Tag: B.Y vijayendra

  • ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

    ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

    ಬೆಂಗಳೂರು: ರಾಜ್ಯ ಸರ್ಕಾರ ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ (Caste census) ವಿಷಯದಲ್ಲಿ ತೀರ್ಮಾನ ಮಾಡುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಅವರು ಟೀಕಿಸಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಗಣತಿದಾರ ಶಿಕ್ಷಕವೃಂದಕ್ಕೂ ಸಮಸ್ಯೆ ಆಗುತ್ತಿದೆ. ರಜೆ ದಿನಗಳನ್ನೂ ವಿಸ್ತರಿಸಿದ್ದರಿಂದ ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಸಮಸ್ಯೆ ಆಗಲಿದೆ. ಸರಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಭಾಗದ ಮಕ್ಕಳಿಗೆ ಒಂದೊಂದು ದಿನವೂ ಅಷ್ಟೇ ಮಹತ್ವದ್ದು. ಶಾಲೆಗೆ ರಜೆ ಘೋಷಿಸಿ ಶಾಲಾ ಮಕ್ಕಳಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ ವ್ಯಾಖ್ಯಾನ

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಕರೆದಿದ್ದು, ಶಾಸಕರಿಗೆ ಸಭೆಯ ಕಾರ್ಯಸೂಚಿಯನ್ನೇ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜಿಬಿಎ ಅಜೆಂಡವನ್ನೂ ಕೊಡದೆ ಗೌಪ್ಯವಾಗಿ ಸಭೆ ಮಾಡುತ್ತಿದ್ದಾರೆ. ಡಿಸೆಂಬರ್‌ನಲ್ಲಿ ಚುನಾವಣೆ (GBA Election) ನಡೆಸುವುದಾಗಿ ಹೇಳುತ್ತಾರೆ. ಎಲ್ಲಿದೆ ತಯಾರಿ? ಎಷ್ಟು ಅಧಿಕಾರಿಗಳು ಬೇಕು? ಮೂಲಭೂತ ಸೌಕರ್ಯಗಳು, ಯಾವುದೂ ಇಲ್ಲದೇ ರಾಜಕೀಯ ಚಟಕ್ಕೆ ಘೋಷಣೆ ಮಾಡುತ್ತಾರೆ. ಯಾವುದೇ ಯೋಜನೆ ಇಲ್ಲದೇ ಹೊರಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಗುಂಡಿಗಳ ಮಧ್ಯೆ ರಸ್ತೆ ಹುಡುಕುವ ದಾರುಣ ಪರಿಸ್ಥಿತಿ
    ಬೆಂಗಳೂರಿನ (Bengaluru ) ಜನತೆ ಈ ಸರ್ಕಾರಕ್ಕೆ ಛೀ ಥೂ ಎಂದು ಉಗುಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪ್ರಧಾನಮಂತ್ರಿಯವರ ಮನೆ ಮುಂದೆ ಗುಂಡಿ ಇದೆ; ಅಲ್ಲಿ ಗುಂಡಿ ಇದೆ ಎಂದು ಲೆಕ್ಕ ಹಾಕಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಗುಂಡಿಗಳ ಮಧ್ಯೆ ರಸ್ತೆ ಹುಡುಕುವ ದಾರುಣ ಪರಿಸ್ಥಿತಿ ಬಂದಿದೆ. ದೊಡ್ಡ ಮನುಷ್ಯರು ಪ್ರಧಾನಿ, ಲಂಡನ್ ಕುರಿತು ಮಾತನಾಡುತ್ತಾರೆ ಎಂದರಲ್ಲದೇ ಲಂಡನ್ ಬಗ್ಗೆ ಮಾತನಾಡಲು ನೀವು ಬೇಕೇ ಎಂದು ಪ್ರಶ್ನಿಸಿದರು. ಬೆಂಗಳೂರಿನ ಮಹಾಜನತೆ ರಾಜ್ಯ ಸರ್ಕಾರಕ್ಕೆ ಉತ್ತರ ಕೇಳುತ್ತಿದ್ದಾರೆ. ತುರ್ತಾಗಿ ಗುಂಡಿ ಮುಚ್ಚುವ ಕೆಲಸ ಆಗಬೇಕೆಂದು ಜನರು ಅಪೇಕ್ಷೆ ಪಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಕೊಲೆ, ಸುಲಿಗೆ, ಅತ್ಯಾಚಾರ ಸಂಭ್ರಮಕ್ಕೆ ಔತಣಕೂಟ – ಸಿಎಂ ಡಿನ್ನರ್‌ ಮೀಟಿಂಗ್‌ಗೆ ಸಿ.ಟಿ ರವಿ ವ್ಯಂಗ್ಯ

  • ಗಣತಿ ವಿಷಯದಲ್ಲಿ ಗೊಂದಲ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲಕಲ್ಲೋಲ: ವಿಜಯೇಂದ್ರ

    ಗಣತಿ ವಿಷಯದಲ್ಲಿ ಗೊಂದಲ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲಕಲ್ಲೋಲ: ವಿಜಯೇಂದ್ರ

    ಬೆಂಗಳೂರು: ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಆಕ್ಷೇಪಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರ್ಕಾರ ಈ ನಿರ್ಣಯ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ವಿಕಲಚೇತನರನ್ನೂ ಇದಕ್ಕೆ ಜೋಡಿಸಿದ್ದಾರೆ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ವೇಗೆ ಹೋದಾಗ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ಫ್ರಿಡ್ಜ್ ಬಗ್ಗೆ ಪ್ರಶ್ನೆ ಕೇಳಬೇಡಿ: ಅಧಿಕಾರಿಗಳಿಗೆ ಡಿಸಿಎಂ ಮೌಖಿಕ ಸೂಚನೆ

    ಸರ್ಕಾರ ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ನ್ಯಾಯ ನೀಡಲಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲಿ ಗೊಂದಲ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಯಾವುದೇ ಪ್ರಧಾನಮಂತ್ರಿಗಳು ನಿರ್ಧಾರ ಮಾಡದೇ ಇರುವಂಥ ನಿರ್ಧಾರ ಇದಾಗಿದೆ. ಇಡೀ ದೇಶದಲ್ಲಿ ಜಾತಿ ಜನಗಣತಿ ಪ್ರಾರಂಭಿಸುವುದಾಗಿ ಪ್ರಕಟಿಸಿದ್ದಾರೆ. ಇದರ ನಡುವೆ ಕರ್ನಾಟಕದಲ್ಲಿ ಈ ರೀತಿ ಗೊಂದಲವನ್ನು ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.

    ಕ್ರಾಂತಿ ಕುರಿತು ಸಚಿವರ ಬಹಿರಂಗ ಹೇಳಿಕೆ
    ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ, ಈ ಜಾತಿ ಜನಗಣತಿಗೂ (Caste census) ಎಲ್ಲೋ ಒಂದು ಕಡೆ ಸಂಬಂಧ ಇದೆಯೇ ಎಂಬುದೂ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ಕಾಂಗ್ರೆಸ್ಸಿನ ಹಿರಿಯ ಸಚಿವರೇ ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಕುರಿತು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.

    ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಸಿದ್ದರಾಮಯ್ಯನವರು (Siddaramaiah) ರ‍್ಯಾಂಪ್ ವಾಕ್ ಮಾಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌ಗೆ ಅಡ್ರೆಸ್ ಇರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಬಿಹಾರ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ
    ಎಐಸಿಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಎನ್ನುತ್ತಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ವರಿಷ್ಠರೂ ಹೇಳಿಲ್ಲ. ಬಿಹಾರ ಚುನಾವಣೆ ಬಳಿಕ ಸಾಕಷ್ಟು ರಾಜಕೀಯ ಬದಲಾವಣೆಗಳು ರಾಜ್ಯದಲ್ಲಿ ಆಗಲಿದೆ. ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಆಗುವುದು ಸ್ಪಷ್ಟ ಎಂದು ಭವಿಷ್ಯ ನುಡಿದ್ದಾರೆ. ಇದನ್ನೂ ಓದಿ: ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗು – ಕೇಂದ್ರಕ್ಕೆ ರಾಜ್ಯ ಶಿಫಾರಸು ಮಾಡುವಂತೆ ಆಗ್ರಹ

  • ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ (Siddaramaiah), ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ. ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ.

    ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಗ್ಗೆ ಫ್ರೀಡಂ ಪಾರ್ಕ್‌ನಲ್ಲಿ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಬೇಕಾಗಿತ್ತು ಎಂದು ನುಡಿದರು. ಇದನ್ನೂ ಓದಿ: ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

    ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ. ಮನೆ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂದು ತಿಳಿಸಿದರು. ರಾಜ್ಯದ ಜನರು ನಿಮಗೆ ಆಶೀರ್ವಾದ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದಿದ್ದಾರೆ. ಈ ರಾಜ್ಯದ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯಗಳು, ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವ ಅಪೇಕ್ಷೆ ಜನರಲ್ಲಿತ್ತು ಎಂದು ತಿಳಿಸಿದರು. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರವು ಶೋಷಿತರಿಗೆ ನ್ಯಾಯ ನೀಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ಷೇಪಿಸಿದರು.

    ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಿಮ್ಮ ಸಮಾಜಕ್ಕೆ ಅನ್ಯಾಯ ಆಗಬಾರದೆಂದು ಶೇ 4.5 ರಷ್ಟು ಮೀಸಲಾತಿ ಕೊಟ್ಟಿದ್ದರು. ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಲು ಶೇ.1 ಪ್ರತ್ಯೇಕವಾಗಿ ಇಡಲಾಗಿತ್ತು. ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ನಿಮ್ಮ ಪರವಾಗಿ ನಿರ್ಧಾರ ಮಾಡಿತ್ತು ಎಂದು ವಿವರಿಸಿದರು. ಇದನ್ನೂ ಓದಿ: ಬಿಜೆಪಿಯವ್ರೇ ನಿಮ್ಮ ಮಕ್ಳನ್ನು ವಿದೇಶದಿಂದ ಕರೆಸಿ, ಅವ್ರನ್ನ ಮುಂದೆ ಬಿಟ್ಟು ಹೋರಾಟ ಮಾಡಿ: ಪ್ರಿಯಾಂಕ್ ಖರ್ಗೆ

    ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ತಾಂಡಾ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ ರಚಿಸಿದ್ದರು. ಅಲೆಮಾರಿ ಸಮುದಾಯ, ಕೊರಚ, ಕೊರಮ ಸೇರಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದ ರೀತಿಯಲ್ಲಿ ಹಿಂದೆ ಯಡಿಯೂರಪ್ಪ ಅವರು ನೋಡಿಕೊಂಡಿದ್ದರು ಎಂದು ಗಮನ ಸೆಳೆದರು.

    ಕಾಂಗ್ರೆಸ್ ಸರ್ಕಾರದ ಒಡೆದಾಳುವ ನೀತಿ..
    ಇವತ್ತು ಬ್ರಿಟಿಷರ ಒಡೆದಾಳುವ ನೀತಿಯನ್ನು ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸಿದೆ. ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರಿಗೆ ಅನ್ಯಾಯ ಮಾಡುವ ಮತ್ತು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಡಿದ್ದಾರೆ. ಮುಖ್ಯಮಂತ್ರಿಗಳನ್ನು ಆ ಭಗವಂತನೂ ಕ್ಷಮಿಸಲು ಸಾಧ್ಯವಿಲ್ಲ ಎಂದರು.

    ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಪ್ರಭು ಚೌಹಾಣ್, ಎಂ. ಚಂದ್ರಪ್ಪ, ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕರಾದ ಪಿ. ರಾಜೀವ್, ದೇವನಹಳ್ಳಿ ಚಂದ್ರಪ್ಪ, ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

  • ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

    ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

    ನವದೆಹಲಿ: ಈ ಬಿಜೆಪಿಯವರಿಂದ ರಾಜ್ಯದಲ್ಲಿ ನೆಮ್ಮದಿ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಆಕ್ಷೇಪಿಸಿದ್ದಾರೆ.

    ಸಂಸದ ಬಿ.ವೈ. ರಾಘವೇಂದ್ರ ಅವರ ದೆಹಲಿಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರ್ಕಾರದ್ದು ಎಂದು ಖಂಡಿಸಿದರು.

    ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈದ್ ಮಿಲಾದ್ ನಡೆದಾಗ ಎಲ್ಲಾದರೂ ಗಲಾಟೆ ಆಗಿದೆಯೇ ಎಂದು ಕೇಳಿದರು. ಇದನ್ನೂ ಓದಿ: ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

    ಕರ್ನಾಟಕದಲ್ಲೂ ಹಿಂದೂಗಳು ಶಾಂತಿಪ್ರಿಯರು. ಎಲ್ಲ ಧರ್ಮ, ಎಲ್ಲ ಸಮುದಾಯಗಳನ್ನು ಪ್ರೀತಿಸುವ ಕೆಲಸವನ್ನು ಹಿಂದೂ ಸಮಾಜ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ನಡೆಸುವ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಮದ್ದೂರಿನದ್ದು ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿವರು ಹೇಳಿದ್ದಾರೆ. ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಸಣ್ಣಪುಟ್ಟ ಘಟನೆ ಆಗಲು ಸಾಧ್ಯವೇ ಎಂದು ಕೇಳಿದರು. ನಿಮ್ಮ ಮನೆಯ ಹೆಣ್ಮಕ್ಕಳ ಮೇಲೆ ಕಲ್ಲೆಸೆದರೆ, ಲಾಠಿ ಚಾರ್ಜ್ ಮಾಡಿದರೆ ಯಾವ ಪರಿಸ್ಥಿತಿ ಆಗಲಿದೆ ಎಂದು ಪ್ರಶ್ನಿಸಿದರು.

    ಕೇಸರಿ ಕಂಡರೆ ಆಗದ ಮುಖ್ಯಮಂತ್ರಿ
    ಸಿದ್ದರಾಮಯ್ಯನವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಕೇಸರಿ ಪೇಟ ತೊಡಿಸಿದರೆ ಕಿತ್ತು ಬಿಸಾಡುತ್ತಾರೆ. ಆದರೆ, ಮೊನ್ನೆ ಈದ್ ಮಿಲಾದ್‍ನಲ್ಲಿ ಇಡೀ ದಿನ ಆ ಟೊಪ್ಪಿ ಹಾಕಿಕೊಂಡು ಆನಂದವಾಗಿ ಕುಳಿತಿದ್ದರು. ಕಾಂಗ್ರೆಸ್ ಸರ್ಕಾರದ ಧೋರಣೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವರಿಗೆ ಹಿಂದೂಗಳ ಮತ ಸಿಕ್ಕಿಲ್ಲವೇ? ಕಾಂಗ್ರೆಸ್ಸಿನವರಿಗೆ ಹಿಂದೂಗಳ ಬಗ್ಗೆ ಇಷ್ಟೊಂದು ದ್ವೇಷ ಏಕೆ ಎಂದು ಅವರು ಕೇಳಿದರು. ಹಿಂದೂಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಸಡ್ಡೆ ಏಕೆ ಎಂದು ಪ್ರಶ್ನೆಯನ್ನೂ ಮುಂದಿಟ್ಟರು.

    ಸರ್ಕಾರದ ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷದ, ಸರ್ಕಾರದ ಪಾಪದ ಕೊಡ ತುಂಬಿದೆ. ಇದೇ ರೀತಿ ಸರ್ಕಾರ ಮುಂದುವರೆದರೆ ಮುಂದೆ ಬೀದಿಯಲ್ಲಿ ನಡೆದು ಹೋಗಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕಷ್ಟ ಆಗಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರವನ್ನು ಗಮನಿಸಿ ಈ ಸರ್ಕಾರ ಕೈಕಟ್ಟಿ ಕೂತಿತ್ತು. ಕೊಪ್ಪಳದಲ್ಲಿ ಈಚೆಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಹಿಂದೂ ಕಾರ್ಯಕರ್ತ ಗವಿಸಿದ್ದಪ್ಪರ ಬರ್ಬರ ಹತ್ಯೆ ನಡೆದಿತ್ತು. ಮಸೀದಿ ಎದುರು ಅವರನ್ನು ಕೊಚ್ಚಿ ಹಾಕಿದ್ದರು. ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯೂ ದೇಶಾದ್ಯಂತ ಚರ್ಚೆಯಾಗಿದೆ ಎಂದು ಗಮನ ಸೆಳೆದರು.

    ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ, ಹಿಂದೂಗಳಿಗೆ ಪದೇಪದೇ ಅಪಮಾನ ಆಗುತ್ತಿದೆ. ಹಿಂದೂಗಳು ಗೌರವದಿಂದ ತಲೆ ಎತ್ತಿಕೊಂಡು ಓಡಾಡಲು ಆಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಹಿಂದೂಗಳ ಮೇಲೆ ಕೇಸುಗಳನ್ನು ದಾಖಲಿಸುತ್ತಿದೆ ಎಂದು ಆಕ್ಷೇಪಿಸಿದರು.

    ಸಮಾಜಘಾತುಕ ಶಕ್ತಿಗಳ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗಳನ್ನು ಹಿಂಪಡೆದಿದ್ದಾರೆ. ಮದ್ದೂರಿನಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ಆಗಿದ್ದು, ಆ ದೇಶದ್ರೋಹಿಗಳು, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಸರ್ಕಾರದ ಎಲ್ಲ ತೀರ್ಮಾನಗಳಿಂದ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರೇ ಸಚಿವ ಸಂಪುಟ ಸಭೆಯಲ್ಲಿ ಕೇಸು ಹಿಂಪಡೆಯುತ್ತೀರಾ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಪ್ರಮುಖರು ಉಪಸ್ಥಿತರಿದ್ದರು.

  • ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ

    ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ

    – ಭಗವಂತ ಕಾಂಗ್ರೆಸ್‌ನವರಿಗೆ ಸದ್ಬುದ್ಧಿ ಕೊಡಲಿ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ಬಗ್ಗೆ ನಡೆಯುತ್ತಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡುವುದಕ್ಕೆ ನಾವು ಯಾತ್ರೆ ಮಾಡುತ್ತಿದ್ದೇವೆ. ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲ ಹೊರಗೆ ಬರಬೇಕಾದ್ರೆ ಪ್ರಕರಣವನ್ನ ರಾಜ್ಯ ಸರ್ಕಾರ ಎನ್‍ಐಎ (NIA) ಅಥವಾ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಆಗ್ರಹಿಸಿದರು.

    ಧರ್ಮಸ್ಥಳದ ಚಲೋ ಯಾತ್ರೆಗೆ ತೆರಳಿರುವ ಬಿಜೆಪಿ ನಾಯಕರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈವಿ, ದರ್ಮಸ್ಥಳ ಪ್ರಕರಣದ ಹಿಂದೆ ಇರುವ ದುಷ್ಟ ಶಕ್ತಿಗಳು ಬಹಿರಂಗ ಆಗಬೇಕು. ಹಿಂದೂ ಸಮಾಜವನ್ನ ರಕ್ಷಣೆ ಮಾಡುವಂತಹ ಕೆಲಸ ಆಗಬೇಕು. ಈಗ ಎಸ್‍ಐಟಿಯವರು (SIT) ಬಂಧಿಸಿರುವುದು ಸಣ್ಣ ಪುಟ್ಟವರು. ಇದರ ಹಿಂದೆ ಬಲಾಢ್ಯರು ಇದ್ದಾರೆ. ಅವರನ್ನ ಹೊರೆಗೆ ತೆಗೆಯುವಂತಹ ಕೆಲಸ ಆಗಬೇಕು ಇದಕ್ಕೆ ಎನ್‌ಐಎ ತನಿಖೆ ಅಗತ್ಯ ಎಂದರು. ಇದನ್ನೂ ಓದಿ: ಮಂಜುನಾಥ-ಅಣ್ಣಪ್ಪ ಸ್ವಾಮಿಯಿಂದ ದುಷ್ಟರ ಸಂಹಾರ ಗ್ಯಾರಂಟಿ: ಗುಡುಗಿದ ನಿಖಿಲ್‌ ಕುಮಾರಸ್ವಾಮಿ

    ಕಾಂಗ್ರೆಸ್‌ನಿಂದ ಧರ್ಮಸ್ಥಳ ಚಲೋ ವಿಚಾರಕ್ಕೆ, ಆಡಳಿತ ಪಕ್ಷದವರು ಕೂಡ ಯಾತ್ರೆ, ಸಮಾವೇಶ ಮಾಡಿ ಮಂಜುನಾಥನ ದರ್ಶನ ಪಡೆಯಲಿ. ಆ ಸದ್ಬುದ್ಧಿಯನ್ನು ಭಗವಂತ ಅವರಿಗೆ ಕೊಡಲಿ ಎಂದಿದ್ದಾರೆ.

    ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕ ಸುನೀಲ್ ಕುಮಾರ್, ಹರೀಶ್ ಪೂಂಜಾ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR

  • ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ

    ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ

    ಬೆಂಗಳೂರು: ತುಂಗಭದ್ರಾ ಡ್ಯಾಮ್‌ನ (Tungabhadra Dam) 33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B Y Vijayendra) ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತಾಡಿದ ಅವರು ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ ಅಲ್ಲಿನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಕಳೆದ ಆಗಸ್ಟ್ನಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ರೈತರೂ ಆತಂಕದಲ್ಲಿ ಇದ್ದರು. ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಖಾಯಂ ಪರಿಹಾರ ನೀಡಿಲ್ಲ. ಇವರು ತಡ ಮಾಡಿದ್ದು, ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ

    ಮತ್ತೊಂದು ಕಡೆ ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ಸಚಿವರ ಮತ್ತು ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ಟಿ.ಬಿ. ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ

    ನುಡಿದಂತೆ ನಡೆಯುವ ರಾಜ್ಯ ಸರ್ಕಾರದಡಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ. ಅವರು ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ 4.85 ಕೋಟಿ ರೂ. ಮೊತ್ತವನ್ನು ಕೊಡದೇ ತಡೆ ಹಿಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಚೆನ್ನಾಗಿದೆ ಎಂದು ಸಿದ್ದರಾಮಯ್ಯನವರು (Siddaramaiah) ಹೇಳುತ್ತಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣವನ್ನು ಬಿಡುಗಡೆ ಮಾಡದಂಥ ದುಸ್ಥಿತಿಗೆ ಬಂದು ನಿಂತಿದೆ ಎಂದಿದ್ದಾರೆ.

  • ಧರ್ಮಸ್ಥಳ ಕೇಸ್‌ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ

    ಧರ್ಮಸ್ಥಳ ಕೇಸ್‌ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ

    ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಅವರು ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆರೋಪ ಮಾಡಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಬಹಳ ದೊಡ್ಡ ಷಡ್ಯಂತ್ರ ಇದೆ ಎಂದು ಅವರೇ ಹೇಳಿಕೆ ಕೊಟ್ಟಿದ್ದಾರೆ. ಸಂದರ್ಭ ಬಂದಾಗ ಉತ್ತರ ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ‌ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

    ಇನ್ನೂ ಯಾವಾಗ ಸಮಯ ಬರಲಿದೆ? ರಾಜ್ಯದ ಜನರು- ಕೋಟಿ, ಕೋಟಿ ಭಕ್ತಾದಿಗಳು ಇವತ್ತು ಆತಂಕದಲ್ಲಿದ್ದಾರೆ. ಧರ್ಮಸ್ಥಳದಲ್ಲಿ ಯಾವ ರೀತಿ ತನಿಖೆ ನಡೆಯುತ್ತಿದೆ. ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಇದೆಲ್ಲ ವಿಷಯದಲ್ಲಿ ಜನರು ನಿದ್ದೆ ಮಾಡದಂಥ ಸ್ಥಿತಿ ಇದೆ. ಇನ್ನೂ ಕೂಡ ಡಿ.ಕೆ.ಶಿವಕುಮಾರ್ (D.K Shivakumar) ಅವರಿಗೆ ಸಮಯ ಬಂದಿಲ್ಲ ಎಂದು ಕಾಣುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಮ್ಮ ಪಕ್ಷದ ಸಂಸದರು, ಎಲ್ಲಾ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರ ಜೊತೆಗೂಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಶ್ರೀ ಮಂಜುನಾಥೇಶ್ವರನ ದರ್ಶನ ಪಡೆದುಕೊಂಡಿದ್ದೇವೆ. ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿ ಮಾಡಿದ್ದೇವೆ ಎಂದಿದ್ದಾರೆ.

    ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದ್ದು, ಆ ಅಪಪ್ರಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾಕೆ ಎಚ್ಚತ್ತುಕೊಂಡಿಲ್ಲ? ಅಪಪ್ರಚಾರಕ್ಕೆ ಕಡಿವಾಣ ಹಾಕುವ ಇಚ್ಛೆ ಸರ್ಕಾರಕ್ಕೆ ಇರಲಿಲ್ಲವೇ? ಯಾವ ಕಾರಣಕ್ಕೆ ಇದು ಆಗಿಲ್ಲ ಎಂಬ ಕುರಿತು ಗೃಹ ಸಚಿವರು ಇವತ್ತು ತಮ್ಮ ಉತ್ತರದಲ್ಲಿ ತಿಳಿಸಬೇಕು. ಸದನದಲ್ಲಿ ಏನು ಉತ್ತರ ನೀಡುತ್ತಾರೆ ಎಂದು ನೋಡುತ್ತೇವೆ ಎಂದಿದ್ದಾರೆ.

    ರಾಜ್ಯ ಸರ್ಕಾರ ತುಮಕೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಪದೇಪದೇ ಎಫ್‍ಐಆರ್ ದಾಖಲಿಸುತ್ತಿದೆ. ಮೈಸೂರಿನಲ್ಲೂ ಪೋಸ್ಟ್ ವಿರುದ್ಧ ಕಾರ್ಯಕರ್ತನ ಮೇಲೆ ಎಫ್‍ಐಆರ್ ದಾಖಲಿಸಿ ಬಂಧಿಸಿದೆ. ಸರ್ಕಾರ ಹಿಂದೂ ಕಾರ್ಯಕರ್ತರ ಬಗ್ಗೆ ತೋರುವ ಆಸಕ್ತಿಯನ್ನು ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತೋರಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ

  • ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

    ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

    – ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ ಟೀಂ

    ಮಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra), ಎಂಎಲ್‍ಸಿ ಸಿ.ಟಿ ರವಿ (C.T Ravi) ಹಾಗೂ ಶಾಸಕರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

    ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಸಿ.ಟಿ ರವಿ ಪ್ರತಿಕ್ರಿಯಿಸಿ, ಬಿಜೆಪಿ ತನಿಖೆಯನ್ನ ಪ್ರಶ್ನಿಸುವುದಿಲ್ಲ. ತನಿಖೆಗೆ ಮುಂಚೆಯೇ ಅಪರಾಧಿ ಸ್ಥಾನ ಕೊಟ್ಟಿದ್ದಾರೆ. ಈ ಷಡ್ಯಂತರ ಹಿಂದೆ ಮತಾಂಧತೆ ಇದೆ. ಇದರ ಹಿಂದೆ ಮತಾಂತರ ಮಾಫಿಯಾ ಇದೆ. ಲಾಭ ಪಡೆಯುವ ಹುನ್ನಾರವು ಸೇರಿದೆ. ನ್ಯಾಯ ಕೊಡಿಸುವ ನೆಪದಲ್ಲಿ ಧರ್ಮಸ್ಥಳವನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇದರ ಹಿಂದೆ ಇರುವವರ ವಿರುದ್ಧ ಸಿಎಂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ

    ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡಿದವರ ವಿರುದ್ಧ ತನಿಖೆ ಅಗಬೇಕು. ಡಿ.ಕೆ ಶಿವಕುಮಾರ್ ಅವರೇ ಇದರ ಹಿಂದೆ ಷಡ್ಯಂತ್ರ ನಡೀತಿದೆ ಎಂದು ಹೇಳಿದ್ದಾರೆ. ಷಡ್ಯಂತ್ರ ಯಾರು ಮಾಡ್ತಿದ್ದಾರೆ? ಈ ವಿಚಾರವನ್ನು ಬಹಿರಂಗಪಡಿಸಬೇಕು. ಈಗ ಸತ್ಯ ಹೇಳುವುದಕ್ಕೆ ಸೂಕ್ತ ಕಾಲ ಎಂದು ಒತ್ತಾಯಿಸಿದರು.

    ಅನಾಮಿಕನ ಹಿನ್ನೆಲೆಯೂ ತನಿಖೆ ಆಗಬೇಕು. ಅನಾಮಿಕನ ಹಿಂದಿರುವ ಶಕ್ತಿಯ ಬಗ್ಗೆಯೂ ತನಿಖೆ ಆಗಬೇಕು. ದುರುದಾರ ಹೇಳಿದ ಹಾಗೇ ಗುಂಡಿ ತೋಡಲಾಗಿದೆ. ಅಲ್ಲಿ ಏನು ಸಿಕ್ಕಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲ್ಸ ಆಗ್ತಿದೆ: ವಿಶ್ವನಾಥ್‌

  • ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

    ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

    ಬೆಂಗಳೂರು: ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು (Congress) ಬಿಹಾರದಲ್ಲಿ (Bihar) ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಯಾಕೆ ವಿರೋಧಿಸುತ್ತಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಅವರು ಪ್ರಶ್ನಿಸಿದ್ದಾರೆ.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶ- ರಾಜ್ಯದಲ್ಲಿ ಅಕ್ರಮಗಳು ನಡೆದಿವೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ; ನಕಲಿ ಮತದಾರರು ಆ ಪಟ್ಟಿಯಲ್ಲಿದ್ದರು ಎಂದು ಅನೇಕ ವಿಷಯಗಳನ್ನು ರಾಹುಲ್ ಗಾಂಧಿಯವರು ದೇಶದ ಜನತೆಯ ಮುಂದೆ ತೆರೆದಿಟ್ಟಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯ ನಂತರದಲ್ಲಿ ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ಸಿನ ಹಿರಿಯ ನಾಯಕರು ಮೂರ್ಖರಂತೆ ಮಾತನಾಡಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಲೋಕಸಭೆಯನ್ನು ವಿಸರ್ಜನೆ ಮಾಡಬೇಕು ಎಂದು ಮನಬಂದಂತೆ ಮೂರ್ಖರಂತೆ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ

    ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅಕ್ರಮಗಳಾಗಿವೆ ಎಂದು ಆರೋಪಿಸಿದ್ದು, ಈ ವಿಷಯದಲ್ಲಿ ಈಗಾಗಲೇ ಅರವಿಂದ ಲಿಂಬಾವಳಿಯವರಿಗೆ ತಿಳಿಸಿದ್ದೇವೆ. ಅವರು ಪತ್ರಿಕಾಗೋಷ್ಠಿ ಮೂಲಕ ಸಂಪೂರ್ಣ ಮಾಹಿತಿ ನೀಡುತ್ತಾರೆ. ಅಕ್ರಮ ಮತದಾರರು, ನಕಲಿ ಮತದಾರರ ವಿಷಯ ಇಟ್ಟುಕೊಂಡೇ ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಪರಿಷ್ಕರಣೆ ಮಾಡುತ್ತದೆ. ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿಯವರು, ಕಾಂಗ್ರೆಸ್ಸಿನವರು ಬಿಹಾರದಲ್ಲಿ ಅದನ್ನು ಯಾಕೆ ವಿರೋಧಿಸುತ್ತಾರೆ ಎಂದು ಪ್ರಶ್ನಿಸಿದರು.

    ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ಸಿನ ಮೂರ್ಖರು ಹೇಳಿರಬೇಕು
    2005ರಲ್ಲಿ ಡಾ.ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದಾಗ, ಮಮತಾ ಬ್ಯಾನರ್ಜಿ ಅವರು ಸಂಸದರಾಗಿದ್ದು, ಎನ್‍ಡಿಎಯಲ್ಲಿದ್ದರು. ಆಗ ಲೋಕಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದಲ್ಲಿ ಬಾಂಗ್ಲಾ ದೇಶದಿಂದ ಬಂದ ಅಕ್ರಮ ವಲಸಿಗರು ಆ ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿದ್ದಾರೆ. ಇದರ ಕುರಿತು ಚರ್ಚೆ ಆಗಲಿ ಎಂದು ಪ್ರಸ್ತಾಪಿಸಿದ್ದರು. ಸ್ಪೀಕರ್ ಸೋಮನಾಥ ಚಟರ್ಜಿ ಅವರು, ಮಮತಾ ಬ್ಯಾನರ್ಜಿ ಅವರ ಮುಖದ ಮೇಲೆ ಪೇಪರ್ ಬಿಸಾಡಿ, ಅವರನ್ನು ಅಮಾನತು ಮಾಡಿದ್ದರು. ರಾಹುಲ್ ಗಾಂಧಿಯವರಿಗೆ ಇದು ಮರೆತು ಹೋಗಿದೆಯೇ ಎಂದು ಪ್ರಶ್ನಿಸಿದರು.

    ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 16 ಸೀಟ್ ಪಡೆಯಲಿದೆ ಎಂದು ಎಲ್ಲ ಸರ್ವೇಗಳು ಹೇಳಿದ್ದವು ಎಂದು ರಾಹುಲ್ ಗಾಂಧಿಯವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ 16 ಸ್ಥಾನ ಪಡೆಯಲಿದೆ ಎಂದು ಯಾವ ಸರ್ವೇಗಳೂ ಹೇಳಿಲ್ಲ ಎಂದು ತಿಳಿಸಿದರು. 16 ಸೀಟು ಗೆಲ್ಲಲಿದೆ ಎಂದು ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ಸಿನ ಮೂರ್ಖರು ಹೇಳಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಹಿಂದೆ ಬಿಜೆಪಿ 2019ರಲ್ಲಿ ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಿದ್ದಾಗ ರಾಜ್ಯದಿಂದ 25 ಸಂಸದರನ್ನು ಬಿಜೆಪಿ ಕಳಿಸಿಕೊಟ್ಟಿತ್ತು. ಈ ಬಾರಿ ಬಿಜೆಪಿ- ಜೆಡಿಎಸ್ ಸೇರಿ ಕಡಿಮೆ ಸ್ಥಾನ ಪಡೆದಿವೆ. ಹಾಗಿದ್ದರೆ ಅಕ್ರಮ ಆಗಿದೆ ಎಂದು ಬಿಜೆಪಿ ಹೇಳಬೇಕೇ ಎಂದು ಕೇಳಿದರು. ಸಂಜೆ 5ರಿಂದ 6 ಗಂಟೆವರೆಗೆ ಅತಿ ಹೆಚ್ಚು ಮತದಾನದ ಕುರಿತು ರಾಹುಲ್ ಗಾಂಧಿ ಹೇಳಿದ್ದಾರೆ. ಹಾಗಿದ್ದರೆ ಅವರೇನು ಮೊದಲ ಬಾರಿ ಸಂಸದರಾಗಿದ್ದಾರಾ? ಬಿಸಿಲು ಕಡಿಮೆ ಇರುವ ಕಾರಣ ದೇಶಾದ್ಯಂತ ಸಂಜೆ 5ರಿಂದ 6 ಗಂಟೆವರೆಗೆ ಬಿರುಸಿನ ಮತದಾನ ನಡೆಯುವುದು ಸಹಜ. ಎಲ್ಲ ಪಕ್ಷದವರು ಮತದಾರರ ಮನೆಗೆ ಹೋಗಿ ಮತ ಹಾಕಿಸಲು ಶ್ರಮಿಸುತ್ತಾರೆ ಎಂದರು.

    ಕಾಂಗ್ರೆಸ್ ಇವತ್ತು ಮೂರ್ಖರ ಪಕ್ಷ
    ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದವರು, ಸೋಲಿನ ಹತಾಶೆಯಿಂದ ಮಾತನಾಡಿದ್ದಾರೆ. ಇವತ್ತು ರಾಹುಲ್ ಗಾಂಧಿಯವರು ಬೆಂಗಳೂರಿಗೆ ಬಂದು ಆರ್ಭಟ ಮಾಡಿ ಹೋಗಲಿದ್ದಾರೆ. ಇದು ಸೋಲಿನ ಹತಾಶೆಯಿಂದ ಮತದಾರರಿಗೆ ಮಾಡುವ ಅಪಮಾನವೇ ಹೊರತು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಚುನಾವಣೆ ಮುಗಿದು ಫಲಿತಾಂಶ ಬಂದು 45 ದಿನಗಳೊಳಗೆ ಲಿಖಿತವಾಗಿ ಆಕ್ಷೇಪ ಸಲ್ಲಿಸಬೇಕಿತ್ತು. ಬೆಂಗಳೂರು ಸೆಂಟ್ರಲ್‍ನ ಸೋತ ಕಾಂಗ್ರೆಸ್ ಅಭ್ಯರ್ಥಿ ಪ್ರಶ್ನೆ ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷವು ಇವತ್ತು ಮೂರ್ಖರ ಪಕ್ಷವಾಗಿದೆ.

    ಮಹದೇವಪುರದ ಕುರಿತು ಮಾತನಾಡುವ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಗರಿಷ್ಠ ಅಲ್ಪಸಂಖ್ಯಾತರಿರುವ ಚಾಮರಾಜಪೇಟೆ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಎಷ್ಟು ನಕಲಿ ಮತದಾರರಿದ್ದಾರೆ ಎಂದು ಪರಿಶೀಲಿಸಲಿ; ಆ ಕುರಿತು ಚರ್ಚೆಗೆ ಬರಲಿ. ಸಂಸತ್ತಿನಲ್ಲಿ ಎದುರಿಸಲು ತಾಕತ್ತಿಲ್ಲ; ಜ್ವಲಂತ ಸಮಸ್ಯೆ ಕುರಿತು ಇವರು ಮಾತನಾಡುವುದಿಲ್ಲ ಎಂದು ಟೀಕಿಸಿದರು. ಪ್ರಧಾನಿ ಆಗುವ ರಾಹುಲ್ ಗಾಂಧಿಯವರ ಕನಸು ಕನಸಾಗಿಯೇ ಇರಲಿದೆ. ಇವರ ಹೇಳಿಕೆಯಲ್ಲಿ, ನಿಲುವಿನಲ್ಲಿ ದ್ವಂದ್ವ ಇದೆ ಎಂದು ಹೇಳಿದರು. ಇದನ್ನೂ ಓದಿ: ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಸುಧಾಕರ್‌ ಗುರಿಯಾಗಿಸಿ FIR: ಆರ್‌.ಅಶೋಕ್‌ ಕಿಡಿ

  • ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ

    ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ

    ಬೆಂಗಳೂರು: ಬಹಳ ದಿನಗಳ ಕನಸು, ಬೆಂಗಳೂರಿನ ಹಳದಿ (ಯೆಲ್ಲೋ) ಮೆಟ್ರೋ ಲೈನ್ (Yellow Metro Line) ಅನ್ನು ಇದೇ ಆ. 10ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ತಿಳಿಸಿದರು.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಲ್ಲೋ ಲೈನ್ ಕನಿಷ್ಠ 8 ಲಕ್ಷ ಜನರಿಗೆ ಅನುಕೂಲ ಆಗಲಿದೆ. ಪ್ರಧಾನಿಯವರು ಬೆಳಗ್ಗೆ ಬೆಂಗಳೂರಿಗೆ (Bengaluru) ಬರಲಿದ್ದು, ಹೆಲಿಕಾಪ್ಟರ್ ಮೂಲಕ ಮೇಖ್ರಿ ವೃತ್ತದ ಬಳಿ ಇರುವ ಮಿಲಿಟರಿ ಮೈದಾನಕ್ಕೆ ಆಗಮಿಸುವರು. ಬಳಿಕ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮೂಲಕ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ಗೆ ಬಂದು ತಲುಪುವರು. ಅಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ವಂದೇ ಭಾರತ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

    ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಸೌತ್ ಎಂಡ್ ವೃತ್ತದ ಮೂಲಕ ರಾಗಿಗುಡ್ಡ ತಲುಪುವರು. ಬಳಿಕ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್‌ನಲ್ಲೂ ಕಾರ್ಯಕ್ರಮ ಇದೆ. ಪ್ರಧಾನಿಯವರು ಬರುವ ಸಂದರ್ಭವನ್ನು ಬೆಂಗಳೂರಿನ ಮಹಾಜನತೆ ಕಾತುರದಿಂದ ಕಾಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಪ್ರಧಾನಿಯವರನ್ನು ಬಹಳ ಸಂತೋಷದಿಂದ ಸ್ವಾಗತಿಸಲು ಸಿದ್ಧರಾಗಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಂಗಳೂರಿನ ಮಹಾಜನತೆ ಕೈಜೋಡಿಸಬೇಕೆಂದು ವಿನಂತಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

    ಮೆಟ್ರೋ ಕಾಮಗಾರಿಯು ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ವೇಗ ಪಡೆದಿತ್ತು. ಈಗ ಬೆಂಗಳೂರಿನಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಇದೆ ಎಂದು ವಿಶ್ಲೇಷಿಸಿದರು. ಭಾರತದ ಪ್ರಧಾನ ಮಂತ್ರಿಯವರು ಮೆಟ್ರೋ ಲೋಕಾರ್ಪಣೆಗೆ ಬರುತ್ತಿದ್ದಾರೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಶ್ನೆಗೆ ಉತ್ತರಿಸಿದರು.

    ಪ್ರಧಾನಿಯವರ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ
    ಪ್ರಧಾನಿಯವರನ್ನು ಬೆಂಗಳೂರಿನ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್‌ಎಂಡ್ ಸರ್ಕಲ್, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್‌ಗಳ ಬಳಿ ಮತ್ತು ಮೆಟ್ರೋ ಹಳದಿ ಮಾರ್ಗದ ಎಲ್ಲ ಮೆಟ್ರೋ ಸ್ಟೇಷನ್‌ಗಳಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.