Tag: Baba Siddique Case

  • ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ

    ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದ್ದು, 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ (Mumbai Traffice Police) ಸಂದೇಶ ಕಳುಹಿಸಿದ್ದಾರೆ.

    ಮೇಲಿಂದ ಮೇಲೆ ಸಲ್ಮಾನ್ ಖಾನ್ ಜೀವಕ್ಕೆ ಕುತ್ತು ಬರುತ್ತಿದ್ದು, ಜೀವ ಬೆದರಿಕೆಗಳು ಬರುತ್ತಲೇ ಇವೆ. ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ಹಣ ನೀಡದಿದ್ದರೆ ಹತ್ಯೆ ಮಾಡುವುದಾಗಿ ಸಂದೇಶ ಕಳುಹಿಸಲಾಗಿದೆ.

    ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ಎನ್‌ಸಿಪಿ ಶಾಸಕ ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ ಹಾಗೂ ನಟ ಸಲ್ಮಾನ್ ಖಾನ್ ಇಬ್ಬರಿಗೂ ಜೀವ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಗುರ್ಫಾನ್ ಖಾನ್ ಎಂಬುವರನ್ನು ಬಂಧಿಸಿದ್ದಾರೆ. ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39ರಲ್ಲಿ ಬಂಧಿಸಲಾಗಿದೆ.

    ಅ.12 ರಂದು, ಬಾಬಾ ಸಿದ್ದಿಕಿ (Baba Siddique) ಅವರು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಪುತ್ರ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಗುಂಡಿನ ದಾಳಿಯಿಂದಾಗಿ ಕೊಲ್ಲಲ್ಪಟ್ಟರು. ಘಟನೆಯ ಒಂದು ದಿನದ ನಂತರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧದಿಂದಾಗಿ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದುವರೆಗೆ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ.

    ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ 2022 ರಲ್ಲಿ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಪತ್ರವು ಅವರ ನಿವಾಸದ ಬಳಿಯ ಬೆಂಚ್‌ನಲ್ಲಿ ಕಂಡುಬಂದಿತ್ತು. ಮಾರ್ಚ್ 2023ರಲ್ಲಿ ಗೋಲ್ಡಿ ಬ್ರಾರ್ ಅವರು ಕಳುಹಿಸಿದ್ದಾರೆಂದು ಆರೋಪಿಸಲಾದ ಇಮೇಲ್ ಕೂಡ ಖಾನ್‌ಗೆ ಸಿಕ್ಕಿತ್ತು. 2024 ರಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ನಕಲಿ ಗುರುತುಗಳನ್ನು ಬಳಸಿಕೊಂಡು ಪನ್ವೆಲ್‌ನಲ್ಲಿರುವ ಖಾನ್ ಅವರ ಫಾರ್ಮ್ಹೌಸ್‌ಗೆ ಅತಿಕ್ರಮಣ ಮಾಡಲು ಪ್ರಯತ್ನಿಸಿದ್ದರು.

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ (Baba Siddique Murder Case)  ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ಪೊಲೀಸ್‌ ಕಸ್ಟಡಿಗೆ ಮುಂಬೈ ಕೋರ್ಟ್ (Mumbai Case) ಒಪ್ಪಿಸಿದೆ

    ಬಂಧಿತ ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಹಾಗೂ ಉತ್ತರ ಪ್ರದೇಶ ಮೂಲದ ಧರ್ಮರಾಜ್ ಸಿಂಗ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಂದು (ಅ.13) ಬೆಳಗ್ಗೆ ಮುಂಬೈ ಪೊಲೀಸರು ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್‌ ಕೋರ್ಟ್‌ಗೆ (Esplanade Court) ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಇಬ್ಬರು ಆರೋಪಿಗಳ ಪೈಕಿ ಗುರ್ಮೈಲ್ ಸಿಂಗ್‌ನನ್ನು ಅ.21ರವರೆಗೆ ಮುಂಬೈ ಕ್ರೈಂ ಬ್ರ್ಯಾಂಚ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಆರೋಪಿ ಧರ್ಮರಾಜ್ ಸಿಂಗ್ ಕಶ್ಯಪ್ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಅದಕ್ಕೆ ಕೋರ್ಟ್, ಆತನಿಗೆ ಮೂಳೆ ಪರೀಕ್ಷೆಯ ಬಳಿಕ ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.

    ಆಸಿಫೀಕೇಶನ್ ಪರೀಕ್ಷೆ (Ossification Test) (ಮೂಳೆ ಪರೀಕ್ಷೆ) ಎಂದರೆ ಮೂಳೆಗಳ ಸಮ್ಮಿಲನದ ಆಧಾರದ ಮೇಲೆ ವಯಸ್ಸಿನ ಪತ್ತೆ ಹಚ್ಚುವಿಕೆ ಪರೀಕ್ಷೆಯಾಗಿರುತ್ತದೆ. ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ವಯಸ್ಸು ಪತ್ತೆ ಹಚ್ಚಲು ಈ ಪರೀಕ್ಷಾ ವಿಧಾನವನ್ನು ಬಳಸುತ್ತಾರೆ.

    ಆರೋಪಿ ಸಿದ್ದಾರ್ಥ ಅಗರವಾಲ್‌ನ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನಾವು ಕೆಲವು ಆಧಾರಗಳನ್ನು ನೀಡಿದ್ದೇವೆ. ಅವುಗಳ ಆಧಾರದ ಮೇಲೆ ಓರ್ವ ಆರೋಪಿಗೆ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನೋರ್ವ ಆರೋಪಿಯನ್ನು ಆಸಿಫೀಕೇಶನ್ ಪರೀಕ್ಷೆಗೆ ಕಳಿಸಿದ್ದಾರೆ.

    ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಗುರುತಿಸಲಾಗಿದ್ದು, ಮೊಹಮ್ಮದ್ ಜೀಶನ್ ಅಖ್ತರ್ ಎಂದು ಪತ್ತೆಹಚ್ಚಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ