Tag: b l santhosh

  • ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    – ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಒಟ್ಟಿಗೆ ಇರುವ ಫೋಟೊ ಶೇರ್‌ ಮಾಡಿ ಬಣ್ಣನೆ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ (C.P.Radhakrishnan), ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಒಟ್ಟಿಗೆ ಕುಳಿತಿರುವ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ (B.L.Santhosh) ಹಂಚಿಕೊಂಡಿದ್ದಾರೆ. ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು ಎಂದು ಬಣ್ಣಿಸಿದ್ದಾರೆ.

    ಇವರಿಗೆ ತಮ್ಮ ಹಕ್ಕುಗಳ ಪ್ರಜ್ಞೆಯೂ ಇಲ್ಲ. ಮೂವರೂ ಸ್ವಂತ ಪರಿಶ್ರಮದಿಂದ ಮೇಲೆ ಬಂದವರು. ಹಿಂದುಳಿದ ಸಮುದಾಯದಿಂದ ಬಂದವರು. ಜೀವನದ ಪ್ರತಿಯೊಂದು ಹಂತದಲ್ಲೂ ಮೆಟ್ಟಿಲುಗಳನ್ನು ಏರಿ ಬಂದಿದ್ದಾರೆ. ಅದು ಭಾರತದ ಪ್ರಜಾಪ್ರಭುತ್ವ ಮತ್ತು ನಾಗರಿಕತೆಯ ಶಕ್ತಿ ಎಂದು ಬಿಎಲ್‌ ಸಂತೋಷ್‌ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಚಿಕ್ಕ ವಯಸ್ಸಿನಲ್ಲಿ ಟೀ ಮಾರುತ್ತಿದ್ದ ವ್ಯಕ್ತಿ ಈಗ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿ, ರಾಜಕೀಯ ನಾಯಕನಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದವರು. ತುರ್ತು ಪರಿಸ್ಥಿತಿ ಸೇರಿ ಆಗಿನ ಕೇಂದ್ರ ಸರ್ಕಾರದ ಹಲವಾರು ಕ್ರಮಗಳ ವಿರುದ್ಧದ ಹೋರಾಟಗಳಲ್ಲೂ ಭಾಗಿಯಾಗಿದ್ದರು. ಸತತ ಮೂರು ಅವಧಿಗೆ ಪ್ರಧಾನಿಯಾಗಿ ದಾಖಲೆ ಕೂಡ ಬರೆದಿದ್ದಾರೆ.

    ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಈಗ ರಾಷ್ಟ್ರಪತಿಯಾಗಿದ್ದಾರೆ. ಇವರು ಸಹ ಬಿಜೆಪಿಯ ಹಲವಾರು ಹುದ್ದೆಗಳನ್ನು ಕಾರ್ಯನಿರ್ವಹಿಸಿದ್ದಾರೆ.

    ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್‌ ಅವರು ದೊಡ್ಡ ಕೌಟುಂಬಿಕ ಹಿನ್ನೆಲೆಯಿಂದ ಬಂದವರಲ್ಲ. ಚಿಕ್ಕ ವಯಸ್ಸಿನಲ್ಲೇ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡರು. ನಂತರ ಬಿಜೆಪಿ ಸೇರಿ ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

  • ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಬಿ.ಎಲ್ ಸಂತೋಷ್ ಬುಲಾವ್

    ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಬಿ.ಎಲ್ ಸಂತೋಷ್ ಬುಲಾವ್

    ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ (BJP) ಶಾಸಕ ಅನಿಲ್ ಬೆನಕೆಗೆ (Anil Benake) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ ಬುಲಾವ್ (B.L Santhosh) ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ (Belagavi) ಬೆಂಗಳೂರಿಗೆ (Bengaluru) ಶಾಸಕ ಅನಿಲ್ ಬೆನಕೆ ಪ್ರಯಾಣ ಬೆಳೆಸಿದ್ದು, ಪಕ್ಷದ ಮುಖಂಡರೊಂದಿಗೆ ಶನಿವಾರ ಚರ್ಚಿಸಲಿದ್ದಾರೆ.

    ಅನಿಲ್ ಬೆನಕೆ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಲಿಂಗಾಯತ (Lingayats) ಸಮುದಾಯದ ಡಾ.ರವಿ ಪಾಟೀಲ ಅವರಿಗೆ ಬಿಜೆಪಿ ಮಣೆ ಹಾಕಿದೆ. ಬಿಜೆಪಿ ನಾಯಕರ ನಿರ್ಧಾರಕ್ಕೆ ಅನಿಲ್ ಬೆನಕೆ ತೀವ್ರ ಅಸಮಾಧಾನಗೊಂಡಿದ್ದಾರೆ. ಇದನ್ನೂ ಓದಿ: ಕನ್ನಡವೇ ಮೊದಲು, ರೈತ ಚೈತನ್ಯ – ಜೆಡಿಎಸ್‌ನಿಂದ ಭರವಸೆ ಪತ್ರ ಬಿಡುಗಡೆ

    ಬೆಂಗಳೂರಿಗೆ ತೆರಳುವ ಮುನ್ನವೇ ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಬೆನಕೆ, ಬಿಜೆಪಿ ಟಿಕೆಟ್ ಸಿಗಲಿ, ಬಿಡಲಿ ನಾನು ಈ ಬಾರಿ ಸ್ಪರ್ಧೆ ಮಾಡುತ್ತೇನೆ. ಯಾವ ಪಕ್ಷ ಎಂದು ನಿರ್ಧರಿಸಿಲ್ಲ. ಆದರೆ ಸ್ಪರ್ಧೆಗೆ ತೀರ್ಮಾನ ಮಾಡಿದ್ದೇನೆ. ಕಾಂಗ್ರೆಸ್, ಜೆಡಿಎಸ್ ಸೇರಿ ಹಲವು ಪಕ್ಷಗಳ ಜೊತೆ ಮಾತುಕತೆ ನಡೆದಿದೆ. ಈ ಮಧ್ಯೆಯೇ ಬಿ.ಎಲ್ ಸಂತೋಷ್ ಅವರು ಬೆಂಗಳೂರಿಗೆ ಬರುವಂತೆ ಹೇಳಿದ್ದಾರೆ. ನಾನು ಈಗ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಮ್ಮ ನಾಯಕರ ಜೊತೆಗೆ ಚರ್ಚಿಸಿ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದರು. ಇದನ್ನೂ ಓದಿ: ಸೋಮಣ್ಣ ಹೊರಗಿನವ, ವರುಣಾದಲ್ಲಿ ಒಂದು ಮತವೂ ಬೀಳಲ್ಲ: ಸಿದ್ದು

  • ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? – ಬಿ.ಎಲ್.ಸಂತೋಷ್ ವಿರುದ್ಧ ಹೆಚ್‌ಡಿಕೆ ಕಿಡಿ

    ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? – ಬಿ.ಎಲ್.ಸಂತೋಷ್ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ (H.D.Devegowda) ಕುಟುಂಬ, ಜಾತ್ಯತೀತ ಜನತಾದಳ (JDS) ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಆಕ್ರೋಶ ವ್ಯಕ್ತಪಡಿಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ. ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು ಎಂದು ಸಂತೋಷ್ ಅವರನ್ನು ಏಕವಚನದಲ್ಲೇ ಪ್ರಶ್ನಿಸಿದರು. ಇದನ್ನೂ ಓದಿ: ಬೆರಕೆ ಅಂದ್ರೆ ಏನು? ಆ ಸಿ.ಟಿ ರವಿಗೆ ಸದ್ಬುದ್ಧಿ ಇಲ್ಲ – ಸಿದ್ದರಾಮಯ್ಯ

    ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕ ಹಣವನ್ನ ಕೊಂಡೊಯ್ದಿದ್ದೀರಾ. ಸಂತೋಷವಾಗಿದ್ದೀರಂತೆ ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಅಪರೇಶನ್ ಕಮಲ ಮಾಡಿ ನಮ್ಮ‌ ಸರ್ಕಾರ ತೆಗೆದಿರಿ ಎಂದು ಸಂತೋಷ್ ವಿರುದ್ಧ ಕಿಡಿಕಾರಿದರು.

    ಪ್ರಧಾನಿಗಳ ಬಳಿ ಕೇಳಿ, ನಮ್ಮ ಕುಟುಂಬ ಏನು ಅಂತ. ನಮ್ಮ ಮನೆತನ, ಮಾಜಿ ಪ್ರಧಾನಿಗಳೇ ಹೇಳ್ತಾರೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿಮ್ಮದು 40% ಸರ್ಕಾರ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ನಿಮಗೆ ಇಲ್ಲ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. ನಾನು ಸರ್ಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡ್ಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್ ಎಂದು ಸಂತೋಷ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

    ಬಿಜೆಪಿಯವರು ದರೋಡೆಕೋರರು, ಲೂಟಿಕೋರರು. ಇಂಥ ಬಿಜೆಪಿಯವರ ಜೊತೆ ಸೇರಿ ನಾನು ಸರ್ಕಾರ ನಡೆಸುವುದಕ್ಕೆ ಆಗುತ್ತಾ? ಪಂಚರತ್ನ ಯೋಜನೆಗಳನ್ನು ಜಾರಿ ಮಾಡುವುದಕ್ಕೆ ಆಗುತ್ತಾ? 2023ರ ಚುನಾವಣೆ ನಂತರ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಆಗ ಬಿಜೆಪಿಯವರು ನಮ್ಮ ಮುಂದೆ ಅರ್ಜಿ ಹಿಡಿದು ಬರುತ್ತಾರೆ ನೋಡೋಣ. ಸಮಾಜವನ್ನು ಒಡೆಯುವ, ಜನರ ನಡುವೆ ದ್ವೇಷ ಭಿತ್ತುವ ಇಂಥವರ ಜತೆ ಸರ್ಕಾರ ರಚನೆ ಮಾಡಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.

    ಸಚಿವ ಅಶೋಕ್ ಮೇಲೆ ಹರಿಹಾಯ್ದ ಕುಮಾರಸ್ವಾಮಿ ಅವರು, ಬಾಯಿಗೆ ಬಂದ ಹಾಗೆ ಮಾತನಾಡಬೇಡಿ. ಚುನಾವಣೆ ಆದ ಮೇಲೆ ಮಾತನಾಡಿ ಎಂದು ಟಾಂಗ್ ಕೊಟ್ಟರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಸದಸ್ಯ ಹೆಚ್.ಎಂ.ರಮೇಶಗೌಡ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌?

    Live Tv
    [brid partner=56869869 player=32851 video=960834 autoplay=true]

  • ಜಿಹಾದಿ ಮೂಲಭೂತವಾದಿಗಳಿಂದ ಕೊಲೆ: ಬಿಎಲ್ ಸಂತೋಷ್ ಆಕ್ರೋಶ

    ಜಿಹಾದಿ ಮೂಲಭೂತವಾದಿಗಳಿಂದ ಕೊಲೆ: ಬಿಎಲ್ ಸಂತೋಷ್ ಆಕ್ರೋಶ

    ಬೆಂಗಳೂರು: ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಶಿವಮೊಗ್ಗದಲ್ಲಿ ರಾಷ್ಟ್ರ ವಿರೋಧಿ, ಹಿಂದೂ ವಿರೋಧಿ ಮೂಲಭೂತವಾದಿ ಶಕ್ತಿಗಳಿಂದ ಹರ್ಷ ಹತ್ಯೆಗೀಡಾಗಿದ್ದಾನೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಮೊದಲ ಮೊದಲ ಪುಟದಲ್ಲಿ ಸುದ್ದಿಯಾಗುವುದಿಲ್ಲ. ಯಾಕೆಂದರೆ ಅವರು ಹಿಂದೂ ಆಗಿದ್ದರು. ಅವರು ರಾಷ್ಟ್ರೀಯವಾದಿಯಾಗಿದ್ದರು. ಹರ್ಷ ಕುಟುಂಬದ ಪರವಾಗಿ ನಿಲ್ಲೋಣ ಎಂದು ಟ್ವೀಟ್ ಮಾಡಿದ್ದಾರೆ.

    #YesToUniform_NoToHijabಅನ್ನು ಬೆಂಬಲಿಸಿದ್ದಕ್ಕಾಗಿ ಶಿವಮೊಗ್ಗದಲ್ಲಿ ಅವರ ಮನೆಯ ಮುಂದೆಯೇ ಜಿಹಾದಿ ಮೂಲಭೂತವಾದಿಗಳು ಹರ್ಷನನ್ನು ಬರ್ಬರವಾಗಿ ಕೊಂದಿದ್ದಾರೆ. ಬಲಿದಾನಗೈದ ಹರ್ಷ ಅವರಿಗೆ ನಮನಗಳು. ಈ ದುಃಖದ ಸಮಯದಲ್ಲಿ ನಾವು ಅವರ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಬರೆಯಾಗಿರವ ಒಂದು ಸ್ಕ್ರೀನ್ ಶಾರ್ಟ್ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

    ಫೇಸ್‍ಬುಕ್ ಪೋಸ್ಟ್‌ನಲ್ಲಿ  ಏನಿದೆ?: ಹರ್ಷ ಶಿವಮೊಗ್ಗ ಎನ್ನುವ ಹಿಂದುತ್ವದ ಭಯೋತ್ಪಾದಕ ಸಂಘನೆಯ ಕಾರ್ಯಕರ್ತನಿಂದ ಪ್ರವಾದಿ ಮಹಮ್ಮದ್ ಮುಸ್ತಫ ಸ.ಅ ಹಾಘು ಅಲ್ಲಾಹುನ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು, ಹಾಗೂ ಕಅಬಾದ ಫೋಟೋವನ್ನು ಅಶ್ಳೀಲವಾಗಿ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಡುತ್ತಿದ್ದಾನೆ. ಶಿವಮೊಗ್ಗದ ಜನತೆ ಈತನನ್ನು ಸರಿಯಾಗಿ ವಿಚಾರಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹಾಗೂ ಈತನಿಗೆ ನೀಡಬೇಕಾದ ಚಿಕಿತ್ಸೆ ನೀಡಬೇಕಾಗಿ ವಿನಂತಿ. ಕರಾವಳಿಯ ಸಹೋದರರೆ ಈತನ ಮೇಲೆ ಹಲವಾರು ಪ್ರಕರಣ ದಾಖಲಿಸಿ ಈತನನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಬೇಕು ಅಥವಾ ಪೊಲೀಸ್ ಠಾಣೆ ಹಾಗೂ ಕೋರ್ಟ್‍ಗೆ ಅಲೆದಾಡುವಂತೆ ಮಾಡಬೇಕು ಎಂದು ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಈ ಹಿಂದೆ ಬರೆದ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ನಡೆದಿದ್ದೇನು?: ಭಾನುವಾರ ರಾತ್ರಿ ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

  • ಸಂಪುಟ ಕಗ್ಗಂಟು: ಹೈಕಮಾಂಡ್‍ಗೆ ಬಿ.ಎಲ್.ಸಂತೋಷ್ ರಿಪೋರ್ಟ್

    ಸಂಪುಟ ಕಗ್ಗಂಟು: ಹೈಕಮಾಂಡ್‍ಗೆ ಬಿ.ಎಲ್.ಸಂತೋಷ್ ರಿಪೋರ್ಟ್

    ಬೆಂಗಳೂರು: ಬಿಜೆಪಿಯಲ್ಲೀಗ ಹೆಜ್ಜೆ ಹೆಜ್ಜೆಗೂ ಸಂಪುಟ ವಿಸ್ತರಣೆ ಕುತೂಹಲ. ಯಾವಾಗ ಸಂಪುಟ ವಿಸ್ತರಣೆ? ಯಾರು ಮಂತ್ರಿಯಾಗ್ತಾರೆ ಅನ್ನೋ ಸಸ್ಪೆನ್ಸ್. ಈ ನಡುವೆ ಯಡಿಯೂರಪ್ಪ ಹೈಕಮಾಂಡ್ ಭೇಟಿಗೆ ಮುನ್ನವೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರಿಪೋರ್ಟ್ ಕೊಟ್ಟಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‍ಗೆ ರಿಪೋರ್ಟ್ ಸಲ್ಲಿಸಿರುವ ಬಿ.ಎಲ್.ಸಂತೋಷ್ ಸದ್ಯ ಸಂಪುಟ ವಿಸ್ತರಣೆ ಈಗ ಆಗಲಿ ಸಾಕು ಅಂದಿದ್ದಾರೆ ಎನ್ನಲಾಗಿದೆ. ಆದ್ರೆ ಸಂಪುಟ ಪುನಾರಚನೆ ಬೇಡ ಎಂದ್ರೂ ಖಾತೆಯನ್ನ ಪುನರ್ ಹಂಚಿಕೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅನ್ನೋದು ಬಿಜೆಪಿ ವಲಯದ ಬಿಸಿಬಿಸಿ ಸುದ್ದಿ.

    ಅಂದಹಾಗೆ ಸಂತೋಷ್ ಅವರ ಅಭಿಪ್ರಾಯವನ್ನ ಹೈಕಮಾಂಡ್ ಒಪ್ಪಿದರೆ ಹಿರಿಯ ಸಚಿವರಿಗೆ ಶಾಕ್ ಕಾದಿದೆ. ಈಗಾಗಲೇ ದೊಡ್ಡ ದೊಡ್ಡ ಖಾತೆಗಳನ್ನ ಹೊಂದಿರುವ ಹಿರಿಯ ಸಚಿವರು ಆ ಖಾತೆಗಳಿಂದ ವಂಚಿರಾಗೋದ್ರಲ್ಲಿ ಡೌಟೇ ಇಲ್ಲ. 6 ತಿಂಗಳ ಕಾರ್ಯವೈಖರಿ ಹಾಗೂ ನಡೆದುಕೊಳ್ತಿರುವ ರೀತಿಯ ಆಧಾರದ ಮೇಲೆ ಖಾತೆ ಬದಲಾಯಿಸಲು ಬಿ.ಎಲ್.ಸಂತೋಷ್ ವರದಿ ನೀಡಿದ್ದಾರೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಸಂಕಷ್ಟ ಒಂದೆಡೆಯಾದ್ರೆ ಖಾತೆ ಹಂಚಿಕೆ ಸಂಕಷ್ಟ ಇನ್ನೊಂದೆಡೆ ಕಟ್ಟಿಟ್ಟಬುತ್ತಿ. ಈ ಎರಡು ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಯಾವ ರೀತಿ ಜಾಣತನ ಮೆರೆಯುತ್ತಾರೆ ಅನ್ನೋ ಕುತೂಹಲವಿದೆ.

    ಈ ನಡುವೆ ಯಡಿಯೂರಪ್ಪ ದೆಹಲಿಗೆ ಹೋದ್ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ಅಷ್ಟೇ ಅಲ್ಲ, ಕೇಂದ್ರ ಗೃಹಸಚಿವ ಅಮಿತ್ ಶಾ ಜತೆಯೂ ಮಾತಾಡಬೇಕು. ಈ ಬಗ್ಗೆ ಈಗಾಗಲೇ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ. ಫೆಬ್ರವರಿ 2ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ, 9+3 ಯಡಿಯೂರಪ್ಪ ಸಂಪುಟ ವಿಸ್ತರಣೆ ಫಾರ್ಮುಲಾ ಸಕ್ಸಸ್ ಆಗುತ್ತೋ..? ಹೈಕಮಾಂಡ್ ನಿಂದ 8+4 ಫಾರ್ಮುಲಾಗೆ ಮನವೊಲಿಕೆ ಯತ್ನ ಯಶಸ್ವಿಯಾಗುತ್ತೋ ಕಾದುನೋಡಬೇಕಿದೆ.

  • ಚುನಾವಣೆಗೆ 2 ದಿನ ಇದ್ದಾಗ ಅನಾರೋಗ್ಯದ ಕತೆ ಹೇಳಿ ಸಿಎಂ ಹಾಸಿಗೆ ಹಿಡಿಯುತ್ತಾರೆ: ಸಂತೋಷ್

    ಚುನಾವಣೆಗೆ 2 ದಿನ ಇದ್ದಾಗ ಅನಾರೋಗ್ಯದ ಕತೆ ಹೇಳಿ ಸಿಎಂ ಹಾಸಿಗೆ ಹಿಡಿಯುತ್ತಾರೆ: ಸಂತೋಷ್

    ಶಿವಮೊಗ್ಗ: ಚುನಾವಣೆಗೆ ಇನ್ನೆರಡು ದಿನ ಇರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದ ಕತೆ ಹೇಳಿ ಹಾಸಿಗೆ ಹಿಡಿಯಬಹುದು. ಆದರೆ ಏ.18ರ ನಂತರ ಆರೋಗ್ಯವಾಗಿ ಓಡಾಡಿಕೊಂಡಿರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವ್ಯಂಗ್ಯವಾಡಿದ್ದಾರೆ.

    ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಕುಮಾರಸ್ವಾಮಿ, ನನ್ನ ಆರೋಗ್ಯ ಸರಿಯಿಲ್ಲ ನಾನು ಎಷ್ಟು ದಿನ ಬದುಕುತ್ತೇನೆ ಗೊತ್ತಿಲ್ಲ. ಹಾಗಾಗಿ ಮತ ಕೊಡಿ ಎಂದು ಹೇಳುತ್ತಾರೆ” ಎಂದು ವ್ಯಂಗ್ಯವಾಡಿದರು.

    55 ವರ್ಷದ ಕುಮಾರಸ್ವಾಮಿಗಳೇ ಅನಾರೋಗ್ಯದ ಬಗ್ಗೆ ಮಾತನಾಡಿದರೆ, 69 ವರ್ಷದ ಮೋದಿ ಬಗ್ಗೆ ಇನ್ನೇನು ಹೇಳಬೇಕು ಹೇಳಿ ಎಂದು ಪ್ರಶ್ನಿಸಿದ್ದಾರೆ. ದೇವೇಗೌಡರ ಕುಟುಂಬವೇ ರಾಜಕಾರಣದಲ್ಲಿ ಪಾದಾರ್ಪಣೆ ಮಾಡಿದೆ. ಆದರೆ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲೂ ಮೋದಿಗೆ ಮತ ಹಾಕುವರಿದ್ದಾರೆ. ಮೋದಿ ತನ್ನ ವಿಪಕ್ಷದವರ ಮನೆಯಲ್ಲೂ ಮತ ಪಡೆಯುವ ಕೆಲಸ ಮಾಡಿದ್ದಾರೆ. ತೋರಿಕೆಗೆ ಅವರು ಮೋದಿಯನ್ನು ವಿರೋಧಿಸುತ್ತಾರೆ. ಏಕೆಂದರೆ ಮೋದಿಯ ಆಡಳಿತದ ದಿಟ್ಟತನ ಅಷ್ಟು ಪಾರದರ್ಶಕವಾಗಿದೆ ಎಂದರು.

    ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್, ಪಾಕಿಸ್ತಾನದ ಬಾಲಕೋಟ್‍ನಲ್ಲಿರುವ ಭಯೋತ್ಪಾದಕರ ಕೇಂದ್ರದ ಮೇಲೆ ಸೇನೆ ಕಾರ್ಯಾಚರಣೆ ನಡೆಸಿದಾಗ ನಮ್ಮ ವಿಪಕ್ಷಗಳು ಸಾಕ್ಷಿ ಕೊಡಿ ಎನ್ನುತ್ತಿವೆ. ಆದರೆ ಅಡಿಕೆ ಮರಕ್ಕೆ, ಫಸಲಿಗೆ ಹತ್ತಿದ ಹುಳ ನಾಶವಾಗಲಿ ಎಂದು ಔಷಧಿ ಹೊಡೆಯುತ್ತಾರೆ. ಅದು ಸತ್ತಮೇಲೆ ಯಾವನು ಲೆಕ್ಕ ಹಾಕುತ್ತಾ ಕೂರಲ್ಲ ಎಂದರು. ಪಾಕ್ ಮೇಲೆ ದಾಳಿ ನಡೆಸಲು ಸಾಮಾಜಿಕ ಘಾತುಕ ಶಕ್ತಿಯನ್ನು ನಿಗ್ರಹಿಸಲು ಪ್ರಬಲ ನಾಯಕತ್ವ ಬೇಕು ಅದನ್ನು ಮೋದಿ ತೋರಿಸಿದ್ದಾರೆ ಎಂದು ಹೇಳಿದರು.

  • ಅತೃಪ್ತರ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪ- ಬಿಜೆಪಿ ಕೇಂದ್ರ ಕಚೇರಿಯ ಸಿಬ್ಬಂದಿ ವಜಾ

    ಅತೃಪ್ತರ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪ- ಬಿಜೆಪಿ ಕೇಂದ್ರ ಕಚೇರಿಯ ಸಿಬ್ಬಂದಿ ವಜಾ

    ಬೆಂಗಳೂರು: ನಗರದಲ್ಲಿ ಗರುವಾರದಂದು ನಡೆದ ಅತೃಪ್ತರ ಸಮಾವೇಶದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಬಿಜೆಪಿ ಕೇಂದ್ರ ಕಚೇರಿಯಲ್ಲಿದ್ದ ಸಿಬ್ಬಂದಿ ವಜಾಕ್ಕೆ ಬಿಎಸ್‍ವೈ ಸೂಚನೆ ನೀಡಿದ್ದಾರೆ.

    ಸಮಾವೇಶದ ಕರಪತ್ರ ಡ್ರಾಫ್ಟ್ ಸಿದ್ದಪಡಿಸಿದ್ದು, ಕೆಲ ನಾಯಕರಿಗೆ ಮೇಲ್ ಹಾಕಿದ ಆರೋಪದ ಮೇಲೆ ಕಂಪ್ಯೂಟರ್ ಅಪರೇಟರ್ ಮಲ್ಲಿಕಾರ್ಜುನ್ ವಜಾಕ್ಕೆ ಬಿಎಸ್‍ವೈ ಗರುವಾರ ಸಂಜೆಯೇ ಸೂಚನೆ ನೀಡಿದ್ದಾರೆ. ಮಲ್ಲಿಕಾರ್ಜುನ, ಬಿಎಲ್ ಸಂತೋಷ್ ಅವರ ಬೆಂಬಲಿಗರಾಇದ್ದು, 10 ವರ್ಷಗಳಿಂದ ಕೆಲಸ ಮಾಡ್ತಿದ್ದರು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಬಿಎಸ್‍ವೈ, ಬಿಜೆಪಿ ಕಚೇರಿ ಉದ್ಯೋಗಿ ಮಲ್ಲಿಕಾರ್ಜುನ್ ಸಿಐಡಿಯಂತೆ ಕೆಲಸ ಮಾಡ್ತಿದ್ದ. ಅದಕ್ಕೆ ವಜಾ ಮಾಡಿದ್ದೀನಿ. ಈಶ್ವರಪ್ಪ ನಡವಳಿಕೆ ತಿದ್ದುಕೊಳ್ಳಬೇಕು. ಸಂತೋಷ್ ಅವರು ರಾಷ್ಟ್ರೀಯ ಜವಾಬ್ದಾರಿ ನೋಡಿಕೊಳ್ಳಲಿ, ರಾಜ್ಯದ ಬಗ್ಗೆ ಬೇಡ. ಸಂತೋಷ್ ಜೊತೆ ಈಶ್ವರಪ್ಪ ಗಂಟೆಗಟ್ಟಲೆ ಮಾತನಾಡ್ತಿದ್ರೆ ಏನ್ ಅನಿಸುತ್ತೆ ಎಂದು ಪರೋಕ್ಷವಾಗಿ ಬಿ.ಎಲ್ ಸಂತೋಷ್ ಅವರ ಬಗ್ಗೆ ಬಿಎಸ್‍ವೈ ಅಸಮಾಧಾನ ವ್ಯಕ್ತಪಡಿಸಿದ್ರು.

    ವಿಪಕ್ಷ ನಾಯಕ ಸ್ಥಾನದಿಂದ ಈಶ್ವರಪ್ಪರನ್ನ ಕೆಳಗಿಳಿಸೋ ವಿಚಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಎಂಎಲ್‍ಸಿಗಳ ಬೇಡಿಕೆಯನ್ನ ಗಮನಿಸಿ ನಿರ್ಧಾರ ಪ್ರಕಟಿಸುತ್ತೇವೆ. ನಾನು ಬದಲಾಗಿಲ್ಲ, ಮಾತು ಬದಲಾಗಿಲ್ಲ. ಈಶ್ವರಪ್ಪ ಬಹಿರಂಗ ಸಭೆ ನಡೆಸಿ ಪಕ್ಷ ವಿರೋಧಿ ಧೋರಣೆ ತಾಳಿದ್ದಾರೆ. ದೆಹಲಿಗೆ ಹೋಗ್ತಿದ್ದೀನಿ ರಾಮಲಾಲ್, ಅಮಿತ್ ಷಾ ಅವರನ್ನ ಭೇಟಿ ಮಾಡ್ತೀನಿ ಅಂದ್ರು.