ಅಮರಾವತಿ: ಸಿಕಂದರಾಬಾದ್ ದುರಂತೋ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ(Pregnant) ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು(Medicine Student) ಹೆರಿಗೆ ಮಾಡಿಸಿದ್ದಾರೆ.
ರೈಲು ಅನಕಾಪಲ್ಲಿ ನಿಲ್ದಾಣಕ್ಕೆ ತಲುಪುವ ಹಂತದಲ್ಲಿತ್ತು. ಆದರೆ ಶ್ರೀಕಾಕುಳಂ ಮೂಲದ ಗರ್ಭಿಣಿ ಮಹಿಳೆಗೆ ಪ್ರಯಾಣಿಸುವಾಗ ಹೆರಿಗೆ ನೋವು ಕಾಣಿಸಿಕೊಂಡಿತು. ಇದನ್ನು ಕಂಡ ಅದೇ ಕೋಚ್‍ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮಹಿಳೆಗೆ ಸಹಾಯ ಮಾಡಿದ್ದಾನೆ. ತಕ್ಷಣ ವೈದ್ಯಕೀಯ ವಿದ್ಯಾರ್ಥಿನಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ:ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ಲ: ನಳಿನ್‍ಗೆ ಡಿಕೆಶಿ ತಿರುಗೇಟು
ತಾಯಿ ಮತ್ತು ಮಗು(Baby) ಸುರಕ್ಷಿತವಾಗಿದ್ದಕ್ಕೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಈ ಪ್ರಯಾಣದ ವೇಳೆ ಅವರನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ಅನಕಪಲ್ಲಿ ನಿಲ್ದಾಣದಲ್ಲಿ ರೈಲು(Train) ನಿಂತಾಗ ಉಳಿದ ಸಹ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದನ್ನೂ ಓದಿ:ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ದ್ರೌಪದಿ ಮುರ್ಮು
Live Tv
[brid partner=56869869 player=32851 video=960834 autoplay=true]
ಭೋಪಾಲ್: ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಬರಿಗೈಯಲ್ಲಿ ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ ಅಚ್ಚರಿದಾಯಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
25 ವಯಸ್ಸಿನ ಅರ್ಚನಾ ಚೌಧರಿ ಭಾನುವಾರ ರಾತ್ರಿ ಅಳುತ್ತಿದ್ದ ಮಗನನ್ನು ಸಮಾಧಾನಪಡಿಸುತ್ತಾ ಮನೆಯಿಂದ ಹೊರ ಬಂದಿದ್ದಾಳೆ. ಈ ವೇಳೆ ಸಮೀಪದ ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಿಂದ ದಾರಿ ತಪ್ಪಿ ಬಂದಿದ್ದ ಹುಲಿಯು ಹೊಲಗಳಲ್ಲಿ ಅಡಗಿ ಕುಳಿತ್ತು. ನಂತರ ದಾಳಿ ನಡೆಸಿದೆ. ಇದನ್ನೂ ಓದಿ: ಐಐಟಿ ಕ್ಯಾಂಪಸ್‌ಗಳಲ್ಲಿ 2 ದಿನದಲ್ಲಿ 2ನೇ ಆತ್ಮಹತ್ಯೆ
ಈ ವೇಳೆ ಅಚಾನಕ್ ದಾಳಿ ನಡೆಸಿದ ಹುಲಿ, ಮಹಿಳೆಯ ಮಗುವನ್ನು ದವಡೆಯಲ್ಲಿ ಹಿಡಿಯಿತು. ಮಹಿಳೆ ತನ್ನ ಮಗುವನ್ನು ಬಿಡದೇ ಹುಲಿಯೊಂದಿಗೆ ಹೋರಾಡಿದ್ದಾಳೆ. ಆಗ ಬಾಲಕನನ್ನು ಬಲವಾಗಿ ಎಳೆದುಕೊಳ್ಳಲು ಹುಲಿ ಪ್ರಯತ್ನಿಸಿ ವಿಫಲವಾಗಿದೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ್ದಾಳೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಇದರಿಂದ ಭಯಗೊಂಡ ಹುಲಿ ಕಾಡಿನೊಳಕ್ಕೆ ನುಗ್ಗಿದೆ.
ಚೆನ್ನೈ: 11ನೇ ತರಗತಿಯ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿ, ಆ ಮಗುವನ್ನು ತನ್ನ ಶಾಲೆಯ ಬಳಿ ಇರುವ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊದೆಯಲ್ಲಿ ನವಜಾತ ಶಿಶುವಿನ ಶವವನ್ನು ನೋಡಿದ ವಿದ್ಯಾರ್ಥಿಗಳು ಶಾಲಾ ಶಿಕ್ಷಕರಿಗೆ ತಿಳಿಸಿದ್ದಾರೆ. ನಂತರ ಶಾಲೆಯ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಮಯದಲ್ಲಿ ಶಿಶುವಿನ ಹುಕ್ಕುಳ ಬಳ್ಳಿ ಸರಿಯಾಗಿ ತುಂಡಾಗದ ಕಾರಣ ಶಾಲೆಯ ಆವರಣದಲ್ಲೇ ಮಗುವನ್ನು ಹೆರಿಗೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಕಾಲೇಜಿನ 11ನೇ ತರಗತಿಯ ವಿದ್ಯಾರ್ಥಿನಿಯು ಬಾತ್‍ರೂಮ್‍ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ಮಗುವನ್ನು ಶಾಲೆಯ ಬಳಿ ಇರುವ ಪೊದೆ ಬಳಿ ಬಿಟ್ಟು ಮನೆಗೆ ತೆರಳಿದ್ದಾಳೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ. ಈ ವೇಳೆ 10ನೇ ತರಗತಿಯ ಹುಡುಗನಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬ ಸತ್ಯ ಹೊರಬಂದಿದೆ. ಇದನ್ನೂ ಓದಿ:ಹಾಲ್ ಟಿಕೆಟ್ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ
ಘಟನೆಗೆ ಸಂಬಂಧಿಸಿ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಡುಗನ ವಿರುದ್ಧ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಆತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಹಳಿಯಲ್ಲಿ ರೀಲ್ಸ್ ಹುಚ್ಚಾಟ – ರೈಲು ಗುದ್ದಿದ ರಭಸಕ್ಕೆ ಯುವಕ ಪಲ್ಟಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.
ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು. ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ ಕಾರಣದಿಂದ ಉಂಟಾಗುವ ಸಂಭಾವ್ಯ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿಶೇಷ ಹೆರಿಗೆ ರಜೆಯ ಪ್ರಯೋಜನವು ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ದೊರಕುತ್ತದೆ. ಇದಲ್ಲದೆ ಅಧಿಕೃತ ಆಸ್ಪತ್ರೆಯಲ್ಲಿ ಮಗುವಿನ ಹೆರಿಗೆಗೆ ಮಾತ್ರ ರಜೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಈ ಆದೇಶಗಳು ಕೇಂದ್ರ ನಾಗರಿಕ ಸೇವೆಗಳ ರಜೆ ನಿಯಮಗಳು 1972ರ ನಿಯಮ 2ರ ಪ್ರಕಾರ ಭಾರತದ ಒಕ್ಕೂಟದ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಾಗರಿಕ ಸೇವೆಗಳು ಮತ್ತು ಹುದ್ದೆಗಳಿಗೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಈ ಆದೇಶ ಬಿಡುಗಡೆಯ ದಿನಾಂಕದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ
Live Tv
[brid partner=56869869 player=32851 video=960834 autoplay=true]
ಲಕ್ನೋ: ಚಿಕ್ಕಪ್ಪನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅವಳನ್ನು ಗರ್ಭಿಣಿಯಾಗಿಸಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಉತ್ತರಾಖಂಡದ ವಲಸೆ ಕಾರ್ಮಿಕನೊಬ್ಬ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ್ದಾನೆ. ಇದರ ಪರಿಣಾಮ ಬಾಲಕಿಯು ಗುರುಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿ ಹಾಗೂ ಅವಳ ತಂದೆ, ತಾಯಿ ವಾಸಿಸುತ್ತಿದ್ದರು. ಬಾಲಕಿಯ ತಂದೆ, ತಾಯಿಯಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಅಲ್ಲೇ ಪಕ್ಕ ಮನೆಯಲ್ಲಿ ವಾಸಿಸುತ್ತಿದ್ದ ಆಕೆಯ ಚಿಕ್ಕಪ್ಪ ಬಾಲಕಿಯನ್ನು ಯಾವುದೋ ನೆಪ ಹೇಳಿ ಮನೆಗೆ ಕರೆದಿದ್ದಾನೆ. ನಂತರ ಅಲ್ಲಿ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ – ಅಧಿಕಾರಿಗಳಿಗೆ ಮಮತಾ ಬ್ಯಾನರ್ಜಿ ಸವಾಲು
ಕೆಲ ತಿಂಗಳ ಬಳಿಕ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಹೀಗಾಗಿ ಬಾಲಕಿಯನ್ನು ಅಲ್ಲಿಯೇ ಹತ್ತಿರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಆಕೆಯ ತಾಯಿ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕಿ ಗರ್ಭಿಣಿ ಆಗಿರುವ ವಿಷಯವನ್ನು ತಾಯಿಗೆ ತಿಳಿದಿದೆ. ಇದಾದ ನಂತರ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಲಕ್ನೋ: ಕಳೆದ ವಾರ ಮಥುರಾ ರೈಲ್ವೆ ನಿಲ್ದಾಣದಲ್ಲಿ ತಂದೆ-ತಾಯಿಯ ಪಕ್ಕದಿಂದ ಮಲಗಿದ್ದ ಏಳು ತಿಂಗಳ ಮಗು ಕಿಡ್ನ್ಯಾಪ್ ಆಗಿತ್ತು. ಇದೀಗ ಈ ಮಗು ಫಿರೋಜಾಬಾದ್‍ನ ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆಯಾಗಿದೆ. ಈ ಮೂಲಕ ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ.
ಬಿಜೆಪಿಯ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಮಗು ಬೇಕು ಎಂಬ ಕಾರಣಕ್ಕೆ ಇಬ್ಬರು ವೈದ್ಯರಿಗೆ 1.8 ಲಕ್ಷ ರೂಪಾಯಿ ನೀಡಿ ಬಾಲಕನನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ. ಮಗುವನ್ನು ಪ್ಲಾಟ್‍ಫಾರ್ಮ್‍ನಿಂದ ಎತ್ತಿಕೊಂಡು ಹೋಗುವಾಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ये व्यक्ति रे०स्टेशन मथुरा जं० से अपनी माँ के साथ सो रहे महज 7 माह के बच्चे को उठाकर ले गया।
इस व्यक्ति को पकड़वाने में मदद कीजिये।
आप सिर्फ Retweet कर इसके फ़ोटो/वीडियो को Groups में share कर दीजिये, विशेष कर कासगंज, बदायूँ और बरेली साइड में।
मुझे भरोसा है ये अवश्य पकड़ा जाएगा। pic.twitter.com/fTnuGbSlsi
ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಅಪಹರಣವನ್ನು ನಡೆಸಿದೆ. ಮಗುವನ್ನು ಕದ್ದಿರುವ ವ್ಯಕ್ತಿ ದೀಪ್ ಕುಮಾರ್ ಎಂದು ತಿಳಿದುಬಂದಿದೆ. ಆತ ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‍ನ ಭಾಗವಾಗಿದ್ದಾನೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಸಹ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ.
ನಾವು ಮಗುವನ್ನು ಯಾರ ಮನೆಯಲ್ಲಿರಿಸಿದ್ದಾರೆ ಎಂದು ವಿಚಾರಣೆ ನಡೆಸಿದಾಗ, ಕಾರ್ಪೋರೇಟರ್ ಮನೆಯಲ್ಲಿ ಪತ್ತೆಯಾಗಿದೆ. ಅವರು ನಮಗೆ ಒಬ್ಬಳೇ ಮಗಳು ಇರುವುದರಿಂದ ಒಬ್ಬ ಮಗ ಬೇಕು ಎಂದು ಕೇಳಿದ್ದಾರೆ. ಅದಕ್ಕಾಗಿ ಆರೋಪಿಗಳೊಂದಿಗೆ ವಿನಿತಾ ಅಗರ್ವಾಲ್ ದಂಪತಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿಫ್ಟ್ ನಿಂತಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್, ಲಿಫ್ಟ್ ಆಪರೇಟರ್‌ಗೆ ಕಪಾಳಕ್ಕೆ ಬಾರಿಸಿದ ಉದ್ಯಮಿ
ಈ ಘಟನೆ ಹಾಗೂ ಬಂಧಿತ ಕಾರ್ಪೊರೇಟರ್ ಬಗ್ಗೆ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ 23ರಂದು ರಾತ್ರಿ ಮಥುರಾ ರೈಲು ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ವ್ಯಕ್ತಿಯೋರ್ವ ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಪರಾರಿಯಾಗಿದ್ದನು. ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡಿದ್ದಾನೆ. ನಂತರ ಮತ್ತೆ ಹಿಂದಿರುಗಿ ಬಂದು ಮಗುವನ್ನು ನಿಧನವಾಗಿ ಎತ್ತಿಕೊಂಡು ಅಲ್ಲಿಂದ ಓಡಿ ಹೋಗಿದ್ದನು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ನಡೆಯಲು ಪ್ರಯತ್ನಿಸುವ ವೇಳೆ ಬಿದ್ದ ಪರಿಣಾಮ ಮೆದುಳು ನಿಷ್ಕ್ರಿಯವಾಗಿ 16 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಅಂಗಾಂಗ ದಾನದೊಂದಿಗೆ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ಆಗಸ್ಟ್ 17ರಂದು ಬೆಳಗ್ಗೆ ಬಿದ್ದು ಮಗು ರಿಶಾಂತ್ ಗಂಭೀರವಾಗಿ ಗಾಯಗೊಂಡಿತ್ತು. ವೃತ್ತಿಯಲ್ಲಿ ಖಾಸಗಿ ಗುತ್ತಿಗೆದಾರರಾದ ಮಗುವಿನ ತಂದೆ ಉಪಿಂದರ್, ತಕ್ಷಣ ಮಗುವನ್ನು ಜಮುನಾ ಪಾರ್ಕ್‌ನಲ್ಲಿರುವ ತಮ್ಮ ನಿವಾಸದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಮಗುವಿನ ಮೆದುಳು ನಿಷ್ಕ್ರಿಯವಾಗಿದೆ ಎಂದು ಏಮ್ಸ್ ವೈದ್ಯರು ದೃಢಪಡಿಸಿದರು. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ
ಮಗುವಿನ ಅಂಗಾಂಗ ದಾನ ಮಾಡಿದರೆ ಅನೇಕರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದು ಏಮ್ಸ್ ವೈದ್ಯರು ಮಗು ರಿಶಾಂತ್ ಪೋಷಕರಿಗೆ ಸಲಹೆ ನೀಡಿದರು. ಅಲ್ಲದೇ ಅಂಗಾಂಗ ದಾನದ ಬಗ್ಗೆ ಕೌನ್ಸೆಲಿಂಗ್ ಕೂಡ ನಡೆಸಿದರು. AIIMS ವೈದ್ಯರ ಸಲಹೆ ಮೇರೆಗೆ ಮಗುವಿನ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.
ರಿಶಾಂತ್ ನಮ್ಮ ಕುಟುಂಬದ ಪ್ರೀತಿಯ ಮಗನಾಗಿದ್ದ. ಐವರು ಅಕ್ಕಂದಿರು ಅವನನ್ನು ತುಂಬಾ ಪ್ರೀತಿಸುತ್ತಿದ್ದರು. ದುರದೃಷ್ಟವಶಾತ್ ಅಂದು ನಾನು ಕೆಲಸಕ್ಕೆ ಹೊರಡುವ ಆತುರದಲ್ಲಿದ್ದೆ. ಈ ವೇಳೆ ಆತ ಬಿದ್ದು ಗಂಭೀರ ಗಾಯಗೊಂಡ. ಆತನನ್ನು ಹಿಡಿದುಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಮುದ್ದು ಕಂದ ಇನ್ನಿಲ್ಲವಾಗಿದ್ದಾನೆ. ಅವನ ಅಂಗಾಂಗಗಳು ಇತರರ ಜೀವ ಉಳಿಸುತ್ತೆ ಎನ್ನುವ ಉದ್ದೇಶದಿಂದ ದಾನ ಮಾಡಿದ್ದೇವೆ ಎಂದು ಉಪೀಂದರ್ ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಈ ವಿಚಾರ ತಿಳಿಯುತ್ತಿದ್ದಂತೆಯೇ ದಂಪತಿ ತೊಟ್ಟಿಯಿಂದ ಮಗುವನ್ನು ಮೇಲೆತ್ತಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಬರುವ ಮಧ್ಯದಲ್ಲೇ ಮಗು ಸಾವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗು ಮೃತಪಟ್ಟ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಈ ಸಂಬಂಧ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿಕೊಂಡು ಕ್ಷಣಾರ್ಧದಲ್ಲಿ ಎಸ್ಕೇಪ್ ಆದ ಘಟನೆ ನಗರದ ಹೊರವಲಯ ಬನ್ನೇರುಘಟ್ಟದ ಕಲ್ಕೆರೆ ಬಳಿ ನಡೆದಿದೆ.
ಉದ್ಯಮಿ ಮಂಜುನಾಥ್ ರೆಡ್ಡಿ ಎಂಬವರ ಮಗಳು ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ ಏಕಾಏಕಿ ಬಂದ ದುಷ್ಕರ್ಮಿಗಳ ತಂಡ ಮಗುವನ್ನು ಎತ್ತಿಕೊಂಡು ಪರಾರಿಯಾಗಿದೆ. ಇತ್ತ ಮಗುವನ್ನು ಎತ್ತಿಕೊಂಡು ಪರಾರಿಯಾಗುತ್ತಿದ್ದ ವೇಳೆ ಮಗು ಕಿರುಚಾಡಿದೆ. ಕೂಡಲೇ ಸ್ಥಳೀಯರು ಮಗುವಿನ ಕಿರುಚಾಟ ಕೇಳಿ ವಾಹನದಲ್ಲಿ ತೆರಳುತ್ತಿದ್ದವರನ್ನು ಹಿಂಬಾಲಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್
ಸ್ಥಳೀಯರು ಬೆನ್ನಟ್ಟುತ್ತಿದ್ದಂತೆ ಗಾಬರಿಗೊಂಡ ದುಷ್ಕರ್ಮಿಗಳು ಮಗುವನ್ನು ಕಾಡಿನೊಳಗೆ ಹೊತ್ತೊಯ್ದಿದ್ದಾರೆ. ಕಾಡಿನೊಳಗೆ ಸ್ಥಳೀಯರು ನುಗ್ಗುತ್ತಿದ್ದಂತೆ ಜನರನ್ನು ನೋಡಿ ಗಾಬರಿಗೊಂಡು ಮಗುವನ್ನು ಕಾಡಿನೊಳಗೆ ಬಿಟ್ಟು ಅಸಾಮಿಗಳು ಪರಾರಿಯಾಗಿದ್ದಾರೆ.
ಬೀದರ್: ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ 2 ವರ್ಷದ ಮಗು ಸೇರಿ ಐವರು ಸಾವನ್ನಪ್ಪಿದ ಘಟನೆ ಬೀದರ್‍ನಲ್ಲಿ ನಡೆದಿದೆ.
ಹೈದ್ರಾಬಾದ್‍ನಿಂದ ಕಲಬುರಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗ್ತಿದ್ದ ಕುಟುಂಬ ಬೀದರ್ ತಾಲೂಕಿನ ಭಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತಕ್ಕೆ ಬಲಿ ಆಗಿದೆ. ಹೈದರಾಬಾದ್‍ನಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಬೇಗಂ ಪೇಟದ ನಿವಾಸಿ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗೂ ಕಾರು ಚಾಲಕ ದಿನೇಶ್ (35) ಮೃತಪಟ್ಟ ದುರ್ದೈವಿಗಳು.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ 2 ವರ್ಷದ ಮಯಾಂಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಗಿರಿಧರ ಪುತ್ರ 12 ವರ್ಷದ ಹರ್ಷವರ್ಧನಗೆ ಯಾವುದೇ ಗಾಯಗಳಾಗದೇ ಪಾರಾಗಿದ್ದಾನೆ. ಇನ್ನು ಘಟನೆಯಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ
Live Tv
[brid partner=56869869 player=32851 video=960834 autoplay=true]