ಬೆಂಗಳೂರು: ರಾಜ್ಯ ಸರ್ಕಾರ ನಾಳೆಯಿಂದ (ಸೋಮವಾರ) ಇಡೀ ರಾಜ್ಯದಲ್ಲಿ ಹೊಸದೊಂದು ಸಮೀಕ್ಷೆಗೆ (Caste Census) ಚಾಲನೆ ನೀಡಲಿದೆ. ಹಿಂದುಳಿದ ಆಯೋಗದ (Backward Commission) ಮೂಲಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಗೆ ಸಿದ್ಧತೆ ಆಗಿದ್ದು, ನಾಳೆಯಿಂದ ಮನೆಮನೆ ಬಾಗಿಲಿಗೆ ಸಮೀಕ್ಷೆ ಸಿಬ್ಬಂದಿ ಬರಲಿದ್ದಾರೆ.
ಹೌದು, ರಾಜ್ಯ ಸರ್ಕಾರ ಅನೇಕ ವಿರೋಧಗಳ ನಡುವೆ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಮುಂದಾಗಿದೆ. ನಾಳೆಯಿಂದಲೇ ಅಧಿಕೃತವಾಗಿ ಹಿಂದುಳಿದ ಆಯೋಗದಿಂದ ಸಮೀಕ್ಷೆ ನಡೆಸಲಿದೆ. ಈ ಬಗ್ಗೆ ಹಿಂದುಳಿದ ಆಯೋಗ ಕೂಡ ಈಗಾಗಲೇ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಮೀಕ್ಷೆಯನ್ನ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ತರಬೇತಿ ನೀಡಲಾಗಿದೆ.
ಇನ್ನೂ ಸಾರ್ವಜನಿಕರು ಕೂಡ ಸಮೀಕ್ಷೆ ವೇಳೆಯಲ್ಲಿ ಕೆಲ ದಾಖಲೆಗಳನ್ನ ಸಿದ್ಧ ಮಾಡಿಟ್ಟುಕೊಂಡರೇ ಸಮೀಕ್ಷೆಯ ವೇಳೆಯಲ್ಲಿ ಯಾವುದೇ ಗೊಂದಲವಾಗಲಿ, ಸಮಸ್ಯೆಗಳಾಲಿ ಆಗೋದಿಲ್ಲ.
ಯಾವ್ಯಾವ ದಾಖಲೆಗಳು ಇರಬೇಕು?
* ಆಧಾರ್ ಕಾರ್ಡ್
* ರೇಷನ್‌ಕಾರ್ಡ್
* ವೋಟರ್ ಐಡಿ ಕಾರ್ಡ್
* ವಿದ್ಯಾಭ್ಯಾಸದ ಅಂಕ ಪಟ್ಟಿ
ಕುಟುಂಬದ ಎಲ್ಲ ಸದಸ್ಯರು ಈ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಂಡು ಸಮೀಕ್ಷೆಗೆ ಅಧಿಕಾರಿಗಳು ಬಂದಾಗ ಗುರುತಿನ ಚೀಟಿಯ ನಂಬರ್‌ಗಳನ್ನು ಹೇಳಿದರೆ ಸಾಕು, ಇದರ ಜೊತೆಗೆ ನೀವು ನೀಡಬೇಕಾದ ಮಾಹಿತಿಗಳ ಬಗ್ಗೆಯೂ ಸಹ ಗಮನವಿರಲಿ. ಮುಖ್ಯವಾಗಿ ಧರ್ಮ, ಜಾತಿ, ಉಪಜಾತಿ, ಜಾತಿಗೆ ಇರೋ ಸಮನಾರ್ಥಕ ಹೆಸರಿದ್ದಲ್ಲಿ ಅದು, ಕುಟುಂಬದ ಎಲ್ಲ ಸದಸ್ಯರ ಶೈಕ್ಷಣಿಕ ಮಟ್ಟ, ಕುಟುಂಬದವರ ಆಸ್ತಿಯ ವಿವರಗಳು, ಆಧಾರ್ ಕಾರ್ಡ್ ನೊಂದಾಯಿತ ನಂಬರ್‌ಗೆ ಕೆವೈಸಿ ಕೂಡ ಬರಲಿದೆ.
ಒಟ್ಟಿನಲ್ಲಿ ಅನೇಕ ಗೊಂದಲಗಳ ನಡುವೆಯೂ ನಾಳೆಯಿಂದ ಸಮೀಕ್ಷೆ ಶುರುವಾಗಲಿದೆ. ಅಕ್ಟೋಬರ್ 7ರವರೆಗೆ ಸಮೀಕ್ಷೆ ನಡೆಯಲಿದೆ. ಇನ್ನು ಮನೆಗೆ ಬರುವ ಸಮೀಕ್ಷೆ ಸಿಬ್ಬಂದಿ ಜೊತೆಗೆ ಸಾರ್ವಜನಿಕರು ಒಳ್ಳೆಯ ರೀತಿಯಲ್ಲಿ ಸಹಕಾರ ನೀಡಿ ಸಮೀಕ್ಷೆಗೆ ಸಹಕರಿಸಿ ಎಂದು ಸರ್ಕಾರ ಕೇಳಿಕೊಂಡಿದೆ.
– ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದಿದ್ದ ಗಣತಿ ವರದಿ ತಿರಸ್ಕಾರ
– ಮಧುಸೂದನ್ ನಾಯಕ್ ಕಮಿಟಿಗೆ ಸಮೀಕ್ಷೆ ಹೊಣೆ; ಡಿಸೆಂಬರ್ ಒಳಗೆ ವರದಿ
– ಮರು ಸಮೀಕ್ಷೆಗೆ 420 ಕೋಟಿ ಮೀಸಲು, 1.75 ಲಕ್ಷ ಶಿಕ್ಷಕರ ಬಳಕೆ
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ. ಮರು ಸಮೀಕ್ಷೆಗೆ ಸದ್ಯ 420 ಕೋಟಿ ರೂ. ಖರ್ಚಾಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಈ ಗಣತಿ ಮುಖ್ಯವಾಗಿದ್ದು, ಎಲ್ಲಾ ನಾಗರಿಕರೂ ಪಾಲ್ಗೊಳ್ಳಬೇಕು, ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಜಾತಿ ಜನಗಣತಿ ವರದಿ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು. ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ವೈರುಧ್ಯ, ಅಸಮಾನತೆ ಇದೆ. ಆದ್ರೆ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಾಮಾಜಿಕ ನ್ಯಾಯ ಕೊಡಬೇಕು ಅಂತ ಹೇಳುತ್ತೆ. ಅಂಬೇಡ್ಕರ್ ಕೂಡ ಇದನ್ನೇ ಹೇಳಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆ ಇದೆ ಅಂತ ಅಂಬೇಡ್ಕರ್ ಹೇಳಿದ್ರು. ಈ ಪ್ರಜಾಪ್ರಭುತ್ವ ಉಳಿಯಬೇಕಾದ್ರೆ ಅಸಮಾನತೆ ಹೋಗಲಾಡಿಸಬೇಕು. ಅಸಮಾನತೆ ಇದ್ದರೆ ಅದರಿಂದ ನರಳೊ ಜನರು ಪ್ರಜಾಪ್ರಭುತ್ವದ ಸೌಧ ಧ್ವಂಸ ಮಾಡ್ತಾರೆ ಅಂತ ಹೇಳಿದ್ರು. ಹಾಗಾಗಿ ಸಮಾಜದಲ್ಲಿ ಅಸಮಾನತೆ ಉಳಿಯಲು ಅವಕಾಶ ಕೊಡಬಾರದು ಎಂದು ಸಿಎಂ ಕಿವಿಮಾತು ಹೇಳಿದರು.
ರಾಜ್ಯದಲ್ಲಿದ್ದಾರೆ 7 ಕೋಟಿ ಜನ
ಮುಂದುವರಿದು… ನಮ್ಮ ರಾಜ್ಯದಲ್ಲಿ ಸದ್ಯ 7 ಕೋಟಿ ಜನಸಂಖ್ಯೆ ಇದೆ. ಸುಮಾರು 2 ಕೋಟಿ ಕುಟುಂಬಗಳು ಇವೆ. ಇವರಿಗೆ ಸಮಾನ ಅವಕಾಶ ಒದಗಿಸಬೇಕು. ಸಮಾನತೆ ಸಮವಾಗಿ ಕೊಡಬೇಕು. ಅದನ್ನೇ ಸಂವಿಧಾನ ಹೇಳಿರೋದು. ಸಮಾನತೆ, ಸಮಾನ ಅವಕಾಶ ಒದಗಿಸೋದು ನಮ್ಮ ಕರ್ತವ್ಯ ಹೀಗಾಗಿ 2015 ರಲ್ಲೇ ಸಮೀಕ್ಷೆ ಮಾಡಿಸಿದ್ದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದ್ವಿ. ಕಾಂತರಾಜು ಸರ್ವೆ ಮಾಡಿದ್ರು, ಶಿಕ್ಷಣ, ಉದ್ಯೋಗ, ಜಾತಿ, ಧರ್ಮ ಅಂತ ಗೊತ್ತಾಗಲು ಸರ್ವೆ ಮಾಡಿಸಿದ್ದೆ. ಅವರ ಮಾಹಿತಿ ಗೊತ್ತಾದರೆ ಅವರಿಗೆ ಯೋಜನೆ ಕೊಡಲು ಅನುಕೂಲ ಆಗುತ್ತದೆ ಅನ್ನೋದು ಇದರ ಹಿಂದಿನ ಉದ್ದೇಶವಾಗಿತ್ತು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಮೂಲಕ ಅಸಮಾನತೆ ಸ್ವಲ್ಪ ಕಡಿಮೆ ಮಾಡೋ ಪ್ರಯತ್ನ ಮಾಡಿದ್ದೇವೆ. ಭಾಗ್ಯಗಳ ಮೂಲಕ ಸಮಾನತೆ ಕೊಡೋ ಕೆಲಸ ಮಾಡ್ತಿದ್ದೇವೆ. ಇದರ ಹೊರತಾಗಿಯೂ ಅವಕಾಶ ವಂಚಿತರಿಗೆ ಅವಕಾಶ ಕೊಡಲು ಅವರ ಬಗ್ಗೆ ಮಾಹಿತಿ ಇರಬೇಕು. ವಿಶೇಷ ಕಾರ್ಯಕ್ರಮ ಕೊಡಲು ದತ್ತಾಂಶಗಳು ನಮಗೆ ಗೊತ್ತಾಗಬೇಕು. ಅಮೆರಿಕದಲ್ಲಿ ಕರಿಯರಿಗೆ ಮೀಸಲಾತಿ ಇದೆ. ನಾವು ಹಿಂದುಳಿದವರಿಗೆ ಶಕ್ತಿ ತುಂಬೋ ಕೆಲಸ ಮಾಡಬೇಕು. ಹೀಗಾಗಿ ದತ್ತಾಂಶದ ಅವಶ್ಯಕತೆ ಇದೆ ಎಂದು ಹೇಳಿದರು.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ
ಕಾಂತರಾಜು ಅಧ್ಯಕ್ಷತೆಯಲ್ಲಿ ಸರ್ವೆ ಮಾಡಿಸಿದ್ವಿ. ಆದ್ರೆ ವರದಿ 10 ವರ್ಷ ಮೀರಿದೆ, ಹಾಗಾಗಿ ಕಾಂತರಾಜು ವರದಿಯನ್ನ ರಿಜೆಕ್ಟ್ ಮಾಡಿದ್ದೇವೆ. ಈಗ ಹೊಸದಾಗಿ ಸರ್ವೆ ಮಾಡಿಸ್ತಿದ್ದೇವೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ ನಡೆಯಲಿದೆ. 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ಮಾಡಿಸ್ತಾ ಇದ್ದೇವೆ. ಮಧುಸೂದನ್ ನಾಯಕ್ ನೇತೃತ್ವದ ಆಯೋಗದಿಂದ ಸಮೀಕ್ಷೆ ನಡೆಯಲಿದೆ. ಜಾಗ್ರತೆಯಿಂದ ಸರ್ವೆ ಮಾಡಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಡಿಸೆಂಬರ್ ಒಳಗೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಸಮೀಕ್ಷೆ ಕಾರ್ಯಕ್ಕರ 1.75 ಲಕ್ಷ ಶಿಕ್ಷಕರ ಬಳಕೆ
ಈ ಅವಧಿಯಲ್ಲಿ ದಸರಾ ರಜೆ ಇದೆ. ಹಾಗಾಗಿ ಶಿಕ್ಷಕರನ್ನ ಸರ್ವೇ ಕಾರ್ಯಕ್ಕೆ ಬಳಕೆ ಮಾಡಿಕೊಳ್ತೇವೆ. ಟೀಚರ್ ಗಳನ್ನ ಸರ್ವೆಗೆ ಬಳಕೆ ಮಾಡಿಕೊಳ್ತೀವಿ. 1.75 ಲಕ್ಷ ಶಿಕ್ಷಕರಿಂದ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಕರಿಗೆ ವಿಶೇಷ ಗೌರವ ಧನ ಕೊಡ್ತೀವಿ. ಪ್ರತಿಯೊಬ್ಬರಿಗೆ 20 ಸಾವಿರ ಗೌರವ ಧನ ಸಿಗಲಿದೆ. ಇದಕ್ಕಾಗಿ 325 ಕೋಟಿ ಖರ್ಚು ಆಗಲಿದೆ. ಜೊತೆಗೆ ಮರು ಸಮೀಕ್ಷಗೆ 420 ಕೋಟಿ ಹಣ ಕೊಡುತ್ತೇವೆ. ಇನ್ನೂ ಅಗ್ಯವಿದ್ದರೆ ಮತ್ತೆ ಹಣ ಕೊಡುತ್ತೇವೆ ಎಂದು ವಿವರಿಸಿದ್ದಾರೆ.
ಪ್ರತಿಯೊಬ್ಬರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ, 60 ಪ್ರಶ್ನೆಗೆ ಉತ್ತರಿಸಿ
ಇನ್ನೂ ಮಧುಸೂದನ್ ನಾಯಕ್ ಕಮಿಟಿ ವೈಜ್ಞಾನಿಕ ಸರ್ವೆ ಮಾಡಬೇಕು. ವರದಿಯನ್ನ ಡಿಸೆಂಬರ್ ಒಳಗೆ ಕೊಡಬೇಕು. ಈ ಬಾರಿ ವಿನೂತನ ಸರ್ವೇ ಪದ್ದತಿ ಮಾಡ್ತಿದ್ದೇವೆ. ಮೀಟರ್ ರೀಡರ್‌ಗಳು, ಆರ್‌ಆರ್ ನಂಬರ್, ಜಿಯೊ ಟ್ಯಾಗ್ ಮಾಡಿ ಮನೆ ಮನೆಗೆ ಪಟ್ಟಿ ಮಾಡಿ ನಂಬರ್ ಕೊಡ್ತಾರೆ. UHI ನಂಬರ್ ಮೀಟರ್ ರೀಡರ್ ಹಾಕ್ತಾರೆ. 2 ಕೋಟಿ ಮನೆಗೂ ಸ್ಟಿಕ್ಕರ್ ಅಂಟಿಸುವ ಅಂಟಿಸೋ ಕೆಲಸ ಮಾಡ್ತಾರೆ. ಇವತ್ತಿನವರೆಗೂ 1.55 ಕೋಟಿ ಮನೆಗಳಿಗೆ ಸ್ಟಿಕ್ಕರ್ (ಸ್ಲಿಪ್) ಅಂಟಿಸಿದ್ದಾರೆ. ಇದಾದ ಮೇಲೆ ಮನೆ ಮನೆಗೆ ಟೀಚರ್ ಸರ್ವೆ ಮಾಡ್ತಾರೆ. BPL ಕಾರ್ಡ್, ಆಧಾರ್ ಕಾರ್ಡ್ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡ್ತಾರೆ. ಮೊಬೈಲ್ ಇಲ್ಲದೇ ಹೋದ್ರೆ ಆ ಮನೆಗಳ ಸರ್ವೆ ಮಾಡ್ತಾರೆ. ಎಲ್ಲರು ಈ ಸರ್ವೆಯಲ್ಲಿ ಭಾಗವಹಿಸಬೇಕು. ಈ ಸರ್ವೆಯಲ್ಲಿ 60 ಪ್ರಶ್ನೆ ಕೇಳ್ತಾರೆ. ಜಾತಿ, ಧರ್ಮ, ಉದ್ಯೋಗ, ಶಿಕ್ಷಣ, ಸೇರಿ ಕುಟುಂಬದ ಸಂಪೂರ್ಣ ಮಾಹಿತಿ ಇರೋ 60 ಪ್ರಶ್ನೆ ಕೇಳ್ತಾರೆ. ಎಲ್ಲಾ ಜನರು ಇದರಲ್ಲಿ ಭಾಗಿಯಾಗಬೇಕು. ಪ್ರತಿಯೊಬ್ಬರೂ 60 ಪ್ರಶ್ನೆಗೆ ಉತ್ತರ ಕೊಡಬೇಕು. ಯಾರೂ ಸರ್ವೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಸಿಎಂ ಕಿವಿಮಾತು ಹೇಳಿದ್ದಾರೆ.
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದರೆ ಅವಧಿ ವಿಸ್ತರಣೆ ಆಗಬಹುದು. ಇದುವರೆಗೂ ಈ ಬಗ್ಗೆ ನಮಗೆ ಅಧಿಕೃತ ಮಾಹಿತಿ ಬಂದಿಲ್ಲ. ನಮಗೆ ಸಮಯ ಕೊಟ್ಟರೆ ಕ್ರಾಸ್ ಚೆಕ್ ಮಾಡಿ ವರದಿ ಕೊಡುತ್ತೇವೆ. ಮುಖ್ಯಮಂತ್ರಿಗಳೇ ಆಯೋಗದ ಅವಧಿ ಬಗ್ಗೆ ಹೇಳಿದ ಮೇಲೆ ಒಳ್ಳೆಯದಾಯ್ತು, ಇನ್ನೂ ಸಮಯ ಸಿಗುತ್ತದೆ. ಜನವರಿಯಷ್ಟು ಸಮಯ ಬೇಕಾಗಿಲ್ಲ ಬೇಗನೆ ವರದಿ ಕೊಡುತ್ತೇವೆ. ವರದಿ ಕೊನೆಯ ಹಂತದಲ್ಲಿದೆ. ಡಿಸೆಂಬರ್‌ನಲ್ಲಿ ವರದಿ ಕೊಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 2025 ರೊಳಗೆ ರಕ್ತಹೀನತೆ ಮುಕ್ತ ಆರೋಗ್ಯ ಕರ್ನಾಟಕ ರೂಪಿಸುವ ಗುರಿ: ದಿನೇಶ್ ಗುಂಡೂರಾವ್