Tag: b s yediuyurappa

  • ಡಿಸಿಎಂಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ‘ಹೈ’ ಲೆಕ್ಕಾಚಾರ ಏನು?

    ಡಿಸಿಎಂಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ‘ಹೈ’ ಲೆಕ್ಕಾಚಾರ ಏನು?

    ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟ ರಚನೆ ಜೊತೆಗೆ ಡಿಸಿಎಂ ಆಯ್ಕೆಯ ವಿಚಾರವೂ ಹೆಚ್ಚು ಸದ್ದು ಮಾಡುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ಡಿಸಿಎಂಗಳಾಗಿದ್ದ ಅಶ್ವತ್ಥ್ ನಾರಾಯಾಣ್, ಲಕ್ಷ್ಮಣ್ ಸವದಿ ಮತ್ತು ಗೋವಿಂದ ಕಾರಜೋಳ ಮತ್ತೆ ಮುಂದುವರಿಯುತ್ತಾರಾ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಈ ನಡುವೆ ಸಿಎಂ ಬೊಮ್ಮಾಯಿ ಮಾತ್ರ ಉಪ ಮುಖ್ಯಮಂತ್ರಿಗಳ ಆಯ್ಕೆಯ ಜವಬ್ದಾರಿಯನ್ನು ಬಿಜೆಪಿ ವರಿಷ್ಠರ ಹೆಗಲಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

    ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಡಿಸಿಎಂ ಆಯ್ಕೆಯನ್ನು ನೀವೇ ಮಾಡಿಕೊಳ್ಳಿ ಎಂದು ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮೂವರನ್ನು ಮುಂದುವರಿಸಬೇಕೋ ಅಥವಾ ಒಬ್ಬರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ನೀಡಬೇಕೋ ಅಥವಾ ಮೂವರನ್ನ ಮುಂದುವರಿಸೋದರ ಜೊತೆ ಮತ್ತೊಬ್ಬರನ್ನು ಸೇರಿಸಿಕೊಳ್ಳುವ ಕುರಿತು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಡಿಸಿಎಂ ಆಯ್ಕೆ ಪ್ರಕ್ರಿಯೆಯಿಂದ ಹಿಂದೆ ಸರಿದಿರುವ ಬೊಮ್ಮಾಯಿ ಹೈಕಮಾಂಡ್ ಕೆಲ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಇಂದು ಅಥವಾ ನಾಳೆ ಸಂಪುಟ ರಚನೆ: ಸಿಎಂ ಬೊಮ್ಮಾಯಿ

    ಸಿಎಂ ಬೊಮ್ಮಾಯಿ ಸಲಹೆ: ಸದ್ಯ ಇರೋ ಮೂರು ಡಿಸಿಎಂ ಸ್ಥಾನಗಳನ್ನು ಮುಂದುವರಿಸಬಹುದು. ಒಕ್ಕಲಿಗ, ಎಸ್‍ಸಿ, ಲಿಂಗಾಯತ ಬದಲು ಒಕ್ಕಲಿಗ, ಎಸ್‍ಸಿ-ಎಸ್‍ಟಿಗೆ ಅವಕಾಶ ನೀಡಿ. ಗೋವಿಂದ ಕಾರಜೋಳ ಅವರನ್ನು ಮುಂದುವರಿಸಿ ಇಲ್ಲವಾದ್ರೆ ಅರವಿಂದ್ ಲಿಂಬಾವಳಿಗೆ ಆಯ್ಕೆ ಮಾಡಬಹುದು. ಒಕ್ಕಲಿಗ ಪೈಕಿ ಅಶ್ವತ್ಥ್ ನಾರಾಯಣ್, ಎಸ್‍ಟಿಯಿಂದ ಶ್ರೀರಾಮುಲುಗೆ ಅವಕಾಶ ನೀಡಬಹುದು ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ನೆರೆ ಸಂತ್ರಸ್ತರಿಗೆ ಬಿಡಿಗಾಸಿನ ಪರಿಹಾರ – 2 ವರ್ಷದ ಹಿಂದೆ 10 ಸಾವಿರ, ಈಗ ಕೇವಲ 3,800 ರೂ.

    ಹೈಕಮಾಂಡ್ ಲೆಕ್ಕಚಾರ ಏನು?
    ನಾಲ್ಕು ಡಿಸಿಎಂ ಹುದ್ದೆಗಳನ್ನು ಸ್ಥಾಪಿಸಿ, ಒಕ್ಕಲಿಗ, ಎಸ್‍ಸಿ, ಎಸ್‍ಟಿ ಮತ್ತು ಒಬಿಸಿ ನಾಯಕರಿಗೆ ಅವಕಾಶ ನೀಡುವುದು. ಗೋವಿಂದ ಕಾರಜೋಳ ಅಥವಾ ಅರವಿಂದ್ ಲಿಂಬಾವಳಿಗೆ ಆಯ್ಕೆ ಮಾಡುವುದು. ಒಕ್ಕಲಿಗ ಪೈಕಿ ಅಶ್ವಥ್ ನಾರಾಯಣ್, ಎಸ್‍ಟಿಯಿಂದ ಶ್ರೀರಾಮುಲು ಮತ್ತು ಒಬಿಸಿಯಿಂದ ಸುನಿಲ್ ಕುಮಾರ್ ಕಾರ್ಕಳಗೆ ಅವಕಾಶ ಕೊಡುವ ಕುರಿತು ಹೈಕಮಾಂಡ್ ತೀರ್ಮಾನಿಸಿದ್ದು, ಇಂದಿನ ಸಭೆ ಬಳಿಕ ಅಂತಿಮ ತೀರ್ಮಾನವಾಗಲಿದೆ. ಲಕ್ಷ್ಮಣ ಸವದಿ ಅವರಿಗೆ ಕೊಕ್ ನೀಡುವ ಸಾಧ್ಯತೆಗಳು ಹೆಚ್ಚಿವೆ.

  • Exclusive: ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಸಾಧ್ಯತೆ – ರಾಜಾಹುಲಿಗೆ ಹೈಕಮಾಂಡ್ ಸೂಚನೆ!

    Exclusive: ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಸಾಧ್ಯತೆ – ರಾಜಾಹುಲಿಗೆ ಹೈಕಮಾಂಡ್ ಸೂಚನೆ!

    – ಜುಲೈ 26 ಬಿಜೆಪಿಗೆ ಬಿಗ್ ಡೇ!

    ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದ ಎರಡನೇ ವರ್ಷದ ದಿನದಂದೇ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಎಕ್ಸ್ ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಜುಲೈ 26ರಂದು ರಾಜ್ಯಪಾಲರನ್ನು ಸಿಎಂ ಯಡಿಯೂರಪ್ಪ ಭೇಟಿ ಆಗಲಿದ್ದು, ಅವತ್ತೇ ತಾಂತ್ರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಅದೇ ದಿನದಂದು ಅಧಿಕಾರಿಗಳು, ಶಾಸಕರ ಜೊತೆ ಫೋಟೋ ಸೆಷನ್ ಗೂ ಈಗಾಗಲೇ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಂದೇ ಅಧಿಕೃತವಾಗಿ ರಾಜೀನಾಮೆ ನೀಡಿ, ಆಗಸ್ಟ್ ಮೊದಲ ವಾರದವರೆಗೂ ಆಕ್ಟಿಂಗ್ ಸಿಎಂ ಆಗಿ ಮುಂದುವರಿಯುವ ಸಾಧ್ಯತೆಗಳಿವೆ. ಎರಡನೇ ವರ್ಷದ ಸಂಭ್ರಮದ ದಿನದಂದೇ ರಾಜೀನಾಮೆ ನೀಡಬೇಕೆಂದು ಹೈಕಮಾಂಡ್ ಸೂಚನೆ ನೀಡಿರುವ ಬಗ್ಗೆ ತಿಳಿದು ಬಂದಿದೆ.

    ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಹ ಯಡಿಯೂರಪ್ಪನವರ ರಾಜೀನಾಮೆ ಫಿಕ್ಸ್ ಎಂದು ಹೇಳಿತ್ತು. ರಾಜೀನಾಮೆ ಪ್ರಕ್ರಿಯೆ ಆರಂಭವಾಗಿರುವ ಕುರಿತ ಮಾತುಗಳು ಆಡಿಯೋದಲ್ಲಿವೆ. ಮುಂದಿನ ಸಿಎಂ ಯಾರು ಆಗ್ತಾರೆ ಅನ್ನೋದರ ಬಗ್ಗೆ ಕೆಲ ಹೆಸರುಗಳು ಮುನ್ನಲೆಗೆ ಬಂದಿವೆ. ಈ ಲಿಸ್ಟ್ ನಲ್ಲಿಯೇ ಮೂವರ ಹೆಸರುಗಳು ಅಂತಿಮೆ ಆಗಿವೆ ಅಂತಾನೂ ಚರ್ಚೆಗಳು ಕಮಲ ಪಡಸಾಲೆಯಲ್ಲಿ ನಡೆಯುತ್ತಿವೆ.

    ಸಿಎಂ ಸ್ಥಾನಕ್ಕೆ ಇವರೇನಾ..?
    1. ಪ್ರಹ್ಲಾದ್ ಜೋಶಿ, ಕೇಂದ್ರ ಮಂತ್ರಿ, ಹುಬ್ಬಳ್ಳಿ-ಧಾರವಾಡ ಸಂಸದ
    2. ಅರವಿಂದ್ ಬೆಲ್ಲದ್, ಶಾಸಕ, ಹುಬ್ಬಳ್ಳಿ-ಧಾರವಾಡ ಪಶ್ಚಿಮ
    3. ಮುರುಗೇಶ್ ನಿರಾಣಿ, ಸಚಿವ, ಬೀಳಗಿ ಶಾಸಕ
    4. ಸಿ.ಟಿ. ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ
    5. ಅಶ್ವಥ್ ನಾರಾಯಣ, ಉಪಮುಖ್ಯಮಂತ್ರಿ, ಮಲ್ಲೇಶ್ವರಂ ಶಾಸಕ
    6. ಬಸನಗೌಡಪಾಟೀಲ್ ಯತ್ನಾಳ್, ವಿಜಯಪುರ ನಗರ ಶಾಸಕ

    ಆಡಿಯೋದಲ್ಲಿ ಏನಿದೆ?:
    ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ. ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಚಾನ್ಸ್ ಇದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.

    ಸಿಎಂ ಬದಲಾವಣೆ ಜೊತೆಗೆ ಸಂಪುಟ ಪುನಾರಚನೆ ಆಗಲಿದ್ದು, ಹಿರಿಯ ಸಚಿವರಿಗೆ ಕೊಕ್ ನೀಡಲಾಗುತ್ತೆ. ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಸಂಪುಟದಿಂದ ಕೈ ಬಿಡುವ ಸುಳಿವನ್ನು ಆಡಿಯೋ ನೀಡಿದೆ.

  • ರಾಜ್ಯದಲ್ಲೂ ಸಚಿವ ಸಂಪುಟ ಪುನಾರಚನೆಗೆ ಮುಂದಾಗುತ್ತಾ ಬಿಜೆಪಿ ಹೈಕಮಾಂಡ್?

    ರಾಜ್ಯದಲ್ಲೂ ಸಚಿವ ಸಂಪುಟ ಪುನಾರಚನೆಗೆ ಮುಂದಾಗುತ್ತಾ ಬಿಜೆಪಿ ಹೈಕಮಾಂಡ್?

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗದ್ದಲದ ನಡುವೆಯೇ ಸಂಪುಟ ಪುನಾರಚನೆ ಬಿಜೆಪಿ ಹೈಕಮಾಂಡ್ ಮುಂದಾಗುತ್ತಾ ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿವೆ.

    ಬಿಜೆಪಿಯ ರೆಬೆಲ್ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಹೆಚ್.ವಿಶ್ವನಾಥ್ ಮತ್ತು ಸಿ.ಪಿ.ಯೋಗೇಶ್ವರ್ ಪರೋಕ್ಷವಾಗಿ ನಾಯಕತ್ವ ಬದಲಾವಣೆಯ ಮಾತುಗಳನ್ನಾಡುತ್ತಿದ್ದಾರೆ. ಒಂದು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡದಿದ್ರೆ ಸಂಪುಟ ಪುನಾರಚನೆಗೆ ಮುಂದಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಆಗಸ್ಟ್ ನಲ್ಲಿ ಸಂಪುಟ ಪುನಾರಚೆನೆ ಮೂಲಕ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳುವ ತಂತ್ರಕ್ಕೆ ಕಮಲ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸುಮಾರು 12ಕ್ಕೂ ಹೆಚ್ಚು ನಾಯಕರಿಗೆ ಕೊಕ್ ಕೊಟ್ಟು, ಪಕ್ಷ ನಿಷ್ಠರು ಮತ್ತು ರೆಬೆಲ್ ಗಳು, ವಲಸಿಗರನ್ನು ತರುವುದು. ಆ ಮೂಲಕ ಎಲ್ಲರನ್ನೂ ಸಮಧಾನಪಡಿಸಿ ಗೊಂದಲ ಬಗೆಹರಿಸೋದು ಬಿಜೆಪಿ ಪ್ಲಾನ್ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

    ಇತ್ತ ಮೈತ್ರಿ ಸರ್ಕಾರ ಪತನಗೊಳಿಸಿ ಕಮಲ ಬಾವುಟ ಹಿಡಿದ ಹಲವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ರೆ, ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಸಹ ಸಂಪುಟ ಸೇರುವ ಪ್ರಯತ್ನಕ್ಕೆ ಮುಂದಾದಂತೆ ಕಾಣಿಸುತ್ತಿದೆ. ಆರ್.ಆರ್.ನಗರ ಶಾಸಕ ಮುನಿರತ್ನ ಶೀಘ್ರದಲ್ಲೇ ಸಚಿವರಾಗ್ತಾರೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್