Tag: Ayodhya Karaseva

  • ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಕೇಸ್‌ – ಬುಧವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

    ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಕೇಸ್‌ – ಬುಧವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

    – ರಾಮಭಕ್ತನನ್ನು ಬಂಧಿಸಲು ನಿಮಗೆಷ್ಟು ಧೈರ್ಯ?
    – ಹಿಂದೂ ವಿರೋಧಿ ಸಿಎಂ ವಿರುದ್ಧ ಹೋರಾಟ ಎಂದ ವಿಜಯೇಂದ್ರ
    – ಕಾಂಗ್ರೆಸ್‌ ಹಿಂದೂ ವಿರೋಧಿ ಅನ್ನೋದನ್ನ ತೋರಿಸಿದೆ ಎಂದ ಶಾಸಕ

    ಬೆಂಗಳೂರು:‌ ರಾಜ್ಯದಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರ (Congress Government) ಹಿಂದೂ ವಿರೋಧಿ ಸರ್ಕಾರ. ಈ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಆಕ್ಷೇಪಿಸಿದರು.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನ ಈ ಸರ್ಕಾರ ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ (Hubballi) 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದರು.

    ಹಿಂದೂ ವಿರೋಧಿ ಅನ್ನೋದನ್ನ ತೋರಿಸಿದೆ:
    ಜ.22ರಂದು ಅಯೋಧ್ಯೆಯಲ್ಲಿ (Ayodhya) ಭಗವಾನ್ ಶ್ರೀರಾಮನ ಪ್ರತಿಷ್ಠಾ ಕಾರ್ಯಕ್ರಮ ಆಗುವ ಶುಭ ಸಂದರ್ಭದಲ್ಲಿ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಬಳಸಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.

    ರಾಜ್ಯಾದ್ಯಂತ ಹೋರಾಟಕ್ಕೆ ಕರೆ:
    ಶ್ರೀರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನ ಬಂಧಿಸಿದೆ, ಇದು ಖಂಡನೀಯ. ಆದ್ದರಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೇ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.

    ಹಿಂದೂ ವಿರೋಧಿ ಸಿಎಂ ವಿರುದ್ಧ ಹೋರಾಟ:
    ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನ ಓಲೈಸುವ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರಗಾಲದಲ್ಲೂ ತುಷ್ಟೀಕರಣ ಮಾಡುತ್ತಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

    ರಾಮಭಕ್ತನನ್ನು ಬಂಧಿಸಲು ನಿಮಗೆಷ್ಟು ಧೈರ್ಯ?
    ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅದಕ್ಕೂ ಕಾಂಗ್ರೆಸದ್‌ ಸರ್ಕಾರ ಅಡ್ಡಿಯುಂಟುಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ, ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ. ದೇಶವೇ ಸಂಭ್ರಮದಲ್ಲಿರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು-ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.

    31 ವರ್ಷದ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ? ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇರುವುದು ಸಂತೋಷ. ಆದ್ರೆ ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ. ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವ ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು.

    ಕಾಂಗ್ರೆಸ್ಸಿಗರ ಮಾತುಗಳು ಅವರ ಸಂಸ್ಕೃತಿಯನ್ನ ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರ ಹುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ. ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.

  • ಹುಬ್ಬಳ್ಳಿ ಹಿಂದೂ ಕಾರ್ಯಕರ್ತನ ಬಂಧನ ಉದ್ದೇಶಪೂರ್ವಕ ಅಲ್ಲ, ಆಕಸ್ಮಿಕ: ಪರಮೇಶ್ವರ್

    ಬೆಂಗಳೂರು: ಹುಬ್ಬಳ್ಳಿ ಗಲಭೆ (Hubballi Riots) ವಿಚಾರವಾಗಿ ಹಿಂದೂ (Hindu) ಕಾರ್ಯಕರ್ತರ ಬಂಧನ ಉದ್ದೇಶಪೂರ್ವಕ ಅಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (Parameshwar) ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಹಳೆ ಪ್ರಕರಣಗಳನ್ನು ಕ್ಲೀಯರ್ ಮಾಡಿ ಎಂದುಆದೇಶ ಕೊಟ್ಟಿದ್ದೇವೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಕಾನೂನು ಅಡಿಯಲ್ಲಿ ಪೊಲಿಸ್ (Police) ಇಲಾಖೆ ಕ್ರಮ ಕೈಗೊಳ್ಳುತ್ತದೆ. ಹಿಂದೂ (Hindu) ಕಾರ್ಯಕರ್ತರು ಅಂತ ಅಲ್ಲ. ಅದಕ್ಕೆ ಆ ಬಣ್ಣವನ್ನು ಕಟ್ಟುವುದು ಸೂಕ್ತವಲ್ಲ ಎಂದರು. ಇದನ್ನೂ ಓದಿ: ರಾಮಜನ್ಮಭೂಮಿ ಹೋರಾಟದ ಕೇಸ್‌ಗೆ ಮರುಜೀವ – 31 ವರ್ಷದ ಬಳಿಕ ಹುಬ್ಬಳ್ಳಿ ಆರೋಪಿ ಬಂಧನ

    ಒಬ್ಬರನ್ನೇ ಬಂಧನ ಮಾಡಿಲ್ಲ, ಆಕಸ್ಮಿಕವಾಗಿ ಆಗಿರಬಹುದು. ಈ ಸಮಯದಲ್ಲಿ ಉದ್ದೇಶ ಪೂರ್ವಕವಾಗಿ ಯಾರಾದರೂ ಬಂಧನ ಮಾಡುತ್ತಾರಾ? ವರ್ಷಾನುಗಟ್ಟಲೇ ಬಾಕಿ ಉಳಿದಿರುವ ಕೇಸ್‌ಗಳನ್ನು ಕ್ಲೀಯರ್ ಮಾಡಲು ಹೇಳಿದ್ದೇವೆ. ಅದರಲ್ಲಿ ಹುಬ್ಬಳ್ಳಿಯಲ್ಲಿ 32 ಕೇಸುಗಳು ಪೆಂಡಿಂಗ್ ಇತ್ತು . ಅದನ್ನು ಓಪನ್ ಮಾಡಿ ಕ್ಲೀಯರ್‌ ಮಾಡುವ ವೇಳೆ ಈ ಕೇಸ್ ಬಂದಿದೆ. ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿ ಕಸ್ಟಡಿಗೆ ಕೊಟ್ಟಿದಾರೆ. ಎಲ್ಲರಿಗೂ ಹೇಗೆ ಮಾಡಿದ್ದಾರೆ ಇವರಿಗೂ ಹಾಗೆ ಮಾಡಿದ್ದಾರೆ ಎಂದರು.  ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಟ್ಟುಕೊಂಡಿಲ್ಲ. ಹಿಂದೂ ಕಾರ್ಯಕರ್ತರು ಇನ್ನೊಂದು ಕಾರ್ಯಕರ್ತರು ಎನ್ನುವ ಟಾರ್ಗೆಟ್ ಮಾಡಿ ಮಾಡುವ ಪ್ರಯತ್ನ ಮಾಡಿಲ್ಲ.ಕಾನೂನಿನ ಪ್ರಕಾರ ಯಾವ ಕ್ರಮ ಆಗಬೇಕು ಪೊಲೀಸ್ ಇಲಾಖೆ ಮಾಡುತ್ತದೆ. ಇದಕ್ಕೆ ಕೋಮು ಬಣ್ಣ ಕಟ್ಟುವುದು ಸೂಕ್ತ ಅಲ್ಲ ಎಂದು ಹೇಳಿದರು.

    ಈ ರೀತಿ ಬಹಳ ಕಡೆ ಕೇಸುಗಳನ್ನು ಬಿಟ್ಟು ಬಿಡುತ್ತಾರೆ. ಯಾವಾಗಲೂ ಒಮ್ಮೆ ಕೇಸ್ ರೀ ಓಪನ್ ಆಗುತ್ತದೆ. ಅಂಥದ್ದು ಏನಿತ್ತು ಈ ಪ್ರಕರಣದಲ್ಲಿ ಎನ್ನುವುದರ ಬಗ್ಗೆ ಆಯುಕ್ತರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

  • ರಾಮಜನ್ಮಭೂಮಿ ಹೋರಾಟದ ಕೇಸ್‌ಗೆ ಮರುಜೀವ – 31 ವರ್ಷದ ಬಳಿಕ ಹುಬ್ಬಳ್ಳಿ ಆರೋಪಿ ಬಂಧನ

    ರಾಮಜನ್ಮಭೂಮಿ ಹೋರಾಟದ ಕೇಸ್‌ಗೆ ಮರುಜೀವ – 31 ವರ್ಷದ ಬಳಿಕ ಹುಬ್ಬಳ್ಳಿ ಆರೋಪಿ ಬಂಧನ

    ಹುಬ್ಬಳ್ಳಿ: ರಾಜ್ಯದಲ್ಲಿ ಬರೋಬ್ಬರಿ 31 ವರ್ಷಗಳ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣಕ್ಕೆ ಮರುಜೀವ ಸಿಕ್ಕಿರುವುದು ನಾನಾ ರೀತಿಯ ಚರ್ಚೆಗೆ ಆಸ್ಪದವಾಗಿದೆ.

    ಅಯೋಧ್ಯೆ ಕರಸೇವೆಗೂ (Ayodhya Karaseva) ಮುನ್ನ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ (Hubballi Riots) ಸಂಭವಿಸಿತ್ತು. ಒಂದು ಮಳಿಗೆಗೆ ಬೆಂಕಿ ಹಚ್ಚಿದ್ದ ಆರೋಪ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಮರುಜೀವ ನೀಡಿದ್ದಾರೆ.

    ಘಟನೆ ನಡೆದ 31 ವರ್ಷಗಳ ಬಳಿಕ, 52 ವರ್ಷದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರವೇ ಕೋರ್ಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೇ, ಪ್ರಕರಣದ ಉಳಿದ ಆರೋಪಿಗಳ ಪತ್ತೆಗೂ ಬಲೆ ಬೀಸಿದ್ದಾರೆ.  ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಗಲಭೆ ನಡೆದಾಗ ಈ ಆರೋಪಿಗಳೆಲ್ಲಾ 30 ವಯಸ್ಸಿನ ಆಸುಪಾಸಿನವರಾಗಿದ್ದರು. ಇದೀಗ ಇವರಿಗೆಲ್ಲಾ 65-70 ವರ್ಷ ವಯಸ್ಸಾಗಿದೆ. ಆರೋಪಿಗಳ ಪೈಕಿ ಮೂವರು ಮೃತಪಟ್ಟಿದ್ದಾರೆ.

    ದಿಢೀರ್ ಎಂದು 31 ವರ್ಷದ ಹಿಂದಿನ ಕೇಸ್‌ಗೆ ಮರುಜೀವ ನೀಡಿದ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗ್ತಿದೆ. ಇದು ರಾಜಕೀಯಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಆರೋಪಿ ರಾಜು ಧರ್ಮಸಾ ಆಕ್ರೋಶ ಹೊರಹಾಕಿದ್ದಾರೆ.