Tag: Baby

  • ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಬಳ್ಳಾರಿ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಾದ್ಯಂತ ಮತದಾನಕ್ಕೆ (Voting) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲೇ ಹೆರಿಗೆ ಮಾಡಿಸಿರುವ ಘಟನೆ ಬಳ್ಳಾರಿಯಲ್ಲಿ (Ballary) ನಡೆದಿದೆ.

    ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿಯಾಗಿದ್ದ ಮಣಿಲಾಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ವಿಶೇಷ ಚೇತನನಿಂದ ಮತದಾನ – ಕಾಲು ಬೆರಳಿಗೆ ಶಾಯಿ ಹಾಕಿದ ಅಧಿಕಾರಿಗಳು

    ತಕ್ಷಣ ಆಕೆಯನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದೆ. ಅಷ್ಟರಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಮದುವೆಯಾಗದೇ ಮಗು ವಿಚಾರ : ನಟಿ ಇಲಿಯಾನ ಡಿ ಕ್ರೂಸ್ ಗೆ ಸಂಕಷ್ಟ

    ಮದುವೆಯಾಗದೇ ಮಗು ವಿಚಾರ : ನಟಿ ಇಲಿಯಾನ ಡಿ ಕ್ರೂಸ್ ಗೆ ಸಂಕಷ್ಟ

    ವಾರದಲ್ಲಿ ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿಯರ ಸಾಲಿನಲ್ಲಿ ಟಾಪ್ ಸ್ಥಾನ ಪಡೆದಿದ್ದಾರೆ ನಟಿ ಇಲಿಯಾನ ಡಿ ಕ್ರೂಸ್ (Ileana D Cruz). ಗೋವಾ ಮೂಲದ ಈ ಬೆಡಗಿಯದ್ದು ಇನ್ನೂ ಮದುವೆಯೇ ಆಗಿಲ್ಲ. ಆದರೂ, ‘ಮಗುವಿಗಾಗಿ (Baby) ಕಾಯುತ್ತಿದ್ದೇನೆ’ ಎಂದು ಬರೆದುಕೊಂಡು ಇನ್ಸ್ಟಾ ಬರಹ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಯಾಗದೇ ಅದು ಹೇಗೆ ಮಗು ಮಾಡಿಕೊಂಡೆ ಎಂದು ಅಸಂಖ್ಯಾತ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗಳು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿವೆ.

    ಕೆಲ ವರ್ಷಗಳಿಂದ ಸಿನಿಮಾ ರಂಗದಿಂದಲೇ ದೂರವಿದ್ದ ನಟಿ ಇಲಿಯಾನ (Ileana), ಇದೀಗ ಮತ್ತೆ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ. ಹಿಂದಿ, ತೆಲುಗು, ತಮಿಳು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಇವರು, ಇನ್ನೂ ಮದುವೆ (Marriage) ಆಗಿಲ್ಲ. ಆದರೂ, ತಾಯಿ (Pregnancy) ಆಗ್ತಿದ್ದೀನಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ:ಕೋರ್ಟ್ ಮೆಟ್ಟಿಲು ಏರಿದ್ದ ಅಮಿತಾಭ್ ಮೊಮ್ಮಗಳಿಗೆ ಗೆಲುವು

    ಇನ್ಸ್ಟಾದಲ್ಲಿ ಎರಡು ಫೋಟೋಗಳನ್ನು ಶೇರ್ ಮಾಡಿರುವ ಇಲಿಯಾನ, ‘ತಾವು ತಾಯಿ ಆಗುತ್ತಿರುವ ಮತ್ತು ಮಗುವಿಗಾಗಿ ಕಾಯುತ್ತಿದ್ದೇನೆ’ ಎಂದು ಬರಹವನ್ನೂ ಬರೆದಿದ್ದಾರೆ. ಪೋಸ್ಟ್ ಮಾಡಲಾದ ಫೋಟೋದಲ್ಲಿ ಚಿಕ್ಕದೊಂದು ಟೀ ಶರ್ಟ್ ಹಾಗೂ ಕುತ್ತಿಗೆಯಲ್ಲಿ ಮಾಮಾ ಎನ್ನುವ ಲಾಕೆಟ್ ಇದೆ. ಆ ಟೀ ಶರ್ಟ್ ನಲ್ಲಿ ‘ಅಂಡ್ ಸೋ ದಿ ಅಡ್ವೆಂಚರ್ ಬಿಗಿನ್ಸ್’ ಎನ್ನುವ ಬರಹವಿದೆ.

    ಇಲಿಯಾನ ಪ್ರೆಗ್ನಿನ್ಸಿ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಶುಭಾಶಯಗಳನ್ನು ಕೋರಿದ್ದರೆ, ಇನ್ನೂ ಕೆಲವರು ಮದುವೆ ಆಗದೇ ಮಗು ಹೇಗೆ? ಯಾವಾಗ ಮದುವೆಯಾದೆ? ಮಗುವಿನ ತಂದೆ ಯಾರು? ಹೀಗೆ ಸಾಕಷ್ಟು ಪ್ರಶ್ನೆಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಇಲಿಯಾನ ನಿಜವಾಗಿಯೂ ಗರ್ಭಿಣಿಯಾ ಅಥವಾ ಯಾವುದಾದರೂ ಸಿನಿಮಾದ ಪ್ರಮೋಷನ್ ಗೆ ಈ ರೀತಿ ಪೋಸ್ಟ್ ಮಾಡಿರಬಹುದಾ ಎನ್ನುವ ಅನುಮಾನ ಕೂಡ ಮೂಡಿದೆ. ಸದ್ಯದಲ್ಲೇ ಈ ಎಲ್ಲ ಅನುಮಾನಗಳಿಗೆ ಅವರೇ ತೆರೆ ಎಳೆಯಲಿದ್ದಾರೆ.

  • ಆಸ್ಪತ್ರೆ ಆವರಣದಲ್ಲಿ ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ಶ್ವಾನ

    ಆಸ್ಪತ್ರೆ ಆವರಣದಲ್ಲಿ ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ಶ್ವಾನ

    ಶಿವಮೊಗ್ಗ : ನವಜಾತ ಹೆಣ್ಣು ಶಿಶುವನ್ನು (Baby) ಶ್ವಾನವೊಂದು (Dog) ಕಚ್ಚಿಕೊಂಡು ಆಸ್ಪತ್ರೆಯ (Hospital) ಆವರಣದಲ್ಲಿ ಓಡಾಡಿರುವ ಘಟನೆ ಶಿವಮೊಗ್ಗದ (shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

    ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ (Hospital) ಆವರಣದಲ್ಲಿ ಶ್ವಾನವೊಂದು ನವಜಾತ ಶಿಶುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್‌ನ ಆವರಣದಲ್ಲಿ ಓಡಾಡಿದೆ. ಇದನ್ನು ಗಮನಿಸಿದ ನಾಗರಿಕರು ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿದ್ದಾರೆ. ನಾಯಿ ಶಿಶುವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದೆ. ಇದನ್ನೂ ಓದಿ: ಬಣ್ಣದ ಮಾತುಗಳಿಂದ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಮದುವೆಯಾಗಿದ್ದ ಶಿಕ್ಷಕ ಅರೆಸ್ಟ್

    ನಂತರ ಭದ್ರತಾ ಸಿಬ್ಬಂದಿ ವೈದ್ಯರ ಬಳಿ ಶಿಶುವನ್ನು ಕೊಂಡೊಯ್ದಿದ್ದಾರೆ. ತಪಾಸಣೆ ಬಳಿಕ ಶಿಶು ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಜನಿಸಿದ ನಂತರ ಯಾರೋ‌ ಮಗುವನ್ನು ವಾರ್ಡ್ ಹಿಂಭಾಗದಲ್ಲಿ ಬಿಟ್ಟು ಹೋಗಿದ್ದಾರೆ. ನಂತರ ನಾಯಿ ಅದನ್ನು‌ ಕಚ್ಚಿಕೊಂಡು ಓಡಾಡಿದೆ. ಮಗುವನ್ನು ಬಿಟ್ಟು ಹೋದ ಪೋಷಕರ ಪತ್ತೆ ಹೆಚ್ಚುವಂತೆ ಆಸ್ಪತ್ರೆಯ ಸಿಬ್ಬಂದಿ ಆಗ್ರಹಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನನ್ನ ಬಾಡಿಗೆ ಮನೆ, ಸ್ವಂತ ಮನೆಯಾದ ಕಾಂಗ್ರೆಸ್‌ಗೆ ಮರಳುವೆ- ಗೋಪಾಲಕೃಷ್ಣ

  • ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್

    ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್

    ಪಾಟ್ನಾ: ಬಿಹಾರದ (Bihar) ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ತಮ್ಮ ಮೊದಲ ಮಗುವನ್ನು (Child) ಸ್ವಾಗತಿಸಿದ್ದಾರೆ. ಈ ವಿಚಾರವನ್ನು ಯಾದವ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದು, ಮುದ್ದಾದ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ.

    ದೇವರು ನನಗೆ ಮಗಳ ರೂಪದಲ್ಲಿ ಉಡುಗೊರೆಯನ್ನು ಕಳುಹಿಸಿದ್ದಾರೆ ಎಂದು ಯಾದವ್ ಬರೆದುಕೊಂಡಿದ್ದಾರೆ. ಯಾದವ್ ಒಟ್ಟು 9 ಜನ ಒಡಹುಟ್ಟಿದವರನ್ನು ಹೊಂದಿದ್ದು, ಅದರಲ್ಲಿ ಅವರು ಕಿರಿಯವರಾಗಿದ್ದಾರೆ. ಯಾದವ್ ತಮ್ಮ ಬಾಲ್ಯದ ಸ್ನೇಹಿತೆ ರಾಜಶ್ರೀ ಅವರನ್ನು ವಿವಾಹವಾಗಿದ್ದು, ಮೊದಲ ಮಗುವನ್ನು ಅವರು ಇದೀಗ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ – ವಾಹನಗಳನ್ನು ಬೆನ್ನಟ್ಟಿದ ಬೈಕರ್ಸ್

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಈ ಬಗ್ಗೆ ಟ್ವೀಟ್‌ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೊದಲ ಮಗುವನ್ನು ಸ್ವಾಗತಿಸಿರುವ ಬಿಹಾರದ ಉಪಮುಖ್ಯಮಂತ್ರಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ

  • 4.5 ಲಕ್ಷ ಹಣದಾಸೆಗೆ ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು ಮಾರಿದ್ಲು

    4.5 ಲಕ್ಷ ಹಣದಾಸೆಗೆ ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು ಮಾರಿದ್ಲು

    – ತಾಯಿ ಸೇರಿ 11 ಜನ ಅರೆಸ್ಟ್

    ರಾಂಚಿ: ಮಹಿಳೆಯೊಬ್ಬಳು (Woman) 4.5 ಲಕ್ಷ ರೂ. ಹಣದ (Money) ಆಸೆಗೆ ಮಗುವಿಗೆ (Baby) ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಮಾರಾಟ (Sale) ಮಾಡಿರುವ ಘಟನೆ ಜಾರ್ಖಂಡ್‌ನ (Jharkhand) ಛತ್ರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಮಗುವಿನ ತಾಯಿ ಸೇರಿದಂತೆ 11 ಜನರನ್ನು ಬಂಧಿಸಿದ್ದಾರೆ.

    ನವಜಾತ ಶಿಶುವನ್ನು (Newborn Baby) ಮಾರಾಟ ಮಾಡಿದ ಮಹಿಳೆಯನ್ನು ಆಶಾ ದೇವಿ ಎಂದು ಗುರುತಿಸಲಾಗಿದೆ. ಆಕೆಗೆ ಹುಟ್ಟಿದ ಗಂಡು ಮಗುವನ್ನು 4.5 ಲಕ್ಷ ರೂ.ಗಾಗಿ ಮಾರಾಟ ಮಾಡಿದ್ದಾಳೆ. ಘಟನೆ ಬಗ್ಗೆ ವೈದ್ಯರೊಬ್ಬರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಕೇವಲ 24 ಗಂಟೆಗಳೊಳಗಾಗಿ ಮಗುವನ್ನು ರಕ್ಷಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್, ಆಶಾ ದೇವಿಯಿಂದ 1 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಾಗಿದೆ ಎಂದು ತಿಳಿಸಿದ್ದಾರೆ. ಮೊದಲಿಗೆ ಮಗುವಿನ ತಾಯಿಯನ್ನು ಬಂಧಿಸಲಾಗಿದ್ದು, ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಮಗುವನ್ನು ಡಿಂಪಲ್ ದೇವಿ ಎಂಬವರಿಗೆ ಮಾರಿರುವುದಾಗಿ ತಿಳಿಸಿದ್ದಾಳೆ. ಬಳಿಕ ಡಿಂಪಲ್ ದೇವಿಯನ್ನು ಪೊಲೀಸರು ಬಂಧಿಸಿ, ಇತರ ಆರೋಪಿಗಳ ಬಗ್ಗೆ ಮಾಹಿತಿ ಪಡೆದು, ಮಗುವನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ವರದಿಗಳ ಪ್ರಕಾರ ಆಶಾ ದೇವಿ ಹಾಗೂ ಆಕೆಯ ಪತಿ 4.5 ಲಕ್ಷ ರೂ. ಹಣಕ್ಕಾಗಿ ಮಗುವನ್ನು ಮಾರಾಟ ಮಾಡಲು ಛತ್ರ ಹಾಗೂ ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆಶಾ ದೇವಿ ಮಗುವಿಗೆ ಜನ್ಮ ನೀಡಿದ ಬಳಿಕ ಅದನ್ನು ಮಾರಿ 1 ಲಕ್ಷ ರೂ. ಹಣವನ್ನು ಪಡೆದುಕೊಂಡಿದ್ದಾಳೆ. ಉಳಿದ 3.5 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಬ್ಬರು ಹೆಂಡಿರನ್ನು ಮ್ಯಾನೇಜ್ ಮಾಡಲು ಹೋದ ಪೇದೆ – ಪತ್ನಿಯಿಂದಲೇ ಬರ್ಬರ ಹತ್ಯೆ

  • ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಸಾವು

    ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಸಾವು

    ಮಡಿಕೇರಿ: ಮನೆಯಲ್ಲಿ ಆಟವಾಡುತ್ತಿದ್ದಾಗ 8 ತಿಂಗಳ ಮಗುವೊಂದು (Baby) ಉಂಗುರ (Ring) ನುಂಗಿ ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮುನೀರ್ ಎನ್ನುವವರ ಮಗು ಮೃತಪಟ್ಟಿದೆ. 8 ತಿಂಗಳ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ (Madikeri) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ರೇವಣ್ಣಗೆ ಭವಾನಿಯವರ ಚಿಂತೆ, ಕುಮಾರಣ್ಣನಿಗೆ ನಿಖಿಲ್ ಚಿಂತೆ, ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ – ಪ್ರತಾಪ್‌ಸಿಂಹ ವ್ಯಂಗ್ಯ

    ಜಿಲ್ಲಾ ಆಸ್ಪತ್ರೆಯ ವೈದ್ಯರ ತಂಡ ರಾತ್ರಿ 9 ಗಂಟೆಯಿಂದ ಸುಮಾರು 12 ಗಂಟೆಯವರೆಗೆ ನಿರಂತರವಾಗಿ ಶ್ರಮಪಟ್ಟು ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ಮಗು ಮೃತಪಟ್ಟಿದೆ. ಈ ಬಗ್ಗೆ ವೈದ್ಯರು ಮಾತನಾಡಿದ್ದು, ನಿಮ್ಮ ಮಕ್ಕಳ ಬಗ್ಗೆ ಒಂದಷ್ಟು ಎಚ್ಚರಿಕೆ ಇರುವಂತೆ ಹಾಗೂ ಈ ರೀತಿಯಲ್ಲಿ ಉಂಗುರ ನಾಣ್ಯಗಳನ್ನು ಮಕ್ಕಳ ಮುಂದೆ ಇಡುವ ಮುಂಚೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕ್ಷೇತ್ರದಲ್ಲಿ ಸಿಂಪತಿ ಇದೆ, ನನಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತೇನೆ: ಅಜ್ಜಂಪೀರ್ ಖಾದ್ರಿ

  • 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    – ಘೋರ ಘಟನೆಗೆ ಜಾರ್ಖಂಡ್ ಸಿಎಂ ತನಿಖೆಗೆ ಆದೇಶ

    ರಾಂಚಿ: 4 ದಿನಗಳ ನವಜಾತ ಶಿಶುವನ್ನು (Newborn Baby) ಪೊಲೀಸ್ ಅಧಿಕಾರಿಯೊಬ್ಬ (Police) ತುಳಿದು ಕೊಂದಿರುವ ಕ್ರೂರ ಘಟನೆ ಜಾರ್ಖಂಡ್‌ನ (Jharkhand) ಗಿರಿದಿಹ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಘಟನೆಗೆ ಆಘಾತ ವ್ಯಕ್ತಪಡಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ತನಿಖೆಗೆ ಆದೇಶ ನೀಡಿದ್ದಾರೆ.

    ಜಿಲ್ಲೆಯ ಕೊಸೊಗೊಂಡೋಡಿಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಲಗಿದ್ದ ಶಿಶುವಿನ ಮೇಲೆ ಪೊಲೀಸ್ ಅಧಿಕಾರಿ ಕಾಲನ್ನು ಇಟ್ಟು ಕೊಂದಿದ್ದಾನೆ ಎನ್ನಲಾಗಿದೆ. ಮಗುವಿನ ಅಜ್ಜ ಬೇರೊಂದು ಪ್ರಕರಣದಲ್ಲಿ ಆರೋಪಿಯಾಗಿದ್ದು, ಈ ಹಿನ್ನೆಲೆ ಆತನನ್ನು ಬಂಧಿಸಲು ಪೊಲೀಸರ ತಂಡ ಅವರ ಮನೆಗೆ ತೆರಳಿದ್ದಾಗ ಮಗುವಿನ ಮೇಲೆ ಕಾಲಿಟ್ಟು ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

     

    ಸ್ಥಳೀಯರ ಪ್ರಕಾರ ದಿಯೋರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಗಮ್ ಪಾಠಕ್ ನೇತೃತ್ವದ ತಂಡ ಮಗುವಿನ ಅಜ್ಜ ಭೂಷಣ್ ಪಾಂಡೆ ವಿರುದ್ಧ ಪ್ರಕರಣವೊಂದರಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. ಬಳಿಕ ಅವರ ಮನೆಗೆ ಅಧಿಕಾರಿಗಳ ತಂಡ ತೆರಳಿದ್ದು, ಪೊಲೀಸರನ್ನು ನೋಡಿದ ಭೂಷಣ್ ಕುಟುಂಬ ಶಿಶುವನ್ನು ಮನೆಯಲ್ಲೇ ಬಿಟ್ಟು ಓಡಿಹೋಗಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

    ಪೊಲೀಸರು ಮನೆಯ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಅವರು ಹುಡುಕಾಟ ನಡೆಸುತ್ತಿದ್ದ ವೇಳೆ ಮಗು ಒಂದೇ ಮನೆಯಲ್ಲಿ ಮಲಗಿತ್ತು. ನಾವು ವಾಪಸ್ ಮನೆಗೆ ಬಂದು ನೋಡಿದಾಗ ಮಗು ಶವವಾಗಿ ಹೋಗಿತ್ತು ಎಂದು ಮಗುವಿನ ತಾಯಿ ತಿಳಿಸಿದ್ದಾರೆ.

     

    CRIME

    ಮೃತ ಶಿಶುವಿನ ತಾಯಿ, ಅಜ್ಜ ಭೂಷಣ್ ಪಾಂಡೆ ಸೇರಿದಂತೆ ಮನೆಯ ಇತರ ಸದಸ್ಯರು ಮಗುವನ್ನು ಪೊಲೀಸರೇ ತುಳಿದು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ರಾಣಾ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

    ಘಟನೆಯ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಆರೋಗ್ಯ ಸಚಿವ ಬನ್ನಾ ಗುಪ್ತಾ, ಇಂತಹ ಘೋರ ಘಟನೆಗಳನ್ನು ಟೀಕಿಸಲಾಗುತ್ತದೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ದೇಶವು ಸಂವಿಧಾನದ ಪ್ರಕಾರ ನಡೆಯುತ್ತದೆ. ಆದ್ದರಿಂದ ಪೊಲೀಸ್ ಅಧಿಕಾರಿಗಳ ತಪ್ಪು ಕಂಡುಬಂದಲ್ಲಿ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

  • ಭೂಕಂಪನದ ಮಧ್ಯೆಯೇ ವೈದ್ಯರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ರು!

    ಭೂಕಂಪನದ ಮಧ್ಯೆಯೇ ವೈದ್ಯರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ರು!

    ಶ್ರೀನಗರ: ಭೂಕಂಪನ (Erathquake) ನಡೆಯುತ್ತಿದ್ದಂತೆ ಹೆರಿಗೆ ಮಾಡಿಸಿ ವೈದ್ಯರು ತಾಯಿ-ಮಗುವಿನ ಜೀವವನ್ನು ಉಳಿಸಿದ ಘಟನೆ ಅನಂತ್‍ನಾಗ್ ಆಸ್ಪತ್ರೆಯಲ್ಲಿ ನಡೆದಿದೆ.

    ಮಂಗಳವಾರ ಮಹಿಳೆ ಹೆರಿಗೆಗೆಂದು (Delivery) ಬಿಜ್‍ಬೆಹರಾದ ಎಸ್‍ಡಿಹೆಚ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ವೈದ್ಯರು ಹೆರಿಗೆ ಕಾರ್ಯಕ್ಕೆ ಮುಂದಾದ ಸಮಯದಲ್ಲಿ ಭೂಮಿ ಕಂಪಿಸಿದೆ. ಈ ವೇಳೆ ಧೃತಿಗೆಡದ ವೈದ್ಯರು ಲೋವರ್ ಸೆಗ್ಮೆಂಟ್ ಸಿಸೇರಿಯನ್ (Lower Segment Caesarean) ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿ ತಾಯಿ ಹಾಗೂ ಮಗುವಿನ ಜೀವ ಉಳಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ, ಲೋವರ್ ಸೆಗ್ಮೆಂಟ್ ಸಿಸೇಯರಿನ್ ಮಾಡಿದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸಿಬ್ಬಂದಿ ಶಸ್ತ್ರಚಿಕಿತ್ಸೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದರು.

    ವೀಡಿಯೋದಲ್ಲಿ ವೈದ್ಯರು ಹೆರಿಗೆ ಮಾಡಿಸುತ್ತಿದ್ದ ಸಂದರ್ಭದಲ್ಲಿ ಭೂಮಿ ಕಂಪಿಸುವುದನ್ನು ನೋಡಬಹುದು. ಅಫ್ಘಾನಿಸ್ತಾನದ ಹಿಂಡು ಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪರಿಣಾಮ ಅನಂತ್‍ನಾಗ್ ಕಣಿವೆಯಲ್ಲಿಯೂ ಭೂಮಿ ಕಂಪಿಸಿದೆ. ಭೂಕಂಪನದಿಂದ ಬೆಚ್ಚಿಬಿದ್ದ ಜನ ಮನೆಯಿಂದಾಚೆ ಓಡಿ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

  • ಶಸ್ತ್ರಚಿಕಿತ್ಸೆ ನಂತ್ರ ಎರಡೂವರೆ ತಿಂಗಳ ಮಗು ಸಾವು – ನಕಲಿ ಡಾಕ್ಟರ್‌ ವಿರುದ್ಧ ಪ್ರಕರಣ ದಾಖಲು

    ಶಸ್ತ್ರಚಿಕಿತ್ಸೆ ನಂತ್ರ ಎರಡೂವರೆ ತಿಂಗಳ ಮಗು ಸಾವು – ನಕಲಿ ಡಾಕ್ಟರ್‌ ವಿರುದ್ಧ ಪ್ರಕರಣ ದಾಖಲು

    ಲಕ್ನೋ: ನಕಲಿ ವೈದ್ಯನೊಬ್ಬ (Doctor) ಸಣ್ಣ ಶಸ್ತ್ರಚಿಕಿತ್ಸೆ ನಡೆಸಿ ಎರಡೂವರೆ ತಿಂಗಳ ಮಗು ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಇಟಾಹ್‍ನಲ್ಲಿ ನಡೆದಿದೆ.

    ತಿಲಕ್ ಸಿಂಗ್ ನಕಲಿ ವೈದ್ಯ. ಮಗುವಿಗೆ ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ತಿಲಕ್ ಸಿಂಗ್ ಶಸ್ತ್ರ ಚಿಕಿತ್ಸೆ ನಡೆಸಿದ್ದಾನೆ. ಅದಾದ ಬಳಿಕ ಅತಿಯಾದ ರಕ್ತಸ್ರಾವ ಉಂಟಾಗಿ ಮಗು ಮೃತಪಟ್ಟಿದೆ.

    ಮಗು ಮೃತಪಟ್ಟ ನಂತರ ತಿಲಕ್ ಸಿಂಗ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಅಷ್ಟೇ ಅಲ್ಲದೇ ಮಗುವಿನ (Baby) ಸಾವಿನ ವಿಷಯವನ್ನು ಕುಟುಂಬದವರಿಗೆ ತಿಳಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ದುಬೈಗೆ ಹಾರಿದ ಬಿಗ್‌ ಬಾಸ್‌ ಬೆಡಗಿ ದೀಪಿಕಾ ದಾಸ್

    ಘಟನೆಗೆ ಸಂಬಂಧಿಸಿ ನಕಲಿ ವೈದ್ಯ ತಿಲಕ್ ಸಿಂಗ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲಿ – ಸ್ಥಳೀಯ ಕಾಂಗ್ರೆಸ್ ನಾಯಕರ ಮನವಿ

  • ಹಾಲು ಕುಡಿಯುತ್ತಿರುವಾಗ ಮಗು ಸಾವು- ಮನನೊಂದು ಮಗನ ಜೊತೆ ತಾಯಿ ಆತ್ಮಹತ್ಯೆ

    ಹಾಲು ಕುಡಿಯುತ್ತಿರುವಾಗ ಮಗು ಸಾವು- ಮನನೊಂದು ಮಗನ ಜೊತೆ ತಾಯಿ ಆತ್ಮಹತ್ಯೆ

    ತಿರುವನಂತಪುರಂ: ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದಲ್ಲಿ ನಡೆದಿದೆ.

    ಈ ಘಟನೆ ಇಡುಕ್ಕಿ (Idukki) ಜಿಲ್ಲೆಯ ಉಪ್ಪುತರ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ.

    ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ..?: ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

    ಮನೆಯಲ್ಲಿ ಯಾರೂ ಇಲ್ಲದಿರುವಾಗಲೇ ಲಿಜಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಬೆಳಗ್ಗೆ ಮನೆಯವರೆಲ್ಲರೂ ಚರ್ಚ್‍ಗೆ ತೆರಳಿದ ಬಳಿಕ ಲಿಜಾ ಬಾವಿಗೆ ಹಾರಿದ್ದಾರೆ. ಇತ್ತ ಪ್ರಾರ್ಥನೆ ಮುಗಿಸಿ ಬರುತ್ತಿದ್ದಂತೆಯೇ ಮನೆಯಲ್ಲಿ ಲಿಜಾ ಹಾಗೂ ಆಕೆಯ ಮಗ ಇಲ್ಲದಿರುವುದನ್ನು ಗಮನಿಸಿದ ಕುಟುಂಬಸ್ಥರಿಗೆ ಶಾಕ್ ಆಗಿದೆ. ಇದನ್ನೂ ಓದಿ: 20 ವರ್ಷದ ಯುವಕನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದು ಪೊದೆಗೆ ಎಸೆದ!

    ಕೂಡಲೇ ಎಲ್ಲರೂ ಎಲ್ಲಾ ಕಡೆ ಹುಟುಕಾಟ ನಡೆಸಿದರು. ಈ ವೇಳೆ ಲಿಜಾ ಹಾಗೂ ಆಕೆಯ ಮಗನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಬಾವಿಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.