Tag: B.K hariprasad

  • ಮತಗಳ್ಳತನ ಆರೋಪ; ಆಯೋಗದ ಕ್ರಮವನ್ನು ಸದನ ಖಂಡಿಸಬೇಕು: ಬಿ.ಕೆ ಹರಿಪ್ರಸಾದ್

    ಮತಗಳ್ಳತನ ಆರೋಪ; ಆಯೋಗದ ಕ್ರಮವನ್ನು ಸದನ ಖಂಡಿಸಬೇಕು: ಬಿ.ಕೆ ಹರಿಪ್ರಸಾದ್

    ಬೆಂಗಳೂರು: ಮತಗಳ್ಳತನ ವಿಚಾರ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿತು. ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ (B K Hariprasad) ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದರು.

    ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್‌ನ (ಇವಿಎಂ) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಮತಕಳವು ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು. ಪಾರದರ್ಶಕ ಚುನಾವಣಾ ವ್ಯವಸ್ಥೆ ಜಾರಿಗೆ ತರುವ ಮೂಲಕ ಈ ಅಕ್ರಮವನ್ನು ತಡೆಗಟ್ಟಬೇಕು. ಹೀಗೆಂದು ವೋಟ್ ಫಾರ್ ಡೆಮಾಕ್ರಸಿ ಸಂಸ್ಥೆಯ ಸದಸ್ಯರೊಂದಿಗೆ ಎದ್ದೇಳು ಕರ್ನಾಟಕ ಸಂಘಟನೆ ಆಯೋಜಿಸಿದ್ದ ದುಂಡುಮೇಜಿನ ಸಂವಾದದಲ್ಲಿ ಮೂಡಿಬಂದ ಅಭಿಪ್ರಾಯ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    2024ರಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ನಡೆದಾಗ ಸಂಜೆ 5 ಗಂಟೆಗೆ 58.22% ರಷ್ಟು ಮತದಾನವಾಗಿತ್ತು. ಆದರೆ 66.05% ರಷ್ಟು ಮತದಾನವಾಗಿದೆ ಎಂದು ಮಧ್ಯರಾತ್ರಿ ಘೋಷಿಸಲಾಯಿತು. ಹೆಚ್ಚುವರಿಯಾಗಿ 48 ಲಕ್ಷ ಮತಗಳು ಎಲ್ಲಿಂದ ಸೇರ್ಪಡೆಯಾದವು ಎನ್ನುವುದು ಸಂವಾದದಲ್ಲಿ ಕಂಡುಬಂದ ಪ್ರಶ್ನೆಯಾಗಿರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

    ಅಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು 3 ಸಾವಿರದ ಮತಗಳ ಅಂತರದಿಂದ 25 ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 5 ಸಾವಿರ ಮತಗಳ ಅಂತರದಿಂದ 39 ಕ್ಷೇತ್ರಗಳಲ್ಲಿ 10 ಸಾವಿರ ಮತಗಳ ಅಂತರದಿಂದ 69 ಕ್ಷೇತ್ರಗಳಲ್ಲಿ ರಾತ್ರೋರಾತ್ರಿ ಗೆಲವು ಪಡೆದಿರುವುದನ್ನು ಪ್ರತಿಪಾದಿಸಿರುತ್ತಾರೆ. ಲೋಕಸಭೆ ಚುನಾವಣೆಗೆ ಹೋಲಿಸಿದರೆ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿನ ಮತದಾರರ ಸಂಖ್ಯೆ ಹೆಚ್ಚಳದ ಬಗ್ಗೆ ಚುನಾವಣಾಧಿಕಾರಿಗಳು ಉತ್ತರಿಸಿಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನ | ಧಾರಾಕಾರ ಮಳೆಗೆ ಶಾಲೆಯ ಗೋಡೆ ಕುಸಿತ – ರಜೆಯಿಂದಾಗಿ ತಪ್ಪಿದ ಅನಾಹುತ

    ಇದೇ ರೀತಿ ಮುಂಬರುವ ಬಿಹಾರದ ಚುನಾವಣೆಯಲ್ಲಿ ನಡೆಯಲಿದೆ ಎನ್ನುವ ಆತಂಕ ಎದುರಾಗಿದೆ. ಬಿಜೆಪಿ ಮತ್ತು ಅದರ ಮೈತ್ರಿಯನ್ನು ಬೆಂಬಲಿಸದ ಸಮುದಾಯಗಳ ಮತದಾರರನ್ನೇ ಮತದಾರರ ಪಟ್ಟಿಯಿಂದ ಬಿಜೆಪಿ ತೆಗೆದುಹಾಕುತ್ತಿದೆ ಎಂದು ಆರೋಪಿಸಿರುತ್ತಾರೆ. ಚುನಾವಣಾ ಆಯೋಗದ ಕ್ರಮವನ್ನು ಸದನ ಖಂಡಿಸಬೇಕು. ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

  • ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    – ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದಾಗ ಬಿಜೆಪಿಯವ್ರು ಎಲ್ಲಿ ಹೋಗಿದ್ರು: ಕಾಂಗ್ರೆಸ್‌ ನಾಯಕ ಪ್ರಶ್ನೆ

    ನವದೆಹಲಿ: ಹೈಕಮಾಂಡ್ ನಿರ್ದೇಶನ ಮೇರೆಗೆ ಕೆ.ಎನ್.ರಾಜಣ್ಣ (K.N.Rajanna) ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಕೆಲವು ವಿಚಾರಕ್ಕೆ ಪಕ್ಷದಲ್ಲಿ ಶಿಸ್ತು ಮೀರಿ ಹೋದಾಗ ಇಂತಹ ಕ್ರಮ ಆಗುತ್ತವೆ. ಇದು ದುರದೃಷ್ಟಕರ, ಹೀಗೆ ಆಗಬಾರದಿತ್ತು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿದರು.

    ಕೆ‌.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ರಾಜಣ್ಣ ಅವರದ್ದೇ ಆದ ಕೊಡುಗೆ ರಾಜ್ಯಕ್ಕೆ ಇದೆ. ಅವರ ತಪ್ಪುಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು. ಇದನ್ನೂ ಓದಿ: ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

    ರಾಜಣ್ಣನಿಗೆ ಅನ್ಯಾಯ ಆಗಿದೆ ಎಂದು ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಪಾಪ ಬಿಜೆಪಿ ಸತ್ಯಹರಿಶ್ಚಂದ್ರರು, ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದು ಹಾಕಿದಾಗ ಎಲ್ಲಿ ಹೋಗಿದ್ದರು? ಈ ಸತ್ಯವಂತರು, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳರನ್ನ ಆರು ವರ್ಷ ವಜಾ ಮಾಡಿದಾಗ ಈ ಸತ್ಯವಂತರು ಎಲ್ಲಿ ಹೋಗಿದ್ದರು ಎಂದು ಟಾಂಗ್‌ ಕೊಟ್ಟರು.

    ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ ಎಂದು ರಾಜಣ್ಣ ಹೇಳಿದ್ದಾರೆ. ರಾಜಕೀಯದಲ್ಲಿ ಷಡ್ಯಂತ್ರ ಇರೋದು ಸಹಜ. ಅದನ್ನೆಲ್ಲ ಹೆದರಿಸಬೇಕು. ಅವರು ಸುಮ್ಮನೆ ಕೂರುವ ವ್ಯಕ್ತಿ ಅಲ್ಲ. ನಿಷ್ಠುರವಾದ ವ್ಯಕ್ತಿ, ಮುಂದೆ ಕುಳಿತು ಮಾತಾಡಿ ಸರಿ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಕೆಲವು ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಅಂತಿಮ. ಮುಂದೆ ಹೀಗಾಗಬಾರದು ಎನ್ನುವುದಕ್ಕೆ ಇದು ಎಚ್ಚರಿಕೆ ಗಂಟೆ. ಇದು ಶಾಸಕರಿಗೂ ಸಚಿವರಿಗೂ ಎಲ್ಲರಿಗೂ ಅನ್ವಯಿಸಲಿದೆ ಎಂದರು. ಇದನ್ನೂ ಓದಿ: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸ್ತಾರೆ ಎಚ್ಚರಿಕೆಯಿಂದ ಇರಬೇಕು: ಸತೀಶ್ ಜಾರಕಿಹೊಳಿ

    ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿ, ಕಾನೂನು ತನ್ನ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಇದರಲ್ಲಿ ಅವರು ಉದ್ಯೋಗವನ್ನ ಹುಡುಕುತ್ತಿದ್ದಾರೆ. ಆರೋಪ ಬಂದಿದೆ. ತನಿಖೆ ನಡೆಯುತ್ತಿದೆ. ಎಸ್‌ಐಟಿ ತನ್ನ ತನಿಖೆಯನ್ನ ತ್ವರಿತವಾಗಿ ಮುಗಿಸಬೇಕು. ಸರ್ಕಾರ ನಿರ್ದಿಷ್ಟ ಕಾಲಮಿತಿ ನೀಡಬೇಕು. ಧರ್ಮಸ್ಥಳ ಕ್ಷೇತ್ರಕ್ಕೆ ಕೆಟ್ಟ ಹೆಸರು ಅಪನಂಬಿಕೆ ಬರಬಾರದು ಎಂದು ಹೇಳಿದರು.

  • ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

    ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

    ಬೆಂಗಳೂರು: ಬಿಜೆಪಿ ಅವರ ಸಂಸ್ಕೃತಿಯೇ ಹೆಣ್ಣುಮಕ್ಕಳಿಗೆ ಅವಹೇಳನ ಮಾಡೋದು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ (B K Hariprasad) ವಾಗ್ದಾಳಿ ನಡೆಸಿದರು.

    ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ (Ravikumar) ಅವಹೇಳನ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರವಿಕುಮಾರ್ ಹೀಗೆ ಮಾತಾಡಿರೋದು ಹೊಸದೇನು ಅಲ್ಲ. ಬಿಜೆಪಿಯ ಸಂಸ್ಕೃತಿಯೇ ಹೆಣ್ಣುಮಕ್ಕಳಿಗೆ ಅವಹೇಳನವಾಗಿ ಮಾತಾಡೋದು. ನರೇಂದ್ರ ಮೋದಿ ಅವರೇ ಶಶಿ ತರೂರ್ ಪತ್ನಿ ಬಳಿ 50 ಕೋಟಿ ಗರ್ಲ್ ಫ್ರೆಂಡ್ಸ್ ಅಂತ ಹೇಳಿದ್ರು. ಬಿಜೆಪಿ ಅವರಿಂದ ಇದನ್ನ ಬಿಟ್ಟು ಬೇರೆ ಏನು ನಿರೀಕ್ಷೆ ಮಾಡಲು ಆಗಲ್ಲ. ರವಿಕುಮಾರ್ ಕೇಸ್‌ನಲ್ಲಿ ಕೋರ್ಟ್ ಎಫ್‌ಐಆರ್ ರದ್ದು ಮಾಡಿಲ್ಲ. ಅದೇ ಸಂತೋಷದ ಸುದ್ದಿ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮಂತ್ರಿ ಮಾಡೋಕೆ ಆಗಲ್ಲ- ಆರ್.ವಿ.ದೇಶಪಾಂಡೆ

    ಕೋರ್ಟ್‌ಗಳು ಕಠಿಣ ಕ್ರಮ ತೆಗೆದುಕೊಂಡಾಗ ಇಂತಹ ಮಾತುಗಳಿಗೆ ಕಡಿವಾಣ ಬೀಳುತ್ತವೆ. ಕೋರ್ಟ್ ಎಫ್‌ಐಆರ್ ರದ್ದು ಮಾಡೋದು, ಕೇಸ್ ರದ್ದು ಮಾಡೋದು ಮಾಡಿದ್ರೆ ದೇಶದಲ್ಲಿ ಇವರನ್ನ ಯಾರು ಕೇಳಲ್ಲ ಅಂದುಕೊಳ್ಳುತ್ತಾರೆ. ಈಗ ಜಾಮೀನು ಮೇಲೆ ಅವರು ಹೊರಗೆ ಇದ್ದಾರೆ. ಈಗ ಅವರ ನಾಲಿಗೆಗೆ ಕಡಿವಾಣ ಬೀಳುತ್ತೆ ಅನ್ನಿಸುತ್ತದೆ. ಸದನಕ್ಕೆ ಅಗೌರವ ತಂದಿದ್ದಾರೆ ಅವರನ್ನು ವಜಾ ಮಾಡಿ. ಇಂತಹ ಭಾಷೆ ಪ್ರಯೋಗ ಸರಿಯಲ್ಲ ಎಂದು ಸಭಾಪತಿಗಳಿಗೆ ನಾವು ದೂರು ಕೊಟ್ಟಿದ್ದೇವೆ. ಸಭಾಪತಿಗಳು ಏನು ಕ್ರಮ ತೆಗೆದುಕೊಳ್ತಾರೆ ನೋಡೋಣ. ಸದನ ಪ್ರಾರಂಭವಾದಾಗ ಈ ವಿಷಯ ಪ್ರಸ್ತಾಪ ಮಾಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ನಾರಾಯಣ ಬರಮನಿ ಕೇಸ್ – ಕೊನೆಗೂ ಮುಜುಗರದಿಂದ ಪಾರಾದ ಸರ್ಕಾರ

    ಬಿಜೆಪಿಯಿಂದ ರವಿಕುಮಾರನ್ನ ಸಮರ್ಥನೆ ಮಾಡಿಕೊಳ್ತಿರೋ ವಿಚಾರವಾಗಿ ಮಾತನಾಡಿದ ಅವರು, ಸಮರ್ಥನೆ ಮಾಡಿಕೊಳ್ಳೋದ್ರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೋದಿ ಅವರು ಸೋನಿಯಾ ಗಾಂಧಿಗೆ ಜರ್ಸಿ ಕೌ ಅಂತ ಹೇಳಿದ್ರು. ಶಶಿ ತರೂರು ಪತ್ನಿ ಬಳಿ 50 ಗರ್ಲ್‌ ಫ್ರೆಂಡ್ಸ್‌ ಅಂತ ಹೇಳಿದ್ರು. ಇವೆಲ್ಲ ಕೀಳು ಮಟ್ಟದ ಭಾಷೆಗಳು ಎಂದು ಕಿಡಿಕಾರಿದರು. ಇದನ್ನೂ ಓದಿ: ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

    ಇಂತಹ ಕೀಳು ಭಾಷೆ ಬಳಸೋದ್ರಲ್ಲಿ ಈ ನಾಗಪುರದ ಗೋಬರ್ ಯೂನಿವರ್ಸಿಟಿಗಳು ಡಾಕ್ಟರೇಟ್ ತೆಗೆದುಕೊಂಡಿವೆ. ಎಲ್ಲಿವರೆಗೂ ಗೋಬರ್ ಯೂನಿವರ್ಸಿಟಿ, ನಾಗಪುರ ಯೂನಿವರ್ಸಿಟಿ ನಾವು ಡಿಸಾಲ್ವ್ ಮಾಡೋದಿಲ್ಲವೋ ಅಲ್ಲಿವರೆಗೂ ಇದು ಹೀಗೆ ಇರುತ್ತದೆ ಎಂದು ವಾಗ್ದಾಳಿ ನಡೆಸಿದರು.

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ (B K Hariprasad) ಲೇವಡಿ ಮಾಡಿದ್ದಾರೆ.

    ಸೆಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಕ್ರಾಂತಿ ಆಗುತ್ತೆ ಎಂಬ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆರ್.ಅಶೋಕ್ (R Ashok) ಮತ್ತು ವಿಜಯೇಂದ್ರ ಮೊದಲು ಅವರ ಖುರ್ಚಿ ಉಳಿಸಿಕೊಳ್ಳಲಿ. ಬಿಜೆಪಿಯವರು ಎರಡೂ ವರ್ಷ ಆದರೂ ಕೇಂದ್ರದಲ್ಲಿ ಅಧ್ಯಕ್ಷರನ್ನು ಮಾಡಲು ಆಗಲಿಲ್ಲ. ಈಗ ಮಹಿಳೆಯರನ್ನು ಹುಡುಕುತ್ತಿದ್ದಾರೆ. ಮಹಿಳೆಯರ ಬದಲಾಗಿ ಅರ್ಧನಾರೇಶ್ವರರನ್ನು ಹುಡುಕಿದರು ಬಹಳ ಸಂತೋಷ ಎಂದಿದ್ದಾರೆ. ಇದನ್ನೂ ಓದಿ: ನಾರಾಯಣ ಬರಮನಿ ಕೇಸ್ – ಕೊನೆಗೂ ಮುಜುಗರದಿಂದ ಪಾರಾದ ಸರ್ಕಾರ

    ಇದೇ ವೇಳೆ ಸಿಎಂ, ಡಿಸಿಎಂ ದೆಹಲಿ ಪ್ರಯಾಣ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸೀಟಿನ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ಗೊಂದಲ ಆಗ್ತಿರೋದು ಮಾಧ್ಯಮಗಳು, ಟಿವಿಯಲ್ಲಿ ಮಾತ್ರ. ಸಿಎಂ, ಡಿಸಿಎಂ ನಡುವೆ ಯಾವುದೇ ಗೊಂದಲಗಳು ಇಲ್ಲ. ಪೆಹಲ್ಗಾಮ್ ಘಟನೆ ಆದ ಮೇಲೆ ಯಾವ ರೀತಿ ಟಿವಿಗಳಲ್ಲಿ ಕರಾಚಿ, ಲಾಹೋರ್ ಆಕ್ರಮಿಸಿಕೊಂಡಿದ್ರು ಅಂತ ಹೇಳಿದ್ದರು. ಅಮೇಲೆ ರಾತ್ರಿ ಹೊತ್ತು ಸುಖವಾಗಿ ಮಲಗಿದ್ರು ಅಂತ ಅಷ್ಟೇ. ಸಿಎಂ ಸೀಟು ಗೊಂದಲ ಮಾಧ್ಯಮಗಳು ಸೃಷ್ಟಿ ಅಷ್ಟೇ ಎಂದು ಹೇಳಿದ್ದಾರೆ.

  • ಜನಗಣತಿಗೆ ಕೇಂದ್ರದಿಂದ ಅಧಿಸೂಚನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

    ಜನಗಣತಿಗೆ ಕೇಂದ್ರದಿಂದ ಅಧಿಸೂಚನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

    ನವದೆಹಲಿ: ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ (Rahul Gandhi) ಹೋರಾಟಕ್ಕೆ ಸ್ಪಂದಿಸಿ ಜನಗಣತಿ ಅಧಿಸೂಚನೆ ಆದೇಶ ಹೊರಡಿಸಿದ್ದಾರೆ. ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (B K Hariprasad) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು, ಯಾರೇ ಆದರೂ ಪ್ರಜಾಪ್ರಭುತ್ವದಲ್ಲಿ ಜನರ ಸ್ಥಿತಿಗತಿ ನೋಡಿಲ್ಲ ಎಂದರೆ ಕಾರ್ಯಕ್ರಮ ಕೊಡೋದು ಕಷ್ಟ. ರಾಹುಲ್ ಗಾಂಧಿಯವರ ನಿರಂತರ ಹೋರಾಟದ ಉದ್ದೇಶದ ಫಲವಾಗಿ ಕೇಂದ್ರ ಅಧಿಸೂಚನೆ ಹೊರಡಿಸಿದೆ ಅದಕ್ಕೆ ಸ್ವಾಗತ ಎಂದಿದ್ದಾರೆ. ಇದನ್ನೂ ಓದಿ: ಸಾವಿನಲ್ಲಿ ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ

    1931ರಲ್ಲಿ ಜಾತಿಯನ್ನ ಸೇರಿಸಿದ್ದರು. ಸ್ವತಂತ್ರದ ಬಳಿಕ ಮೊದಲ ಬಾರಿಗೆ ಜಾತಿಯನ್ನ ಸೇರಿಸೋದು ಬಹಳ ಮುಖ್ಯವಾದದ್ದು, ರಾಹುಲ್‌ಯವರ ಬೇಡಿಕೆ ಕೂಡ ಅದೇ ಆಗಿತ್ತು. ಸ್ವತಂತ್ರದ ಬಳಿಕ ಯಾವ ಸ್ಥಿತಿಗತಿಯಲ್ಲಿದ್ದಾರೆ ಅನ್ನೋದು ತಿಳಿಯಲಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ಸತೀಶ್ ನೀನಾಸಂ, ಸಪ್ತಮಿ ನಟನೆಯ ʻದಿ ರೈಸ್ ಆಫ್ ಅಶೋಕʼ

    ಜಾತಿಗಣತಿ (Caste Census) ತಡೆಗೆ ಪ್ರಬಲ ಸಮುದಾಯ ಕಾರಣ ಎನ್ನುವ ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿಚಾರವಾಗಿ, ಕರ್ನಾಟಕ ರಾಜ್ಯದ ವಿಚಾರದಲ್ಲಿ ನಮಗೆ ಹೊಸದಲ್ಲ. 1960ರಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ಹಾವನೂರ್, ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಎಂಬೆಲ್ಲಾ ಸಮುದಾಯ ಇದ್ದವು. ಇದು ಹೊಸದೇನಲ್ಲ. ಎಲ್ಲಾ ಸಂದರ್ಭದಲ್ಲಿ ಕೂಡ ಕೆಲ ಮೇಲ್ಜಾತಿಯವರು ವಿರೋಧ ಮಾಡಿರೋದು ನೋಡಿಕೊಂಡು ಬಂದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಇಸ್ರೇಲ್, ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದ್ರೆ, ನಾವು ಪರಮಾಣು ದಾಳಿ ಮಾಡಲ್ಲ: ಪಾಕಿಸ್ತಾನ

    ಜಾತಿಗಣತಿ ಎಂದ್ರೆ ತಲೆ ಎಣಿಕೆ ಅಲ್ಲ
    ಜಾತಿ ಜನಗಣತಿ ಎಂದರೇ ತಲೆ ಎಣಿಸುವ ವಿಚಾರ ಅಲ್ಲ. ಮೇಲ್ಜಾತಿಯವರಿಗೆ ಸಂಖ್ಯೆ ಬೇಕಿದೆ. ದೊಡ್ಡ ಸಂಖ್ಯೆಯಲ್ಲಿ ಹೇಳಿಕೊಳ್ಳೋಕೆ ವಿನಃ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗಕ್ಕಾಗಿ ನೋಡಲು ಜಾತಿಗಣತಿ ಬೇಕು. ಜೊತೆಗೆ ದೇಶದಲ್ಲಿ ಸಮಾನತೆ ಮೂಡಿಸಲು ಬೇಕಿದೆ ಎಂದು ಹೇಳಿದ್ದಾರೆ.

    1995ರ ಕಾಯ್ದೆಯ ಅನುಗುಣವಾಗಿ ಪ್ರತಿ 10 ವರ್ಷಕ್ಕೆ ಒಂದು ಬಾರಿ ಜಾತಿಗಣತಿ ಮಾಡಬೇಕು ಅಂತ ಇದೆ. ಹತ್ತು ವರ್ಷಗಳಲ್ಲಿ ಯಾವ ಸ್ಥಿತಿ ಇದೆ ಎಂದು ತಿಳಿಯಲು ಜಾತಿಗಣತಿ ಮಾಡಬೇಕು. ಹಿಂದುಳಿದವರು ಮುಂದೆ ಬಂದಿದ್ದಾರಾ ಎಂದು ನೋಡಲು ಮಾಡಬೇಕು. ಈಗ ಸಿದ್ದರಾಮಯ್ಯ ಅವರ ಸರ್ಕಾರ ತೀರ್ಮಾನ ಮಾಡಿದ್ದೇನು ಅಂದರೆ, ಇದು ಎರಡನೇ ಸಮೀಕ್ಷೆ, ಜಾತಿಗಣತಿ ಅಲ್ಲ. ಸಮೀಕ್ಷೆ ಇದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

    ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ
    ಕಾಂತರಾಜು ಮಾಡಿದ್ದು ಜಾತಿ ಸಮೀಕ್ಷೆ. ಯಾರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಯಾವ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ನೋಡಲು ಸಮೀಕ್ಷೆ ಮಾಡಲಾಗಿದೆ. ಇದು ಎರಡನೇ ವರದಿಯೇ ವಿನಃ, ಇದು ಹೊಸ ಸಮೀಕ್ಷೆ ಅಲ್ಲ. ಇದರಿಂದ ಯಾರಿಗೂ ತೊಂದರೆ ಇಲ್ಲ. ಜಾತಿಗಣತಿಯು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ. ಇದು ಜಾರಿ ಆಗಲೇಬೇಕು. ನಾವು ಸಹ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಲ್ಲು ಹೊಸ ಸಿನಿಮಾ ಡ್ಯೂನ್‌ ಕಾಪಿ? – ಕಿಡಿ ಕಿಡಿ ಕ್ಲಾರಿಟಿ ಕೊಟ್ಟ ಅಟ್ಲೀ

    ಕೇಂದ್ರ ಸರ್ಕಾರ ಮಾಡ್ತಿರೋದು ಜಾತಿಯ ತಲೆ ಎಣಿಕೆ
    ಕೇಂದ್ರ ಸರ್ಕಾರ ಮಾಡುವುದು ಸಮೀಕ್ಷೆ ಅಲ್ಲ. ಜಾತಿಯ ತಲೆ ಎಣಿಕೆ. ಈ ಬಗ್ಗೆ ಎಲ್ಲೂ ಹೇಳಿಲ್ಲ. ಸಮೀಕ್ಷೆ ಮಾಡಬೇಕಾಗಿರೋದು ಹಿಂದುಳಿದ ವರ್ಗಗಳ ಆಯೋಗ. ಇವರು ಜಾತಿಗಣತಿ ಮಾಡುವುದಕ್ಕೆ ಸಂತೋಷವಿದೆ. ನಾವು ಕರ್ನಾಟಕದಲ್ಲಿ ಮಾಡ್ತಿರೋದು ಎರಡನೇ ಸಮೀಕ್ಷೆ. ನಾನು ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡೋದು ಏನೆಂದರೆ ಮೊದಲ ಸಮೀಕ್ಷೆಯ ವರದಿಯನ್ನು ಬಹಿರಂಗಪಡಿಸಿ. ಅದನ್ನ ನೋಡಿ ಮಿಕ್ಕಿದ್ದು ಮಾಡಲಿ. ಈಗ ಎರಡನೇ ಸಮೀಕ್ಷೆ ಆಗಲಿದೆ. ಎಲ್ಲಿ ತಪ್ಪಾಗಿದೆ ಅಲ್ಲಿ ಸರಿಮಾಡಿಕೊಂಡು ಹೋಗಬೇಕು. ಇದು ಆಗಲೇಬೇಕಿದೆ ಎಂದಿದ್ದಾರೆ.

  • ಕಾಂಗ್ರೆಸ್‌ನಲ್ಲಿ ಕೆಲವರು ಪಂಚಾಂಗ ನೋಡ್ತಾರೆ, ಇನ್ನುಳಿದವರು ಗಿಳಿಶಾಸ್ತ್ರ ಕೇಳ್ತಾರೆ: ಬಿ.ಕೆ.ಹರಿಪ್ರಸಾದ್

    ಕಾಂಗ್ರೆಸ್‌ನಲ್ಲಿ ಕೆಲವರು ಪಂಚಾಂಗ ನೋಡ್ತಾರೆ, ಇನ್ನುಳಿದವರು ಗಿಳಿಶಾಸ್ತ್ರ ಕೇಳ್ತಾರೆ: ಬಿ.ಕೆ.ಹರಿಪ್ರಸಾದ್

    ಬೆಂಗಳೂರು: ಏನು ಮಾಡೋದು ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಪಂಚಾಂಗ ನೋಡ್ತಾರೆ. ಕೆಲವರು ಗಿಳಿಶಾಸ್ತ್ರ ಕೇಳ್ತಾರೆ. ನಾವು ಸಂವಿಧಾನ ನೋಡುತ್ತೇವೆ. ಸಂವಿಧಾನದಲ್ಲಿ ಎಲ್ಲದಕ್ಕೂ ಅವಕಾಶ ಇದೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

    ಜಾತಿಗಣತಿ ಜಾರಿಗೆ ವಿಳಂಬ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರು ಅಲ್ಲ. ನಾವು ನಂದಿನ ಹಾಲಿನ ರಾಜ್ಯದವರು. ಏಪ್ರಿಲ್ 17ಕ್ಕೆ ಜಾತಿಗಣತಿ ಬಗ್ಗೆ ತೀರ್ಮಾನ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಂಬಂಧಗಳು ಇಂದು ಗಟ್ಟಿಯಾಗಿ ಉಳಿದಿದೆ ಅಂದ್ರೆ ಅಪ್ಪಾಜಿ ಸಿನಿಮಾಗಳೇ ಕಾರಣ: ಶಿವಣ್ಣ

    ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಏರಿಕೆ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ದತ್ತಾಂಶ ಇಲ್ಲ ಎಂದು ಹೇಳಿ ಆಗ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿತ್ತು. ಜಡ್ಜ್ಮೆಂಟ್ ಕೊಟ್ಟಿಲ್ಲ. 50% ಮೀಸಲಾತಿ ದಾಟುವಂತಿಲ್ಲ ಅನ್ನೋದು ಡೈರೆಕ್ಷನ್ ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆಯ ಗೆಸ್ಟ್‌ ಹೌಸ್‌ನಲ್ಲಿ ಮಹಿಳೆ ಸ್ನಾನ ಮಾಡುವ ವೀಡಿಯೋ ಸೆರೆ ಹಿಡಿದವ ಅರೆಸ್ಟ್‌

    ಈಗ ನಮ್ಮ ಬಳಿ ಜಾತಿಗಣತಿ ಡೇಟಾ ಇದೆ. ಅದರ ಪ್ರಕಾರ ಮೀಸಲಾತಿ ಹೆಚ್ಚಿಸಬಹುದು. ರಾಹುಲ್ ಗಾಂಧಿ ಅವರು 75% ಮೀಸಲಾತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ತೆಲಂಗಾಣದಲ್ಲಿ ಆಗಿದೆ. ಎರಡನೇ ಹೆಜ್ಜೆ ಕರ್ನಾಟಕದ್ದು, ನಂತರ ಜಾರ್ಖಂಡ್, ಬಳಿಕ ದೇಶದೆಲ್ಲೆಡೆ ಜಾರಿಗೆ ತರುತ್ತೇವೆ ಎಂದರು. ಇದನ್ನೂ ಓದಿ: ಜಾತಿಗಣತಿ ಶಿಫಾರಸು: ಓಬಿಸಿ, ಮುಸ್ಲಿಂ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತಾ ಸರ್ಕಾರ?

    ಇದೇ ವೇಳೆ ಜಾತಿ ಜನಗಣತಿ ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಶಾಮನೂರು ಶಿವಶಂಕರಪ್ಪ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾರೂ ಧಮ್ಮಿ ಹಾಕಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು. ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಂದಾಗ ಏಕೆ ವಿರೋಧಿಸಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.

  • ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

    ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

    – ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಡಿಕೆಶಿ ಪರ ಬ್ಯಾಟಿಂಗ್
    – ಹನಿಟ್ರ್ಯಾಪ್‌ ಮೋದಿ ಗುಜರಾತ್ ಸಿಎಂ ಆಗಿದ್ದಾಗಿನಿಂದಲೂ ಇದೆ

    ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ. ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B K Hariprasad) ಸ್ಪಷ್ಟನೆ ನೀಡಿದರು.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನವನ್ನು ತಿದ್ದುಪಡಿ ತರಲು ಅವಕಾಶವಿದೆಯೇ ಹೊರತು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬದಲಾವಣೆ ಮಾಡಲು ಬಿಡುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar) ಅವರು ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

    ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವುದೇ ಸಂವಿಧಾನದ ಮುಖ್ಯ ಆಶಯ. ಸಂವಿಧಾನದ ಆಶಯದಂತೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದೆ. ಸಂವಿಧಾನ ಅನುಚ್ಛೇದ 14, 15(4), 16(4) ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಅವಕಾಶವಿದೆ ಎಂದು ಹೇಳಿದರು. ಇದನ್ನೂ ಓದಿ: 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯ್ ಕುಮಾರ್

    ಧರ್ಮದ ಆಧಾರದಲ್ಲಿ ಎಲ್ಲಿಯೂ ಕೂಡ ಮೀಸಲಾತಿ ನೀಡಿಲ್ಲ. 1977ರಿಂದ 1993ರವರೆಗೂ 4 ಹಿಂದುಳಿದ ಆಯೋಗಗಳ ವರದಿ ನೀಡಿದೆ. ಹಾವನೂರು ಆಯೋಗ, ಚಿನ್ನಪ್ಪ ರೆಡ್ಡಿ ಆಯೋಗ ಸೇರಿದಂತೆ 4 ಆಯೋಗಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರೆಲ್ಲರೂ ಹಿಂದುಳಿದ ವರ್ಗಕ್ಕೆ ಸೇರಿಸಬಹುದು ಎಂದು ವರದಿ ನೀಡಿದೆ. ಮುಖ್ಯವಾಗಿ 1993ರ ಇಂದಿರಾ ಸಹಾನಿ ವರ್ಸಸ್ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಪ್ರತಿ ರಾಜ್ಯದಲ್ಲಿ ಹಿಂದುಳಿದವರ ಆಯೋಗ ರಚಿಸಿ, ಕುಲಶಾಸ್ತ್ರ ಅಧ್ಯಯನ (Ethnology Study) ನಡೆಸಿ, ಸಮುದಾಯಗಳ ಸಬಲೀಕರಣಕ್ಕೆ ಮೀಸಲಾತಿ ನೀಡಬಹುದು ಎಂದು ಸ್ಪಷ್ಟಪಡಿಸಿದೆ ಎಂದು ನುಡಿದರು. ಇದನ್ನೂ ಓದಿ: ಪತ್ನಿಗೆ 9 ಕೋಟಿ ಜೀವನಾಂಶ, ತಿಂಗಳಿಗೆ 4 ಲಕ್ಷ – ಭಾರೀ ಸಂಚಲನ ಸೃಷ್ಟಿಸಿದ ಟೆಕ್ಕಿ ಪೋಸ್ಟ್

    ಮುಸ್ಲಿಂ ಸಮುದಾಯಗಳಿಗೆ ಮೀಸಲಾತಿ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರವಿಲ್ಲ. ಗುಜರಾತ್‌ನಲ್ಲೂ (Gujarat) ಕೂಡ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರದಲ್ಲಿಯೂ ಕೂಡ 4 ಪಂಗಡಗಳನ್ನು ಹೊರತುಪಡಿಸಿ ಉಳಿದವರಿಗೆ ಮೀಸಲಾತಿ ನೀಡಿದೆ. ಗುಜರಾತ್‌ನಲ್ಲಿ 101 ಸಮುದಾಯಗಳಲ್ಲಿ 23 ಮುಸ್ಲಿಂ ಒಳ ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಸಮುದಾಯಗಳು ಹಿಂದುಳಿದಿವೆ ಎಂದು ಕೆಲವು ಆಯೋಗಗಳು ಕೂಡ ವರದಿ ನೀಡಿದೆ ಎಂದು ಹೇಳಿದರು. ಇದನ್ನೂ ಓದಿ: ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಹನಿಟ್ರ್ಯಾಪ್‌ ರಾಜ ಮಹಾರಾಜರ ಕಾಲದಿಂದ ಹಿಡಿದು, ನರೇಂದ್ರ ಮೋದಿ (Narendra Modi) ಅವರು ಗುಜರಾತ್‌ನ ಮುಖ್ಯಮಂತ್ರಿಯಾದ ಕಾಲದಿಂದ ಮಾನ್ಯ ಬಿಜೆಪಿ ಅಧ್ಯಕ್ಷನಿಂದಾಗಿ ಕರ್ನಾಟಕದ ಬಾಂಬೆ ಬಾಯ್ಸ್‌ಗಳು ಕೋರ್ಟ್‌ನಿಂದ ಇಂಜೆಕ್ಷನ್ ಆರ್ಡರ್ ವರೆಗೂ ಬಂದು, ಈಗ ಇಲ್ಲಿಗೆ ಬಂದು ನಿಂತಿದೆ. ಮಾಡುವುದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನದಂತೆ ಬಿಜೆಪಿಯವರು ಮಾತಾನಾಡುವುದು ಬೇಡ. ಹನಿಟ್ರ್ಯಾಪ್‌ ಈಗ ಆಗಿ ಹೋಗಿದೆ. ಅದರ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. ಅದರ ಬಗ್ಗೆ ಚರ್ಚೆ ಬೇಡ ವಾಗ್ದಾಳಿ ನಡೆಸಿದರು.

  • ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

    ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

    – ನನ್ನ ವಿಚಾರದಲ್ಲಿ ಯಾವ ಶ್ರೀಗಳೂ ಮಾತನಾಡಬಾರದು – ಖಡಕ್ ಎಚ್ಚರಿಕೆ
    – ಉದಯಗಿರಿ ಗಲಭೆ ಬಿಜೆಪಿ, ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯ ಎಂದು ಕಿಡಿ

    ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ (CM) ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಕಾಂಗ್ರೆಸ್ (Congress) ಹೈಕಮಾಂಡ್ ನಿರ್ಧರಿಸಬೇಕು. ಸದ್ಯಕ್ಕೆ ಪಕ್ಷದ ಹೈಕಮಾಂಡ್ ಕಲಬುರಗಿಯಲ್ಲೇ (Kalaburagi) ಇರುವುದರಿಂದ ಎಲ್ಲವೂ ಅವರಿಗೇ ಗೊತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ( BK Hariprasad) ವ್ಯಂಗ್ಯವಾಡಿದರು.

    ಮಾಧ್ಯಮದವರೊಂದಿಗೆ ಮಾತನಾಡಿ, ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ಹೇಳಿದರು. ಇದನ್ನೂ ಓದಿ : ಬಿಜೆಪಿ ಅವಧಿಯ ವಿವಿಗಳಿಗೆ ಕೊಕ್; ಸರ್ಕಾರದ ನಡೆ ಅವಿವೇಕದ ಪರಮಾವಧಿ: ವಿಜಯೇಂದ್ರ

    ಸ್ವಾಮೀಜಿಗಳು ಎನಿಸಿಕೊಂಡವರು ರಾಜಕೀಯ ಮಾತಾಡಬಾರದು. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಸಹ ಮಾತಾಡಬಾರದು ಎಂದು ಖಡಕ್ ವಾರ್ನಿಂಗ್ ನೀಡಿದರು.

    ಮೈಸೂರಿನ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿ, ಈ ಗಲಾಟೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯವಾಗಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ. ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ : ಬಿಯರ್ ರೇಟ್ ಕೇಳಿ ಶಾಕ್ – ಹಾಟ್ ಡ್ರಿಂಕ್ಸ್ ಮೊರೆಹೋದ ಮದ್ಯಪ್ರಿಯರು

    ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ ವ್ಯಕ್ತಿ ಸಂಘ ಪರಿವಾರಕ್ಕೆ ಸೇರಿದವನು ಎಂಬುದು ಎಲ್ಲರಿಗೂ ಗೊತ್ತಿದೆ. ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಧರಿಸಿ ಗಲಾಟೆ ಮಾಡುತ್ತಾರೆ. ಹಾಗಾಗಿ, ಉದಯಗಿರಿ ಗಲಾಟೆ ಹೊಸದೇನೂ ಅಲ್ಲ. ಆರ್‌ಎಸ್‌ಎಸ್‌ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪಿತೃ ಪಕ್ಷ ಆಚರಣೆ ಹೆಸರಿನಲ್ಲಿ ಹೀಗೆಲ್ಲಾ ಮಾಡುತ್ತಾರೆ. ಉದಯಗಿರಿ ಮಾದರಿಯ ಚಿಂತನೆಗಳನ್ನು ಅನುಷ್ಠಾನಕ್ಕೆ ತರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ಶಾಂತಿ ಕದಡುವ ಯತ್ನ ಇವರೇ ಮಾಡುತ್ತಿದ್ದಾರೆ. ಈ ಕುರಿತು ತನಿಖೆ ನಡೆಯಬೇಕು ವಾಗ್ದಾಳಿ ನಡೆಸಿದರು.

  • ಅಮಿತ್ ಶಾ ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ: ಜೋಶಿ ವಿರುದ್ಧ ಹರಿಪ್ರಸಾದ್ ಕಿಡಿ

    ಅಮಿತ್ ಶಾ ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ: ಜೋಶಿ ವಿರುದ್ಧ ಹರಿಪ್ರಸಾದ್ ಕಿಡಿ

    ಬೆಂಗಳೂರು: ಅಮಿತ್ ಶಾ (Amit Shah) ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಎಂಎಲ್‍ಸಿ ಬಿ.ಕೆ ಹರಿಪ್ರಸಾದ್ (B.K.Hariprasad) ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಿ.ಟಿ ರವಿ (C.T Ravi) ಅವರನ್ನು ಈ ಸರ್ಕಾರ ಎನ್‍ಕೌಂಟರ್ ಮಾಡೋ ಪ್ರಯತ್ನ ಮಾಡಿತ್ತು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ (Pralhad Joshi) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜೋಶಿಯವರು ಅಮಿತ್ ಶಾ ಸಂತತಿಯವರು. ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ ಆದವರು ಅಮಿತ್ ಶಾ. ಅವರು ಹೇಳಿಕೊಟ್ಟ ಪಾಠವನ್ನ ಜೋಶಿಯವರು ಇಲ್ಲಿ ಹೇಳ್ತಿದ್ದಾರೆ. ಬಿಜೆಪಿಯವರು ಮಾಡಿರೋದನ್ನ ಅವರು ಇಲ್ಲಿ ಮಾಡ್ತೀವಿ ಎಂದು ಅಪಾದನೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂಬ ಬಿಜೆಪಿ ಆರೋಪದ ವಿಚಾರಕ್ಕೆ, ಬಿಜೆಪಿಯವರು ಸಂಘಪರಿವಾರದವರು ವ್ಯಸನಿಗಳು, ವಿಕೃತರು. ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಇವರು ಅಪಪ್ರಚಾರ ಮಾಡಿಕೊಂಡು ಬರ್ತಿದ್ದಾರೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿಯನ್ನು ಬೇರೆ ಅರ್ಥದ ಪಾರ್ಟಿ ಮಾಡೋದಕ್ಕೆ ಇವರು ಹೊರಟಿದ್ದಾರೆ. ರಾಹುಲ್ ಗಾಂಧಿ ಇವರು ಹೇಳಿದ ತರ ಅಡಿಕ್ಟ್ ಆಗಿದ್ದರೆ, 10 ಸಾವಿರ ಕಿಲೋ ಮೀಟರ್ ಭಾರತ್ ಜೋಡೋದಲ್ಲಿ ನಡೆಯೋದಕ್ಕೆ ಆಗುತ್ತಿರಲಿಲ್ಲ. ಈಗ ಅಂಬೇಡ್ಕರ್ ಬಗ್ಗೆಯೂ ಅಪಪ್ರಚಾರ ಮಾಡ್ತಿದ್ದಾರೆ. ಇದು ಉದ್ದೇಶಪೂರ್ವಕವಾಗಿ ಲೆಕ್ಕಾಚಾರ ಹಾಕಿಕೊಂಡೇ ಹೇಳಿದ ಮಾತು ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಬಿಜೆಪಿಯವರಿಗೆ (BJP) ದಲಿತರು, ಕೇಳವರ್ಗದವರು, ಶೂದ್ರರು ಯಾರೂ ಬೇಕಾಗಿಲ್ಲ. ಇವರು ಮೇಲ್ವರ್ಗದ ಜೊತೆಗೆ ಇರಬೇಕು ಎಂಬ ಉದ್ದೇಶ. ಅವರಿಗೆ ಕೆಳವರ್ಗದ ಅಭಿವೃದ್ಧಿ ಮಾಡುವುದು ಬೇಕಾಗಿಯೂ ಇಲ್ಲ. ಸುಮ್ಮನೆ ಅಮಿತ್ ಶಾ ಈ ಮಾತು ಹೇಳಿದ್ದಾರೆ ಅಂದುಕೊಳ್ಳಬೇಡಿ. ಇದನ್ನ ಪ್ಲ್ಯಾನ್ ಮಾಡಿಯೇ ಹೇಳಿರೋದು ಎಂದು ಆರೋಪಿಸಿದ್ದಾರೆ.

    ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಮೊದಲು ಅಂಬೇಡ್ಕರ್ ಬಗ್ಗೆ ಅಪಮಾನ ಮಾಡಿ ಬಳಿಕ ಅದನ್ನ ತಿರುಚೋ ಕೆಲಸ ಮಾಡಿದ್ದಾರೆ. ಅಮಿತ್ ಶಾ ಗುರು ಗೋಲ್ವಾಲ್ಕರ್, ಸಾವರ್ಕರ್ ಯಾವತ್ತು ಮೀಸಲಾತಿ, ತ್ರಿವರ್ಣ ಧ್ವಜ, ಸಂವಿಧಾನವನ್ನ ಒಪ್ಪಿರಲಿಲ್ಲ. ಆರ್‍ಎಸ್‍ಎಸ್ ಕಚೇರಿ ಮೇಲೆ ತ್ರಿವರ್ಣ ಧ್ವಜ ಹಾಕಿರಲಿಲ್ಲ. ಇದು ಆರ್‍ಎಸ್‍ಎಸ್‍ನ ಹಿಡನ್ ಅಜೆಂಡಾ. ಮುಂದಿನ ವರ್ಷ ಆರ್‍ಎಸ್‍ಎಸ್‍ಗೆ (RSS) 100 ವರ್ಷ ಆಗುತ್ತೆ. ಇದಕ್ಕೆ ಏನಾದರೂ ಮಾಡಬೇಕು ಅಂತ ಹೀಗೆ ಮಾಡ್ತಿದ್ದಾರೆ.

    ಅಮಿತ್ ಶಾ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಇಡೀ ದೇಶ, ರಾಜ್ಯದಲ್ಲಿ ಅವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡ್ತೀವಿ. ಈ ವಾರದಲ್ಲಿ ಎಲ್ಲಾ ಜಿಲ್ಲಾವಾರು ಪ್ರತಿಭಟನೆ ಮಾಡ್ತೀವಿ. ಸೋಮವಾರದಿಂದಲೇ ಹೋರಾಟಗಳು ಪ್ರಾರಂಭ ಆಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

  • ಜಾತಿ ಜನಗಣತಿ ವರದಿ ಜಾರಿಗೆ ತಂದೇ ತರುತ್ತೇವೆ: ಬಿ.ಕೆ ಹರಿಪ್ರಸಾದ್

    ಜಾತಿ ಜನಗಣತಿ ವರದಿ ಜಾರಿಗೆ ತಂದೇ ತರುತ್ತೇವೆ: ಬಿ.ಕೆ ಹರಿಪ್ರಸಾದ್

    ನವದೆಹಲಿ: ಜಾತಿ ಜನಗಣತಿ ವರದಿ ಜಾರಿಗೆ ಕೆಲವು ಶಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದರೂ ನಾವು ವರದಿಯನ್ನು ಜಾರಿಗೆ ತಂದೇ ತರುತ್ತೇವೆ. ಕಾರಣ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜಾತಿ ಜನಗಣತಿ ವರದಿ ಜಾರಿಗೆ ಮತ್ತು ಸಂವಿಧಾನ ರಕ್ಷಣೆಗೆ ಬದ್ಧರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

    ದೆಹಲಿಯಲ್ಲಿ ನಡೆದ ‘ದಿ ಕಾಸ್ಟ್ ಸೆನ್ಸೆಸ್, ವೇಮೆನ್ ರೈಟ್ಸ್ ಅಂಡ್ ರೇಸರ್ವೇಶನ್ಸ್; ದಿ ಫಿಲ್ಲರ್ಸ್ ಆಫ್ ಸೋಶಿಯಲ್ ಜಸ್ಟಿಸ್’ 3ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ಜಾತಿ ವ್ಯವಸ್ಥೆಯಲ್ಲಿ ಶತಮಾನಗಳಿಂದ ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಎಲ್ಲಾ ರೀತಿಯಲ್ಲೂ ಫಲ ಉಣ್ಣುತ್ತಿರುವರಿಗೆ ಜಾತಿಜನಗಣತಿ ಬಗ್ಗೆ ಭಯವಾಗುತ್ತಿದೆ. ಅದಕ್ಕಾಗಿ ಜಾತಿಜನಗಣತಿ ಬಗ್ಗೆ ಮಾತನಾಡುವವರನ್ನು ‘ಇವರು ಸಮಾಜವನ್ನು ಒಡೆಯುತ್ತಿದ್ದಾರೆ’ ಎಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಈ ಅಡೆತಡೆಗಳ ನಡುವೆಯೂ ಜಾತಿಜನಗಣತಿ ವರದಿ ಜಾರಿಯಾಗಲೇಬೇಕು ಎಂದು ಆಗ್ರಹಿಸಿದರು.

    ಬಹಳ ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ SC, ST ಮತ್ತು OBC ವರ್ಗಗಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಬೇಕು ಮತ್ತು ಅದಕ್ಕಾಗಿ ಜಾತಿ ಜನಗಣತಿ ಆಗಬೇಕು ಎಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಪಾದಿಸುತ್ತಿದೆ. ಜಾತಿಜನಗಣತಿ ಆಗುವುದಷ್ಟೇ ಮುಖವಲ್ಲ, ಅದು ತಮಿಳುನಾಡು ಮಾದರಿಯಲ್ಲಿ ಸಂವಿಧಾನದ 9ನೇ ಪರಿಚ್ಛೇದ ಸೇರಬೇಕು. ಇಲ್ಲದಿದ್ದರೆ ನ್ಯಾಯಾಲಯ ಅದನ್ನು ಅಸಿಂಧು ಮಾಡುವ ಸಾಧ್ಯತೆ ಇದೆ ಎಂದು ಹರಿಪ್ರಸಾದ್ ಆತಂಕ ವ್ಯಕ್ತಪಡಿಸಿದರು.

    ಸ್ವಾತಂತ್ರ್ಯ ಬಂದು 75 ವರ್ಷಗಳಾದ ಈ ಸಂದರ್ಭದಲ್ಲಿ ಸಂವಿಧಾನವನ್ನು ಅಭಿವೃದ್ಧಿ ಪಡಿಸುವ ಮತ್ತು ಬಲಪಡಿಸುವ ಬಗ್ಗೆ ಕಾರ್ಯಕ್ರಮ ರೂಪಿಸಬೇಕಿತ್ತು. ಆದರೆ, ನಾವೆಲ್ಲಾ ಈಗ ಸಂವಿಧಾನವನ್ನು ಉಳಿಸುವ ಬಗ್ಗೆ ಮಾತನಾಡುತ್ತಿದ್ದೇವೆ ಎನ್ನುವುದು ದುರಾದೃಷ್ಟಕರ. ಮೀಸಲಾತಿ ಎನ್ನುವುದು ಭಿಕ್ಷೆ ಅಲ್ಲ. ಮೀಸಲಾತಿ ಬಡತನ ನಿರ್ಮೂಲನಾ ಕಾರ್ಯಕ್ರಮ ಅಲ್ಲ. ಮೀಸಲಾತಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಅಲ್ಲ. ಮೀಸಲಾತಿ ಎಂದರೆ ಸಮಾಜದಲ್ಲಿ ಸಮಾನತೆ ಸಾಧಿಸುವ ಸಾಧನ ಎಂದು ಪರಿಗಣಿಸಬೇಕು. ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇನ್ನೂ ಬಹಳಷ್ಟಿದೆ ಎಂದು ಹೇಳಿದರು.

    ವಿಪರ್ಯಾಸ ಎಂದರೆ, ಮೀಸಲಾತಿಯನ್ನು ಪ್ರತಿಭೆ ಮತ್ತು ಸಾಮರ್ಥ್ಯದ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಮೀಸಲಾತಿ ಎನ್ನುವುದು ಶೋಷಿತ ಸಮುದಾಯಗಳಿಗೆ ಸ್ವಲ್ಪ ಮಟ್ಟದ ರಿಯಾಯಿತಿ ನೀಡುತ್ತದೆ. ಮೀಸಲಾತಿಯು ಎಲ್ಲಾ ವರ್ಗಗಳಿಗೆ ನ್ಯಾಯದ ಸಮಾನ ಹಂಚಿಕೆ ಮಾಡುತ್ತದೆ. ಆದ್ದರಿಂದ ಮೀಸಲಾತಿ ಮತ್ತು ಪ್ರತಿಭೆಯನ್ನು ಬೇರ್ಪಡಿಸಿಯೇ ನೋಡಬೇಕಾಗಿದೆ. ಹೀಗಾಗಿ, ಮೀಸಲಾತಿ ಹಕ್ಕು ನೀಡುವ ಸಂವಿಧಾನದ ಆರ್ಟಿಕಲ್ 335 ಅನ್ನು ತಿದ್ದುಪಡಿ ಮಾಡಬೇಕಾದ ಅಗತ್ಯವಿದೆ.

    ಮೀಸಲಾತಿ ವಿರುದ್ಧ ಬಹಳ ವ್ಯವಸ್ಥಿತವಾದ ಅಭಿಯಾನ ನಡೆಯುತ್ತಿದೆ. ಮೀಸಲಾತಿಯಿಂದ ಪ್ರತಿಭೆ ಇದ್ದವರಿಗೆ ಅವಕಾಶ ಸಿಗುತ್ತಿಲ್ಲ. ಸಾಮರ್ಥ್ಯ ಇದ್ದವರಿಗೆ ಅವಕಾಶ ಸಿಗುತ್ತಿಲ್ಲ ಎನ್ನುವುದಾದರೆ ಅತಿಹೆಚ್ಚು ಅಂದರೆ ಶೇ.69ರಷ್ಟು ಮೀಸಲಾತಿ ನೀಡುವ ತಮಿಳುನಾಡು ನಿರ್ನಾಮವಾಗಬೇಕಿತ್ತು. ಆದರೆ ತಮಿಳುನಾಡು ಇವತ್ತು ಇಡೀ ದೇಶಕ್ಕೆ ಮಾದರಿಯಾಗಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ. ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಕೂಡ ಮುಂದೆ ಇದೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ನನಗೆ 19 ರಾಜ್ಯಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದೆ. ನನಗೆ ಆ 19 ರಾಜ್ಯಗಳ ಸ್ಥಿತಿಗತಿಗಳು ಗೊತ್ತು, ಅದರಲ್ಲೂ ವಿಶೇಷವಾಗಿ ಉತ್ತರ ಭಾರತದ ಪರಿಸ್ಥಿತಿ ಗೊತ್ತು. ಕೇರಳದಲ್ಲಿ ಹಿಂದುಳಿದ ಜಾತಿಗಳಿಗೆ ಒಳಮೀಸಲಾತಿ ಕೂಡ ಇದೆ. ಒಂದೊಮ್ಮೆ ನಿಜಕ್ಕೂ ಮೀಸಲಾತಿ ಅಭಿವೃದ್ಧಿಗೆ ವಿರೋಧಿ ಎನ್ನುವುದಾದರೆ ಕೇರಳ ನಾಶವಾಗಬೇಕಿತ್ತು. ಮೀಸಲಾತಿ ಇರುವುದರಿಂದಾಗಿ ಕೇರಳ ಇಡೀ ದೇಶದಲ್ಲೇ ಪೂರ್ಣ ಪ್ರಮಾಣದ ಸಾಕ್ಷರತೆಯನ್ನು ಸಾಧಿಸಲು ಸಾಧ್ಯವಾಗಿದೆ. ಅಭಿವೃದ್ಧಿಯಲ್ಲೂ ಮುಂಚೂಣಿಯಲ್ಲಿದೆ ಎಂದು ಹರಿಪ್ರಸಾದ್ ವಿವರಿಸಿದರು.

    ಕರ್ನಾಟಕ ಮೀಸಲಾತಿಯ ಪ್ರವರ್ತಕ ರಾಜ್ಯ. ನಮ್ಮ ರಾಜ್ಯದಲ್ಲಿ 1879ರಲ್ಲೇ ಪರಿಶಿಷ್ಟ ಜಾತಿಯ ಜನರಿಗೆ ಮೀಸಲಾತಿಯನ್ನು ನೀಡಲಾಗಿತ್ತು. 1918ರಲ್ಲಿ ಮೈಸೂರು ರಾಜರು SC, ST ಮತ್ತು OBC ವರ್ಗಗಳಿಗೆ ಶೇ.75ರಷ್ಟು ಮೀಸಲಾತಿ ನೀಡಿದ್ದರು. ಮೀಸಲಾತಿಯಿಂದ ಬೆಳವಣಿಗೆ ಇಲ್ಲ ಎನ್ನುವುದಾದರೆ ಕರ್ನಾಟಕದ ಅಭಿವೃದ್ಧಿಯು ಕುಂಠಿತವಾಗಬೇಕಿತ್ತು. ಆದರೆ ಇವತ್ತು ಕರ್ನಾಟಕ ಅತಿಹೆಚ್ಚು ಪ್ರಗತಿ ಹೊಂದಿರುವ ರಾಜ್ಯ ಮತ್ತು ಸಿಲಿಕಾನ್ ವ್ಯಾಲಿ ಇರುವ ಎರಡನೇ ರಾಜ್ಯವಾಗಿದೆ ಎಂದು ಹರಿಪ್ರಸಾದ್ ಹೇಳಿದರು.

    ಅತಿಹೆಚ್ಚು ಜಿಎಸ್‌ಟಿ ನೀಡುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ರಾಜ್ಯ. ನಾವು ಒಂದು ರೂಪಾಯಿ ತೆರಿಗೆ ಕಟ್ಟಿ 35 ಪೈಸೆ ವಾಪಸ್ ಪಡೆಯುತ್ತಿದ್ದೇವೆ. ತಮಿಳುನಾಡು ಒಂದು ರೂಪಾಯಿ ತೆರಿಗೆ ಕಟ್ಟಿ 26 ಪೈಸೆ ಪಡೆಯುತ್ತಿದೆ. ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶ 100 ರೂಪಾಯಿ ತೆರಿಗೆ ಕಟ್ಟಿ 700 ರೂಪಾಯಿ ವಾಪಸ್ ಪಡೆಯುತ್ತಿದೆ. ಬಿಹಾರ 100 ರೂಪಾಯಿ ತೆರಿಗೆ ಕಟ್ಟಿ 440 ರೂಪಾಯಿ ವಾಪಸ್ ಪಡೆಯುತ್ತಿದೆ. ಇದರಿಂದ ನಮಗೆ ಸಮಸ್ಯೆ ಇಲ್ಲ. ನಾವಿದನ್ನು ನೀಡಲು ಸಿದ್ದ. ಆದರೆ ಶಿಕ್ಷಣ ಮತ್ತು ಆರೋಗ್ಯದ ವಿಷಯಕ್ಕೆ ಬಂದರೆ ಉತ್ತರದಾಯಿತ್ವ ಎಲ್ಲಿದೆ? ಸಮಾನತೆ, ಸಾಮಾಜಿಕ ನ್ಯಾಯ ಎಲ್ಲಿದೆ? ‘ಮೀಸಲಾತಿಯಿಂದ ಪ್ರಗತಿ ಸಾಧ್ಯವಿಲ್ಲ’ ಎನ್ನುವ ಸುಳ್ಳು ಗೊತ್ತಾಗಬೇಕು ಎಂದು ಹರಿಪ್ರಸಾದ್ ತಿಳಿಸಿದರು.

    ಬಹಳ ಹಿಂದಿನಿಂದಲೂ ಹೆಚ್ಚು ಮೀಸಲಾತಿ ಕೊಡುತ್ತಿರುವ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕೇಂದ್ರ ಸರ್ಕಾರದ ತಿಜೋರಿಗೆ ಅತಿಹೆಚ್ಚು ಜಿಎಸ್‌ಟಿ ಮತ್ತು ಇತರೆ ತೆರಿಗೆ ನೀಡುವ ರಾಜ್ಯಗಳಾಗಿವೆ. ಈ ರಾಜ್ಯಗಳ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಕಡಿಮೆ ಪ್ರಮಾಣದ ಮೀಸಲಾತಿ ಇರುವ ಉತ್ತರದ ರಾಜ್ಯಗಳಿಗೆ ಹಂಚುತ್ತಿದೆ. ಕಡಿಮೆ ಪ್ರಮಾಣದ ಮೀಸಲಾತಿ ಇರುವ ರಾಜ್ಯಗಳು ಹೆಚ್ಚು ಅಭಿವೃದ್ಧಿ ಹೊಂದುತ್ತವೆ ಎನ್ನುವುದರಲ್ಲಿ ಹುರುಳಿಲ್ಲ. ಉತ್ತರದ ರಾಜ್ಯಗಳು ಕೆಲವು ‘ಭೀಮಾರು’ ರಾಜ್ಯಗಳು, ‘ಸಿಕ್ ಸ್ಟೇಟ್ಸ್’ ಎಂದು ವಿವರಿಸಿದರು.

    ಮೀಸಲಾತಿಯಿಂದ ಅಸ್ಪೃಶ್ಯತೆಯನ್ನು ನಿವಾರಿಸಬಹುದೇ ಎನ್ನುವ ಇನ್ನೊಂದು ಅಂಶ ಇದೆ. ಜಗತ್ತಿನಲ್ಲಿ ಎಲ್ಲೂ ಅಸ್ಪೃಶ್ಯತೆ ಎಂಬುದು ಇಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಕಪ್ಪು ಮತ್ತು ಬಿಳಿಯರ ನಡುವಿನ ವರ್ಣ ಸಂಘರ್ಷ ಮಾತ್ರ. ಭಾರತದಲ್ಲಿ ಜಾತಿ ಹೆಸರಿನಲ್ಲಿ ಸಮಾಜವನ್ನು ಒಡೆಯಲಾಗಿದೆ. ಇಲ್ಲಿ ಅಸ್ಪೃಶ್ಯ ಜಾತಿಗಳು ಮಾತ್ರವಲ್ಲ, ಅದೃಶ್ಯ ಜಾತಿಗಳೂ ಇವೆ. ಸಂವಿಧಾನದ ಮೂಲಕ ನಾವು ಹೋರಾಡದಿದ್ದರೆ ಎಲ್ಲಾ ಜಾತಿಗಳಿಗೂ ನ್ಯಾಯ ಒದಗಿಸುವುದು ತುಂಬಾ ಕಶ್ಟದ ಕೆಲಸ ಎಂದು ಹೇಳಿದರು.

    ಭಾರತದ ಜಾತಿ ವ್ಯವಸ್ಥೆಯಲ್ಲಿ ಕೆಳಗಿರುವ ಶೇ.50ರಷ್ಟು ಜನ ದೇಶದ ಜಿಎಸ್‌ಟಿಗೆ ಶೇ.64ರಷ್ಟು ಕೊಡುಗೆ ನೀಡುತ್ತಿದ್ದಾರೆ. ಮೇಲಿರುವ ಶೇ.10ರಷ್ಟು ಜನ ಕೇವಲ ಶೇ.12ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ. ಶೇ.64ರಷ್ಟು ಬಡಜನರ ತೆರಿಗೆ ಹಣ ಮೀಸಲಾತಿ ಇಲ್ಲದ ಕಾರ್ಪೊರೇಟ್ ಕ್ಷೇತ್ರಕ್ಕೆ ಹೋಗುತ್ತಿದೆ. ಆ ಹಣಕ್ಕೆ ಉತ್ತರದಾಯಿತ್ವ ಬರಬೇಕಾಗಿದೆ ಎಂದು ಹರಿಪ್ರಸಾದ್ ಪ್ರತಿಪಾದಿಸಿದರು.

    ಮಹಾತ್ಮಾ ಗಾಂಧಿ, ಗುರುನಾನಕ್, ವಿವೇಕಾನಂದ ಮತ್ತಿತರ ಮಹನೀಯರು ಹಿಂದೂ ಧರ್ಮವನ್ನು ಪಾಲಿಸಿದ್ದಾರೆ. ಆದರೆ ‘ಹಿಂದೂ ರಾಷ್ಟ್ರ’ ಎನ್ನುವುದು ರಾಜಕೀಯ ಪಕ್ಷದ ಘೋಷಣೆಯಷ್ಟೇ. ಸಾವರ್ಕರ್ ನೀಡಿದ ‘ಹಿಂದೂ ರಾಷ್ಟ್ರ’ಕ್ಕೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ‘ಹಿಂದೂ ರಾಷ್ಟ್ರ’ದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ. ‘ಹಿಂದೂ ರಾಷ್ಟ್ರ’ ಎಂದು ಹೇಳುವವರು ಈಗ 100 ವರ್ಷ ಪೂರೈಸುತ್ತಿದ್ದಾರೆ. ಹಾಗಾಗಿ ಅವರೀಗ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎಲ್ಲಾ ರೀತಿಯಲ್ಲೂ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

    ಪಟ್ಟಭದ್ರ ಫ್ಯಾಸಿಸ್ಟ್ ಶಕ್ತಿಗಳು ಸೃಷ್ಟಿಸುವ ಅನಾಹುತಗಳ ಬಗ್ಗೆ ನಾವು ಸಮಾಜದಲ್ಲಿ ಅರಿವು ಮೂಡಿಸದಿದ್ದರೆ ಅವರ ವಿರುದ್ಧ ಹೋರಾಡುವುದು ಕಷ್ಟವಾಗುತ್ತದೆ. ಏಕೆಂದರೆ ಅವರು ಹಿಂದುಳಿದವರನ್ನು ‘ಹಿಂದುತ್ವ’ದ ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತದೆ. ಬಿಜೆಪಿ ಅಥವಾ ಆರ್‌ಎಸ್‌ಎಸ್ ನಾಯಕರು ಯಾರೂ ಹಿಂದೂ ಧರ್ಮಕ್ಕೆ ಹೋರಾಡಿ ಜೈಲಿನಲ್ಲಿ ಇಲ್ಲ. ಜೈಲು ಸೇರಿರುವವರೆಲ್ಲಾ ಅವರ ಕಾಲಾಳುಗಳಾಗಿರುವ ಹಿಂದುಳಿದ ವರ್ಗದವರು. ಹಿಂದುತ್ವಕ್ಕೆ ಹೋರಾಡಿದ ಹಿಂದುಳಿದವರು ಜೈಲಿನಲ್ಲಿದ್ದಾರೆ ಅಥವಾ ಕೊಲೆಯಾಗಿದ್ದಾರೆ. ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಹಿಂದುಳಿದ ವರ್ಗಗಳಿಗೆ ಕೊಟ್ಟಿರುವ ಕೊಡುಗೆ ಎಂದು ಹರಿಪ್ರಸಾದ್ ಕಿಡಿಕಾರಿದರು.

    ಬಹಳ ವಿಶೇಷವಾಗಿ ಉತ್ತರ ಭಾರತದ ಹಿಂದುಳಿದ ವರ್ಗಗಳು ಸಂವಿಧಾನವನ್ನು ಉಳಿಸಲು ಮೊದಲು ಮುಂದಾಗಬೇಕು. ಏಕೆಂದರೆ ಪೆರಿಯಾರ್ ರಾಮಸ್ವಾಮಿ ಕಾರಣಕ್ಕೆ ಬಿಜೆಪಿ ತಮಿಳುನಾಡು ಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಚಿಂತನೆಗೆ ಆಸ್ಪದವಿಲ್ಲ. ಕೇರಳದಲ್ಲಿ ನಾರಾಯಣಗುರು ಇರುವುದರಿಂದ ಅಲ್ಲೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಳೆಯಲು ಸಾಧ್ಯವಾಗುವುದಿಲ್ಲ.

    ಆಂಧ್ರ ಮತ್ತು ತೆಲಗಾಂಣದಲ್ಲಿ ವೇಮನ ಇರುವುದರಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅಲ್ಲೂ ಜಾಗವಿಲ್ಲ. ಕರ್ನಾಟಕದಲ್ಲಿ ಬಸವಣ್ಣ ಇರುವ ಕಾರಣಕ್ಕೆ ಈಗಲೂ ಬಿಜೆಪಿಗೆ ಎಂದೂ ಬಹುಮತ ಸಿಕ್ಕಿಲ್ಲ. ಮಹಾರಾಷ್ಟ್ರದಲ್ಲಿ ಅಂಬೇಡ್ಕರ್, ಜ್ಯೋತಿ ಬಾಫುಲೆ, ಸಾವಿತ್ರಿ ಬಾಫುಲೆ, ಸಾಹು ಮಹಾರಾಜ್, ಫಾತಿಮಾ ಶೇಕ್ ಇದ್ದರೂ ಅಲ್ಲಿ ಅವರು ಬಹುಮತದ ಹತ್ತಿರಕ್ಕೆ ಬಂದಿದ್ದಾರೆ. ಇದು ಅಪಾಯದ ಮುನ್ಸೂಚನೆ ಎಂದು ಹೇಳಿದರು.