Tag: b.v.srinivas

  • BJPಯ 25 ಮಂದಿ ಸಂಸದರು ದಂಡಪಿಂಡಗಳು: ಬಿ.ವಿ.ಶ್ರೀನಿವಾಸ್‌

    BJPಯ 25 ಮಂದಿ ಸಂಸದರು ದಂಡಪಿಂಡಗಳು: ಬಿ.ವಿ.ಶ್ರೀನಿವಾಸ್‌

    ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರ ಜನದ್ರೋಹ ಎಸಗಿದೆ ಎಂದು ಆಕ್ರೋಶ

    ಬೆಂಗಳೂರು: ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ (B.V.Srinivas) ಖಂಡಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರೊಬ್ಬರು ಇಂದು (ಶನಿವಾರ) ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟ – ಆಸ್ತಿ ಪಾಸ್ತಿಗೆ ಹಾನಿ ಮಾಡದೆ ಪ್ರತಿಭಟನೆ ಮಾಡೋಣ: ತೋಂಟದಾರ್ಯ ಶ್ರೀ

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ. ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25 ಮಂದಿ ಬಿಜೆಪಿ ಸಂಸದರು ಬಾಯಿ ಬಿಡಲೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯಕ್ಕೆ ಬರ ಬಂದಾಗ, ಅತಿವೃಷ್ಠಿ-ಪ್ರವಾಹದಿಂದ ಸಂಕಷ್ಟ ಎದುರಾದಾಗಲೂ ಈ ಸಂಸದರಾಗಲಿ, ರಾಜ್ಯದವರೇ ಆದ ಕೇಂದ್ರ ಸಚಿವರಾಗಲೀ ರಾಜ್ಯದ ನೆರವಿಗೆ ಬರಲೇ ಇಲ್ಲ. ಈ ಸಂಸದರಾಗಲಿ, ಕೇಂದ್ರ ಸಚಿವರಾಗಲಿ ಇವರ‍್ಯಾರು ನೆಪಕ್ಕೂ ಕೂಡ ಪ್ರಧಾನಿ ಮೋದಿ ಅವರ ಬಳಿ ಹೋಗಿ ರಾಜ್ಯದ ಪಾಲಿನ ಹಕ್ಕನ್ನು ಕೇಳುವ ಧೈರ್ಯ ಮಾಡಲಿಲ್ಲ. ಪಾರ್ಲಿಮೆಂಟಿನಲ್ಲೂ ರಾಜ್ಯದ ಪರವಾಗಿ ಸಮರ್ಥ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಈ ರೀತಿ ನಿರಂತರವಾಗಿ ಜನದ್ರೋಹ, ಹೊಣೆಗೇಡಿತನವನ್ನು ಆಚರಿಸುತ್ತಾ ಬರುತ್ತಿರುವ ಬಿಜೆಪಿ ಸಂಸದರು ಮತ್ತು ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಕಾವೇರಿ ವಿಚಾರದಲ್ಲಿ ಮಾತ್ರ ಪ್ರತಿಭಟನೆಯ ಸೋಗು ಹಾಕುತ್ತಿದ್ದಾರೆ ಎಂದು ಖಂಡಿಸಿದ್ದಾರೆ. ಇದನ್ನೂ ಓದಿ: ಮೂರಲ್ಲ, 6 ಡಿಸಿಎಂ ಹುದ್ದೆಗಳು ಮಾಡಲಿ, ಡಿಕೆಶಿ ಸಿನಿಯರ್ DCM ಆಗಲಿ – ಬಸವರಾಜ್ ರಾಯರೆಡ್ಡಿ

    ಹಿಂದಿ ಭಾಷೆ ಹೇರಿಕೆ, ರಾಜ್ಯದ ಪಾಲಿನ ಉದ್ಯೋಗಾವಕಾಶಗಳನ್ನು ಕಿತ್ತುಕೊಂಡಾಗಲೂ ಈ ಸಂಸದರು ಉಸಿರು ಬಿಡಲಿಲ್ಲ. ಹೀಗೆ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ನಿರಂತರವಾಗಿ ನಾಡದ್ರೋಹಿಗಳಾಗಿರುವ ಸಂಸದರು ಈಗ ಆಡುತ್ತಿರುವ ಮಾತುಗಳು ಆತ್ಮವಂಚನೆಯದ್ದು. ಕಾವೇರಿ ನೀರಿನ ವಿವಾದ ನಾಲ್ಕು ರಾಜ್ಯಗಳಿಗೆ ಸೇರಿದ್ದು. ನಾಲ್ಕೂ ರಾಜ್ಯಗಳ ಪ್ರತಿನಿಧಿಗಳನ್ನು ಕರೆದು ಮಾತುಕತೆ ನಡೆಸುವ ಅಧಿಕಾರ ವ್ಯಾಪ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ. ಆದರೆ ಈವರೆಗೂ ಕೇಂದ್ರದಿಂದ ಈ ಪ್ರಯತ್ನವೇ ನಡೆದಿಲ್ಲ. ಸರ್ವಪಕ್ಷ ನಿಯೋಗಕ್ಕೆ ಸಮಯ ಕೊಡಿ ಎಂದು ಪ್ರಧಾನಿ ಅವರನ್ನು ಕೇಳುವ ಧೈರ್ಯ ಕೂಡ ಇಲ್ಲದ ಸಂಸದರ ಪುಕ್ಕಲುತನ ಹೇಡಿತನದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕೂಡಲೇ ಸಂಕಷ್ಟ ಸೂತ್ರ ರೂಪಿಸಲು ಅಗತ್ಯ ಕ್ರಮಕ್ಕೆ ಮುಂದಾಗುವಂತೆ, ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕದಂತೆ ನಾಲ್ಕೂ ರಾಜ್ಯಗಳ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಅವರನ್ನು ಬಿಜೆಪಿ ಸಂಸದರು ಮತ್ತು ನಾಯಕರು ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಪರ ಧ್ವನಿ ಎತ್ತದೇ ಸುಮ್ಮನಿರುವ ಬಿಜೆಪಿ ಸಂಸದರು ದಂಡಪಿಂಡಗಳು: ಬಿ.ವಿ ಶ್ರೀನಿವಾಸ್

    ರಾಜ್ಯದ ಪರ ಧ್ವನಿ ಎತ್ತದೇ ಸುಮ್ಮನಿರುವ ಬಿಜೆಪಿ ಸಂಸದರು ದಂಡಪಿಂಡಗಳು: ಬಿ.ವಿ ಶ್ರೀನಿವಾಸ್

    ನವದೆಹಲಿ: ಕರ್ನಾಟಕ ಸರ್ಕಾರದಿಂದ ಬಡ ಜನರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಇದನ್ನೆಲ್ಲ ನೋಡಿಕೊಂಡು ರಾಜ್ಯದ ಪರ ಧ್ವನಿ ಎತ್ತದೆ ಸುಮ್ಮನೆ ಕುಳಿತಿರುವ ಬಿಜೆಪಿಯ (BJP) 25 ಸಂಸದರು ದಂಡಪಿಂಡಗಳು ಎಂದು ರಾಷ್ಟ್ರೀಯ ಯೂತ್ ಕಾಂಗ್ರೆಸ್ (Congress) ಅಧ್ಯಕ್ಷ ಬಿ.ವಿ ಶ್ರೀನಿವಾಸ್ (B.V Srinivas) ವಾಗ್ದಾಳಿ ನಡೆಸಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಡಿದ್ದ ಮಾತನ್ನು ಸಾಬೀತು ಮಾಡಿದ್ದಾರೆ. ಬಿಜೆಪಿಗೆ ಮತ ಹಾಕದಿದ್ದರೇ ಪರೋಕ್ಷವಾಗಿ ಕೇಂದ್ರದ ಯೋಜನೆಗಳನ್ನು ನಿಲ್ಲಿಸುವ ಬೆದರಿಕೆ ಹಾಕಿದ್ದರು. ಅದನ್ನು ಈಗ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

    ಆದರೆ ಕರ್ನಾಟಕದ (Karnataka) 25 ಸಂಸದರು ಏನು ಮಾಡುತ್ತಿದ್ದಾರೆ ಎನ್ನುವುದು ನನ್ನ ಪ್ರಶ್ನೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಪ್ರತಿ ಬಾರಿ ಅನ್ಯಾಯವಾದಾಗಲೂ ಮೌನವಾಗಿದ್ದಾರೆ. ರಾಜ್ಯದ ಪರ ಧ್ವನಿ ಎತ್ತದ ಬಿಜೆಪಿಯ 25 ಸಂಸದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕುಟುಕಿದ್ದಾರೆ.

    ಕಾಂಗ್ರೆಸ್ ಗ್ಯಾರಂಟಿಗಳ (Congress Guarantee) ಬಗ್ಗೆ ಬಿಜೆಪಿ ನಾಯಕರಿಗೆ ಭಯವಿದೆ. ಕಾಂಗ್ರೆಸ್ ಯೋಜನೆಗಳು ಯಶಸ್ವಿಯಾದರೆ ಲೋಕಸಭೆಯಲ್ಲಿ ಅವರಿಗೆ ಸೋಲುವ ಭೀತಿ ಇದೆ. ಈ ಹಿನ್ನೆಲೆ ಕಾಂಗ್ರೆಸ್ ಗ್ಯಾರಂಟಿಗಳಿಗೆ ಕೊಕ್ಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ತಿನ್ನುವ ಅಕ್ಕಿಯಲ್ಲಿ ರಾಜಕೀಯ ಮಾಡುವುದು ಬಿಡಬೇಕು. ಇಲ್ಲದಿದ್ದರೆ ವಿಧಾನಸಭೆ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲೂ ಕರ್ನಾಟಕದ ಜನರು ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ: ಆರ್.ಅಶೋಕ್ ವಾಗ್ದಾಳಿ

  • ಆರೋಪಗಳ ಮಧ್ಯೆ ಐವೈಸಿ ಅಧ್ಯಕ್ಷ ಶ್ರೀನಿವಾಸ್‌ಗೆ ಹೊಸ ಜವಾಬ್ದಾರಿ

    ಆರೋಪಗಳ ಮಧ್ಯೆ ಐವೈಸಿ ಅಧ್ಯಕ್ಷ ಶ್ರೀನಿವಾಸ್‌ಗೆ ಹೊಸ ಜವಾಬ್ದಾರಿ

    ನವದೆಹಲಿ: ಉತ್ತರಾಖಂಡ ವಿಧಾನಸಭೆ ಚುನಾವಣೆ ಹಿನ್ನೆಲೆ ರಚಿಸಲಾದ ಪ್ರಚಾರ ಸಮಿತಿಯಲ್ಲಿ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಗೆ ಅವಕಾಶ ನೀಡಿದೆ. ಶ್ರೀನಿವಾಸ್ ವಿರುದ್ಧ ಕೇಳಿ ಬಂದ ಹಲವು ಆರೋಪಗಳ ನಡುವೆ ಹೊಸ ಅವಕಾಶ ನೀಡುವ ಮೂಲಕ ಹೈಕಮಾಂಡ್ ಅಚ್ಚರಿ ಮೂಡಿಸಿದೆ.

    ಇಂದು ಕಾಂಗ್ರೆಸ್ ಮೂವತ್ತು ಜನರ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಆದಿಯಾಗಿ ಹಲವು ಹಿರಿಯ ನಾಯಕರಿದ್ದು, ಶ್ರೀನಿವಾಸ್‌ಗೆ ಅವಕಾಶ ನೀಡುವ ಉತ್ತರಾಖಂಡ ಚುನಾವಣೆಯಲ್ಲಿ ಪ್ರಚಾರದ ಜವಾಬ್ದಾರಿ ಹೊರಿಸಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಐವೈಸಿ ಅಧ್ಯಕ್ಷರಾಗಿರುವ ಶ್ರೀನಿವಾಸ್ ವಿರುದ್ಧ ಇತ್ತೀಚೆಗೆ ರಾಹುಲ್ ಗಾಂಧಿ ಅವರಿಗೆ ಇಮೇಲ್ ಮೂಲಕ ರಾಜ್ಯ ಯುವ ಕಾಂಗ್ರೆಸ್ ಸದಸ್ಯರೊಬ್ಬರು ದೂರು ನೀಡಿದ್ದರು. ಯೂಥ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಹಣ ಪಡೆದಿದ್ದಾರೆ. ಪದಾಧಿಕಾರಿಗಳ ನೇಮಕದಲ್ಲೂ ಹಣ ಪಡೆದಿದ್ದಾರೆ. ಏನು ಇಲ್ಲದ ಶ್ರೀನಿವಾಸ್ ಕೋಟಿಗಟ್ಟಲೇ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

    ಈ ದೂರು ನೀಡಿ ಇನ್ನು ಒಂದು ವಾರವೂ ಕಳೆದಿರಲಿಲ್ಲ. ಅಷ್ಟರಲ್ಲೇ ಶ್ರೀನಿವಾಸ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದ್ದು, ಶ್ರೀನಿವಾಸ್ ವಿರುದ್ಧ ನೀಡಿದ ದೂರನ್ನು ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಂತಾಗಿದೆ. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ಗೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ