆ ಇಪ್ಪತ್ತು ನಿಮಿಷಗಳ ಮುನ್ನ ನಿರ್ಗಮನವನ್ನು ಮುಚ್ಚಲಾಗುವುದು ಹೀಗಾಗಿ ಪ್ರಯಾಣಿಕರು ಎರಡು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಬರಬೇಕು, ಫಿಸಿಕಲ್ ಚೆಕ್ ಇನ್ ವ್ಯವಸ್ಥೆ ನಿರ್ಬಂಧಿಸಿದ್ದು ಕೇವಲ ವೆಬ್ ಚೆಕ್ ಇನ್ ವ್ಯವಸ್ಥೆ ಮೂಲಕ ಗ್ರಾಹಕರು ಮುಂಚೆಯೇ ಚೆಕ್ ಇನ್ ಮಾಡಿಕೊಳ್ಳಬೇಕು, ಕೇವಲ ಒಂದು ಲಗೇಜ್ ಬ್ಯಾಗ್ ನೊಂದಿಗೆ ಪ್ರಯಾಣ ಮಾಡಬಹದಾಗಿದ್ದು, ಪ್ರಯಾಣದ ವೇಳೆ ಊಟದ ವ್ಯವಸ್ಥೆ ನಿರ್ಬಂಧಿಸಲಾಗಿದೆ ಎಂದು ಹೊಸ ನಿಯಮಗಳಲ್ಲಿ ತಿಳಿಸಲಾಗಿದೆ.

    ಅಲ್ಲದೆ 14 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ವಿಮಾನ ಪ್ರಯಾಣ ಮಾಡುವ ಎಲ್ಲರಿಗೂ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ. ವಿಮಾನ ನಿಲ್ದಾಣಕ್ಕೆ ಖಾಸಗಿ ವಾಹನಗಳಲ್ಲಿ ಆಗಮಿಸಿದಲ್ಲಿ ಡಿಜಿಟಲ್ ಪೇಮೆಂಟ್ ಗೆ ಆದ್ಯತೆ ನೀಡಿ, ಪ್ರಯಾಣಕ್ಕೆ ಮುನ್ನ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು, ಮಾಸ್ಕ್ ಗ್ಲೌಸ್  ಬಳಕೆ ಕಡ್ಡಾಯ, ಏರ್ ಪೋರ್ಟ್ ಗೆ ಆಗಮಿಸುವ ಮೊದಲು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕು ಎಂದು ಷರತ್ತು ವಿಧಿಸಿದೆ. ಪ್ರಯಾಣ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಜನ ಸಂದಣಿ ಪ್ರದೇಶದಲ್ಲಿ ಅನಗತ್ಯ ವಸ್ತುಗಳನ್ನು ಸ್ಪರ್ಶಿದಂತೆ ಎಚ್ಚರಿಸಬೇಕು ಎಂದು ಸೂಚಿಸಿದೆ.

    ವಿಮಾನಯಾನ ಸಂಸ್ಥೆಗಳಿಗೂ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದ್ದು, ವಿಮಾನ ನಿಲ್ದಾಣ ಪ್ರವೇಶಕ್ಕೂ ಮುನ್ನ ಸಿಐಎಸ್‍ಎಫ್ ನಿಂದ ಆರೋಗ್ಯ ಸೇತು ಪರಿಶೀಲನೆ ನಡೆಸಬೇಕು ಆರೋಗ್ಯ ಸೇತುವಿನಲ್ಲಿ ಗ್ರೀನ್ ಸ್ಟೇಟಸ್ ಬಾರದಿದ್ರೆ ಪ್ರಯಾಣಕ್ಕೆ ಅವಕಾಶ ನೀಡಬಾರದು. ಸೀಟು ಹಂಚಿಕೆಯಲ್ಲಿ ಸಂಸ್ಥೆಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ನೋಡಿಕೊಳ್ಳಬೇಕು, ಲಗೇಜ್ ಚೆಕ್ ಇನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಮೇಲುಸ್ತುವಾರಿಗೆ ಸಿಬ್ಬಂದಿ ನೇಮಿಸಿ ಎಂದು ತಿಳಿಸಿದೆ.

    ವಿಮಾನಯಾನ ಸಿಬ್ಬಂದಿ ಪಿಪಿಇ ಕಿಟ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಸಾಗಿಸುವ ಬಸ್ ಸ್ಯಾನಿಟೈಸ್ ಆಗಿರಬೇಕು, ಲಗೆಜ್ ನೀಡುವಾಗ, ಪಡೆಯುವಾಗ ಸ್ಯಾನಿಟೈಸ್ ಮಾಡುವುದು ಕಡ್ಡಾಯ. ಪ್ರಯಾಣಿಕರು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಲು ಹಲವು ಕಡೆ ವ್ಯವಸ್ಥೆ ಮಾಡಿಕೊಡಬೇಕು. ಶೌಚಾಲಯ ಸೇರಿದಂತೆ ಹೆಚ್ಚು ಜನ ಸೇರುವ ಪ್ರದೇಶದಲ್ಲಿ ಅಂತರ ಕಾಯ್ದುಕೊಳ್ಳಬೇಕು, ಎಲ್ಲ ಭಾಗದಲ್ಲಿ ಸ್ವಚ್ಛತೆ ಕಾಪಾಡಬೇಕು, ಸ್ಯಾನಿಟೈಸರ್ ನೀಡಬೇಕು. ವಿಮಾನ ನಿಲ್ದಾಣಗಳಲ್ಲಿ ದಿನ ಪತ್ರಿಕೆ ಮತ್ತು ನಿಯತಕಾಲಿಕೆಗಳನ್ನು ಇಡುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    ವಿಮಾನ ನಿಲ್ದಾಣದ ಸಿಬ್ಬಂದಿಯಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು, ವಿಮಾನ ನಿಲ್ದಾಣದೊಳಗಿನ ಅಂಗಡಿಗಳನ್ನು ತೆರೆಯಬಹುದು, ಸಾಮಾಜಿಕ ಅಂತರ ಮತ್ತು ಡಿಜಿಟಲ್ ಪೇಮೆಂಟ್ ಗಳಿಗೆ ಆದ್ಯತೆ ನೀಡಬೇಕು. ವಿಮಾನಯಾನ ಸಚಿವಾಲಯ ನೀಡಿದ ನಿಮಯಗಳ ಹೊರತಾಗಿ ಮತ್ತಷ್ಟು ಮುನ್ನೆಚ್ಚರಿಕೆ ನಿಯಮಗಳನ್ನು ವಿಮಾನಯಾನ ಸಂಸ್ಥೆಗಳು ಪಾಲಿಸಬಹುದು ಮುಂದಿನ ಹಂತದಲ್ಲಿ ಮತ್ತಷ್ಟು ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.