Tag: Azaan

  • ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಪಾಟ್ನಾ: ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಬಿಹಾರದ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್ 26 ರಂದು ಆಯೋಜಿಸಲಾದ ಆಜಾನ್ ಮತ್ತು ಇಫ್ತಾರ್ ಕೂಟಕ್ಕೆ ಬಿಜೆಪಿ ಶಾಸಕ ಸಂಜಯ್ ಸರೋಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇದೊಂದು ಗಂಭೀರ ವಿಚಾರ. ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಸ್ಥಳಗಳನ್ನಾಗಿ ಪರಿವರ್ತಿಸುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ ಎಂದು ವಿಶ್ವವಿದ್ಯಾನಿಲಯ ಉಪಕುಲಪತಿ ಹಾಗೂ ರಿಜಿಸ್ಟ್ರಾರ್ ಮುಷ್ತಾಕ್ ಅಹ್ಮದ್ ವಿರುದ್ಧ ಸಂಜಯ್ ಸರೋಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಇದಕ್ಕೆ ಪ್ರತಿಕ್ರಿಯಿಸಿದ ಮುಷ್ತಾಕ್ ಅಹ್ಮದ್ ಅವರು, ಇಫ್ತಾರ್ ಕೂಟವನ್ನು ವಿಶ್ವವಿದ್ಯಾಲಯದ ಆಡಳಿತ ಆಯೋಜಿಸಿಲ್ಲ. ವಿಶ್ವವಿದ್ಯಾಲಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕಾರ್ಯಕ್ರಮವನ್ನು ಕೆಲವು ವಿದ್ಯಾರ್ಥಿಗಳು ಆಯೋಜಿಸಿದ್ದರು. ತಪ್ಪು ಮನಸ್ಥಿತಿ ಹೊಂದಿರುವ ಜನರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು

  • ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ ಪಡೆಯಿರಿ: ಮುಸ್ಲಿಂ ಸಂಘಸಂಸ್ಥೆ ಸಲಹೆ

    ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ ಪಡೆಯಿರಿ: ಮುಸ್ಲಿಂ ಸಂಘಸಂಸ್ಥೆ ಸಲಹೆ

    ಮುಂಬೈ: ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವಂತೆ ಜಮಿಯತ್‌-ಉಲಮಾ-ಇ-ಹಿಂದ್‌ ಘಟಕ ಸಲಹೆ ನೀಡಿದೆ.

    ರಾಜ್ಯದ ಮಸೀದಿಗಳಲ್ಲಿ ಆಜಾನ್‌ ಬಳಕೆ ವಿಚಾರವಾಗಿ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆ ಈ ಸೂಚನೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಕೋರ್ಟ್‌ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವಾಲಯ ನಿರ್ಧರಿಸಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ

    mosque-loudspeakers

    ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆದಿರಬೇಕು ಎಂಬ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ಮುಂದಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಜಮಿಯತ್‌-ಉಲಮಾ-ಇ-ಹಿಂದ್‌ ಘಟಕದ ಕಾರ್ಯದರ್ಶಿ ಗುಲ್ಜರ್‌ ಅಜ್ಮಿ, ರಾಜ್ಯದಲ್ಲಿರುವ ಬಹುಪಾಲು ಮಸೀದಿಗಳು ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿವೆ. ಅನುಮತಿ ಪಡೆಯದೇ ಇದ್ದರೆ ಮಸೀದಿಗಳು ಕೂಡಲೇ ಅನುಮತಿ ಪಡೆಯುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ರಾಜ್ಯದ ಪೊಲೀಸ್‌ ಇಲಾಖೆ ತುಂಬಾ ಸಹಕಾರ ನೀಡಿದ್ದಾರೆ. ಅನುಮತಿ ನೀಡುವಲ್ಲಿಯೂ ಪೊಲೀಸರ ಸಹಕಾರ ಅಗತ್ಯವಿದೆ ಎಂದು ಅಜ್ಮಿ ಅಭಿಪ್ರಾಯಪಟ್ಟಿದ್ದಾರೆ.

    Raj Thackeray

    ಧ್ವನಿವರ್ಧಕಗಳ ಸಮಸ್ಯೆಯನ್ನು ನಿಭಾಯಿಸಲು ಮಹಾರಾಷ್ಟ್ರ ಸರ್ಕಾರವನ್ನು ಶ್ಲಾಘಿಸಿದ ಅಜ್ಮಿ ಅವರು, ರಾಜ್ಯ ಸರ್ಕಾರವು ಎಲ್ಲರಿಗೂ ನ್ಯಾಯ ಒದಗಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

    ಮೇ 3ರೊಳಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ತೆರವಿಗೆ ರಾಜ್ಯ ಸರ್ಕಾರ ಕ್ರಮವಹಿಸಬೇಕು. ಇಲ್ಲವಾದಲ್ಲಿ ಮಸೀದಿ ಹೊರಗಡೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್‌ ಚಾಲೀಸಾ ಪಠಿಸಲಾಗುವುದು ಎಂದು ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

  • ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಬೇಕು ಎಂದು ಒತ್ತಾಯಿಸಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ (ಎಂಎನ್‌ಎಸ್‌) ರಾಜ್‌ ಠಾಕ್ರೆ ವಿರುದ್ಧ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಕಾಂಗ್ರೆಸ್‌ನ ಸಂಜಯ್‌ ನಿರುಪಮ್‌ ಕಿಡಿಕಾರಿದ್ದಾರೆ.

    ರಾಜ್ ಠಾಕ್ರೆ ಅವರಿಗೆ ಅಷ್ಟು ಪ್ರಾಮುಖ್ಯತೆ ನೀಡಬಾರದು. ಸರಿಯಾದ ಸಮಯ ಬಂದಾಗ, ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ. ಪ್ರತಿ ಪ್ರಶ್ನೆಗೂ ನನ್ನ ಬಳಿ ಉತ್ತರವಿದೆ ಎಂದು ಅಜಿತ್‌ ಪವಾರ್‌ ತಿರುಗೇಟು ನೀಡಿದ್ದಾರೆ.

    ಮುಂಬೈನ ಒಂದೇ ಒಂದು ಮಸೀದಿಯಿಂದಲೂ ಧ್ವನಿವರ್ಧಕಗಳನ್ನು ತೆಗೆದುಹಾಕಿದರೆ ಅದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಸರ್ಕಾರಕ್ಕೆ ಸಂಜಯ್‌ ನಿರೂಪಮ್‌ ಎಚ್ಚರಿಕೆ ನೀಡಿದ್ದಾರೆ.

    ಮಸೀದಿಯಿಂದ ಧ್ವನಿವರ್ಧಕಗಳನ್ನು ತೆಗೆಯದಂತೆ ನಾವು ಸರ್ಕಾರ ಮತ್ತು ಮುಂಬೈ ಪೊಲೀಸರನ್ನು ಕಟ್ಟುನಿಟ್ಟಾಗಿ ಹೇಳಿದ್ದೇವೆ. ಸರ್ಕಾರವು ಡೆಸಿಬಲ್ ನಿಯಂತ್ರಣ ಮಾರ್ಗಸೂಚಿಗಳನ್ನು ನೀಡಲು ಬಯಸಿದರೆ, ಅದನ್ನು ಮಾಡಬಹುದು. ಎಲ್ಲಾ ಮಸೀದಿಗಳಲ್ಲಿ ಇದನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಟ್ವೀಟ್‌ ಮಾಡಿ ಸಂಜಯ್‌ ನಿರುಪಮ್‌ ತಿಳಿಸಿದ್ದಾರೆ.

    ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕ್ತಿವಿ ಎಂದು ರಾಜ್‌ ಠಾಕ್ರೆ ಹೇಳಿಕೆ ನೀಡಿದ್ದರು.

    ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಮಹಾರಾಷ್ಟ್ರ ಸರ್ಕಾರದ ಮೈತ್ರಿ ಕೂಟ)ಗಳು ರಾಜ್ ಠಾಕ್ರೆ ಅವರ ಬೇಡಿಕೆಯನ್ನು ಬಲವಾಗಿ ವಿರೋಧಿಸಿವೆ. ಇದು ಕರ್ನಾಟಕದಲ್ಲಿಯೂ ಆಜಾನ್ ಗದ್ದಲಕ್ಕೆ ಕಾರಣವಾಗಿದೆ. ಮಸೀದಿಗಳ ಹೊರಗಿನ ಧ್ವನಿವರ್ಧಕದ ಡೆಸಿಬಲ್ ಮಟ್ಟವನ್ನು ನಿಗದಿಪಡಿಸುವ ನಿಯಮಗಳನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದವು.

  • ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ ಆದೇಶ ಪಾಲಿಸಬೇಕು: ಖರ್ಗೆ

    ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ ಆದೇಶ ಪಾಲಿಸಬೇಕು: ಖರ್ಗೆ

    ನವದೆಹಲಿ: ಧಾರ್ಮಿಕ ಕಟ್ಟಡಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ನ ಆದೇಶ ಪಾಲಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ವಿಷಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕು ಎಂದು ಖರ್ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ಪ್ರತಿಯೊಬ್ಬರೂ ಹೈಕೋರ್ಟ್‌ನ ಆದೇಶವನ್ನು ಪಾಲಿಸಬೇಕು. ಆದರೆ ಸಮಾಜದಲ್ಲಿ ಕೋಮು ಬಿರುಕುಗಳನ್ನು ಸೃಷ್ಟಿಸುವಾಗ ಕೇವಲ ಧ್ರುವೀಕರಣದ ರಾಜಕೀಯ ಉದ್ದೇಶಕ್ಕಾಗಿ ಇಂತಹ ಸಮಸ್ಯೆಗಳನ್ನು (ಆಜಾನ್ ಸಮಸ್ಯೆ) ತಂದು ಗದ್ದಲ ಎಬ್ಬಿಸಲಾಗಿದೆ. ಇದು ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರತಿಕೂಲವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಣ ಸಾಧಿಸಿ, ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

    ಹಿಜಬ್‌ ವಿಚಾರವಾಗಿ ಅಲ್‌ಖೈದಾ ಸಂಘಟನೆ ವ್ಯಕ್ತಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಚೋದಿಸಲು ಪ್ರಯತ್ನಿಸುವ ಜನರ ವಿರುದ್ಧ ಸರ್ಕಾರ ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲ PIL ಗಳನ್ನು ನಾವೇ ವಿಚಾರಣೆ ನಡೆಸುವುದಾದರೆ ಜನ ಸರ್ಕಾರವನ್ನು ಆಯ್ಕೆ ಮಾಡಿರುವುದ್ಯಾಕೆ? – ಸುಪ್ರೀಂಕೋರ್ಟ್ ಗರಂ

    muskhan

    ಯಾರಾದರೂ ತಪ್ಪು ಕೆಲಸಗಳಲ್ಲಿ ತೊಡಗಿದರೆ, ಜನರು ಅವರನ್ನು ಬೆಂಬಲಿಸಬಾರದು. ಯಾರಾದರೂ ಪ್ರಚೋದಿಸಲು ಪ್ರಯತ್ನಿಸಿದರೆ, ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ವರ್ತಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

  • ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ನವದೆಹಲಿ: ಹಿಜಬ್, ಹಲಾಲ್ ಮತ್ತು ಆಜಾನ್‍ಗಳ ಅರ್ಥಹೀನ ವಿವಾದದಿಂದಾಗಿ ಬೆಲೆ ಏರಿಕೆ ಹಾಗೂ ಹಣದುಬ್ಬರದಂತಹ ಗಂಭೀರ ಸಮಸ್ಯೆಯ ಗಮನ ದೂರವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕಿಡಿಕಾರಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲೋಕಸಭೆಯಲ್ಲಿ ಅಂಗಿಕಾರಗೊಂಡ ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳ ಮಸೂದೆಯ ಹೊರತಾಗಿಯೂ ಸಾಮೂಹಿಕ ವಿಚಲನಕ್ಕೆ ಸರ್ಕಾರವು ನಿಜವಾದ ಅಸ್ತ್ರಗಳನ್ನು ಹೊಂದಿದೆ. ಅದುವೇ ಹಲಾಲ್, ಹಿಜಬ್ ಮತ್ತು ಆಜಾನ್‍ಗಳ ಅರ್ಥಹೀನ ವಿವಾದಗಳಿಂದಾಗಿ ಬೆಲೆ ಏರಿಕೆಯ ಗಮನವನ್ನು ದೂರ ಮಾಡಿದ್ದಾರೆ ಎಂದು ಟೀಕಿಸಿದರು.

    ಗುರುವಾರ ಸಂಸತ್ತನ್ನು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಮುಂದೂಡಲಾಗಿದೆ. ಕಲಾಪವನ್ನು ಮುಂದೂಡುವ ಬದಲು ಇಂಧನ ಬೆಲೆ ಏರಿಕೆ ಮತ್ತು ಗ್ರಾಹಕರ ಹಣದುಬ್ಬರದ ಬಗ್ಗೆ ಗಂಭೀರ ಚರ್ಚೆಯನ್ನು ಕೇಳುವ ಧೈರ್ಯವನ್ನು ಹೊಂದಿರಬೇಕು. ಆದರೆ ಸರ್ಕಾರವು ಬೆಲೆ ಏರಿಕೆಯ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ದೈನಂದಿನ ಹೆಚ್ಚಳವು ಸಂಸತ್ತಿನ ಅಧಿವೇಶನಗಳಲ್ಲಿ ಪ್ರಾಬಲ್ಯ ಸಾಧಿಸಿತು. ಪ್ರತಿಪಕ್ಷ ನಾಯಕರು ಇಂಧನ ಬೆಲೆ ಗಗನಕ್ಕೇರುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಕಳೆದ 16 ದಿನಗಳಲ್ಲಿ ಇಂಧನ ಬೆಲೆ ಲೀಟರ್‌ಗೆ 10 ಏರಿಕೆಯಾಗಿದೆ. ಇದನ್ನೂ ಓದಿ: ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಮನೆಗೆ ಭೇಟಿ ಕೊಟ್ಟ ನವಜೋತ್ ಸಿಂಗ್ ಸಿಧು

    ಹಣಕಾಸು ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬೆಲೆ ಏರಿಕೆಗೂ ರಷ್ಯಾ-ಉಕ್ರೇನ್ ಯುದ್ಧದ ಸಂಬಂಧವಿದೆ. ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಯುದ್ಧವು ಎಲ್ಲಾ ದೇಶಗಳ ಮೇಲೆ ಪರಿಣಾಮ ಬೀರುತ್ತದೆ, ಪೂರೈಕೆ ಸರಪಳಿಗಳು ವಿಶೇಷವಾಗಿ ಕಚ್ಚಾ ತೈಲದ ಮೇಲೆ ಅಡ್ಡಿಪಡಿಸುತ್ತವೆ ಎಂದು ಹೇಳಿದರು.

  • ಆಜಾನ್‌ನಿಂದ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ತೊಂದರೆ ಆಗ್ತಿದೆ: ಈಶ್ವರಪ್ಪ

    ಆಜಾನ್‌ನಿಂದ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ತೊಂದರೆ ಆಗ್ತಿದೆ: ಈಶ್ವರಪ್ಪ

    ಶಿವಮೊಗ್ಗ: ಮಸೀದಿಗಳಲ್ಲಿ ಧ್ವನಿವರ್ಧಕಗಳಿಂದಾಗಿ ವಿದ್ಯಾರ್ಥಿಗಳು, ರೋಗಿಗಳು, ವಯೋವೃದ್ಧರಿಗೆ ತೊಂದರೆ ಆಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಮತ್ತು ಚರ್ಚ್‌ಗಳಲ್ಲಿ ಯಾರಿಗೂ ತೊಂದರೆ ಆಗದಂತೆ ಪೂಜೆ-ಪುನಸ್ಕಾರ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಾರೆ. ನಿಮ್ಮ ಮಸೀದಿಗಳೂ ಹಾಗೆಯೇ ಇರಲಿ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬೇಡ ಅಂತಾ ಸುಪ್ರೀಂ ಕೋರ್ಟ್ ಹೇಳಿದೆ. ಆದೇಶವನ್ನು ನೀವು ಏಕೆ ಮೀರುತ್ತಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜನ ಮೂರ್ಖರಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು

    ಹಿಜಬ್ ಬಗ್ಗೆ ಇದೇ ರೀತಿ ಚರ್ಚೆ ಬಂತು. ಕೋರ್ಟ್ ತೀರ್ಪು ಕೊಟ್ಟಿದೆ. ತೀರ್ಪು ನಂತರವೂ ಪಿಎಫ್‌ಐ, ಎಸ್‌ಡಿಪಿಐನವರು ಬಂದ್‌ಗೆ ಕರೆ ಕೊಟ್ಟರು. ಇದರ ಅರ್ಥ ಏನು? ಕೋರ್ಟ್ ತೀರ್ಪನ್ನು ನಾವು ತಿರಸ್ಕಾರ ಮಾಡಿದ್ದೇವೆ ಅಂತಲ್ಲವೆ? ನ್ಯಾಯಾಲಯಕ್ಕೆ ಅಪಮಾನ ಮಾಡಿದ ಹಾಗೆ ಎಂದು ವಾಗ್ದಾಳಿ ನಡೆಸಿದರು.

    ಇಂತಹ ಬೆಳವಣಿಗೆಗಳಿಗೆ ಕಾಂಗ್ರೆಸ್ ನಾಯಕರು ಬೆಂಬಲ ಕೊಡುತ್ತಾರೆ. ಶಾಂತಿಯಿಂದ ಮೆರವಣಿಗೆ ಮಾಡಿ ಬಂದ್ ಮಾಡಿ ಅಂದರೆ, ಏನು ತಪ್ಪು ಅಂತಾ ಸಿದ್ದರಾಮಯ್ಯ ಕೇಳುತ್ತಾರೆ. ಸಂವಿಧಾನ, ಕೋರ್ಟ್ ಮೀರಿ ಮುಸಲ್ಮಾನರಿಗೆ ಬೆಂಬಲ ಕೊಡುವುದೇ ನಮ್ಮ ಉದ್ದೇಶ ಎನ್ನುತ್ತಾರೆ ಕಾಂಗ್ರೆಸ್‌ನವರು. ಇದು ಮುಸಲ್ಮಾನರಿಗೆ ಕೊಡುತ್ತಿರುವ ಕುಮ್ಮಕ್ಕು. ಹಿಂದೂ, ಕ್ರಿಶ್ಚಿಯನ್, ಮುಸಲ್ಮಾನ್ ಧರ್ಮ ಇರಬಹುದು. ಎಲ್ಲರೂ ಸಹ ಸಂವಿಧಾನ ಬದ್ಧವಾಗಿ ಪೂಜೆ-ಪುನಸ್ಕಾರ ಮಾಡಿಕೊಳ್ಳಲಿ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ

    ನಮ್ಮ ದೇಶದಲ್ಲಿ ಸಂವಿಧಾನ, ನ್ಯಾಯಾಲಯ ಇದೆ. ನ್ಯಾಯಾಲಯ, ಸಂವಿಧಾನ ಏನು ಹೇಳುವುದನ್ನು ಎಲ್ಲಾ ಧರ್ಮದವರು ಪರಿಪಾಲನೆ ಮಾಡಬೇಕು. ಡಿಕೆಶಿ, ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ಮುಸಲ್ಮಾನರನ್ನು ತೃಪ್ತಿಪಡಿಸುವ ಒಂದೇ ಕಾರಣಕ್ಕೆ ಸಂವಿಧಾನ ಮೀರಿ ಮಾತನಾಡುತ್ತಿದ್ದಾರೆ. ಕೋರ್ಟ್ ಆದೇಶ ಮೀರಿ ಮಾತನಾಡ್ತಿದ್ದಾರೆ. ನೀವು ಕಾನೂನು ತಿಳಿದವರು, ಸಂವಿಧಾನ ಗೊತ್ತಿರುವವರು. ಅದೇ ರೀತಿ ಯಾವಾಗಲೂ ಕೋರ್ಟ್ ವಿಚಾರವನ್ನೇ ಪ್ರಸ್ತಾಪ ಮಾಡುವವರು. ನೀವು ಏಕೆ ಕೋರ್ಟ್ ಮಾತನ್ನು ಮೀರಬೇಡಿ ಅಂತಾ ಮುಸಲ್ಮಾನರಿಗೆ ಹೇಳ್ತಿಲ್ಲ ಎಂದು ಪ್ರಶ್ನಿಸಿದರು.

    ಇವರು ಸರ್ಕಾರದ ವೈಫಲ್ಯ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಎಲ್ಲಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತಿದ್ದೇವೆ. ಸರ್ಕಾರದ ವೈಫಲ್ಯ ಅಂತಾ ಜನ ತಾನೇ ತೀರ್ಮಾನ ಮಾಡಬೇಕು? ಸರ್ಕಾರದ ವೈಫಲ್ಯವನ್ನು ಕಾಂಗ್ರೆಸ್, ಜೆಡಿಎಸ್ ತೀರ್ಮಾನ ಮಾಡೋದಲ್ಲ. ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ ಎನ್ನುವ ಒಂದೇ ಕಾರಣಕ್ಕೆ ಗ್ರಾಮ ಪಂಚಾಯ್ತಿಯಿಂದ ಹಿಡಿದು, ಲೋಕಸಭೆಯವರೆಗೆ ಎಲ್ಲಾ ಚುನಾವಣೆಯಲ್ಲಿ ನಾವೇ ಗೆದ್ದುಕೊಂಡು ಬಂದಿದ್ದೇವೆ. ಜನರ ತೀರ್ಮಾನಕ್ಕೆ ನಾವು ಬದ್ಧವೇ ಹೊರತು ಡಿಕೆಶಿ, ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗಳಿಗಲ್ಲ ಎಂದು ಚಾಟಿ ಬೀಸಿದರು. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಲೌಡ್ ಸ್ಪೀಕರ್- ಬಿಜೆಪಿ ನಾಯಕನ ಆಫರ್

  • ಆಜಾನ್ ಕೇಳಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಯಡಿಯೂರಪ್ಪ

    ಆಜಾನ್ ಕೇಳಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಯಡಿಯೂರಪ್ಪ

    ಚಿಕ್ಕಬಳ್ಳಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ಯಡಿಯೂರಪ್ಪ ಅವರು ಆಜಾನ್ ಕೇಳಿ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

    ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಘಟನೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಸೀದಿಯಿಂದ ಆಜಾನ್ ಕೇಳಿದ ತಕ್ಷಣ ಭಾಷಣ ನಿಲ್ಲಿಸಿದರು.

    ಇದಕ್ಕೂ ಮುನ್ನ ಗೌರಿಬಿದನೂರಿನ ಸಮಾವೇಶದ ವೇಳೆ ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ದೇಶದ ಎಲ್ಲಾ ಕಡೆ ಕಾಂಗ್ರೆಸ್ ನೆಲ ಕಚ್ಚಿ ಅಸ್ತಿತ್ವ ಕಳೆದುಕೊಂಡಿದ್ದು ಸಿದ್ದರಾಮಯ್ಯ ಸರ್ಕಾರದ ಹಗರಣಗಳ ತನಿಖೆ ನಡೆದರೆ ಯಾರು ಜೈಲಿಗೆ ಹೋಗುತ್ತಾರೆ. ಯಾರು ಮನೆ ಹೋಗುತ್ತಾರೆ ಗೊತ್ತಾಗುತ್ತೆ. ಸಿದ್ದರಾಮಯ್ಯ ಸರ್ಕಾರ ಮನೆಗೆ ಹೋಗೋದು ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಸಹ ಸರ್ಕಾರದ ಸಾಧನಾ ಸಮಾವೇಶದ ವೇಳೆ ಆಜಾನ್ ಕೇಳಿ ತಮ್ಮ ಭಾಷಣವನ್ನು ನಿಲ್ಲಿಸಿ ಸುದ್ದಿಯಾಗಿದ್ದರು.