Tag: Baba Ramdev

  • ಶರ್ಬತ್ ಜಿಹಾದ್: ಬಾಬಾ ರಾಮ್‌ದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ

    ಶರ್ಬತ್ ಜಿಹಾದ್: ಬಾಬಾ ರಾಮ್‌ದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ

    ನವದೆಹಲಿ: ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಅವರನ್ನು ದೆಹಲಿ ಹೈಕೋರ್ಟ್ (Delhi High Court) ತರಾಟೆಗೆ ತೆಗೆದುಕೊಂಡಿದೆ.

    ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, `ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ಇಂತಹ ಹೇಳಿಕೆ ಸಮರ್ಥನೀಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

    ಹಮ್ದರ್ದ್ ಕಂಪನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಯಾವುದೇ ಅಡೆತಡೆಯಿಲ್ಲದೆ ನಡೆದುಕೊಳ್ಳುತ್ತಿದ್ದಾರೆ. ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡಿದ್ದಾರೆ. ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನವನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ದೇಶದಲ್ಲಿ ಈಗಾಗಲೇ ನಮಗೆ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ. ಇಂತಹ ವಿಡಿಯೋಗಳು ಸಾಮಾಜಿಕ ವೇದಿಕೆಯಲ್ಲಿ ಒಂದು ನಿಮಿಷವೂ ಇರಬಾರದು. ಇಂತಹ ಹೇಳಿಕೆಗಳಿಗೆ ಕಾನೂನಿನ ರಕ್ಷಣೆ ನೀಡಬಾರದು ಎಂದು ವಾದಿಸಿದರು.

    ಏ.3 ರಂದು ತಮ್ಮ ಕಂಪನಿಯ ಉತ್ಪನ್ನವಾದ `ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ನೀವು ಆ ಶರಬತ್ತು ಕುಡಿದರೆ, ಮದರಸಾಗಳು ಮತ್ತು ಮಸೀದಿಗಳು ನಿರ್ಮಾಣವಾಗುತ್ತವೆ. ನೀವು ಪತಂಜಲಿಯ ಗುಲಾಬಿ ಸಿರಪ್ ಕುಡಿದರೆ, ಗುರುಕುಲಗಳು ರೂಪುಗೊಳ್ಳುತ್ತವೆ. ಆಚಾರ್ಯಕುಲಂ ಅಭಿವೃದ್ಧಿ ಹೊಂದುತ್ತದೆ, ಪತಂಜಲಿ ವಿಶ್ವವಿದ್ಯಾಲಯವು ವಿಸ್ತರಿಸುತ್ತದೆ ಮತ್ತು ಭಾರತೀಯ ಶಿಕ್ಷಣ ಮಂಡಳಿಯು ಪ್ರಗತಿ ಹೊಂದುತ್ತದೆ. ರೂಹ್ ಅಫ್ಜಾ ಸಿರಪ್ ಅನ್ನು ಲವ್ ಜಿಹಾದ್‌ಗೆ ಹೋಲಿಸಿ, ಲವ್ ಜಿಹಾದ್ ಇರುವಂತೆಯೇ, ಇದು ಕೂಡ ಒಂದು ರೀತಿಯ ಶರಬತ್ ಜಿಹಾದ್ ಆಗಿದೆ. ಈ ಶರ್ಬತ್ ಜಿಹಾದ್‌ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಈ ಸಂದೇಶ ಎಲ್ಲರಿಗೂ ತಲುಪಬೇಕು ಎಂದಿದ್ದರು.

    ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ರಾಮ್‌ದೇವ್ ತಮ್ಮ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ‍್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.ಇದನ್ನೂ ಓದಿ: ಕೃತಿ ಸನೋನ್‌ಗೆ ಬಂಪರ್ ಆಫರ್- ಸ್ಟಾರ್ ನಟನ ಜೊತೆ ರೊಮ್ಯಾನ್ಸ್

  • ಐದು ಲಕ್ಷ ಕೋಟಿಯ ಸಾಮ್ರಾಜ್ಯ ಕಟ್ಟುವ ಕನಸಿದೆ: ಬಾಬಾ ರಾಮ್‌ದೇವ್‌

    ಐದು ಲಕ್ಷ ಕೋಟಿಯ ಸಾಮ್ರಾಜ್ಯ ಕಟ್ಟುವ ಕನಸಿದೆ: ಬಾಬಾ ರಾಮ್‌ದೇವ್‌

    – ಉಡುಪಿಯಲ್ಲಿ ಅಖಿಲಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ

    ಉಡುಪಿ: ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕೆಂಬ ಕನಸಿದೆ ಎಂದು ಯೋಗ ಗುರು, ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಆಶಯ ವ್ಯಕ್ತಪಡಿಸಿದ್ದಾರೆ.

    ಉಡುಪಿ ಶ್ರೀಕೃಷ್ಣ ಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ಆರಂಭವಾಗಿದೆ. ಪತಂಜಲಿ ಯೋಗ ಪೀಠದ ಯೋಗ ಗುರು ಬಾಬಾ ರಾಮದೇವ್ ಮೂರು ದಿನಗಳ ಈ ಸಮ್ಮೇಳನ ಉದ್ಘಾಟನೆ ಮಾಡಿದರು.

    ದೇಶ-ವಿದೇಶಗಳ ನೂರಾರು ವಿದ್ವಾಂಸರು ಈ ಸಮಾವೇಶದಲ್ಲಿ ಭಾಗಿಯಾದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ, ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ ಆಯೋಜನೆ ಮಾಡಿರುವ 51ನೇ ಐತಿಹಾಸಿಕ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ಆರಂಭಗೊಂಡಿದೆ. ಯೋಗ, ಆಯುರ್ವೇದ, ವೈಷ್ಣವ ಭಕ್ತಿ, ಭಗವದ್ಗೀತೆ, ಇರಾನಿಯನ್ ಪರ್ಶಿಯನ್ ಸಹಿತ 23 ವಿಷಯಗಳ ಬಗ್ಗೆ ವಿವಿಧ ಗೋಷ್ಠಿಗಳು ಆಯೋಜನೆಯಾಗಿದೆ.

    ಕಾರ್ಯಕ್ರಮ ಉದ್ಘಾಟಿಸಿದ ಬಾಬಾ ರಾಮ್‌ದೇವ್ 5 ಲಕ್ಷ ಕೋಟಿಯ ಕನಸು ಯೋಜನೆ ಬಿಚ್ಚಿಟ್ಟಿದ್ದಾರೆ. ಆಕ್ಸ್‌ಫರ್ಡ್, ಹಾರ್ವರ್ಡ್ ವಿಶ್ವವಿದ್ಯಾಲಯಗಳ ಕಾಲ ಮುಗಿಯಿತು. ಮುಂದೆ ಗುರುಕುಲದ ಶತಮಾನ ಎಂದಿದ್ದಾರೆ. ಮುಂದೆ ಸಂಸ್ಕೃತದ ಶತಮಾನ, ಮೂಲ ಧರ್ಮ, ಸಂಸ್ಕೃತಿ ಆಚಾರಗಳ ಪಾರಮಾರ್ಥಿಕ ದರ್ಶನಕ್ಕಾಗಿ ಸನಾತನ ಧರ್ಮಗಳ ಸಾಮ್ರಾಜ್ಯ ವಿಶ್ವದಲ್ಲೇ ಪಸರಿಸಬೇಕು. ಅದಕ್ಕಾಗಿ ಐದು ಲಕ್ಷ ಕೋಟಿಯ ಯೋಜನೆ ಎಂದು ಘೋಷಿಸಿದರು.

    ಉಡುಪಿಯಲ್ಲಿ 118 ದೇಶಗಳಲ್ಲಿ ನೆಲೆಸಿರುವ 1,500 ಕ್ಕೂ ಹೆಚ್ಚು ಭಾಷಾ ವಿದ್ವಾಂಸರು ಸಮಾಗಮಗೊಂಡಿದ್ದಾರೆ. ಕೃಷ್ಣಮಠದ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಸಂಸ್ಕೃತ ಭಾಷೆ ಒಂದು ಪಾತ್ರೆ ಇದ್ದಂತೆ ಅದು ಚೆನ್ನಾಗಿದ್ದರೆ ಅದರಲ್ಲಿ ತಯಾರಾಗುವ ಪಾಯಸ ಚೆನ್ನಾಗಿರುತ್ತದೆ. ಸಂಸ್ಕೃತ ಅತಿ ಶ್ರೇಷ್ಠವಾದ ಭಾಷೆ, ಇಂಗ್ಲಿಷ್ ಪ್ರತಿದಿನ ಪರಿವರ್ತನೆಯಾಗುವ ಭಾಷೆ ಎಂದು ಸಂಸ್ಕೃತದ ಹಿರಿಮೆ ಗರಿಮೆ ಬಗ್ಗೆ ಮಾತನಾಡಿದರು. ವಿಮರ್ಶೆ, ತರ್ಕ, ಚರ್ಚೆ ನಡೆಯುವ ಹಿಂದೂ ಧರ್ಮವೇ ಶ್ರೇಷ್ಠ. ಸನಾತನದಲ್ಲಿ ಸ್ವಾತಂತ್ರ್ಯವಿದೆ ಎಂದರು.

    50 ವರ್ಷಗಳ ಬಳಿಕ ದಕ್ಷಿಣ ಭಾರತದಲ್ಲಿ ಈ ಸಮ್ಮೇಳನ ಆಯೋಜನೆಯಾಗಿದೆ‌. 300ಕ್ಕೂ ಅಧಿಕ ವಿದ್ವಾಂಸರು 2,000 ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಮಠದ ಆಸುಪಾಸು ಹತ್ತಾರು ಗೋಷ್ಠಿಗಳು, ವೇದ, ಭಗವದ್ಗೀತೆ, ಭಾಷಾ ಶಾಸ್ತ್ರಗಳ ವಿಚಾರಮಂಡನೆ ನಡೆಯಲಿದೆ. ಬೌದ್ಧ ಧರ್ಮ, ಪ್ರಾಕೃತ, ಜೈನ ಧರ್ಮ, ಭಾರತೀಯ ಜ್ಞಾನ ಮತ್ತು ವ್ಯವಸ್ಥೆ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ಸಮಲೋಚನೆ ನಡೆಯಲಿದೆ.

  • ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್ – ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

    ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್ – ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

    ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ (Patanjali) ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್‍ದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ ಕೋರ್ಟ್ (Supreme Court) ಕೈಬಿಟ್ಟಿದೆ.

    ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ತೀರ್ಪು ಪ್ರಕಟಿಸಿದೆ.

    ಕಂಪನಿ ಮತ್ತು ಅದರ ಸಂಸ್ಥಾಪಕ ನ್ಯಾಯಾಲಯದ ಆದೇಶದ ಉಲ್ಲಂಘನೆ ಹಿನ್ನಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಬಳಿಕ ರಾಮ್‍ದೇವ್ ಅವರು ನವೆಂಬರ್ 2023ರ ಸುದ್ದಿಗೋಷ್ಠಿಯಲ್ಲಿ ಕ್ಷಮೆಯಾಚಿಸಿದ್ದರು. ಈ ಬಗ್ಗೆ ಪತ್ರಿಕೆಗಳಲ್ಲಿಯೂ ಕ್ಷಮಾಪಣೆ ಪ್ರಕಟಿಸಿದ್ದರು.

    ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಆಧುನಿಕ ಔಷಧದ ವಿರುದ್ಧ ಪತಂಜಲಿ ಟೀಕೆ ಮಾಡಿತ್ತು. ಪತಂಜಲಿ ಉತ್ಪನ್ನಗಳು ಕೊರೊನಾ ಗುಣಪಡಿಸುತ್ತದೆ ಎಂದು ಜಾಹೀರಾತು ನೀಡಿತ್ತು. ಈ ಜಾಹೀರಾತಿನ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ಪ್ರಾರಂಭಿಸಿತ್ತು.

    ಈ ವರ್ಷ ಫೆಬ್ರವರಿಯಲ್ಲಿ, ನ್ಯಾಯಾಲಯವು ಅಂತಹ ಜಾಹೀರಾತುಗಳ ಮೇಲೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು. ತಪ್ಪುದಾರಿಗೆಳೆಯುವ ಜಾಹಿರಾತಿನ ಸಲುವಾಗಿ ಕಂಪನಿ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು. ನವೆಂಬರ್ 2023 ರಲ್ಲಿ, ಪತಂಜಲಿ ಆಯುರ್ವೇದ ಉತ್ಪನ್ನಗಳ ಪ್ರತಿ ಜಾಹೀರಾತಿನಲ್ಲಿ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳುವ ಪ್ರತಿ ಜಾಹಿರಾತಿಗೆ 1 ಕೋಟಿ ರೂ. ದಂಡ ವಿಧಿಸುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿತ್ತು. ಭವಿಷ್ಯದಲ್ಲಿ ಸುಳ್ಳು ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

  • ಉತ್ತರಾಖಂಡ ಪ್ರಾಧಿಕಾರದಿಂದ 14 ಪತಂಜಲಿ ಉತ್ಪನ್ನಗಳ ಲೈಸನ್ಸ್‌ ರದ್ದು

    ಉತ್ತರಾಖಂಡ ಪ್ರಾಧಿಕಾರದಿಂದ 14 ಪತಂಜಲಿ ಉತ್ಪನ್ನಗಳ ಲೈಸನ್ಸ್‌ ರದ್ದು

    ಡೆಹ್ರಾಡೂನ್‌: ಬಾಬಾ ರಾಮ್‌ದೇವ್ (Baba Ramdev) ಅವರ ದಿವ್ಯ ಫಾರ್ಮಸಿ ಮತ್ತು ಪತಂಜಲಿ (Patanjali) ಆಯುರ್ವೇದ್ ಲಿಮಿಟೆಡ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವುದಾಗಿ ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಅವರ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ.

    ಕಾನೂನಿಗೆ ವಿರುದ್ಧವಾದ ಜಾಹೀರಾತುಗಳನ್ನು ಪ್ರಕಟಿಸಿದರೆ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನೂ ಒಳಗೊಂಡಂತೆ ಕಠಿಣ ಶಿಸ್ತು ಮತ್ತು ಕಾನೂನು ಕ್ರಮಗಳನ್ನು ರಾಜ್ಯ ಪರವಾನಗಿ ಪ್ರಾಧಿಕಾರವು (ಎಸ್‌ಎಲ್‌ಎ) ತೆಗೆದುಕೊಳ್ಳುತ್ತದೆ ಎಂದು ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ಎಸ್‌ಎಲ್‌ಎ ಏ.15 ರಂದು ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಆದೇಶ ಹೊರಡಿಸಿದ್ದು, ಅದರಲ್ಲಿ ಅವರ 14 ಉತ್ಪನ್ನಗಳಾದ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಳೇಹ್, ಮುಕ್ತಾವತಿ ಎಕ್ಸ್‌ಟ್ರಾ ಪವರ್, ಲಿಪಿಡೋಮ್, ಬಿಪಿ ಗ್ರಿಟ್, ಮಧುಗ್ರಿತ್, ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್, ಐಗ್ರಿಟ್ ಗೋಲ್ಡ್ ಮತ್ತು ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ದಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ರೂಲ್ಸ್, 1945 ರ ನಿಯಮ 159 (1) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

    ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನ ಮತ್ತು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ SLA ಹೇಳಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

  • ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    – ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರದ ವಿರುದ್ಧವೂ ತರಾಟೆ

    ನವದೆಹಲಿ: ಯಾವ ರೀತಿ ಜಾಹೀರಾತು (Advertisements) ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆಯನ್ನು ಕೇಳಬೇಕೆಂದು ಪತಂಜಲಿ (Patanjali) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಆದೇಶಿಸಿದೆ. ಅದೇ ರೀತಿಯಾಗಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರ ಸರ್ಕಾರವನ್ನು (Union Government) ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

    ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹಟಗಿ, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ನಿನ್ನೆ ಯಾಕೆ ಕ್ಷಮಾಪಣೆ ಪ್ರಕಟವಾಗಿದೆ ಎಂದು ಪ್ರಶ್ನಿಸಿದ ಪೀಠ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೇ ಅದೇ ರೀತಿಯಾಗಿ ಕ್ಷಮೆ ಕೇಳಬೇಕೆಂದು ಆದೇಶಿಸಿತು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಇಂಡಿಯನ್ ಮೆಡಿಕಲ್ ಅಸೋಷಿಯನ್ (IMA) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಸಿದ ಪೀಠ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಇತರ FMCG ಕಂಪನಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಕೇಂದ್ರವನ್ನು ಈ ವೇಳೆ ಪ್ರಶ್ನಿಸಿತು.

    ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು 1945 ರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ 170ನೇ ನಿಯಮದ ಅಡಿಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆಯುಷ್ ಸಚಿವಾಲಯವು 2023 ರಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕಳುಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

    ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ ಎಂದು ನ್ಯಾ. ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

     

    ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂಬುದನ್ನು ವಿವರಿಸಬೇಕು ಎಂದು ಹೇಳಿದ ಪೀಠ, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ಕೋರ್ಟ್‌  ತಿಳಿಸಿತು.

    ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ಹೇಳಿತು. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

    ಪ್ರಕರಣದ ಅರ್ಜಿ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದ ಪೀಠ ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

  • ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ನವದೆಹಲಿ: ಸುಳ್ಳು ಜಾಹೀರಾತು ಸಂಬಂಧ ಪತಂಜಲಿ(Patanjali) ಸಂಸ್ಥೆಯ ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣಗೆ(Acharya Balkrishna) ಸುಪ್ರೀಂಕೋರ್ಟ್ ಮತ್ತೆ ತಪರಾಕಿ ಹಾಕಿದೆ.

    ಕ್ಷಮೆಯಾಚನೆಯ ನೈಜತೆ ತಿಳಿಯಲು ಇಂದು ಇಬ್ಬರ ಜೊತೆ ಸುಪ್ರೀಂಕೋರ್ಟ್ (Supreme Court) ವೈಯಕ್ತಿಕವಾಗಿ ಸಂವಹನ ನಡೆಸಿತು. ಈ ಹಂತದಲ್ಲಿ ಇಬ್ಬರು ಕ್ಷಮೆಯಾಚಿದರೂ, ಅದನ್ನು ಹಿಮಾ ಕೊಹ್ಲಿ, ಅಮಾನುಲ್ಲಾ ಅವರಿದ್ದ ನ್ಯಾಯಪೀಠ ಸಂಪೂರ್ಣವಾಗಿ ಒಪ್ಪಲಿಲ್ಲ.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನಿಮ್ಮನ್ನು ಕ್ಷಮಿಸಿದ್ದೇವೆ ಎಂದು ನಾವು ಹೇಳುವುದಿಲ್ಲ. ನೀವೇನು ಅಮಾಯಕರಲ್ಲ. ನಿಮ್ಮ ಹಿಂದಿನ ಇತಿಹಾಸದ ಬಗ್ಗೆ ನಾವು ಕುರುಡರಾಗಿರಲು ಸಾಧ್ಯವಿಲ್ಲ. ನಿಮ್ಮ ಕ್ಷಮೆಯಾಚನೆ ಬಗ್ಗೆ ಆಲೋಚಿಸ್ತೇವೆ. ನಿಮ್ಮನ್ನು ಕುಣಿಕೆಯಿಂದ ಬಿಡಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಮುದ್ರಿಸುವ ಮೂಲಕ ಬಹಿರಂಗವಾಗಿ ಕ್ಷಮೆ ಕೇಳಿ ಎಂದು ಎಚ್ಚರಿಕೆಯ ಧಾಟಿಯಲ್ಲಿ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.  ಇದನ್ನೂ ಓದಿ: ಅವಕಾಶ ಕೇಳಿ ಬಂದಿದ್ದ ಶೈಲಜಾ ಜೊತೆ 2ನೇ ಮದುವೆಯಾದರು ದ್ವಾರಕೀಶ್

    ಪತಂಜಲಿ ಮತ್ತದರ ಸಂಸ್ಥೆಗಳು ತಮ್ಮನ್ನು ತಾವು ಸುಧಾರಿಸಿಕೊಳ್ಳುವುದಾಗಿ ನೀಡಿದ ಹೇಳಿಕೆ ದಾಖಲಿಸಿಕೊಂಡ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿತು.

     

  • ಆಯುರ್ವೇದ ಉತ್ಪನ್ನ ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತು ಪ್ರಸಾರ; ಬಾಬಾ ರಾಮದೇವ್ ಕ್ಷಮೆ ಒಪ್ಪದ ಸುಪ್ರೀಂ

    ಆಯುರ್ವೇದ ಉತ್ಪನ್ನ ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತು ಪ್ರಸಾರ; ಬಾಬಾ ರಾಮದೇವ್ ಕ್ಷಮೆ ಒಪ್ಪದ ಸುಪ್ರೀಂ

    – ಏಪ್ರಿಲ್‌ 10ಕ್ಕೆ ವಿಚಾರಣೆ ಮುಂದೂಡಿಕೆ – ಖುದ್ದು ಹಾಜರಾಗಲು ಸೂಚನೆ

    ನವದೆಹಲಿ: ಆಯುರ್ವೇದ ಉತ್ಪನ್ನಗಳನ್ನು ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ (Acharya Balkrishna) ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಕೋರಿದ ಕ್ಷಮೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.

    ಭಾರತೀಯ ವೈದ್ಯಕೀಯ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಹಿಮಕೊಹ್ಲಿ (Hima Kohli) ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಮಂಗಳವಾರವಾದ ಇಂದು ಕೋರ್ಟ್ ಮುಂದೆ ಹಾಜರಾಗಿದ್ದ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ (Baba Ramdev) ವಿರುದ್ಧ ತೀವ್ರ ಅಸಮಧಾನ ಹೊರ ಹಾಕಿದೆ. ಇದನ್ನೂ ಓದಿ: ಸುಳ್ಳು ಜಾಹೀರಾತು, ಸುಪ್ರೀಂ ಚಾಟಿ ಬಳಿಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್

    ಕಳೆದ ನವೆಂಬರ್‌ನಲ್ಲಿ ಪತಂಜಲಿ ಸಂಸ್ಥೆ ಪರ ವಕೀಲರು ನ್ಯಾಯಾಲಯದ ಮುಂದೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಡೆಯುವುದಾಗಿ ಭರವಸೆ ನೀಡಿದ ಹೊರತಾಗಿಯೂ ಪತಂಜಲಿ ಸಂಸ್ಥೆ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿತ್ತು. ಈ ಹಿನ್ನಲೆ ಕೋರ್ಟ್ ಫೆಬ್ರವರಿ 27 ರಂದು ಪತಂಜಲಿ ಸಂಸ್ಥೆ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರಾದ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು, ಖುದ್ದು ಹಾಜರಾಗಲು ಸೂಚಿಸಿತ್ತು.

    ಮಂಗಳವಾರ (ಏಪ್ರಿಲ್‌ 2) ಕೋರ್ಟ್ ಮುಂದೆ ಹಾಜರಾದ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮದೇವ್ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಿದರು. ಅಫಿಡೆವಿಟ್ ನಲ್ಲಿ ಜಾಹೀರಾತು ಪ್ರಸಾರಕ್ಕೆ ತಡೆ ನೀಡುವ ಆದೇಶ ನಮ್ಮ ಮಾಧ್ಯಮ ವಿಭಾಗಕ್ಕೆ ತಿಳಿದಿರಲಿಲ್ಲ ಹೀಗಾಗೀ ತಪ್ಪಾಗಿದೆ ಎಂದು ಆಚಾರ್ಯ ಬಾಲಕೃಷ್ಣ ಕ್ಷಮೆ ಕೇಳಿದ್ದರು, ಆದರೆ ಈ ಕಾರಣವನ್ನು ಕೋರ್ಟ್ ನಿರಾಕರಿಸಿತು. ಇದನ್ನೂ ಓದಿ: ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಈ ವಿಷಯದಲ್ಲಿ ʻಅಜ್ಞಾನವನ್ನು ತೋರಿಸಲುʼ ಸಾಧ್ಯವಿಲ್ಲ ಮತ್ತು ಮಾಧ್ಯಮ ವಿಭಾಗವನ್ನು ʻಸ್ವತಂತ್ರ ದ್ವೀಪʼ ಎಂದು ಪರಿಗಣಿಸಲಾಗುವುದಿಲ್ಲ. ಒಮ್ಮೆ ನ್ಯಾಯಾಲಯಕ್ಕೆ ಭರವಸೆ ನೀಡಿದರೆ ನಂತರ ಅದನ್ನು ಸಂಪೂರ್ಣವಾಗಿ ಪಾಲಿಸಬೇಕು. ಕೆಳ ಹಂತಕ್ಕೆ ನಿರ್ದೇಶಿಸುವುದು ಯಾರ ಕರ್ತವ್ಯ? ಎಂದು ನ್ಯಾಯಮೂರ್ತಿ ‌ಹಿಮ ಕೊಹ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಚಾರ್ಯ ಬಾಲಕೃಷ್ಣ ಪರ ವಕೀಲರು ಇದರಲ್ಲಿ ಲೋಪವಾಗಿದೆ ಎಂದು ಒಪ್ಪಿಕೊಂಡರು, ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ನ್ಯಾ. ಹಿಮ ಕೊಹ್ಲಿ, ನಿಮ್ಮ ಪಶ್ಚಾತ್ತಾಪವು ನ್ಯಾಯಾಲಯಕ್ಕೆ ಸಾಕಾಗದೇ ಇರಬಹುದು. ಈಗ ನೀವು ಕ್ಷಮಿಸಿ ಎಂದು ಹೇಳಿದ್ದಕ್ಕೆ, ನಾವು ಕ್ಷಮಿಸಿದ್ದೇವೆ ಅಂತ ಹೇಳಬಹುದು. ಅಂತಹ ವಿವರಣೆಯನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ, ನಿಮ್ಮ ಮಾಧ್ಯಮ ವಿಭಾಗವು ಸ್ವತಂತ್ರ ಇಲಾಖೆಯಲ್ಲ, ಅಲ್ಲವೇ? ನ್ಯಾಯಾಲಯದ ವಿಚಾರಣೆಯಲ್ಲಿ ಏನಾಗುತ್ತಿದೆ ತಿಳಿದಿಲ್ಲ ಎಂದರೆ ಹೇಗೆ? ಈ ರೀತಿ ಸಮಾಧಾನಪಡಿಸುವ ಮಾತುಗಳು ಬೇಡ ಎಂದು ಅಸಮಾಧಾನ ಹೊರಹಾಕಿದರು.

    ಬಳಿಕ ಕೋರ್ಟ್ ಮುಂದೆ ಹಾಜರಾಗಿದ್ದ ಯೋಗ ಗುರು ಬಾಬಾ ರಾಮದೇವ್ ಯಾವುದೇ ಅಫಿಡೆವಿಟ್ ಸಲ್ಲಿಸಿದಿರುವುದು ಗಮನಿಸಿದ ಕೋರ್ಟ್ ಇದನ್ನು ಪ್ರಶ್ನಿಸಿತು. ಈ ವಿಷಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ತೆಗೆದುಕೊಳ್ಳಬೇಕಾಗಿದೆ ಎಂದು ಸ್ಪಷ್ಟಪಡಿಸಿತು. ಇದಕ್ಕೆ ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಬಲ್ಬೀರ್ ಸಿಂಗ್, ಕಕ್ಷಿದಾರರು ಭೌತಿಕವಾಗಿ ಕೋರ್ಟ್‌ಗೆ ಹಾಜರಾಗಿದ್ದಾರೆ, ವೈಯಕ್ತಿಕವಾಗಿ ಕ್ಷಮೆಯಾಚಿಸಲು ಸಿದ್ಧರಾಗಿದ್ದಾರೆ. ಅಫಿಡೆವಿಟ್ ಮೂಲಕ ಕ್ಷಮೆ ಕೋರುವುದಾದರೆ ಸಿದ್ಧ ಎಂದು ಹೇಳಿದರು.

    ಒದಕ್ಕೆ ಒಪ್ಪದ ಕೋರ್ಟ್‌, ಸಂಸ್ಥೆಯ ಸಹ ಸಂಸ್ಥಾಪಕರಾಗಿರುವುದರಿಂದ ನ್ಯಾಯಾಲಯದ ಆದೇಶದ ಬಗ್ಗೆ ಅವರಿಗೆ ತಿಳಿದಿಲ್ಲ ಅಂತ ನಂಬೋದಕ್ಕೆ ಸಾಧ್ಯವಿಲ್ಲ. ಅಲ್ಲದೆ, ಅವರು ನಮ್ಮ ಆದೇಶದ 24 ಗಂಟೆಗಳ ಒಳಗೆ ಪತ್ರಿಕಾಗೋಷ್ಠಿ ಸಹ ಮಾಡಿದ್ದಾರೆ. ನೀವು ಆದೇಶದ ಬಗ್ಗೆ ತಿಳಿದಿದ್ದೀರಿ ಮತ್ತು ಅದರ ಹೊರತಾಗಿಯೂ ಉಲ್ಲಂಘಿಸಿದ್ದೀರಿ ಎಂದು ನಿಮ್ಮ ನಡುವಳಿಕೆ ತೋರಿಸುತ್ತದೆ ಎಂದು ಹೇಳಿತು. ಇದನ್ನೂ ಓದಿ: ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ವಾದ-ಪ್ರತಿವಾದದ ಬಳಿಕ ಕೋರ್ಟ್‌ ಮುಂದಿನ ವಿಚಾರಣೆಯನ್ನು ಏಪ್ರಿಲ್‌ 10ಕ್ಕೆ ಮುಂದೂಡಿತು. ಅಲ್ಲದೇ ಮುಂದಿನ ವಿಚಾರಣೆಗೂ ವೈಯಕ್ತಿಕವಾಗಿ ಹಾಜರಾಗಬೇಕು, ಜೊತೆಗೆ ಪತಂಜಲಿ ಸಂಸ್ಥೆ ಮತ್ತು ಅದರ ಆಡಳಿತ ಮಂಡಳಿಗೆ ಕ್ಷಮಾಪಣೆಯನ್ನು ಅಫಿಡವಿಟ್ ಮೂಲಕ ಸಲ್ಲಿಸಲು ಪೀಠ ಆದೇಶಿಸಿತು.

  • ಸುಳ್ಳು ಜಾಹೀರಾತು, ಸುಪ್ರೀಂ ಚಾಟಿ ಬಳಿಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್

    ಸುಳ್ಳು ಜಾಹೀರಾತು, ಸುಪ್ರೀಂ ಚಾಟಿ ಬಳಿಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್

    ನವದೆಹಲಿ: ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ಬಾಬಾ ರಾಮ್‌ದೇವ್ (Baba Ramdev) ಅವರು ಸುಪ್ರೀಂ ಕೋರ್ಟ್ (Supreme Court) ಚಾಟಿ ಬೀಸಿದ ಬಳಿಕ ಬೇಷರತ್ ಕ್ಷಮೆಯಾಚಿಸಿದ್ದಾರೆ.

    ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ (Patanjali) ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಏಕೆ ಪ್ರಾರಂಭಿಸಬಾರದು? ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಸಂಸ್ಥೆಯು ಕ್ಷಮೆಯಾಚಿಸಿದೆ. ಇದನ್ನೂ ಓದಿ: INDIA ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

    ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು. ಅಲ್ಲದೇ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ (Acharya Balkrishna) ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ, 2 ವಾರಗಳ ಅವಧಿಯಲ್ಲಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಕೋರ್ಟ್ ಎಚ್ಚರಿಕೆ ನೀಡಿದ 2 ದಿನಗಳಲ್ಲಿ ಸಂಸ್ಥೆ ಕ್ಷಮೆ ಕೋರಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ

    ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆಯ ಬಳಿಕ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಕಾನೂನಿನ ಬಗ್ಗೆ ಪತಂಜಲಿ ಸಂಸ್ಥೆಗೆ ಅಪಾರವಾದ ಗೌರವವಿದೆ. ಕೋರ್ಟ್‌ಗೆ ಕಂಪನಿಯು ಬೇಷರತ್ ಕ್ಷಮೆಯಾಚಿಸುತ್ತದೆ. ಪತಂಜಲಿ ಸಂಸ್ಥೆಯು ಭವಿಷ್ಯದಲ್ಲಿ ಇಂತಹ ಜಾಹೀರಾತುಗಳನ್ನು ನೀಡುವುದಿಲ್ಲ. ಮುಂದೆ ನೀಡುವ ಜಾಹೀರಾತುಗಳು ಕಾನೂನಿನ ಅನ್ವಯವಾಗಿ ಇರುತ್ತವೆ. ಪತಂಜಲಿ ಸಂಸ್ಥೆಯ ಉತ್ಪನ್ನಗಳನ್ನು ಸೇವಿಸುವ ಮೂಲಕ ದೇಶದ ಜನ ಆರೋಗ್ಯದಿಂದ ಇರಲಿ ಎಂಬುದಷ್ಟೇ ನಮ್ಮ ಜಾಹೀರಾತಿನ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.

    ಏನಿದು ಕೇಸ್?
    ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ, ರಾಮ್‌ದೇವ್ ಮತ್ತು ಪತಂಜಲಿ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ-1954ರ ಸೆಕ್ಷನ್-3 ಮತ್ತು 4 ಅನ್ನು ಪ್ರಾಥಮಿಕವಾಗಿ ಉಲ್ಲಂಘಿಸಿದ್ದಾರೆ ಎಂದು ಟೀಕಿಸಿತ್ತು. ತಾತ್ಕಾಲಿಕವಾಗಿ ಪತಂಜಲಿ ಜಾಹೀರಾತು ನಿರ್ಬಂಧಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

    ಸುಪ್ರೀಂ ಕೋರ್ಟ್ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆ ಸುಪ್ರೀಂ ಕೋರ್ಟ್ ಗರಂ ಆಗಿ, ನಮ್ಮ ಆದೇಶಗಳನ್ನು ನಿರ್ಲಕ್ಷ್ಯಿಸಿದ್ದೀರಿ. ಈ ಹಿನ್ನಲೆ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿತ್ತು. ಪತಂಜಲಿ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್ ರೊಹ್ಟಗಿ ರಾಮದೇವ್ ಪ್ರಕರಣಕ್ಕೆ ಹೇಗೆ ಸಂಬಂಧಿಸಿದ್ದಾರೆ, ಅವರಿಗೆ ಯಾಕೆ ಸಮನ್ಸ್? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ನೀವೂ ವಿಚಾರಣೆ ಹಾರಾಗುತ್ತಿದ್ದೀರಿ, ಹಾಜರಾಗಬೇಕು ಎಂದಷ್ಟೆ ಹೇಳಿತು.

    ನಂತರ ಮುಕುಲ್ ರೋಹ್ಟಗಿ ಅವರು ಕಾನೂನು ಉಲ್ಲಂಘನೆ ನ್ಯಾಯಾಲಯದ ನಿಂದನೆ ಅಲ್ಲ ಮತ್ತು ತೆರೆದ ನ್ಯಾಯಾಲಯದಲ್ಲಿ ಹಾಜರಾಗುವ ಅವಶ್ಯಕತೆ ಏನಿದೆ ಎಂಬುದನ್ನು ಆದೇಶದಲ್ಲಿ ದಾಖಲಿಸಬೇಕು ಎಂದು ಹೇಳಿದರು. ಆದರೆ ನ್ಯಾಯಾಲಯ ಮಣಿಯದೇ ರಾಮ್‌ದೇವ್ ಖುದ್ದು ಹಾಜರಾಗಬೇಕು, ಇಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

  • ಯೋಗ ಗುರು ಬಾಬಾ ರಾಮ್‌ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್

    ನವದೆಹಲಿ: ಯೋಗ ಗುರು ಬಾಬಾ ರಾಮ್‌ದೇವ್ (Yoga Guru Baba Ramdev) ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. ಶೋಕಾಸ್ ನೋಟಿಸ್ ಗೆ ಉತ್ತರ ನೀಡದ ಹಿನ್ನೆಲೆ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

    ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ, ರಾಮ್‌ದೇವ್ ಮತ್ತು ಪತಂಜಲಿ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ, 1954 ರ ಸೆಕ್ಷನ್ 3 ಮತ್ತು 4 ಅನ್ನು ಪ್ರಾಥಮಿಕವಾಗಿ ಉಲ್ಲಂಘಿಸಿದ್ದಾರೆ ಎಂದು ಟೀಕಿಸಿತ್ತು. ತಾತ್ಕಾಲಿಕವಾಗಿ ಪತಂಜಲಿ ಜಾಹೀರಾತು ನಿರ್ಬಂಧಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

    ಆದರೆ ಸುಪ್ರೀಂಕೋರ್ಟ್ (Supreme Court) ನೋಟಿಸ್ ಗೆ ಉತ್ತರಿಸದ ಹಿನ್ನೆಲೆ ಸುಪ್ರೀಂಕೋರ್ಟ್ ಗರಂ ಆಗಿದೆ. ನಮ್ಮ ಆದೇಶಗಳನ್ನು ನಿರ್ಲಕ್ಷ್ಯಿಸಿದ್ದೀರಿ. ಈ ಹಿನ್ನಲೆ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ಸೂಚಿಸಿದರು. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ ರಾಮದೇವ್ ಪ್ರಕರಣಕ್ಕೆ ಹೇಗೆ ಸಂಬಂಧಿಸಿದ್ದಾರೆ ಅವರಿಗೆ ಯಾಕೆ ಸಮನ್ಸ್ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ನೀವೂ ವಿಚಾರಣೆ ಹಾರಾಗುತ್ತಿದ್ದೀರಿ, ಹಾಜರಾಗಬೇಕು ಎಂದಷ್ಟೆ ಹೇಳಿತು.

    ನಂತರ ಮುಕುಲ್ ರೋಹ್ಟಗಿ (Mukul Rohtagi) ಅವರು ಕಾನೂನು ಉಲ್ಲಂಘನೆ ನ್ಯಾಯಾಲಯದ ನಿಂದನೆ ಅಲ್ಲ ಮತ್ತು ತೆರೆದ ನ್ಯಾಯಾಲಯದಲ್ಲಿ ಹಾಜರಾಗುವ ಅವಶ್ಯಕತೆ ಏನಿದೆ ಎಂಬುದನ್ನು ಆದೇಶದಲ್ಲಿ ದಾಖಲಿಸಬೇಕು ಎಂದು ಹೇಳಿದರು. ಆದರೆ ನ್ಯಾಯಾಲಯ ಮಣಿಯದೆ ರಾಮ್‌ದೇವ್ ಖುದ್ದು ಹಾಜರಾಗುವಂತೆ ಆದೇಶ ನೀಡಿತು. ಇದನ್ನೂ ಓದಿ: ಬಿಜೆಪಿ ಅಸಮಾಧಾನಿತರಿಗೆ ಕಾಂಗ್ರೆಸ್ ಗೇಟ್ ಬಂದ್ – ಸಿಎಂ ಹೇಳಿದ ಖಡಕ್‌ ಮಾತು ಏನು?

    ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತು. ಯಾವುದೇ ಪ್ರಾಯೋಗಿಕ ಪುರಾವೆಗಳಿಲ್ಲದಿದ್ದರೂ ಪತಂಜಲಿ ಔಷಧಿಗಳು ಕೆಲವು ಕಾಯಿಲೆಗಳನ್ನು ಗುಣಪಡಿಸುತ್ತವೆ ಎಂದು ಸುಳ್ಳು ಹೇಳಿಕೆ ನೀಡುವ ಮೂಲಕ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.

  • ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮುಂಬೈ: ತಮ್ಮ ಹೇಳಿಕೆಗಳಿಂದ ಆಗಾಗ ಸುದ್ದಿಯಾಗುವ ಪತಂಜಲಿ ಮುಖ್ಯಸ್ಥ, ಯೋಗ ಗುರು ಬಾಬಾ ರಾಮ್‌ದೇವ್ (Baba Ramdev) ಇದೀಗ ಮಹಿಳೆಯರ ಉಡುಪುಗಳ (Women’s Clothing) ಕುರಿತಾಗಿ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ.

    ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ರಾಮ್ ದೇವ್ ಬಾಬಾ, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.

    ರಾಮ್‌ದೇವ್ ಅವರು ಈ ಹೇಳಿಕೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಸಮ್ಮುಖದಲ್ಲಿಯೇ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಕೂಡಾ ಭಾಗಿಯಾಗಿದ್ದರು.

    ವರದಿಗಳ ಪ್ರಕಾರ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಇದಾದ ಬಳಿಕ ಸಮಾವೇಶ ಆಯೋಜಿಸಲಾಗಿತ್ತು. ಯೋಗ ತರಬೇತಿಯಲ್ಲಿ ಭಾಗಿಯಾಗಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿದ ತಕ್ಷಣವೇ ಸಭೆ ಆರಂಭವಾಗಿತ್ತು. ಇದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯ ಸಿಕ್ಕಿರಲಿಲ್ಲ. ಇದನ್ನೂ ಓದಿ: ಓಲಾ, ಉಬರ್‌ ಆಟೋಗಳಿಗೆ ಶೇ.5 ಕಮಿಷನ್‌ ದರ ನಿಗದಿ

    ಈ ಕುರಿತು ಹೇಳಿಕೆ ನೀಡಿದ ಬಾಬಾ ರಾಮ್‌ದೇವ್, ಸೀರೆ ಉಡಲು ಸಮಯವಿಲ್ಲದಿದ್ದರೂ ಸಮಸ್ಯೆ ಇಲ್ಲ. ಈಗ ನೀವು ಮನೆಗೆ ಹೋಗಿ ಸೀರೆ ಉಟ್ಟುಕೊಳ್ಳಿ. ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

    ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ವತಿಯಿಂದ ಶುಕ್ರವಾರ ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಅಮೃತಾ ಫಡ್ನವೀಸ್ ಉಪಸ್ಥಿತರಿದ್ದರು. ಈ ವೇಳೆ ಬಾಬಾ ರಾಮದೇವ್ ಮಹಿಳೆಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

    Live Tv
    [brid partner=56869869 player=32851 video=960834 autoplay=true]