Tag: Ayodhaya

  • ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಶೇ.50 ಪೂರ್ಣ – ಯೋಗಿ ಆದಿತ್ಯನಾಥ್‌

    ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಶೇ.50 ಪೂರ್ಣ – ಯೋಗಿ ಆದಿತ್ಯನಾಥ್‌

    ಲಕ್ನೋ: ಅಯೋಧ್ಯೆ (Ayodhya) ರಾಮ ಮಂದಿರ (Ram Temple) ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ತಿಳಿಸಿದ್ದಾರೆ.

    ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020 ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ನೀತಿ ಪ್ರಕರಣ – ಬೆಳ್ಳಂಬೆಳಗ್ಗೆ 35 ಕಡೆ ಇಡಿ ದಾಳಿ

    1949ರಿಂದ ಆಂದೋಲನ ಆರಂಭವಾಗಿದ್ದು, ರಾಮಮಂದಿರದ ಕನಸನ್ನು ನನಸಾಗಿಸಲು ಸಮರ್ಪಣಾ ಪ್ರಯತ್ನಗಳು ನಡೆದಿವೆ. ಈಗ ಈ ಪ್ರಯತ್ನಗಳಿಂದಾಗಿ ದೇವಾಲಯದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಕೃಷ್ಣ ದೇವರ ʻಕರ್ಮಣ್ಯೇ ವಾಧಿಕಾರಸ್ತೇ ಮಾಫಲೇಶು ಕದಾಚನʼ ಉಪದೇಶದಂತೆ ನಾವು ರಾಮ ಮಂದಿರ ನಿರ್ಮಾಣ ಕಾರ್ಯ ನಡೆಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಮಸೀದಿ ಗುಮ್ಮಟದ ಮೇಲಿದ್ದ 100 ವರ್ಷದಷ್ಟು ಹಳೆಯ ಚಿನ್ನದ ಭಾಗ ಕಳ್ಳತನ

    Live Tv
    [brid partner=56869869 player=32851 video=960834 autoplay=true]

  • ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ – ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ 5 ಕೋಟಿ

    ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ – ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ 5 ಕೋಟಿ

    ಬೆಂಗಳೂರು: ಡಾ. ಎಸ್‌.ಎಲ್‌ ಭೈರಪ್ಪನವರ ಪರ್ವ ನಾಟಕದ ಪ್ರದರ್ಶನವನ್ನು ರಂಗಾಯಣಗಳ ಮೂಲಕ ರಾಜ್ಯಾದ್ಯಂತ ಆಯೋಜಿಸಲು ಒಂದು ಕೋಟಿ ರೂ. ಅನುದಾನವನ್ನು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.

    ಇಂದಿನ ಬಜೆಟ್‌ನಲ್ಲಿ ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಯಡಿಯೂರಪ್ಪ ಒಟ್ಟು 2,645 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ.

    siddaganaga

    ಪ್ರಮುಖ ಅಂಶಗಳು:
    ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿರುವ ಅರಣ್ಯಗಳ ವಿಧ ಮತ್ತು ಸಾಂದ್ರತೆ ವಿವರಗಳನ್ನು 50 ಸೆಂಟಿ ಮೀಟರ್‌ ಸ್ಯಾಟ್‌ಲೈಟ್‌ ರೆಸಲೂಷನ್‌ ಒಳಗೊಂಡ ನಕ್ಷೆ ತಯಾರಿ.

    ಅಯೋಧ್ಯೆ ರಾಮ ಮಂದಿರಕ್ಕೆ ಕರ್ನಾಟಕದಿಂದ ತೆರಳುವ ಭಕ್ತರಿಗೆ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಈ ಕಟ್ಟಡಕ್ಕೆ ಉತ್ತರ ಪ್ರದೇಶ ಸರ್ಕಾರ 5 ಎಕ್ರೆ ಜಮೀನು ನೀಡಲಿದ್ದು ಕಾಮಗಾರಿ ಆರಂಭಿಸಲು 10 ಕೋಟಿ ಅನುದಾನ.

    ತುಮಕೂರಿನಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಗೌರವಾರ್ಥ ಸ್ಮೃತಿ ವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ. ಆದಿಕವಿ ಪಂಪನಿಂದ ಮುದ್ಡಣನ ಕಾಲಘಟ್ಟದವರೆಗೆ ಎಲ್ಲ ಕೃತಿಗಳನ್ನು ಡಿಜಿಟಲೀಕರಿಸಿ ವಿಕೀಪಿಡಿಯಾ- ವಿಕಿಸೋರ್ಸ್‌ಗೆ ಅಪ್ಲೋಡ್‌ ಮಾಡಲಾಗುವುದು.

    ಕಬಿನಿ ಕೆಳಭಾಗದಲ್ಲಿ 50 ಕೋಟಿ ರೂ.ಗಳಲ್ಲಿ ಥೀಮ್‌ ಪಾರ್ಕ್‌, ಉಡುಪಿಯ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ. ರೂ., ತ್ರಾಸಿ, ಮರವಂತೆ, ಒತ್ತಿನೆಣೆ ಇತರ ಕಡಲ ತೀರಗಳ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ.

    ತದಡಿಯಲ್ಲಿ 1 ಎಕ್ರೆ ಪ್ರದೇಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪರಿಸರ ಪ್ರವಾಸೋದ್ಯಮ. ಚಾಮರಾಜನಗರ ಜಿಲ್ಲೆಯ ಗೋಪಿನಾಥಂನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ವನ್ಯಜೀವಿ ಸಫಾರಿ. ಆನೆ ಕಾರಿಡಾರ್‌ ಭಾಗವಾಗಿರುವ ಚಾಮರಾಜನಗರ ಬೂದಿಪಡಗದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಆನೆ ಶಿಬಿರ ಸ್ಥಾಪನೆ.