Tag: Baby

  • ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

    ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

    ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

    ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು. ಈ ವೇಳೆ ಮಹಿಳೆಯೊಬ್ಬಳು ಮಗುವನ್ನು ಕದ್ದುಕೊಂಡು ಹೋಗಿದ್ದಳು.  ಇದನ್ನೂ ಓದಿ:  ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

     

    ನಿದ್ರೆಯಿಂದ ಪೋಷಕರು ಎಚ್ಚರಗೊಂಡ ಮೇಲೆ ಮಗು ಕಾಣೆಯಾಗಿರುವುದು ಗೊತ್ತಾಗಿದೆ. ತಾಯಿ (Mother) ಆಕ್ರಂದನ ಕಂಡ ರೈಲ್ವೆ ಪೊಲೀಸರು ವಿಚಾರಿಸಿದ್ದಾಗ ಮಗು ಕಾಣೆ ಆಗಿರುವ ವಿಚಾರವನ್ನು ತಿಳಿಸಿದ್ದಾರೆ.

    ತಕ್ಷಣವೇ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ನಡು ವಯಸ್ಸಿನ ಮಹಿಳೆ ಮಗುವನ್ನು ಅಪಹರಿಸಿದ್ದು ಗೊತ್ತಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಹಾಸನ ಮೂಲದ 50 ವರ್ಷದ ನಂದಿನಿಯನ್ನು ಬಂಧಿಸಿದ ಪೊಲೀಸರು ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ:  ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ

     

  • Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್

    Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್

    ಶಿವಮೊಗ್ಗ: ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಮಹಿಳೆಯನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    1 ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿಯ (Honnali) ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಶವ ನೋಡಿದ ಬೇರೆ ರೋಗಿಗಳು ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಸೋಕೋ ಟೀಮ್ ಬಂದು ಮಾಹಿತಿ ಸಂಗ್ರಹಿಸಿತ್ತು. ಇದನ್ನೂ ಓದಿ: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಹೊನ್ನಾಳಿ ಮೂಲದ ಶೈಲಾಗೆ 2 ಮಕ್ಕಳಿದ್ದು, ನಾಲ್ಕು ವರ್ಷಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿತ್ತು. ಸಂತಾನಹರಣ ಶಸ್ತ್ರಚಿಕಿತ್ಸೆ ಆದರೂ ಶೈಲಾ ಗರ್ಭಿಣಿಯಾಗಿದ್ದಳು. ಥೈರಾಯ್ಡ್ ನೆಪ ಮಾಡಿಕೊಂಡು ಗರ್ಭಿಣಿ ಆಗಿರುವುದನ್ನು ಶೈಲಾ ಕುಟುಂಬಸ್ಥರಿಂದ ಮುಚ್ಚಿಟ್ಟಿದ್ದಳು. ಆಸ್ಪತ್ರೆಯ ಶೌಚಾಲಯದಲ್ಲಿ ಒಬ್ಬಳೇ ನಾರ್ಮಲ್ ಹೆರಿಗೆ ಮಾಡಿಕೊಂಡಿದ್ದ ಶೈಲಾ ಹೆರಿಗೆ ಬಳಿಕ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್‌ನಿಂದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಳು. ಇದೀಗ ಮಗುವಿನ ಕೊಲೆ ಮಾಡಿರುವ ಕುರಿತು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆ. ಘಟನೆ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

  • ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

    ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

    ನೆಲಮಂಗಲ: ಒಂದೂವರೆ ತಿಂಗಳ ಹಸುಗೂಸು ಗಂಡು ಮಗುವನ್ನು (Boy Baby) ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಪಾಪಿ ತಾಯಿ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ವಿಶ್ವೇಶ್ವರಪುರದಲ್ಲಿ ನಡೆದಿದೆ.

    ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆ ಮಗುವನ್ನು ತಾಯಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಶೌಚಾಲಯದಲ್ಲಿ ನೀರು ಕಾಯಿಸುವ ಹಂಡೆಯಲ್ಲಿ ತನ್ನ ಒಂದೂವರೆ ತಿಂಗಳ ಮಗುವನ್ನು ಮುಳುಗಿಸಿ ತಾಯಿ ಕೊಲೆ ಮಾಡಿದ್ದು, ಘಟನೆ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

    ನಗರದ ವಿಶ್ವೇಶ್ವರಪುರದಲ್ಲಿ ವಾಸವಾಗಿದ್ದ ಪವನ್ ಮತ್ತು ರಾಧಾ ದಂಪತಿಯ ಗಂಡು ಮಗುವನ್ನು ತಡರಾತ್ರಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಆರೋಪಿ ರಾಧಾಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು

    ಪತಿ ಪವನ್ ಆಟೋ ಡೈವರ್ ಆಗಿದ್ದು, ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಇನ್ನೂ ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಹಾಗೂ ಮನಸ್ತಾಪ ಇದ್ದು, ಮಗುವಿನ ಕೊಲೆಗೆ ನಿಖರವಾದ ಕಾರಣ ಕಲೆಹಾಕಲು ನೆಲಮಂಗಲ ಟೌನ್ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ

  • ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ ಮಗು ದಾರುಣ ಸಾವಿಗೀಡಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿ ಪುತ್ರ ಅನೀಶ್‌ ಎಂಬ ಮಗು ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಇದನ್ನೂ ಓದಿ: KRS ಡ್ಯಾಂನಲ್ಲಿ 16 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳ

    ಮನೆಯ ನೆಲದಲ್ಲಿ ಬಿದ್ದಿದ್ದ ಬೀಡಿ ತುಂಡನ್ನು ಮಗು ನುಂಗಿತ್ತು. ಸ್ವಲ್ಪ ಹೊತ್ತಲ್ಲೇ ಅಸ್ವಸ್ಥಗೊಂಡ ಮಗುವನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ.

    ಘಟನೆಗೆ ಸಂಬಂಧಿಸಿದಂತೆ ಗಂಡನ ವಿರುದ್ಧ ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಸೇದಿದ ಬೀಡಿಯ ತುಂಡನ್ನು ಮನೆಯೊಳಗೆ ಬಿಸಾಡಬೇಡಿ ಎಂದು ಎಷ್ಟು ಬಾರಿ ತಿಳಿಸಿದರೂ, ಕೇಳದೇ ಮತ್ತೆ ಬಿಸಾಕಿದ್ದಕ್ಕೆ ಹೀಗಾಯಿತು ಎಂದು ಮಗುವಿನ ತಾಯಿ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ – ಫಲ್ಗುಣಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ನೆರೆ

  • ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆ – ದೃಢಪಡಿಸಿದ ICMR

    ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆ – ದೃಢಪಡಿಸಿದ ICMR

    ನವದೆಹಲಿ/ ಬೆಂಗಳೂರು: ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದೆ.

    ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚೀನಿ ವೈರಸ್ ಪತ್ತೆ| ಆರೋಗ್ಯ ಇಲಾಖೆ ಅಲರ್ಟ್ – ಏನು ಮಾಡಬೇಕು? ಏನು ಮಾಡಬಾರದು?

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್‌, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ICMR ನ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

    HMPV ಒಂದು ಉಸಿರಾಟದ ವೈರಸ್ ಆಗಿದ್ದು ಅದು ಸಾಮಾನ್ಯವಾಗಿ ಶೀತವನ್ನು ಹೋಲುವ ಸೌಮ್ಯ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಬೇಗ ಹರಡಬಹುದು.

     

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಹೆಚ್ಚಿನ ಪರೀಕ್ಷೆಗೆ ಮಕ್ಕಳ ಸ್ವಾಬ್‌ ಅನ್ನು ಪುಣೆ ಲ್ಯಾಬ್‌ಗೆ ಕಳುಹಿಸುವ ಬಗ್ಗೆ ಚರ್ಚೆಮಾಡುತ್ತೇವೆ. ಐಸಿಎಂಆರ್, ಕೇಂದ್ರ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡಿದರೂ ಮಕ್ಕಳು, ವಯಸ್ಸಾದವರಲ್ಲೂ ಸಿಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

  • ನವಜಾತ ಶಿಶು ಕದ್ದು 50,000 ರೂ.ಗೆ ಮಾರಾಟ – ಮೂವರು ಖತರ್ನಾಕ್‌ ಕಳ್ಳಿಯರು ಅರೆಸ್ಟ್‌

    ನವಜಾತ ಶಿಶು ಕದ್ದು 50,000 ರೂ.ಗೆ ಮಾರಾಟ – ಮೂವರು ಖತರ್ನಾಕ್‌ ಕಳ್ಳಿಯರು ಅರೆಸ್ಟ್‌

    ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು (Newborn baby) ಕಳ್ಳತನ ಮಾಡಿ 50,000ಕ್ಕೆ ಮಾರಾಟ ಮಾಡಿದ್ದ ಮೂವರು ಕಳ್ಳಿಯರನ್ನು ಕಲಬುರಗಿ ಪೊಲೀಸರು (Kalaburagi Police) ಬಂಧಿಸಿದ್ದಾರೆ.

    ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ಮಕ್ಕಳ ಕಳ್ಳಿಯರನ್ನು ಬಂಧಿಸಲಾಗಿದೆ. ನಂತರ ಮಗುವನ್ನು ರಕ್ಷಿಸಿ ತಾಯಿ ಕಸ್ತೂರಿ ಅವರಿಗೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಕೋಲಾರ ಸಂಸದ – ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಮನವಿ

    ಮಾರಾಟಕ್ಕಾಗಿ ಮಗು ಕಳ್ಳತನ ಮಾಡಿದ್ದ ಗ್ಯಾಂಗ್:
    ಮೂವರು ಕಳ್ಳಿಯರ ಖತರ್ನಾಕ್‌ ಗ್ಯಾಂಗ್‌ ನವಜಾತಶಿಶುವನ್ನು ಮಾರಾಟಕ್ಕಾಗಿ ಕಿಡ್ನ್ಯಾಪ್‌ ಮಾಡಿತ್ತು. ಕಳ್ಳತನದ ಬಳಿಕ ಖೈರುನ್‌ ಎಂಬ ಮಹಿಳೆಗೆ 50 ಸಾವಿರ ರೂ.ಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬಳಿಕ ಅಕ್ಕ ಪಕ್ಕದ ನಿವಾಸಿಗಳಿಂದ ಮಗು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತು. ಕೂಡಲೇ ಎಚ್ಚೆತ್ತ ಪೊಲೀಸರು ಮಗುವನ್ನು ರಕ್ಷಿಸಿ, ಕಳ್ಳಿಯರನ್ನ ಬಂಧಿಸಿದ್ದಾರೆ. ಸದ್ಯ ಪ್ರಕರಣದ ಬಳಿಕ ಮಗು ಖರೀದಿಸಿದ ಆರೋಪಿ ಖೈರುನ್ ಎಸ್ಕೇಪ್ ಆಗಿದ್ದಾಳೆ, ಆಕೆಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ನವಜಾತ ಶಿಶು ಪತ್ತೆ ಹಚ್ಚಿದ ಎಸಿಪಿ ಭೂತೇಗೌಡ, ಸಿಪಿಗಳಾದ ಸೋಮಲಿಂಗ್ ಕಿರದಳ್ಳಿ ರಾಘವೇಂದ್ರ ಭಜಂತ್ರಿ ತಂಡವನ್ನು ಪೊಲೀಸ್‌ ಆಯುಕ್ತರು ಪ್ರಸಂಶಿಸಿದ್ದಾರೆ. ಸದ್ಯ ಜಿಮ್ಸ್ ಆಸ್ಪತ್ರೆಯ ಎಸ್‌ಎನ್‌ಸಿಯು ಬ್ಲಾಕ್‌ನಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು – ಮಹಾಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಬೇಡಿಕೆ

  • 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗು ಜನಿಸಿಲ್ಲ – ಇದರ ಹಿಂದಿನ ನಿಗೂಢ ಕಾರಣವೇನು?

    95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗು ಜನಿಸಿಲ್ಲ – ಇದರ ಹಿಂದಿನ ನಿಗೂಢ ಕಾರಣವೇನು?

    ಪ್ರಪಂಚದ ಅನೇಕ ದೇಶಗಳು ವಿವಿಧ ರೀತಿಯ ನಿಗೂಢ ವಿಷಯಗಳನ್ನು ಹೊಂದಿವೆ. ಅದರಲ್ಲಿ ಇಟಲಿಯ ರೋಮ್‌ನಲ್ಲಿರುವ ವ್ಯಾಟಿಕನ್ ಸಿಟಿಯೂ (Vatican City) ಒಂದು. ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಧರ್ಮದ ಎಲ್ಲಾ ಮಹಾನ್ ಧಾರ್ಮಿಕ ಮುಖಂಡರು ಇಲ್ಲಿ ವಾಸಿಸುತ್ತಿದ್ದಾರೆ. ಪೋಪ್ ಇಲ್ಲಿ ಆಳ್ವಿಕೆ ನಡೆಸುತ್ತಾರೆ. ವಿವಿಧ ದೇಶಗಳಿಗೆ ಹೋಲಿಸಿದಾಗ ಈ ದೇಶವು ಒಂದು ವಿಭಿನ್ನತೆಯನ್ನು ಹೊಂದಿದೆ.

    ಕಳೆದ 95 ವರ್ಷಗಳಿಂದ ಒಂದೇ ಒಂದು ಮಗುವೂ ಇಲ್ಲಿ ಜನಿಸಿಲ್ಲ. ಹೌದು. ಫೆಬ್ರವರಿ 11, 1929 ರಂದು ದೇಶವನ್ನು ರಚಿಸಲಾಯಿತು. 95 ವರ್ಷಗಳು ಕಳೆದರೂ ಇಲ್ಲಿ ಒಂದೇ ಒಂದು ಮಗು ಜನಿಸದಿರುವುದು ಆಶ್ಚರ್ಯಕರವಾಗಿದೆ. ಇದು ವಿಶ್ವದ ಅತ್ಯಂತ ಚಿಕ್ಕ ದೇಶವೂ ಆಗಿದೆ. ಈ ಚಿಕ್ಕ ರಾಷ್ಟ್ರದಲ್ಲಿ, ಸುಮಾರು 800 ಜನರು ವಾಸಿಸುತ್ತಿದ್ದು, ಅದರಲ್ಲಿ ಕೇವಲ 30 ಮಹಿಳೆಯರು ಇದ್ದಾರೆ ಎನ್ನಲಾಗುತ್ತಿದೆ.

    ಈ ದೇಶ ರಚನೆಯಾದ ನಂತರ ಇಲ್ಲಿ ಯಾವುದೇ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಿಲ್ಲ. ಆಸ್ಪತ್ರೆಗೆ ನಿರ್ಮಿಸುವಂತೆ ಹಲವಾರು ಬಾರಿ ವಿನಂತಿಸಲಾಯಿತು ಆದರೂ ಕೂಡ ಪ್ರತಿ ಬಾರಿ ಈ ಮನವಿಯನ್ನು ತಿರಸ್ಕರಿಸಲಾಗಿದೆ. ಇಲ್ಲಿ ಯಾರಾದರೂ ತೀವ್ರವಾಗಿ ಅಸ್ವಸ್ಥರಾದರೆ ಅಥವಾ ಮಹಿಳೆ ಗರ್ಭಿಣಿಯಾದರೆ, ಆಕೆಯನ್ನು ರೋಮ್‌ನಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗುತ್ತದೆ.

    ವ್ಯಾಟಿಕನ್ ಸಿಟಿಯಲ್ಲಿ ಆಸ್ಪತ್ರೆಯನ್ನು ತೆರೆಯದಿರಲು ನಿರ್ಧರಿಸಲು ಅದರ ಸಣ್ಣ ಗಾತ್ರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳು ಕಾರಣ ಎಂದು ಹೇಳಲಾಗುತ್ತದೆ. ವ್ಯಾಟಿಕನ್ ಸಿಟಿಯ ವಿಸ್ತೀರ್ಣ ಕೇವಲ 118 ಎಕರೆ. ಎಲ್ಲಾ ರೋಗಿಗಳು ಚಿಕಿತ್ಸೆಗಾಗಿ ರೋಮ್‌ನಲ್ಲಿರುವ ಕ್ಲಿನಿಕ್‌ಗಳು ಮತ್ತು ಆಸ್ಪತ್ರೆಗಳಿಗೆ ಹೋಗಬೇಕು.

    ಇಲ್ಲಿ ಹೆರಿಗೆ ಆಸ್ಪತ್ರೆ ಇಲ್ಲದ ಕಾರಣ ಯಾರೂ ಹೆರಿಗೆ ಮಾಡುವಂತಿಲ್ಲ. ಹಾಗಾಗಿ ವೈದ್ಯಕೀಯ ಸೌಲಭ್ಯಗಳು ಬೇಕಿದ್ದರೆ ಹೊರಗೆ ಹೋಗಬೇಕಾಗುತ್ತದೆ. ಸಹಜ ಹೆರಿಗೆಯನ್ನು ಮಾಡುವುದಾಗಲಿ ಅಥವಾ ಅದಕ್ಕೆ ಅನುಮತಿಸುವ ಅವಕಾಶ ಇಲ್ಲ. ಇಲ್ಲಿರುವ ಮಹಿಳೆ ಗರ್ಭ ಧರಿಸಿ ಹೆರಿಗೆಯ ಸಮಯ ಸಮೀಪಿಸುತ್ತಿದ್ದಂತೆ.. ಇಲ್ಲಿನ ನಿಯಮಗಳ ಪ್ರಕಾರ ಆಕೆ ಮಗುವಿಗೆ ಜನ್ಮ ನೀಡುವವರೆಗೂ ಇಲ್ಲಿಂದ ಹೊರಡಬೇಕು.

    ಇನ್ನೂ ವ್ಯಾಟಿಕನ್ ನಗರದಲ್ಲಿ ಪಿತೃತ್ವವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮವು ಪಾದ್ರಿಗಳ ಧಾರ್ಮಿಕ ನಂಬಿಕೆಗಳಲ್ಲಿ ಆಳವಾಗಿ ಬೇರೂರಿದೆ. ಅಲ್ಲಿನ ನಿವಾಸಿಗಳು ಪ್ರಧಾನವಾಗಿ ಪಾದ್ರಿಗಳನ್ನು ಮದುವೆಯಾಗುವುದನ್ನು ಅಥವಾ ಅವರೊಂದಿಗೆ ಮಕ್ಕಳು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಬ್ರಹ್ಮಚರ್ಯದ ಪ್ರತಿಜ್ಞೆಯನ್ನು ಸಾಮಾನ್ಯವಾಗಿ ಎತ್ತಿಹಿಡಿಯಲಾಗಿದ್ದರೂ, ಪಾದ್ರಿಗಳು ಈ ಪ್ರತಿಜ್ಞೆಯನ್ನು ಮುರಿದರೆ, ಮಕ್ಕಳ ಜನನಕ್ಕೆ ಅಪವಾದಗಳಿವೆ ಎಂದು ನಂಬಲಾಗಿದೆ.

    ಈ ನಿಯಮದಿಂದಾಗಿಯೇ ವ್ಯಾಟಿಕನ್ ಸಿಟಿಯಲ್ಲಿ 95 ವರ್ಷಗಳಿಂದ ಒಂದೇ ಒಂದು ಮಗು ಜನಿಸಿಲ್ಲ. ವ್ಯಾಟಿಕನ್ ನಗರದಲ್ಲಿ ಯಾರೂ ಶಾಶ್ವತ ಪೌರತ್ವವನ್ನು ಪಡೆಯುವುದಿಲ್ಲ, ಎಲ್ಲಾ ನಿವಾಸಿಗಳು ತಮ್ಮ ಅಧಿಕಾರಾವಧಿಯ ಅವಧಿಯವರೆಗೆ ಮಾತ್ರ ಇಲ್ಲಿಯೇ ಇರುತ್ತಾರೆ, ಅಲ್ಲಿಯವರೆಗೆ ಅವರಿಗೆ ತಾತ್ಕಾಲಿಕ ಪೌರತ್ವವನ್ನು ನೀಡಲಾಗುತ್ತದೆ.

  • ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶು ಮೃತದೇಹ ಪತ್ತೆ

    ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶು ಮೃತದೇಹ ಪತ್ತೆ

    – ಜನನವಾದ ಕೆಲವೇ ಗಂಟೆಗಳಲ್ಲಿ ಬೀಸಾಡಿರುವ ಪಾಪಿಗಳು

    ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನ ಸಾಗರ್ ಕ್ಯಾಂಪ್ (Sagar Camp) ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.

    ತುಂಬಿ ಹರಿಯುತ್ತಿರುವ ಕಾಲುವೆಯಲ್ಲಿ ಗಂಡು ಶಿಶುವನ್ನು ಬೀಸಾಡಲಾಗಿದ್ದು, ಶಿಶು ಜನನವಾದ ಕೆಲವೇ ಗಂಟೆಗಳಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ: ಬೆಂಗಳೂರು| ಪಾದಚಾರಿ ಜೊತೆ ಕಿರಿಕ್ – ಬಿಎಂಟಿಸಿ ಕಂಡಕ್ಟರ್ ಹೇಳಿದ್ದೇನು?

    ಕಾಲುವೆಯಲ್ಲಿ ಶಿಶು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು, ಶಿಶುವಿನ ಮೃತದೇಹವನ್ನು ಮೇಲೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಬಳಗಾನೂರು ಠಾಣಾ ಪೊಲೀಸರು (Balaganur Police Station) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿಶುವನ್ನು ಹೆತ್ತವರೆ ಬೀಸಾಡಿರುವುರಾಗಿ ಶಂಕಿಸಿದ್ದಾರೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – 4 ಎಕರೆ 10 ಗುಂಟೆ ಕೆರೆಯ ಜಾಗ ಈಗ ವಕ್ಫ್ ಹೆಸರಿಗೆ

  • ಸಿಸೇರಿಯನ್‌ ವೇಳೆ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ!

    ಸಿಸೇರಿಯನ್‌ ವೇಳೆ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ!

    ದಾವಣಗೆರೆ: ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಭಾರೀ ಎಡವಟ್ಟು ಮಾಡಿದ್ದಾನೆ. ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದ ಘಟನೆ ನಡೆದಿದೆ.

    ವೈದ್ಯನನ್ನು ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಇದೀಗ ಈತನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಘಟನೆ ವಿವರ: ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರೋ ಅರ್ಜುನ್ ಪತ್ನಿ ತುಂಬು ಗರ್ಭಿಣಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಅವರಿಗೆ ಜೂನ್ 27 ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು. ಈ ವೇಳೆ ವೈದ್ಯ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದಾನೆ.

    ಘಟನೆಯಿಂದ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಇದನ್ನೂ ಓದಿ: ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ

    ವೈದ್ಯನ ಬೇಜಾವ್ದಾರಿತನಕ್ಕೆ ರೊಚ್ಚಿಗೆದ್ದ ಮಗುವಿನ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನ ಕೂಡಲೇ ಅಮಾನತು ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

  • ಮಗುವಿಗೆ ಔಷಧಿ ತರಲು ತೆರಳಿದ್ದ ಮಹಿಳೆಯನ್ನು ನುಂಗಿದ ಹೆಬ್ಬಾವು!

    ಮಗುವಿಗೆ ಔಷಧಿ ತರಲು ತೆರಳಿದ್ದ ಮಹಿಳೆಯನ್ನು ನುಂಗಿದ ಹೆಬ್ಬಾವು!

    ಜಕಾರ್ತ: ಹೆಬ್ಬಾವೊಂದು ಮಹಿಳೆಯನ್ನು ನುಂಗಿದ ಘಟನೆ ಮಧ್ಯ ಇಂಡೋನೇಷ್ಯಾದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ ಮೂಲಕ ಪ್ರಾಂತ್ಯದಲ್ಲಿ ತಿಂಗಳೊಳಗೆ 2ನೇ ಹೆಬ್ಬಾವನ್ನು ಸಾಯಿಸಲಾಗಿದೆ.

    ಮೃತಳನ್ನು ಸಿರಿಯಾತಿ (36) ಎಂದು ಗುರುತಿಸಲಾಗಿದೆ. ಈಕೆ ಮಂಗಳವಾರ ಬೆಳಗ್ಗೆ ಅನಾರೋಗ್ಯಕ್ಕೀಡಾದ ತನ್ನ ಮಗುವಿಗೆ ಔಷಧಿ ಖರೀದಿಸಲು ಮನೆಯಿಂದ ಹೊರಟು ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ಕುಟುಂಬಸ್ಥರು ಆಕೆಗಗಿ ಹುಡುಕಾಟ ಆರಂಭಿಸಿದ್ದಾರೆ.

    ಸಿರಿಯಾತಿ ಪತಿ ಅಡಿಯಾನ್ಸಾ ಅವರಿಗೆ ದಕ್ಷಿಣ ಸುಲವೆಸಿ ಪ್ರಾಂತ್ಯದ ಸಿತೆಬಾ ಗ್ರಾಮದ ಅವರ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಆಕೆಯ ಚಪ್ಪಲಿ ಮತ್ತು ಪ್ಯಾಂಟ್‌ಗಳು ಸಿಕ್ಕಿವೆ. ಹೀಗೆ ಹುಡುಕಾಟ ಮುಂದುವರಿಸಿದಾಗ ಸುಮಾರು 10 ಮೀಟರ್ ದೂರದಲ್ಲಿ ಹಾವು ಪತ್ತೆಯಾಗಿದೆ. ಹಾವು ಇನ್ನೂ ಜೀವಂತವಾಗಿತ್ತು ಎಂದು ಪೊಲೀಸರು ವಿವರಿಸಿದ್ದಾರೆ.

    ಹಾವನ್ನು ಸರಿಯಾಗಿ ಗಮನಿಸಿದಾಗ ಅದರ ಹೊಟ್ಟೆ ದೊಡ್ಡದಾಗಿತ್ತು. ಹೀಗಾಗಿ ಅಡಿಯಾನ್ಸಾ ಅನುಮಾನ ಬಂದಿದೆ. ಕೂಡಲೇ ಅವರು ಗ್ರಾಮದ ಮುಖ್ಯಸ್ಥನಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಗ್ರಾಮದ ಮುಖ್ಯಸ್ಥ, ಗ್ರಾಮದ ಜನರ ಸಹಾಯದಿಂದ ಹೆಬ್ಬಾವಿನ ಹೊಟ್ಟೆಯನ್ನು ಕತ್ತರಿಸಿದ್ದಾರೆ. ಈ ವೇಳೆ ಸಿರಿಯಾತಿಯ ಮೃತದೇಹ ಪತ್ತೆಯಾಗಿದೆ.

    ಇಂತಹ ಘಟನೆಗಳನ್ನು ಅತ್ಯಂತ ಅಪರೂಪವೆಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಹಲವರನ್ನು ಹೆಬ್ಬಾವುಗಳು ನುಂಗಿವೆ. ದಕ್ಷಿಣ ಸುಲವೇಸಿಯ ಮತ್ತೊಂದು ಜಿಲ್ಲೆಯಲ್ಲಿ ಕಳೆದ ತಿಂಗಳು ಹೆಬ್ಬಾವಿನ ಹೊಟ್ಟೆಯೊಳಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.