Tag: Azan

  • ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಯನ್ನು ಮಸೀದಿಯ (Mosque) ಒಳಗಡೆಯೇ ಉಗ್ರರು (Terrorist) ಹತ್ಯೆ ಮಾಡಿದ್ದಾರೆ.

    ಮೊಹಮ್ಮದ್‌ ಶಾಫಿ ಉಗ್ರರ ಗುಂಡೇಟಿಗೆ ಬಲಿಯಾದ ನಿವೃತ್ತ ಪೊಲೀಸ್‌ ಅಧಿಕಾರಿ. ಮಸೀದಿಯ ಒಳಗಡೆ ಪ್ರಾರ್ಥನೆ ಮಾಡುತ್ತಿರುವಾಗಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

    ಪೊಲೀಸರು ಈಗ ಆ ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಪತ್ತೆಗೆ ಮುಂದಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಸೈನಿಕರ ಮೇಲೆ ಕಣಿವೆ ರಾಜ್ಯದಲ್ಲಿ ದಾಳಿಗಳು ಹೆಚ್ಚಾಗುತ್ತಿದೆ.   ಇದನ್ನೂ ಓದಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

    ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದರು.

     

  • ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ

    ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ

    ನವದೆಹಲಿ: ಮಸೀದಿಗಳಲ್ಲಿ (Mosque) ಧ್ವನಿವರ್ಧಕಗಳ (Speaker) ಮೂಲಕ ಅಜಾನ್ ಕೂಗುವುದರಿಂದ ಶಬ್ದ ಮಾಲಿನ್ಯ ಆಗುವುದಿಲ್ಲ ಎಂದು ಗುಜುರಾತ್ ಹೈಕೋರ್ಟ್ (Gujarat High Court) ಹೇಳಿದೆ. ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿತು.

    ವೈದ್ಯ ಧರ್ಮೇಂದ್ರ ಪ್ರಜಾಪತಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ (Sunita Agarwal) ಮತ್ತು ನ್ಯಾಯಮೂರ್ತಿ ಅನಿರುದ್ಧಮಯೀ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಈ ರೀತಿಯ ಪಿಐಎಲ್ (PIL) ಸಲ್ಲಿಕೆ, ಧ್ವನಿವರ್ಧಕಗಳ ಮೂಲಕ ಕೂಗುವುದರಿಂದ ಉಂಟಾಗುವ ಶಬ್ದದ ಪ್ರಮಾಣ ಎಷ್ಟು? ಇದರಿಂದ ಶಬ್ದ ಮಾಲಿನ್ಯ ಹೇಗೆ ಸಾಧ್ಯ ಎಂದು ಪ್ರಶ್ನಿಸಿತು. ಇದನ್ನೂ ಓದಿ: 25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌

    ನೀವು ಅಡಚಣೆ ಉಂಟುಮಾಡದ ಸಂಗೀತವನ್ನು ನುಡಿಸುತ್ತೀರಾ? ಎಂದು ಅರ್ಜಿದಾರರ ಪರ ವಕೀಲರನ್ನು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರಾದ ಡಿಜಿ ಶುಕ್ಲಾ ಸಂಗೀತವನ್ನು ಮನೆಯಲ್ಲಿ ನುಡಿಸುತ್ತಾರೆಯೇ ಹೊರತು ಮಸೀದಿಯಂತಹ ಸಾರ್ವಜನಿಕ ಸ್ಥಳದಲ್ಲಿ ಅಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಇಡೀ ದೇಶ ಪ್ರಾರ್ಥಿಸುತ್ತಿದ್ರೆ ಗಾಂಧಿ ಕುಟುಂಬ ಮಾತ್ರ ಡ್ಯಾನ್ಸ್ ಮಾಡ್ತಿತ್ತು: ಅಸ್ಸಾಂ ಸಿಎಂ ಕಿಡಿ

    ನಾವು ಮನೆಗಳಲ್ಲಿ ನುಡಿಸುವ ಸಂಗೀತದ ಬಗ್ಗೆ ಮಾತನಾಡುತ್ತಿಲ್ಲ. ನೀವು ದೇವಸ್ಥಾನದಲ್ಲಿ ಭಜನೆ ಅಥವಾ ಆರತಿಗಾಗಿ ಜೋರಾಗಿ ಸಂಗೀತವನ್ನು ನುಡಿಸುತ್ತೀರಿ. ಅದು ಜನರಿಗೆ ತೊಂದರೆ ಉಂಟುಮಾಡುವುದಿಲ್ಲವೇ? ಆಜಾನ್ ಹೇಗೆ ತೊಂದರೆ ಉಂಟುಮಾಡುತ್ತದೆ? ಇದು ಇಡೀ ದಿನದಲ್ಲಿ ಹತ್ತು ನಿಮಿಷಗಳ ಕಾಲ ಕೂಗಬಹುದು. ಇದರಿಂದ ಶಬ್ದ ಮಾಲಿನ್ಯ ಹೇಗೆ ಸಾಧ್ಯ ಎಂದು ನ್ಯಾಯಾಧೀಶರು ಮರು ಪ್ರಶ್ನೆ ಹಾಕಿದರು. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಯಾಯ್ತು.. ದೇಗುಲಕ್ಕೆ ತೆರಳಿ ದೇವರಿಗೆ ಧನ್ಯವಾದ ಹೇಳ್ತೀನಿ: ಸುರಂಗ ತಜ್ಞ ಅರ್ನಾಲ್ಡ್‌

    ಆಜಾನ್‌ನಿಂದ ಶಬ್ದದ ಡೆಸಿಬಲ್ ಎಷ್ಟು? ಹಬ್ಬಗಳಲ್ಲಿ ಬಳಸುವ ಡಿಜೆ ಶಬ್ದದ ಡೆಸಿಬಲ್ ಎಷ್ಟು ಎಂದು ಕೇಳಿದ ಸಿಜೆ ಅಗರ್ವಾಲ್ ಉತ್ತರ ನೀಡಿದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು. ಆಜಾನ್ ನಂಬಿಕೆ. ಈ ಅಭ್ಯಾಸವು ವರ್ಷಗಳಿಂದ ಒಟ್ಟಿಗೆ ನಡೆಯುತ್ತಿದೆ. ಇಂತಹ ಅರ್ಜಿಗಳನ್ನು ನಾವು ಮಾನ್ಯ ಮಾಡುವುದಿಲ್ಲ ಎಂದು ತಿಳಿಸಿದರು. ಅದಾಗ್ಯೂ ವಾದ ಮುಂದುವರಿಸಿದ ವಕೀಲರು ಆಜಾನ್ ದೇವಾಲಯಗಳಲ್ಲಿ ಆರತಿಗಿಂತ ಭಿನ್ನವಾಗಿದೆ. ಇದು ದಿನಕ್ಕೆ ಐದು ಬಾರಿ ನಡೆಯುತ್ತದೆ ಎಂದು ವಕೀಲರು ಒತ್ತಿ ಹೇಳಿದರು. ಇದನ್ನೂ ಓದಿ: ನಾವು ಆರಾಮಾಗಿದ್ದು, ಈಗ ದೀಪಾವಳಿ ಆಚರಿಸುತ್ತೇವೆ: ಸಂತಸ ಹಂಚಿಕೊಂಡ ಕಾರ್ಮಿಕರು

    ಇದಕ್ಕೆ ಗರಂ ಆದ ಸಿಜೆ ಅಗರ್ವಾಲ್, ಹಾಗಾದರೆ ನಿಮ್ಮ ದೇವಸ್ಥಾನಗಳಲ್ಲಿ ಮುಂಜಾನೆ ಪ್ರಾರಂಭವಾಗುವ ಆ ಡೋಲು ಮತ್ತು ಸಂಗೀತದೊಂದಿಗೆ ಬೆಳಗಿನ ಆರತಿ ಇದು ಯಾರಿಗೂ ಯಾವುದೇ ಶಬ್ದ ಅಥವಾ ಗದ್ದಲವನ್ನು ಉಂಟುಮಾಡುವುದಿಲ್ಲವೇ? ಇದು ಪ್ರತಿ ನಿತ್ಯ ನಡೆಯುತ್ತದೆ. ಇದು ಶಬ್ದ ಮಾಲಿನ್ಯ ಮಾಡುವುದಿಲ್ಲ ಎಂದು ನೀವು ಹೇಳಬಹುದೇ ಎಂದು ಒತ್ತಿ ಕೇಳಿದರು. ಬಳಿಕ ಆಜಾನ್ ದಿನವಿಡೀ ಕೇವಲ 10 ನಿಮಿಷಗಳ ಕಾಲ ನಡೆಯುತ್ತದೆ ಮತ್ತು ಯಾವುದೇ ಮಾಲಿನ್ಯವನ್ನು ಉಂಟುಮಾಡುವುದಿಲ್ಲ ಎಂದು ಪೀಠವು ಪುನರುಚ್ಚರಿಸಿತು. ಇದನ್ನೂ ಓದಿ: ಧೈರ್ಯ ಮೆಚ್ಚುವಂತದ್ದು: ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರ ಜೊತೆ ಮೋದಿ ಮಾತುಕತೆ

    ಶಬ್ದ ಮಾಲಿನ್ಯವು ಡೆಸಿಬಲ್‌ಗಳ ಪರಿಭಾಷೆಯಲ್ಲಿ ಅಳತೆಯಾಗಿದೆ. 10 ನಿಮಿಷಗಳಲ್ಲಿ ಎಷ್ಟು ಡೆಸಿಬಲ್‌ಗಳು ಏರುತ್ತದೆ ಮತ್ತು ಅದು ಎಷ್ಟು ಶಬ್ದ ಮಾಲಿನ್ಯವನ್ನು ಉಂಟುಮಾಡುತ್ತದೆ? ಆಜಾನ್ ಸಮಯದಲ್ಲಿ ಡೆಸಿಬಲ್‌ಗಳನ್ನು ಅಳೆಯುವ ಈ ವೈಜ್ಞಾನಿಕ ಅಂಶದಲ್ಲಿ ನೀವು ವಾದಿಸಿ ನಂತರ ಮಾಲಿನ್ಯ ಹೇಗಾಗುತ್ತದೆ ಎಂದು ಹೇಳಬೇಕು ಆದರೆ ನೀವು ಈ ಅಂಶದ ಬಗ್ಗೆ ವಾದ ಮಾಡುತ್ತಿಲ್ಲ ಎಂದು ಪೀಠವು ಹೇಳಿತು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

    ಅರ್ಜಿದಾರರು ಯಾವುದೇ ನಿರ್ದಿಷ್ಟ ಪ್ರದೇಶದಲ್ಲಿ ಆಜಾನ್ (Azan) ಸಮಯದಲ್ಲಿ ಡೆಸಿಬಲ್ ಮಟ್ಟವನ್ನು ಅಳೆಯದೇ ಅಜಾನ್ ನಡೆಯುವ ಪ್ರದೇಶಗಳಲ್ಲಿ ವಿವಿಧ ಸಮುದಾಯಗಳು ಮತ್ತು ಧರ್ಮದ ಜನರು ವಾಸಿಸುತ್ತಿದ್ದಾರೆ. ಆದ್ದರಿಂದ ತೊಂದರೆಯಾಗಲಿದೆ ಮತ್ತು ಆರೋಗ್ಯದ ಅಪಾಯವನ್ನು ಉಂಟುಮಾಡುತ್ತದೆ ಎನ್ನುವ ಏಕೈಕ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಇದು ಸಂಪೂರ್ಣವಾಗಿ ತಪ್ಪು ಕಲ್ಪನೆಯ ಪಿಐಎಲ್ ಆಗಿದೆ ಎಂದು ಪೀಠ ಹೇಳಿತು.  ಇದನ್ನೂ ಓದಿ: ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ – ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ ನಮಸ್ಕರಿಸುತ್ತೇನೆ: ಮೋದಿ

  • ಡಿಸಿ ಕಚೇರಿ ಎದುರು ಆಜಾನ್ ಕೂಗಿದ ಪ್ರಕರಣ; ಗೋಮೂತ್ರ ಹಾಕಿ ಆವರಣ ಶುದ್ಧೀಕರಿಸಿದ ಹಿಂದೂಪರ ಕಾರ್ಯಕರ್ತರು

    ಡಿಸಿ ಕಚೇರಿ ಎದುರು ಆಜಾನ್ ಕೂಗಿದ ಪ್ರಕರಣ; ಗೋಮೂತ್ರ ಹಾಕಿ ಆವರಣ ಶುದ್ಧೀಕರಿಸಿದ ಹಿಂದೂಪರ ಕಾರ್ಯಕರ್ತರು

    ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಬಳಿ ಮುಸ್ಲಿಂ ಯುವಕನೋರ್ವ ಆಜಾನ್ (Azan) ಕೂಗಿದ್ದ ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳ (Bajrang Dal) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಆಜಾನ್ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದರು.

    ಶುಕ್ರವಾರ ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಆಜಾನ್ ಕೂಗಿರುವುದು ಖಂಡನೀಯ. ಆಜಾನ್ ಕೂಗಿದ ಯುವಕನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಇದೇ ವೇಳೆ ಕಾರ್ಯಕರ್ತರು ಡಿಸಿ ಕಚೇರಿಗೆ ಗೋಮೂತ್ರ ಸಿಂಪಡಿಸಲು ಮುಂದಾದರು. ಆದರೆ ಇದಕ್ಕೆ ಪೊಲೀಸರು ತಡೆಯೊಡ್ಡಿದರು. ಪೊಲೀಸರ ವಿರೋಧದ ನಡುವೆಯೂ ಕಾರ್ಯಕರ್ತರು ಗೋಮೂತ್ರ ಹಾಕಿ ಶುದ್ಧೀಕರಿಸಿದರು. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

    ಮುಸ್ಲಿಂ ಸಂಘಟನೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಆಜಾನ್ ಕೂಗಿದ ಯುವಕನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಮ್ಮ ದೇಶದ ಸಂವಿಧಾನಕ್ಕೆ ಮತ್ತು ಕಾನೂನಿಗೆ ಬೆಲೆ, ಗೌರವ ನೀಡದ ದೇಶ ವಿರೋಧಿಗಳನ್ನ ಜಿಲ್ಲಾಡಳಿತ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

    ಜಿಲ್ಲಾಧಿಕಾರಿ ಕಚೇರಿ ಬಳಿ ಯುವಕನೊಬ್ಬ ಆಜಾನ್‌ ಕೂಗಿದ್ದ. ಸರ್ಕಾರಿ ಕಚೇರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಕೇಳಿಬಂದಿತ್ತು. ಘಟನೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

  • ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

    ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

    ಶಿವಮೊಗ್ಗ: ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಮೇಲೆ ಆಜಾನ್ (Azan) ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ.

    ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ ನಿವಾಸಿ ಮೌಸಿನ್ (27) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಪಿಎಫ್‍ಐ ಸದಸ್ಯನಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದ.

    ಘಟನೆಯೇನು? : ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೌಸಿನ್ ಶಿವಮೊಗ್ಗದ ಜಿಲ್ಲಾಧಿಕಾರಿಯ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಈ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದರು. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೌಸಿನ್‍ನನ್ನು ಜಯನಗರ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಸಿಆರ್‌ಪಿಸಿ 107 ಅಡಿ ಪ್ರಕರಣ ದಾಖಲಾಸಿದ್ದಾರೆ. ಅದಾದ ಬಳಿಕ ಠಾಣಾ ಜಾಮೀನಿನ ಮೇಲೆ ಮೌಸಿನ್‍ನನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್ – ತಾಯಿ, ಇಬ್ಬರು ಮಕ್ಕಳು ಸಾವು

  • ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

    ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಯುವಕನೊಬ್ಬ ಆಜಾನ್ ಕೂಗಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ (KS Eshwarappa) ಅವಹೇಳನ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಯುವಕನೊಬ್ಬ ಆಜಾನ್ (Azan) ಕೂಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕ ಆಜಾನ್ ಕೂಗುತ್ತಿದ್ದ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿ, ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮುಸ್ಲಿಂ ಯುವಕನೊಬ್ಬ ಉದ್ದಟತನ ಪ್ರದರ್ಶಿಸಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಯುವಕನೊಬ್ಬ ಆಜಾನ್ ಕೂಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ

    ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ನಡೆಸಿದ್ದಾರೆ. ಈ ವೇಳೆ ಮತ್ತೋರ್ವ ಯುವಕ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ? ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲಾಹ ಬಗ್ಗೆ ಮಾತನಾಡಿದ್ದು ಎಂದು ಕಿಡಿಕಾರಿದ್ದಾನೆ.

    ಘಟನೆಯ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದಾರೆ. ನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

  • ಆಜಾನ್ ಹೇಳಿಕೆ ವಿರುದ್ಧ ಎಷ್ಟೇ ಪ್ರತಿರೋಧ ಬಂದ್ರೂ ನಾನು ಜನ ಸಾಮಾನ್ಯನ ನೋವು ಹೇಳೋನೆ: ಈಶ್ವರಪ್ಪ

    ಆಜಾನ್ ಹೇಳಿಕೆ ವಿರುದ್ಧ ಎಷ್ಟೇ ಪ್ರತಿರೋಧ ಬಂದ್ರೂ ನಾನು ಜನ ಸಾಮಾನ್ಯನ ನೋವು ಹೇಳೋನೆ: ಈಶ್ವರಪ್ಪ

    ಶಿವಮೊಗ್ಗ: ಆಜಾನ್ (Azan) ಹೇಳಿಕೆ ಕುರಿತು ಎಷ್ಟೇ ವಿರೋಧ ಎದುರಾದರೂ ನಾನು ಜನ ಸಾಮಾನ್ಯನ ನೋವನ್ನು ಹೇಳುವವನೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನ್ನ ವಿರುದ್ಧ ಯಾರು ಎಷ್ಟೇ ಪ್ರತಿಭಟನೆ ನಡೆಸಿದರೂ ನಾನು ಅದನ್ನು ಎದುರಿಸಲು ಸಿದ್ಧನಿದ್ದೇನೆ ಎಂದರು.

    ನಾನು ಈ ರೀತಿ ಪ್ರತಿಭಟನೆ ಮಾಡುವುದನ್ನು ಯಾವುದನ್ನು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ. ಜನಸಾಮಾನ್ಯರ ಮನಸ್ಸಿನಲ್ಲಿ ಏನಿದೆ ಅದನ್ನು ನಾನು ಬಾಯಿಬಿಟ್ಟು ಹೇಳುತ್ತೇನೆ. ಅನೇಕರಿಗೆ ಅದನ್ನು ಬಾಯಿ ಬಿಟ್ಟು ಹೇಳುವುದಕ್ಕೆ ಅಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾಷಣ ಮಧ್ಯೆ ಆಝಾನ್‍- ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು ಅಂದ್ರು ಈಶ್ವರಪ್ಪ  

    ಆಜಾನ್ ಕೂಗುವುದರಿಂದ ವಿದ್ಯಾರ್ಥಿಗಳಿಗೆ ಎಷ್ಟು ತೊಂದರೆಯಾಗುತ್ತಿದೆ ಎಂದು ಅವರ ಪೋಷಕರಿಗೆ ಗೊತ್ತು. ವಿದ್ಯಾರ್ಥಿಗಳಿಗೂ ಸಹ ಗೊತ್ತು. ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಎಷ್ಟು ತೊಂದರೆಯಾಗಿದೆ ಎಂದು ಅವರಿಗೆ ಗೊತ್ತು. ಇರುವುದನ್ನ ಬಹಿರಂಗವಾಗಿ ಹೇಳುವುದಕ್ಕೆ ನಾನು ಹಿಂದೆ ಮುಂದೆ ನೋಡಲ್ಲ. ಬೇರೆಯವರಿಗೆ ತೊಂದರೆಯಾಗದಂತೆ ಸೌಂಡ್ ಇಡಲು ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ. ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ಸಂಪೂರ್ಣ ನಿಷೇಧ ಆಗಿದೆ. ಇದು ಇದ್ದು ಕೂಡ ಇವರು ಹೀಗೆ ಮಾಡ್ತಾರೆ. ಪ್ರತಿಭಟನೆ ಮಾಡ್ತಾರೆ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.

    ಇತ್ತೀಚೆಗೆ ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ (BJP) ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ದರು. ಮಾಜಿ ಸಚಿವರ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.

  • ಭಾಷಣ ಮಧ್ಯೆ ಆಝಾನ್‍- ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು ಅಂದ್ರು ಈಶ್ವರಪ್ಪ  

    ಭಾಷಣ ಮಧ್ಯೆ ಆಝಾನ್‍- ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು ಅಂದ್ರು ಈಶ್ವರಪ್ಪ  

    ಮಂಗಳೂರು: ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ (K.S Eshwarappa) ಸಿಡಿಮಿಡಿಯಾಗಿದ್ದಾರೆ.

    ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ (Azan) ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು.

    ಸುಪ್ರೀಂ ಕೋರ್ಟ್ (Supremecourt) ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಹ್ವಾನ ನೀಡಿಲ್ಲ ಯಾಕೆ: ಮೋದಿ ವಿರುದ್ಧ ಸುರೇಶ್‌ ಕಿಡಿ

    ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ

    ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ

    ಉಡುಪಿ: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ(Azan) ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ(Hindu) ಆಕ್ಷೇಪ ವ್ಯಕ್ತವಾಗಿದ್ದು ಆಡಳಿತ ಮಂಡಳಿ ಕ್ಷಮೆ ಕೋರಿದೆ.

    ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ(Kundapura) ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ(Sports) ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು. ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು. ಇದನ್ನೂ ಓದಿ: ಮಕ್ಕಳನ್ನು 1ನೇ ಕ್ಲಾಸಿಗೆ ಸೇರಿಸಲು 6 ವರ್ಷ ಕಡ್ಡಾಯ – ಸರ್ಕಾರದಿಂದ ಅಧಿಕೃತ ಆದೇಶ

    ಆಜಾನ್‌ಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಆಗುತ್ತಿದೆ. ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

    ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್‌ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್‌ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಬೆಂಗಳೂರು: ರಾಜ್ಯದ ಮಸೀದಿಗಳಲ್ಲಿ ಆಜಾನ್ ಕೂಗಲು ಧ್ವನಿವರ್ಧಕ ಬಳಸುವುದನ್ನು ನಿಲ್ಲಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

    ಆಜಾನ್‌ನಲ್ಲಿ ಇತರ ಧಾರ್ಮಿಕ ಸಮುದಾಯಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪದಗಳಿವೆ ಎಂಬ ಅರ್ಜಿದಾರರ ವಾದವನ್ನು ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠ ತಿರಸ್ಕರಿಸಿತು. ಇದನ್ನೂ ಓದಿ: ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?

    MOSQUE

    ಭಾರತದ ಸಂವಿಧಾನದ 25 ಮತ್ತು 26ನೇ ವಿಧಿಗಳು ಭಾರತೀಯ ನಾಗರಿಕತೆಯ ವಿಶಿಷ್ಟವಾದ ಧಾರ್ಮಿಕ ಸಹಿಷ್ಣುತೆಯ ತತ್ವಗಳನ್ನು ಒಳಗೊಂಡಿವೆ ಎಂದು ಪೀಠವು ಉಲ್ಲೇಖಿಸಿದೆ.

    ಆಜಾನ್‌ನಲ್ಲಿ ಇತರ ಧಾರ್ಮಿಕ ಸಮುದಾಯಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದಗಳಿವೆ. ಆದ್ದರಿಂದ ಮಸೀದಿಗಳಲ್ಲಿ ಆಜಾನ್ ಕೂಗುವಾಗ ಧ್ವನಿವರ್ಧಕಗಳನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಆರ್.ಚಂದ್ರಶೇಖರ್ ಎಂಬವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಇದನ್ನೂ ಓದಿ: 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    mosque-loudspeakers
    ಸಾಂದರ್ಭಿಕ ಚಿತ್ರ

    ಸಂವಿಧಾನದ 25 (1)ನೇ ವಿಧಿಯು ಯಾವುದೇ ವ್ಯಕ್ತಿ ತಮ್ಮ ಸ್ವಂತ ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸಲು, ಆಚರಣೆ ಮತ್ತು ಪ್ರಚಾರ ಮಾಡಲು ಮೂಲಭೂತ ಹಕ್ಕನ್ನು ನೀಡುತ್ತದೆ ಎಂದು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಿದೆ.

    ಮೇಲೆ ಹೇಳಿದ ಹಕ್ಕು, ಸಂಪೂರ್ಣ ಹಕ್ಕಲ್ಲ. ಆದರೆ ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಇತರ ನಿಬಂಧನೆಗಳ ಆಧಾರದ ಮೇಲೆ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ನ್ಯಾಯಾಲಯವು ಹೇಳಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಿ.ಟಿ ರವಿ ದಂಪತಿ

    ನಿಸ್ಸಂದೇಹವಾಗಿ ಅರ್ಜಿದಾರರು ಮತ್ತು ಇತರ ನಂಬಿಕೆಗಳ ಭಕ್ತರು ತಮ್ಮ ಧರ್ಮವನ್ನು ಆಚರಿಸುವ ಹಕ್ಕನ್ನು ಹೊಂದಿದ್ದಾರೆ. ಆಜಾನ್ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸುವ ಕರೆಯಾಗಿದೆ. ರಿಟ್ ಅರ್ಜಿಯ ಪ್ಯಾರಾ 6 (ಬಿ) ನಲ್ಲಿ ಅರ್ಜಿದಾರರು ಸ್ವತಃ, ಆಜಾನ್ ಇಸ್ಲಾಂ ಧರ್ಮಕ್ಕೆ ಸೇರಿದ ವ್ಯಕ್ತಿಗಳ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ. ಆಜಾನ್‌ನಲ್ಲಿ ಇತರ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಪದಗಳಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ: ಡಿಕೆಶಿ

    ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ: ಡಿಕೆಶಿ

    ಬೆಂಗಳೂರು: ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು. ಇದನ್ನೂ ಓದಿ: ನಿದ್ರೆ ಮಾಡುತ್ತಿರುವಾಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ 

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.

    ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.

    ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ:  ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ 

    ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಅಂದ ಕಟೀಲ್, ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.