Tag: badam family

  • Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

    Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

    ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ.

    ಹೌದು. ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರ ನಿವಾಸಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿದ್ದಾರೆ. ಇದನ್ನೂ ಓದಿ: ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹಕ್ಕು ಚಲಾಯಿಸಿದ ಮಾಜಿ ಪ್ರಧಾನಿ ಹೆಚ್‌ಡಿಡಿ

    ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರಿ ಮತದಾನ ಮಾಡುವ ಸಂಪ್ರದಾಯವಿದೆ. ಅಂತೆಯೇ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ.

    ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ 8.74% ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ.