Tag: babu rao chinchansur

  • ಸೆರಗೊಡ್ಡಿ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್‌ ಪತ್ನಿ ಅಮರೇಶ್ವರಿ

    ಸೆರಗೊಡ್ಡಿ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್‌ ಪತ್ನಿ ಅಮರೇಶ್ವರಿ

    ಯಾದಗಿರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಯಾದಗಿರಿಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ (Babu Rao Chinchansur) ಪರ ಪತ್ನಿ ಮತಯಾಚನೆ ವೇಳೆ ಕಣ್ಣೀರು ಹಾಕಿರುವ ಘಟನೆ ನಡೆದಿದೆ.

    ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಆಗಿದ್ರೂ ನಾಮಪತ್ರ ಸಲ್ಲಿಕೆಗೆ ಚಿಂಚನಸೂರ್‌ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಚಿಂಚನಸೂರ್‌ ಪತ್ನಿ ಅಮರೇಶ್ವರಿ ಚಿಂಚನಸೂರ್‌ ಸೂಚಕರಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ (Nomination) ಸಲ್ಲಿಕೆ ನಂತರ ನಡೆದ ಬಹಿರಂಗ ಸಮಾವೇಶದಲ್ಲಿ ಅಮರೇಶ್ವರಿ ಚಿಂಚನಸೂರ್‌ ಪತಿಯ ಪರ ಮತಯಾಚನೆ ವೇಳೆ ಕಣ್ಣೀರು ಹಾಕಿ, ಸೆರಗೊಡ್ಡಿ, ಮತಯಾಚನೆ ಮಾಡಿದ್ದಾರೆ. ಚಿಂಚನಸೂರ್‌ ಅವರ ಮೇಲೆ ಇಷ್ಟೊಂದು ಜನರು ಪ್ರೀತಿ ಅಭಿಮಾನ ತೋರಿಸುತ್ತಿರುವುದು, ನನಗೆ ಮಾತುಗಳು ಬರುತ್ತಿಲ್ಲ ಎಂದು ಭಾವುಕರಾಗಿ, ಮತದಾರರು ಅವರಿಗೆ ಮತ ನೀಡಿ, ಗುರುಮಠಕಲ್ ಕ್ಷೇತ್ರ ಅಭಿವೃದ್ಧಿಗೆ ಸಹಕರಿಸಬೇಕೆಂದು ಸೆರಗೊಡ್ಡಿ ಮತಯಾಚಿಸಿದರು.

    ಗುರುಮಠಕಲ್ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಆಸ್ಪತ್ರೆಯಿಂದ ವೀಡಿಯೋ ಕಾಲ್ ಮೂಲಕ ಕಾಂಗ್ರೆಸ್ (Congress) ಅಭ್ಯರ್ಥಿ ಬಾಬುರಾವ್ ಚಿಂಚನಸೂರ್‌ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲಿದ್ದು, ನಾನು ಮಂತ್ರಿಯಾಗುವುದು ಖಚಿತ ಎಂದರು. ಕಾಲಿಗೆ ಆದ ತೀವ್ರ ಗಾಯವು ಗುಣಮುಖವಾಗದ ಕಾರಣ ವೈದ್ಯರ ಸಲಹೆ ಮೇರೆಗೆ ಬರಲಾಗಲಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಲು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಅರಕಲಗೂಡಿನಲ್ಲಿ ದಿಢೀರ್‌ ಬೆಳವಣಿಗೆ – ಕೈ ಟಿಕೆಟ್‌ ಆಕಾಂಕ್ಷಿ ಬಿಜೆಪಿ ಅಭ್ಯರ್ಥಿ?

    ಬಿಜೆಪಿಯಲ್ಲಿ (BJP) ಹಿಂದುಳಿದವರಿಗೆ ಸೂಕ್ತ ಸ್ಥಾನಮಾನ ಸಿಗದ ಕಾರಣ ನನಗೆ ನೀಡಿದ್ದ ಎಂಎಲ್‌ಸಿ ಸ್ಥಾನ ಮತ್ತು ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಸ್ಥಾನ ಮತ್ತು ಅಮರೇಶ್ವರಿ ಚಿಂಚನಸೂರ್‌ ಅವರಿಗೆ ನೀಡಿದ್ದ ಕೇಂದ್ರ ಆಹಾರ ನಿಗಮದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ನಾನೇ ಮಂತ್ರಿಯಾಗುತ್ತೇನೆ ಎಂದು ವೀಡಿಯೋ ಕಾಲ್ ಮೂಲಕ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು. ಇದನ್ನೂ ಓದಿ: ಪಕ್ಷೇತರ ಅಭ್ಯರ್ಥಿಯ ಮೇಲೆ ದರ್ಪ ಮೆರೆದ ಬಿಜೆಪಿ ಶಾಸಕ

  • ಬಾಬುರಾವ್ ಚಿಂಚನಸೂರ್ ಅಲ್ಲ, ಚಂಚಲ ಸೂರ: ರವಿಕುಮಾರ್

    ಬಾಬುರಾವ್ ಚಿಂಚನಸೂರ್ ಅಲ್ಲ, ಚಂಚಲ ಸೂರ: ರವಿಕುಮಾರ್

    ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Babu Rao Chinchansur) ಅವರು ಚಿಂಚನಸೂರ್ ಅಲ್ಲ. ಅವರು ಚಂಚಲ ಸೂರ ಎಂದು ಬಾಬುರಾವ್ ಚಿಂಚನಸೂರ್ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ (N Ravikumar) ವಾಗ್ದಾಳಿ ನಡೆಸಿದರು.

    ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಪಕ್ಷ ಎಲ್ಲವನ್ನೂ ಅವರಿಗೆ ನೀಡಿತ್ತು. ನಿಗಮ ಮಂಡಳಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಗೌರವದಿಂದ ನಡೆಸಿಕೊಂಡಿತ್ತು. ಆದರೂ ನಮಗೆ ಅವಮಾನ ಆಗಿದೆ ಎಂದು ಹೇಳಿ ಪಕ್ಷವನ್ನು ತ್ಯಜಿಸಿದರು ಎಂದರು.

    ಬಾಬುರಾವ್ ಚಿಂಚನಸೂರ್ ಪಕ್ಷ ತ್ಯಜಿಸಿದ್ದರಿಂದ ಬಿಜೆಪಿಗೆ ಯಾವುದೇ ರೀತಿಯ ಹಾನಿಯಿಲ್ಲ. ಚುನಾವಣೆ ಬಂದಾಗಲೇ ಅವರಿಗೆ ಅವಮಾನ ಆಯಿತಾ? ಇಷ್ಟು ದಿನ ಪಕ್ಷದಲ್ಲಿ ಇದ್ದಾಗ ಅವರಿಗೆ ಏನೂ ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

    ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ನಿರ್ನಾಮ ಮಾಡುತ್ತೇನೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನಿದೆ ಎಂಬುದು ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ನಗರ ಬಿಜೆಪಿ ಟಿಕೆಟ್‍ಗೆ ಫೈಟ್- ಈಶ್ವರಪ್ಪ V/S ಆಯನೂರು ಮಧ್ಯೆ ಜಟಾಪಟಿ

  • ವಿಧಾನಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ

    ವಿಧಾನಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ

    ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಚಿವ ಬಾಬುರಾವ್ ಚಿಂಚನಸೂರುಗೆ ಟಿಕೆಟ್ ನೀಡಿದೆ.

    ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಿ.ಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಇದೀಗ ಈ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಿದೆ. ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್‌ಗೆ ಟಿಕೆಟ್ ನೀಡಿದೆ.

    CM IBRAHIM

    ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಜುಲೈ 25ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಆ.1ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ನಾಮಪತ್ರಗಳ ಪರಿಶೀಲನೆ ದಿನ ಆ. 2ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ಆ. 4 ಆಗಿದೆ. ಆ. 11ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    Live Tv
    [brid partner=56869869 player=32851 video=960834 autoplay=true]