Tag: Baby

  • ಬಸ್ ನಿಲ್ದಾಣದಲ್ಲಿ ಸಿಕ್ಕ ಚೀಲದಲ್ಲಿ ಸಿಕ್ತು ನವಜಾತ ಶಿಶು

    ಬಸ್ ನಿಲ್ದಾಣದಲ್ಲಿ ಸಿಕ್ಕ ಚೀಲದಲ್ಲಿ ಸಿಕ್ತು ನವಜಾತ ಶಿಶು

    ಕಾರವಾರ: ಬಸ್ ನಿಲ್ದಾಣದಲ್ಲಿರಿಸಿದ್ದ ಚೀಲದಲ್ಲಿ ನವಜಾತಶಿಶು ಸಿಕ್ಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೌಡಳ್ಳಿ ಸಮೀಪದ ಖಾನ್ ನಗರದ ಬಸ್ ತಂಗುದಾಣದಲ್ಲಿ ನಡೆದಿದೆ.

    ತಾಲೂಕಿನ ಕೂಗಿಲಕುಳಿ ಗ್ರಾಮದ ಮಾದೇವಿ ಎಂಬವರಿಗೆ ಈ ಮಗು ದೊರೆತಿದೆ. ಸದ್ಯ ಈ ಮಗುವನ್ನು ಶಿರಸಿಯ ಸಹಾಯ ಟ್ರಸ್ಟ್ ಗೆ ಹಸ್ತಾಂತರಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷ ಸತೀಶ್ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಕ್ಕಳ ತುರ್ತು ನಿಗಾ ಘಟಕದಲ್ಲಿರಿಸಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಪತ್ತೆಯಾಗಿದ್ದು ಹೇಗೆ?
    ಮಾದೇವಿ ಅವರು ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಎಂದಿನಂತೆ ಇಂದು ನಿಲ್ದಾಣಕ್ಕೆ ಬಂದಾಗ ಚೀಲ ಪತ್ತೆಯಾಗಿದೆ. ಯಾರೋ ಮರೆತು ಹೋಗಿರಬೇಕು ಎಂದು ಆ ಚೀಲವನ್ನು ಮನೆಗೆ ತಂದು ನೋಡಿದ್ದಾರೆ. ಈ ವೇಳೆ ಚೀಲ ಬಿಚ್ಚುತ್ತಿದ್ದಂತೆ ಮಗು ಅಳುವುದು ಕೇಳಿಸಿದೆ. ಭಯಗೊಂಡ ಮಾದೇವಿ ಸ್ಥಳೀಯರಿಗೆ ಮಾಹಿತಿ ನೀಡಿ ನಂತರ ಪೊಲೀಸರಿಗೂ ವಿಷಯ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ

    ಅವಧಿಪೂರ್ವ ಜನಿಸಿದ ಶಿಶು ಇದಾಗಿದ್ದು, 1.6 ಕೆಜಿ ತೂಕ ಹೊಂದಿದೆ. ಜನಿಸಿ ನಾಲ್ಕು ದಿನ ಆಗಿರುವ ಸಾಧ್ಯತೆಗಳಿದ್ದು ಮಗುವಿನ ಎಡಗೈ ಮುಂಭಾಗದ ಮೂಳೆ ಬೆಳವಣಿಗೆ ಕುಂಟಿತವಾಗಿದ್ದು, ಆರು ಬೆರಳನ್ನು ಹೊಂದಿದೆ. ಗಾಳಿ, ಮಳೆಯ ವಾತಾವರಣದಲ್ಲಿದ್ದ ಕಾರಣ ಮಗುವಿನ ಆರೋಗ್ಯ ಹದಗೆಟ್ಟಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ಸಹ ದಾಖಲಾಗಿದ್ದು ಮಗುವಿನ ಪೋಷಕರ ಪತ್ತೆಗೆ ಪ್ರಯತ್ನ ಸಾಗುತ್ತಿದೆ. ಇದನ್ನೂ ಓದಿ: ಹೂ ಬೆಳೆಗಾರರಿಗೆ ‘ವರ’ ತಂದ ಶ್ರಾವಣ ಮಾಸದ ‘ಮಹಾಲಕ್ಷ್ಮಿ’

  • ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು

    ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು

    ಬೆಂಗಳೂರು: ಮೂರು ವರ್ಷದ ಮಗು ಆಟ ಆಡುತ್ತಾ ಚಿಕ್ಕ ಗಣೇಶ ಮೂರ್ತಿಯನ್ನು ನುಂಗಿದ ಘಟನೆ ಬೆಂಗಳೂರಿನ ಹೆಚ್‍ಎಎಲ್ ನಲ್ಲಿ ನಡೆದಿದ್ದು, ಪೋಷಕರ ಸಮಯಪ್ರಜ್ಞೆಯಿಂದ ಮಗು ಬದುಕುಳಿದಿದೆ.

    ಶುಕ್ರವಾರ ರಾತ್ರಿ ಮಗುವಿಗೆ ಆಡಲು ಪೋಷಕರು ಆಟಿಕೆ ನೀಡಿದ್ದರು. ಕೆಲ ಸಮಯದ ಬಳಿಕ ಆಟಿಕೆಯಲ್ಲಿ ಗಣೇಶ ಮೂರ್ತಿ ಇರಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಕುಡಲೇ ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಎಕ್ಸ್ ರೇ ತೆಗೆದು ನೋಡಿದಾಗ ಅನ್ನನಾಳದಲ್ಲಿ ಗಣೇಶನ ವಿಗ್ರಹ ಕಂಡು ಬಂದಿದೆ.

    ವಿಗ್ರಹ ಮೆಟಲ್ ವಿಗ್ರಹವಾಗಿದ್ದರಿಂದ ಎಂಡೋಸ್ಕೋಪಿ ಮೂಲಕ ಮೂರ್ತಿಯನ್ನು ಹೊಟ್ಟೆಯ ಭಾಗಕ್ಕೆ ತಂದಿದ್ದಾರೆ. ನಂತರ ಹಂತ ಹಂತವಾಗಿ ನಿರ್ದಿಷ್ಟ ಜಾಗಕ್ಕೆ ತಂದ ವೈದ್ಯರು, ಮಗುವನ್ನು ಉಲ್ಟಾ ಮಲಗಿಸಿ ಗಣೇಶ ಮೂರ್ತಿಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೋಷಕರ ಸಮಯ ಪ್ರಜ್ಞೆಯಿಂದ ಮಗುವಿ ಜೀವ ಉಳಿದಿದೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಮಕ್ಕಳನ್ನು ಒಂಟಿಯಾಗಿ ಆಟವಾಡೋಕೆ ಬಿಟ್ಟ ವೇಳೆ ಅಪಾಯಕಾರಿ ವಸ್ತುಗಳನ್ನು ಮಕ್ಕಳ ಕೈಗೆ ಸಿಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕೊಟ್ಟರು ಕೂಡ ಮಗುವಿನ ಜೊತೆಯಲ್ಲಿ ಯಾರಾದರೂ ಇದ್ರೆ ಒಳ್ಳೆಯದು ಅಂತಾ ವೈದ್ಯರು ಪೋಷಕರಿಗೆ ತಿಳಿ ಹೇಳಿದ್ದಾರೆ. ನೀವು ಏನಾದರೂ ಮಕ್ಕಳ ಕೈಗೆ ಈ ರೀತಿಯ ಚಿಕ್ಕ ಚಿಕ್ಕ ವಸ್ತುಗಳನ್ನು ನೀಡುವ ಮೊದಲು ಎಚ್ಚರಿಕೆ ವಹಿಸಿ.

  • ಗಾಜಿನ ಗೋಲಿ ನುಂಗಿ ಒಂದು ವರ್ಷದ ಮಗು ಸಾವು

    ಗಾಜಿನ ಗೋಲಿ ನುಂಗಿ ಒಂದು ವರ್ಷದ ಮಗು ಸಾವು

    ದಾವಣಗೆರೆ: ನೆರೆಹೊರೆಯ ಮಕ್ಕಳ ಜೊತೆ ಆಟವಾಡುತ್ತಿದ್ದ ಮಗು ಗೋಲಿ ನಂಗಿ ಪ್ರಾಣ ಬಿಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

     

    ಮನವೀರ್ ಮೃತನಾಗಿದ್ದನೆ. ಮನೆ ಮುಂಭಾಗ ಆಟವಾಡುವಾಗ ಗೋಲಿನುಂಗಿ ಒಂದು ವರ್ಷದ ಎರಡು ತಿಂಗಳ ಮಗು ಸಾವನ್ನಪ್ಪಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡಾದಲ್ಲಿ ನಡೆದಿದೆ.

    ಹರೀಶ್ ಎಂಬುವರ ಪುತ್ರ ಮನವೀರ್ ನಿತ್ಯ ಮನೆಯಂಗಳದಲ್ಲಿ ಗಾಜಿನ ಗೋಲಿಯಿಂದ ಅಕ್ಕ ಪಕ್ಕದ ಮನೆ ಮಕ್ಕಳೊಂದಿಗೆ ಆಟವಾಡುತ್ತಿದ್ದನು. ಇಂದು ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಗೋಲಿ ಬಾಯಲ್ಲಿ ಹಾಕಿಕೊಂಡು ಕ್ಷಣದಲ್ಲಿ ನುಂಗಿ ಬಿಟ್ಟಿದ್ದಾನೆ. ಮಗು ಗೋಲಿ ನುಂಗಿದನ್ನ ಗಮನಿಸಿದ ಜೊತೆಗಿದ್ದ ಬಾಲಕ ಪಾಲಕರಿಗೆ ಹೇಳಿದ್ದು, ಪಾಲಕರು ಆಸ್ಪತ್ರೆಗೆ ಹೋಗುವಷ್ಟರಲ್ಲಿ 10ರಿಂದ 15 ನಿಮಿಷದಲ್ಲಿ ಮಗು ಮನವೀರ್ ಸಾವನ್ನಪ್ಪಿದೆ. ಇನ್ನು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮಿಗಿಲು ಮುಟ್ಟಿದೆ.

  • ಉಡುಪಿಯಿಂದ ಮಗುವಿನ ಅಪಹರಣ- ಕುಮುಟಾದಲ್ಲಿ ಆರೋಪಿ ಬಂಧನ

    ಉಡುಪಿಯಿಂದ ಮಗುವಿನ ಅಪಹರಣ- ಕುಮುಟಾದಲ್ಲಿ ಆರೋಪಿ ಬಂಧನ

    – 12 ಗಂಟೆಯಲ್ಲಿ ಕಂದಮ್ಮನ ರಕ್ಷಣೆ
    – ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಿಂಚಿನ ಕಾರ್ಯಾಚರಣೆ

    ಉಡುಪಿ: ಕರಾವಳಿ ಬೈಪಾಸ್ ಬಳಿಯ ಕೂಲಿ ಕಾರ್ಮಿಕರ ಕಾಲೋನಿಯಲ್ಲಿ ಮಗುವಿನ ಅಪಹರಣ ನಡೆದು 12 ಗಂಟೆಯೊಳಗೆ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಕುಮುಟಾ ರೈಲು ನಿಲ್ದಾಣದಲ್ಲಿ ಆರೋಪಿ ಪರಶುರಾಮನನ್ನು ಬಂಧಿಸಿದ್ದಾರೆ.

    ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಎರಡು ವರ್ಷ ನಾಲ್ಕು ತಿಂಗಳ ಮಗುವನ್ನು ರಕ್ಷಿಸಲಾಗಿದೆ. ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಮಗುವಿನ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

    ಘಟನೆ ವಿವರ
    ಬಾಗಲಕೋಟೆ ಮೂಲದ ಮುಧೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿ ಉಡುಪಿಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಪಕ್ಕದ ಗುಡಿಸಲಿನಲ್ಲಿದ್ದ ಪರಶು ಚಹಾ ಕುಡಿಸುತ್ತೇನೆ ಎಂದು 2.4 ವರ್ಷದ ಶಿವರಾಜ್ ನನ್ನು ಎತ್ತಿಕೊಂಡು ಹೋಗಿದ್ದಾನೆ. ಆರೋಪಿ ಬಾಗಲಕೋಟೆಯ ಪರಶು ಎಂಬಾತ ಅಪಹರಿಸಿದ್ದಾನೆ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಉಡುಪಿ ಚಿನ್ನದ ವ್ಯಾಪಾರಿಯ ಕಿಡ್ನಾಪ್ ಪ್ರಕರಣ- ಏಳು ಮಂದಿ ಚಿನ್ನ ಚೋರರು ಅಂದರ್!

    ಮಗು ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಲಾಗಿತ್ತು. ಪರಶು ಎಂಬಾತ ಮಗುವನ್ನು ಎತ್ತಿಕೊಂಡು ನಗರದಿಂದ ಕುಂದಾಪುರ ಕಡೆ ಬಸ್‍ನಲ್ಲಿ ಹೋಗಿರುವುದು ತಿಳಿದುಬಂದಿದೆ. ಬಸ್ಸಿನ ನಿರ್ವಾಹಕರನ್ನು ವಿಚಾರಿಸಿದಾಗ ಸಂತೆ ಕಟ್ಟೆಯಲ್ಲಿ ಮಗುವಿನೊಂದಿಗೆ ಇಳಿದಿದ್ದಾನೆ. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಸ್ ಹತ್ತಿ ಹೋಗಿದ್ದಾನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ದ.ಕನ್ನಡದ ಉಜಿರೆಯ ಬಾಲಕನ ಕಿಡ್ನ್ಯಾಪ್ ಸುಖಾಂತ್ಯ – 6 ಮಂದಿ ಅರೆಸ್ಟ್

    ಕಿಡ್ನಾಪ್ ಪ್ರಕರಣ ಸುಖಾಂತ್ಯ
    ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇಳಿದ ಪರಶು ಮಗುವಿನ ಜೊತೆ ಕುಮಟವರೆಗೆ ರೈಲಿನಲ್ಲಿ ಹೋಗಿದ್ದಾನೆ. ಅಷ್ಟರಲ್ಲಿ ಪೊಲೀಸರು ಎಲ್ಲಾ ಸಿಸಿಟಿವಿ ದೃಶ್ಯ ಜಾಲಾಡಿ, ಬಸ್ ನಿಲ್ದಾಣ, ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಿ ಕುಮುಟಾ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿ ಮಗುವಿನ ರಕ್ಷಣೆ ಮಾಡಿದ್ದಾರೆ.

  • ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

    ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

    ಕೊಪ್ಪಳ: ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ಮೆಂತೋಪ್ಲಸ್ ಡಬ್ಬಿಯನ್ನು ಸರ್ಕಾರಿ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ.

    ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಎಂಬ (8) ತಿಂಗಳ ಮಗು ಆಟವಾಡುತ್ತಾ ಮೆಂತೋಪ್ಲಸ್ ಡಬ್ಬಿ ನುಂಗಿತ್ತು. ಕೂಡಲೇ ಇದನ್ನು ಅರಿತ ಮಗುವಿನ ಪೋಷಕರು, ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಯತಿರಾಜ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್: ಎಸ್‌ಪಿ ಮಿಥುನ್ ಕುಮಾರ್

    ಮಗುವನ್ನು ಪರೀಕ್ಷಿಸಿದ ವೈದ್ಯರು, ಮಗುವಿನ ಗಂಟಲಿನಲ್ಲಿ ಡಬ್ಬಿ ಸಿಲುಕಿಕೊಂಡಿದೆ. ಹೀಗಾಗಿ ಉಸಿರಾಟಕ್ಕೆ ತೊಂದರೆಯಾಗಿ ಅಪಾಯದಲ್ಲಿದೆ ಎಂದು ತಿಳಿಸಿದ್ದಾರೆ. ಕೂಡಲೇ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿಸುವಂತೆ ಹೇಳಿದ್ದಾರೆ. ಪೋಷಕರ ಅನುಮತಿಯಂತೆ ಕೂಡಲೇ ಜಿಲ್ಲಾಸ್ಪತ್ರೆಯ ಇಎನ್‍ಟಿ ವಿಭಾಗದ ವೈದ್ಯರಾದ ಡಾ. ಮಲ್ಲಿಕಾರ್ಜುನ ಅವರು ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಮೂಲಕ ಭಾರೀ ಅಪಾಯದಿಂದ ಪುಟ್ಟ ಕಂದಮ್ಮನನ್ನು ಪಾರು ಮಾಡಿದ್ದಾರೆ.

  • ಒಂದೂವರೆ ವರ್ಷದ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ

    ಒಂದೂವರೆ ವರ್ಷದ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ

    ಕೋಲಾರ: ಹೆತ್ತ ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಜಮೀನು ವಿಚಾರವಾಗಿ ಗಂಡ ಹಾಗೂ ಹೆಂಡತಿ ಮಧ್ಯೆ ಜಗಳವಾಗಿದ್ದು ಪರಿಣಾಮ ತಾಯಿ ತನ್ನ ಮಗುವನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಚಿನ್ನಾಪುರ ಗ್ರಾಮದ 22 ವರ್ಷದ ಭಾನುಪ್ರಿಯ ಹಾಗೂ ಒಂದೂವರೆ ವರ್ಷದ ಹೆಣ್ಣು ಮಗು ನಿಧಿ ಸಾವನ್ನಪ್ಪಿದ ತಾಯಿ ಮಗು. ಮಗುವಿಗೆ ನೇಣು ಹಾಕಿ, ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್

    ಕಳೆದ ಹಲವು ದಿನಗಳಿಂದ ಜಮೀನು ವಿಚಾರವಾಗಿ ಗಂಡ ಹರೀಶ್ ನೊಂದಿಗೆ ಗಲಾಟೆ ಮಾಡಿಕೊಂಡಿರುವ ಭಾನುಪ್ರಿಯಾ, ಗಂಡ ಇಲ್ಲದೆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸದ್ಯ ಗಂಡ ಹರೀಶ್‍ನನ್ನ ಕೋಲಾರ ಗ್ರಾಮಾಂತರ ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ತೆಂಗಿನಮರದ ಕಾಯಿ ಬಿದ್ದು 11 ತಿಂಗಳ ಹಸುಗೂಸು ಸಾವು

    ತೆಂಗಿನಮರದ ಕಾಯಿ ಬಿದ್ದು 11 ತಿಂಗಳ ಹಸುಗೂಸು ಸಾವು

    ಹಾವೇರಿ: ಮನೆಯ ಮುಂದೆ ಮರ ನೆಟ್ಟಿದ್ದರೆ ಹುಷಾರಾಗಿರಿ. ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು ಪುಟ್ಟ ಕಂದಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದಲ್ಲಿ ನಡೆದಿದೆ.

    ಮೃತ ಹಸಗೂಸನ್ನ 11 ತಿಂಗಳಿನ ತನ್ವೀತ್ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಮಗು. ಸೋಮವಾರ ಬೆಳಗ್ಗೆ ಮನೆಯ ಮುಂದೆ ಮಗುವನ್ನ ಎತ್ತಿಕೊಂಡು ಊಟ ಮಾಡಿಸುತ್ತಿದ್ದ ವೇಳೆ ತೆಂಗಿನಮರದ ಕಾಲ ಕಾಯಿ ಬಿದ್ದು ಈ ದುರ್ಘಟನೆ ನಡೆದಿದೆ.

    ಮಗುವಿನ ತಲೆಯ ಭಾಗದ ಮೇಲೆ ಭಾರವಾದ ತೆಂಗಿನಕಾಯಿ ಬಿದ್ದಿದೆ. ಕೂಡಲೇ ಮಗುವನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ 11 ತಿಂಗಳ ಹಸಗೂಸು ಮೃತಪಟ್ಟಿದೆ. ಮಗು ಕಳೆದುಕೊಂಡ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

    ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಹಾಸನ: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂಬುದು ಪೋಷಕರ ವಾದವಾಗಿದೆ. ಇದನ್ನೂ ಓದಿ: ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

    ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಒಂದೂವರೆ ವರ್ಷದ ಗಂಡು ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನ ದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

  • ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

    ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಒಂಟಿಗಾಲಿನ ಅಪರೂಪದ ಮಗುವಿನ ಜನನವಾಗಿದೆ. ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

    ಭಾನುವಾರ ಹೆರಿಗೆ ನೋವಿನಿಂದ ಬಳಲುತಿದ್ದ ಮಹಿಳೆ ಕಿಮ್ಸ್ ಗೆ ದಾಖಲಾಗಿದ್ದರು. ಪ್ರಸವದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಸಿಜೇರಿಯನ್ ಮುಖಾಂತರ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಮಗುವನ್ನು ನೋಡಿದಾಗ ಕೇವಲ ಒಂದು ಕಾಲು ಮಾತ್ರ ಕಾಣಿಸಿಕೊಂಡಿದೆ. ಮಗು ವಿಚಿತ್ರ ಅಂಗಾಂಗ ಹೊಂದಿರುವುದು ವೈದ್ಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ. ಇದನ್ನೂ ಓದಿ: ಬರೋಬ್ಬರಿ 54 ದಿನಗಳ ಬಳಿಕ ಇಂದಿನಿಂದ ಸಾರಿಗೆ ಬಸ್ ಸಂಚಾರ ಆರಂಭ

    ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇಲ್ಲವಾಗಿವೆ. ವಿಚಿತ್ರ ಮಗು ಜನಿಸಿದ ನಂತರ ಮಗುವಿನ ಹೆತ್ತವರ ಹೆಸರು ಮತ್ತು ವಿಳಾಸವನ್ನು ವೈದ್ಯರು ಬಹಿರಂಗ ಪಡಿಸದೆ ರಹಸ್ಯವಾಗಿಟ್ಟಿದ್ದಾರೆ.

  • ಕೊರೊನಾಗೆ ಐದು ದಿನದ ಬಾಣಂತಿ ಸಾವು- ಮಗು ತಬ್ಬಲಿ

    ಕೊರೊನಾಗೆ ಐದು ದಿನದ ಬಾಣಂತಿ ಸಾವು- ಮಗು ತಬ್ಬಲಿ

    ಮಂಡ್ಯ: ಕೊರೊನಾಗೆ ಐದು ದಿನದ ಬಾಣಂತಿ ಸಾವನ್ನಪ್ಪಿದ್ದು, ಪುಟ್ಟ ಕಂದಮ್ಮ ಇದೀಗ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿರುವ ಘಟನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಶಿಲ್ಪಶ್ರೀ (32) ಕೊರೊನಾಗೆ ಬಲಿಯಾಗಿರುವ ಬಾಣಂತಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿಗೆ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಕಾಣಿಸಿಕೊಂಡಿತ್ತು. ತುಂಬು ಗರ್ಭಿಣಿಯಾಗಿದ್ದ ಶಿಲ್ಪಶ್ರೀ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿ 5 ದಿನಕ್ಕೆ ಪ್ರಾಣವನ್ನು ಬಿಟ್ಟಿದ್ದಾರೆ. ಇದನ್ನೂ ಓದಿ:  ಜೂನ್ 21 ರಿಂದ ಬಿಗ್‍ಬಾಸ್ ಆಟ ಮತ್ತೆ ಶುರು

    ಮಗು ಜನಸಿದ ಎರಡು ದಿನಗಳಲ್ಲಿ ಶಿಲ್ಪಶ್ರೀ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ಶಿಲ್ಪಶ್ರೀಗೆ ಸೂಕ್ತವಾದ ಚಿಕಿತ್ಸೆಯನ್ನು ಸಹ ನೀಡಲಾಗುತ್ತಿತ್ತು. ಬಳಿಕ ಶಿಲ್ಪಶ್ರೀ ಚಿಕಿತ್ಸೆಗೆ ಸ್ಪಂದಿಸದ ಕಾರಣ ಸಾವನ್ನಪ್ಪಿದ್ದಾರೆ. ಇಡೀ ಮನುಕುಲವನ್ನೆ ಕಂಗಾಲಾಗುವಂತೆ ಮಾಡಿರುವ ಕೊರೊನಾ ಐದು ದಿನದ ಕಂದಮ್ಮನಿಂದ ತಾಯಿಯನ್ನು ಬೇರ್ಪಡಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.