Tag: B. Z. Zameer Ahmed Khan

  • ವಸತಿ ಯೋಜನೆಗಳ ಸಹಾಯಧನ ಹೆಚ್ಚಳಕ್ಕೆ ಕ್ರಮ: ಸಚಿವ ಜಮೀರ್

    ವಸತಿ ಯೋಜನೆಗಳ ಸಹಾಯಧನ ಹೆಚ್ಚಳಕ್ಕೆ ಕ್ರಮ: ಸಚಿವ ಜಮೀರ್

    ಬೆಂಗಳೂರು: ವಿವಿಧ ವಸತಿ ಯೋಜನೆಯಡಿ ಸರ್ಕಾರ ಕೊಡುವ ಸಹಾಯಧನವನ್ನ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಆದಷ್ಟು ಬೇಗ ಸಹಾಯಧನ ಹೆಚ್ಚಳಕ್ಕೆ ನಿರ್ಧಾರ ಮಾಡುವುದಾಗಿ ವಸತಿ ಸಚಿವ ಜಮೀರ್ ಅಹ್ಮದ್‌ (Zameer Ahmed) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಡಿ.ಟಿ.ಶ್ರೀನಿವಾಸ್ ವಸತಿ ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ವಸತಿ ಯೋಜನೆಯಡಿ ಒಂದೇ ಒಂದು ಮನೆ ಹಂಚಿಕೆ ಮಾಡಿಲ್ಲ. 2024-25ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಒಳಗೊಂಡಂತೆ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಲಾಗಿತ್ತು. ಈವರೆಗೂ 1,49,521 ಮನೆಗಳನ್ನ ಪೂರ್ಣಗೊಳಿಸಲಾಗಿದೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಸರ್ಕಾರದ ವೇತನ; ಸಮಿತಿ ರದ್ದಿಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

    2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ(ಗ್ರಾಮೀಣ) ರಾಜ್ಯಕ್ಕೆ 7.03 ಲಕ್ಷ ಮನೆ ಗುರಿ ಹಂಚಿಕೆ ಮಾಡಲಾಗಿದೆ. ಈವರೆಗೆ 1.17 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡಿ ಮಂಜೂರು ಮಾಡಲಾಗಿದೆ. ಬಾಕಿ ಮನೆಗಳ ಹಂಚಿಕೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ನನ್ನು ಪೊಲೀಸರ ವಶದಿಂದ ಬಿಡಿಸಲು ಯತ್ನ – ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಅಮನ್ ಸಾವೊ!

    ವಿವಿಧ ವಸತಿ ಯೋಜನೆಯಡಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆಯಿದೆ. ಸಿಎಂ ಬಳಿ ಈ ಬಗ್ಗೆ ಚರ್ಚೆ ಮಾಡಲಾಗಿದೆ. ವಸತಿ ಯೋಜನೆಯಡಿ ನೀಡಲಾಗುತ್ತಿರುವ 1.20 ಲಕ್ಷ ರೂ. ಸಹಾಯಧನ ಸಾಕಾಗುತ್ತಿಲ್ಲ. ಇದನ್ನ ಜಾಸ್ತಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಾಮಾನ್ಯ ವರ್ಗಕ್ಕೆ 3 ಲಕ್ಷ ರೂ. ಮತ್ತು ಪರಿಶಿಷ್ಟ ಜಾತಿ-ಪಂಗಡಗಳಿಗೆ 2 ಲಕ್ಷ ರೂ. ಜಾಸ್ತಿ ಮಾಡಲು ಮನವಿ ಮಾಡಿದ್ದೇವೆ. ವಸತಿ ಯೋಜನೆ ಸಹಾಯಧನ ಹೆಚ್ಚಳ ಮಾಡುವ ಇಚ್ಛೆ ಸರ್ಕಾರಕ್ಕಿದೆ ಎಂದು ತಿಳಿಸಿದರು. ಇದನ್ನೂ ಓದಿ: 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ, ಶಕ್ತಿ ಯೋಜನೆಗೆ ಸರ್ಕಾರ 2,000 ಕೋಟಿ ಹಣ ಬಾಕಿ ಕೊಡಬೇಕು: ರಾಮಲಿಂಗಾ ರೆಡ್ಡಿ

  • ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ – ಜಮೀರ್ ಅಹ್ಮದ್ ಎಚ್ಚರಿಕೆ

    ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ – ಜಮೀರ್ ಅಹ್ಮದ್ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆಯಾಗುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed Khan) ಎಚ್ಚರಿಕೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ವಿರೋಧಿಸಿ ಕಾಂಗ್ರೆಸ್ (Congress) ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಇಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ (BJP) ಕಚೇರಿಯಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ:  ನಾನು ಯಾವುದೇ ತಪ್ಪು ಮಾಡಿಲ್ಲ.. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ: ಸಿದ್ದರಾಮಯ್ಯ

    ಬಿಜೆಪಿ ಕಾಲದಲ್ಲಿಯೇ 14 ಸೈಟ್ ನೀಡಲಾಗಿದೆ. ಸಿಎಂ ಪ್ರಸಿದ್ಧಿಯನ್ನು ಸಹಿಸಲು ಆಗದೇ, ಸರ್ಕಾರ ಉರುಳಿಸುವ ಯತ್ನ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಜನ ಯಾವತ್ತೂ ಬಹುಮತ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು: ಐವನ್‌ ಡಿಸೋಜ

    ಯಡಿಯೂರಪ್ಪ ಸಿಎಂ ಆಗಿದ್ದಾಗ ಜೈಲಿಗೆ ಹೋಗಿದ್ದರು. ಯಾವ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಿರಿ? ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಲೋಕಾಯುಕ್ತರು ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಾರೆ. ಅದಕ್ಕೆ ನೀವು ಯಾಕೆ ಅನುಮತಿ ಕೊಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹ

    ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ಬಿಜೆಪಿ, ಜೆಡಿಎಸ್ ಏನೇ ಮಾಡಿದರೂ ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನದಿಂದ ಕೆಳಗಿಸಲು ಆಗುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್, ರಾಜ್ಯದ 7 ಕೋಟಿ ಜನ ಸಿಎಂ ಪರವಾಗಿದ್ದಾರೆ. ಕರ್ನಾಟಕದ ಜನ ಸುಮ್ಮನೆ ಕೂರಲ್ಲ ಎಂದು ಸಚಿವ ಜಮೀರ್ ಅಹ್ಮದ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ:  ರಷ್ಯಾ ಯುದ್ಧದ ಬಳಿಕ ಮೊದಲ ಬಾರಿಗೆ ಉಕ್ರೇನ್‌ಗೆ ತೆರಳಲಿದ್ದಾರೆ ಮೋದಿ

  • ಬಿಜೆಪಿಗರು ಜಮೀರ್ ವಿಮಾನದ ಬಗ್ಗೆ ಮಾತಾಡೋ ಬದಲು ಪ್ರಧಾನಿಗಳಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾರೆಡ್ಡಿ

    ಬಿಜೆಪಿಗರು ಜಮೀರ್ ವಿಮಾನದ ಬಗ್ಗೆ ಮಾತಾಡೋ ಬದಲು ಪ್ರಧಾನಿಗಳಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾರೆಡ್ಡಿ

    ಬೆಂಗಳೂರು: ಬಿಜೆಪಿ ನಾಯಕರು ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ವಿಮಾನದ ಬಗ್ಗೆ ಮಾತನಾಡುವ ಬದಲು ಪ್ರಧಾನಿಯವರಿಗೆ ಹೇಳಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ ಎಂದು ಬಿಜೆಪಿ (BJP) ವಿರುದ್ಧ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅವರು ವಿಮಾನದಲ್ಲಿ ಹಾಡು ಹಾಕಿಕೊಂಡು ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ನಾಯಕರು, ಚಿಕ್ಕ ಪುಟ್ಟ ಹಾಗೂ ದೊಡ್ಡ ನಾಯಕರು ಎಲ್ಲರೂ ಜಮೀರ್ ಅವರ ವಿಮಾನ ಪ್ರಯಾಣದ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಪ್ರಯಾಣ ಎರಡೂವರೆ ಗಂಟೆ ಇರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬ್ರಿಗೇಡ್ ರೋಡ್, ಎಂ.ಜಿ.ರೋಡ್‍ನಲ್ಲಿ ಯಾವುದೇ ನಿರ್ಬಂಧವಿಲ್ಲ: ಪರಮೇಶ್ವರ್

    ಜಮೀರ್ ವಿಷಯ ಹಾಗೆ ಇರಲಿ, ರಾಜ್ಯದಲ್ಲಿ ಬರಗಾಲ ಆಗಿ 223 ತಾಲೂಕು ಬರ ಎಂದು ಘೋಷಣೆ ಆಗಿದೆ. ಕೇಂದ್ರ ಬರ ಪರಿಹಾರ ಹಣ ಕೊಡಿಸುವ ಕೆಲಸವನ್ನು ಮೊದಲು ಬಿಜೆಪಿಗರು ಮಾಡಲಿ. ನಮ್ಮ ಮಂತ್ರಿಗಳು ಕೇಂದ್ರದ ನಾಯಕರ ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಯಾಕೆ ಪರಿಹಾರ ಬಿಡುಗಡೆ ಮಾಡಿಲ್ಲ? ಬಿಜೆಪಿ ನಾಯಕರು ನಿಮ್ಮ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿದ್ದೀರಾ ಎಂದು ಕಿಡಿಕಾರಿದ್ದಾರೆ.

    ಬಿಜೆಪಿಗರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಪರಿಹಾರ ಕೊಡಿ ಎಂದು ಹೇಳ್ತಿಲ್ಲ. ಬಿಜೆಪಿಯವರ ನಿಯೋಗ ಹೋಗಿ ಪರಿಹಾರ ಕೇಳಲಿ, ಬರ ಪರಿಹಾರದ ಬಗ್ಗೆ ಕೇಳುವ ಧೈರ್ಯ ಇಲ್ಲ. ಇವರು ಜಮೀರ್ ಬಗ್ಗೆ ಮಾತಾನಾಡುತ್ತಾರೆ. ಜಮೀರ್ ಐಷಾರಾಮಿ ವಿಮಾನದಲ್ಲಿ ಹೋದರು. ನೀವು ಏನು ಮಾಡಿದ್ರಿ ಹೇಳಿ ಮೊದಲು. ಹಣ ಬಿಡುಗಡೆ ಬಗ್ಗೆ ಯಾಕೆ ಹೇಳ್ತಿಲ್ಲ. ಬಿಜೆಪಿ ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಹಣ ಬಿಡುಗಡೆ ಮಾಡ್ತಿಲ್ಲ. 25 ಸಂಸದರು ಏನ್ ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಪ್ರಕರಣ ತನಿಖೆ ಆಗಬೇಕು: ಜಿ.ಪರಮೇಶ್ವರ್

  • ರಾಜ್ಯದಲ್ಲಿ ಬರ ಪರಿಸ್ಥಿತಿ – ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಸಲು ನಿರ್ಧಾರ

    ರಾಜ್ಯದಲ್ಲಿ ಬರ ಪರಿಸ್ಥಿತಿ – ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಸಲು ನಿರ್ಧಾರ

    ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವ (Hampi Utsava) ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ (Zameer Ahmed) ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲ ಗೂಟದ ಕಾರ್ ಕಂಡಿದ್ದು ಬಿಜೆಪಿಯಿಂದ: ಈಶ್ವರಪ್ಪ

    ರಾಜ್ಯದಲ್ಲಿ ವಿಜಯನಗರ-ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

    ಈ ಮುಂಚೆ ನವೆಂಬರ್‌ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ರಾಜ್ಯದ ಜನರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಕುಮಾರಸ್ವಾಮಿ

    ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ದಿವಾಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನುಡಿದಂತೆ ನಡೆವ ಪಕ್ಷ ಕಾಂಗ್ರೆಸ್: ಜಮೀರ್

    ನುಡಿದಂತೆ ನಡೆವ ಪಕ್ಷ ಕಾಂಗ್ರೆಸ್: ಜಮೀರ್

    – ಚಾಮರಾಜಪೇಟೆಯಲ್ಲಿ ಗೃಹಲಕ್ಷ್ಮಿಗೆ ಚಾಲನೆ

    ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ನುಡಿದಂತೆ ನಡೆದು ಜನರ ಬಳಿ ಮತ ಕೇಳುತ್ತದೆ. ಬಿಜೆಪಿ ದ್ವೇಷದ ಭಾವನೆ ಮೂಡಿಸಿ ಮತ ಕೇಳುತ್ತದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ (Zameer Ahmed) ತಿಳಿಸಿದರು.

    ಚಾಮರಾಜಪೇಟೆ ಕಸ್ತೂರಿ ನಗರದ ಬಿಬಿಎಂಪಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ್ದು ಅಭಿವೃದ್ಧಿ ಮಂತ್ರ, ಬಿಜೆಪಿ ಅವರದು ದ್ವೇಷದ ತಂತ್ರ ಎಂದು ಹೇಳಿದರು. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

    ಕಾಂಗ್ರೆಸ್ ಪಕ್ಷವು ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಪೈಕಿ ನಾಲ್ಕು ಈಡೇರಿಸಿದೆ. ಇಂದು ಗೃಹಲಕ್ಷ್ಮಿ 1.28 ಕೋಟಿ ಮನೆ ಯಜಮಾನಿಯರ ಖಾತೆಗೆ ತಲಾ ಎರಡು ಸಾವಿರ ಜಮೆ ಆಗಿದೆ. ಇಷ್ಟು ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

    ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಮ್ಮ ಸರ್ಕಾರ ಮುನ್ನಡೆಯುತ್ತಿದೆ. ಗೃಹಜ್ಯೋತಿಯಡಿ 1.42 ಕೋಟಿ ಕುಟುಂಬಗಳಿಗೆ ಅನುಕೂಲ ಆಗಿದೆ. ಶಕ್ತಿ ಯೋಜನೆಯಡಿ 48 ಕೋಟಿ ಮಹಿಳೆಯರು 1,000 ಕೋಟಿ ರೂ. ಮೊತ್ತದಷ್ಟು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 1.20 ಕೋಟಿ ಕುಟುಂಬಕ್ಕೆ ಐದು ಕೆಜಿ ಅಕ್ಕಿ ಮೊತ್ತ ಜಮೆ ಮಾಡಿದ್ದೇವೆ. ಮತ್ತೊಂದು ಗ್ಯಾರಂಟಿ ಶೀಘ್ರವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ: ರಾಹುಲ್ ಗಾಂಧಿ

    ಕಾಂಗ್ರೆಸ್ ಸರ್ಕಾರ ಎಂದರೆ ಬಡವರ ಪರ ಸರ್ಕಾರ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬಡವರ ಪರ ಯೋಜನೆ ರೂಪಿಸಿ ಕೆಲಸ ಮಾಡಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಇದು ನಮ್ಮ ಬದ್ಧತೆ ಎಂದು ತಿಳಿಸಿದರು. ಮುಖಂಡರಾದ ಅಲ್ತಾಫ್ ಖಾನ್, ಡಿ.ಸಿ. ರಮೇಶ್, ಸುಜಾತ ರಮೇಶ್, ಸರ್ವರ್, ಗೌಸಿ, ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ: ಮುಸ್ಲಿಮರಲ್ಲಿ ಜಮೀರ್ ಮನವಿ

    ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ: ಮುಸ್ಲಿಮರಲ್ಲಿ ಜಮೀರ್ ಮನವಿ

    ಬಾಗಲಕೋಟೆ: ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭವಾಗುತ್ತದೆ. ಆದ್ದರಿಂದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಓಟು ಹಾಕಬೇಕು ಎಂದು ಮಾಜಿ ಸಚಿವ, ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (B.Z.Zameer Ahmed Khan) ಮುಸ್ಲಿಮರಲ್ಲಿ ಮನವಿ ಮಾಡಿದರು.

    ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಸರ್ಕಾರದ ಅನ್ನಭಾಗ್ಯದ ಮಹತ್ವ ಕೊರೊನಾ ವೇಳೆ ಎಲ್ಲರಿಗೂ ಗೊತ್ತಾಯಿತು. ನನ್ನ ಕ್ಷೇತ್ರದ ಸ್ಲಮ್‍ಗಳ ಜನರು ದೇವರ ಮನೆಯಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಟ್ಟುಕೊಂಡಿದ್ದರು ಎಂದು ಹೇಳಿದರು. ಇದನ್ನೂ ಓದಿ: ‘KD’ ಅಡ್ಡಾದಲ್ಲಿ ಸಿಗ್ತಾರಂತೆ ಗುಳಿಕೆನ್ನೆ ಚೆಲುವೆ ಶಿಲ್ಪಾ ಶೆಟ್ಟಿ

    ಬಿಜೆಪಿ (BJP) ಆಡಳಿತದಲ್ಲಿ ಅಡುಗೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅದೇ ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಮನೆಯ ಒಡತಿಗೆ ವರ್ಷಕ್ಕೆ 24 ಸಾವಿರ ರೂ. ಕೊಡುತ್ತೇವೆ. ಕಾಂಗ್ರೆಸ್ ಸರ್ಕಾರ ಯಾವಾಗ ಆಡಳಿತಕ್ಕೆ ಬಂದಿದೆಯೋ ಆಗ ಜನರಿಗೆ ಒಳ್ಳೆಯದಾಗಿದೆ. ಬಡವರ ಬಗ್ಗೆ ಕಾಳಜಿ ಮನಸ್ಸಿನಲ್ಲಿ ಇರಬೇಕು. ಬಿಜೆಪಿ ಬರೀ ಲೂಟಿ ಹೊಡೆಯುತ್ತಿದೆ ಎಂದು ಹರಿಹಾಯ್ದರು.

    ಬಿಜೆಪಿ ಸಾಧನೆ ಮೇಲೆ ಮತಗಳನ್ನು ಕೇಳುವುದಿಲ್ಲ. ಹಿಂದೂ ಮುಸ್ಲಿಂ ಜನರ ನಡುವೆ ಜಗಳ ತಂದಿಟ್ಟು ಮತ ಕೇಳುತ್ತಾರೆ. ನನ್ನ ಕ್ಷೇತ್ರದಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ 190 ಕೋಟಿ ರೂ. ಅನುದಾನ ತಂದಿದ್ದೆ. ಬಿಜೆಪಿ ಸರ್ಕಾರ ಬಂದಮೇಲೆ ಅದನ್ನೂ ಕೊಡಲಿಲ್ಲ. ಬಳಿಕ 20% ಕಮಿಷನ್ ಪಡೆದು 80 ಲಕ್ಷ ರೂ. ಅನುದಾನ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು.

     ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಅವರು ತಂದೆ ಸಿದ್ದು ನ್ಯಾಮಗೌಡರಿಗೆ ತಕ್ಕ ಮಗ. ಅಭಿವೃದ್ಧಿಯಲ್ಲಿ ತಂದೆಗೂ ಅಧಿಕ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಭರ್ಜರಿ ರೋಡ್‌ ಶೋ – ಮೋದಿಯಿಂದ ಮತ ಬೇಟೆ

  • ಕೆಜಿಎಫ್ ಬಾಬು ಪತ್ನಿ ಶಾಜೀಯ ತರನ್ನುಮ್ ವಿಚಾರಣೆ ನಡೆಸಿದ ಇಡಿ

    ಕೆಜಿಎಫ್ ಬಾಬು ಪತ್ನಿ ಶಾಜೀಯ ತರನ್ನುಮ್ ವಿಚಾರಣೆ ನಡೆಸಿದ ಇಡಿ

    ನವದೆಹಲಿ: ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಷರೀಫ್ ಅವರ ಪತ್ನಿ ಶಾಜೀಯ ತರನ್ನುಮ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ದೆಹಲಿಯ ವಿದ್ಯುತ್ ಲೇನ್ ಕಚೇರಿಯಲ್ಲಿ ಇಡಿ ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಕೆಜಿಎಫ್ ಬಾಬು ಅವರನ್ನು ವಿಚಾರಣೆ ನಡೆಸಿದ್ದ ಅಧಿಕಾರಿಗಳು ಬಳಿಕ ಅವರ ಪತ್ನಿ ಶಾಜೀಯ ತರನ್ನುಮ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಿನ್ನೆಲೆ ಇಂದು ಅವರು ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಡಬಲ್ ಎಂಜಿನ್ ಸರ್ಕಾರ ಡ್ರಗ್ ಮಾಫಿಯಾಗೆ ಪ್ರೋತ್ಸಾಹ ಕೊಡುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

    ಶಾಸಕ ಜಮೀರ್ ಅಹ್ಮದ್ ಜೊತೆಗೆ ಹಣಕಾಸು ವ್ಯವಹಾರ ಹೊಂದಿದ್ದ ಹಿನ್ನೆಲೆ ಕೆಜಿಎಫ್ ಬಾಬು ಕುಟುಂಬವನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಾಸಕ ಜಮೀರ್‌ ಅಹ್ಮದ್‌ಗೆ ಮನೆ ಕಟ್ಟಲು 2013ರಲ್ಲಿ ಡಿಡಿ ಮೂಲಕ 3.5 ಕೋಟಿ ಹಣವನ್ನು ಬಾಬು ನೀಡಿದ್ದರು. ಆದರೆ ಈವರೆಗೂ ಆ ಹಣವನ್ನು ಜಮೀರ್ ಅಹ್ಮದ್ ವಾಪಸ್ ‌ನೀಡಿಲ್ಲ.

    ಅಕ್ರಮ ಹಣ ವರ್ಗಾವಣೆ ಮತ್ತು ಐಎಂಎ ಕೇಸ್ ಬೆನ್ನು ಹತ್ತಿರುವ ಇಡಿ ಅಧಿಕಾರಿಗಳು ಜಮೀರ್ ಅಹ್ಮದ್ ಅಕೌಂಟ್ ಡಿಟೈಲ್ಸ್ ತೆಗೆದಿದ್ದು, ಇದರಲ್ಲಿ ಬಾಬು ಅವರು ಸಾಲ ನೀಡಿದ್ದು ಅದನ್ನು ವಾಪಸ್ ನೀಡದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಕೆಜಿಎಫ್ ಬಾಬು ನಾನು ಹಣ ನೀಡಿರುವುದು ಸತ್ಯ ಅದಕ್ಕೆ ದಾಖಲೆಗಳಿವೆ. ಅದು ಕಾನೂನು ಬದ್ಧ ಹಣ ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 36 ರೂ. ಇಳಿಕೆ

    ಆದರೆ ಈ ಉತ್ತರದಿಂದ ತೃಪ್ತರಾಗದ ಅಧಿಕಾರಿಗಳು ಈಗ ಅವರ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಕೆಜಿಎಫ್ ಬಾಬು ಆಸ್ತಿ, ವ್ಯವಹಾರ ಸೇರಿದಂತೆ ಮತ್ತಷ್ಟು ಹಣಕಾಸು ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಜಮೀರ್ ಅಹ್ಮದ್‌ಗೆ ನೀಡಿದ ಸಾಲ ಕೆಜಿಎಫ್ ಬಾಬುಗೆ ಕಂಟಕವಾಗುವ ಸಾಧ್ಯತೆಗಳಿವೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್

    ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್

    ಬೆಂಗಳೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರದಿಂದ ಒಂದೊಂದು ರೂಪ ಪಡೆದುಕೊಳ್ಳುತ್ತಿದೆ. ಪೊಲೀಸ್ ಅಧಿಕಾರಿಗಳು ಒಂದು ಹೇಳಿದರೆ ಗೃಹ ಮಂತ್ರಿ ಬೇರೆ ಹೇಳಿಕೆ ಕೊಡುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ ಜಮೀರ್ ಅಹ್ಮದ್ ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ.

    ಚಂದ್ರು ನಿವಾಸಕ್ಕೆ ತೆರಳಿದ ಜಮೀರ್ ಅಹ್ಮದ್ ಅವರ ಅಜ್ಜಿಗೆ ಸಮಾಧಾನ ಮಾಡಿದ್ದಾರೆ. ಈ ವೇಳೆ ಅವರಿಗೆ 2 ಲಕ್ಷ ರೂ. ಪರಿಹಾರ ನೀಡಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಅವರು, ಚಿಕನ್ ರೋಲ್ ತಿನ್ನಬೇಕು ಎಂದು ಹೊರಗಡೆ ಹೋದಾಗ ಗಲಾಟೆಯಾಗಿದೆ. ಚಾಕುವಿನಲ್ಲಿ ಚುಚ್ಚಿದ್ದಾರೆ. ಫುಟ್‍ಪಾತ್‍ನಲ್ಲಿ ಜೀವನ ಮಾಡ್ಕೊಂಡು ಪಾಪ ಅವರ ಅಜ್ಜಿ ಅವನನ್ನು ಸಾಕಿದ್ದಾರೆ. ನಾನು 2 ಲಕ್ಷ ಪರಿಹಾರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

    ಆರಗ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಅವರು, ಹೋಂ ಮಿನಿಸ್ಟರ್ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಗಾಡಿ ಆಕ್ಸಿಡೆಂಟ್ ನಡೆದ ಮೇಲೆ ವಾಗ್ವಾದ ನಡೆದಿದೆ ಎಂದು ಉತ್ತರಿಸಿದ್ದಾರೆ.