Tag: ayyappa devotee

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Leakage) ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ ಇದೀಗ 4ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ.

    ಮೃತ ಯುವಕನನ್ನು 19 ವರ್ಷದ ಲಿಂಗರಾಜ ಬೀರನೂರ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ (Hubballi) ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊಂಡಿದ್ದರು. ಇವರ ಪೈಕಿ ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಬಾವಿಗೆ ಬಿದ್ದು ಸಾವು!

    ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸಚಿವ ಸಂತೋಷ್ ಲಾಡ್ (Santosh Lad) ಹಾಗೂ ಮಹೇಶ್ ಟೆಂಗಿನಕಾಯಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಸರ್ಕಾರ ಹೆಚ್ಚಿನ ಆರ್ಥಿಕ ಸಹಾಯ ಮಾಡಬೇಕು ಎಂದು ಆಗ್ರಹಿಸಿದರು.

    ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಕೂಡ ಕಿಮ್ಸ್ ನಿರ್ದೇಶಕರಿಂದ ಮಾಲಾಧಾರಿಗಳ ಬಗ್ಗೆ ಮಾಹಿತಿ ಪಡೆದರು. ಈ ಮಧ್ಯೆ, ಕಿಮ್ಸ್ ನಿರ್ದೇಶಕ ಡಾ.ಎಸ್ ಎಫ್ ಕಮ್ಮಾರ್ ಪ್ರತಿಕ್ರಿಯಿಸಿ, ಬದುಕಿಸಲು ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲ. ಐವರ ಸ್ಥಿತಿ ಚಿಂತಾಜನಕವಾಗಿದ್ದು, ದೇವರೇ ಕಾಪಾಡಬೇಕು ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದರು.ಇದನ್ನೂ ಓದಿ: ಅಂತ್ಯಕ್ರಿಯೆ ಸ್ಥಳದಲ್ಲೇ ತಲೆಯೆತ್ತಲಿದೆಯೇ ಸಿಂಗ್‌ ಸ್ಮಾರಕ? – ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಪತ್ರ!

  • ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

    ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

    ರಾಮನಗರ: ಶಬರಿಮಲೆ (Sabarimala) ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು (Ayyappa Devotee) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಕನಕಪುರದ (Kanakapura) ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅಭಿಮಾನದಿಂದ ನಟರನ್ನು ನಂಬಿ ಯಾರೂ ಮೋಸಹೋಗಬೇಡಿ: ಎ6 ಜಗದೀಶ್ ತಾಯಿ ಕಣ್ಣೀರು

    ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕುಮಾರ್‌ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕುಮಾರ್ ಕುಟುಂಬಸ್ಥರು ಶಬರಿಮಲೆಗೆ ತೆರಳಿದ್ದಾರೆ.

    ಇನ್ನೂ ಕುಮಾರ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ.  ಸೋಮವಾರವಷ್ಟೇ ಪತಿ ಪೋನ್ ಮಾಡಿ ಮಾತನಾಡಿದ್ದರು. ಮನೆಯಲ್ಲೂ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ. ಸ್ನೇಹಿತರ ಜೊತೆ ದೇವಾಲಯಕ್ಕೆ ಹೋಗಿದ್ದವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಸ್ನೇಹಿತರು ಅವರು ಒಬ್ಬರನ್ನೇ ಬಿಟ್ಟು ಎಲ್ಲಿಹೋಗಿದ್ದರು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

  • ಕೇರಳ ಸರ್ಕಾರಕ್ಕೆ ಸೆಡ್ಡು ಹೊಡೆದ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು

    ಕೇರಳ ಸರ್ಕಾರಕ್ಕೆ ಸೆಡ್ಡು ಹೊಡೆದ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು

    – ಭವನಂ ಸನ್ನಿಧಾನಂ ಅಭಿಯಾನಕ್ಕೆ ಭಾರೀ ಬೆಂಬಲ

    ಉಡುಪಿ: ಕೇರಳ ಸರ್ಕಾರದ ವಿರುದ್ಧ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು ಆಕ್ರೋಶಗೊಂಡಿದ್ದಾರೆ. ಶಬರಿಮಲೆ ಪ್ರವೇಶ ಮುನ್ನ ಎರಡು ಬಾರಿ ಕೋವಿಡ್ ಟೆಸ್ಟ್ ನಿಯಮ ರೂಪಿಸಿರುವ ಪಿಣರಾಯಿ ಸರ್ಕಾರದ ವಿರುದ್ಧ ಉಡುಪಿಯಲ್ಲಿ ಭವನಂ ಸನ್ನಿಧಾನಂ ಅಭಿಯಾನ ಶುರುವಾಗಿದೆ.

    ಉಡುಪಿ ಜಿಲ್ಲೆಯಿಂದ ಪ್ರತಿವರ್ಷ 70 ಸಾವಿರಕ್ಕಿಂತಲೂ ಹೆಚ್ಚು ಮಂದಿ ಕೇರಳದ ಶಬರಿಮಲೆಗೆ ಧಾರ್ಮಿಕ ಯಾತ್ರೆ ಮಾಡುತ್ತಾರೆ. ಜನವರಿ ತಿಂಗಳಲ್ಲಿ ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕೆ 40 ಸಾವಿರಕ್ಕಿಂತಲೂ ಹೆಚ್ಚು ಭಕ್ತರು ತೆರಳುತ್ತಾರೆ. ವಿಶ್ವಾದ್ಯಂತ ವ್ಯಾಪಿಸಿರುವ ಕೊರೊನಾ ಮಹಾಮಾರಿ ರೋಗದಿಂದ ಈ ಬಾರಿ ಶಬರಿಮಲೆ ಪ್ರವೇಶ ಕಷ್ಟಕರವಾಗಿದೆ. ಕೇರಳ ಸರ್ಕಾರ ಲೆಕ್ಕಕ್ಕಿಂತ ಹೆಚ್ಚು ನಿಯಮಾವಳಿಗಳನ್ನು ವಿಧಿಸಿದೆ. ಕರ್ನಾಟಕದಿಂದ ತೆರಳುವ ಭಕ್ತರು ಕೋವಿಡ್ ಟೆಸ್ಟ್ ಮಾಡಿರಬೇಕು. ನೀಲಕಲ್ ಎಂಬಲ್ಲಿ ಇನ್ನೊಂದು ಕೋವಿಡ್ ಟೆಸ್ಟ್ ಮಾಡಿಸಬೇಕು. ಪಂಪಾ ನದಿ ತೀರದಲ್ಲಿ ಮತ್ತೊಂದು ಬಾರಿ ಟೆಸ್ಟ್ ಮಾಡಿಸಬೇಕು ಎಂದಿದೆ. ಈ ದುಬಾರಿ ನಿಯಮ ಉಡುಪಿಯ ಅಯ್ಯಪ್ಪ ಭಕ್ತರನ್ನ ಕೆರಳಿಸಿದೆ.

    ಇಷ್ಟೆಲ್ಲಾ ನಿಯಮಾವಳಿಯ ಸಹವಾಸವೇ ಬೇಡ ಅಂತ ಪಂದಳಕಂದನ ಸನ್ನಿಧಾನಕ್ಕೆ ತೆರಳದೆ ‘ಭವನಂ ಸನ್ನಿಧಾನಂ’ ಅಭಿಯಾನವನ್ನು ಉಡುಪಿಯಲ್ಲಿ ಶುರುಮಾಡಿದ್ದಾರೆ. ಈ ಅಭಿಯಾನದ ಪ್ರಕಾರ ಮನೆಯಲ್ಲೇ ಇದ್ದು ಕುಟುಂಬ ಸಮೇತ ಅಯ್ಯಪ್ಪಾರಾಧನೆ ಮಾಡಲು ನಿರ್ಧರಿಸಿದ್ದಾರೆ. ಎರಡೆರಡು ಕೋವಿಡ್ ಟೆಸ್ಟ್ ಮಾಡಲಿರುವ, ಇರುಮುಡಿ ವಾಪಾಸ್ ಕೊಡದ, ಭಕ್ತರ ತುಪ್ಪ ಸ್ವೀಕರಿಸದ, ಊಟದ ವ್ಯವಸ್ಥೆ ಮಾಡದ ದೇಗಲ ಆಡಳಿತ ಮಂಡಳಿ, ಕೇರಳ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಕೇರಳದ ಬಳಿ ಕಾಸಿಲ್ಲದಿದ್ದರೆ ಅಕೌಂಟ್ ನಂಬರ್ ಕಳುಹಿಸಿ. ಭಕ್ತರ ಭಾವನೆಗೆ ಜೊತೆ ವ್ಯವಹಾರ ಮಾಡಬೇಡಿ ಅಂತ ತಿರುಗೇಟು ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಯ್ಯಪ್ಪ ಭಕ್ತ ದಯಾಕರ್, ಹಿಂದೂಗಳ ಧಾರ್ಮಿಕ ಭಾವನೆಯನ್ನು ಕೇರಳ ಸರ್ಕಾರ ಚೆಲ್ಲಾಟವಾಡುತ್ತಿದೆ. ಮೂರು ಮೂರು ಬಾರಿ ಕೋವಿಡ್ ಟೆಸ್ಟ್ ಮಾಡುವ ಅವಶ್ಯಕತೆ ಏನಿದೆ. ಸರ್ಕಾರದ ಬಳಿ ಕಾಸಿಲ್ಲದಿದ್ದರೆ ಅಕೌಂಟ್ ನಂಬರ್ ಕೊಡಿ ನಾವು ಇಲ್ಲಿಂದಲೇ ನಮ್ಮ ಕಾಣಿಕೆಗಳನ್ನು ಹಾಕುತ್ತೇವೆ. ಕೊರೊನಾದ ಹೆಸರಿನಲ್ಲಿ ಹಣ ಲೂಟಿ ಮಾಡಬೇಡಿ ಎಂದಿದ್ದಾರೆ.

    ಮಲ್ಪೆ ಅಯ್ಯಪ್ಪಸ್ವಾಮಿ ಮಂದಿರದ ಅಧ್ಯಕ್ಷ ಆರ್.ಕೆ ಮಲ್ಪೆ ಮಾತನಾಡಿ, ಉಡುಪಿ ಜಿಲ್ಲೆಯ ಅಯ್ಯಪ್ಪ ಮಾಲಾಧಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಅಯ್ಯಪ್ಪ ಭಕ್ತರು ನಮ್ಮ ಅಭಿಯಾನದ ಜೊತೆ ಕೈಜೋಡಿಸಿದ್ದಾರೆ. ಅಯ್ಯಪ್ಪ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸುವುದು ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಯಾವುದೇ ಶಿಬಿರಗಳನ್ನು ಮಾಡದೆ ಮನೆಗಳಲ್ಲೇ ಅಯ್ಯಪ್ಪ ದೇವರನ್ನ ಕುಟುಂಬ ಸಮೇತವಾಗಿ ನಿಯಮ ನಿಷ್ಠೆಯಿಂದ ಆರಾಧಿಸಲು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.