Tag: Azim Premji

  • ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಬೆಂಗಳೂರು: ಅಲ್ವಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರು ನಗರ (Bengaluru City) ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ (Azim Premji) ಫೌಂಡೇಶನ್ ಆಯ್ಕೆ ಮಾಡಿರುವ ಮದರಾಸಗಳಲ್ಲಿ ಔಪಾಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 10 ರಂದು ಸಾಮಾನ್ಯ ಪ್ರವೇಶ ಪರೀಕ್ಷಾ ನಡೆಯಲಿದ್ದು, ಅಕ್ಟೋಬರ್ 13 ರಂದು ಫಲಿತಾಂಶ ಬಿಡುಗಡೆಯಾಗಿ ಅಕ್ಟೋಬರ್ 15 ರಂದು ಬೋಧನಾ ಪ್ರತಾಕ್ಷಿಕೆ ನಡೆಯಲಿದೆ. ಇದನ್ನೂ ಓದಿ:  ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

     

    ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಯಲದ ಅಧಿಕೃತ ಜಾಲತಾಣ www.dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ:  ಚೆನ್ನೈನಲ್ಲಿ ಕಮಾನು ಕುಸಿದು 9 ಮಂದಿ ಸಾವು – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯೋಂ ಬ್ಲಾಕ್, ವಿ.ವಿ. ಗೋಪುರ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲ್ಲ-  ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

    ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲ್ಲ- ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

    ಬೆಂಗಳೂರು: ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಿಎಂ ಸಿದ್ದರಾಮಯ್ಯನವರ (CM Siddaramaiah) ಮನವಿಯನ್ನು ವಿಪ್ರೋ (Wipro) ಮುಖ್ಯಸ್ಥ ಅಜೀಂ ಪ್ರೇಮ್‌ಜಿ (Azim Premji) ತಿರಸ್ಕರಿಸಿದ್ದಾರೆ.

    ಇಬ್ಲೂರು ಜಂಕ್ಷನ್‌ನ ಔಟರ್ ರಿಂಗ್ ರೋಡ್ ಟ್ರಾಫಿಕ್ ಸಮಸ್ಯೆಗೆ (Traffic Problem) ಪರಿಹಾರ ಕಂಡುಕೊಳ್ಳಲು ವಿಪ್ರೋ ಕ್ಯಾಂಪಸ್‌ನಲ್ಲಿ ಸೀಮಿತ ವಾಹನಗಳ ಸಂಚಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದರು

    ಈ ಪತ್ರಕ್ಕೆ ಉತ್ತರಿಸಿ ಪತ್ರ ಬರೆದ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ, ಸರ್ಜಾಪುರ ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ದೀರ್ಘಕಾಲಿಕ ಪರಿಹಾರ ಅಲ್ಲ. ಸರ್ಜಾಪುರದ ವಿಪ್ರೋ ಕ್ಯಾಂಪಸ್ ಜಾಗತಿಕ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವ ವಿಶೇಷ ಆರ್ಥಿಕ ವಲಯ. ನಮ್ಮ ಒಪ್ಪಂದದ ನಿಯಮಗಳು ಆಡಳಿತ, ಪ್ರವೇಶ ನಿಯಂತ್ರಣ ಮಾನದಂಡಗಳು ಕಡ್ಡಾಯಗೊಳಿಸಿದೆ. ಖಾಸಗಿ ಆಸ್ತಿಯ ಮೂಲಕ ಸಾರ್ವಜನಿಕ ವಾಹನ ಸಂಚಾರವು ಸುಸ್ಥಿರ, ದೀರ್ಘಕಾಲೀನ ಪರಿಹಾರವಲ್ಲ ಎಂದು ಅಜೀಂ ಪ್ರೇಮ್‌ಜೀ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:  ಬುರುಡೆ ಗ್ಯಾಂಗ್‌ ಪಿಐಎಲ್ ವಜಾ| ಇದೊಂದು ಬೇಜವಾಬ್ದಾರಿ ಸರ್ಕಾರ, ವಕೀಲ ಧನಂಜಯ್ ಕ್ಷಮೆಗೆ ಆಗ್ರಹಿಸಿದ ಸೂಲಿಬೆಲೆ

     

    ಶಾಶ್ವತ ಪರಿಹಾರಕ್ಕೆ ರಾಜ್ಯ ಸರ್ಕಾರದ ಜೊತೆ ವಿಪ್ರೋ ಮಾತುಕತೆ, ಪಾಲುದಾರಿಕೆಗೆ ಸಿದ್ಧ. ಶೀಘ್ರ ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ನಮ್ಮ ತಂಡ ಚರ್ಚಿಸಲಿದೆ ಎಂದು ತಿಳಿಸಿದ್ದಾರೆ.

    ನಮ್ಮ ಸರ್ಜಾಪುರ ಕ್ಯಾಂಪಸ್ ಸಾರ್ವಜನಿಕ ರಸ್ತೆಗಳಿಗೆ ಉದ್ದೇಶಿಸದ ಪಟ್ಟಿ ಮಾಡಿದ ಕಂಪನಿ. ಅಲ್ಲದೇ ವಿಶೇಷ ಖಾಸಗಿ ಆಸ್ತಿಯಾಗಿದೆ. ಕಾನೂನು, ಆಡಳಿತ ಮತ್ತು ಶಾಸನಬದ್ಧ ಸವಾಲುಗಳನ್ನು ಎದುರಿಸುತ್ತೇವೆ. ಆದರೂ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಕರ್ನಾಟಕ ಸರ್ಕಾರದೊಂದಿಗೆ ಕೈ ಜೋಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    ಡೇಟಾ-ಚಾಲಿತ ವಿಧಾನವು ನಮ್ಮ ನಗರಕ್ಕೆ ಹೆಚ್ಚು ಪರಿಣಾಮಕಾರಿ ಫಲಿತಾಂಶಗಳನ್ನ ನೀಡುತ್ತದೆ ಎಂದು ನಾವು ನಂಬುತ್ತೇವೆ. ರೇಶ್ಮಿ ಶಂಕರ್ ನೇತೃತ್ವದ ನಮ್ಮ ತಂಡ ನಿಮ್ಮ ಅಧಿಕಾರಿಗಳೊಂದಿಗೆ ಸಾಧ್ಯವಾದಷ್ಟು ಬೇಗ ಮುಂದಿನ ದಾರಿಯ ಬಗ್ಗೆ ಚರ್ಚಿಸಲಿದೆ ಎಂದು ಉತ್ತರಿಸಿದ್ದಾರೆ.

  • ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

    ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

    – ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರ ಅವಕಾಶಕ್ಕೆ ಮನವಿ

    ಬೆಂಗಳೂರು: ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ (Outer Ring Road) ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನಗಳ ಸಂಚಾರ ಬಳಕೆಗೆ ಸಂಬಂಧಿಸಿದಂತೆ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀಗೆ (Azim Premji) ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.

    ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಔಟರ್ ರಿಂಗ್ ರೋಡ್ ಟ್ರಾಫಿಕ್ ಸಮಸ್ಯೆ ಒಂದು. ಇಬ್ಲೂರು ಜಂಕ್ಷನ್‌ನಲ್ಲಿರುವ ಹೊರವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಪೀಕ್ ಅವರ್‌ನಲ್ಲಿ ತೀವ್ರ ಸಂಚಾರ ದಟ್ಟಣೆ ಇದೆ. ಇದು ಚಲನಶೀಲತೆ, ಉತ್ಪಾದಕತೆ, ನಗರ ಜೀವನದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳ ವರದಿಯನ್ನ ಅಧಿಕಾರಿಗಳು ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರ ಮಾಡ್ತಿರೋ ಜಾತಿ ಗಣತಿ ನಾವು ಒಪ್ಪಲ್ಲ: ಸಿ.ಸಿ. ಪಾಟೀಲ್

    ಪರಸ್ಪರ ಒಪ್ಪಿತ ನಿಯಮಗಳು ಮತ್ತು ಅಗತ್ಯ ಭದ್ರತಾ ಪರಿಗಣನೆಗಳಿಗೆ ಒಳಪಟ್ಟು ವಿಪ್ರೋ ಕ್ಯಾಂಪಸ್‌ನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯತೆಗಳಿವೆ. ಇದರಿಂದಾಗಿ ವಿಶೇಷವಾಗಿ ಕಚೇರಿಗಳ ಪೀಕ್ ಅವರ್‌ನಲ್ಲಿ, ಸುಮಾರು 30% ರಷ್ಟು ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ- ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

    ನಿಮ್ಮ ಸಹಕಾರದಿಂದ ಸಂಚಾರ ಅಡಚಣೆಗಳನ್ನು ನಿವಾರಿಸಬಹುದು. ವಾಸಯೋಗ್ಯ ಬೆಂಗಳೂರಿಗೆ ಕೊಡುಗೆ ನೀಡುವಲ್ಲಿ ಬಹಳ ಸಹಾಯ ಮಾಡುತ್ತದೆ. ನಿಮ್ಮ ತಂಡವು ನಮ್ಮ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪರಸ್ಪರ ಸ್ವೀಕಾರಾರ್ಹವಾದ ಯೋಜನೆಯನ್ನ ಆದಷ್ಟು ಬೇಗ ರೂಪಿಸಲು ನಾನು ಕೃತಜ್ಞನಾಗಿದ್ದೇನೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಸೆ.19 ಶುಕ್ರವಾರದಂದು ನಡೆದಿದ್ದ ಸಭೆಯಲ್ಲಿ ವಿಪ್ರೋ ಕ್ಯಾಂಪಸ್ ಬಳಕೆಗೆ ಸಂಬಂಧ ಅಧಿಕಾರಿಗಳು ಪ್ರಸ್ತಾಪ ಇಟ್ಟಿದ್ರು ಎನ್ನಲಾಗಿದ್ದು, ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀಗೆ ಪತ್ರ ಬರೆಯುವಂತೆ ಸಲಹೆಯೂ ಕೇಳಿಬಂದಿತ್ತು. ಹಾಗಾಗಿ ಸೆ.19ರಂದೇ ಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.

  • ಅಜೀಂ ಪ್ರೇಮ್ ಜೀ ಫೌಂಡೇಶನ್‍ನಿಂದ 6 ಸಾವಿರ ಬಡ ಕುಟುಂಬಕ್ಕೆ ಫುಡ್ ಕಿಟ್

    ಅಜೀಂ ಪ್ರೇಮ್ ಜೀ ಫೌಂಡೇಶನ್‍ನಿಂದ 6 ಸಾವಿರ ಬಡ ಕುಟುಂಬಕ್ಕೆ ಫುಡ್ ಕಿಟ್

    – ಕಿಟ್‍ಗಳ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಚಾಲನೆ
    – ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

    ಯಾದಗಿರಿ/ವಿಜಯಪುರ: ಯಾದಗಿರಿ ಜಿಲ್ಲೆಯಲ್ಲಿ ಸುಮಾರು 6 ಸಾವಿರ ಬಡಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ ವಿತರಿಸಲಾಗುತ್ತಿದ್ದು, ಈ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಚಾಲನೆ ನೀಡಿದರು.

    ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫಲಾನುಭವಿಯೊಬ್ಬರಿಗೆ ಫುಡ್‍ಕಿಟ್ ವಿತರಿಸುವ ಮೂಲಕ ಅವರು ಜಿಲ್ಲಾಧಿಕಾರಿಗಳು ಫೌಂಡೇಶನ್‍ನ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊರೊನಾ 2ನೇ ಅಲೆಯ ವಿಪತ್ತಿನ ಸಮಯದಲ್ಲಿ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನ ಹಸ್ತ ಚಾಚಿದೆ.

    ಯಾದಗಿರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಡಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿವೆ, ಇಂತಹ ಕುಟುಂಬಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ಸರ್ಕಾರಿ ಶಾಲಾ ಶಿಕ್ಷಕರ ಸಹಾಯದಿಂದ ಗುರುತಿಸಿ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.

    ವಿಜಯಪುರದಲ್ಲಿಯೂ ಆಹಾರ ಕಿಟ್ ವಿತರಣೆ:
    ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಜೀಂ ಪ್ರೇಮ್ ಜೀ ಫೌಂಡೇಶನ್ ನೀಡಿದ ಆಹಾರ ಕಿಟ್ ವಿತರಣೆ ಮಾಡಿದರು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಆಹಾರ ಕಿಟ್ ವಿತರಣೆ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಪುಡ್ ಕಿಟ್ ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ ಒಟ್ಟು 1,752 ಜನರಿಗೆ ಆಹಾರ ಕಿಟ್ ವಿತರಿಸಿದರು.

    10 ಕೆ.ಜಿ ಅಕ್ಕಿ, 5 ಗೋಧಿ ಹಿಟ್ಟು, 1 ಕೆಜಿ ಸಕ್ಕರೆ, ಟೀ ಪುಡಿ, ಖಾರದ ಪುಡಿ, ಗರಂ ಮಸಾಲಾ, ಎಣ್ಣೆ, ಬೇಳೆ ಸೇರಿದಂತೆ 1 ಸಾವಿರ ಬೆಲೆಯ ಆಹಾರ ಕಿಟ್ ಇದಾಗಿದೆ.

  • ಕೊರೊನಾ ವೈರಸ್ ಎಫೆಕ್ಟ್ – ಮುಕೇಶ್ ಅಂಬಾನಿಗೆ 5.09 ಶತಕೋಟಿ ಡಾಲರ್ ನಷ್ಟ

    ಕೊರೊನಾ ವೈರಸ್ ಎಫೆಕ್ಟ್ – ಮುಕೇಶ್ ಅಂಬಾನಿಗೆ 5.09 ಶತಕೋಟಿ ಡಾಲರ್ ನಷ್ಟ

    ಮುಂಬೈ: ವಿಶ್ವದಲ್ಲಿ ಭಾರೀ ಆತಂಕ ಮೂಡಿಸುತ್ತಿರುವ ಕೊರೊನಾ ವೈರಸ್ ಈಗ ಷೇರುಪೇಟೆ ಮೇಲೆಯೂ ತನ್ನ ಕರಾಳ ಛಾಯೆಯನ್ನು ಬೀರತೊಡಗಿದೆ. ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿರುವ ಮುಖೇಶ್ ಅಂಬಾನಿ ಅವರ ವ್ಯವಹಾರದ ಮೇಲೂ ಕೊರೊನಾ ವೈರನ್ ಭಾರೀ ಪರಿಣಾಮ ಬೀರಿದೆ.

    ದೇಶದ ಷೇರುಪೇಟೆ ದಿಢೀರ್ ಕುಸಿತ ಕಂಡಿದೆ. ಚೀನಾದಲ್ಲಿ ಉಂಟಾದ ಕೊರೊನಾ ವೈರಸ್‍ನಿಂದಾಗಿ ಹೂಡಿಕೆದಾರರು ತಮ್ಮ ಷೇರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಪರಿಣಾಮ ವಹಿವಾಟು ಆರಂಭವಾಗುತ್ತಿದ್ದಂತೆ ಟ್ರಿಲಿಯನ್ ಡಾಲರ್‌ಗಟ್ಟಲೆ ಜಾಗತಿಕ ಹೂಡಿಕೆದಾರರ ಸಂಪತ್ತನ್ನು ಅಳಿಸಿಹಾಕಿದೆ. ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ 5.09 ಶತಕೋಟಿ ಡಾಲರ್ ನಷ್ಟ ಅನುಭವಿಸಿದ್ದಾರೆ.

    ಕೊರೊನಾ ವೈರಸ್‌ನಿಂದ ಮುಂಬೈ ಷೇರು ಮಾರುಕಟ್ಟೆಗೂ ಹೊಡೆತ ಬಿದ್ದಿದ್ದು, ಷೇರುಗಳ ಮೌಲ್ಯದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಇಂದು ಆರಂಭಿಕ ವಹಿವಾಟಿನಿಂದಲೇ ಷೇರು ಸೂಚ್ಯಂಕದಲ್ಲಿ ಭಾರೀ ಕುಸಿತ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ 1,155 ಅಂಶ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಶ ಕುಸಿತ ಕಂಡಿದೆ. ಕೇವಲ 5 ನಿಮಿಷದಲ್ಲಿ 4 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಗುರುವಾರ 39,745 ಅಂಶಕ್ಕೆ ಅಂತ್ಯಗೊಂಡ ಸೆನ್ಸೆಕ್ಸ್ ಇಂದು ಒಂದೇ ದಿನ 1,448.37 ಅಂಶ ಇಳಿಕೆಯಾಗಿ 38,297 ಅಂಶಕ್ಕೆ ಮುಕ್ತಾಯಗೊಂಡಿತು. ನಿಫ್ಟಿ ಇಂದು 431 ಅಂಶ ಇಳಿಕೆಯಾಗಿ 11,201 ಅಂಶಕ್ಕೆ ಮುಕ್ತಾಯಗೊಂಡಿದೆ.

    ಬ್ಲೂಮ್‍ಬರ್ಗ್ ಬಿಲಿಯನೇರ್‌ಗಳ ಸೂಚ್ಯಂಕದ ಪ್ರಕಾರ, ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯವು ಈ ವರ್ಷದಲ್ಲಿ ಇದುವರೆಗೆ 5.09 ಬಿಲಿಯನ್ ಡಾಲರ್ ಇಳಿದು 53.05 ಬಿಲಿಯನ್ ಡಾಲರ್ (53,706.40 ಕೋಟಿ ರೂ.)ಗಳಿಗೆ ತಲುಪಿದೆ. ಅವರ ಪ್ರಮುಖ ಕಂಪನಿ ಆರ್‍ಐಎಲ್‍ನ ಷೇರುಗಳು ಈ ವರ್ಷ ಇಲ್ಲಿಯವರೆಗೆ ಸುಮಾರು ಶೇ. 11 ಕುಸಿದಿವೆ. ಕಳೆದ 15 ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯ ಮೇಲೆ ಕೊರೊನಾ ವೈರಸ್ ವ್ಯಾಪಕ ಪರಿಣಾಮ ಬೀರಿದೆ.

    ಐಟಿ ಜಾರ್ ಮತ್ತು ವಿಪ್ರೊ ಸಂಸ್ಥಾಪಕ ಈ ವರ್ಷದಲ್ಲಿ ಇದುವರೆಗೆ 869 ಮಿಲಿಯನ್ ಡಾಲರ್ ಕಳೆದುಕೊಂಡಿದ್ದಾರೆ. ಅವರ ನಿವ್ವಳ ಮೌಲ್ಯ ಈಗ 17.4 ಬಿಲಿಯನ್ ಡಾಲರ್‍ಗೆ ಇಳಿದಿದೆ. ಶಾಪೂರ್ಜಿ ಪಲ್ಲೊಂಜಿ ಗ್ರೂಪ್‍ನ ಸಂಸ್ಥಾಪಕ ಪಲ್ಲೊಂಜಿ ಮಿಸ್ತ್ರಿ ಹಾಗೂ ಉದಯ್ ಕೊಟಕ್ ಅವರ ನಿವ್ವಳ ಮೌಲ್ಯವು ಈ ವರ್ಷದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕ್ರಮವಾಗಿ 463 ಮಿಲಿಯನ್ ಡಾಲರ್ ಮತ್ತು 126 ಮಿಲಿಯನ್ ಡಾಲರ್ ಇಳಿಕೆಯಾಗಿದೆ.

    ಬ್ಲೂಮ್‍ಬರ್ಗ್ ಬಿಲಿಯನೇರ್ ಸೂಚ್ಯಂಕದ ಪ್ರಕಾರ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾಲ್ ಮಂಗಲಂ ಬಿರ್ಲಾ ಅವರ ನಿವ್ವಳ ಮೌಲ್ಯದಲ್ಲಿ 884 ಮಿಲಿಯನ್ ಡಾಲರ್ ನಷ್ಟವಾಗಿದೆ. ಹಾಗೆ ಅದಾನಿ ಗ್ರೂಪ್‍ನ ಗೌತಮ್ ಅದಾನಿ ಅವರು ಕಳೆದ ಎರಡು ತಿಂಗಳಲ್ಲಿ 496 ಮಿಲಿಯನ್ ಡಾಲರ್ ಕಳೆದುಕೊಂಡಿದ್ದಾರೆ.

    ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್ ಎದುರು 71.94 ರೂ. ಇದೆ. ಷೇರು ಕುಸಿತ ಬ್ಯಾಂಕಿಂಗ್, ತೈಲ, ಅನಿಲ ಆಟೋಮೊಬೈಲ್ ಮತ್ತು ಲೋಹ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದೆ. ರಿಲಾಯನ್ಸ್ ಇಂಡಸ್ಟ್ರೀಸ್, ಹೆಚ್‍ಡಿಎಫ್‍ಸಿ, ಇನ್ಫೋಸಿಸ್ ಷೇರು ಬೆಲೆಯಲ್ಲೂ ಇಳಿಕೆ ಕಂಡಿದೆ. ಜೊತೆಗೆ ಕಚ್ಚಾತೈಲ ಬೆಲೆಯೂ ಶೇ.2.2ರಷ್ಟು ಕುಸಿತ ದಾಖಲಿಸಿದ್ದು, ಒಂದು ಬ್ಯಾರಲ್ ಕಚ್ಚಾತೈಲದ ಬೆಲೆ 51 ಡಾಲರ್ ಇದೆ.