Tag: Babri Masjid demolition

  • ಬಾಬರಿ ಮಸೀದಿ ಧ್ವಂಸ ಪ್ರಕರಣ; ನ್ಯಾಯಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ – BJP ನಾಯಕರಿಗೆ ಬಿಗ್ ರಿಲೀಫ್

    ಬಾಬರಿ ಮಸೀದಿ ಧ್ವಂಸ ಪ್ರಕರಣ; ನ್ಯಾಯಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ – BJP ನಾಯಕರಿಗೆ ಬಿಗ್ ರಿಲೀಫ್

    ನವದೆಹಲಿ: 1992ರ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನ್ಯಾಯಂಗ ನಿಂದನೆಯ ಎಲ್ಲ ಅರ್ಜಿಗಳನ್ನು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಕೈಬಿಟ್ಟಿದೆ. ಇಂದು ಈ ಬಗ್ಗೆ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವಾಗಿರುವ ಹಿನ್ನೆಲೆ ಈ ಎಲ್ಲ ಅರ್ಜಿಗಳು ಅಪ್ರಸುತ್ತ ಎಂದು ಹೇಳಿದೆ.

    ಬಾಬರಿ ಮಸೀದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಅದನ್ನು ನೆಲಸಮಗೊಳಿಸಬೇಡಿ ಎಂದು 1991ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ರಾಜ್ಯ ಸರ್ಕಾರ, ಅಧಿಕಾರಿಗಳು, ರಾಜಕಾರಣಿಗಳು ಎಲ್ಲರಿಗೂ ಅನ್ವಯ ಆಗಿತ್ತು. ಈ ಆದೇಶ ಬಳಿಕ 1992 ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI

    ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಹಿನ್ನೆಲೆ ಮುಹಮ್ಮದ್ ಅಸ್ಲಾಮ್ ಭುರೆ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಮಾಜಿ ಸಿಎಂ ಕಲ್ಯಾಣ ಸಿಂಗ್, ಬಿಜೆಪಿ ನಾಯಕರಾದ ಎಲ್‌.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವು ನಾಯಕರ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

    ಅರ್ಜಿದಾರ ಮಹಮ್ಮದ್ ಅಸ್ಲಾಮ್ 2010ರಲ್ಲಿ ಮೃತಪಟ್ಟ ಹಿನ್ನೆಲೆ ಈ ಅರ್ಜಿ ಹೆಚ್ಚು ವಿಚಾರಣೆಗೆ ಬಂದಿರಲಿಲ್ಲ. 2019ರಲ್ಲಿ ಅಯೋಧ್ಯೆ ವಿವಾದಿತ ಜಮೀನಿನ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇಂದು ಈ ಅರ್ಜಿ ಇತ್ಯರ್ಥಪಡಿಸಿದ ಕೋರ್ಟ್, ಪ್ರಕರಣ ಸಂಪೂರ್ಣ ಇತ್ಯರ್ಥವಾಗಿರುವ ಹಿನ್ನೆಲೆ ವಿಚಾರಣೆ ಅಗತ್ಯವಿಲ್ಲ. ಮುಖ್ಯ ಅರ್ಜಿ ವಿಚಾರಣೆ ವೇಳೆ ಈ ಬಗ್ಗೆ ಪ್ರಸ್ತಾಪಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿತು‌. ಇದನ್ನೂ ಓದಿ: ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್‌ – ಮುಂದೇನಾಯ್ತು?

    ಈಗ ಈ ಕೇಸುಗಳ ಪ್ರಸ್ತುತತೆ ಇಲ್ಲದ ಕಾರಣ ಎಲ್ಲ ನ್ಯಾಯಾಂಗ ನಿಂದನೆ ಕೇಸುಗಳನ್ನು ಕೈಬಿಡುತ್ತಿದ್ದೇವೆ ಎಂದು ಕೋರ್ಟ್ ಆದೇಶಿಸಿತು. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಲವು ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಬ್ರಿ ಮಸೀದಿ ಧ್ವಂಸ ಕೇಸ್‍ನಲ್ಲಿ ಅಡ್ವಾಣಿ, ಜೋಷಿ ವಿಚಾರಣೆಗೆ ಹಾಜರಾಗಬೇಕು: ಸುಪ್ರೀಂ

    ಬಾಬ್ರಿ ಮಸೀದಿ ಧ್ವಂಸ ಕೇಸ್‍ನಲ್ಲಿ ಅಡ್ವಾಣಿ, ಜೋಷಿ ವಿಚಾರಣೆಗೆ ಹಾಜರಾಗಬೇಕು: ಸುಪ್ರೀಂ

    ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ 13 ವಿವಿಧ ಮುಖಂಡರು ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

    ಈ ಪ್ರಕರಣದ ವಿಚಾರಣೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಬೇಕು, ಅಷ್ಟೇ ಅಲ್ಲದೇ ಎರಡು ವರ್ಷದ ಒಳಗಡೆ ವಿಚಾರಣೆ ಪೂರ್ಣಗೊಳಿಸಬೇಕೆಂದು ಸೂಚಿಸಿದೆ.

    ಮಾರ್ಚ್ 6ರಂದು ನಡೆದಿದ್ದ ವಿಚಾರಣೆ ವೇಳೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಕೇಂದ್ರ ಸಚಿವೆ ಉಮಾಭಾರತಿ ಸೇರಿದಂತೆ ಬಿಜೆಪಿ ಪ್ರಮುಖ ಮುಖಂಡರ ವಿರುದ್ಧದ ಆರೋಪಗಳನ್ನು ತಾಂತ್ರಿಕ ಕಾರಣ ಹೇಳಿ ಕೈ ಬಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿತ್ತು. ಅಷ್ಟೇ ಅಲ್ಲದೇ ಪ್ರಕರಣದ ವಿಚಾರಣೆ ತಡವಾಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.

    ಏನಿದು ಪ್ರಕರಣ?
    ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ ಸೇರಿದಂತೆ 20 ಮಂದಿ ಬಿಜೆಪಿ ಮುಖಂಡರ ಮೇಲಿದ್ದ ಆರೋಪವನ್ನು ಅಲಹಾಬಾದ್ ಹೈಕೋರ್ಟ್ 2010ರ ಮೇ 20 ರಂದು ತಾಂತ್ರಿಕ ಕಾರಣ ಹೇಳಿ ಕೈಬಿಟ್ಟಿದ್ದನ್ನು ಹಾಜಿ ಮೆಹಬೂಬ್ ಅಹಮ್ಮದ್ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಸಿಬಿಐ ಕೂಡ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರಾದ ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ಉಮಾ ಭಾರತಿ, ಮಹಂತ ಅವೈದ್ಯನಾಥ್, ವಿನಯ್ ಕಟಿಯಾರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ರಿತಂಬರಾ, ಕಲ್ಯಾಣ್ ಸಿಂಗ್ ಅವರು ಈ ಪಟ್ಟಿಯಲ್ಲಿ ಸೇರಿದ್ದಾರೆ.

    ಬಿಜೆಪಿಗೆ ಹಿನ್ನಡೆ: ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಎಲ್‍ಕೆ ಅಡ್ವಾಣಿ ಅವರನ್ನು ಬಿಜೆಪಿ ಆಯ್ಕೆ ಮಾಡುತ್ತದೆ ಎನ್ನುವ ಒಂದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈಗ ಸುಪ್ರೀಂ ಕೋರ್ಟ್  ವಿಚಾರಣೆಗೆ ಹಾಜರುಗುವಂತೆ ಆದೇಶ ಪ್ರಕಟಿಸಿರುವುದು ಬಿಜೆಪಿ ಮತ್ತು ಎಲ್‍ಕೆ ಅಡ್ವಾಣಿ ಅವರಿಗೆ ಹಿನ್ನಡೆಯಾಗಿದೆ.