Tag: b.t.lalitha nayak

  • ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್‌ಗೆ ಖಾದರ್ ತಿರುಗೇಟು

    ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್‌ಗೆ ಖಾದರ್ ತಿರುಗೇಟು

    ಬೆಂಗಳೂರು: ದೈವ ನರ್ತಕರಿಗೆ ಸರ್ಕಾರ (Government) ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (BT Lalitha Nayak) ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ (UT Khader) ತೀವ್ರವಾಗಿ ಖಂಡಿಸಿದ್ದಾರೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ (Karavali) ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಂದಿ ಬಾಕ್ಸಾಫೀಸ್‌ನಲ್ಲಿ ಅಬ್ಬರಿಸಿದ ʻಕಾಂತಾರʼ: 50 ಕೋಟಿ ರೂ. ಗಳಿಸಿದ ರಿಷಬ್‌ ಚಿತ್ರ

    ಬಿ.ಟಿ ಲಲಿತಾ ನಾಯಕ್ ಹೇಳಿದ್ದೇನು?
    ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು – ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌

    ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು `ಓವ್’ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ. ರಿಷಬ್ ಶೆಟ್ಟಿ (Rishab Shetty) ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ ಹೆಸರು

    ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ ಹೆಸರು

    ಬೆಂಗಳೂರು: ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಲಿಸ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರೂ ಇದೆ.

    ಸಂಜಯನಗರದಲ್ಲಿರುವ ಲಲಿತಾ ನಾಯಕ್‌ ಅವರ ನಿವಾಸದ ವಿಳಾಸಕ್ಕೆ ಕಿಡಿಗೇಡಿಗಳು ಪತ್ರ ಬರೆದಿದ್ದಾರೆ. ಕೊಲೆ ಬೆದರಿಕೆ ಪತ್ರದಲ್ಲಿ ಮಾಜಿ ಸಿಎಂಗಳ ಜೊತೆಗೆ ಕೆಲವರು ಸಾಹಿತಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಈ‌ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸರಿಗೆ ಲಲಿತಾ ನಾಯಕ್‌ ಅವರು ದೂರು ನೀಡದ್ದಾರೆ. ಇದನ್ನೂ ಓದಿ: ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ

    ಪತ್ರದಲ್ಲೇನಿದೆ?
    ಪಿಎಫ್‌ಐ , ಸಿಎಫ್‌ಐ, ಎಸ್‌ಡಿಪಿಐ ಪರ ಮಾತಾಡಬಾರದು. ಅವರ ಸಭೆ-ಸಮಾರಂಭಗಳಲ್ಲಿ ಭಾಗಿವಹಿಸಬಾರದು. ಪಠ್ಯದಲ್ಲಿ ದೇಶಪ್ರೇಮ, ದೇಶ ಭಕ್ತಿ, ದೇಶ ರಕ್ಷಣೆ ಪಾಠ ಸೇರಿಸಿದ್ದಕ್ಕೆ ನಿಮಗೆಲ್ಲಾ ಭಯ. ನೀವು ನಿಜವಾದ ದೇಶದ್ರೋಹಿಗಳು. ನಮ್ಮ ದೇಶವನ್ನು ನಾಶ ಮಾಡಲು ಹೊಂಚು ಹಾಕುತ್ತಿದ್ದೀರಾ? ಭಯೋತ್ಪಾದಕರು, ನಕ್ಸಲೈಟ್‌ಗಳು, ಮಾವೋವಾದಿಗಳು, ದೇಶದ್ರೋಹಿ ಮುಸ್ಲಿಂಮರಿಗೆ ಬೆಂಬಲವಾಗಿ ನಿಂತಿದ್ದೀರಿ. ಪಿಎಫ್‌ಐ ಕಾರ್ಯಕ್ರಮದಲ್ಲಿ ನಮ್ಮ ವೀರ ಸೈನಿಕರ ಬಗ್ಗೆ ಅಗೌರವವಾಗಿ ಮಾತನಾಡಿದ್ದೀರಿ? ನೀವು ಕ್ಷಮೆ ಕೇಳಬೇಕು. ನೀವು ಎಚ್ಚರಿಕೆಯಿಂದ ಇರೀ ಎಂದು ಪತ್ರದಲ್ಲಿ ಬರೆಯಲಾಗಿದೆ.

    ಜೈ ಹಿಂದೂರಾಷ್ಟ್ರ ಎಂದು ಹೆಸರು
    ಪತ್ರದ ಕೊನೆಯಲ್ಲಿ ʼಜೈಹಿಂದೂ ರಾಷ್ಟ್ರ, ಭಾರತ ಮಾತೆಗೆ ಜೈ, ಜೈ ಕರ್ನಾಟಕ ಮಾತೆ, ಸಹಿಷ್ಣು, ಹಿಂದೂ ಎಂದು ಬರೆದಿದೆ. ಅಲ್ಲದೇ ರಾಜಾಜಿ ನಗರದ ಸೀಲ್ ಇದೆ. ಶ್ರೀರಾಮ್ ಅಂತಾ ಪತ್ರದಲ್ಲಿ ಬರೆದಿದೆ. ಇದನ್ನೂ ಓದಿ: 8 ವರ್ಷಗಳಲ್ಲಿ ದೇಶದ ಒಟ್ಟು ಸಾಲ 102 ಲಕ್ಷ ಕೋಟಿ ರೂ. ಪ್ರತಿಯೊಬ್ಬರ ತಲೆ ಮೇಲೆ 1.70 ಲಕ್ಷ ರೂ. ಸಾಲ: ಸಿದ್ದು

    ಶನಿವಾರ ಬೆಳಗ್ಗೆ 10 ಗಂಟೆಗೆ ಪತ್ರ ಬಂದಿದೆ. ಸಾಹಿತಿಗಳು, ರಾಜಕೀಯದವರನ್ನು ತುಂಬಾ ಕೆಟ್ಟ ಪದಗಳಿಂದ ಬೈದಿದ್ದಾರೆ. ನಿಮ್ಮೆಲ್ಲರನ್ನೂ ದೇಶಬಿಟ್ಟು ಕಳಿಸಬೇಕು, ನಿಮ್ಮನ್ನೆಲ್ಲಾ ಗುಂಡಿಟ್ಟು ಕೊಲೆ ಮಾಡಬೇಕು. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದು. ಒಂದು ವೇಳೆ ಮಾತಾಡಿದ್ರೆ, ಕೊಲೆಯಾಗ್ತಿರಿ ಎಚ್ಚರಿಕೆ ಅಂತಾ ಬರೆದಿದ್ದಾರೆ. 10 ಜನರ ಹೆಸರು ಸೇರಿಸಿ, 61 ಜನರ ಅಂತಾ ಹೇಳಿದ್ದಾರೆ. 61 ಜನರಲ್ಲಿ ಯಾರನ್ನು ಬೇಕಾದರೂ ಕೊಲೆ ಮಾಡಬಹುದು. ಇನ್ನೂ ಯಾರ್ಯಾರಿಗೆ ಬಂದಿದೆ ಗೊತ್ತಿಲ್ಲ. ಈ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಎಂದು ಬಿ.ಟಿ.ಲಲಿತಾ ನಾಯಕ್‌ ಅವರು ತಿಳಿಸಿದ್ದಾರೆ.

    Live Tv