Tag: azadi ka amrit mahotsav

  • ಬೂಸ್ಟರ್ ಡೋಸ್ ಪಡೆಯಲು ಜನ ಹಿಂದೇಟು – ಇನ್ಮುಂದೆ ಸಿಗಲ್ಲ ಫ್ರೀ ಲಸಿಕೆ

    ಬೂಸ್ಟರ್ ಡೋಸ್ ಪಡೆಯಲು ಜನ ಹಿಂದೇಟು – ಇನ್ಮುಂದೆ ಸಿಗಲ್ಲ ಫ್ರೀ ಲಸಿಕೆ

    ಬೆಂಗಳೂರು: ಕೊರೊನಾ (Corona) ಮಹಾಮಾರಿಗೆ ರಾಮಬಾಣವಾಗಿದ್ದ ಲಸಿಕೆಯ (Vaccine) ಬಗ್ಗೆ ಅದೇಕೋ ಜನರಿಗೆ ಈಗ ತಾತ್ಸಾರ ಬಂದು ಬಿಟ್ಟಿದೆ. ಮೊದಲೆರಡು ಅಲೆಗಳಲ್ಲಿ ಗಂಟೆಗಟ್ಟಲೇ ಕ್ಯೂ ನಿಂತು ವ್ಯಾಕ್ಸಿನ್ ಪಡೆಯುತ್ತಿದ್ದ ಜನರು ಇದೀಗ ಬೂಸ್ಟರ್ ಡೋಸ್‍ಗೆ (Booster Dose) ನಿರ್ಲಕ್ಷ್ಯ ಮಾಡುತ್ತಿದ್ದಾರೆ.

    ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ (Azadi Ka Amrit Mahotsav) ಅಂಗವಾಗಿ ಸೆಪ್ಟೆಂಬರ್ 30 ರವರೆಗೆ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ಸರ್ಕಾರ ನೀಡಿತು. ಆದರೆ, ಜನ ಮಾತ್ರ ನಮಗ್ಯಾಕೆ ಬೂಸ್ಟರ್ ಡೋಸ್ ಅಂತಾ ಕೂತಿದ್ದಾರೆ. ಮಹಾಮಾರಿಗೆ ವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿಯಾಗಲು ಮೂರನೇ ಬೂಸ್ಟರ್ ಡೋಸ್ ಬೇಕು ಅಂತಾ ತಜ್ಞರು ಸಲಹೆ ಕೊಡ್ತಿದ್ರೂ ಈವರೆಗೂ ಕೇವಲ ಶೇ.30ರಷ್ಟು ಮಂದಿ ಮಾತ್ರ ಬೂಸ್ಟರ್ ಪಡೆದಿದ್ದಾರೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಯದಲ್ಲಿ ನೀಡಿದ ಉಚಿತ ವ್ಯಾಕ್ಸಿನ್ ಅನ್ನು ಶೇ.10ಕ್ಕಿಂತ ಕಡಿಮೆ ಜನರು ಪಡೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ಗೆದ್ದಿರೋ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್‍ನಂತಹ ಅಮಾಯಕರ ರಕ್ತ ಇದೆ: ಸಿದ್ದರಾಮಯ್ಯ

    18 ರಿಂದ 59 ವರ್ಷವರೆಗಿನವರಿಗೆ ಜುಲೈ 15ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, ಇದುವರೆಗೆ 70 ಸಾವಿರ ಜನ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ 75 ದಿನಗಳವರೆಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತ ನೀಡಲಾಗಿತ್ತು. ಸಾಕಷ್ಟು ಕಡೆಗಳಲ್ಲಿ ಆರೋಗ್ಯ ಇಲಾಖೆಯವರೇ ಮನೆಗಳಿಗೆ ತೆರಳಿ ಲಸಿಕೆ ನೀಡಿದ್ದಾರೆ. ಆದರೆ, ಜನರು ಇದರಿಂದ ತಪ್ಪಿಸಿಕೊಳ್ಳುತ್ತಿದ್ದು, ಮುಂದೆ ಬರುತ್ತಿಲ್ಲ. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ, ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದಕ್ಕೆ ಜನರಲ್ಲಿ ಕಾಯಿಲೆ ಬಗ್ಗೆ ಹಿಂದಿದ್ದ ಭಯ ಈಗಿಲ್ಲದಂತಾಗಿದೆ. ಇದನ್ನೂ ಓದಿ: ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ

    ಕೇಂದ್ರ ಸರ್ಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 18 ವರ್ಷ ಮೇಲ್ಪಟ್ಟರಿಗೆ ಉಚಿತವಾಗಿ ಸೆ.30 ರವರೆಗೆ ಬೂಸ್ಟರ್ ಡೋಸ್ ನೀಡಿತ್ತು. ಜಿಲ್ಲೆಗಳಲ್ಲೂ ಬೇಡಿಕೆಗಿಂತಲೂ ಹೆಚ್ಚು ಲಸಿಕೆಗಳ ದಾಸ್ತಾನು ಇದೆ. ಆದರೆ, ಜನರು ಪಡೆಯುವುದಕ್ಕೆ ಮುಂದೆ ಬರುತ್ತಿಲ್ಲ. ಸಾಮಾಜಿಕ ಮತ್ತು ಕುಟುಂಬದ ಸ್ವಾಸ್ಥ್ಯಕ್ಕಾಗಿ ಬೂಸ್ಟರ್ ಡೋಸ್ ಅತ್ಯಗತ್ಯವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಆದರೆ ಈ ವೇಳೆ ಜನ ಬೂಸ್ಟರ್ ಡೋಸ್ ಪಡೆಯಲು ಹಿಂದೇಟು ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಬೂಸ್ಟರ್ ಡೋಸ್ ಪಡೆಯಬೇಕಾದ್ರೆ ಸರ್ಕಾರ ನಿಗದಿ ಮಾಡಿರುವ ಹಣವನ್ನು ಕಟ್ಟಲೇಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದ ಸಿ.ಟಿ ರವಿ

    ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದ ಸಿ.ಟಿ ರವಿ

    ಚಿಕ್ಕಮಗಳೂರು: 75ನೇ ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದ್ದಾರೆ.

    ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಸ್ವತಃ ತಾನೇ ನಿಂತು ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜಾರೋಹಣ ಮಾಡಿಸಿ ಗಮನ ಸೆಳೆದಿದ್ದಾರೆ.

    ಕಾಫಿನಾಡಲ್ಲಿ ಅದ್ಧೂರಿ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಧ್ವಜಾರೋಹಣದಲ್ಲಿ 2000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ನಂತರ ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಿದರು. ನಂತರ ದೇಶ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾ ಅಭಿಯಾನ – ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳಿಂದ ತಿರಂಗಾ ಅನಾವರಣ

    ಹರ್ ಘರ್ ತಿರಂಗಾ ಅಭಿಯಾನ – ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳಿಂದ ತಿರಂಗಾ ಅನಾವರಣ

    ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ನಾಳೆಗೆ 75 ವರ್ಷ. ಈ ಅಮೃತ ಮಹೋತ್ಸವವನ್ನು ಇಡೀ ದೇಶದಲ್ಲಿ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಇದರ ಭಾಗವಾಗಿ ನಗರದ ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳು ಇಂದು ತಿರಂಗಾ ಅನಾವರಣ ಮಾಡಿದರು.

    ದೇಶಾದ್ಯಂತ ನಿನ್ನೆಯಿಂದಲೇ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹರಿಸೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಹಾಗಾಗಿ ಮೋದಿ ಕರೆಗೆ ಸಿಲಿಕಾನ್ ಸಿಟಿಯಲ್ಲಿ ಭರ್ಜರಿಯಾಗಿ ಸ್ಪಂದನೆ ಸಿಕ್ಕಿದ್ದು, ಮನೆ ಮನೆಗಳ ಮೇಲೆ ರಾಷ್ಟ್ರ ಧ್ಜಜ ರಾರಾಜಿಸುತ್ತಿದೆ. ಇದನ್ನೂ ಓದಿ: ಆಕಾಶ್ ಏರ್ ಹಾರಾಟ ಆರಂಭಿಸಿದ ಒಂದೇ ವಾರದಲ್ಲಿ ಇಹಲೋಕ ತ್ಯಜಿಸಿದ ಜುಂಜುನ್‍ವಾಲ – ಈಡೇರಿತು ಮಹತ್ತರವಾದ ಕನಸು

    ಇಂದು ಬೆಂಗಳೂರಿನ ವಿಜಯನಗರದ ಬಳಿ ಇರುವ ಪ್ರಶಾಂತ್ ನಗರದ ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳು ತಮ್ಮ ಪ್ಲಾಟ್‍ಗಳಲ್ಲಿ ತಿರಂಗವನ್ನು ಹಾರಿಸುವ ಮೂಲಕ ಅಮೃತ ಮಹೋತ್ಸವಕ್ಕೆ ಮತ್ತಷ್ಟು ಮೆರುಗು ತಂದರು. ಹಿರಿಯರ ಜೊತೆ ಪುಟಾಣಿಗಳು ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಹಾಕಿ ಸ್ವಾತಂತ್ರ್ಯ ದಿನಚಾರಣೆಯ ಶುಭಾಶಯಗಳನ್ನು ದೇಶದ ಜನರಿಗೆ ಕೋರಿದರು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಗಡಿಯಲ್ಲಿ ಸಿಹಿ ಹಂಚಿಕೊಂಡು ಶುಭಕೋರಿದ ಭಾರತ-ಪಾಕ್‌ ಸೇನೆ

    Live Tv
    [brid partner=56869869 player=32851 video=960834 autoplay=true]

  • 75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ

    75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ

    ನವದೆಹಲಿ: ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ ಸಜ್ಜಾಗಿದೆ. ಆದರೆ ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನವೇ ದಾಳಿ ನಡೆಸುವುದಾಗಿ ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭಾರೀ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

    ದೆಹಲಿಯ ಮಧ್ಯಭಾಗದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಾದ್ಯಂತ ಅಣುಕು ಪ್ರದರ್ಶನ ಮಾಡಲಾಗಿದ್ದು, ಜನಸಂದಣಿ ಹಾಗೂ ಸೂಕ್ಷ್ಮವಲಯಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದಯವಿಟ್ಟು ರಜೆ ಕೊಡಬೇಡಿ: ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿ ಮನವಿ

    ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕಾಗಿ ದೆಹಲಿಯ ಕೆಂಪುಕೋಟೆ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

    ಈ ಬಾರಿ 75ನೇ ಅಮೃತ ಮಹೋತ್ಸವ ಆಗಿರುವುದರಿಂದ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದೆ. ಕೇಂದ್ರದ ಏಜೆನ್ಸಿ ಹಾಗೂ ಗುಪ್ತಚರ ಇಲಾಖೆಗಳೊಂದಿಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲಾಗುತ್ತದೆ. ಕೆಂಪುಕೋಟೆ ಹಾಗೂ ಸಮೀಪದ ಪ್ರದೇಶಗಳಲ್ಲಿ ನಿಗಾ ಇಡಲು 400 ಕಿಟ್ ಫ್ಲೈಯರ್ಸ್‌ (ಗಾಳಿಪಟ ಹಾರಾಟಗಾರರು)ಗಳನ್ನು ನಿಯೋಜಿಸಲಾಗಿದೆ. ಗಾಳಿಪಟ, ಡ್ರೋನ್ ಹಾಗೂ ಮೊದಲಾದ ಹಾರುವ ವಸ್ತುಗಳು ಕಾಣಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ 50 ಪೆಟ್ರೋಲ್‌ ಬಂಕ್‌ ತೆರೆಯಲಿದೆ ಐಒಸಿ

    ಸಾಂದರ್ಭಿಕ ಚಿತ್ರ

    1 ಸಾವಿರಕ್ಕೂ ಹೈ ಸ್ಪೆಸಿಫಿಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈ ಕ್ಯಾಮೆರಾಗಳು ಕೆಂಪುಕೋಟೆಗೆ ಹೋಗುವ ವಿಐಪಿ ಮಾರ್ಗಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಶ್ರೀನಗರ: ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲೇಬೇಕೆಂಬ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಅಲ್ಲಿನ ಆಡಳಿತವೇ ಜನರನ್ನು ಒತ್ತಾಯಿಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15ರ ನಡುವೆ ದೇಶದ ನಾಗರಿಕರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಪ್ರೇರೇಪಿಸುತ್ತಿದೆ. ಆದರೆ ಕಾಶ್ಮೀರ ಆಡಳಿತ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಜನತೆಗೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?
    ಈ ಕುರಿತು ಪ್ರಚಾರದ ವೀಡಿಯೋ ಒಂದನ್ನು ಹಂಚಿಕೊಂಡಿರುವ ಮುಫ್ತಿ ಅವರು, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ. ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್‌ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಎ ಬೆಂಬಲಿಸಿ ಗದಗದಲ್ಲಿ ಬೃಹತ್ ತಿರಂಗಾ ರ‍್ಯಾಲಿ

    ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

    ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಹರ್ ಘರ್ ತಿರಂಗಾ(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಪ್ರಾರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು, ದೇಶಾದ್ಯಂತ ಬರೋಬ್ಬರಿ 20 ಕೋಟಿ ಮನೆಗಳ ಮೇಲೆ ಧ್ವಜವನ್ನು ಹಾರಿಸಲು ಸಿದ್ಧತೆ ನಡೆಸಲಾಗುತ್ತಿದೆ.

    ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಮುಂದಿನ ತಿಂಗಳು 3 ದಿನಗಳ ಕಾಲ ದೇಶಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ವಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

    ಈ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಾರರೊಂದಿಗೆ ಸಿದ್ಧತೆಗಳು ನಡೆಯುತ್ತಿವೆ.

    ಕಾರ್ಯಕ್ರಮದ ಭಾಗವಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಆಗಸ್ಟ್ 13 ರಿಂದ 15 ರವರೆಗೆ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು. ಈ ಅಭಿಯಾನದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳೂ ಭಾಗಿಯಾಗಲಿವೆ ಎಂದು ಕೇಂದ್ರದ ಅಧಿಕೃತ ವರದಿ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

    2022ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜುಲೈ 22 ರಿಂದ ಎಲ್ಲಾ ರಾಜ್ಯ ಸರ್ಕಾರದ ವೆಬ್‌ಸೈಟ್ ಮುಖಪುಟಗಳಲ್ಲಿ ರಾಷ್ಟ್ರಧ್ವಜ ಕಾಣಿಸಿಕೊಳ್ಳಬೇಕು. ನಾಗರಿಕರೂ ತಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ತ್ರಿವರ್ಣ ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

    ತ್ರಿವರ್ಣ ಧ್ವಜದೊಂದಿಗಿನ ಫೋಟೋಗಳನ್ನು ತೆಗೆದುಕೊಂಡು ಸಂಸ್ಕೃತಿ ಸಚಿವಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಸ್ವಾತಂತ್ರ್ಯದ ಅಮೃತ ಮೋತ್ಸವವನ್ನು ಹೊಸ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ

    Amith

    ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ ದೇಶಭಕ್ತಿಯ ಮನೋಭಾವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು. ಜನರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮೂಲಕ ಅಭಿಯಾನವನ್ನು ಯಶಸ್ಸಿನತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

    ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

    ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆತ್ಮನಿರ್ಭರ್ ಮಹತ್ವವನ್ನು ಸಾರಲು ವಿಶೇಷವಾಗಿ ಅಲಂಕರಿಸಿದ ಮೆಟ್ರೋವನ್ನು, ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಗುಸಿಂಗ್ ಯಮುನಾ ಬ್ಯಾಂಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭಿಸಿದರು.

    ಈ ವಿಶೇಷ ರೈಲು ಆಜಾದಿ ಕಾ ಅಮೃತ ಮಹೋತ್ಸವದ ಸ್ಮರಣಾರ್ಥ ಪ್ರಾರಂಭಿಸಲಾಗಿದ್ದು, ಗಣರಾಜ್ಯೋತ್ಸವದ ನಿಮಿತ್ತ ಸಾಂಕೇತಿಕವಾಗಿ ಈ ರೈಲನ್ನು ಆರಂಭಿಸಲಾಗಿದೆ. ಇದು ಜನರ ಸೇವೆಯಲ್ಲಿ ಮುಂದುವರಿಯುತ್ತದೆ.

    ಮೆಟ್ರೋದ ವಿಶೇಷತೆ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕೂಡಿದ ಮೆಟ್ರೋದ ಹೊರಭಾಗವೂ ನೋಡಲು ಆಕರ್ಷಣೀಯವಾಗಿದೆ. ಈ ಮೇಟ್ರೋ ಒಟ್ಟಾರೆ 8 ಬೋಗಿಗಳನ್ನು ಹೊಂದಿದೆ. ಈ ಮೆಟ್ರೋದ ಹೊರಭಾಗದಲ್ಲಿ ಭಾರತೀಯರು, ಇಲ್ಲಿನ ಜನರ ಸಂಸ್ಕೃತಿ ಮತ್ತು ಕಳೆದ 75 ವರ್ಷಗಳಲ್ಲಿನ ಸಾಧನೆಗಳ ಇತಿಹಾಸವನ್ನು ಚಿತ್ರಿಸುವ ಮೂಲಕ ಆತ್ಮನಿರ್ಭರ್ ಭಾರತದ ಹೊಸ ಚೈತನ್ಯವನ್ನು ಮೂಡಿಸಿದ್ದಾರೆ. ಕೊರೊನಾ ಕುರಿತು ಅರಿವು ಮೂಡಿಸುವ ಪ್ರಯತ್ನವನ್ನು ಮಾಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ಡಿಎಂಆರ್‌ಸಿಯು ಕಳೆದ ವರ್ಷದಿಂದ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ 75ನೇ ಭಾರತದ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥವಾಗಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಿದ್ದು, ಅದರಲ್ಲಿ ಇದು ಒಂದಾಗಿದೆ. ದೆಹಲಿ ಪೊಲೀಸರ ಪ್ರಕಣೆಯ ಪ್ರಕಾರ ಭದ್ರತಾ ವ್ಯವಸ್ಥೆಗಳ ಭಾಗವಾಗಿ ಗಣರಾಜ್ಯೋತ್ಸವದಂದು ದೆಹಲಿ ಮೆಟ್ರೋದ ಸೇವೆಗಳನ್ನು ನಿಲ್ಲಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಬದಲಿಗೆ ಅಂಬೇಡ್ಕರ್‌, ಭಗತ್‌ ಸಿಂಗ್‌ರ ಫೋಟೋ ಅಳವಡಿಕೆ: ಕೇಜ್ರಿವಾಲ್‌

  • ವಿದುರಾಶ್ವತ್ಥದಲ್ಲಿ ಮೊಳಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಹಳೆ

    ವಿದುರಾಶ್ವತ್ಥದಲ್ಲಿ ಮೊಳಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಹಳೆ

    ಚಿಕ್ಕಬಳ್ಳಾಪುರ: ದೇಶಕ್ಕೆ ಸ್ವಾತಂತ್ರ್ಯ ಬಂದು 2022 ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ, ಸ್ವಾತಂತ್ರ್ಯ ಸಂಗ್ರಾಮದ ಸ್ಥಳಗಳಲ್ಲಿ, 75 ವಾರಗಳ ವರೆಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಿ.ಆರ್.ವಾಲಾ ಜಲಿಯನ್ ವಾಲಾಬಾಗ್ ಖ್ಯಾತಿಯ ವಿದುರಾಶ್ವತ್ಥಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಇಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರಾಜ್ಯದಲ್ಲಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥಕ್ಕೆ ಸಿಎಂ ಹಾಗೂ ರಾಜ್ಯಪಾಲರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಹೋರಾಟಗಾರರು, ದೇಶ ಭಕ್ತಿಯ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ದೇಶದ 75 ಸ್ವಾತಂತ್ರ್ಯ ಸಂಗ್ರಾಮ ಸ್ಥಳಗಳಲ್ಲಿ ಏಕಕಾಲಕ್ಕೆ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲು ಚಾಲನೆ ನೀಡಿದೆ.

    ವಿದುರಾಶ್ವತ್ಥಕ್ಕೆ ಆಗಮಿಸಿ ಹುತಾತ್ಮ ಸ್ವಾತಂತ್ರ್ಯ ಸೇನಾನಿಗಳ ಸ್ಮಾರಕ ಸ್ಥೂಪಗಳಿಗೆ ಪುಷ್ಪನಮನ ಸಲ್ಲಿಸಿ, ಗೌರವ ವಂದನೆ ಸಲ್ಲಿಸಿದರು. ಇದೇ ವೇಳೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿಯವರ ಆಶಯದಂತೆ ಶಾಲಾಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

    ರಾಜ್ಯಪಾಲ ವಿ.ಆರ್.ವಾಲಾ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನ, ಶ್ರಮದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಈಗ ನಮ್ಮ ಸೈನಿಕರು ಹಿಮ ಪ್ರದೇಶದಲ್ಲಿ ದೇಶದ ರಕ್ಷಣೆ ಮಾಡುತ್ತಿದ್ದಾರೆ. ನಾವು ಎಸಿ ರೂಮ್ ಗಳಲ್ಲಿ ಹಾಯಾಗಿ ಕೆಲಸ ಮಾಡುತ್ತಿದ್ದೇವೆ. ಇಂದಿನ ಯುವ ಸಮುದಾಯಕ್ಕೆ, ಸಾಕಷ್ಟು ಅವಕಾಶಗಳಿವೆ ದೇಶ ಸೇವೆಗಾಗಿ ಜೀವನ ಮುಡುಪಾಗಿಡಬೇಕೆಂದು ಕರೆ ನೀಡಿದರು.

    ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರು ವಿಧುರಾಶ್ವತ್ಥಕ್ಕೆ ಆಗಮಿಸುತ್ತಿದ್ದಂತೆ ಆಶ್ವತ್ಥ ನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದಿನಿಂದ ಮುಂದಿನ 75 ವಾರಗಳ ಕಾಲ ದೇಶದ ವಿವಿಧ ಸ್ಥಳಗಳಲ್ಲಿ ವಾರಕ್ಕೊಮ್ಮೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ.