Tag: Ayodhya dispute

  • ರಾಮಜನ್ಮಭೂಮಿ ವಿವಾದ ಪರಿಹಾರಕ್ಕೆ ದೇವರಲ್ಲಿ ಪ್ರಾರ್ಥಿಸಿದ್ದೆ: ಸಿಜೆಐ ಚಂದ್ರಚೂಡ್‌

    ರಾಮಜನ್ಮಭೂಮಿ ವಿವಾದ ಪರಿಹಾರಕ್ಕೆ ದೇವರಲ್ಲಿ ಪ್ರಾರ್ಥಿಸಿದ್ದೆ: ಸಿಜೆಐ ಚಂದ್ರಚೂಡ್‌

    – ಸಿಜೆಐ ಹೇಳಿಕೆಗೆ ಕಾಂಗ್ರೆಸ್‌ ನಾಯಕ ಉದಿತ್‌ರಾಜ್ ವ್ಯಂಗ್ಯ

    ನವದೆಹಲಿ: ಅಯೋಧ್ಯೆ ವಿವಾದ (Ayodhya Dispute) ಇತ್ಯರ್ಥಪಡಿಸಲು ಕಷ್ಟಸಾಧ್ಯವಾದ ಪ್ರಕರಣವಾಗಿತ್ತು. ವಿವಾದ ಇತ್ಯರ್ಥಕ್ಕಾಗಿ ನಾನು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೆ ಎಂದು ಸಿಜೆಐ ಚಂದ್ರಚೂಡ್ ( CJI Chandrachud) ಹೇಳಿದ್ದಾರೆ.

    ಹುಟ್ಟೂರಾದ ಮಹಾರಾಷ್ಟ್ರದ ಕನ್ಹೆರ್‌ಸರ್‌ನಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ. ನಿಯಮಿತವಾಗಿ ಪ್ರಾರ್ಥನೆ ಸಲ್ಲಿಸೋದಾಗಿ ತಿಳಿಸಿದ್ದಾರೆ. ನನ್ನನ್ನು ನಂಬಿ, ನಿಮಗೆ ನಂಬಿಕೆ ಇದ್ರೆ ದೇವರು ಯಾವುದೋ ಒಂದು ವಿಧದಲ್ಲಿ ನಿಮಗೆ ದಾರಿ ತೋರಿಸುತ್ತಾನೆ ಎಂದಿದ್ದಾರೆ.

    ಇದೀಗ ಈ ವಿಚಾರದಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡಿದೆ. ಇತರೆ ವಿಷಯಗಳ ಪರಿಹಾರಕ್ಕಾಗಿಯೂ ಸಿಜೆಐ ಪ್ರಾರ್ಥನೆ ಮಾಡಿದರೆ, ಸುಪ್ರೀಂಕೋರ್ಟ್, ಹೈಕೋರ್ಟ್‌ಗಳಲ್ಲಿ ಜನಸಾಮಾನ್ಯರಿಗೆ ದುಡ್ಡಿಲ್ಲದೇ ನ್ಯಾಯ ಸಿಗ್ತಿತ್ತು. ಇಡಿ, ಸಿಬಿಐ, ಐಟಿಗಳ ದುರ್ಬಳಕೆಯೂ ನಿಲ್ತಿತ್ತು ಎಂದು ಕಾಂಗ್ರೆಸ್‌ನ (Congress) ಉದಿತ್‌ರಾಜ್ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

    ರಾಮಜನ್ಮಭೂಮಿ ವಿವಾದ (Ram Janmabhoomi) ಸಂಬಂಧ ಐತಿಹಾಸಿಕ ತೀರ್ಪು ನೀಡಿದ ಸಾವಿಂಧಾನಿಕ ಪಂಚಪೀಠದಲ್ಲಿ ಚಂದ್ರಚೂಡ್ ಕೂಡ ಇದ್ದರು. ಇದೀಗ ರಾಮಜನ್ಮಭೂಮಿ ವಿವಾದ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ರಾಮಮಂದಿರವೂ ನಿರ್ಮಾಣಗೊಂಡಿದೆ. ಇದೀಗ ಸಿಜೆಐ ಮಾತಿಗೆ, ಕಾಂಗ್ರೆಸ್‌ನ ನಾಯಕನ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ರಾಮಮಂದಿರ ಪ್ರಕರಣ ನಮ್ಗೆ ಕೊಟ್ರೆ, 24 ಗಂಟೆಯಲ್ಲಿ ಬಗೆಹರಿಸುತ್ತೇವೆ: ಯೋಗಿ ಆದಿತ್ಯನಾಥ್

    ರಾಮಮಂದಿರ ಪ್ರಕರಣ ನಮ್ಗೆ ಕೊಟ್ರೆ, 24 ಗಂಟೆಯಲ್ಲಿ ಬಗೆಹರಿಸುತ್ತೇವೆ: ಯೋಗಿ ಆದಿತ್ಯನಾಥ್

    ನವದೆಹಲಿ: ಸುಪ್ರೀಂ ಕೋರ್ಟ್ ರಾಮಮಂದಿರ ಪ್ರಕರಣದಲ್ಲಿ ಬಹುಬೇಗ ಅಂತಿಮ ತೀರ್ಪನ್ನು ಪ್ರಕಟಿಸಬೇಕಿದ್ದು, ಪ್ರಕರಣದಲ್ಲಿ ಅನಗತ್ಯ ವಿಳಂಬ ಆಗುತ್ತಿರುವುದರಿಂದ ಜನರು ನ್ಯಾಯಾಂಗ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಮಾಧ್ಯಮ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಯೋಗಿ ಆದಿತ್ಯನಾಥ್, ನ್ಯಾಯಾಲಯ ಬಹುಬೇಗ ತೀರ್ಪನ್ನು ಪ್ರಕಟಿಸಬೇಕು ಎಂದು ಕೋರುತ್ತೇನೆ. ಒಂದೊಮ್ಮೆ ಅದನ್ನು ಮಾಡಲು ಸಾಧ್ಯವಿಲ್ಲದಿದ್ದರೆ, ನಮಗೇ ಪ್ರಕರಣವನ್ನು ನೀಡಲಿ. 24 ಗಂಟೆಯಲ್ಲಿ ಪ್ರಕರಣವನ್ನು ಬಗೆಹರಿಸುತ್ತೇವೆ. 25 ಗಂಟೆ ಕೂಡ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    ಕೋಟ್ಯಾಂತರ ಜನರ ನಂಬಿಕೆಯನ್ನು ತೃಪ್ತಿಪಡಿಸಲು ನಾವು ನ್ಯಾಯಾಲಯಕ್ಕೆ ಪ್ರಕರಣದ ತೀರ್ಪು ಬಹುಬೇಗ ನೀಡಲು ಮನವಿ ಮಾಡುತ್ತೇವೆ. ಇದು ಜನರ ನಂಬಿಕೆಯ ವಿಚಾರವಾಗಿದೆ. ಅನಗತ್ಯ ವಿಳಂಬ ಮತ್ತಷ್ಟು ವಿವಾದಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಯೋಗಿ, ಕಾಂಗ್ರೆಸ್ ಪಕ್ಷಕ್ಕೆ ರಾಮ ಜನ್ಮ ಭೂಮಿ ವಿವಾದ ಬಗೆಹರಿಯುವುದು ಬೇಡವಾಗಿದೆ. ಅಯೋಧ್ಯೆ ವಿವಾದ ಅಂತ್ಯವಾದರೆ, ತ್ರಿವಳಿ ತಲಾಖ್ ಸೇರಿದಂತೆ ಹಲವು ವಿಷಯಗಳ ರಾಜಕೀಯ ಶಾಶ್ವತವಾಗಿ ಅಂತ್ಯಗೊಳ್ಳುತ್ತದೆ ಎಂಬ ಉದ್ದೇಶ ಹೊಂದಿದೆ ಎಂದು ಕಿಡಿಕಾರಿದ್ದಾರೆ.

    ಇದೇ ವೇಳೆ ಮೈತ್ರಿ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ರಾಜಕಾರಣದ ಹೆಸರಿನಲ್ಲಿ ಅವರು ಮತ್ತಷ್ಟು ಕೆಳ ಮಟ್ಟಕ್ಕೆ ಇಳಿದರೂ ಕೂಡ, ಅದು ಶೇ. 70 ಮತ್ತು 30 ರ ನಡುವಿನ ಹೋರಾಟ ಆಗುತ್ತದೆ. ಏಕೆಂದರೆ 70 ಮತದಾರರು ಬಿಜೆಪಿಯ ಪರ ಇದ್ದು, 30 ರಷ್ಟು ಮಂದಿ ಮಾತ್ರ ಮಹಾಘಟಬಂಧನ್ ಪರ ಇದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ಕಾಂಗ್ರೆಸ್ ಪಕ್ಷ ಪ್ರಿಯಾಂಕ ಗಾಂಧಿ ಅವರನ್ನು ಕರೆತರುವ ಮೂಲಕ ಕುಟುಂಬ ರಾಜಕಾರಣ ಬಿಟ್ಟು ಬೇರೆ ಏನು ಬರುವುದಿಲ್ಲ ಎಂದು ಸಾಬೀತು ಪಡಿಸಿದೆ. 2014 ರಲ್ಲಿ ಪಕ್ಷ ಉತ್ತರ ಪ್ರದೇಶದಲ್ಲಿ ಗೆದ್ದ ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

    ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

    ಲಕ್ನೋ: ಆಯೋಧ್ಯೆ ರಾಮಮಂದಿರ- ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‍ಬಿ) ಹೇಳಿದೆ.

    ನಾವು ಸುಪ್ರೀಂ ಕೋರ್ಟ್ ಸಲಹೆಯನ್ನು ಸ್ವಾಗತಿಸಿದ್ದು, ಕೋರ್ಟ್ ಹೊರಗಡೆ ವಿವಾದವನ್ನು ಬಗೆ ಹರಿಸಲು ಸಿದ್ಧರಿದ್ದೇವೆ ಎಂದು ಎಐಎಂಪಿಎಲ್‍ಬಿಯ ಮೌಲನಾ ಖಲೀದ್ ರಶೀದ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ಸುಪ್ರೀಂ ಸಲಹೆಯನ್ನು ಆರ್‍ಎಸ್‍ಎಸ್ ಸ್ವಾಗತಿಸಿತ್ತು. ಆದರೆ ವಕ್ಫ್ ಬೋರ್ಡ್ ಸುಪ್ರೀಂ ಸಲಹೆಯನ್ನು ತಿರಸ್ಕರಿಸಿತ್ತು.

    ನ್ಯಾಯಾಲಯದ ಹೊರಗಡೆ ಈ ವಿವಾದವನ್ನು ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯ ವ್ಯಾಪ್ತಿಯಲ್ಲೇ ಈ ವಿವಾದ ಪರಿಹಾರವಾಗಬೇಕು ಎಂದು ಬಾಬ್ರಿ ಮಸೀದಿ ಕಾರ್ಯಕಾರಿ ಸಮಿತಿ(ಬಿಎಂಎಸಿ) ಸಮನ್ವಯಕಾರ ಜಿಲಾನಿ ತಿಳಿಸಿದ್ದಾರೆ.

    2010ರ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸಲ್ಲಿಸಿ ಪ್ರಶ್ನಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಪ್ರತ್ಯೇಕ ಪೀಠವನ್ನು ಸ್ಥಾಪಿಸುವಂತೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂ ನಲ್ಲಿ ನಡೆಯಿತು. ಈ ವೇಳೆ ಆಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದ ಸಂಬಂಧ ನ್ಯಾಯಾಲಯ ನೀಡುವ ತೀರ್ಪಿಗಿಂತಲೂ ಹೊರಗಡೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಮುಖ್ಯ ನ್ಯಾ.ಜಗದೀಶ್ ಸಿಂಗ್ ಖೇಹರ್, ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಸಂಜಯ್ ಕಿಶನ್ ಕೌಲ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿತ್ತು,

    ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ಸೂಕ್ಷ್ಮ ಮತ್ತು ಭಾವನಾತ್ಮಕ ವಿಚಾರವಾಗಿರುವುದರಿಂದ ಎರಡೂ ಪಂಗಡದ ನಾಯಕರು ಸಭೆ ನಡೆಸಿ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಕೋರ್ಟ್ ಸಲಹೆ ನೀಡಿತ್ತು.