Tag: B.S yedyurappa

  • ಎಚ್ಚರ ಎಂದು ಸಿಎಂರನ್ನು ತಬ್ಬಿಕೊಂಡು ಮುತ್ತಿಟ್ಟ ವಿನಯ್ ಗುರೂಜಿ

    ಎಚ್ಚರ ಎಂದು ಸಿಎಂರನ್ನು ತಬ್ಬಿಕೊಂಡು ಮುತ್ತಿಟ್ಟ ವಿನಯ್ ಗುರೂಜಿ

    ಚಿಕ್ಕಮಗಳೂರು: ಅಧಿಕಾರಕ್ಕೆ ಯಾವುದೇ ಸಂಚಕಾರ ಬಾರದಂತಿರಲಿ, ಉಳಿದ ಮೂರುವರೇ ವರ್ಷ ನಾನೇ ಸಿಎಂ ಆಗಿರಲೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಲ್ಕೈದು ಹೋಮ-ಹವನ, ಯಾಗ-ಯಜ್ಞವನ್ನು ಮಾಡಿದ್ದಾರೆ ಎನ್ನಲಾಗಿದೆ. ಆದರೆ ಯಜ್ಞದ ಬೆನ್ನಲ್ಲೇ ಸಿಎಂಗೆ ಅವಧೂತ ವಿನಯ್ ಗುರೂಜಿ ಎಚ್ಚರದಿಂದ ಹೆಜ್ಜೆ ಇಡಿ ಎಂದಿರೋದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ಅವಧೂತ ವಿನಯ್ ಗುರೂಜಿಯ ಸ್ವರ್ಣ ಪೀಠಿಕೇಶ್ವರಿ ಆಶ್ರಮದಲ್ಲಿ ಸಿಎಂ ಯಡಿಯೂರಪ್ಪ, ಶತರುದ್ರಯಾಗ, ವಿಷ್ಣು ಸಹಸ್ರ ನಾಮ, ಮೃತ್ಯುಂಜಯ ಹೋಮ, ಲಲಿತ ಸಹಸ್ರನಾಮ ಹಾಗೂ ಗಣಪತಿ ಹೋಮ ನಡೆಸಿದರು.

    ವಿನಯ್ ಗುರೂಜಿಯ ಹೋಮದ ಮುಂದಾಳತ್ವ ವಹಿಸಿ, 45 ಪುರೋಹಿತರ ನೇತೃತ್ವದಲ್ಲಿ ಸುಮಾರು ಆರು ಗಂಟೆ ಹೋಮ-ಹವನ ಮಾಡಿಸಿದರು. ಆದರೆ ಹೋಮ ಮುಗಿದು ಸಿಎಂ ಹೊರಡುತ್ತಿದ್ದಂತೆ, ಕಾರಿನ ಬಳಿ ಬಂದ ವಿನಯ್ ಗುರೂಜಿ, ಸಿಎಂ ಯಡಿಯೂರಪ್ಪಗೆ ತಬ್ಬಿಕೊಂಡು ನೆತ್ತಿಗೆ ಮುತ್ತಿಟ್ಟಿರೋದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೂ ಮೊದಲು ಎಚ್ಚರ, ಎಚ್ಚರದ ಹೆಜ್ಜೆ ಇಡು ಎಂದು ಸಲಹೆ ನೀಡಿದರು.

    ಇದರ ಬೆನ್ನೆಲ್ಲೇ ಹೀಗೆ ಬಾಚಿ ತಬ್ಬಿ ಮುತ್ತಿಕ್ಕಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಯಡಿಯೂರಪ್ಪ ಅವರಿಗೆ ಅಧಿಕಾರ ಸಲೀಸಾಗಿಲ್ವಾ, ಅವರ ಮುಖ್ಯಮಂತ್ರಿ ಹಾದಿಯಲ್ಲೂ ಕಲ್ಲು-ಮುಳ್ಳುಗಳಿದ್ಯಾ, ಬಿಜೆಪಿ ಆಂತರಾಳದಲ್ಲಿ ಬಿಎಸ್‍ವೈ ಬಗ್ಗೆ ಏನಿದ್ಯೋ, ಅವಧೂತರಿಗೆ ಎಲ್ಲವೂ ಗೊತ್ತಿದ್ಯಾ ಎಂಬ ಹಲವು ಪ್ರಶ್ನೆಗಳು ಉದ್ಭವವಾಗಿವೆ.

    ವಿನಯ್ ಗುರುಜಿ ಎಚ್ಚರ ಎಂದಿದ್ದು ಉತ್ತರದ ನೆರೆ, ದಕ್ಷಿಣದ ಮಳೆಯ ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡುವುದರಲ್ಲಿ ಎಚ್ಚರ ಎಂದರೋ ಅಥವಾ ನಿಮ್ಮ ಸಿಎಂ ಹಾದಿಯಲ್ಲೇ ಅನಾನುಕೂಲಗಳಿವೆ ಎಚ್ಚರ ಎಂದರೋ ಗೊತ್ತಿಲ್ಲ. ಆದರೆ ಎಚ್ಚರ ಎಂದು ತಬ್ಬಿಕೊಂಡು ನೆತ್ತಿಗೆ ಮುತ್ತಿಕ್ಕಿರೋದು ಮಾತ್ರ ಬಿಎಸ್‍ವೈ ಆತಂಕಕ್ಕಂತೂ ದೂಡಿದೆ.

  • ಮೋದಿ, ಬಿಎಸ್‍ವೈಯನ್ನು ಮತ್ತೆ ಹೊಗಳಿ ಗೌಡ್ರ ಕುಟುಂಬದ ವಿರುದ್ಧ ಜಿಟಿಡಿ ಗುಡುಗು

    ಮೋದಿ, ಬಿಎಸ್‍ವೈಯನ್ನು ಮತ್ತೆ ಹೊಗಳಿ ಗೌಡ್ರ ಕುಟುಂಬದ ವಿರುದ್ಧ ಜಿಟಿಡಿ ಗುಡುಗು

    ಮೈಸೂರು: ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪರನ್ನ ಮತ್ತೆ ಹೊಗಳಿದ್ದಾರೆ. ಅಲ್ಲದೆ ಮಂತ್ರಿ ಸ್ಥಾನ ತೆಗೆದುಕೊಳ್ಳೋಕ್ಕೆ 1 ತಿಂಗಳು ಸಿಟ್ಟು ಮಾಡಿಕೊಂಡು ಸಾಕಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ಗುಡುಗಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಟಿಡಿ, ನರೇಂದ್ರ ಮೋದಿ ಅವರು ಈ ದೇಶಕ್ಕೆ ಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅವರು ದೇಶದ ವ್ಯಕ್ತಿ ಹಾಗೂ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಅವರು ಕಾಶ್ಮೀರ ಸಮಸ್ಯೆಯನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದೀರಿ. ಅವರು ದೇಶದ ಅಭಿವೃದ್ಧಿಯತ್ತ ನೋಡುತ್ತಿದ್ದಾರೆ. ಅವರ ಬಗ್ಗೆ ಒಳ್ಳೆಯ ಮಾತನಾಡಿದರೆ ಬಿಜೆಪಿ ಎಂದು ಹೇಳುತ್ತಾರೆ. ಆದರೆ ಮೋದಿ ಅವರು ಈ ದೇಶದ ವ್ಯಕ್ತಿ, ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರ ಬಗ್ಗೆ ಒಳ್ಳೆಯದಾಗಿ ಮಾತನಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಬಂದ ಮೇಲೆ ಚೆನ್ನಾಗಿ ಮಳೆ ಬೆಳೆ ಆಗಿದೆ- ಬಿಎಸ್‍ವೈನ್ನು ಹಾಡಿಹೊಗಳಿದ ಜಿಟಿಡಿ

    ನಾನು ಯಡಿಯೂರಪ್ಪ ಅವರ ಬಗ್ಗೆ ಏಕೆ ಮಾತನಾಡುತ್ತೇನೆ ಎಂದರೆ, ನಾನು 36 ಸಾವಿರ ಮತಗಳ ಅಂತರದಲ್ಲಿ ಗೆದ್ದು ಮಂತ್ರಿ ಸ್ಥಾನ ತೆಗೆದುಕೊಳ್ಳಲು ಒಂದು ತಿಂಗಳು ಮುನಿಸು ಕಟ್ಟಿಕೊಂಡಿದೆ. ಆದರೆ ಯಡಿಯೂರಪ್ಪ ಅವರು ನಾನು ಸೋತಾಗ ಮನೆಗೆ ಕರೆಸಿಕೊಂಡು ನೀನು ಆಗಬೇಕೆಂದು ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರು. ಗೃಹ ಮಂಡಳಿ ಅಧ್ಯಕ್ಷ ಆದಾಗ ಸೋಮಣ್ಣ ಅವರು ವಸತಿ ಸಚಿವರಾಗಿದ್ದರು. ಇದು ಕಾಕತಾಳಿಯ ಈಗ ಅವರೇ ಉಸ್ತುವಾರಿ ಸಚಿವರಾಗಿದ್ದಾರೆ. ಅದು ನನ್ನ ಹಾಗೂ ಅವರ ಸ್ನೇಹ ಎಂದು ಜಿ.ಟಿ ದೇವೇಗೌಡ ಅವರು ಹೇಳಿದರು.

  • ಸಿದ್ದಗಂಗಾ ಮಠಕ್ಕೆ ಸಿಎಂ ಭೇಟಿ – ಮಠದ ವತಿಯಿಂದ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ದೇಣಿಗೆ

    ಸಿದ್ದಗಂಗಾ ಮಠಕ್ಕೆ ಸಿಎಂ ಭೇಟಿ – ಮಠದ ವತಿಯಿಂದ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ದೇಣಿಗೆ

    ತುಮಕೂರು: ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದಿದ್ದಾರೆ.

    ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ 7ನೇ ತಿಂಗಳ ಪುಣ್ಯತಿಥಿ ಕಾರ್ಯಕ್ರಮ ಇತ್ತು. ಹಾಗಾಗಿ ಸಿಎಂ ಮಠಕ್ಕೆ ಧಿಡೀರ್ ಭೇಟಿ ನೀಡಿದ್ದಾರೆ. ಮೊದಲು ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ಬಳಿಕ ಹೊಸ ಮಠದಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಇದೇ ವೇಳೆ ಸಿದ್ದಗಂಗಾ ಮಠದ ವತಿಯಿಂದ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ದೇಣಿಗೆ ಚೆಕ್ ಸಿಎಂಗೆ ಹಸ್ತಾಂತರಿಸಲಾಯಿತು.

    ಸಿಎಂ ಆಗಮನ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ ಶಿವಕುಮಾರ ಶ್ರೀಗಳ ಕಚೇರಿ ತೆರೆಯಲಾಗಿತ್ತು. ಈ ಕಚೇರಿಯಲ್ಲೇ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಿಎಂ ಯಡಿಯೂರಪ್ಪ ಭೇಟಿ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನಕ್ಕೆ ಬಂದಿದ್ದೇನೆ. ಅವರ ಆಶೀರ್ವಾದದಿಂದ ಮತ್ತೆ ಈ ರಾಜ್ಯದ ಸಿಎಂ ಆಗುವ ಸೌಭಾಗ್ಯ ಸಿಕ್ಕಿದೆ. ನಾನು ಸಿಎಂ ಆಗಿದ್ದನ್ನು ಅವರು ನೋಡಿದರೆ ಎಷ್ಟು ಸಂತಸ ಪಡುತ್ತಿದ್ದರು. ಅವರ ಸಂತಸ ನೋಡುವ ಸೌಭಾಗ್ಯ ನನಗೆ ಇಲ್ಲ. ಆದರೂ ಸಹ ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದು ಶಿವಕುಮಾರ ಶ್ರೀಗಳನ್ನು ನೆನಪಿಸಿಕೊಂಡರು.

    ಉಮೇಶ್ ಕತ್ತಿ, ಹೆಚ್‍ಡಿಕೆ ಭೇಟಿ ವಿಚಾರದಲ್ಲಿ ಮಾತನಾಡಿದ ಸಿಎಂ, ಅದರಲ್ಲಿ ಸತ್ಯಾಂಶ ಇಲ್ಲ, ಮಂಗಳವಾರ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ,  ಜೊತೆ ನಾವು ಒಂದು ಗಂಟೆ ಕುಳಿತು ಮಾತನಾಡಿದ್ದೇವೆ. ಅವರಿಗೆ ಅವಕಾಶ ಸಿಗಬೇಕು ಎನ್ನುವುದು ನಮ್ಮ ಮನಸ್ಸಿನಲ್ಲಿದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ನೂತನ ಸಿಎಂ ಯಡಿಯೂರಪ್ಪಗೆ ಶುಭ ಕೋರಿದ ಸುಧಾ ಮೂರ್ತಿ

    ನೂತನ ಸಿಎಂ ಯಡಿಯೂರಪ್ಪಗೆ ಶುಭ ಕೋರಿದ ಸುಧಾ ಮೂರ್ತಿ

    ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಅವರು ಇಂದು ಬೆಳಗ್ಗೆ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದಾರೆ.

    ಸುಧಾ ಮೂರ್ತಿ ಅವರು ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶುಭ ಕೋರಿದರು. ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಪುತ್ರ ಬಿ.ವೈ ವಿಜಯೇಂದ್ರ ಮೊದಲಾದವರು ಉಪಸ್ಥಿತರಿದ್ದರು.

    ಇದೇ ವೇಳೆ ಯಡಿಯೂರಪ್ಪ ಅವರು ಸುಧಾ ಮೂರ್ತಿ ಅವರ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಅವರು ಇಂದು ಬೆಳಿಗ್ಗೆ ನನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶುಭ ಕೋರಿದರು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಸಹ ಸುಧಾಮೂರ್ತಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡು ಟ್ವೀಟ್ ಮಾಡಿದೆ.

  • ಬಿಎಸ್‍ವೈ ಸಿಎಂ ಆಗಲಿ ಎಂದು ಶೋಭಾ ಕರಂದ್ಲಾಜೆಯಿಂದ ವಿಶೇಷ ಪೂಜೆ

    ಬಿಎಸ್‍ವೈ ಸಿಎಂ ಆಗಲಿ ಎಂದು ಶೋಭಾ ಕರಂದ್ಲಾಜೆಯಿಂದ ವಿಶೇಷ ಪೂಜೆ

    ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶೋಭಾ ಅವರು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಮದ್ದೂರಮ್ಮ ಸನ್ನಿಧಿಗೆ ಆಗಮಿಸಿದ್ದಾರೆ. ಅಲ್ಲದೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಲಿ ಎಂದು ಮದ್ದೂರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ವಿಶ್ವಾತ ಮತ ಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿ ಎಂದು ಶೋಭಾ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಶೋಭಾ ಅವರು ಮದ್ದೂರಮ್ಮ ದೇವಸ್ಥಾನಕ್ಕೆ ಬರುವ ಮೊದಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿ ಚಾಮುಂಡೇಶ್ವರಿ ದೇವಿಯಲ್ಲಿ ಬೇಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಲ್ಲಿಯವರೆಗೆ ಈ ರೀತಿ ತಾಯಿಗೆ ಯಾವ ಬೇಡಿಕೆಯನ್ನೂ ಇಟ್ಟಿರಲಿಲ್ಲ. ರಾಜ್ಯದಲ್ಲಿ ಜನವಿರೋಧಿ, ಶಾಸಕರ ವಿರೋಧಿ ಸರ್ಕಾರ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

    ಇತ್ತ ಯಡಿಯೂರಪ್ಪ ಅವರು ನಯಾ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಎಸ್‍ವೈ ಕೊರಳಲ್ಲಿ ಹಾಗೂ ಕೈಯಲ್ಲಿ ರುದ್ರಾಕ್ಷಿ ಧರಿಸಿದ್ದಾರೆ. ಅಲ್ಲದೆ ದೇವಸ್ಥಾನದಲ್ಲಿ ಕೊಡುವ ದಾರಗಳನ್ನು ಕೈಗೆ ಕಟ್ಟಿಕೊಂಡಿದ್ದಾರೆ. ಜೊತೆಗೆ ನೆತ್ತಿಯ ಮೇಲೆ ಕಪ್ಪು ಬೊಟ್ಟು ಹಾಕಿ ಸದನಕ್ಕೆ ಆಗಮಿಸಿದ್ದಾರೆ.

  • ಬಿಎಸ್‍ವೈ ಸಿಎಂ ಆಗಲಿ ಎಂದು ಮಂಗಳವಾರ ಸ್ವಗ್ರಾಮದಲ್ಲಿ ವಿಶೇಷ ಪೂಜೆ

    ಬಿಎಸ್‍ವೈ ಸಿಎಂ ಆಗಲಿ ಎಂದು ಮಂಗಳವಾರ ಸ್ವಗ್ರಾಮದಲ್ಲಿ ವಿಶೇಷ ಪೂಜೆ

    ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಮಂಗಳವಾರ ಅವರ ಸ್ವಗ್ರಾಮದಲ್ಲಿ ವಿಶೇಷ ಪೂಜೆ ನಡೆಯಲಿದೆ.

    ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮ ಮಾಜಿ ಸಿಎಂ ಬಿಎಸ್‍ವೈ ಅವರ ಹುಟ್ಟೂರು ಆಗಿದ್ದು, ಅಲ್ಲಿಯೇ ಹೋಮ, ಹವನ, ವಿಶೇಷ ಪೂಜೆ ನಡೆಯಲಿದೆ. ಗುರುವಾರ ಬೆಳಗ್ಗೆ ಎಂಟರಿಂದ ಬೂಕನಕೆರೆ ಗ್ರಾಮ ದೇವತೆ ಗೋಗಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಗಣಪತಿ ಹೋಮ ನಡೆಯಲಿದೆ.

    ಯಡಿಯೂರಪ್ಪ ಅವರು ಮನೆ ದೇವರು ಗವಿಮಠದ ಸ್ವಾತಂತ್ರ ಸಿದ್ಧಲಿಂಗೇಶ್ವರನಿಗೂ ವಿಶೇಷ ಪೂಜೆ ನಡೆಯಲಿದೆ. ಯಡಿಯೂರಪ್ಪ ಸೂಚನೆ ಮೇರೆಗೆ ಅವರ ಸಂಬಂಧಿಗಳ ನೇತೃತ್ವದಲ್ಲಿ ಈ ವಿಶೇಷ ಹೋಮ, ಹವನ ನಡೆಯಲಿದೆ.

    ಯಡಿಯೂರಪ್ಪ ಸಂಕಷ್ಟದಲ್ಲಿ ಇದ್ದಾಗ ಹಾಗೂ ಅಧಿಕಾರಕ್ಕೇರುವ ಸಂದರ್ಭದಲ್ಲಿ ಗೋಗಲಮ್ಮನಿಗೆ ಹೋಮ, ಪೂಜೆ ಸಲ್ಲಿಸುವುದು ವಾಡಿಕೆ ಆಗಿದೆ. ದೋಸ್ತಿ ಸರ್ಕಾರ ಪತನವಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಗಾದಿಗೇರಲು ಈ ಹೋಮ, ಹವನ ನಡೆಯಲಿದೆ.

  • ತಾತ್ಕಾಲಿಕವಾಗಿ ರಾಷ್ಟ್ರಪತಿ ಆಳ್ವಿಕೆಗೆ ಬಿಎಸ್‍ವೈ ರಾಜ್ಯಪಾಲರಿಗೆ ಮನವಿ ಸಾಧ್ಯತೆ

    ತಾತ್ಕಾಲಿಕವಾಗಿ ರಾಷ್ಟ್ರಪತಿ ಆಳ್ವಿಕೆಗೆ ಬಿಎಸ್‍ವೈ ರಾಜ್ಯಪಾಲರಿಗೆ ಮನವಿ ಸಾಧ್ಯತೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆ. ಅಲ್ಲದೆ ಯಡಿಯೂರಪ್ಪನವರು ಮತ್ತೊಮ್ಮೆ ರಾಜ್ಯಪಾಲರ ಭೇಟಿಗೆ ತೀರ್ಮಾನ ಮಾಡಿದ್ದಾರೆ.

    ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿ ಹದಗೆಟ್ಟಿದ್ದು, ಅದು ಸರಿ ಆಗುವವರೆಗೆ ತಾತ್ಕಾಲಿಕವಾಗಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಒಂದು ವೇಳೆ ರಾಜ್ಯಪಾಲರು, ರಾಷ್ಟ್ರಪತಿಗಳ ಆಳ್ವಿಕೆಗೆ ಶಿಫಾರಸ್ಸು ಮಾಡಿ, ಅದು ಜಾರಿಯಾದಲ್ಲಿ, ಮುಂದಿನ ಒಂದು ತಿಂಗಳಲ್ಲಿ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಮಂಡಿಸುವ ಸಾಧ್ಯತೆಗಳಿವೆ.

    ಸ್ಪೀಕರ್ ರಮೇಶ್ ಕುಮಾರ್ ವಿಳಂಬ ನೀತಿ ಖಂಡಿಸಿ ಬುಧವಾರ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸಂಖ್ಯಾಬಲವನ್ನು ತೋರಿಸಿದ್ದರು. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಬಿಎಸ್‍ವೈ, ಸಮ್ಮಿಶ್ರ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದ್ದಾರೆ. ಮೈತ್ರಿಗೆ ಬೆಂಬಲ ನೀಡಿದ್ದ ಪಕ್ಷೇತರ ಶಾಸಕರಿಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನಾವು ಬಹುಮತ ಹೊಂದಿದ್ದೇವೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದಿದ್ದರು.

    ಸರ್ಕಾರವೇ ಅಲ್ಪಮತಕ್ಕೆ ಕುಸಿದ ಕಾರಣ ಅಧಿವೇಶನ ಹೇಗೆ ನಡೆಸುತ್ತಾರೆ. ಸ್ಪೀಕರ್ ವಿಳಂಬ ನೀತಿಯನ್ನು ಅನುಸರಿಸಬಾರದು. ಸಿಎಂ ಸ್ಥಾನದಲ್ಲಿರಲು ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕತೆ ಇಲ್ಲ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಯಡಿಯೂರಪ್ಪ ಆಗ್ರಹಿಸಿದ್ದರು.

  • ಬಿಜೆಪಿಯಿಂದ ವಿಪರೀತ ಒತ್ತಡ ಬಂದಿದೆ: ಕೈ ಶಾಸಕ ರಾಜುಗೌಡ

    ಬಿಜೆಪಿಯಿಂದ ವಿಪರೀತ ಒತ್ತಡ ಬಂದಿದೆ: ಕೈ ಶಾಸಕ ರಾಜುಗೌಡ

    ಮಂಗಳೂರು: ಬಿಜೆಪಿಯಿಂದ ನನಗೆ ವಿಪರೀತ ಒತ್ತಡ ಬಂದಿದೆ ಎಂದು ಶೃಂಗೇರಿ ಕಾಂಗ್ರೆಸ್ ಶಾಸಕ ರಾಜು ಗೌಡ ಆಪರೇಶನ್ ಕಮಲದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ.

    ಶಾಸಕ ರಾಜು ಗೌಡ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ದೂರವಾಣಿ ಮೂಲಕ ರಾಜು ಗೌಡ ಅವರನ್ನು ಸಂಪರ್ಕಿಸಿದ್ದಾರೆ.

    ಈ ಬಗ್ಗೆ ರಾಜು ಗೌಡ ಮಾತನಾಡಿ, ರಾಜಕಾರಣದಲ್ಲಿ ಹಣ, ಅಧಿಕಾರ ಮುಖ್ಯ ಅಲ್ಲ. ಜನರಿಗೆ ಸೇವೆ ಮಾಡುವುದು ಮುಖ್ಯ. ನಾವು ಸೇವೆ ಮಾಡುವ ದೃಷ್ಟಿಯಿಂದ ರಾಜಕಾರಣಕ್ಕೆ ಬಂದಿದ್ದೇವೆ ಹೊರತು ಹಣ, ಅಧಿಕಾರಕ್ಕೆ ಬಂದಿಲ್ಲ. ಒಂದು ಪಕ್ಷದಲ್ಲಿ ನಾವು ಗೆದ್ದ ಮೇಲೆ ಆ ಪಕ್ಷದ ಋಣ ತೀರಿಸಬೇಕಿರುವುದು ನಮ್ಮ ಕರ್ತವ್ಯ. ಏಕೆಂದರೆ ನಮ್ಮನ್ನು ನಂಬಿ ಟಿಕೆಟ್ ನೀಡುತ್ತಾರೆ. ಟಿಕೆಟ್ ನೀಡಬೇಕು ಎಂದರೆ ಅವರಿಗೆ ಒತ್ತಡ ಇರುತ್ತದೆ. ಬಹಳಷ್ಟು ಆಕಾಂಕ್ಷಿಗಳು ಇರುತ್ತಾರೆ. ಅಂತಹದರಲ್ಲಿ ಅವರು ನಮ್ಮನ್ನು ಆಯ್ಕೆ ಮಾಡಿ ಟಿಕೆಟ್ ನೀಡುತ್ತಾರೆ.

    ನಾನು ಮೊದಲ ಬಾರಿಗೆ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನಸಭೆಗೆ ಹೋಗಿದ್ದೇನೆ. ನನ್ನನ್ನು ಮಲೆನಾಡ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿಯೂ ಮಾಡಿದ್ದಾರೆ. ನಾನು ಅಲ್ಲಿಯೂ ಕೂಡ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಸಿಎಂ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಡಿಸಿಎಂ ಎಲ್ಲರೂ ಅಭಿವೃದ್ಧಿ ಕೆಲಸಕ್ಕೆ ಸಹಕಾರ ನೀಡಿದ್ದಾರೆ. ಶಾಸಕರು ಚರ್ಚೆ ಮಾಡಿ ತೀರ್ಮಾನ ಮಾಡಬಹುದಿತ್ತು. ಆದರೆ ಅದನ್ನು ಬಿಟ್ಟು ಏಕಾಏಕಿಯಾಗಿ ರಾಜೀನಾಮೆ ನೀಡಿ ಸರ್ಕಾರವನ್ನು ಅಭದ್ರಗೊಳಿಸುವುದು ಪ್ರಜಾಪ್ರಭ್ವುತ ವ್ಯವಸ್ಥೆಯಲ್ಲಿ ಇದು ಸರಿಯಲ್ಲ ಎಂದರು.

    ನನಗೂ ಎಲ್ಲರಿಂದಲೂ ಸಾಕಷ್ಟು ಒತ್ತಡ ಬಂದಿದೆ. ನಾನು ಅವರ ಹೆಸರನ್ನು ಹೇಳಲು ಇಷ್ಟಪಡುವುದಿಲ್ಲ. ನನಗೆ ತಡೆಯೋಕ್ಕಾಗದಷ್ಟು ಒತ್ತಡ ನೀಡಿ ಆಮೀಷವೊಡ್ಡಿದ್ದರು. ಆದರು ಕೂಡ ನಾನು ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿದ್ದೇನೆ. ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ತ್ಯಾಗಿಮಯಿ. ಏಕೆಂದರೆ ಅವರಿಗೆ ಪ್ರಧಾನಿ ಆಗುವ ಅವಕಾಶ ಇತ್ತು. ಅವರು ಆರಾಮಾಗಿ ಪ್ರಧಾನಿ ಆಗಬಹುದಿತ್ತು. ಆ ಸಮಯದಲ್ಲಿ ವಿದೇಶಿ ಎಂದು ಹೇಳಿದ್ದ ಕಾರಣ ಸೋನಿಯಾ ತಮ್ಮ ಹುದ್ದೆಯನ್ನು ತ್ಯಾಗ ಮಾಡಿದ್ದರು. ಆಗ ಅವರು ಮನ್‍ಮೋಹನ್ ಸಿಂಗ್ ಅವರನ್ನು ಪ್ರಧಾನಿಯಾಗಿ ಮಾಡಿದ್ದರು ಎಂದು ರಾಜು ಗೌಡ ತಿಳಿಸಿದರು.

  • ಕಾನೂನು ಬದ್ಧ ರಾಜೀನಾಮೆಯನ್ನು ತಡ ಮಾಡ್ತಿರೋದು ಸರಿಯಲ್ಲ: ಬಿಎಸ್‍ವೈ

    ಕಾನೂನು ಬದ್ಧ ರಾಜೀನಾಮೆಯನ್ನು ತಡ ಮಾಡ್ತಿರೋದು ಸರಿಯಲ್ಲ: ಬಿಎಸ್‍ವೈ

    ಬೆಂಗಳೂರು: ಕಾನೂನು ಬದ್ಧವಾಗಿರುವ ರಾಜೀನಾಮೆಯನ್ನು ಸ್ಪೀಕರ್ ತಡ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಯಾವ ಶಾಸಕರ ರಾಜೀನಾಮೆ ಕಾನೂನು ಬದ್ಧವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೋ ಅದನ್ನು ತಕ್ಷಣ ಒಪ್ಪಿಕೊಳ್ಳುವುದು ಅವರ ಕರ್ತವ್ಯ. ಕಾನೂನು ಬದ್ಧ ಇಲ್ಲದಿರುವುದನ್ನು ಶಾಸಕರು ಬಂದು ಸರಿ ಮಾಡಿಕೊಡುತ್ತಾರೆ. ಆದರೆ ಕಾನೂನು ಬದ್ಧವಾಗಿರುವ ರಾಜೀನಾಮೆಯನ್ನು ತಡ ಮಾಡುತ್ತಿರುವುದು ಸರಿಯಲ್ಲ. ರಮೇಶ್ ಕುಮಾರ್ ಲೀಗಲ್ ಅಡ್ವೈಸರ್ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟು ಕಾನೂನು ಬದ್ಧವಾಗಿ ರಾಜೀನಾಮೆ ಸ್ವೀಕರಿಸಲಿ ಎಂದು ಒತ್ತಾಯಿಸಿದ್ದಾರೆ.

    ಸಚಿವ ಡಿಕೆ ಶಿವಕುಮಾರ್ ಅವರು ಸ್ಪೀಕರ್ ಕೊಠಡಿಗೆ ಹೋಗಿ ಶಾಸಕರೊಬ್ಬರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದಾರೆ. ಈ ಬಗ್ಗೆ ಸ್ಪೀಕರ್ ಏನೂ ಮಾತನಾಡಿಲ್ಲ. ಡಿಕೆಶಿ ಮುಂಬೈಗೆ ಹೋಗಿ ಸ್ನೇಹಿತನ ಮಾತನಾಡಿಸಲು ಅನುಮತಿ ನೀಡಿದ್ದರೆ ಮಾತನಾಡಲಿ, ಅದರಿಂದ ನಮಗೆ ಏನೂ ಅಭ್ಯಂತರ ಇಲ್ಲ. ಇದು ಡಿಕೆಶಿ ಹಾಗೂ ರಾಜೀನಾಮೆ ಕೊಟ್ಟ ಶಾಸಕರಿಗೆ ಸಂಬಂಧಪಟ್ಟ ವಿಷಯವಾಗಿದೆ. ಆದರೆ ಶಾಸಕನ ರಾಜೀನಾಮೆ ಪತ್ರ ಹರಿದು ಹಾಕಿದ್ದಕ್ಕೆ ಸ್ಪೀಕರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದರು.

    ಗಾಂಧಿಚೌಕ್‍ನಲ್ಲಿ ನಮ್ಮ 105 ಶಾಸಕರು ಸೇರಿ ಧರಣಿ ಮಾಡುತ್ತಿದ್ದೇವೆ. ಬಳಿಕ 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುತ್ತೇವೆ. ಆ ಮೊದಲು ನಾವು ರಾಜ್ಯಪಾಲರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

    ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿರುವ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ. ಈ ವೇಳೆ ಡಿಕೆಶಿ ಜೊತೆ ಮುಂಬೈ ಪೊಲೀಸರು ಮಾತುಕತೆ ನಡೆಸುವ ಮೂಲಕ ಭಾರೀ ಹೈಡ್ರಾಮವೇ ನಡೆಯುತ್ತಿದೆ.

  • ಆಪರೇಷನ್ ಕಮಲದ ಬ್ಯುಸಿಯಲ್ಲಿ ಬಿಎಸ್‍ವೈಯಿಂದ ಇಂದು ಹಳ್ಳಿಗಳತ್ತ ಯಾತ್ರೆ

    ಆಪರೇಷನ್ ಕಮಲದ ಬ್ಯುಸಿಯಲ್ಲಿ ಬಿಎಸ್‍ವೈಯಿಂದ ಇಂದು ಹಳ್ಳಿಗಳತ್ತ ಯಾತ್ರೆ

    ಬೆಂಗಳೂರು: ಒಂದು ಕಡೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ರೆಡಿಯಾಗಿದ್ದರೆ, ಇತ್ತ ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.

    ಮಳೆ ಆಗುವುದಕ್ಕೆ ಈಗ ಒಂದು ದಿನವಷ್ಟೇ ಬಾಕಿ ಇದೆ. ಅಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಇದರ ನಡುವೆ ಬಿಎಸ್ ಯಡಿಯೂರಪ್ಪ ಅವರಿಗೆ ಈಗ ಬರದ ನೆನಪಾದಂತಿದೆ.

    ಉತ್ತರ ಕರ್ನಾಟಕ ಭಾಗದಲ್ಲಿ 3 ದಿನಗಳ ಕಾಲ ಯಡಿಯೂರಪ್ಪ ಬರ ಅಧ್ಯಯನ ಕೈಗೊಂಡಿದ್ದಾರೆ. ಬಿಎಸ್‍ವೈ ಇಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯ ಬದಾಮಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುನಗುಂದ ತಾಲೂಕಿನಲ್ಲಿ ಬರ ಪರಿಶೀಲನೆ ಮಾಡಿದ ಬಳಿಕ ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

    ಶನಿವಾರ ಕೊಪ್ಪಳ, ರಾಯಚೂರಿನ ಲಿಂಗಸುಗೂರಿನಲ್ಲಿ ಪರಿಶೀಲನೆ ಮಾಡಲಿದ್ದಾರೆ. ಜೂನ್ 9ರಂದು ಗುರುಮಿಠಕಲ್ ಕ್ಷೇತ್ರದಲ್ಲಿ ಬರ ಅಧ್ಯಯನ ಮಾಡಿ ವಾಪಸ್ಸಾಗಲಿದ್ದಾರೆ.