Tag: B.R.Patil

  • ಮತಗಳ್ಳತನ ಮೂಲಕ ನನ್ನ ಸೋಲಿಸಲು ಸಂಚು ಮಾಡಲಾಗಿತ್ತು: ಬಿ.ಆರ್.ಪಾಟೀಲ್

    ಮತಗಳ್ಳತನ ಮೂಲಕ ನನ್ನ ಸೋಲಿಸಲು ಸಂಚು ಮಾಡಲಾಗಿತ್ತು: ಬಿ.ಆರ್.ಪಾಟೀಲ್

    – ನಾಳೆ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗುತ್ತಿದ್ದೇನೆ ಎಂದ ಶಾಸಕ

    ಕಲಬುರಗಿ: ಆಳಂದ ಕ್ಷೇತ್ರದಲ್ಲಿ 2023ರಲ್ಲಿ ಮತಗಳ್ಳತನದ ಮೂಲಕ ನನ್ನ ಸೋಲಿಸಲು ಸಂಚು ಮಾಡಲಾಗಿತ್ತು ಎಂದು ಶಾಸಕ ಬಿ.ಆರ್.ಪಾಟೀಲ್ (B R Patil) ಗಂಭೀರ ಆರೋಪ ಮಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್ ವಿಚಾರವಾಗಿ ಕಲಬುರಗಿಯಲ್ಲಿ (Kalaburagi) ಮಾತನಾಡಿದ ಅವರು, ಇದೊಂದು ಬಹಳ ದೊಡ್ಡ ಕಥೆ. ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸುವ ಉದ್ದೇಶದಿಂದ ಮತಗಳ್ಳತನ ನಡೆದಿತ್ತು. ನನ್ನ ಪರವಾಗಿರೋ 6,900 ಮತಗಳನ್ನು ಡಿಲೀಟ್ ಮಾಡಿದ್ದರು. ಈ ವಿಚಾರ ಗೊತ್ತಾಗಿ ನಾನು ಪ್ರಿಯಾಂಕ್ ಖರ್ಗೆ ಸೇರಿ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದೆವು. ಇಬ್ಬರೂ ಸೇರಿ ಪ್ರತಿಭಟನೆ ಮಾಡಿದ ಬಳಿಕ ದೂರು ದಾಖಲಿಸಿಕೊಂಡರು ಎಂದಿದ್ದಾರೆ. ಇದನ್ನೂ ಓದಿ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ – ಬಿವೈವಿ ಕಿಡಿ

     ಚುನಾವಣಾ ಆಯೋಗ (Election Commission) ಸಹಕಾರ ನೀಡದ ಹಿನ್ನಲೆ ಆ ಪ್ರಕರಣದ ತನಿಖೆ ಬೇಗ ಮುಗಿಯುತ್ತಿಲ್ಲ. ಈ ಮತಗಳ್ಳತನ ಪ್ರಕರಣ ಕುರಿತು ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಬರಲು ಹೇಳಿದೆ. ನನ್ನ ಬಳಿ ಇರೋ ಮಾಹಿತಿ ಪಡೆಯಲು ಹೈಕಮಾಂಡ್ ನನ್ನನ್ನು ಕರೆಸಿಕೊಳ್ಳುತ್ತಿದ್ದು, ನಾಳೆ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿ ಎಲ್ಲಾ ದಾಖಲೆ ಒದಗಿಸುತ್ತೇನೆ. ಅದಾದ ಬಳಿಕ ಹೈಕಮಾಂಡ್ ಸೂಚನೆಯಂತೆ ನಾನು ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

  • ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ – ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್ ಪಾಟೀಲ್ ರಾಜೀನಾಮೆ

    ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ – ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್ ಪಾಟೀಲ್ ರಾಜೀನಾಮೆ

    ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ (B.R Patil) ರಾಜೀನಾಮೆ ನೀಡಿದ್ದಾರೆ.

    ಶುಕ್ರವಾರ ಸಂಜೆ ಫ್ಯಾಕ್ಸ್ ಮೂಲಕ ಸಿದ್ದರಾಮಯ್ಯ (Siddaramaiah) ಅವರಿಗೆ ಬಿ.ಆರ್ ಪಾಟೀಲ್ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಈ ಹಿಂದೆ ಅನುದಾನದ ವಿಚಾರದಲ್ಲಿ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

    40 ವರ್ಷದ ಜನತಾ ಪರಿವಾರದ ನಂಟು ಹೊಂದಿದ್ದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ್ದರು ಎಂಬ ಕಾರಣಕ್ಕೆ ಅವರು ಸಹ ಕಾಂಗ್ರೆಸ್‍ಗೆ ಸೇರಿದ್ದರು.

    ಈ ಬಾರಿ ಅಳಂದ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಸಹಾ ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದರು. ಇದಾದ ಬೆನ್ನಲ್ಲೇ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನ ಹೊಂದಿದ್ದರು. ಸಚಿವ ಸ್ಥಾನ ವಂಚಿತರಾದ ನಂತರ ಆಗಾಗಾ ಬಹಿರಂಗವಾಗಿ ಬೇಸರ ಹೊರಹಾಕುತ್ತಿದ್ದರು.

    ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಿದ ನಂತರ ತಣ್ಣಗಾಗಿದ್ದ ಅವರು, ಶಾಸಕರ ಅನುದಾನದ ಬಗ್ಗೆ ಅಸಮಾಧಾನ ಹೊಂದಿದ್ದರು. ಈಗ ಏಕಾಏಕಿ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

  • ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ: ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್

    ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ: ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್

    ಹುಬ್ಬಳ್ಳಿ: ಸಿದ್ದರಾಮಯ್ಯ ಅವರು 5 ವರ್ಷ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ? ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಎಂದು ತಿಳಿಸಿದರು.

    ದೊಡ್ಡ ಕನಸನ್ನು ಕಂಡು ಬಡವರ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡಾಗ ಭೌತಿಕ ಅಭಿವೃದ್ಧಿಗೆ ಹೊಡೆತ ಬೀಳುತ್ತೆ. ಈ ಬಾರಿಯ ಬಜೆಟ್‌ನಲ್ಲಿ ಗ್ಯಾರಂಟಿಯಿಂದ ಆರ್ಥಿಕ ಹೊರೆ ಆಗದಂತೆ ಹೊಸ ಆರ್ಥಿಕ ನೀತಿ ಸಿಎಂ ನೀಡ್ತಾರೆ. ನಮಗೆ ಮೊದಲೇ ಗೊತ್ತಿತ್ತು. ಇಷ್ಟು ಖರ್ಚು ಆಗುತ್ತೆ ಅಂತಾ. ಆರ್ಥಿಕ ಸಮಸ್ಯೆ ನಮಗೆ ಮಾತ್ರವಲ್ಲಾ ಎಲ್ಲಾ ರಾಜ್ಯಗಳಿಗಿದೆ. ಸಮಸ್ಯೆ ಆಗುತ್ತಿದೆ ಸ್ವಲ್ಪ ಹೊರೆ ಆಗುತ್ತೆ. ದೊಡ್ಡ ಸಮಸ್ಯೆಗೆ ಕೈ ಹಾಕಿದಾಗ ಸ್ವಲ್ಪ ಸಮಸ್ಯೆ ಉದ್ಭವ ಆಗುತ್ತೆ. ಕಲ್ಯಾಣ ರಾಜ್ಯದ ಪರಿಕಲ್ಪನೆ ಕಾಣುತ್ತಿದ್ದೇವೆ. ಎಲ್ಲರಿಗೂ ಸಮಪಾಲು ಸಮಬಾಳು. ಐದು ಗ್ಯಾರಂಟಿಗಳು ಬಹಳಷ್ಟು ಯಶಸ್ವಿಯಾಗಿ ಅನುಷ್ಠಾನ ಆಗುತ್ತಿವೆ. ಇದರಿಂದ ಬಹಳಷ್ಟು ರಾಜಕೀಯ ಲಾಭ ಆಗುತ್ತಿದೆ. ನಮ್ಮ ಕಾಪಿಯನ್ನೇ ಮೋದಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ಇದರಲ್ಲಿ ಯಾವುದೇ ಅನುಮಾನ ಬೇಡ. ಬಿಪಿಎಲ್ ಕಾರ್ಡ್ ವಿವಾದ ಬಿಜೆಪಿ ಹುಟ್ಟಿಸಿದ ಭಯ. ಆದರೆ ಯಾವುದೇ ಗ್ಯಾರಂಟಿ ನಿಲ್ಲೋದಿಲ್ಲಾ. ಇದನ್ನು ಪರಿಹಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಮೂರು ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ. ಎಲ್ಲಾ ಹಗರಣಗಳು ಕಲ್ಪನೆ. ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ. ಹಗರಣಗಳು ಬರೀ ನಮ್ಮ ಕಾಲದಲ್ಲಿ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲಿ ಆಗಿವೆ. ವಕ್ಫ್ ಬೋರ್ಡ್ ವಿಚಾರವಾಗಿ ಬಿಜೆಪಿ ಸಹ ನೋಟಿಸ್ ನೀಡಿತ್ತು. ಇದು ದುರುದ್ದೇಶದಿಂದ ನಮ್ಮ ಸರ್ಕಾರಕ್ಕೆ ಗೂಬೆ ಕೂರಿಸಬೇಕು, ಕೆಟ್ಟ ಹೆಸರು ತರಬೇಕು ಅಂತಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿಯವರು ಒಂದಾಗಿ ವಕ್ಫ್ ಬೋರ್ಡ್ ಜನಜಾಗೃತಿ ಮಾಡಲಿ, ಅವರಲ್ಲಿಯೇ ಒಡಕಿದೆ. ನಮ್ಮನ್ನೇನು ನೋಡ್ತಾರೆ. ಇನ್ನೂ ಎಷ್ಟು ಬಣ ಇರುತ್ತೆ ಗೊತ್ತಿಲ್ಲ. ಯರ‍್ಯಾರು ದೆಹಲಿಯಲ್ಲಿ ಕುಳಿತು ಯರ‍್ಯಾರಿಗೆ ಆಪರೇಟಿಂಗ್ ಮಾಡತ್ತಿದ್ದಾರೋ. ಯಾರ‍್ಯಾರದು ಕೈಚಳಕ ಎಲ್ಲೆಲ್ಲಿದೆಯೋ ಗೊತ್ತಿಲ್ಲ. ಮುರಳಿ ಮನೋಹರ ಜೋಶಿ ಅಂತಹವರನ್ನೇ ಮೂಲೆಗುಂಪು ಮಾಡಿದರು. ಇವರೆಲ್ಲಾ ಯಾವ ಲೆಕ್ಕ ಎಂದು ಟಾಂಗ್ ಕೊಟ್ಟರು.

  • ಶಾಸಕರ ಚೇಲಾಗಳ ಕಾಮದಾಟ ಪ್ರಸಾರ: ಪಬ್ಲಿಕ್ ಟಿವಿಗೆ ಬಿ.ಆರ್.ಪಾಟೀಲ್ ಧಮ್ಕಿ

    ಶಾಸಕರ ಚೇಲಾಗಳ ಕಾಮದಾಟ ಪ್ರಸಾರ: ಪಬ್ಲಿಕ್ ಟಿವಿಗೆ ಬಿ.ಆರ್.ಪಾಟೀಲ್ ಧಮ್ಕಿ

    ಕಲಬುರಗಿ: ಇಂದು ಬೆಳಗ್ಗೆ ತಮ್ಮ ಮಾಜಿ ಪಿಎ ದೇವೆಂದ್ರ ಎಂಬವರ ಕಾಮದಾಟವನ್ನು ಟಿವಿಯಲ್ಲಿ ವರದಿ ಪ್ರಸಾರ ಮಾಡಿದಕ್ಕೆ ಕೆಜಿಪಿ ಪಕ್ಷದ ಆಳಂದ ಶಾಸಕ ಬಿ.ಆರ್.ಪಾಟೀಲ್ ಪಬ್ಲಿಕ್ ಟಿವಿಗೆ ಧಮ್ಕಿ ಹಾಕಿದ್ದಾರೆ.

    ಪಬ್ಲಿಕ್ ಟಿವಿಯ ವರದಿಗಾರನಿಗೆ ಮಾನ ಮರ್ಯಾದೆ ಬಿಟ್ಟು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ನಮ್ಮ ಪಬ್ಲಿಕ್ ಟಿವಿ ವರದಿಗಾರ ಪ್ರವೀಣ್ ಜೊತೆ ಫೋನಿನಲ್ಲಿ ಮಾತನಾಡುವಾಗ ನಾನೇನು ನಿಮ್ಮ ಹೆಂಡ್ತಿ ಹಾಗೂ ಅವರ ಹೆಂಡ್ತಿಯನ್ನು ಗುತ್ತಿಗೆ ತೊಗೊಂಡಿದ್ದೀನಾ? ಬೆಳಗ್ಗೆ ಏನು ನ್ಯೂಸ್ ಮಾಡಿದಿಯಾ? ಒಂದು ಗಂಟೆಯಲ್ಲಿ ನಾನು ಆಫೀಸಿಗೆ ಬರ್ತಿನಿ. ನೀನಿರಬೇಕು ಬಂದು ನೋಡ್ತಿನಿ ಎಂದು ಅವಾಜ್ ಹಾಕಿದ್ದಾರೆ.

    ಈ ವೇಳೆ ನಮ್ಮ ಪ್ರತಿನಿಧಿ ನನ್ನ ಹತ್ತಿರ ನೀವು ಶಿಫಾರಸ್ಸು ಮಾಡಿರುವ ಲೆಟರ್ ಇದೆ. ಬೇಕಾದರೆ ನಾನು ನಿಮಗೆ ಬೇಕಾದ್ರೆ ವಾಟ್ಸಪ್ ಮಾಡುತ್ತೇನೆ ಎಂದು ಹೇಳಿದ್ದಕೆ ಅವಾಚ್ಯ ಶಬ್ಧಗಳಿಂದ ಮಾತನಾಡುವ ಮೂಲಕ ತಮ್ಮ ನೈತಿಕ ಮಟ್ಟವನ್ನು ರಾಜ್ಯದ ಜನತೆಗೆ ತೋರಿಸಿದ್ದಾರೆ.

    ಬಿ.ಆರ್.ಪಾಟೀಲ್ ಅವರ ಮಾಜಿ ಪಿಎ ದೇವೆಂದ್ರ ಬಿರದಾರ ಎಂಬವರು ಕಲಬುರಗಿ ಶಾಲೆಯೊಂದರ ಸುನಿತಾ ಶಿಕ್ಷಕಿಯ ಜೊತೆಗಿನ ಪ್ರೇಮ ಪ್ರಸಂಗವನ್ನು ಇಂದು ಬೆಳಗ್ಗೆ ವರದಿ ಮಾಡಲಾಗಿತ್ತು. ಇದರಿಂದ ಕೋಪಗೊಂಡ ಬಿ.ಆರ್.ಪಾಟೀಲ್ ಪಬ್ಲಿಕ್ ಟಿವಿಯ ವರದಿಗಾರ ಪ್ರವೀಣ್ ರೆಡ್ಡಿಯವರಿಗೆ ಅವಾಜ್ ಹಾಕಿದ್ದಾರೆ.

    ಇದನ್ನೂ ಓದಿ: ಕಲಬುರಗಿ: ಕಾಮದಾಟಕ್ಕೆ ಪ್ರಿಯಕರನನ್ನ ಶಾಲೆಗೆ ಕರೆಸಿದ ಶಿಕ್ಷಕಿ!

    https://www.youtube.com/watch?v=VFCmV6wDYS8