Tag: B. Ma. Harish

  • ಸಿನಿಮಾ ಟಿಕೆಟ್ ಬೆಲೆ ಇಳಿಸಿ: ಸಿಎಂಗೆ ಫಿಲ್ಮ್ ಚೇಂಬರ್ ಮನವಿ

    ಸಿನಿಮಾ ಟಿಕೆಟ್ ಬೆಲೆ ಇಳಿಸಿ: ಸಿಎಂಗೆ ಫಿಲ್ಮ್ ಚೇಂಬರ್ ಮನವಿ

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ (B.Ma.Harish) ಮತ್ತು ತಂಡ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದೆ. ಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಮನವಿ ಪತ್ರವೊಂದನ್ನು ನೀಡಿದೆ. ಈ ಮನವಿ ಪತ್ರದಲ್ಲಿ ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಇಡಲಾಗಿದೆ.

    ವಾಣಿಜ್ಯ ಮಂಡಳಿ (Film Chamber) ಅಧ್ಯಕ್ಷ ಭಾ.ಮಾ.ಹರೀಶ್, ನಟ ಸುಂದರ್ ರಾಜ್ (Sundaraj), ನಟಿ ಪ್ರಮಿಳಾ ಜೋಷಾಯಿ ಸೇರಿದಂತೆ ಮಂಡಳಿಯ ಪದಾಧಿಕಾರಿಗಳು ಸಿಎಂ ಭೇಟಿ ಮಾಡಿ, ನಿರ್ಮಾಪಕರಿಗೆ ಹಾಗೂ ಪ್ರದರ್ಶಕರಿಗೆ ಪೂರಕ ತಂತ್ರಜ್ಞಾನ ಅಳವಡಿಕೆಗೆ ಮನವಿ ಮಾಡಿದೆ. ಅಂದಾಜು 20 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಡಿಸಿಪಿ ಯಂತ್ರೋಪಕರಣವನ್ನು ಸ್ಥಾಪಿಸಲು ಆಯವ್ಯಯದಲ್ಲಿ ಹಣ ನಿಗದಿ ಮಾಡಬೇಕು ಎಂದು ಕೇಳಿದೆ.  ಇದನ್ನೂ ಓದಿ:ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಬರ್ತ್‌ಡೇಗೆ ಸಿದ್ಧತೆ ಹೇಗಿದೆ ಗೊತ್ತಾ?

    ರಾಜ್ಯದಲ್ಲಿ ಸುಮಾರ ಇನ್ನೂರು ತಾತ್ಕಾಲಿಕ ಮತ್ತು ಅರೆ ಖಾಯಂ ಚಿತ್ರಮಂದಿರಗಳನ್ನಾಗಿ ಪರಿವರ್ತಿಸಲು ಬಯಸಿರುವ ಕಾರಣ ನಿಯಮ 107 (2) (1)ಕ್ಕೆ ದಿನಾಂಕ 31 ಡಿಸೆಂಬರ್ 2030ರವರೆಗೆ ವಿಸ್ತರಿಸುವಂತೆ ತಿದ್ದಪಡಿ ತರಲು ಗೃಹ ಇಲಾಖೆಗೆ ನಿರ್ದೇಶಿಸಬೇಕಾಗಿ ಮನವಿ ಪತ್ರದಲ್ಲಿ ವಿನಂತಿಸಲಾಗಿದೆ.

     

    ಚಿತ್ರರಂಗವನ್ನು ಕೈಗಾರಿಕಾ ಉದ್ಯಮವೆಂದು ಘೋಷಣೆ ಮಾಡಿದ್ದು, ಪೂರಕ ಇಲಾಖೆಗಳು ಚಿತ್ರರಂಗವನ್ನು ಕೈಗಾರಿಕಾ ಉದ್ಯಮವೆಂದು ಪರಿಗಣಿಸಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲು ಮನವಿ ಕೂಡ ಮಾಡಿಕೊಂಡಿದ್ದಾರೆ. ಜೊತೆ ರಾಜ್ಯಾದ್ಯಂತ ಚಲನಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶದರ ನಿಗದಿ ಪಡಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ನಿರ್ಮಲ’ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ

    ‘ನಿರ್ಮಲ’ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ

    ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ‘ನಿರ್ಮಲ’ (Nirmala) ಚಿತ್ರ ಅತ್ಯುತ್ತಮ ಮಕ್ಕಳ ಚಿತ್ರ (Children’s Film) ಅವಾರ್ಡ್ ಪಡೆದುಕೊಂಡಿದೆ. ಉಲ್ಲಾಸ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ನಿರ್ಮಾಣವಾದ ಈ ಚಿತ್ರ ಜರ್ಮನ್, ಥಾಯ್ಲೆಂಡ್, ಇಟಲಿ, ಉಕ್ರೇನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಭಾಷೆಯ ಮಕ್ಕಳ ಸಿನಿಮಾಗಳ ನಡುವೆ ಅತ್ಯುತ್ತಮ ಮಕ್ಕಳ ಸಿನಿಮಾ ಪ್ರಶಸ್ತಿಗೆ ಪಾತ್ರವಾಗಿದೆ. ಥಾಯ್ಲೆಂಡ್ ಮಾಜಿ ಪ್ರಧಾನಿ ಪ್ರಶಸ್ತಿಯನ್ನು ಪ್ರಧಾನ ಮಾಡುವ ಮೂಲಕ ಕನ್ನಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬ್ಯಾಂಕಾಕ್ (Bangkok) ನಲ್ಲಿ ನಡೆಯುತ್ತಿರುವ ಮೂರನೇ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ಇದಾಗಿದ್ದು, ಕರ್ನಾಟಕದಿಂದ ಮಕ್ಕಳ ಚಿತ್ರವಾಗಿ ‘ನಿರ್ಮಲ’ ಸಿನಿಮಾ ಮಾತ್ರ ಆಯ್ಕೆ ಆಗಿತ್ತು. ಬೇರೆ ಬೇರೆ ಭಾಷೆಯ ಹಲವು ಸಿನಿಮಾಗಳು ಪ್ರಶಸ್ತಿ ರೇಸ್ ನಲ್ಲಿದ್ದರೂ ಅಂತಿಮವಾಗಿ ನಮ್ಮ ಬ್ಯಾನರ್ ನಿರ್ಮಾಣದ ‘ನಿರ್ಮಲ’ ಸಿನಿಮಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕ್ಯಾಮೆರಾ ಮ್ಯಾನ್ ಹಾಗೂ ಪ್ರೊಡಕ್ಷನ್ ಹೊರತುಪಡಿಸಿ ಎಲ್ಲಾ ವಿಭಾಗದಲ್ಲೂ ಹದಿನಾರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಸೇರಿ ಮಾಡಿರುವ ಸಿನಿಮಾವಿದು. ನಿರ್ದೇಶನ, ನಟನೆ, ಸಂಕಲನ, ಮೇಕಪ್, ಮ್ಯೂಸಿಕ್ ಎಲ್ಲವನ್ನು ಮಕ್ಕಳೇ ಮಾಡಿರೋದು ಈ ಚಿತ್ರದ ವಿಶೇಷ. ಅಲ್ಲಿ ಬಂದವರೆಲ್ಲ ಸಿನಿಮಾ ಬಗ್ಗೆ ಕೇಳಿ ಆಶ್ಚರ್ಯ ಹಾಗೂ ಹರುಷ ವ್ಯಕ್ತಪಡಿಸಿದ್ರು ಎಂದು ಚಿತ್ರದ ನಿರ್ಮಾಪಕ ಉಲ್ಲಾಸ್ ಎಂಟರ್ಪ್ರೈಸಸ್ ಬ್ಯಾನರ್ ನ ಉಲ್ಲಾಸ್ ಗೌಡ (Ullas Gowda) ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸದ್ಯಕ್ಕಿಲ್ಲ ‘ಕಿರಿಕ್ ಪಾರ್ಟಿ 2’ : ಈಗೇನಿದ್ದರೂ ರಿಚರ್ಡ್ ಆಂಟನಿ ಗುಂಗಿನಲ್ಲಿ ರಕ್ಷಿತ್

    ಬೆಂಗಳೂರು ಇಂಟರ್ ನ್ಯಾಶನಲ್ ಫೆಸ್ಟಿವಲ್ ಗೆ ಆಯ್ಕೆ ಆಗಿ ಇನ್ನೇನು ಸಿನಿಮಾ ಬಿಡುಗಡೆ ಮಾಡಬೇಕು ಎನ್ನುವಾಗ ಕೋವಿಡ್ ಬಂತು. ಆನ್‌ಲೈನ್ ನಲ್ಲಿ ಹಲವು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡಿದೆ. ಬ್ಯಾಂಕಾಕ್ ಇಂಟರ್ ನ್ಯಾಶನಲ್ ಫೆಸ್ಟಿವಲ್ ನಲ್ಲಿ ಈ ಸಿನಿಮಾ ಆಯ್ಕೆ ಆಗಿ ಪ್ರಶಸ್ತಿ ಪಡೆದುಕೊಂಡಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಸ್ತಿ ಸ್ವೀಕರಿಸಿದ್ದು ತುಂಬಾ ಖುಷಿ ಕೊಟ್ಟಿದೆ. ನಮ್ಮ ಬ್ಯಾನರ್ ನಲ್ಲಿ ಇಂತಹದೊಂದು ಸಿನಿಮಾ ಮೂಡಿ ಬಂದಿರೋದು ಹೆಮ್ಮೆ ಎನಿಸುತ್ತದೆ ಎಂದು ಭಾ.ಮ.ಹರೀಶ್ ಸಂತಸ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಎರಡು ಬಣಗಳ ನಡುವೆ ಜಿದ್ದಾಜಿದ್ದಿ ಶುರುವಾಯಿತು. ಸಾ.ರಾ.ಗೋವಿಂದು ಬಣದ ಮೇಲೆ ಭಾ.ಮಾ ಹರೀಶ್ ಬಣದ ಆರೋಪ, ಇವರ ಬಣದ ಮೇಲೆ ಅವರು ಪ್ರತ್ಯಾರೋಪ. ಚುನಾವಣೆ ಮುಗಿದು, ಫಲಿತಾಂಶ ಬಂದು ಭಾ.ಮಾ ಹರೀಶ್ ಅವರು ಅಧ್ಯಕ್ಷ ಖುರ್ಚಿ ಮೇಲೆ ಕೂತರು ಈ ತಿಕ್ಕಾಟ ಇನ್ನೂ ಮುಗಿದಿಲ್ಲ. ಈಗಿನ ಚುನಾಯಿತ ಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಹಣಕಾಸಿನ ವ್ಯವಹಾರವನ್ನು ಮಾಡುವಂತಿಲ್ಲ ಎಂದು ಕೋರ್ಟಿನಿಂದ ನಿರ್ದೇಶನ ಕೊಡಿಸುವಲ್ಲಿ ಯಶಸ್ವಿಯಾಗಿದೆ ಸಾ.ರಾ.ಗೋವಿಂದು ಬಣ.

    ಎರಡು ದಿನಗಳ ಹಿಂದೆಯಷ್ಟೇ ಪತ್ರಿಕಾಗೋಷ್ಠಿ ನಡೆಸಿರುವ ಸಾ.ರಾ. ಗೋವಿಂದು ಮತ್ತು ತಂಡ ಚುನಾವಣಾ ಅಧಿಕಾರಿಗಳ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದಾರೆ. ಕಳ್ಳದಾರಿಯ ಮೂಲಕ ಭಾ.ಮಾ ಹರೀಶ್ ಮತ್ತು ತಂಡ ಅಧಿಕಾರಿದ ಚುಕ್ಕಾನೆ ಹಿಡಿದಿದೆ ಎಂದು ಆರೋಪ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಅಧ್ಯಕ್ಷ ಎಂದು ನಾವು ಒಪ್ಪಿಕೊಳ್ಳಲಾರೆವು ಎಂದಿದ್ದಾರೆ. ಆದರೆ,  ಈ ಎಲ್ಲ ಆರೋಪಗಳ ಹಿಂದೆ ಬೇರೆಯದ್ದೇ ಕಾರಣವಿದೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್ ಅವರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ, ಅವರನ್ನು ಗೌರವಿಸಲು ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆದಿತ್ತು. ಇಂಥದ್ದೊಂದು ದೊಡ್ಡ ಕಾರ್ಯಕ್ರಮ ಆಗಬಾರದು ಎಂದು ಈ ರೀತಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    ಈ ಕಾರ್ಯಕ್ರಮದ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಭಾ,ಮಾ. ಹರೀಶ್ “ಇನ್ನೂ ನಾವು ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್ ಅವರನ್ನು ಕೇಳಿಲ್ಲ. ಅವರ ಗಮನಕ್ಕೆ ತಂದು, ದೊಡ್ಡಮಟ್ಟದಲ್ಲೇ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಕಾರ್ಯಕ್ರಮದ ಕುರಿತು ಅಧಿಕೃತವಾಗಿ ಕಮೀಟಿ ಮುಂದೆ ಚರ್ಚೆ ಆಗಿಲ್ಲ. ಅದು ಆಗಬೇಕು. ಈ ಕಾರ್ಯಕ್ರಮವನ್ನು ತಡೆಯುವಂತಹ ಹುನ್ನಾರ ನಡೆದಿರುವುದು ನಿಜ. ಈ ಹಿಂದೆ ಅಂಬರೀಶ್ ಅವರಿಗೆ 60 ಆದಾಗ ಎಲ್ಲರೂ ಸೇರಿ ಸಂಭ್ರಮಿಸಿದ್ದೇವೆ. ಇದನ್ನೂ ಹಾಗೆಯೇ ಮಾಡಬೇಕು ಎಂದುಕೊಂಡಿದ್ದೇವೆ’ ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]