Tag: baby covid

  • ಕೋವಿಡ್ ಗೆದ್ದ ಒಂದು ತಿಂಗಳ ಮಗು – ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೋವಿಡ್ ಗೆದ್ದ ಒಂದು ತಿಂಗಳ ಮಗು – ಆಸ್ಪತ್ರೆಯಿಂದ ಡಿಸ್ಚಾರ್ಜ್

    ನವದೆಹಲಿ: ಕೊರೊನಾ ಸೋಂಕಿಗೆ ಒಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ.

    ಕಿವಿ ಸೋಂಕಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ತಗುಲಿರುವುದು ದೃಢಪಟ್ಟಿತ್ತು. ಮಗು ಈಗ ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ ಎಂದು ಆಸ್ಪತ್ರೆ ವೈದ್ಯರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಫಸ್ಟ್‌ – 100 ಕೋಟಿ ವೀಕ್ಷಣೆಗಳಿಸಿತು ಮಕ್ಕಳ ವೀಡಿಯೋ

    ಆರೋಗ್ಯ ಸಿಬ್ಬಂದಿಯೊಬ್ಬರು ಕೋವಿಡ್‌ನಿಂದ ಗುಣಮುಖವಾದ ಮಗುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರನಡೆಯುತ್ತಿರುವ ದೃಶ್ಯದ ವೀಡಿಯೋವನ್ನು ಸಹ ಆಸ್ಪತ್ರೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ. ಎನ್‌ಐಸಿಯು ಸಿಬ್ಬಂದಿ ಮಗುವಿನ ಕಾಳಜಿ ವಹಿಸಿದ್ದರು.

    ಕೋವಿಡ್ ಮೂರನೇ ಅಲೆಯು ಮಕ್ಕಳನ್ನು ಹೆಚ್ಚು ಬಾಧಿಸಲಿದೆ. ರಾಜಧಾನಿ ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಚಿಕ್ಕ ಮಕ್ಕಳಿಗೆ ಇನ್ನೂ ಕೋವಿಡ್ ಲಸಿಕೆ ನೀಡದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಚಿಕ್ಕಬಳ್ಳಾಪುರದಲ್ಲಿ 10 ಪೊಲೀಸರಿಗೆ ಕೊರೊನಾ

    15-18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಈಗಾಗಲೇ ದೇಶಾದ್ಯಂತ ಸುಮಾರು 3 ಕೋಟಿ ಮಕ್ಕಳು ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

    ಚಳಿಗಾಲದಲ್ಲಿ ಹೆಚ್ಚಿನ ಮಕ್ಕಳು ಜ್ವರ, ಗಂಟಲು ನೋವು, ಮೂಗು ಮತ್ತು ಕೆಮ್ಮಿನಿಂದ ಬಳಲುತ್ತಿದ್ದಾರೆ. ಈ ರೋಗಲಕ್ಷಣಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಬೇಕು. ಅದು ಕೊರೊನಾ ಸೋಂಕೇ ಅಥವಾ ಇಲ್ಲವೇ ಎಂಬುದು ತ್ವರಿತಗತಿಯಲ್ಲಿ ಖಚಿತಪಡಿಸಿಕೊಳ್ಳುವುದು ಮುಖ್ಯ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ

    ದೆಹಲಿಯಲ್ಲಿ ಕೋವಿಡ್ ಕಾರಣದಿಂದಾಗಿ ನಾಲ್ಕು ದಿನಗಳ ಅವಧಿಯಲ್ಲಿ (ಜ.10-14) ಒಂದು ವರ್ಷದೊಳಗಿನ ಮೂರು ಮಕ್ಕಳು ಮೃತಪಟ್ಟಿವೆ ಎಂದು ವರದಿಯಾಗಿದೆ.