Tag: Axiom 4

  • ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ನವದೆಹಲಿ: ನಮ್ಮ ನೆಲದಿಂದಲೇ ಒಬ್ಬರು, ನಾವೇ ತಯಾರಿಸಿದ ಕ್ಯಾಪ್ಸೂಲ್‌ನಲ್ಲಿ ಕುಳಿತು, ನಮ್ಮದೇ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಪ್ರಯಾಣಿಸುವ ಹಂತ ಸಮೀಪದಲ್ಲಿದೆ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ (Shubanshu Shukla) ಹೇಳಿದ್ದಾರೆ.ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಯೋಜನೆಗಳ ಬಗ್ಗೆ ಅನುಭವವನ್ನು ಹಂಚಿಕೊಂಡಿದ್ದಾರೆ. ಆಕ್ಸಿಯಮ್-4 ಯೋಜನೆಯೂ ಭಾರತ ಕೈಗೊಳ್ಳುತ್ತಿರುವ ಗಗನಯಾನ ಯೋಜನೆಗೆ ನೆರವಾಗಿದೆ. ಕಳೆದ ಒಂದು ವರ್ಷದಿಂದ ಬಾಹ್ಯಾಕಾಶ ಯಾನಕ್ಕಾಗಿ ಸಾಕಷ್ಟು ತರಬೇತಿ ಪಡೆದಿದ್ದೇನೆ ಎಂದರು. ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು. ಬಾಹ್ಯಾಕಾಶದಲ್ಲಿನ ಅನುಭವವು ನೆಲದ ಮೇಲೆ ಕಲಿಯುವುದಕ್ಕಿಂತಲೂ ಬಹಳ ಭಿನ್ನವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಬಾಹ್ಯಾಕಾಶದ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಭಾರತ ಸರ್ಕಾರ, ಇಸ್ರೋ, ಹಾಗೂ ಸಂಶೋಧಕರಿಗೆ ಧನ್ಯವಾದ. ಇದೇ ವೇಳೆ ಭಾರತದಲ್ಲಿ ಬೆಳೆಯುತ್ತಿರುವ ಬಾಹ್ಯಾಕಾಶ ಸಾಮರ್ಥ್ಯಗಳನ್ನು ಎತ್ತಿ ತೋರಿಸಿದರು. ಆಕ್ಸಿಯಮ್-4 ಕಾರ್ಯಾಚರಣೆಯ ಒಳನೋಟಗಳನ್ನು ದೇಶದ ಜನತೆ ಮುಂದೆ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

  • ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

    ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

    ನವದೆಹಲಿ: ಆಕ್ಸಿಯಮ್-4 (Axiom-4) ಬಾಹ್ಯಾಕಾಶ ಯಾತ್ರೆಗೆ ದಲಿತ ವ್ಯಕ್ತಿಯನ್ನು ಏಕೆ ಆಯ್ಕೆ ಮಾಡಿಲ್ಲ? ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದಿತ್ತು ಎಂದು ಕಾಂಗ್ರೆಸ್ (Congress) ನಾಯಕ ಉದಿತ್ ರಾಜ್ (Udit Raj) ಹೇಳಿದ್ದಾರೆ.

    ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅವರು ವೈಜ್ಞಾನಿಕ ಸಾಧನೆಯನ್ನೂ ಸಹ ರಾಜಕೀಯಗೊಳಿಸುತ್ತಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

    ಆಕ್ಸಿಯಮ್-4 ಬಾಹ್ಯಾಕಾಶ ಯಾತ್ರೆಗೆ ಹೋಗಿ ಶುಭಾಂಶು ಶುಕ್ಲಾ (Shubhanshu Shukla) ವಾಪಸ್‌ ಆಗಿದ್ದಾರೆ. ಈ ಹೊತ್ತಲ್ಲಿ ಕ್ಯಾಪ್ಟನ್ ಶುಕ್ಲಾ ಬದಲಿಗೆ ದಲಿತ ಅಭ್ಯರ್ಥಿಯನ್ನು ಏಕೆ ಆಯ್ಕೆ ಮಾಡಲಾಗಿಲ್ಲ ಎಂದು ಅವರು ಪ್ರಶ್ನೆ ಎತ್ತಿದ್ದಾರೆ. ಇದರಿಂದ ‘ಅರ್ಹತೆ ಮತ್ತು ಮೀಸಲಾತಿ’ ಬಗೆಗಿನ ಚರ್ಚೆ ಆರಂಭಗೊಂಡಿದೆ.

    ರಾಕೇಶ್ ಶರ್ಮಾ ಅವರನ್ನು ಮೊದಲ ಬಾರಿಗೆ ಬಾಹ್ಯಾಕಾಶಕ್ಕೆ ಕಳುಹಿಸಿದಾಗ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಲ್ಲಿ ಹೆಚ್ಚು ವಿದ್ಯಾವಂತ ಜನರು ಇರಲಿಲ್ಲ ಎನ್ನೋಣ ಬಿಡಿ. ಆದರೆ ಈ ಬಾರಿ, ಈ ಸಮುದಾಯಗಳಿಂದ ಯಾರನ್ನಾದರೂ ಕಳುಹಿಸಬಹುದಿತ್ತು. ಈ ಬಾರಿ, ದಲಿತರನ್ನು ಕಳುಹಿಸುವ ಸರದಿ ಬಂದಿತ್ತು, ನಾಸಾ ಪರೀಕ್ಷೆ ನಡೆಸಿ, ಆಯ್ಕೆ ಮಾಡಿಲ್ಲ. ಶುಕ್ಲಾ ಅವರ ಬದಲಿಗೆ ಯಾವುದೇ ದಲಿತ ಅಥವಾ ಒಬಿಸಿ ವ್ಯಕ್ತಿಯನ್ನು ಕಳುಹಿಸಬಹುದಿತ್ತು ಎಂದಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

    ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಐಎಸ್‌ಎಸ್‌ನಲ್ಲಿ 18 ದಿನಗಳ ವಾಸ್ತವ್ಯದ ಬಳಿಕ ಶುಭಾಂಶು ಶುಕ್ಲಾ ವಾಪಸ್‌ ಆಗಿದ್ದಾರೆ. ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್‌ ಆಗಿದ್ದಾರೆ.

    2019 ರಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಬಿಜೆಪಿಯನ್ನು ತೊರೆದು ಉದಿತ್‌ ರಾಜ್ ಕಾಂಗ್ರೆಸ್ ಸೇರಿದ್ದರು. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

  • ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

    ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

    ನವದೆಹಲಿ: ಐಎಎಫ್‌ ಗ್ರೂಪ್‌ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದಂತೆ ಆಕ್ಸಿಯಮ್ -4 (Axiom-4) ಗಗನಯಾತ್ರಿಗಳನ್ನು ಹೊತ್ತ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮಂಗಳವಾರ ಯಶಸ್ವಿಯಾಗಿ ಭೂಮಿಗೆ ವಾಪಸ್‌ ಆಯಿತು. ತಮ್ಮ ಪುತ್ರ ಸುರಕ್ಷಿತವಾಗಿ ವಾಪಸ್‌ ಆಗಿದ್ದನ್ನು ಕಂಡು ಪೋಷಕರು ಭಾವುಕರಾದರು.

    ನನ್ನ ಮಗ ಸುರಕ್ಷಿತವಾಗಿ ಮರಳಿದ್ದಾನೆ. ನಾನು ಭಾವುಕಳಾಗಿದ್ದೇನೆ. ನನ್ನ ಮಗ ಹಲವು ದಿನಗಳ ನಂತರ ಮರಳಿದ್ದಾನೆ. ಈ ಕಾರ್ಯಕ್ರಮವನ್ನು ವರದಿ ಮಾಡಿದ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ಶುಕ್ಲಾ ಅವರ ತಾಯಿ ಆಶಾ ಶುಕ್ಲಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

    ನಾವು ಹನುಮಂತನ ದರ್ಶನ ಪಡೆದೆವು. ಸುಂದರಕಾಂಡ ಪಠಣವನ್ನೂ ಮಾಡಿದೆವು. ನಾವು ಅವನಿಗೆ ಭವ್ಯ ಸ್ವಾಗತ ಕೋರಿದ್ದೇವೆ ಎಂದು ತಿಳಿಸಿದ್ದಾರೆ.

    ಪುತ್ರ ನಮಗೆ ಕೀರ್ತಿ ತಂದಿದ್ದಾನೆ. ಶುಕ್ಲಾ ಇಡೀ ರಾಷ್ಟ್ರಕ್ಕೆ ಸೇರಿದವನು. ಇತಿಹಾಸ ಪುಟದಲ್ಲಿ ಅವನ ಹೆಸರು ದಾಖಲಾಗಿದೆ ಎಂದು ಶುಕ್ಲಾ ಅವರ ತಂದೆ ಶಂಭು ದಯಾಳ್ ಶುಕ್ಲಾ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    2025 ರ ಜೂ.26 ರಂದು ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಆಕ್ಸ್-4 ಕಾರ್ಯಾಚರಣೆಯು, ಆರು ಮಿಲಿಯನ್ ಮೈಲುಗಳಿಗಿಂತ ಹೆಚ್ಚು ಪ್ರಯಾಣಿಸಿದೆ. ಭೂಮಿಯ ಸುತ್ತ 250 ಕ್ಕೂ ಹೆಚ್ಚು ಕಕ್ಷೆಗಳನ್ನು ಪೂರ್ಣಗೊಳಿಸಿದೆ.

    ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್‌ ಆಗಿದ್ದಾರೆ.

  • ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದಾರೆ. ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಶುಭಾಂಶು ಶುಕ್ಲಾ ಕೈಬೀಸಿದರು.

    ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ (California) ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್‌ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕೈಹಿಡಿದು ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಕ್ಯಾಪ್ಸುಲ್‌ನಿಂದ ಹೊರಬಂದ ಬಳಿಕ ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ. ಇನ್ನೂ ಯಶಸ್ವಿ ಲ್ಯಾಂಡಿಂಗ್ ಬಳಿಕ ಶುಭಾಂಶು ಶುಕ್ಲಾ ಕುಟುಂಬಸ್ಥರು ಸಂಭ್ರಮಿಸಿದ್ದಾರೆ.

    ಪ್ರಕ್ರಿಯೆ ಹೇಗಿತ್ತು?
    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದರು.ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • ಭೂಮಿಗೆ ಮರಳುವ ಶುಭಾಂಶು ಶುಕ್ಲಾಗೆ ISSನಲ್ಲಿ ಅದ್ಧೂರಿ ಬೀಳ್ಕೊಡುಗೆ – ಸಾರೇ ಜಹಾನ್‌ ಸೇ ಅಚ್ಚಾ ಎಂದ ಶುಕ್ಲಾ

    ಭೂಮಿಗೆ ಮರಳುವ ಶುಭಾಂಶು ಶುಕ್ಲಾಗೆ ISSನಲ್ಲಿ ಅದ್ಧೂರಿ ಬೀಳ್ಕೊಡುಗೆ – ಸಾರೇ ಜಹಾನ್‌ ಸೇ ಅಚ್ಚಾ ಎಂದ ಶುಕ್ಲಾ

    ನವದೆಹಲಿ: ಭೂಮಿಗೆ ವಾಪಸ್‌ ಆಗಲಿರುವ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ (Shubhanshu Shukla) ಸೇರಿ ನಾಲ್ವರು ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.

    ಇಂದು ಭಾರತವು (India) ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯ, ನಿರ್ಭೀತ, ಆತ್ಮವಿಶ್ವಾಸ ಮತ್ತು ಹೆಮ್ಮೆಯಂತೆ ಕಾಣುತ್ತದೆ. ಭಾರತವು ಇನ್ನೂ ಸಾರೇ ಜಹಾನ್ ಸೆ ಅಚ್ಚಾ ಎಂದು ಶುಕ್ಲಾ ತಿಳಿಸಿದ್ದಾರೆ. ಆಕ್ಸಿಯಮ್ -4 (Axiom-4) ಸಿಬ್ಬಂದಿಗೆ ಔಪಚಾರಿಕ ವಿದಾಯ ಭಾನುವಾರ (ಭಾರತೀಯ ಸಮಯ) ಸಂಜೆ 7:20 ರ ಸುಮಾರಿಗೆ ಪ್ರಾರಂಭವಾಯಿತು. ಆಕ್ಸಿಯಮ್ ಸ್ಪೇಸ್‌ನ ಎಕ್ಸ್ ಹ್ಯಾಂಡಲ್ ವಿದಾಯ ಸಮಾರಂಭದ ನೇರಪ್ರಸಾರವನ್ನು ಒದಗಿಸಿದೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್‌ ದಾಳಿ – ನೀರು ತರಲು ತೆರಳಿದ್ದ 8 ಮಕ್ಕಳು ಸೇರಿ 43 ಮಂದಿ ಸಾವು

    ವಿಶೇಷ ವಿದಾಯ ಸಮಾರಂಭವು ಆಕ್ಸಿಯಮ್ ಮಿಷನ್ 4 (ಆಕ್ಸ್-4) ಭಾಗವಾಗಿ ಶುಕ್ಲಾ ಅವರ ಐತಿಹಾಸಿಕ ಕಾರ್ಯಾಚರಣೆಯ ಮುಕ್ತಾಯವನ್ನು ಗುರುತಿಸಿತು. ಐಎಸ್‌ಎಸ್‌ಗೆ ಕಾಲಿಟ್ಟ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ ಶುಕ್ಲಾ, ತಮ್ಮ ಸಹವರ್ತಿ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಅವರೊಂದಿಗೆ ನಾಸಾದ ಎಕ್ಸ್‌ಪೆಡಿಶನ್ 73 ಸಿಬ್ಬಂದಿಯೊಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

    2025 ರ ಜೂ.26 ರಂದು ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಆಕ್ಸ್-4 ಕಾರ್ಯಾಚರಣೆಯು, ಆರು ಮಿಲಿಯನ್ ಮೈಲುಗಳಿಗಿಂತ ಹೆಚ್ಚು ಪ್ರಯಾಣಿಸಿದೆ. ಭೂಮಿಯ ಸುತ್ತ 250 ಕ್ಕೂ ಹೆಚ್ಚು ಕಕ್ಷೆಗಳನ್ನು ಪೂರ್ಣಗೊಳಿಸಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

    ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ.

    ಆಕ್ಸ್-4 ಗಗನಯಾತ್ರಿಗಳು ಜುಲೈ 14, ಸೋಮವಾರ ಸಂಜೆ 4:34 ಕ್ಕೆ ಭಾರತೀಯ ಕಾಲಮಾನದ ಪ್ರಕಾರ ಅನ್‌ಡಾಕಿಂಗ್‌ಗೆ ಸಿದ್ಧತೆಗಳನ್ನು ಅಂತಿಮಗೊಳಿಸಲಿದ್ದಾರೆ. ಭೂಮಿಗೆ ಹಿಂತಿರುಗುವ ಮೊದಲು ಪೂರ್ವ ಹಾರಾಟ ತಪಾಸಣೆ ನಡೆಸಲು ಗಗನಯಾತ್ರಿಗಳು ಭಾರತೀಯ ಕಾಲಮಾನ ಮಧ್ಯಾಹ್ನ 2:25 ಕ್ಕೆ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹತ್ತಲಿದ್ದಾರೆ.

    ಜುಲೈ 15 ರಂದು ಭಾರತೀಯ ಕಾಲಮಾನ ಮಧ್ಯಾಹ್ನ ಸರಿಸುಮಾರು 3:00 ಗಂಟೆಗೆ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಚಂಡಮಾರುತ ಬೀಸುವ ನಿರೀಕ್ಷೆಯಿದೆ. ಹಿಂದಿರುಗಿದ ನಂತರ, ಶುಕ್ಲಾ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಏಳು ದಿನಗಳ ಪುನರ್ವಸತಿ ಕಾರ್ಯಕ್ರಮಕ್ಕೆ ಒಳಗಾಗಲಿದ್ದಾರೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೃಢಪಡಿಸಿದೆ. ಪುತ್ರನನ್ನು ಹೆಮ್ಮೆಯಿಂದ ಸ್ವಾಗತಿಸಲು ಕುಟುಂಬದವರು ಕಾತರದಿಂದ ಕಾಯುತ್ತಿದ್ದಾರೆ. ತವರಲ್ಲಿ ಭವ್ಯ ಸ್ವಾಗತ ಕೋರಲು ಯೋಜಿಸಲಾಗಿದೆ.

  • ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    – ಗಗನಯಾನ ಪ್ರೊಪಲ್ಷನ್ ಸಿಸ್ಟಮ್ ಹಾಟ್ ಟೆಸ್ಟ್ ಯಶಸ್ವಿ

    ನವದೆಹಲಿ: ಆಕ್ಸಿಯಮ್-4 ಮಿಷನ್‌ನಡಿ ವಿವಿಧ ಪ್ರಯೋಗಗಳನ್ನು ನಡೆಸಲು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla), ಅಂತರಿಕ್ಷದಲ್ಲಿ ಹೆಸರುಕಾಳು ಹಾಗೂ ಮೆಂತ್ಯ ಬೀಜಗಳನ್ನು ನೆಟ್ಟು ಮೊಳಕೆಯೊಡೆಸುವ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಇದಕ್ಕೆ ಸಂಬಂಧಿತ ಚಿತ್ರಗಳನ್ನು ಶುಭಾಂಶು ಶುಕ್ಲಾ ಹಂಚಿಕೊಂಡಿದ್ದಾರೆ.

    ಬಾಹ್ಯಾಕಾಶ ಕೇಂದ್ರದಲ್ಲಿ ಮೊಳಕೆ ಪ್ರಯೋಗಕ್ಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರವಿಕುಮಾರ್ ಹೊಸಮನಿ ಮತ್ತು ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸುಧೀರ್ ಸಿದ್ಧಾಪುರರೆಡ್ಡಿ ಎಂಬ ಇಬ್ಬರು ವಿಜ್ಞಾನಿಗಳು ನೇತೃತ್ವ ವಹಿಸಿದ್ದಾರೆ. ಶುಕ್ಲಾ ಹಾಗೂ ಇತರ ನಾಲ್ವರು ಗಗನಯಾತ್ರಿಗಳು ಕಕ್ಷೆಯ ಪ್ರಯೋಗಾಲಯದಲ್ಲಿ 12 ದಿನಗಳನ್ನು ಕಳೆದಿದ್ದಾರೆ. ನಾಳೆಯ ಬಳಿಕ ಯಾವಾಗಾ ಬೇಕಾದ್ರೂ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಬರಬಹುದು. ಇದನ್ನೂ ಓದಿ: ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಇನ್ನೂ, ಗಗನಯಾನ ಪ್ರೊಪಲ್ಷನ್ ಸಿಸ್ಟಮ್‌ನ ಹಾಟ್ ಟೆಸ್ಟ್ ಯಶಸ್ವಿಯಾಗಿದೆ. ಈ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ. ಜುಲೈ 3ರಂದು ಮಹೇಂದ್ರಗಿರಿಯಲ್ಲಿರುವ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಮಾನವಸಹಿತ ಬಾಹ್ಯಾಕಾಶ ಕಾರ್ಯಕ್ರಮ `ಗಗನಯಾನದ’ `ಸರ್ವೀಸ್ ಮಾಡ್ಯೂಲ್ ಪ್ರೊಪಲ್ಷನ್ ಸಿಸ್ಟಮ್’ನ ಮತ್ತೆ ಎರಡು ಹಾಟ್ ಟೆಸ್ಟ್‌ಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಕ್ರಮವಾಗಿ 30 ಹಾಗೂ 10 ಸೆಕೆಂಡುಗಳ ಕಾಲ ನಡೆದ ಈ ಅಲ್ಪಾವಧಿಯ ಪರೀಕ್ಷೆಗಳು, ಸಂರಚನೆಯ ಕ್ಷಮತೆಯನ್ನು ಹೊಂದಿದ್ದವು ಎಂದು ಇಸ್ರೋ ತಿಳಿಸಿದೆ. ಈ ಪರೀಕ್ಷೆಗಳ ಯಶಸ್ಸಿನೊಂದಿಗೆ ಸದ್ಯದಲ್ಲೇ ಪೂರ್ಣ ಪ್ರಮಾಣದ ಹಾಟ್ ಟೆಸ್ಟ್ ನಡೆಸುವುದಾಗಿ ಇಸ್ರೋ ತಿಳಿಸಿದೆ. ಇದನ್ನೂ ಓದಿ: Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ

  • ಅಂತರಿಕ್ಷ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ – ಭಾರತದಿಂದ ‘ಸಪ್ತ ಸಂಶೋಧನೆ’

    ಅಂತರಿಕ್ಷ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ – ಭಾರತದಿಂದ ‘ಸಪ್ತ ಸಂಶೋಧನೆ’

    ನವದೆಹಲಿ: ಬಹುನಿರೀಕ್ಷಿತ ಆಕ್ಸಿಯಮ್-4 ಮಿಷನ್‌ನ (Axiom-4 Mission) ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್ ಸುದೀರ್ಘ ಪ್ರಯಾಣದ ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದೆ. ಭಾರತೀಯ ಕಾಲಮಾನ ಸಂಜೆ 5:50ರ ಹೊತ್ತಿಗೆ ನಾಲ್ವರು ಗಗನಯಾತ್ರಿಗಳು ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಶುಭಾಂಶು ಶುಕ್ಲಾ (Shubhanshu Shukla) ಪಾತ್ರವಾಗಿದ್ದಾರೆ.

    ಅಂತರಿಕ್ಷ ತಲುಪಿದ ಗಗನಯಾತ್ರಿಗಳಿಗೆ ವೆಲ್‌ಕಮ್ ಡ್ರಿಂಕ್ ಕೊಟ್ಟು ಬರ ಮಾಡಿಕೊಳ್ಳಲಾಯಿತು. ನಾಲ್ವರು ಗಗನಯಾತ್ರಿಗಳು 14 ದಿನ ಅಂತರಿಕ್ಷದಲ್ಲಿ ಉಳಿಯಲಿದ್ದಾರೆ. ಈ ಅವಧಿಯಲ್ಲಿ ವೈಜ್ಞಾನಿಕ ಸಂಶೋಧನೆ, ತಂತ್ರಜ್ಞಾನ ಪ್ರದರ್ಶನ, ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಿದೆ. ಈ ತಂಡವು 31 ದೇಶಗಳನ್ನು ಒಳಗೊಂಡ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದೆ. ಇದನ್ನೂ ಓದಿ: ಇಲ್ಲಿಂದ ಭೂಮಿಯನ್ನು ನೋಡುವುದೇ ಸೌಭಾಗ್ಯ – ಬಾಹ್ಯಾಕಾಶ ನಿಲ್ದಾಣದಿಂದ ಶುಭಾಂಶು ಮೊದಲ ಸಂದೇಶ!

    ಇವುಗಳಲ್ಲಿ ಜೈವಿಕ ವಿಜ್ಞಾನ, ಭೂಮಿಯ ವೀಕ್ಷಣೆ, ಮತ್ತು ವಸ್ತು ವಿಜ್ಞಾನ ಸೇರಿವೆ. ಭಾರತ ಇಲ್ಲಿ ಏಳು ಸಂಶೋಧನೆಗಳನ್ನು ಮಾಡಲಿದ್ದು ಇದು ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

    ಆಕ್ಸಿಯಮ್-4 ಭಾರತದ ಮೈಕ್ರೋಗ್ರಾವಿಟಿ ಪ್ರಯೋಗಗಳು
    1.ತಿನ್ನಬಹುದಾದ ಸೂಕ್ಷ್ಮಪಾಚಿ ಅಧ್ಯಯನ (ಐಸಿಜಿಇಬಿ& ಬ್ರಿಕ್-ನವದೆಹಲಿ)
    *ತಿನ್ನಬಹುದಾದ ಸೂಕ್ಷ್ಮಪಾಚಿ ಜಾತಿಗಳ ಬೆಳವಣಿಗೆ ಅಧ್ಯಯನ
    *ಆಹಾರ ಉತ್ಪಾದನೆ, ಇಂಗಾಲ, ಆಮ್ಲಜನಕ ಉತ್ಪಾದನೆ ಸಾಮರ್ಥ್ಯಗಳ ಪರೀಕ್ಷೆ

    2.ಮೊಳಕೆ ಕಾಳುಗಳ ಅಧ್ಯಯನ (ಯುಎಸ್, ಐಐಟಿ ಧಾರವಾಡ)
    *ಮೊಳಕೆ ಕಾಳುಗಳ ಬೆಳವಣಿಗೆ & ಪೋಷಕಾಂಶಗಳ ಅಧ್ಯಯನ
    *ಚಂದ್ರ, ಇತರೆ ಗ್ರಹಗಳಲ್ಲಿ ಬೆಳೆ ಬೆಳೆಯುವ ಸಾಧ್ಯತೆಯ ಅನ್ವೇಷಣೆ

    3.ಸ್ನಾಯುಗಳ ಅಧ್ಯಯನ (ಬ್ರಿಕ್,ಇನ್‌ಸ್ಟೆಮ್ ಬೆಂಗಳೂರು)
    *ಸ್ನಾಯುಗಳ ಅಧ್ಯಯನ & ಸ್ನಾಯು ನಷ್ಟ ಪರಿಹಾರಗಳ ಅಭಿವೃದ್ಧಿ
    *ದೀರ್ಘಕಾಲೀನ ಬಾಹ್ಯಾಕಾಶ ಪ್ರಯಾಣದಲ್ಲಿ ಸಂಭವಿಸುವ ಸ್ನಾಯು ಕ್ಷಯ ಅಧ್ಯಯನ

    4.ಟಾರ್ಡಿಗ್ರೇಡ್ಸ್ – ನೀರಿನ ಕರಡಿಗಳು (ಐಐಎಸ್‌ಸಿ ಬೆಂಗಳೂರು)
    *ನೀರಿನ ಕರಡಿಗಳ ಜೀವನ ಮತ್ತು ಪ್ರಯೋಜನ ಸಾಮರ್ಥ್ಯ ಅಧ್ಯಯನ
    *ಮಾನವರ ಬಾಹ್ಯಾಕಾಶ ಉಳಿವಿಗೆ ತಂತ್ರಗಳ ಅಭಿವೃದ್ಧಿಗೆ ಸಹಾಯ

    5.ಎಲೆಕ್ಟ್ರಾನಿಕ್ ಡಿಸ್‌ಪ್ಲೇ (ಐಐಎಸ್‌ಸಿ, ಬೆಂಗಳೂರು)
    *ಮಾನವ-ಯಂತ್ರ ಸಂವಾದ & ಎಲೆಕ್ಟಾçನಿಕ್ ಡಿಸ್‌ಪ್ಲೇಗಳ ಪರಿಣಾಮ ಅಧ್ಯಯನ
    *ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಾಗ ಎದುರಿಸುವ ಸವಾಲುಗಳ ಅನ್ವೇಷಣೆ

    6.ಸಯಾನೋಬ್ಯಾಕ್ಟೀರಿಯಾ – ನೀಲಿ, ಹಸಿರು ಪಾಚಿ (ಐಸಿಜಿಇಬಿ, ನವದೆಹಲಿ)
    *ಸಯಾನೋಬ್ಯಾಕ್ಟೀರಿಯಾ ಬೆಳವಣಿಗೆ & ನೈಟ್ರೋಜನ ಮೂಲದೊಂದಿಗೆ ಸಂವಾದ
    *ಬಾಹ್ಯಾಕಾಶದಲ್ಲಿ ನೈಟ್ರೋಜನ ಚಕ್ರೀಕರಣದ ಸಾಮರ್ಥ್ಯವನ್ನು ಅನ್ವೇಷಿಸುತ್ತದೆ

    7.ಆಹಾರ ಬೀಜಗಳು (ಐಐಎಸ್‌ಟಿ&ಕೆಎಯು, ತಿರುವನಂತಪುರ)
    *ಮೆಣಸು, ಕಾಳು, ಟೊಮೋಟೋ, ಬೀಜಗಳ ಬೆಳವಣಿಗೆ ಅಧ್ಯಯನ
    *ಬಾಹ್ಯಾಕಾಶ ಕೃಷಿಗೆ ಮಾರ್ಗ ತೋರಿಸುವ ಅಧ್ಯಯನ

  • ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

    ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

    – ರಾಕೇಶ್ ಶರ್ಮಾ ಬಳಿಕ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳಸಲಿರುವ ಎರಡನೇ ಗಗನಯಾತ್ರಿ ಶುಭಾಂಶು ಶುಕ್ಲಾ
    – ಶುಕ್ಲಾಗಿದೆ ಬೆಂಗಳೂರು ಸಂಬಂಧ

    ನವದೆಹಲಿ: ಬಾಹ್ಯಾಕಾಶ ಯೋಜನೆಯ ಪ್ರಮುಖ ಯೋಜನೆ ಆಕ್ಸಿಯಮ್ 4ಕ್ಕೆ (Axiom-4) ಮತ್ತೆ ಮೂಹೂರ್ತ ಫಿಕ್ಸ್ ಆಗಿದೆ. ನಾಳೆ ಮತ್ತೆ ಯೋಜನೆ ಚಾಲನೆಯಾಗಲಿದ್ದು, ಖುದ್ದು ನಾಸಾ (NASA) ಮತ್ತು ಸ್ಪೇಸ್ ಎಕ್ಸ್ (SpaceX)  ಈ ಕುರಿತು ಮಾಹಿತಿ ನೀಡಿದೆ.

    ಈ ಹಿಂದೆ ತಾಂತ್ರಿಕ ದೋಷದಿಂದ ಎರಡು ಬಾರಿ ಮುಂದೂಡಿಕೆಯಾಗಿತ್ತು. ಈ ಬಾರಿ ಮತ್ತೆ ಯಾವುದೇ ಸಮಸ್ಯೆ ಇಲ್ಲದೇ ಯಶಸ್ವಿ ಉಡಾವಣೆಯ ಬಗ್ಗೆ ನಾಸಾ ಕೂಡ ವಿಶ್ವಾಸ ವ್ಯಕ್ತಪಡಿಸಿದೆ. ಇನ್ನೂ ಈ ಬಾರಿಯ ಬಾಹ್ಯಾಕಾಶ ಯೋಜನೆಯಲ್ಲಿ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ನೇತೃತ್ವ ವಹಿಸಿರೋದು ಮತ್ತೊಂದು ವಿಶೇಷ.

    ತಾಂತ್ರಿಕ ತೊಂದರೆಗಳ ಕಾರಣಕ್ಕೆ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯನ್ನು, ಎಲ್ಲಾ ತಾಂತ್ರಿಕ ದೋಷಗಳನ್ನು ನಿವಾರಣೆ ಮಾಡಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್ ಎಕ್ಸ್ ಮೂಲಗಳು ಖಚಿತಪಡಿಸಿವೆ. ಬುಧವಾರ ಮಧ್ಯಾಹ್ನ ಭಾರತೀಯ ಕಾಲಮಾನ 12:01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್ ಫಾಲ್ಕನ್-9 ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಚಿಮ್ಮಲಿದೆ.

    ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿರುವ ಉಡಾವಣಾ ಸಂಕೀರ್ಣ 39ಎ ನಿಂದ ಉಡಾವಣೆ ಕಾಣಲಿದೆ. ಫಾಲ್ಕನ್ 9 ರಾಕೆಟ್‌ನಲ್ಲಿ ಉಡಾವಣೆ ಬಳಿಕ ಹೊಸ ಸ್ಪೇಸ್‌ಎಕ್ಸ್ ಡ್ರ‍್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ, ಆಕ್ಸಿಯಮ್-4 ಮಿಷನ್‌ನ ಸಿಬ್ಬಂದಿ ಕಕ್ಷೆಯಲ್ಲಿರುವ ಪ್ರಯೋಗಾಲಯವನ್ನು ತಲುಪಲಿದ್ದಾರೆ. ಉದ್ದೇಶಿತ ಡಾಕಿಂಗ್ ಅನ್ನು ಜೂನ್ 26 ಗುರುವಾರ ಸಂಜೆ ಭಾರತೀಯ ಕಾಲಮಾನ 4:30ಕ್ಕೆ ಕೈಗೊಳ್ಳಲಾಗುವ ಬಗ್ಗೆ ನಾಸಾ ಮಾಹಿತಿ ನೀಡಿದೆ.

    ಈ ಹಿಂದೆ ಎರಡು ಬಾರಿ ಪ್ರಯತ್ನ ವಿಫಲ:
    ಈ ಹಿಂದೆ ಮೊದಲ ಉಡಾವಣೆ ದಿನಾಂಕವನ್ನು ಕಳೆದ ತಿಂಗಳ ಮೇ 29ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಫ್ಲೋರಿಡಾದಲ್ಲಿ ಹವಾಮಾನ ಸಮಸ್ಯೆ ಎದುರಾಗಿದ್ದ ಹಿನ್ನೆಲೆ ಉಡಾವಣೆಯನ್ನು ಮುಂದೂಡಲಾಗಿತ್ತು. ಅದಾದ ಬಳಿಕ ಅಂದರೆ ಜೂನ್ 8, 10, 11, 19 ಮತ್ತು 22 ಕ್ಕೆ ಸತತವಾಗಿ ಮುಂದೂಡಲಾಯಿತು. ಕಾರಣ ಸ್ಪೇಸ್‌ಎಕ್ಸ್ ಫಾಲ್ಕನ್ -9 ರಾಕೆಟ್‌ನ ಮೊದಲ ಹಂತದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿತ್ತು. ಫಾಲ್ಕನ್ -9 ರಾಕೆಟ್‌ನಲ್ಲಿ ಥ್ರಸ್ಟರ್ ಮತ್ತು ಆಕ್ಸಿಡೈಸರ್ ಸೋರಿಕೆಯ ಸಮಸ್ಯೆಗಳು ಕಂಡುಬಂದಿದ್ದರಿಂದ, ಉಡಾವಣೆಯನ್ನು ಮುಂದೂಡುವ ನಿರ್ಧಾರ ಕೈಗೊಂಡಿದ್ದಾಗಿ ಸ್ಪೇಸ್‌ಎಕ್ಸ್ ತಿಳಿಸಿತ್ತು. ರಾಕೆಟ್‌ನಲ್ಲಿ ದ್ರವ ಆಮ್ಲಜನಕ ಸೋರಿಕೆ ಪರಿಣಾಮವಾಗಿ ರಾಕೆಟ್‌ನ ದುರಸ್ತಿ ಕಾರ್ಯಕ್ಕೆ ಸ್ಪೇಸ್‌ಎಕ್ಸ್ ಮುಂದಾಗಿತ್ತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣನ್ ನೇತೃತ್ವದ ಭಾರತೀಯ ವಿಜ್ಞಾನಿಗಳ ತಂಡ, ರಾಕೆಟ್‌ನ ಪೂರ್ಣ ದುರಸ್ತಿಯ ದೃಢೀಕರಣವನ್ನು ಬಯಸಿತ್ತು. ಇಸ್ರೋದ ಒತ್ತಡಕ್ಕೆ ಮಣಿದ ಸ್ಪೇಸ್‌ಎಕ್ಸ್ ರಾಕೆಟ್‌ನ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದ್ದು, ಇದೀಗ ಜೂನ್ 25ರಂದು ಅಂದರೆ ನಾಳೆ ಉಡಾವಣೆಗೆ ಸಿದ್ಧತೆ ಮಾಡಿಕೊಂಡಿದೆ.

    ಕ್ರ‍್ಯೂ ಮೆಂಬರ್ಸ್:
    ಪೆಗ್ಗಿ ವಿಟ್ಸನ್, ಪೈಲಟ್ ಶುಭಾಂಶು ಶುಕ್ಲಾ, ಮತ್ತು ಸ್ಲಾವೋಸ್ಜ್ ಉಜ್ನಾನ್ಸ್ಕಿ ವಿಸ್ನಿವ್ಸ್ಕಿ ಮತ್ತು ಟಿಬೋರ್ ಕಮು, ಸೇರಿದಂತೆ ಮಿಷನ್ ತಜ್ಞರು ಮತ್ತು ಸಿಬ್ಬಂದಿ ಫ್ಲೋರಿಡಾದಲ್ಲಿ ಕ್ವಾರಂಟೈನ್‌ನಲ್ಲಿರಲಿದ್ದಾರೆ. ಬಾಹ್ಯಾಕಾಶಕ್ಕೆ ಹೊರಟ ಸಿಬ್ಬಂದಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 14 ದಿನಗಳವರೆಗೆ ಇರಲಿದ್ದು, ವೈಜ್ಞಾನಿಕ ಪ್ರಯೋಗಗಳನ್ನು ಮಾಡಲಿದ್ದಾರೆ.

    ಶುಭಾಂಶು ಶುಕ್ಲಾ ಹಿನ್ನೆಲೆ:
    ಭಾರತೀಯ ಗಗನಯಾತ್ರಿ ರಾಕೇಶ್ ಶರ್ಮಾರ 1984ರ ಕಾರ್ಯಾಚರಣೆಯ ಬಳಿಕ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿರುವ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರರಾಗಲಿದ್ದಾರೆ.

    39 ವರ್ಷದ ಶುಕ್ಲಾ ಮೂಲತಃ ಉತ್ತರಪ್ರದೇಶದ ಲಕ್ನೋದವರು. ಅಲಿಗಂಜ್‌ನ ಮಾಂಟೆಸ್ಸರಿ ಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 1999ರ ಕಾರ್ಗಿಲ್ ಯುದ್ಧದಿಂದ ಪ್ರೇರಿತರಾದ ಶುಕ್ಲಾರವರು, ಸ್ವತಂತ್ರವಾಗಿ ಯುಪಿಎಸ್‌ಸಿ ಎನ್‌ಡಿಎ ಪರೀಕ್ಷೆಗೆ ಅರ್ಜಿ ಸಲ್ಲಿಸಿ ಉತ್ತೀರ್ಣರಾಗಿದ್ದರು. ಬಳಿಕ ಮಿಲಿಟರಿ ತರಬೇತಿಯನ್ನು ಪೂರ್ಣಗೊಳಿಸಿ 2005ರಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಿಂದ ಕಂಪ್ಯೂಟರ್ ಸೈನ್ಸ್ನಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿಯನ್ನು ಪಡೆದಿದ್ದರು.

    ಬಳಿಕ ಅವರು ಫ್ಲೈಯಿಂಗ್ ಬ್ರಾಂಚ್‌ಗೆ ಆಯ್ಕೆಯಾದರು ಮತ್ತು ಭಾರತೀಯ ವಾಯುಪಡೆ ಅಕಾಡೆಮಿಯಲ್ಲಿ ತರಬೇತಿ ಪಡೆದರು. ಜೂನ್ 2006ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ಫ್ಲೈಯಿಂಗ್ ಆಫೀಸರ್ ಆಗಿ ನಿಯೋಜನೆಯಾದರು.

    ಶುಕ್ಲಾ ಭಾರತೀಯ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕಾಗಿ, ಭಾರತೀಯ ವಾಯುಪಡೆಯ ಸಂಸ್ಥೆಯಾದ ಇನ್‌ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್‌ಗೆ 2019ರಲ್ಲಿ ಶುಕ್ಲಾ ಅವರನ್ನು ಗಗನಯಾತ್ರಿಯಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಸೇರಿಸಿಕೊಂಡಿತು. ನಂತರ, ಅವರನ್ನು ಐಎಎಂ ಮತ್ತು ಇಸ್ರೋ ಅಂತಿಮ ನಾಲ್ಕರಲ್ಲಿ ಸೇರಿಸಿತು. ಬಳಿಕ 2020ರಲ್ಲಿ, ರಷ್ಯಾದ ಯೂರಿ ಗಗಾರಿನ್ ಗಗನಯಾತ್ರಿ ತರಬೇತಿ ಕೇಂದ್ರದಲ್ಲಿ ಇತರ ಮೂವರು ಆಯ್ದಾ ಗಗನಯಾತ್ರಿಗಳೊಂದಿಗೆ ಮೂಲಭೂತ ತರಬೇತಿಗಾಗಿ ತೆರಳಿದ್ದರು. 2021ರಲ್ಲಿ ತರಬೇತಿ ಪೂರ್ಣಗೊಂಡಿತು. ನಂತರ ಭಾರತಕ್ಕೆ ಮರಳಿದ ಶುಕ್ಲಾ ಬೆಂಗಳೂರಿನಲ್ಲಿರುವ ಗಗನಯಾತ್ರಿ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು, ಇದೇ ಅವಧಿಯಲ್ಲಿ, ಬೆಂಗಳೂರಿನ ಐಐಎಸ್ಸಿಯಿಂದ ಏರೋಸ್ಪೇಸ್ ಎಂಜಿನಿಯರಿಂಗ್‌ನಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು.

    ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತಿರುವನಂತಪುರಂನಲ್ಲಿರುವ ಇಸ್ರೋದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಗಗನಯಾತ್ರಿ ತಂಡದ ಸದಸ್ಯರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ 2024 ಫೆಬ್ರವರಿ 27 ರಂದು ಘೋಷಿಸಿದಾಗ, ಗಗನಯಾತ್ರಿ ತಂಡದ ಸದಸ್ಯರಾಗಿ ಅವರ ಹೆಸರನ್ನು ಮೊದಲು ಅಧಿಕೃತವಾಗಿ ಸಾರ್ವಜನಿಕವಾಗಿ ಘೋಷಿಸಲಾಯಿತು.

    ಭಾರತೀಯ ವಾಯುಪಡೆ ಪೈಲಟ್ ಅಗಿರುವ ತಂಡದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಈ ಹಿಂದೆ ಭಾರತೀಯ ವಾಯುಪಡೆಯಲ್ಲಿ ಮಿಗ್ -29 ಮತ್ತು ಸು -30, ಎಂಕೆಐನಂತಹ ಜೆಟ್‌ಗಳಲ್ಲಿ 2000ಕ್ಕಿಂತಲೂ ಹೆಚ್ಚು ಗಂಟೆಗಳ ಕಾಲ ಹಾರಟ ನಡೆಸಿದ ಅನುಭವ ಹೊಂದಿದ್ದು, ಈ ಬಾರಿಯ ಬಾಹ್ಯಾಕಾಶದ ಯೋಜನೆಯಲ್ಲಿ ಮಿಷನ್ ಪೈಲಟ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

    ಶುಕ್ಲಾದಂತ ವೈದ್ಯರಾಗಿರುವ ಡಾ.ಕಮ್ನಾ ಮಿಶ್ರಾರನ್ನ ವಿವಾಹವಾಗಿದ್ದು, ಕಮ್ನಾ ಮಿಶ್ರ ಶುಕ್ಲಾರ ಬಾಲ್ಯ ಗೆಳತಿ ಕೂಡ. ದಂಪತಿಗೆ ಒಬ್ಬ ಮಗನಿದ್ದಾನೆ. ಶುಕ್ಲಾ ತಂದೆ ಶಂಭು ದಯಾಳ್ ಶುಕ್ಲಾ ನಿವೃತ್ತ ಸರ್ಕಾರಿ ಅಧಿಕಾರಿ, ತಾಯಿ ಆಶಾ ಶುಕ್ಲಾ ಗೃಹಿಣಿ. ಶುಕ್ಲಾರ ಅಕ್ಕ ನಿಧಿ ಎಂಬಿಎ ಪದವಿ ಪಡೆದಿದ್ದಾರೆ. ಇನ್ನೊಬ್ಬ ಅಕ್ಕ ಸುಚಿ ಮಿಶ್ರಾ ಶಾಲಾ ಶಿಕ್ಷಕಿಯಾಗಿದ್ದು, ಶುಕ್ಲಾ ಕಿರಿಯ ಮಗ.